Tag: ನಂದಿ ಗಿರಿಧಾಮ

  • ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಂದಿಬೆಟ್ಟದಲ್ಲಿ ಆತ್ಮಹತ್ಯೆ – ಒಂದೂವರೆ ತಿಂಗಳ ಬಳಿಕ ಶವ ಪತ್ತೆ

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಂದಿಬೆಟ್ಟದಲ್ಲಿ ಆತ್ಮಹತ್ಯೆ – ಒಂದೂವರೆ ತಿಂಗಳ ಬಳಿಕ ಶವ ಪತ್ತೆ

    ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ತಿರುಪತಿ (Tirupati) ತಿಮ್ಮಪ್ಪನ ದರ್ಶನ ಪಡೆದು ಬಳಿಕ ನಂದಿ ಗಿರಿಧಾಮಕ್ಕೆ (Nandi Hills) ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಒಂದೂವರೆ ತಿಂಗಳ ಬಳಿಕ ಆತನ ಶವ ಪತ್ತೆಯಾಗಿದೆ.

    ಚಿಕ್ಕಬಳ್ಳಾಪುರದ (Chikkaballapur) ಜಾತವಾರ ಹೊಸಹಳ್ಳಿ ಗ್ರಾಮದ ನಾರಾಯಣಸ್ವಾಮಿ (37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ. ನಂದಿ ಗಿರಿಧಾಮದ 38ನೇ ತಿರುವಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ವಿಷಯ ತಿಳಿದ ಚಿಕ್ಕಬಳ್ಳಾಪುರ ವೃತ್ತ ನಿರೀಕ್ಷಕ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ಬ್ಯಾಗ್‍ನಲ್ಲಿ ಆಧಾರ್ ಕಾರ್ಡ್ ಲಭ್ಯವಾಗಿದ್ದರಿಂದ ಮೃತನ ಗುರುತು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಮೇಲೆ ಹಲ್ಲೆ – ಪ್ರಶ್ನೆ ಮಾಡಿದಕ್ಕೆ ಕುಚಿಕುಗಳಿಂದಲ್ಲೇ ಕೊಲೆ

    ಟ್ರ್ಯಾಕ್ಟರ್ ಚಾಲಕನಾಗಿದ್ದ ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಇನ್ನೂ ಸಾಯುವುದಕ್ಕೂ ಮುನ್ನ ತಿರುಪತಿಗೆ ತೆರಳಿ ದೇವರ ದರ್ಶನ ಪಡೆದು ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ. ಕಳೆದ ಡಿ.15ರ ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ತೊರೆದಿದ್ದ. ನಂತರ, ನಾನು ನಂದಿಬೆಟ್ಟದಲ್ಲಿದ್ದು ನನ್ನನ್ನ ಮರೆತುಬಿಡಿ, ನಾನು ವಿಷ ಸೇವಿಸಿ ಸಾಯುತ್ತಿದ್ದೇನೆ ಎಂದು ಮನೆಯವರಿಗೆ ವಾಯ್ಸ್ ಮೆಸೇಜ್ ಕಳಿಸಿದ್ದ ಎಂದು ತಿಳಿದು ಬಂದಿದೆ.

    ಈ ಬಗ್ಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತನ ಸಂಬಂಧಿಕರು ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಇದೀಗ ಒಂದೂವರೆ ತಿಂಗಳ ಬಳಿಕ ನಾರಾಯಣಸ್ವಾಮಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಈ ಸಂಬಂಧ ನಂದಿ ಗಿರಿಧಾಮ ಪೊಲೀಸ್ ( Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಕಲ್ಕಾಜಿ ದೇಗುಲದಲ್ಲಿ ವೇದಿಕೆ ಕುಸಿದುಬಿದ್ದು ಮಹಿಳೆ ಸಾವು – 17 ಮಂದಿಗೆ ಗಾಯ

  • ಇಂದು ನಂದಿಗಿರಿಧಾಮ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವು; ನಾಳೆ ಬಂದ್ – ಜಿಲ್ಲಾಡಳಿತ ಮರು ಆದೇಶ

