Tag: ನಕಲಿ ಛಾಪಾ ಕಾಗದ ಹಗರಣ

  • ನಕಲಿ ಛಾಪಾ ಕಾಗದ ಹಗರಣ ಬಯಲು ಮಾಡಿದ ಸಾಮಾಜಿಕ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

    ನಕಲಿ ಛಾಪಾ ಕಾಗದ ಹಗರಣ ಬಯಲು ಮಾಡಿದ ಸಾಮಾಜಿಕ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

    ಬೆಳಗಾವಿ: ಖಾನಾಪುರದ ಸಾಮಾಜಿಕ ಕಾರ್ಯಕರ್ತ ಜಯಂತ್ ಮುಕುಂದ್ ತಿನೇಕರ್(62) ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಏಳೆಂಟು ಜನರ ಗುಂಪೊಂದು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಜಯಂತ್ ಅವರನ್ನು ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಖಾನಾಪುರ-ಬೆಳಗಾವಿ ಹೆದ್ದಾರಿಯ ಝಾಡ್ ಶಹಾಪುರ ಬಳಿ ಹಿಂಬಾಲಿಸಿಕೊಂಡು ಬಂದ ಮುಸುಕುಧಾರಿಗಳು ಜಯಂತ್ ಅವರ ಕಾರು ತಡೆದು ಕಬ್ಬಿಣದ ರಾಡ್‌ಗಳಿಂದ ಥಳಿಸಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಲ ಲಾರಿ ಚಾಲಕರು ಸಹಾಯಕ್ಕೆ ಧಾವಿಸಿದ್ದಾರೆ. ಇದನ್ನೂ ಓದಿ: ಯೂರೋಪ್‌ನಲ್ಲಿ ಸೈಬರ್ ಅಟ್ಯಾಕ್ – ಇಂಟರ್‌ನೆಟ್ ಇಲ್ಲದೇ ಸಾವಿರಾರು ಜನ ಪರದಾಟ

    POLICE JEEP

    ಹಲ್ಲೆ ಮಾಡಿದ ಆರೋಪಿಗಳು ಅಪರಿಚಿತರಾಗಿದ್ದು, ಮುಖಕ್ಕೆ ಸ್ಕಾರ್ಫ್ ಹಾಕಿಕೊಂಡಿದ್ದರು. ಹಲ್ಲೆ ವೇಳೆ ಜಯಂತ್ ಅವರ ಬಲಗಾಲು, ಮೊಣಕಾಲು, ಭುಜ ಹಾಗೂ ಬಲಗೈಗೆ ಗಂಭೀರ ಗಾಯಗಳಾಗಿವೆ. ಅವರಿಗೆ ಖಾನಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಬೆಳಗಾವಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಷ್ಯಾ ಉಕ್ರೇನ್ ಯುದ್ಧ – ಗಗನಕ್ಕೇರಿದ ಅಡುಗೆ ಎಣ್ಣೆ ದರ

    ಜಯಂತ್ ತಿನೇಕರ್ ಹಿನ್ನೆಲೆ:
    ಬೆಳಗಾವಿ ಜಿಲ್ಲೆಯ ಖಾನಾಪೂರದ ನಿವಾಸಿ ಜಯಂತ್ ಮುಕುಂದ್ ತಿನೇಕರ್ ನಕಲಿ ಛಾಪಾ ಕಾಗದ ಹಗರಣವನ್ನು ಬೆಳಕಿಗೆ ತಂದು ರಾಜ್ಯ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ಉಳಿತಾಯ ಮಾಡುವ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದರು. ನಕಲಿ ಛಾಪಾ ಕಾಗದ ಹಗರಣದ ಕುರಿತು ಆಗಿನ ಡಿಜಿಪಿ ಸಾಂಗ್ಲಿಯಾನಾ ಅವರನ್ನು ಭೇಟಿಯಾಗಿ ಕರೀಂ ಲಾಲಾ ತೇಲಗಿ ನಡೆಸುತ್ತಿದ್ದ ನಕಲಿ ಛಾಪಾ ದಂಧೆಯ ಬಗ್ಗೆ ದೂರು ನೀಡಿದ್ದರು.

