Tag: ನಕಲಿ ಮದ್ಯ

  • ನಕಲಿ ಮದ್ಯ ಸೇವಿಸಿ 42 ಮಂದಿ ಸಾವು ಪ್ರಕರಣ – ಇಬ್ಬರು SP ವರ್ಗಾವಣೆ, 6 ಪೊಲೀಸರು ಸಸ್ಪೆಂಡ್‌

    ನಕಲಿ ಮದ್ಯ ಸೇವಿಸಿ 42 ಮಂದಿ ಸಾವು ಪ್ರಕರಣ – ಇಬ್ಬರು SP ವರ್ಗಾವಣೆ, 6 ಪೊಲೀಸರು ಸಸ್ಪೆಂಡ್‌

    ಗಾಂಧೀನಗರ: ನಕಲಿ ಮದ್ಯ ಸೇವಿಸಿ 42 ಮಂದಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಟಾಡ್‌ ಮತ್ತು ಅಹಮದಾಬಾದ್‌ನ ಇಬ್ಬರು ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ವರ್ಗಾವಣೆಗೊಳಿಸಿದ್ದು, 6 ಪೊಲೀಸರನ್ನು ಗುಜರಾತ್‌ ಗೃಹ ಇಲಾಖೆ ಅಮಾನತುಗೊಳಿಸಿದೆ.

    ಬೊಟಾಡ್ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಮಿಥೈಲ್ ಆಲ್ಕೋಹಾಲ್ ಅಥವಾ ಮೆಥನಾಲ್ ಎಂಬ ಅತ್ಯಂತ ವಿಷಕಾರಿ ಕೈಗಾರಿಕಾ ದ್ರಾವಕದೊಂದಿಗೆ ನೀರನ್ನು ಬೆರೆಸಿ ನಕಲಿ ಮದ್ಯವನ್ನು ತಯಾರಿಸಿ ಪ್ರತಿ ಪೌಚ್‌ಗೆ 20 ರೂ.ಗೆ ಗ್ರಾಮಸ್ಥರಿಗೆ ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: ದ್ರೌಪದಿ ಮುರ್ಮುಗೆ ರಾಷ್ಟ್ರಪತ್ನಿ ಎಂದಿದ್ದಕ್ಕೆ ಕ್ಷಮೆ ಕೋರಿದ ಅಧೀರ್ ರಂಜನ್ ಚೌಧರಿ

    ಮಿಥೈಲ್ ಆಲ್ಕೋಹಾಲ್ ಸೇವಿಸಿ 42 ಮಂದಿ ಮೃತಪಟ್ಟಿರುವುದು ವಿಧಿವಿಜ್ಞಾನ ವರದಿಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ನಾವು ಬೊಟಾಡ್ ಎಸ್ಪಿ ಕರಣ್‌ರಾಜ್ ವಘೇಲಾ ಮತ್ತು ಅಹಮದಾಬಾದ್ ಎಸ್ಪಿ ವೀರೇಂದ್ರಸಿಂಗ್ ಯಾದವ್ ಅವರನ್ನು ವರ್ಗಾವಣೆ ಮಾಡಿದ್ದೇವೆ. ಇಬ್ಬರು ಡೆಪ್ಯುಟಿ ಎಸ್‌ಪಿ ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜ್‌ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ತರಗತಿಯನ್ನೇ ಮಸಾಜ್ ಪಾರ್ಲರ್ ಮಾಡಿಕೊಂಡ ಶಿಕ್ಷಕಿ – ವಿದ್ಯಾರ್ಥಿಗೆ ಮಸಾಜ್ ಮಾಡುವಂತೆ ಒತ್ತಾಯ

    ಕರ್ತವ್ಯ ಲೋಪ ಮತ್ತು ಬದ್ಧತೆಯ ಕೊರತೆಯಿಂದಾಗಿ ಈ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಏಕೆಂದರೆ ಅವರು ತಮ್ಮ ಪ್ರದೇಶಗಳಲ್ಲಿ ವಿಷಕಾರಿ ರಾಸಾಯನಿಕಗಳನ್ನು ಬೆರೆಸಿದ ಮದ್ಯದ ಸಾಗಣೆ, ಮಾರಾಟ ಮತ್ತು ಸೇವನೆಯನ್ನು ತಡೆಯಲು ವಿಫಲರಾಗಿದ್ದಾರೆ ಎಂದು ರಾಜ್ಯ ಗೃಹ ಇಲಾಖೆ ಹೊರಡಿಸಿದ ಅಮಾನತು ಪತ್ರಗಳಲ್ಲಿ ಉಲ್ಲೇಖಿಸಿದೆ.