    ಇಂದು ನಂದಿಗಿರಿಧಾಮ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವು; ನಾಳೆ ಬಂದ್ – ಜಿಲ್ಲಾಡಳಿತ ಮರು ಆದೇಶ

    ಚಿಕ್ಕಬಳ್ಳಾಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭೇಟಿ ಹಿನ್ನೆಲೆಯಲ್ಲಿ ಭಾನುವಾರ (ಇಂದು) ವಿಶ್ವವಿಖ್ಯಾತ ನಂದಿಗಿರಿಧಾಮ (Nandi Hills) ಹಾಗೂ ಸ್ಕಂದಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತದ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ.

    ಭಾನುವಾರ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸೋಮವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾಧಿಕಾರಿ ರವೀಂದ್ರ ಹಾಗೂ ಎಸ್ಪಿ ನಾಗೇಶ್ ‘ಪಬ್ಲಿಕ್ ಟಿವಿ’ಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಭಾನುವಾರ, ಸೋಮವಾರ ನಂದಿಬೆಟ್ಟ ಸಂಪೂರ್ಣ ಬಂದ್

    ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ಹಿತದೃಷ್ಟಿಯಿಂದ 2 ದಿನ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಈಗ ಸಾರ್ವಜನಿಕರು ಹಾಗೂ ಪ್ರವಾಸಿಗರ ಒತ್ತಡಕ್ಕೆ ಮಣಿದ ಜಿಲ್ಲಾಡಳಿತ ಪ್ರವಾಸಿಗರಿಗೆ ಅವಕಾಶ ಕಲ್ಪಿಸಿದೆ. ಅಲ್ಲದೇ ಸೋಮವಾರ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಸಾಲ ಕೊಡಿಸುವುದಾಗಿ ನಂಬಿಸಿ ಜನರಿಂದ ಹಣ ಪಡೆದು ವಂಚನೆ – ಗ್ಯಾಂಗ್ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸುಧಾಕರ್

    ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸುಧಾಕರ್

    – ರೋಪ್ ವೇ ಕನಸು ನನಸಾಗುವ ಕಾಲ ಸನ್ನಿಹಿತ
    – 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ

    ಚಿಕ್ಕಬಳ್ಳಾಪುರ: ನಂದಿ ಗಿರಿಧಾಮವನ್ನು ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿಬೆಟ್ಟ ಹಾಗೂ ಸುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯ ಸಂಪತ್ತು ಇದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿಸಬಹುದು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ತಿಳಿಸಿದರು.

    ಕಳೆದ 15 ವರ್ಷಗಳಿಂದ ರೋಪ್ ವೇ ಬೇಕು ಎಂದು ಜನರು ಬೇಡಿಕೆ ಇಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಯಬಹುದು ಎಂದರು.

    ತಕ್ಷಣದಲ್ಲಿ ಟೆಂಡರ್ ಆಗಿ ಎಲ್ಲ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ನಂದಿಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

    ಇದರ ಜೊತೆಗೆ ಎಕೋ-ಟೂರಿಸಂ, ಸುತ್ತಮುತ್ತಲಿನ 5 ಬೆಟ್ಟಗಳಿಗೆ ಚಾರಣ ದಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ. ರಾಜ್ಯದಲ್ಲಿ ವಿಶಿಷ್ಠ ಪ್ರವಾಸಿ ತಾಣಗಳಿವೆ ಎಂದರು.

    ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್ ಒಳಗೆ ತೆಗೆದುಕೊಂಡು ಹೋಗಲು ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

    ರೋಪ್ ವೇ ಕನಸು ನನಸು
    ನಂದಿ ಗಿರಿಧಾಮಕ್ಕೆ ರೋಪ್ ವೇ ಮಾರ್ಗ ನಿರ್ಮಾಣದ ಕನಸು ನನಸಾಗುವ ಕಾಲ ದೂರ ಇಲ್ಲ ಎಂದು ಸುಧಾಕರ್ ತಿಳಿಸಿದರು. ಇಂದು ಬೆಳ್ಳಂ ಬೆಳಗ್ಗೆ ನಂದಿ ಗಿರಿಧಾಮಕ್ಕೆ ಆಗಮಿಸಿದ ಸಚಿವ ಸುಧಾಕರ್, ಕಾಲ್ನಡಿಗೆ ಮೂಲಕ ಇಡೀ ನಂದಿಬೆಟ್ಟದಲ್ಲಿ ರೌಂಡ್ಸ್ ಹಾಕಿದರು. ಅಭಿವೃದ್ದಿ ಕಾರ್ಯಗಳ ಸಂಬಂಧ ನಂದಿಗಿರಿಧಾಮದ ನೆಹರು ನಿಲಯದಲ್ಲಿ ಸಭೆ ನಡೆಸಿದರು. ನಂದಿಗಿರಿಧಾಮ ಅಭಿವೃದ್ದಿಗೆ 10 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಅಭಿವೃದ್ದಿ ಕಾರ್ಯಗಳಿಗೆ ರೂಪುರೇಷೆ ಸಿದ್ಧಪಡಿಸಲಾಗಿದೆ. ಕೂಡಲೇ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು. ಪಾಥ್ ವೇನಲ್ಲಿ ಸ್ವಚ್ಛತೆ ಕಾಪಾಡಿಲ್ಲ, ಗಿಡಗಳನ್ನು ತೆಗೆದಿಲ್ಲ ಎಂದು ತೋಟಗಾರಿಕಾ ಅಧಿಕಾರಿಗಳ ವಿರುದ್ಧ ಸಚಿವ ಸುಧಾಕರ್ ಗರಂ ಆದರು.

  • ದಂಡ ಹಾಕಿದ ಎಸ್‍ಐ ಜೊತೆ ಅಸಭ್ಯವಾಗಿ ಮಾತನಾಡಿದ ಯುವತಿಯರು

    ದಂಡ ಹಾಕಿದ ಎಸ್‍ಐ ಜೊತೆ ಅಸಭ್ಯವಾಗಿ ಮಾತನಾಡಿದ ಯುವತಿಯರು

    – ನಂದಿ ಬೆಟ್ಟಕ್ಕೆ ಬಂದ ಯುವತಿಯರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್

    ಚಿಕ್ಕಬಳ್ಳಾಪುರ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಯುವತಿಯರು, ಪೊಲೀಸರ ಜೊತೆ ಅಸಭ್ಯ ಮಾತನಾಡಿರುವ ಘಟನೆ ಚಿಕ್ಕಬಳ್ಳಾಪುರದ ನಂದಿಗಿರಿಧಾಮದ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

    ನಂದಿಗಿರಿಧಾಮಕ್ಕೆ ಬರುತ್ತಿದ್ದ ಯುವತಿಯರು ಹೆಲ್ಮೆಟ್ ಧರಿಸದೆ ಸ್ಕೂಟಿಯಲ್ಲಿ ಬಂದಿದ್ದರು. ಇದನ್ನು ಗಮನಿಸಿದ ಎಸ್‍ಐ ಸಂಚಾರಿ ನಿಮಯಮವನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ದಂಡ ವಿಧಿಸಿದ್ದಾರೆ. ಇದರಿಂದ ಕೋಪಗೊಂಡ ಯುವತಿಯರು ಎಎಸ್‍ಐ ಜೊತೆಗೆ ಅಸಭ್ಯ ಮಾತನಾಡಿದ್ದಾರೆ.

