ಚಿಕ್ಕಬಳ್ಳಾಪುರ: ಸ್ನೇಹಿತರ ದಿನದ ಹಿನ್ನೆಲೆ ಬೈಕಿನಲ್ಲಿ ನಂದಿಬೆಟ್ಟಕ್ಕೆ ತೆರಳಿದ್ದ ಇಬ್ಬರು ಫ್ರೆಂಡ್ಸ್ ಅಪಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲ್ಲೂಕಿನ ನಂದಿಬೆಟ್ಟದ ರಸ್ತೆಯ 15ನೇ ತಿರುವಿನ ಬಳಿ ಸಂಭವಿಸಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಕಣಿತಹಳ್ಳಿ ಗ್ರಾಮದ ಅರವಿಂದ್ (21) ಹಾಗೂ ಶ್ರೀಕಾಂತ್ (21) ಮೃತರು. ಇಬ್ಬರು ಸ್ನೇಹಿತರಾಗಿದ್ದು Friendship Day ಅಂಗವಾಗಿ ಪ್ಲ್ಯಾನ್ ಮಾಡಿಕೊಂಡು ಒಂದೇ ಬೈಕಿನಲ್ಲಿ ಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಕಲಬುರಗಿ ಕೇಂದ್ರಿಯ ವಿವಿ ಆವರಣದಲ್ಲಿ ಗೋರಿ – ರಾತ್ರೋರಾತ್ರಿ ಕಾಂಪೌಂಡ್ ನಿರ್ಮಾಣ
ರಸ್ತೆ ಬದಿಯ ದೊಡ್ಡ ಬಂಡೆಗಲ್ಲಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗಳಿಗೆ ಗಂಭೀರ ಗಾಯಗಾಳಾಗಿ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಕೊಪ್ಪಳ| ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಕೊಲೆ
ಬೆಂಗಳೂರು: ರಾಜ್ಯ ಸರ್ಕಾರದ 14ನೇ ಸಚಿವ ಸಂಪುಟ ಸಭೆ (Cabinet Meeting) ಇಂದು ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ನಡೆಯಲಿದೆ. ನಂದಿಬೆಟ್ಟದಲ್ಲಿ (Nandi Hills) ಸಚಿವ ಸಂಪುಟ ಸಭೆಗಾಗಿ ಅಂತಿಮ ಹಂತದ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂಸಿ ಸುಧಾಕರ್ ಅಧಿಕಾರಿಗಳೊಂದಿಗೆ ಮಂಗಳವಾರ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ನಂದಿಗಿರಿಧಾಮ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳು ಬೆಳಗ್ಗೆ 11:40ಕ್ಕೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗ್ರಾಮಕ್ಕೆ ಆಗಮಿಸಿಲಿದ್ದಾರೆ. ಗ್ರಾಮದ ಶ್ರೀ ಭೋಗನಂದೀಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದು, ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪ, ಪುಷ್ಕರಿಣಿಯಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಫೋಟೋಶೂಟ್‌ನಲ್ಲಿ ಭಾಗಿಯಾಗಲಿದ್ದಾರೆ. ನಂತರ 11:50ಕ್ಕೆ ನಂದಿಬೆಟ್ಟಕ್ಕೆ ಬಸ್‌ನಲ್ಲಿ ಪ್ರಯಾಣ ಮಾಡಲಿದ್ದಾರೆ. ಇದನ್ನೂ ಓದಿ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ
