Tag: ನಕಲಿ ಜಾತಿ ಪ್ರಮಾಣ ಪತ್ರ

  • ಹೈ ಕೋರ್ಟ್ ಆದೇಶಕ್ಕೆ ಕ್ಯಾರೇ ಎನ್ನದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ

    ಹೈ ಕೋರ್ಟ್ ಆದೇಶಕ್ಕೆ ಕ್ಯಾರೇ ಎನ್ನದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ

    ಬಳ್ಳಾರಿ: ಜನ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎನ್ನುವುದಕ್ಕೆ ಬಳ್ಳಾರಿಯಲ್ಲಿ ನಡೆದಿರುವ ಘಟನೆ ಒಂದು ಉದಾಹರಣೆಯಾಗಿದೆ. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸ್ಥಾನಕ್ಕಾಗಿ ತಮ್ಮ ಜಾತಿ ಪ್ರಮಾಣ ಪತ್ರವನ್ನೇ ಬದಲಿಸಿ, ಕಳೆದ ನಾಲ್ಕು ವರ್ಷಗಳಿಂದ ಸುಳ್ಳು ಪ್ರಮಾಣ ಪತ್ರ ನೀಡಿ ಅಧ್ಯಕ್ಷೆಯಾಗಿ ಅಧಿಕಾರ ಅನುಭವಿಸಿದ್ದರೂ ಆ ಸ್ಥಾನವನ್ನು ಮಹಿಳೆಯೊಬ್ಬರು ಬಿಟ್ಟು ಕೊಡುತ್ತಿಲ್ಲ. ಜೊತೆಗೆ ಹೈಕೋರ್ಟ್ ಆದೇಶ ಮಾಡಿದ್ದರೂ ಕ್ಯಾರೇ ಎನ್ನುತ್ತಿಲ್ಲ.

    ನ್ಯಾಯಾಲಯದ ಆದೇಶಕ್ಕೆ ಎಲ್ಲರೂ ತಲೆ ಬಾಗಲೇಬೇಕು. ಆದರೆ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ದಾಸರಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಾತ್ರ ತಮಗೂ ಹೈಕೋರ್ಟ್ ಆದೇಶಕ್ಕೂ ಸಂಬಂಧವೇ ಇಲ್ಲ ಎಂಬಂತೆ ಇದ್ದು ನ್ಯಾಯಾಲಯದ ಆದೇಶ ಪಾಲಿಸದೆ ದರ್ಪ ತೋರುತ್ತಿದ್ದಾರೆ. ಈ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನ ಪ್ರವರ್ಗ 2ಎ ಗೆ ಮೀಸಲಾಗಿದೆ. ಹೀಗಾಗಿ ಹಾಲಿ ಅಧ್ಯಕ್ಷೆ ಯರಳ್ಳಿ ರತ್ನಮ್ಮಾ ಎಂಬುವವರು ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಅಧ್ಯಕ್ಷೆ ಸ್ಥಾನವನ್ನು ಅಲಂಕಾರ ಮಾಡಿದ್ದಾರೆ. ನಕಲಿ ಪ್ರಮಾಣ ಪತ್ರ ಎನ್ನುವುದು ಗ್ರಾಮದ ಎಲ್ಲರಿಗೂ ಗೊತ್ತಿದ್ದರೂ ಏನು ಮಾಡದ ಪರಿಸ್ಥಿತಿ ಇತ್ತು. ಆದರೆ ಪ್ರವರ್ಗ 2ಎ ಗೆ ಸೇರಿದ ಮತ್ತೊಬ್ಬ ಗ್ರಾಮ ಪಂಚಾಯ್ತಿ ಸದಸ್ಯೆ ರೇಖಾ ಸೊನ್ನದ ಅವರು ಇದನ್ನು ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

    ಧಾರವಾಡ ಹೈಕೋರ್ಟ್ ಬೆಂಚ್ ರೇಖಾ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ ಯರಳ್ಳಿ ರತ್ನಮ್ಮಾ ಅವರು ಸಲ್ಲಿಸಿದ್ದ ನಕಲಿ ಜಾತಿ ಪ್ರಮಾಣ ಪತ್ರವನ್ನು ನಕಲಿ, ಕೂಡಲೇ ಅವರನ್ನು ಅಧ್ಯಕ್ಷೆ ಸ್ಥಾನದಿಂದ ಕೆಳಗೆ ಇಳಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಆದೇಶ ಮಾಡಿತ್ತು.