    ಎರಡು ಸ್ಕೂಟಿಯಲ್ಲಿ, ನಾಲ್ವರು ಯುವತಿಯರು ನಂದಿಗಿರಿಧಾಮಕ್ಕೆ ಬಂದಿದ್ದರು. ಸಂಚಾರಿ ನಿಮಯದ ಉಲ್ಲಂಘನೆ ಅಡಿಯಲ್ಲಿ ಪೊಲೀಸರು ದಂಡ ವಿಧಿಸಿದ್ದಾರೆ. ಇದಕ್ಕೆ ಯುವತಿಯರು ಎಸ್‍ಐ ಜೊತೆ ಅಸಭ್ಯ ಮಾತನಾಡಿದ್ದಾರೆ. ಕಾನೂನು ಪ್ರಕಾರ ದಂಡವಿಧಿಸಬೇಕು ಅಂದಿದ್ದಕ್ಕೆ, ದಂಡ ಹಾಕಬಾರದು ಎಂದು ಅಸಭ್ಯವಾದ ಮಾತುಗಳನ್ನು ಯುವತಿಯರು ಆಡಿದ್ದಾರೆ.

    ಪ್ರಕೃತಿಯ ಅನನ್ಯ ಸೌಂದರ್ಯದಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುವ ನಂದಿಗಿರಿಧಾಮಕ್ಕೆ ಈ ಸಮಯದಲ್ಲಿ ಪ್ರವಾಸಿಗರು ಬರುವುದು ಹೆಚ್ಚು. ಕರ್ನಾಟಕದ ಪಾಲಿನ ಊಟಿ ಎಂದೇ ಹೆಸರುವಾಸಿಯಾಗಿರುವ ನಂದಿ ಗಿರಿಧಾಮ ಪ್ರವಾಸಿಗರನ್ನು ತನ್ನತ್ತ ಸೆಳೆಯುವ ಶಕ್ತಿಯನ್ನು ಹೊಂದಿದೆ. ಪ್ರತಿನಿತ್ಯ ಸಾವಿರಾರು ಮಂದಿ ಪ್ರವಾಸಿಗರು ಬರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಪ್ರವಾಸೋದ್ಯಮ ಇಲಾಖೆ ಕೈಗೊಂಡಿದೆ. ಆದರೆ ಕೆಲವರು ನಿಯಮ ಉಲ್ಲಂಘನೆ ಮಾಡುತ್ತಲೇ ಇರುತ್ತಾರೆ.

    .

  • ನಂದಿ ಬೆಟ್ಟದಲ್ಲಿ ರೌಂಡ್ಸ್, ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತೆ: ನಾರಾಯಣಗೌಡ

    ನಂದಿ ಬೆಟ್ಟದಲ್ಲಿ ರೌಂಡ್ಸ್, ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತೆ: ನಾರಾಯಣಗೌಡ

    ಚಿಕ್ಕಬಳ್ಳಾಪುರ: ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ತೋಟಗಾರಿಕಾ ಸಚಿವ ನಾರಾಯಣಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತ್ಯವ್ಯ ಹೂಡಿದ್ದ ಸಚಿವ ನಾರಾಯಣಗೌಡ ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದ್ದು, ನಾನೂ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದೇನೆ ಎಂದರು.

    ರಾತ್ರಿಯೇ ನಂದಿಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತವ್ಯ ಹೂಡಿದ್ದ ಸಚಿವರು, ಬೆಳ್ಳಂಬೆಳಗ್ಗೆ ರೌಂಡ್ಸ್ ಹಾಕಿದರು. ಸಚಿವನಾದ ನಂತರ ಇದೇ ಮೊದಲ ಬಾರಿಗೆ ಇಲ್ಲಿಗೆ ಆಗಮಿಸಿದ್ದೇನೆ. ನಂದಿ ಗಿರಿಧಾಮದ ಪ್ರಾಕೃತಿಕ ಸೊಬಗು ಸೌಂದರ್ಯ ಕಂಡು ಸಂತೋಷವಾಗಿದೆ. ಮತ್ತಷ್ಟು ಅಭಿವೃದ್ದಿ ಮಾಡುತ್ತೇನೆ ಆದರೆ ಯಾವುದೇ ಕಾರಣಕ್ಕೂ ನಂದಿಗಿರಿಧಾಮವನ್ನ ಪ್ರವಾಸೋದ್ಯಮ ಇಲಾಖೆಗೆ ಬಿಟ್ಟುಕೊಡುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರು.