ಇನ್ನೂ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆ ನಂದಿ ಗಿರಿಧಾಮದಲ್ಲಿರುವ ಕೆಎಸ್‌ಟಿಡಿಸಿ ಹೋಟೆಲ್‌ನ ಮಯೂರ ಸಭಾಂಗಣಕ್ಕೆ ಹೊಸ ಲುಕ್ ನೀಡಲಾಗಿದೆ. ಸಭಾಂಗಣವನ್ನು ನವೀಕರಿಸಿ ಸುಣ್ಣಬಣ್ಣ ಬಳಿದು ಹೊಸ ಹೊಸ ಚೇರ್ ಟೇಬಲ್‌ಗಳನ್ನು ಅಳವಡಿಸಲಾಗಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಸಾಮಾನ್ಯ ಹಾಲನ್ನು ಹವಾನಿಯಂತ್ರಿತ ಸಭಾಂಗಣವನ್ನಾಗಿ ಪರಿವರ್ತಿಸಲಾಗಿದೆ. ಸಚಿವರ ವಾಸ್ತವ್ಯ ಹಾಗೂ ವಿಶ್ರಾಂತಿಗೆ ರೂಂಗಳನ್ನು 7 ಸ್ಟಾರ್ ರೂಂಗಳಾಗಿ ಆಧುನೀಕರಣಗೊಳಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಭೋಗನಂದೀಶ್ವರ ದೇವಸ್ಥಾನ, ನಂದಿಗಿರಿಧಾಮದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ. ಇದನ್ನೂ ಓದಿ: ರೈಲ್ವೆ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು: ಸಿಎಂ ಆಗ್ರಹ
ಇನ್ನು ನಂದಿಬೆಟ್ಟದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ಭರಪೂರ ಕೊಡುಗೆ ಘೋಷಣೆ ಮಾಡುವ ನೀರೀಕ್ಷೆಯಿದ್ದು, ಜನಪ್ರತಿನಿಧಿಗಳು, ಜನರ ಚಿತ್ತ ಸಂಪುಟ ಸಭೆಯತ್ತ ನೆಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಮಾಸ್ ಲೀಡರ್ – ಬಿಆರ್ ಪಾಟೀಲ್ ಸ್ಪಷ್ಟನೆ
ಚಿಕ್ಕಬಳ್ಳಾಪುರ: ನಾಡೆನೆಲ್ಲೆಡೆ ದಸರಾ (Dasara) ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದೆ. ಸಾಲು ಸಾಲು ರಜಾದಿನಗಳ ಹಿನ್ನೆಲೆಯಲ್ಲಿ ಪ್ರವಾಸಿತಾಣಗಳತ್ತ ಪ್ರವಾಸಿಗರ ದಂಡೇ ಹರಿದುಬಂದಿದ್ದು, ವಿಶ್ವವಿಖ್ಯಾತ ನಂದಿಗಿರಿಧಾಮ (Nandi Hills) ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಬೆಳಗಿನಿಂದಲೂ ಸರಿಸುಮಾರು 30 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ನಂದಿಬೆಟ್ಟಕ್ಕೆ ಆಗಮಿಸಿದ್ದು. ಇನ್ನೂ ಸರದಿ ಸಾಲಿನಲ್ಲೇ ಐದಾರು ಕಿ.ಮೀ ದೂರ ವಾಹನಗಳು ನಿಂತಿವೆ.