    ಜುಲೈ 25 ರಂದು ಬೊಟಾಡ್ ಮತ್ತು ನೆರೆಯ ಅಹಮದಾಬಾದ್ ಜಿಲ್ಲೆಯ 42 ಜನರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ಆದರೆ 97 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಕಲಿ ಮದ್ಯ ಸೇವಿಸಿ ಮೂವರು ಸಾವು – 44 ಮಂದಿ ಆಸ್ಪತ್ರೆಗೆ ದಾಖಲು

    ನಕಲಿ ಮದ್ಯ ಸೇವಿಸಿ ಮೂವರು ಸಾವು – 44 ಮಂದಿ ಆಸ್ಪತ್ರೆಗೆ ದಾಖಲು

    ಲಕ್ನೋ: ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, ಸುಮಾರು 44 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ಪ್ರದೇಶದ ಅಜಂಗಢ್‍ನ ಅಹ್ರೌಲಾ ಪೊಲೀಸ್ ಠಾಣೆ ವ್ಯಾಪ್ತಿಯ ಮಹುಲ್ ನಗರದಲ್ಲಿ ನಡೆದಿದೆ.

    ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 44 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರು-ಏಳು ಮಂದಿ ಡಯಾಲಿಸಿಸ್‍ನಲ್ಲಿದ್ದಾರೆ. ಉಳಿದವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಜಂಗಢ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮೃತ್ ತ್ರಿಪಾಠಿ ತಿಳಿಸಿದ್ದಾರೆ. ಇದನ್ನೂ ಓದಿ: ಸದ್ಯ ಪರಿಸ್ಥಿತಿ ಕಂಟ್ರೋಲ್‍ಗೆ ಬಂದಿದೆ: ಶಿವಮೊಗ್ಗ ಡಿಐಜಿ

    ಇದೀಗ ಪೊಲೀಸರು ಅಂಗಡಿಯ ಇಬ್ಬರು ಮಾರಾಟಗಾರರನ್ನು ಬಂಧಿಸಿದ್ದಾರೆ ಮತ್ತು ಮಾಲೀಕರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸದ್ಯ ಘಟನೆ ಕುರಿತಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

  • ಬಿಹಾರ್‌: ನಕಲಿ ಮದ್ಯ ಸೇವಿಸಿ 24 ಮಂದಿ ಸಾವು!

    ಬಿಹಾರ್‌: ನಕಲಿ ಮದ್ಯ ಸೇವಿಸಿ 24 ಮಂದಿ ಸಾವು!

    ಪಾಟ್ನಾ: ನಕಲಿ ಮದ್ಯ ಸೇವಿಸಿ 24 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿರುವ ಘಟನೆ ಬಿಹಾರದ ಪಶ್ಚಿಮ ಚಂಪಾರಣ್‌ ಜಿಲ್ಲೆಯ ಗೋಪಾಲ್‌ಗಂಜ್‌ನಲ್ಲಿ ನಡೆದಿದೆ. ಪರಿಣಾಮವಾಗಿ ಕಳೆದೆರಡು ದಿನಗಳಿಂದ ಸ್ಥಳದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

    ಬೆಟ್ಟಿಯಾ ಬಳಿಯ ತೆಲ್ಹುವಾ ಗ್ರಾಮದಲ್ಲಿ ಕಳ್ಳಭಟ್ಟಿ ಸೇವಿಸಿ ಗುರುವಾರ 8 ಮಂದಿ ಮೃತಪಟ್ಟಿದ್ದರು. ಮತ್ತೆ ಗೋಪಾಲ್‌ಗಂಜ್‌ನಲ್ಲಿ ಶಂಕಿತ ನಕಲಿ ಮದ್ಯ ಸೇವಿಸಿ 16 ಮಂದಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದನ್ನೂ ಓದಿ: ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು – ಹಲವು ರಸ್ತೆಗಳು ಜಲಾವೃತ

    24 ಮಂದಿ ಸಾವಿಗೆ ನಿಖರ ಕಾರಣವನ್ನು ಜಿಲ್ಲಾಡಳಿತ ಇನ್ನೂ ಸ್ಪಷ್ಟಪಡಿಸಿಲ್ಲ. ತೆಲ್ಹುವಾದಲ್ಲಿ ಆಗಿರುವ ಕಳ್ಳಭಟ್ಟಿ ಪ್ರಕರಣವು ಉತ್ತರ ಬಿಹಾರ್‌ನಲ್ಲಿ ಸಂಭವಿಸಿದ ಮೂರನೇ ದುರಂತವಾಗಿದೆ. ಕಳೆದ 10 ದಿನಗಳ ಹಿಂದೆ ಇದೇ ಮಾದರಿಯಲ್ಲಿ ಸಾವು ಸಂಭವಿಸಿತ್ತು.

    ಬಿಹಾರ ಸಚಿವ ಜಾನಕ್‌ ರಾಮ್‌ ಅವರು ಗೋಪಾಲ್‌ಗಂಜ್‌ಗೆ ಭೇಟಿ ನೀಡಿದ್ದಾರೆ. ನಂತರ ಮಾತನಾಡಿರುವ ಅವರು, ಶಂಕಿತ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿದ್ದೇನೆ. ಇದು ಎನ್‌ಡಿಎ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮಾಡಿರುವ ಪಿತೂರಿಯಾಗಿರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಪುನೀತ್ ಸಾವಿನ ಬೆನ್ನಲ್ಲೆ ಹೆಚ್ಚಾಯ್ತು ಇಸಿಜಿ, ಹೃದಯಸಂಬಂಧಿ ಟೆಸ್ಟ್‌ಗಳು

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಗೋಪಾಲ್‌ಗಂಜ್‌ ಹಿರಿಯ ಪೊಲೀಸ್‌ ಅಧಿಕಾರಿ ಆನಂದ್‌ ಕುಮಾರ್‌, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಜನರು ನಿಗೂಢವಾಗಿ ಸಾವನ್ನಪ್ಪುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಂಡಗಳು ತನಿಖೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.

  • ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ- 10 ಲಕ್ಷ ಬೆಲೆ ಬಾಳುವ ವಸ್ತು ವಶ

    ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ- 10 ಲಕ್ಷ ಬೆಲೆ ಬಾಳುವ ವಸ್ತು ವಶ

    ಚಿಕ್ಕಬಳ್ಳಾಪುರ: ನಕಲಿ ಮದ್ಯ ತಯಾರಿಸಿ ಬಾರ್, ವೈನ್‍ಸ್ಟೋರ್, ರೇಸ್ಟೋರೆಂಟ್‍ಗಳಿಗೆ ಸರಬರಾಜು ಮಾಡುತ್ತಿದ್ದ ಘಟಕದ ಮೇಲೆ ದಾಳಿ ನಡೆಸಿ ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ತಾದೂರು ಗ್ರಾಮದಲ್ಲಿ ನಡೆದಿದೆ.

    ಬಂಧಿತ ಆರೋಪಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಅಪಾಯಕಾರಿ ನಕಲಿ ಮದ್ಯ ತಯಾರಿಸಿ ಅಸಲಿ ಬಾರ್, ವೈನ್ಸ್ ಸ್ಟೋರ್, ರೇಸ್ಟೋರೆಂಟ್‍ಗಳಿಗೆ ಸರಬರಾಜು ಮಾಡಲಾಗುತ್ತಿತ್ತು, ಇದರಿಂದ ಎಚ್ಚೆತ್ತ ಚಿಕ್ಕಬಳ್ಳಾಪುರ ಜಿಲ್ಲಾ ಅಬಕಾರಿ ಅಧಿಕಾರಿಗಳ ತಂಡ ದಾಳಿ ನಡೆಸಿ ಈತನನ್ನು ಬಂಧಿಸಿದ್ದಾರೆ.