    ತೋಟಗಾರಿಕೆ ಇಲಾಖೆ ಅಧೀನದಲ್ಲಿರುವ ನಂದಿಗಿರಿಧಾಮ ಹಾಗೂ ಕೆಮ್ಮಣ್ಣುಗುಂಡಿಯನ್ನ ಪ್ರವಾಸೋದ್ಯಮ ಇಲಾಖೆಗೆ ನೀಡುವಂತೆ ಬೆಂಗಳೂರಿನಲ್ಲಿ ನಡೆಸಲಾಗಿದ್ದ ಪ್ರವಾಸೋದ್ಯಮ ಅಭಿವೃದ್ಧಿ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಮೌಖಿಕ ಆದೇಶ ನೀಡಿದ್ದರು. ಆದರೆ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರ ಮಾಡುವುದಕ್ಕೆ ಹಲವು ಪರಿಸರವಾದಿಗಳು, ಸ್ಥಳೀಯ ಜನ ಹಾಗೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇಂದು ಸಹ ಕೆಲ ಸಂಘಟನೆಯವರು ಹಾಗೂ ಸ್ಥಳೀಯರು ನಮ್ಮನ್ನು ಭೇಟಿ ಮಾಡಿ, ಹಸ್ತಾಂತರ ಮಾಡದಂತೆ ಆಗ್ರಹಿಸಿದ್ದಾರೆ ಎಂದು ಸಚಿವರು ತಿಳಿಸಿದರು.

    ಯಾವುದೇ ಕಾರಣಕ್ಕೂ ನಂದಿಗಿರಿಧಾಮ ಹಾಗೂ ಕೆಮ್ಮಣ್ಣುಗುಂಡಿಯನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರ ಮಾಡುವುದಿಲ್ಲ. ನಾವೇ ಅಭಿವೃದ್ದಿ ಮಾಡುತ್ತೇವೆ. ನಂದಿ ಗಿರಿಧಾಮ ಔಷಧಿ ಗುಣಗಳುಳ್ಳ ಸಸ್ಯ ಪ್ರಭೇದ ಇರುವ ತಾಣ. ಇದೊಂದು ಆರೋಗ್ಯ ಧಾಮ ಕೂಡ ಹೀಗಾಗಿ ನಂದಿ ಗಿರಿಧಾಮವನ್ನ ತೋಟಗಾರಿಕಾ ಇಲಾಖೆಯಲ್ಲೇ ಉಳಿಸಿಕೊಂಡು ಅಭಿವೃದ್ಧಿ ಪಡಿಸುತ್ತೇವೆ. ಈ ಹಸ್ತಾಂತರ ವಿಚಾರದಲ್ಲಿ ಸಂಘಟನೆಗಳು ಹಾಗೂ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದು, ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ತೋಟಗಾರಿಕಾ ಇಲಾಖೆಯಲ್ಲಿ ಉಳಿಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

  • ನಂದಿಗಿರಿಧಾಮದಲ್ಲಿ 10 ಲಕ್ಷ ರೂ. ದರೋಡೆ

    ನಂದಿಗಿರಿಧಾಮದಲ್ಲಿ 10 ಲಕ್ಷ ರೂ. ದರೋಡೆ

    ಚಿಕ್ಕಬಳ್ಳಾಪುರ: ವಾಹನ ಅಡ್ಡಗಟ್ಟಿ 10 ಲಕ್ಷ ರೂಪಾಯಿ ದರೋಡೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದ ಬಳಿ ನಡೆದಿದೆ.

    ನಂದಿಬೆಟ್ಟದ ತಪ್ಪಲಿನ ಕಣಿವೆ ಬಸವಣ್ಣ ದೇವಾಲಯದ ತಿರುವಿನಲ್ಲಿ ಕಾರಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ. ದೊಡ್ಡಬಳ್ಳಾಪುರ ನಿವಾಸಿ ರಾಮಚಂದ್ರ ಸಾಹು ಹಣ ಕಳೆದುಕೊಂಡವರಾಗಿದ್ದಾರೆ.