ನಂದಿಬೆಟ್ಟ ನೋಡಲು ಆಗಮಿಸಿರುವ ಪ್ರವಾಸಿಗರು ಗಂಟೆಗಟ್ಟಲೆ ರಸ್ತೆಯಲ್ಲೇ ಕಾಲ ಕಳೆಯುವಂತಾಗಿತು. ರಾಜಧಾನಿ ಬೆಂಗಳೂರಿನ (Bengaluru) ಜನವಂತೂ ಇಂದು ಬೆಳ್ಳಂಬೆಳಗ್ಗೆ ಕಾರು ಬೈಕ್‌ಗಳ ಮೂಲಕ ಗಿರಿಧಾಮಕ್ಕೆ ಲಗ್ಗೆಯಿಟ್ಟಿದ್ದರು. ಒಂದೇ ಸಮಯದಲ್ಲಿ ಸಾವಿರಾರು ಮಂದಿ ಯುವಕ, ಯುವತಿಯರು ಗಿರಿಧಾಮಕ್ಕೆ ಲಗ್ಗೆ ಹಾಕಿದ್ದರಿಂದ ಪ್ರವಾಸಿತಾಣ ಗಿರಿಧಾಮದಲ್ಲಿ ಜನ ಜಂಗುಳಿ, ಜನಜಾತ್ರೆ ಕಂಡು ಬಂದಿತು. ಇದನ್ನೂ ಓದಿ: ಸ್ವಾತಂತ್ರ್ಯದ ಬಳಿಕ ಮಡಿಕೇರಿ ದಸರಾ ಸಾಗಿ ಬಂದ ಹಾದಿ
ನಾಮುಂದು ತಾಮುಂದು ಅಂತಾ ಜನ ಪ್ರವೇಶ ದ್ವಾರದಲ್ಲಿ ಮುಗಿಬಿದ್ದ ದೃಶ್ಯ ಕಂಡು ಬಂದಿದೆ. ಸ್ವಲ್ಪ ತಡವಾದರೂ ಗಿರಿಧಾಮದಲ್ಲಿ ಪ್ರವೇಶ ಸಿಗುತ್ತದೋ ಇಲ್ಲವೋ ಎಂದು ಬೆಳಿಗ್ಗೆ 5 ಗಂಟೆಗೆ ಆಗಮಿಸಿ ಪ್ರಕೃತಿ ಸೊಬಗನ್ನು ಸವಿದರು. ಆದರೆ ಟ್ರಾಫಿಕ್ ಕಿರಿ ಕಿರಿಯಿಂದ ಹಲವು ಪ್ರವಾಸಿಗರು ಬೇಸರ ವ್ಯಕ್ತಪಡಿಸಿದರು. ಇನ್ನೂ ನಂದಿಗಿರಿಧಾಮದ ರಸ್ತೆಯಲ್ಲಿ ಎಲ್ಲಿ ನೋಡಿದರೂ ಒಂದೆಡೆ ಜನ, ಮತ್ತೊಂದೆಡೆ ವಾಹನಗಳ ಸಂದಣಿ ಕಾಣಿಸಿದೆ. ಗಿರಿಧಾಮದ ಮಿರ್ಜಾ ವೃತ್ತದಿಂದ ಬೆಟ್ಟದ ಕ್ರಾಸ್‌ವರೆಗೂ ಐದಾರು ಕಿ.ಮೀ ದೂರ ಟ್ರಾಫಿಕ್ ಜಾಮ್ ಆಗಿತ್ತು. ಇದರಿಂದ ಪ್ರವಾಸಿಗರು ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ ಪರದಾಡುವಂತಾಗಿತ್ತು. ಟ್ರಾಫಿಕ್ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುವಂತಾಗಿತ್ತು. ಇದನ್ನೂ ಓದಿ: ಸಿದ್ದರಾಮಯ್ಯನವರಿಗೆ ಇದು ಕೊನೆಯ ವಿಜಯದಶಮಿ: ಮಹೇಶ್ ಟೆಂಗಿನಕಾಯಿ
ಚಿಕ್ಕಬಳ್ಳಾಪುರ: ಪ್ರವಾಸಿಗರ ನೆಚ್ಚಿನ ತಾಣವೆಂದರೆ ಅದು ನಂದಿಗಿರಿಧಾಮ. ಆದರೆ ಇಂತಹ ನಂದಿಬೆಟ್ಟದಲ್ಲಿ (Nandihills) ನೀವೇನಾದರೂ ಈ ಬಾರಿ ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಬೇಕು ಎಂಬ ಪ್ಲ್ಯಾನ್ ಮಾಡಿಕೊಂಡಿದ್ದರೆ ಕ್ಯಾನ್ಸಲ್ ಮಾಡಿಕೊಳ್ಳಿ. ಯಾಕೆಂದರೆ ನಂದಿಬೆಟ್ಟಕ್ಕೆ ಪ್ರವಾಸಗರಿಗೆ ನಿರ್ಬಂಧ ಹೇರಲಾಗಿದೆ.
ಹೌದು. ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರಿಗೆ ಬ್ರೇಕ್ ಬಿದ್ದಿದೆ. ಡಿಸೆಂಬರ್ 31ರ ಸಂಜೆ 06 ಗಂಟೆಯಿಂದ ಜನವರಿ 01 ರ 06 ಗಂಟೆಯವರೆಗೆ ನಿಷೇಧ ಹೇರಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಆದೇಶವನ್ನು ನೀಡಿದೆ.
ಇಷ್ಟು ಮಾತ್ರವಲ್ಲದೇ ನಂದಿಗಿರಿಧಾಮದಲ್ಲಿ ರೂಂ ಬುಕ್ಕಿಂಗ್ ಸಹ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಸದ್ಯ ಜಿಲ್ಲಾಡಳಿತದ ಆದೇಶದಿಂದ ನ್ಯೂ ಇಯರ್ ಸೆಲೆಬ್ರೇಟ್ ಮಾಡಬೇಕು ಎಂದು ಕನಸು ಕಂಡಿದ್ದ ಪ್ರವಾಸಿಗರಿಗೆ ಭಾರೀ ನಿರಾಸೆಯಾಗಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 5 ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ
ಬೆಂಗಳೂರು: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನಲ್ಲಿರುವ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ.
ಡಿಸೆಂಬರ್ 11 ರಿಂದ ನಂದಿಬೆಟ್ಟಕ್ಕೆ (Nandihills) ಎಲೆಕ್ಟ್ರಿಕ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧಾರ ಮಾಡಿದೆ. ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಈ ರೈಲು (Train) ಕಾರ್ಯನಿರ್ವಹಿಸಲಿದೆ.
ಮೇನ್‍ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ನಿರ್ಧಾರ ಮಾಡಲಾಗಿದೆ. 6531/06532 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ-ಕಂಟೋನ್ಮೆಂಟ್, 06535/06583 ಬೆಂಗಳೂರು, ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ, 06593/06594 ಯಶವಂತಪುರ-ಚಿಕ್ಕಬಳ್ಳಾಪುರ-ಯಶವಂತಪುರ ರೈಲುಗಳು ಸಂಚರಿಸಲಿವೆ. ಇದನ್ನೂ ಓದಿ: ಸದನದಲ್ಲಿ ವಿಪಕ್ಷಗಳನ್ನು ಕಟ್ಟಿ ಹಾಕಲು ಚರ್ಚೆ: ಸಿಎಲ್‌ಪಿ ಸಭೆಯಲ್ಲಿ ಏನು ಚರ್ಚೆ ನಡೆದಿದೆ?
ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು ನೋಡಲು ವಿದ್ಯಾರ್ಥಿಗಳು ಸೇರಿದಂತೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಹೀಗಾಗಿ ಚಿಕ್ಕಬಳ್ಳಾಪುರಕ್ಕೆ ರೈಲು ಸೇವೆಗಳನ್ನು ವಿಸ್ತರಿಸುವುದರಿಂದ ಪ್ರಯೋಜನವಾಗಲಿದೆ.
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಬೆಟ್ಟ (Nandihills) ಹಾಗೂ ಸ್ಕಂದಗಿರಿ ಬೆಟ್ಟಗಳನ್ನು ಭಾನುವಾರ ಹಾಗೂ ಸೋಮವಾರ ಎರಡು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗುತ್ತಿದೆ.
ಜುಲೈ 3 ಸೋಮವಾರದಂದು ರಾಷ್ಟ್ರಪತಿ ದ್ರೌಪತಿ ಮುರ್ಮು (Droupadi Murmu) ಅವರು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಶ್ರೀ ಸತ್ಯಸಾಯಿ ಲೋಕಸೇವಾ ಆಶ್ರಮಕ್ಕೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಭದ್ರತೆಯ ಹಿತದೃಷ್ಟಿಯಿಂದ ನಂದಿಗಿರಿಧಾಮ ಹಾಗೂ ಸ್ಕಂದಗಿರಿ ಬೆಟ್ಟಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಿರುವುದಾಗಿ ಚಿಕ್ಕಬಳ್ಳಾಫುರ ಎಸ್ಪಿ ಡಿ.ಎಲ್.ನಾಗೇಶ್ ಹಾಗೂ ಡಿ ಸಿ ರವಿಂದ್ರ ತಿಳಿಸಿದ್ದಾರೆ.
ವೀಕೆಂಡ್ ಅಂತ ಪ್ರವಾಸಿಗರು ನಂದಿಬೆಟ್ಟದತ್ತ ಬರಬಾರದು. ಮಂಗಳವಾರದಿಂದ ಎಂದಿನಂತೆ ಪ್ರವಾಸಿಗರು ಆಗಮಿಸಬಹುದು ಅಂತ ತಿಳಿಸಿದ್ದಾರೆ.