    ದಾಳಿ ವೇಳೆ 37,800 ಲೀಟರ್ ನಕಲಿ ಮದ್ಯ, 1290 ಲೀಟರ್ ಸ್ಪಿರಿಟ್, 62 ಲೀಟರ್ ಬ್ಲೆಂಡ್, ಪ್ರತಿಷ್ಠಿತ ಕಂಪನಿಗಳ ಮದ್ಯದ ಬಾಟ್ಲಿ ಕ್ಯಾಪ್ ಗಳು, ಖಾಲಿ ಬಾಟ್ಲಿಗಳು, ನಕಲಿ ಹಾಲೊ ಗ್ರಾಮ್, ಕ್ಯಾಪ್ ತ್ರೇಡ್ಡಿಂಗ್ ಯಂತ್ರಗಳು, ಅಳತೆ ಜಾರುಗಳು, ಹತ್ತು ಎಸೆನ್ಸ್ ಬಾಟ್ಲಿಗಳು, ಕ್ಯಾರಮೆಲ್ ಸೇರಿದಂತೆ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಡಿ.ವೈ.ಎಸ್ಪಿ ವಿಶ್ವನಾಥ್ ಬಾಬು ತಿಳಿಸಿದ್ದಾರೆ.


    ಅಧಿಕಾರಿಗಳು ಜಪ್ತಿ ಮಾಡಿರುವ ನಕಲಿ ಮದ್ಯ ತುಂಬಿದ ಬಾಟ್ಲಿಗಳ ಮೇಲೆ, ತಮಿಳುನಾಡಿನಲ್ಲಿ ಮಾತ್ರ ಮಾರಾಟಕ್ಕೆ ಅಂತ ಇದೆ, ಆದ್ರೆ ಆರೋಪಿಗಳು ಒಂದೊಂದು ಸಮಯದಲ್ಲಿ ಒಂದೊಂದು ಬ್ರ್ಯಾಂಡ್‍ಗಳ ಮದ್ಯ ತಯಾರಿಸಿ ಮಾರಾಟ ಮಾಡುತ್ತಿದ್ದು, ಇವರ ಹಿಂದೆ ವ್ಯವಸ್ಥಿತವಾದ ಜಾಲವೇ ಇದ್ದು ಅಧಿಕಾರಿಗಳು ನಕಲಿ ಮದ್ಯದ ಧಂದೆಗೆ ಕಡಿವಾಣ ಹಾಕಬೇಕಿದೆ ಎಂದು ಮದ್ಯ ಪ್ರಿಯರು ಹೇಳುತ್ತಿದ್ದಾರೆ.

  • ನಕಲಿ ಮದ್ಯಕ್ಕೆ ಮೂವರು ಬಲಿ, 29 ಮಂದಿ ಅಸ್ವಸ್ಥ!

    ನಕಲಿ ಮದ್ಯಕ್ಕೆ ಮೂವರು ಬಲಿ, 29 ಮಂದಿ ಅಸ್ವಸ್ಥ!

    ಭುವನೇಶ್ವರ: ನಕಲಿ ಮದ್ಯವನ್ನು ಸೇವಿಸಿ 29 ಮಂದಿ ಅಸ್ವಸ್ಥಗೊಂಡು ಮೂವರು ಸಾವನ್ನಪ್ಪಿರುವ ಘಟನೆ ಒಡಿಶಾದ ಭದ್ರಾಕ್ ಜಿಲ್ಲೆಯಲ್ಲಿ ನಡೆದಿದೆ.

    ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನಕ್ಕಾಗಿ ಸ್ಥಳೀಯ ರಾಜಕೀಯ ನಾಯಕರು ಮತ ಹಾಕಲು ಜನರಿಗೆ ಹಣವನ್ನು ನೀಡಿದ್ದರು. ಈ ಹಣವನ್ನು ಬಳಸಿಕೊಂಡು ಅಲ್ಲಿನ ಜನರು ಮದ್ಯ ಖರೀದಿಸಿ ಕುಡಿದಿದ್ದರು. ಬಳಿಕ ಹೀಗೆ ಅಸ್ವಸ್ಥಗೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ ಅಂತ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಉಮಾಕಾಂತ್ ಹೇಳಿದ್ದಾರೆ.