    ಹೈಕೋರ್ಟ್ ಆದೇಶ ಮಾಡಿ 8 ತಿಂಗಳು ಕಳೆದರೂ ಈ ಆದೇಶವನ್ನು ಯಾರು ಪಾಲಿಸುತ್ತಿಲ್ಲ. ಗ್ರಾಮ ಪಂಚಾಯ್ತಿ ಹಾಲಿ ಅಧ್ಯಕ್ಷೆ ಯರಳ್ಳಿ ರತ್ನಮ್ಮಾ ಕೂಡ ಅಧ್ಯಕ್ಷೆ ಸ್ಥಾನವನ್ನು ಬಿಟ್ಟು ಕೊಡಲು ತಯಾರಿಲ್ಲ. ಇತ್ತ ಹೂವಿನಹಡಗಲಿ ತಾಲೂಕಿನ ಮಾನ್ಯ ತಹಶೀಲ್ದಾರರು ಸಹ ಹೈಕೋರ್ಟ್ ಆದೇಶ ಪಾಲಿಸದೆ ತಮಗೂ ಆದೇಶಕ್ಕೂ ಸಂಬಂಧ ಇಲ್ಲ ಎಂಬಂತೆ ಇದ್ದಾರೆ.

    ಹೈಕೋರ್ಟ್ ಆದೇಶ ಮಾಡಿ 8 ತಿಂಗಳೇ ಕಳೆದಿವೆ. ಜೊತೆಗೆ ಇನ್ನು ಎರಡು ತಿಂಗಳಲ್ಲಿ ಸ್ಥಳೀಯ ಸಂಸ್ಥೆಯ ಚುನಾವಣೆ ನಿಗದಿ ಆಗಲಿದೆ. ಆದರೆ ಎರಡು ತಿಂಗಳಾದರೂ ಅಧ್ಯಕ್ಷೆ ಸ್ಥಾನ ಬಿಟ್ಟು ಕೊಡಲಿ ಎಂಬುದು ರೇಖಾ ಅವರ ವಾದವಾಗಿದ್ದು, ಕೋರ್ಟ್ ಆದೇಶಕ್ಕೆ ಬೆಲೆಯೇ ಇಲ್ಲ ಎಂಬಂತೆ ಇಲ್ಲಿನ ಅಧಿಕಾರಿಗಳು ವರ್ತಿಸುತ್ತಿದ್ದಾರೆ.

  • ರಾಜಕೀಯ ಒತ್ತಡಕ್ಕೆ ಮಣಿದು ಆದೇಶ ನೀಡಿಲಾಗಿದೆ-ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಕೆ ಆರೋಪ ಕುರಿತು ಗಾಯತ್ರಿ ಸ್ಪಷ್ಟನೆ

    ರಾಜಕೀಯ ಒತ್ತಡಕ್ಕೆ ಮಣಿದು ಆದೇಶ ನೀಡಿಲಾಗಿದೆ-ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಕೆ ಆರೋಪ ಕುರಿತು ಗಾಯತ್ರಿ ಸ್ಪಷ್ಟನೆ

    ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಬಿಬಿಎಂಪಿ ಚುನಾವಣೆ ಗೆದ್ದ ಆರೋಪ ಎದುರಿಸುತ್ತಿರುವ ನಗರದ ಕೆಪಿ ಅಗ್ರಹಾರ ಪಾಲಿಕೆ ಸದಸ್ಯೆ ಗಾಯತ್ರಿ ಜಿಲ್ಲಾಧಿಕಾರಿ ಆದೇಶವನ್ನು ಪ್ರಶ್ನಿಸಿ ಸಿವಿಲ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