ಬೆಂಗಳೂರು: ನಂದಿಬೆಟ್ಟಕ್ಕೆ (Nandi Hills) ಬಂದು ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ನಂದಿಬೆಟ್ಟಕ್ಕೆ ಬಂದಿದ್ದ ನಾಲ್ವರು ಸ್ನೇಹಿತರು, ಬಿಸಿಲ ಬೇಗೆಗೆ ಕಂಗೆಟ್ಟು ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದ ಕೆರೆಗೆ ಈಜಲು (Swimming) ತೆರಳಿದ್ದರು. ಆದ್ರೆ ಶೇಖ್ ಥೈರ್ (18), ತೋಹಿದ್, ಶಾಹಿದ್, ಮತ್ತು ಫೈಜಲ್ ಖಾನ್ ನಾಲ್ವರು ಸ್ನೇಹಿತರೂ ನೀರುಪಾಲಾಗಿದ್ದಾರೆ. ಇದನ್ನೂ ಓದಿ: Manipur Violence: ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ – ಇಂಟರ್ನೆಟ್ ಸೇವೆ ಬಂದ್
ಕೆರೆ ದಡದಲ್ಲಿ ಬಟ್ಟೆಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹ ಪತ್ತೆಗೆ ಶೋಧ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹ ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮೋತಿ ಚೂರು ಲಾಡು ತಿನ್ನಲು ಮುಗಿಬಿದ್ದ ʻಕೈʼ ಕಾರ್ಯಕರ್ತರು
ಚಿಕ್ಕಬಳ್ಳಾಪುರ: ರಾಜ್ಯ ಬಜೆಟ್‌ನಲ್ಲಿ (State Budget) ಚಿಕ್ಕಬಳ್ಳಾಪುರಕ್ಕೆ (Chikkaballapur) ಬಂಪರ್ ಕೊಡುಗೆ ನೀಡುವುದಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ (K Sudhakar) ಸುಳಿವು ನೀಡಿದರು.
ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಮುದ್ದೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ನೀರಾವರಿಗೆ ವಿಶೇಷ ಕೊಡುಗೆ ನೀಡಬೇಕು. ನಂದಿಬೆಟ್ಟಕ್ಕೆ (Nandi Hills) ರೋಪ್ ವೇ ಈಗಾಗಲೇ ಮಂಜೂರಾಗಿದೆ. ಹೂ ಬೆಳೆಗಾರರಿಗೆ ಮಾರುಕಟ್ಟೆಗೆ ಅನುದಾನಕ್ಕೆ ಮನವಿ ಮಾಡಲಾಗಿದೆ ಎಂದರು. ಇದನ್ನೂ ಓದಿ: `ಏಕರೂಪ ನಾಗರಿಕ ಸಂಹಿತೆ’ ಕುರಿತು ಚರ್ಚಿಸಲು ಫೆ.12ರಂದು ಮುಸ್ಲಿಮರ ಬೃಹತ್ ಸಮಾವೇಶ