    ಭದ್ರಾಕ್ ಜಿಲ್ಲೆಯ ತಿಹಿಡೀ ಪೊಲೀಸ್ ಠಾಣಾ ವ್ಯಾಪ್ತಿಯ ದೌಲತಪುರ ಗ್ರಾಮದ ಜನರು ಮತದಾನದ ಬಳಿಕ ಸ್ಥಳೀಯ ಮಾರುಕಟ್ಟೆಯಿಂದ ಮದ್ಯ ಖರೀದಿಸಿ ತಂದಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಉಮಾಕಾಂತ್ ಹೇಳಿದ್ದಾರೆ.

    ಘಟನೆಯಲ್ಲಿ ಅಸ್ವಸ್ಥರಾದ 29 ಮಂದಿಯನ್ನು ಎಸ್‍ಸಿಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತರನ್ನು ಸುಧಾ ಚರಣ್ ನಾಯಕ್, ಸರಬೇಸವಾ ದಾಸ್, ರಾಮಚಂದ್ರ ದಾಸ್ ಎಂದು ಗುರುತಿಸಲಾಗಿದೆ.

    ನಕಲಿ ಮದ್ಯವನ್ನು ಸೇವಿಸಿದ ಬಳಿಕ ಕೆಲವರಿಗೆ ಹೊಟ್ಟೆ ನೋವು, ಕಣ್ಣು ಕಾಣದಿದ್ದ ಹಾಗೆ ಆಗಿತ್ತು ಎಂದು ಕೆಲವರು ತಿಳಿಸಿದ್ದಾರೆ. ಹಾಗೆಯೇ ಈ ನಕಲಿ ಮದ್ಯ ಸರಬರಾಜು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸ್ಥಳೀಯರು ಭದ್ರಾಕ್‍ನ ಚಂದಬಲಿ ಮಾರ್ಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಕೂಡ ನಡೆಸಿದ್ದಾರೆ. ಇದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಬಳಿಕ ಪೊಲೀಸರು ಜನರ ಮನವೊಲಿಸಿ ಪ್ರತಿಭಟನೆಗೆ ತೆರೆ ಎಳೆಯಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

  • ಎರಡೇ ದಿನದ ಅಂತರದಲ್ಲಿ ಸಹೋದರರಿಬ್ಬರ ದಾರುಣ ಸಾವು!

    ಎರಡೇ ದಿನದ ಅಂತರದಲ್ಲಿ ಸಹೋದರರಿಬ್ಬರ ದಾರುಣ ಸಾವು!

    ಚಿತ್ರದುರ್ಗ: ಕೇವಲ ಎರಡು ದಿನದ ಅಂತರದಲ್ಲಿ ಅಣ್ಣ-ತಮ್ಮ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಮಾನಂಗಿ ತಾಲೂಕು ಸಮೀಪದ ಕಳ್ಳಿಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಪರಶುರಾಮಪ್ಪ(55) ಹಾಗೂ ವೆಂಕಟಪ್ಪ(60) ಮೃತ ಸಹೋದರರು. ಎರಡು ದಿನಗಳ ಹಿಂದೆ ಪರಶುರಾಮಪ್ಪ ಸಾವನ್ನಪ್ಪಿದ್ದರು. ಆದರೆ ಗುರುವಾರ ರಾತ್ರಿ ಅಣ್ಣ ವೆಂಕಟಪ್ಪ ಕೂಡ ಸಾವನ್ನಪ್ಪಿದ್ದಾರೆ. ನಕಲಿ ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

    ಗ್ರಾಮದ ಕಿರಾಣಿ ಅಂಗಡಿಗಳಲ್ಲಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಈ ಕುರಿತು ದೂರು ನೀಡಿದ್ರೂ ಕ್ರಮ ಕೈಗೊಳ್ಳದ ಪೊಲೀಸರು ಮತ್ತು ಅಬಕಾರಿ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗ್ರಾಮದಲ್ಲಿ ಎಗ್ಗಿಲ್ಲದೆ ನಕಲಿ ಮದ್ಯ ಮಾರಾಟ ನಡೆಯುತ್ತಿದೆ. ನಕಲಿ ಮದ್ಯ ಮಾರಾಟ ತಡೆಯುವಂತೆ ಮಹಿಳೆಯರು ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.