Tag: ನಂದಮೂರಿ ತಾರಕರತ್ನ

  • ನಟ ತಾರಕ ರತ್ನ ಅಂತಿಮ ದರ್ಶನಕ್ಕೆ ತೆಲುಗು ಫಿಲ್ಮ್ ಚೇಂಬರ್ ವ್ಯವಸ್ಥೆ

    ನಟ ತಾರಕ ರತ್ನ ಅಂತಿಮ ದರ್ಶನಕ್ಕೆ ತೆಲುಗು ಫಿಲ್ಮ್ ಚೇಂಬರ್ ವ್ಯವಸ್ಥೆ

    ಜ್ಯೂ.ಎನ್‌ಟಿಆರ್ (Jr.Ntr)ಸಹೋದರ ತೆಲುಗು ನಟ- ರಾಜಕಾರಣಿ ನಂದಮೂರಿ ತಾರಕ ರತ್ನ (Nandamuri Tarak Ratna) ಅವರು ಬೆಂಗಳೂರಿನಲ್ಲಿ ಶನಿವಾರ (ಫೆ.18) ಕೊನೆಯುಸಿರೆಳೆದಿದ್ದಾರೆ. ತಾರಕ ರತ್ನ ನಿಧನ ನಂದಮೂರಿ ಕುಟುಂಬಕ್ಕೆ (Nandamuri Family) ಆಘಾತ ನೀಡಿದೆ. ತೆಲುಗು ಫಿಲ್ಮ್ ಚೇಂಬರ್ ಆವರಣದಲ್ಲಿ ಫೆ.20ರ ಬೆಳಗ್ಗೆ ತಾರಕ ರತ್ನ ಅವರ ಪಾರ್ಥಿವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ.

    ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರ ಪುತ್ರ ನರಾ ಲೋಕೇಶ್ ಅವರು ಏರ್ಪಡಿಸಿದ್ದ ಪಾದಯಾತ್ರೆಯಲ್ಲಿ ಜ.27ರಂದು ನಂದಮೂರಿ ತಾರಕ ರತ್ನ ಭಾಗಿ ಆಗಿದ್ದರು. ಪಾದಯಾತ್ರೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಅವರನ್ನು ಕುಪ್ಪಂ ಬಳಿ ಇರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದನ್ನೂ ಓದಿ:ನಟ ನಂದಮೂರಿ ತಾರಕ ರತ್ನ ಇನ್ನಿಲ್ಲ

    ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ (Narayana Hrudayalaya) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ಭಾನುವಾರ (ಫೆ.19) ನಂದಮೂರಿ ತಾರಕ ರತ್ನ ಅವರ ಪಾರ್ಥಿವ ಶರೀರವನ್ನು ರಂಗಾ ರೆಡ್ಡಿ ಜಿಲ್ಲೆಯ ಮೋಕಿಲಾಗೆ ರವಾನೆ ಮಾಡಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ (ಫೆ.20) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ನಂದಮೂರಿ ತಾರಕ ರತ್ನ ಅಂತ್ಯಕ್ರಿಯೆ ನಡೆಯಲಿದೆ.

    ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಯ (Telagu Film Chamber) ಆವರಣದಲ್ಲಿ ನಂದಮೂರಿ ತಾರಕ ರತ್ನ ಅವರ ಪಾರ್ಥೀವ ಶರೀರ ಇರಿಸಲಾಗುವುದು. ಅಲ್ಲಿ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು. ಬೆಳಗ್ಗೆ 7 ಗಂಟೆಯಿಂದಲೇ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಅಂದು ಸಂಜೆ 5 ಗಂಟೆ ಸುಮಾರಿಗೆ ಹೈದರಾಬಾದ್‌ನ ಮಹಾಪ್ರಸ್ತಾನಂನಲ್ಲಿ ಅಂತ್ಯಕ್ರಿಯೆ ಮಾಡಲಾಗುವುದು.

    ಇನ್ನೂ ನಂದಮೂರಿ ತಾರಕ ರತ್ನ ಅವರ ನಿಧನಕ್ಕೆ ಟಾಲಿವುಡ್ ಜೊತೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ತಾರಕ ರತ್ನ ಅವರ ನಿಧನ ಚಿತ್ರರಂಗಕ್ಕೆ ಮತ್ತು ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ ನಂದಮೂರಿ ತಾರಕರತ್ನ ಆರೋಗ್ಯ ಹೇಗಿದೆ?: ಹೆಲ್ತ್ ಬುಲೆಟಿನ್ ಗಾಗಿ ಕಾದ ಅಭಿಮಾನಿಗಳು

    ನಟ ನಂದಮೂರಿ ತಾರಕರತ್ನ ಆರೋಗ್ಯ ಹೇಗಿದೆ?: ಹೆಲ್ತ್ ಬುಲೆಟಿನ್ ಗಾಗಿ ಕಾದ ಅಭಿಮಾನಿಗಳು

    ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೆಲುಗು ನಟ ನಂದಮೂರಿ ತಾರಕರತ್ನ (Nandamuri Tarakaratna) ಅವರ ಸದ್ಯದ ಆರೋಗ್ಯ (Health) ಸ್ಥಿತಿ ತಿಳಿದುಕೊಳ್ಳಲು ಅಭಿಮಾನಿಗಳು ಆಸ್ಪತ್ರೆಯ ಮುಂದೆ ಜಮಾಯಿಸಿದ್ದಾರೆ. ಎರಡು ದಿನಗಳ ಹಿಂದೆ ಆಸ್ಪತ್ರೆಯು ನಂದಮೂರಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿತ್ತು. ಆನಂತರ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಮೂಲಗಳ ಪ್ರಕಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

    ನಿನ್ನೆ ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗದೇ ಇರುವ ಹಿನ್ನೆಲೆಯಲ್ಲಿ ಅವರ ಕುಟುಂಬದ ಸದಸ್ಯರು ಒಬ್ಬೊಬ್ಬರೇ ಬೆಂಗಳೂರಿಗೆ ಆಗಮಿಸಿ, ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದ್ದರು. ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿರುವ (Serious) ಕಾರಣ, ಎರಡು ದಿನಗಳ ಕಾಲ ಏನೂ ಹೇಳಲು ಆಗುವುದಿಲ್ಲ ಎಂದು ವೈದ್ಯರು ತಿಳಿಸಿರುವುದಾಗಿ ಮಾತನಾಡಿದ್ದರು. ಬಾಲಕೃಷ್ಣ ಹಾಗೂ ಜ್ಯೂನಿಯರ್ ಎನ್.ಟಿ.ಆರ್ ಕೂಡ ಆರೋಗ್ಯ ವಿಚಾರಿಸಲು ಇಂದು ಬೆಂಗಳೂರಿಗೆ ಆಗಮಿಸಿದ್ದರು. ಇದನ್ನೂ ಓದಿ: ‘ದಸರಾ’ ಸಿನಿಮಾ ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್

    ಮೊನ್ನೆಯಷ್ಟೇ ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ನಾರಾಯಣ ಹೃದಯಾಲಯಕ್ಕೆ ತೆರಳಿ ನಂದಮೂರಿ ಅವರ ಆರೋಗ್ಯ ವಿಚಾರಿಸಿದ್ದರು. ತಾರಕರತ್ನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರು ಆಗಮಿಸಿದ್ದರು.  ಮೊನ್ನೆ ಸಂಜೆ ನಂದಮೂರಿ ಅವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಆರೋಗ್ಯ ತೀರಾ ಹದಗೆಟ್ಟಿದೆ ಹಾಗೂ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಿರುವುದಾಗಿ ಆಸ್ಪತ್ರೆ ತಿಳಿಸಿದ್ದರು.

    ಇಂಟ್ರಾ ಅಯೋರ್ಟಿಕ್ ಪಂಪ್, ವ್ಯಾಸೋಆಕ್ಟಿವ್ ನೆರವಿನಿಂದಲೂ ಚಿಕಿತ್ಸೆ ನೀಡಲಾಗಿದ್ದು, ಆಂಜಿಯೋಪ್ಲಾಸ್ಟಿ ಮೂಲಕ ಹಾನಿಯಾದ ರಕ್ತನಾಳಗಳಿಗೆ ಸ್ಟಂಟ್ ಹಾಕಲಾಗಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ಉಲ್ಲೇಖಿಸಲಾಗಿದೆ. ಸ್ಟಂಟ್ ಅಳವಡಿಕೆಯ ನಂತರವೂ ರಕ್ತಸ್ರಾವ ನಿಲ್ಲದೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಆದರೂ, ನುರಿತ ವೈದ್ಯರ ತಂಡ ಚಿಕಿತ್ಸೆಯನ್ನು ಮುಂದುವರೆಸಿದೆ ಎಂದು ಹೆಲ್ತ್  ಬುಲೆಟಿನ್ ನಲ್ಲಿ ತಿಳಿಸಲಾಗಿತ್ತು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ ನಂದಮೂರಿ ತಾರಕರತ್ನ ಸ್ಥಿತಿ ಇನ್ನೂ ಗಂಭೀರ : ಬೆಂಗಳೂರಿಗೆ ಬಂದ ಜ್ಯೂ.ಎನ್.ಟಿ.ಆರ್

    ನಟ ನಂದಮೂರಿ ತಾರಕರತ್ನ ಸ್ಥಿತಿ ಇನ್ನೂ ಗಂಭೀರ : ಬೆಂಗಳೂರಿಗೆ ಬಂದ ಜ್ಯೂ.ಎನ್.ಟಿ.ಆರ್

    ತೆಲುಗಿನ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕರತ್ನ (Nandamuri Tarakaratna) ಆರೋಗ್ಯದಲ್ಲಿ (Health) ಯಾವುದೇ ಬದಲಾವಣೆ ಆಗದೇ ಇರುವ ಹಿನ್ನೆಲೆಯಲ್ಲಿ ಅವರ ಕುಟುಂಬದ ಸದಸ್ಯರು ಒಬ್ಬೊಬ್ಬರೇ ಬೆಂಗಳೂರಿಗೆ ಆಗಮಿಸಿ, ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿರುವ ಕಾರಣ, ಎರಡು ದಿನಗಳ ಕಾಲ ಏನೂ ಹೇಳಲು ಆಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ (Jr. NTR) ಕೂಡ ಆರೋಗ್ಯ ವಿಚಾರಿಸಲು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಜೊತೆಗೆ ಆರೋಗ್ಯ ಸಚಿವ ಕೆ.ಸುಧಾಕರ್ ಕೂಡ ನಟನಿಗೆ ಜೊತೆಯಾಗಿದ್ದಾರೆ.

    ನಿನ್ನೆಯಷ್ಟೇ ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ನಾರಾಯಣ ಹೃದಯಾಲಯಕ್ಕೆ ತೆರಳಿ ನಂದಮೂರಿ ಅವರ ಆರೋಗ್ಯ ವಿಚಾರಿಸಿದ್ದರು. ತಾರಕರತ್ನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರು ಆಗಮಿಸಿದ್ದರು.  ನಿನ್ನೆ ಸಂಜೆ ನಂದಮೂರಿ ಅವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಆರೋಗ್ಯ ತೀರಾ ಹದಗೆಟ್ಟಿದೆ ಹಾಗೂ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಿರುವುದಾಗಿ ಆಸ್ಪತ್ರೆ ತಿಳಿಸಿದೆ. ಹೃದಯದ ರಕ್ತನಾಳುಗಳು ಬ್ಲಾಕ್ ಆಗಿರುವುದರಿಂದ ಅವುಗಳನ್ನು ಸರಿಪಡಿಸಲು ವೈದ್ಯರು ಸತತ ಪ್ರಯತ್ನ ನಡೆಸಿದ್ದಾರೆ.