ಜೊತೆಗೆ ರೈತರು, ವಿದ್ಯಾರ್ಥಿಗಳು ಮತ್ತು ಮಹಿಳೆಯರಿಗೆ ಪೂರಕವಾದ ವಿಶೇಷ ಯೋಜನೆಗಳು ಇರಲಿವೆ ಎಂದು ತಿಳಿಸಿದರು. ಇದೇ ತಿಂಗಳು 17ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ಭರಪೂರ ಕೊಡುಗೆಗಳ ಸುಳಿವನ್ನು ಸಚಿವ ಸುಧಾಕರ್ ನೀಡಿದ್ದಾರೆ. ಇದನ್ನೂ ಓದಿ:ಸಚಿವ ಮುರುಗೇಶ್ ನಿರಾಣಿ ಹಂಚಿದ ಸಕ್ಕರೆ ತಿರಸ್ಕರಿಸಿದ ಮಹಿಳೆಗೆ ಭಾರೀ ಬೆಂಬಲ
Live Tv
[brid partner=56869869 player=32851 video=960834 autoplay=true]
ಚಿಕ್ಕಬಳ್ಳಾಪುರ: ಹೊಸ ವರ್ಷವನ್ನ ಸ್ವಾಗತಿಸೋಕೆ ಎಲ್ಲರೂ ತುದಿಗಾಲಲ್ಲಿ ನಿಂತಿದ್ದಾರೆ. ನ್ಯೂ ಇಯರ್ ಸೆಲಬ್ರೇಷನ್ ಹೆಸರಲ್ಲಿ ಮೋಜು-ಮಸ್ತಿ ಅಂತ ಬಹುತೇಕರು ಪ್ಲಾನ್ ಮಾಡಿಕೊಂಡಿದ್ದಾರೆ. ಹಾಗಂತ ನೀವು ನಂದಿಬೆಟ್ಟದಲ್ಲಿ ನ್ಯೂ ಇಯರ್ ಸ್ವಾಗತಿಸೋಣ, ಸಂಭ್ರಮಿಸೋಣ ಅಂತ ಪ್ಲಾನ್ ಮಾಡಿಕೊಂಡಿದ್ರೇ ನಿಮ್ಮ ಪ್ಲಾನ್ ಚೆಂಝ್ ಮಾಡಿಕೊಳ್ಳಿ.
ಹೌದು. ಬೆಂಗಳೂರು ಹೊರವಲಯದ ನಂದಿಹಿಲ್ಸ್ (NandiHills) ಅಂದ್ರೆ, ಪ್ರವಾಸಿಗರಿಗೆ ತುಂಬಾ ಅಚ್ಚುಮೆಚ್ಚು. ಅಲ್ಲಿನ ತಂಪಾದ ಹವಾಮಾನ, ಸೂರ್ಯೋದಯ ಹಾಗೂ ಸೂರ್ಯಸ್ತಮದ ವಿಹಂಗಮ ನೋಟ ನೋಡುವುದಕ್ಕೆ ನಿತ್ಯ ಸಾವಿರಾರು ಮಂದಿ ಭೇಟಿ ಕೊಡುತ್ತಾರೆ. ಇಂತಹ ಪ್ರಕೃತಿ ಸೊಬಗಿನಲ್ಲಿ ಕುಳಿತು ಹೊಸವರ್ಷ ಸ್ವಾಗತೀಸೋಣ ಅಂತ ನೀವು ಆಸೆ ಇಟ್ಟುಕೊಂಡಿದ್ರೆ ಆ ಆಸೆನಾ ಬಿಡ್ಬಿಡಿ.. ಯಾಕಂದ್ರೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾಡಳಿತ ನಂದಿ ಗಿರಿಧಾಮದಲ್ಲಿ ಮೋಜು-ಮಸ್ತಿ ಮಾಡುವುದಕ್ಕೆ ನಿಷೇಧ ಹೇರಿ ಅದೇಶ ಹೊರಡಿಸಿದೆ. ಇಂದು ಸಂಜೆ 6 ಗಂಟೆಯಿಂದ ನಾಳೆ, ಬೆಳಗ್ಗೆ 6 ಗಂಟೆವರೆಗೂ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಿದೆ.