    ಐಟಿಸಿ ಕಂಪನಿಯ ರಾಮಚಂದ್ರ ಸಾಹು ಅವರು ಚಿಕ್ಕಬಳ್ಳಾಪುರದಿಂದ ದೊಡ್ಡಬಳ್ಳಾಪುರಕ್ಕೆ ಹೋಗುವಾಗ ವಾಹನ ಅಡ್ಡಗಟ್ಟಿ ಪೆಪ್ಪರ್ ಸ್ಪ್ರೈ ಸಿಂಪಡಿಸಿ ಹಣ ದೋಚಿದ್ದಾರೆ. ಈ ಸಂಬಂಧ ನಂದಿಗಿರಿಧಾಮ ಪೊಲೀಸ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ವೀಕೆಂಡ್ ಅಂತ ನಂದಿ ಹಿಲ್ಸ್ ಗೆ ಹೋಗ್ತಿದ್ದೀರಾ? ಈ ಸುದ್ದಿ ಓದಿ

    ವೀಕೆಂಡ್ ಅಂತ ನಂದಿ ಹಿಲ್ಸ್ ಗೆ ಹೋಗ್ತಿದ್ದೀರಾ? ಈ ಸುದ್ದಿ ಓದಿ

    ಚಿಕ್ಕಬಳ್ಳಾಪುರ: ಬೆಳ್ಳಂಬೆಳಗ್ಗೆ ದ್ವಿಚಕ್ರವಾಹನಗಳಲ್ಲಿ ನಂದಿ ಹಿಲ್ಸ್ ಗೆ ಹೋದ್ರೆ ಸಖತ್ತಾಗಿರುತ್ತೆ ಅಂತ ಈ ವೀಕೆಂಡ್‍ನಲ್ಲಿ ನೀವೇನಾದ್ರೂ ಅಲ್ಲಿಗೆ ಹೋಗೋಕೆ ಪ್ಲಾನ್ ಮಾಡ್ತಿದ್ರೆ ನಿಮಗಿದು ಕಹಿ ಸುದ್ದಿ.

    ವಿಶ್ವವಿಖ್ಯಾತ ಪ್ರವಾಸಿತಾಣ ನಂದಿಗಿರಿಧಾಮಕ್ಕೆ ಜುಲೈ 1 ಹಾಗೂ 2 ರಂದು ಅಂದ್ರೆ ನಾಳೆ ಮುಂಜಾನೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯವರೆಗೆ, ಎರಡು ದಿನ ಸತತ ನಾಲ್ಕು ಗಂಟೆಗಳ ಕಾಲ ವಾಹನಗಳ ಸಂಚಾರವನ್ನ ಸಂಪೂರ್ಣ ನಿಷೇಧಿಸಲಾಗಿದೆ ಅಂತ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಭಾರಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.

    ಸ್ಪೆಕ್ಟ್ರಂ ರೇಸಿಂಗ್ ಅನ್ನೋ ಸಂಸ್ಥೆ ನಂದಿಗಿರಿಧಾಮದಲ್ಲಿ ಸೈಕ್ಲಿಂಗ್ ರೇಸಿಂಗ್ ಸ್ಪರ್ಧೆ ಆಯೋಜನೆ ಮಾಡಿರುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ನಾಳೆ ಶನಿವಾರ ಹಾಗೂ ನಾಡಿದ್ದು ಭಾನುವಾರ ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯವರೆಗೂ ನಂದಿಗಿರಿಧಾಮಕ್ಕೆ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ.

    ಪರಿಸರ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದ್ದು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

    ಇಚ್ಛೆಯುಳ್ಳ ಸಾರ್ವಜನಿಕರು ಸೈಕ್ಲಿಂಗ್ ಸ್ಪರ್ಧೆ ಸೇರಿದಂತೆ ವಾಕಿಂಗ್ ಹಾಗೂ ಟ್ರೆಕ್ಕಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಅಂತ ಮಾಹಿತಿ ನೀಡಿದ್ದಾರೆ.