    ಇಂಟ್ರಾ ಅಯೋರ್ಟಿಕ್ ಪಂಪ್, ವ್ಯಾಸೋಆಕ್ಟಿವ್ ನೆರವಿನಿಂದಲೂ ಚಿಕಿತ್ಸೆ ನೀಡಲಾಗಿದ್ದು, ಆಂಜಿಯೋಪ್ಲಾಸ್ಟಿ ಮೂಲಕ ಹಾನಿಯಾದ ರಕ್ತನಾಳಗಳಿಗೆ ಸ್ಟಂಟ್ ಹಾಕಲಾಗಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ಉಲ್ಲೇಖಿಸಲಾಗಿದೆ. ಸ್ಟಂಟ್ ಅಳವಡಿಕೆಯ ನಂತರವೂ ರಕ್ತಸ್ರಾವ ನಿಲ್ಲದೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಆದರೂ, ನುರಿತ ವೈದ್ಯರ ತಂಡ ಚಿಕಿತ್ಸೆಯನ್ನು ಮುಂದುವರೆಸಿದೆ ಎಂದು ಹೆಲ್ತ್‍ ಬುಲೆಟಿನ್ ನಲ್ಲಿ ತಿಳಿಸಲಾಗಿತ್ತು.

    ನಂದಮೂರಿ ತಾರಕರತ್ನ ಅವರಿಗೆ ಶುಕ್ರವಾರ ತೀವ್ರ ಹೃದಯಾಘಾತ (Heart Attack) ವಾಗಿತ್ತು, ಕೂಡಲೇ ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಅಲ್ಲಿಂದ  ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿತ್ತು.  ಮೊನ್ನೆ ತಡರಾತ್ರಿ 12 ಗಂಟೆ ಸಂದರ್ಭದಲ್ಲಿ ಆಂಧ್ರದ ಕುಪ್ಪಂನಿಂದ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬಳಿಕ ಯಶಸ್ವಿಯಾಗಿ ಆಂಜಿಯೋಗ್ರಾಮ್ (Angiogram) ಮಾಡಿ ಸ್ಟಂಟ್ ಅಳವಡಿಕೆ ಮಾಡಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿರುವುದಾಗಿ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ ನಂದಮೂರಿ ತಾರಕರತ್ನ ಸ್ಥಿತಿ ಗಂಭೀರ : ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭೇಟಿ

    ನಟ ನಂದಮೂರಿ ತಾರಕರತ್ನ ಸ್ಥಿತಿ ಗಂಭೀರ : ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭೇಟಿ

    ತೆಲುಗಿನ ಖ್ಯಾತ ಚಿತ್ರನಟ ನಂದಮೂರಿ ತಾರಕರತ್ನ (Nandamuri Tarakaratna) ಆರೋಗ್ಯ (health) ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಬೆಂಗಳೂರಿಗೆ ಬಂದಿಳಿದಿದ್ದು, ನಾರಾಯಣ ಹೃದಯಾಲಯಕ್ಕೆ ತೆರಳಿ ನಂದಮೂರಿ ಅವರ ಆರೋಗ್ಯ ವಿಚಾರಿಸಿದರು. ತಾರಕರತ್ನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ನಾರಾಯಣ ಹೃದಯಾಲಯ ತಜ್ಞರು ತಿಳಿಸಿದ್ದಾರೆ. ಸಂಜೆ ನಂದಮೂರಿ ಅವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಆರೋಗ್ಯ ತೀರಾ ಹದಗೆಟ್ಟಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಿರುವುದಾಗಿ ತಿಳಿಸಿದೆ. ಹೃದಯದ ರಕ್ತನಾಳುಗಳು ಬ್ಲಾಕ್ ಆಗಿರುವುದರಿಂದ ಅವುಗಳನ್ನು ಸರಿಪಡಿಸಲು ವೈದ್ಯರು ಸತತ ಪ್ರಯತ್ನ ನಡೆಸಿದ್ದಾರೆ.