ಕೇವಲ ನಂದಿಬೆಟ್ಟಕ್ಕೆ ಮಾತ್ರವಲ್ಲದೇ, ಅದಕ್ಕೆ ಹೊಂದಿಕೊಂಡಿರುವ ಸ್ಕಂದಗಿರಿ, ಚನ್ನಗಿರಿ, ಆವುಲ ಹಾಗೂ ಕೈವಾರ ಬೆಟ್ಟಕ್ಕೂ ನಿರ್ಭಂಧವಿಧಿಸಿದೆ. ನಂದಿಗಿರಿಧಾಮದ ಸುತ್ತಮುತ್ತ ಇರುವ ಹೋಟೆಲ್ ರೇಸಾರ್ಟ್ ಹೋಮ್ ಸ್ಟೇ ಮಾಲೀಕರ ಜೊತೆ ಸಭೆ ನಡೆಸಿ, ಲಾಭದ ಆಸೆಗೆ ಬಿದ್ದು ಸರ್ಕಾರ ನೀತಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಚಿಕ್ಕಬಳ್ಳಾಪುರ ಪೊಲೀಸರು ಖಡಕ್ ವಾರ್ನಿಂಗ್ ಮಾಡಿದ್ದಾರೆ. ಇದನ್ನೂ ಓದಿ: ಹೊಸ ವರ್ಷದ ಸಂಭ್ರಮಕ್ಕೆ ಕೌಂಟ್‍ಡೌನ್- ರೂಪಾಂತರಿ ಆತಂಕ ಹಿನ್ನೆಲೆ ಸ್ಟ್ರಿಕ್ಟ್ ರೂಲ್ಸ್
ಹೊಸವರ್ಷ ಆಚರಣೆ ಮಾಡದೆ ಸುಮ್ಮನೆ ಇರೋಕಾಗುತ್ತಾ ಅಂತ ಚಿಕ್ಕಬಳ್ಳಾಪುರ ಪಂಚಗಿರಿಗಳ ಸಾಲಿನತ್ತ ಬಂದ್ರೆ ಅಲ್ಲಿಯೂ ಪೊಲೀಸ್ ಹಾಗೂ ಅರಣ್ಯ ಇಲಾಖೆ ಸರ್ಪಗಾವಲು ಹಾಕಲಾಗುತ್ತಿದೆ. ಆದರೆ ನಾಳೆ ಬೆಳಿಗ್ಗೆ 6 ಗಂಟೆಯಿಂದ ಎಂದಿನಂತೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶವಿದ್ದು, ಅಂದು ಎಂದಿನಂತೆ ಬಂದು ಹೋಗಬಹುದಾಗಿದೆ.
Live Tv
[brid partner=56869869 player=32851 video=960834 autoplay=true]
ಚಿಕ್ಕಬಳ್ಳಾಪುರ: ಹೊಸ ವರ್ಷ (New Year) 2023ನ್ನು ಸ್ವಾಗತಿಸೋಕೆ ಎಲ್ಲರೂ ತುದಿಗಾಲಲ್ಲಿ ನಿಂತಿದ್ದಾರೆ. ನ್ಯೂ ಇಯರ್ ಸೆಲೆಬ್ರೇಷನ್ ಹೆಸರಲ್ಲಿ ಸಂಭ್ರಮ, ಮೋಜು, ಮಸ್ತಿ ಅಂತ ಬಹುತೇಕರು ಪ್ಲಾನ್ ಮಾಡಿಕೊಂಡಿದ್ದಾರೆ. ಹಾಗಂತ ನೀವು ನಂದಿಬೆಟ್ಟದಲ್ಲಿ (Nandi Hills) ನ್ಯೂ ಇಯರ್ ಸ್ವಾಗತಿಸೋಣ, ಸಂಭ್ರಮಿಸೋಣ ಅಂತ ಪ್ಲಾನ್ ಮಾಡಿಕೊಂಡಿದ್ದರೆ ನಿಮ್ಮ ಪ್ಲಾನ್ ಚೇಂಜ್ ಮಾಡಿಕೊಳ್ಳಿ ಯಾಕೆಂದರೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ನಂದಿಗಿರಿಧಾಮ ಅಂದರೆ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೇವಾರು ಹೂಗಳ ವಯ್ಯಾರ. ಮಿಗಿಲಾಗಿ ಸಮುದ್ರಮಟ್ಟದಿಂದ 1,600 ಮೀಟರ್ ಎತ್ತರದಲ್ಲಿ ನಿಂತು ಸೂರ್ಯೋದಯ ಹಾಗೂ ಸೂರ್ಯಸ್ತಮದ ವಿಹಂಗಮ ನೋಟ ನೋಡುವುದಕ್ಕೆ ತುಂಬಾ ಫೇಮಸ್. ನಂದಿಗಿರಿಧಾಮದಲ್ಲಿ ಕಾಣಸಿಗುವ ಬೆಳ್ಳಿ ಮೋಡ, ಇಬ್ಬನಿ, ಸುತ್ತಲೂ ಎತ್ತ ನೋಡಿದರೂ ಮುತ್ತಿಕ್ಕುವ ಮಂಜು, ಇಂಥ ಪ್ರಕೃತಿ ಸೊಬಗಿನಲ್ಲಿ ಕುಳಿತು ಹೊಸ ವರ್ಷ 2023ನ್ನು ಸ್ವಾಗತಿಸೋಣ ಅಂತ ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ರು. ಆದ್ರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಪಾರ್ಟಿ ಪ್ರಿಯರ ಕನಸಿಗೆ ನಿರಾಸೆ ಮಾಡಿದ್ದು, ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಜಿಲ್ಲಾಧಿಕಾರಿ ಎನ್.