Tag: ನಂದಿ ಪರ್ವತ

  • ಜೈನಮುನಿಗಳ ಹತ್ಯೆ ಪ್ರಕರಣ – ಸ್ವಾಮೀಜಿ ಪರ್ಸನಲ್ ಡೈರಿ ಪತ್ತೆ

    ಜೈನಮುನಿಗಳ ಹತ್ಯೆ ಪ್ರಕರಣ – ಸ್ವಾಮೀಜಿ ಪರ್ಸನಲ್ ಡೈರಿ ಪತ್ತೆ

    ಚಿಕ್ಕೋಡಿ: ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ (Kamkumar Nandi Maharaj) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪರ್ಸನಲ್ ಡೈರಿಯನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾಗಿ ಮೂಲಗಳು ಖಚಿತ ಪಡಿಸಿವೆ.

    ಜೈನಮುನಿಗಳ (Jain Monk) ಡೈರಿಯನ್ನು ಸುಟ್ಟು ಹಾಕಿದ್ದಾಗಿ ಬಂಧಿತ ಆರೋಪಿಗಳು ಕಥೆ ಕಟ್ಟಿದ್ದರು. ಆದರೆ ಇದೀಗ ಪೊಲೀಸರ ಕೈಗೆ ಜೈನಮುನಿಗಳ ಡೈರಿ ಲಭ್ಯವಾಗಿದೆ. ಡೈರಿಯಲ್ಲಿ ಉಲ್ಲೇಖವಿರುವವರನ್ನು ಠಾಣೆಗೆ ಕರೆಸಿ ತನಿಖೆ ಮಾಡಲಾಗುತ್ತಿದೆ. ಇದರಿಂದಾಗಿ ಸ್ವಾಮೀಜಿ ಬಳಿ ಹಣ ಪಡೆದಿದ್ದವರಲ್ಲಿ ಆತಂಕ ಶುರುವಾಗಿದೆ. ಇದನ್ನೂ ಓದಿ: ಹೀರೆಕೋಡಿ ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿಯ ಡೈರಿ ರಹಸ್ಯ ಕೆದಕುತ್ತಿರುವ ಪೊಲೀಸರು

    ಪೊಲೀಸರ (Police) ದಿಕ್ಕು ತಪ್ಪಿಸುತ್ತಿದ್ದ ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನ್ ಸಾಬ್ ದಲಾಯತ್, ತಮ್ಮ ರಕ್ತಸಿಕ್ತ ಬಟ್ಟೆ ಜೊತೆ ಜೈನಮುನಿಗಳ ಪರ್ಸನಲ್ ಡೈರಿಯನ್ನು ಸುಟ್ಟು ಹಾಕಿದ್ದಾಗಿ ಹೇಳಿದ್ದರು. ಅಲ್ಲದೇ ಪೊಲೀಸರಿಗೆ ಬೂದಿಯನ್ನು ಸಹ ತೋರಿಸಿದ್ದರು. ಬಳಿಕ ಪೊಲೀಸರು ಎಫ್‍ಎಸ್‍ಎಲ್‍ಗೆ ಬೂದಿಯನ್ನು ರವಾನಿಸಿದ್ದರು. ಈಗ ಡೈರಿಯ ಬೂದಿ ಅಲ್ಲ ಎಂಬುದು ತನಿಖೆ ವೇಳೆ ಪತ್ತೆಯಾಗಿದೆ. ಡೈರಿ ಪತ್ತೆಯಾಗುತ್ತಿದ್ದಂತೆ ತನಿಖೆ ಚುರುಕುಗೊಂಡಿದೆ. ಇದನ್ನೂ ಓದಿ: ಹಿರೇಕೋಡಿ ಜೈನಮುನಿಗಳ ಮೃತದೇಹ ಸಾಗಿಸಿದ್ದ ಬೈಕ್ ಜಪ್ತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಹತ್ಯೆ: ಅಘಾತ ವ್ಯಕ್ತಪಡಿಸಿದ ಸಿಎಂ – ಸಮಗ್ರ ತನಿಖೆಗೆ ಸೂಚನೆ

    ಜೈನಮುನಿ ಹತ್ಯೆ: ಅಘಾತ ವ್ಯಕ್ತಪಡಿಸಿದ ಸಿಎಂ – ಸಮಗ್ರ ತನಿಖೆಗೆ ಸೂಚನೆ

    ಬೆಂಗಳೂರು: ಹಿರೇಕೋಡಿಯ ಜೈನಮುನಿ (Jain Muni) ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೂಚಿಸಿದ್ದಾರೆ.

    ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅವರು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

    ಈಗಾಗಲೇ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದು ಎಂದು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

    ಜುಲೈ 6ರಿಂದ ನಂದಿ ಪರ್ವತ (Nandi Parvatha Ashram) ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಜೈನಮುನಿಯ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದರು.

    ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಶುಕ್ರವಾರ ರಾತ್ರಿಯಿಂದ ಖಟಕಬಾವಿಯಲ್ಲಿ ಶೋಧಕಾರ್ಯ ನಡೆಸಿದ್ದರು. ಸ್ವಾಮೀಜಿ ಮೃತದೇಹ ಪತ್ತೆಯಾಗದ ಹಿನ್ನೆಲೆ ಶನಿವಾರವೂ ಜೆಸಿಬಿ ಸಹಾಯದಿಂದ ಶೋಧ ಕಾರ್ಯ ಮುಂದುವರೆಸಿ ಕೊಳವೆ ಬಾವಿಯ 20 ಅಡಿ ಆಳದಲ್ಲಿ ಸ್ವಾಮೀಜಿ ಮೃತದೇಹ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಸುಧಾಕರ್ ಚಾಲೆಂಜ್ ಸ್ವೀಕರಿಸಿ ಪ್ರತಿ ಸವಾಲು ಎಸೆದ ಶಾಸಕ ಪ್ರದೀಪ್ ಈಶ್ವರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]