    ಇಂಟ್ರಾ ಅಯೋರ್ಟಿಕ್ ಪಂಪ್, ವ್ಯಾಸೋಆಕ್ಟಿವ್ ನೆರವಿನಿಂದಲೂ ಚಿಕಿತ್ಸೆ ನೀಡಲಾಗಿದ್ದು, ಆಂಜಿಯೋಪ್ಲಾಸ್ಟಿ ಮೂಲಕ ಹಾನಿಯಾದ ರಕ್ತನಾಳಗಳಿಗೆ ಸ್ಟಂಟ್ ಹಾಕಲಾಗಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ಉಲ್ಲೇಖಿಸಲಾಗಿದೆ. ಸ್ಟಂಟ್ ಅಳವಡಿಕೆಯ ನಂತರವೂ ರಕ್ತಸ್ರಾವ ನಿಲ್ಲದೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಆದರೂ, ನುರಿತ ವೈದ್ಯರ ತಂಡ ಚಿಕಿತ್ಸೆಯನ್ನು ಮುಂದುವರೆಸಿದೆ ಎಂದು ಹೆಲ್ತ್‍ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

    ನಂದಮೂರಿ ತಾರಕರತ್ನ ಅವರಿಗೆ ಶುಕ್ರವಾರ ತೀವ್ರ ಹೃದಯಾಘಾತ (Heart Attack) ವಾಗಿತ್ತು, ಕೂಡಲೇ ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಅಲ್ಲಿಂದ  ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿತ್ತು.  ತಡರಾತ್ರಿ 12 ಗಂಟೆ ಸಂದರ್ಭದಲ್ಲಿ ಆಂಧ್ರದ ಕುಪ್ಪಂನಿಂದ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬಳಿಕ ಯಶಸ್ವಿಯಾಗಿ ಆಂಜಿಯೋಗ್ರಾಮ್ (Angiogram) ಮಾಡಿ ಸ್ಟಂಟ್ ಅಳವಡಿಕೆ ಮಾಡಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿರುವುದಾಗಿ ಆಸ್ಪತ್ರೆ ಮೂಲಗಳು ಬೆಳಗ್ಗೆ ಮಾಹಿತಿ ನೀಡಿದ್ದವು.

    ತಾರಕರತ್ನ ಅವರು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ಯುವ ಗಲಮ್ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಕುಪ್ಪಂಗೆ ತೆರಳಿದ್ದರು. ಲೋಕೇಶ್ ಮಸೀದಿಯಿಂದ ಪ್ರಾರ್ಥನೆ ಸಲ್ಲಿಸಿ ಹೊರಬಂದಾಗ ಅಲ್ಲಿ ನೆರೆದಿದ್ದ ಟಿಡಿಪಿ ಕಾರ್ಯಕರ್ತರು ಏಕಾಏಕಿ ಲೋಕೇಶ್ ಕಡೆಗೆ ನುಗ್ಗಿದ್ದು, ಅಲ್ಲಿಯೇ ನಿಂತಿದ್ದ ತಾರಕರತ್ನ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಕುಪ್ಪಂನ ಸಮೀಪದ ಆಸ್ಪತ್ರೆಗೆ ದಾಖಲಿಸಿ ನಂತರ ಪಿಇಎಸ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಯಿತು. ಪಿಇಎಸ್ ವೈದ್ಯಕೀಯ ಕಾಲೇಜು ವೈದ್ಯರ ಸಲಹೆಯಂತೆ ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ ನಂದಮೂರಿ ತಾರಕರತ್ನ ಸ್ಥಿತಿ ಗಂಭೀರ : ಹೆಲ್ತ್ ಬುಲೆಟಿನ್ ರಿಲೀಸ್

    ನಟ ನಂದಮೂರಿ ತಾರಕರತ್ನ ಸ್ಥಿತಿ ಗಂಭೀರ : ಹೆಲ್ತ್ ಬುಲೆಟಿನ್ ರಿಲೀಸ್

    ತೆಲುಗಿನ ಖ್ಯಾತ ಚಿತ್ರನಟ ಮತ್ತು ರಾಜಕಾರಣಿ ನಂದಮೂರಿ ತಾರಕರತ್ನ (Nandamuri Tarakaratna) ಆರೋಗ್ಯ (health) ಸ್ಥಿತಿ ಗಂಭೀರವಾಗಿದೆ (serious) ಎಂದು ನಾರಾಯಣ ಹೃದಯಾಲಯ ತಜ್ಞರು ತಿಳಿಸಿದ್ದಾರೆ. ಅವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ (health bulletin) ರಿಲೀಸ್ ಮಾಡಿದ್ದು, ಆರೋಗ್ಯ ತೀರಾ ಹದಗೆಟ್ಟಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಿರುವುದಾಗಿ ತಿಳಿಸಿದೆ. ಹೃದಯದ ರಕ್ತನಾಳುಗಳು ಬ್ಲಾಕ್ ಆಗಿರುವುದರಿಂದ ಅವುಗಳನ್ನು ಸರಿಪಡಿಸಲು ವೈದ್ಯರು ಸತತ ಪ್ರಯತ್ನ ನಡೆಸಿರುವುದಾಗಿ ತಿಳಿಸಿದೆ.

    ಇಂಟ್ರಾ ಅಯೋರ್ಟಿಕ್ ಪಂಪ್, ವ್ಯಾಸೋಆಕ್ಟಿವ್ ನೆರವಿನಿಂದಲೂ ಚಿಕಿತ್ಸೆ ನೀಡಲಾಗಿದ್ದು, ಆಂಜಿಯೋಪ್ಲಾಸ್ಟಿ ಮೂಲಕ ಹಾನಿಯಾದ ರಕ್ತನಾಳಗಳಿಗೆ ಸ್ಟಂಟ್ ಹಾಕಲಾಗಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ಉಲ್ಲೇಖಿಸಲಾಗಿದೆ. ಸ್ಟಂಟ್ ಅಳವಡಿಕೆಯ ನಂತರವೂ ರಕ್ತಸ್ರಾವ ನಿಲ್ಲದೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಆದರೂ, ನುರಿತ ವೈದ್ಯರ ತಂಡ ಚಿಕಿತ್ಸೆಯನ್ನು ಮುಂದುವರೆಸಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.  ಇದನ್ನೂ ಓದಿ: ಬಹುಕಾಲದ ಗೆಳತಿ ಜೊತೆ ತೆಲುಗು ನಟ ಶರ್ವಾನಂದ್ ಎಂಗೇಜ್‌ಮೆಂಟ್

    ನಂದಮೂರಿ ತಾರಕರತ್ನ ಅವರಿಗೆ ಶುಕ್ರವಾರ ತೀವ್ರ ಹೃದಯಾಘಾತ (Heart Attack) ವಾಗಿತ್ತು, ಕೂಡಲೇ ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಅಲ್ಲಿಂದ  ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿತ್ತು.  ತಡರಾತ್ರಿ 12 ಗಂಟೆ ಸಂದರ್ಭದಲ್ಲಿ ಆಂಧ್ರದ ಕುಪ್ಪಂನಿಂದ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬಳಿಕ ಯಶಸ್ವಿಯಾಗಿ ಆಂಜಿಯೋಗ್ರಾಮ್ (Angiogram) ಮಾಡಿ ಸ್ಟಂಟ್ ಅಳವಡಿಕೆ ಮಾಡಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿರುವುದಾಗಿ ಆಸ್ಪತ್ರೆ ಮೂಲಗಳು ಬೆಳಗ್ಗೆ ಮಾಹಿತಿ ನೀಡಿದ್ದವು.