ಎಂ ನಾಗರಾಜು ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಪೊಲೀಸರ ಸೋಗಿನಲ್ಲಿ ಬಂದು 80 ಲಕ್ಷ ದರೋಡೆ
ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ 2023 ಜನವರಿ 1ರ ಬೆಳಗ್ಗೆ 6 ಗಂಟೆವರೆಗೂ ನಂದಿಗಿರಿಧಾಮಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಅತಿಥಿ ಗೃಹಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಹೀಗಾಗಿ ಡಿ.31ರ ರಾತ್ರಿ ಬೆಟ್ಟದ ಮೇಲೆ ಯಾರೂ ಉಳಿದುಕೊಳ್ಳುವಂತಿಲ್ಲ. ಮೋಜು ಮಸ್ತಿ ಪಾರ್ಟಿ ಸೆಲೆಬ್ರೇಷನ್ ಹೆಸರಲ್ಲಿ ಅಪಘಾತ ಅನಾಹುತ ಅವಘಡಗಳಾಗಬಹುದು. ರಾತ್ರಿ ವೇಳೆ ಬೆಟ್ಟದ ಮೇಲೆ ಸಂಚಾರ ಒಳ್ಳೆಯದಲ್ಲ ಎಂಬ ಕಾರಣಕ್ಕೆ ಈ ನಿರ್ಧಾರ ಮಾಡಲಾಗಿದೆ. ನಂದಿಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಿದ ಕಾರಣ ಸಾರ್ವಜನಿಕರು ಗಿರಿಧಾಮಕ್ಕೆ ಹೊಂದಿಕೊಂಡಿರುವ ಸ್ಕಂದಗಿರಿ ಬೆಟ್ಟ, ಚನ್ನಗಿರಿ ಬೆಟ್ಟ, ಆವುಲಬೆಟ್ಟ, ಕೈವಾರ ಬೆಟ್ಟಕ್ಕೂ ಭೇಟಿ ನೀಡುವ ಸಾಧ್ಯತೆ ಹಿನ್ನೆಲೆ ಆ ಬೆಟ್ಟಗಳಿಗೂ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಕೊರೊನಾಗೆ ಇಡೀ ಜಗತ್ತೇ ತತ್ತರಿಸಿದ್ರೆ, ಈ 2 ದೇಶಗಳಲ್ಲಿ ಮಾತ್ರ ಒಂದೇ ಒಂದು ಕೇಸ್ ಇಲ್ಲ
ನಂದಿಗಿರಿಧಾಮದ ಸುತ್ತಮುತ್ತ ಇರುವ ಹೋಟೆಲ್, ರೆಸಾರ್ಟ್, ಹೋಮ್‍ಸ್ಟೇ ಮಾಲೀಕರ ಜೊತೆ ಸಭೆ ನಡೆಸಿರುವ ಪೊಲೀಸರು, ಲಾಭದ ಆಸೆಗೆ ಬಿದ್ದು ಸರ್ಕಾರ ನೀತಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಚಿಕ್ಕಬಳ್ಳಾಪುರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜನವರಿ 1 ರ ಬೆಳಗ್ಗೆ 6 ಗಂಟೆಯಿಂದ ಎಂದಿನಂತೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶವಿದ್ದು ಅಂದು ಎಂದಿನಂತೆ ಬಂದು ಹೋಗಬಹುದಾಗಿದೆ.
Live Tv
[brid partner=56869869 player=32851 video=960834 autoplay=true]