Tag: ನಕಲಿ ಗುರುತಿನ ಚೀಟಿ

  • ಬಿಜೆಪಿಯವರು ಕೇಳಿ ಐಟಿ ದಾಳಿ ಮಾಡಿಸಿಕೊಂಡಿದ್ದಾರೆ- ಸಿಎಂ ಸಿದ್ದರಾಮಯ್ಯ

    ಬಿಜೆಪಿಯವರು ಕೇಳಿ ಐಟಿ ದಾಳಿ ಮಾಡಿಸಿಕೊಂಡಿದ್ದಾರೆ- ಸಿಎಂ ಸಿದ್ದರಾಮಯ್ಯ

    ಮೈಸೂರು: ಬಿಜೆಪಿಯವರ ಕೋರಿಕೆ ಮೇರೆಗೆ ನಡೆದಿರುವ ದಾಳಿ ಇದು. ಇಷ್ಟು ದಿನ ಕಾಂಗ್ರೆಸ್ ಮೇಲೆ ಐಟಿ ದಾಳಿ ನಡೆಯುತ್ತಿದ್ದವು. ಕೊನೆ ಕ್ಷಣದಲ್ಲಿ ಬಿಜೆಪಿಯವರು ಕೇಳಿ ದಾಳಿ ಮಾಡಿಸಿಕೊಂಡಿದ್ದಾರೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶ್ರೀರಾಮುಲು ವಾಸ್ತವ್ಯ ಹೂಡಿದ್ದ ರೆಸಾರ್ಟ್ ಮೇಲೆ ಐಟಿ ದಾಳಿ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ನಾನು 12 ಚುನಾವಣೆಗಳನ್ನು ನೋಡಿದ್ದೇನೆ. ಯಾವತ್ತೂ ಚುನಾವಣೆ ವೇಳೆ ಐಟಿ ದಾಳಿಗಳು ನಡೆಯುತ್ತಿರಲಿಲ್ಲ. ಐಟಿ ಅಧಿಕಾರಿಗಳು, ಕೇಂದ್ರ ಸರ್ಕಾರದ ನಡೆಯನ್ನು ನಾನು ಎಂದೂ ನೋಡಿರಲಿಲ್ಲ ಅಂದ್ರು.

     

    ಬೆಂಗಳೂರಿನ ಆರ್.ಟಿ.ನಗರದಲ್ಲಿ ನಕಲಿ ಮತದಾರರ ಗುರುತಿನ ಚೀಟಿ ಪತ್ತೆ ವಿಚಾರದ ಇದೇ ವೇಳೆ ಮಾತನಾಡಿದ ಅವರು, ನನಗೆ ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಅದರ ಬಗ್ಗೆ ಚುನಾವಣಾ ಆಯೋಗ ತನಿಖೆ ನಡೆಸಲಿ. ಈ ವಿಚಾರದ ಬಗ್ಗೆ ಅನಂತ್ ಕುಮಾರ್ ನೀಡಿರುವ ಹೇಳಿಕೆಗಳನ್ನು ನಾನು ಗಂಭೀರವಾಗಿ ಪರಿಗಣಿಸುವುದಿಲ್ಲ ಅಂದ್ರು.

    ಚಿತ್ರ ನಟ ಸುದೀಪ್ ಚಾಮುಂಡೇಶ್ವರಿ ಪ್ರಚಾರದಿಂದ ದೂರ ಉಳಿದ ವಿಚಾರಕ್ಕೆ ಸಂಬಂಧಪಟ್ಟಂತೆ, ಸುದೀಪ್ ಪ್ರಚಾರಕ್ಕೆ ಬರಬೇಕಿತ್ತು. ಅವರಿಗೆ ಬೇರೆ ಏನೇನೋ ಕೆಲಸ ಇದ್ದ ಕಾರಣಕ್ಕೆ ಪ್ರಚಾರಕ್ಕೆ ಬಂದಿಲ್ಲ ಅಂದ್ರು.