    ತಾರಕರತ್ನ ಅವರು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ಯುವ ಗಲಮ್ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಕುಪ್ಪಂಗೆ ತೆರಳಿದ್ದರು. ಲೋಕೇಶ್ ಮಸೀದಿಯಿಂದ ಪ್ರಾರ್ಥನೆ ಸಲ್ಲಿಸಿ ಹೊರಬಂದಾಗ ಅಲ್ಲಿ ನೆರೆದಿದ್ದ ಟಿಡಿಪಿ ಕಾರ್ಯಕರ್ತರು ಏಕಾಏಕಿ ಲೋಕೇಶ್ ಕಡೆಗೆ ನುಗ್ಗಿದ್ದು, ಅಲ್ಲಿಯೇ ನಿಂತಿದ್ದ ತಾರಕರತ್ನ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಕುಪ್ಪಂನ ಸಮೀಪದ ಆಸ್ಪತ್ರೆಗೆ ದಾಖಲಿಸಿ ನಂತರ ಪಿಇಎಸ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಯಿತು. ಪಿಇಎಸ್ ವೈದ್ಯಕೀಯ ಕಾಲೇಜು ವೈದ್ಯರ ಸಲಹೆಯಂತೆ ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತೆಲುಗು ನಟ ನಂದಮೂರಿ ತಾರಕರತ್ನ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್- ಶಸ್ತ್ರ ಚಿಕಿತ್ಸೆ ಯಶಸ್ವಿ

    ತೆಲುಗು ನಟ ನಂದಮೂರಿ ತಾರಕರತ್ನ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್- ಶಸ್ತ್ರ ಚಿಕಿತ್ಸೆ ಯಶಸ್ವಿ

    ಬೆಂಗಳೂರು: ತೆಲುಗು ಚಿತ್ರನಟ (Telugu Actor) ನಂದಮೂರಿ ತಾರಕರತ್ನ ಅವರಿಗೆ ಶುಕ್ರವಾರ ತೀವ್ರ ಹೃದಯಾಘಾತ (Heart Attack) ವಾಗಿದ್ದು. ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿನಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಸದ್ಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

    ತಡರಾತ್ರಿ 12 ಗಂಟೆ ಸಂದರ್ಭದಲ್ಲಿ ಆಂಧ್ರದ ಕುಪ್ಪಂನಿಂದ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬಳಿಕ ಯಶಸ್ವಿಯಾಗಿ ಆಂಜಿಯೋಗ್ರಾಮ್ (Angiogram) ಮಾಡಿ ಸ್ಟಂಟ್ ಅಳವಡಿಕೆ ಮಾಡಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿರುವುದಾಗಿ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ನಂದಮೂರಿ ತಾರಕ ರತ್ನಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ತಾರಕರತ್ನ ಅವರು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ಯುವ ಗಲಮ್ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಕುಪ್ಪಂಗೆ ತೆರಳಿದ್ದರು. ಲೋಕೆಶ್ ಮಸೀದಿಯಿಂದ ಪ್ರಾರ್ಥನೆ ಸಲ್ಲಿಸಿ ಹೊರಬಂದಾಗ ಅಲ್ಲಿ ನೆರೆದಿದ್ದ ಟಿಡಿಪಿ ಕಾರ್ಯಕರ್ತರು ಏಕಾಏಕಿ ಲೋಕೇಶ್ ಕಡೆಗೆ ನುಗ್ಗಿದ್ದು, ಅಲ್ಲಿಯೇ ನಿಂತಿದ್ದ ತಾರಕರತ್ನ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

    ತಕ್ಷಣ ಅವರನ್ನು ಕುಪ್ಪಂನ ಸಮೀಪದ ಆಸ್ಪತ್ರೆಗೆ ದಾಖಲಿಸಿ ನಂತರ ಪಿಇಎಸ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಯಿತು. ಪಿಇಎಸ್ ವೈದ್ಯಕೀಯ ಕಾಲೇಜು ವೈದ್ಯರ ಸಲಹೆಯಂತೆ ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಕೆಲ ಹೊತ್ತಲ್ಲಿ ಅಧಿಕೃತವಾಗಿ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k