  • ನಕಲಿ ಛಾಪಾ ಹಗರಣದ ಕಿಂಗ್ ಪಿನ್ ತೆಲಗಿ ನಿಧನ

    ನಕಲಿ ಛಾಪಾ ಹಗರಣದ ಕಿಂಗ್ ಪಿನ್ ತೆಲಗಿ ನಿಧನ

    ಬೆಂಗಳೂರು: ಬಹುಕೋಟಿ ನಕಲಿಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಕರೀಂ ಲಾಲಾ ತೆಲಗಿ (56) ಸಾವನ್ನಪ್ಪಿದ್ದಾನೆ.

    ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ತೆಲಗಿಯನ್ನು ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ವೇಳೆಗೆ ತೆಲಗಿ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾನೆ ಎಂದು ವೈದ್ಯರು ಹಾಗೂ ಪೊಲೀಸ್ ಮೂಲಗಳು ಖಚಿತಪಡಿಸಿವೆ.

    ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ತೆಲಗಿಗೂ ವಿಐಪಿ ಟ್ರೀಟ್ ಮೆಂಟ್ ಕೊಡ್ತಿದ್ದಾರೆ ಎಂಬ ಸುದ್ದಿ ಸಿಸಿಟಿವಿ ದೃಶ್ಯಾವಳಿಗಳ ಸಹಿತ ಬಿಡುಗಡೆಯಾಗಿತ್ತು.

    2006ರ ಜನವರಿ 17ರಂದು ನಕಲಿ ಛಾಪಾ ಕಾಗದ ಹಗರಣದಲ್ಲಿ ತೆಲಗಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ ಲಭಿಸಿತ್ತು. ಅಲ್ಲದೇ ಇನ್ನೊಂದು ಪ್ರಕರಣದಲ್ಲಿ ತೆಲಗಿಗೆ 2007ರ ಜೂನ್ 28ರಂದು 13 ವರ್ಷ ಶಿಕ್ಷೆಯಾಗಿತ್ತು.

     

  • ನಕಲಿ ಛಾಪಾ ಕಾಗದ ಹಗರಣದ ಕಿಂಗ್ ಪಿನ್ ತೆಲಗಿ ನಿಧನ

    ನಕಲಿ ಛಾಪಾ ಕಾಗದ ಹಗರಣದ ಕಿಂಗ್ ಪಿನ್ ತೆಲಗಿ ನಿಧನ

    ಬೆಂಗಳೂರು: ಬಹುಕೋಟಿ ನಕಲಿಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಕರೀಂ ಲಾಲಾ ತೆಲಗಿ (56) ಸಾವನ್ನಪ್ಪಿದ್ದಾನೆ.

    ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ತೆಲಗಿಯನ್ನು ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ರಾತ್ರಿ 8.30ರ ವೇಳೆಗೆ ತೆಲಗಿ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾನೆ ಎಂದು ವೈದ್ಯರು ಹಾಗೂ ಪೊಲೀಸ್ ಮೂಲಗಳು ಖಚಿತಪಡಿಸಿವೆ.

    ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ತೆಲಗಿಗೂ ವಿವಿಐಪಿ ಟ್ರೀಟ್ ಮೆಂಟ್ ಕೊಡ್ತಿದ್ದಾರೆ ಎಂಬ ಸುದ್ದಿ ಸಿಸಿಟಿವಿ ದೃಶ್ಯಾವಳಿಗಳ ಸಹಿತ ಬಿಡುಗಡೆಯಾಗಿತ್ತು.

    2006ರ ಜನವರಿ 17ರಂದು ನಕಲಿ ಛಾಪಾ ಕಾಗದ ಹಗರಣದಲ್ಲಿ ತೆಲಗಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ ಲಭಿಸಿತ್ತು. ಅಲ್ಲದೇ ಇನ್ನೊಂದು ಪ್ರಕರಣದಲ್ಲಿ ತೆಲಗಿಗೆ 2007ರ ಜೂನ್ 28ರಂದು 13 ವರ್ಷ ಶಿಕ್ಷೆಯಾಗಿತ್ತು.