    ನಗರ ಜಿಲ್ಲಾಧಿಕಾರಿಗಳ ಆದೇಶ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕೀಯ ಒತ್ತಡದಿಂದ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ನನ್ನನ್ನು ಸಾಕಿದ್ದು ಅಜ್ಜಿ, ನನ್ನ ಅಪ್ಪ-ಅಮ್ಮ ಯಾರು ಎಂದು ಗೊತ್ತಿಲ್ಲ. ನನ್ನನ್ನು ನಾಯಕ ಎಂದಲೇ ಅಜ್ಜಿ ಶಾಲೆಯಲ್ಲಿ ನೋಂದಣಿ ಮಾಡಿಸಿದ್ದಾರೆ. ನನ್ನ ಪತಿ ನಾಯ್ಡು. ಅದರೆ ನನ್ನ ತವರು ಜಾತಿ ಹೋಗಲ್ಲ. ನಾವೇನು ಸುಳ್ಳು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ರಾಜಕೀಯ ಒತ್ತಡ: ಕಾಂಗ್ರೆಸ್ ಸ್ಥಳೀಯ ಮುಖಂಡರ ಕುತಂತ್ರದಿಂದ ಈ ರೀತಿ ಅರೋಪ ಕೇಳಿ ಬರುತ್ತಿದೆ ಎಂದು ಪ್ರತ್ಯಾರೋಪ ಮಾಡಿದ ಗಾಯತ್ರಿ ಅವರು, ಶಾಲೆಯಲ್ಲಿ ಪೋಷಕರು ನೀಡಿರುವ ದಾಖಲೆ ಅನ್ವಯ ಜಾತಿ ಪ್ರಮಾಣ ಪತ್ರ ನೀಡಿರುತ್ತಾರೆ. ಇದೇ ಕಾರಣಕ್ಕಾಗಿ ನಾನು ಮೂರು ವರ್ಷದಿಂದ ಕೋರ್ಟ್ ಗೆ ಅಲೆಯುತ್ತಿದ್ದೇನೆ. ನಾನು ಸುಳ್ಳು ದಾಖಲೆ ನೀಡಿಲ್ಲ, ನ್ಯಾಯಕ್ಕಾಗಿ ಕಾನೂನು ಹೋರಾಟ ಮಾಡುತ್ತೇನೆ. ಸುಳ್ಳು ದಾಖಲೆ ನೀಡಿಲ್ಲ ಎಂದರು.

    ಏನಿದು ಪ್ರಕರಣ:
    ಕಾರ್ಪೊರೇಟರ್ ಎಂ ಗಾಯತ್ರಿ ಗಣೇಶ್‍ಗೆ ತಂದೆ-ತಾಯಿ, ಜಾತಿ ಬಗ್ಗೆ ಮಾಹಿತಿ ಇಲ್ಲ. ಇದೇ ಕಾರಣಕ್ಕೆ ನಾಯಕ ಜಾತಿ ಹೆಸರಿನಲ್ಲಿ ನಗರದ ಕೆಪಿ ಆಗ್ರಹಾರದಲ್ಲಿರುವ ಸಿದ್ದಲಿಂಗೇಶ್ವರ ಶಾಲೆಯಲ್ಲಿ ವ್ಯಾಸಂಗ ನಡೆಸಿರುವ ಕುರಿತು ದಾಖಲೆ ನೀಡಲಾಗಿತ್ತು. ಆದರೆ ಅವರ ಶೈಕ್ಷಣಿಕ ಆರ್ಹತೆ ಬಗ್ಗೆ ಶಾಲೆಯಲ್ಲಿ ಯಾವುದೇ ಪೂರಕ ಮಾಹಿತಿ ಲಭಿಸದ ಹಿನ್ನೆಲೆಯಲ್ಲಿ ಡಿಡಿಪಿಐ ಹಾಗೂ ಇತರೇ ಅಧಿಕಾರಿಗಳು ವರದಿ ನೀಡಿದ್ದು, ಈ ವರದಿ ಅನ್ವಯ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದರು.