Tag: ನಕ್ಸಲ್

  • ಸೋಮವಾರ ಸಂಜೆ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ – ದೃಢಪಡಿಸಿದ ಪರಮೇಶ್ವರ್

    ಸೋಮವಾರ ಸಂಜೆ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ – ದೃಢಪಡಿಸಿದ ಪರಮೇಶ್ವರ್

    ಬೆಂಗಳೂರು: ವಿಕ್ರಂ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು (Naxal) ಪೊಲೀಸರು ಸೋಮವಾರ ಸಂಜೆ ಎನ್‌ಕೌಂಟರ್ ಮಾಡಿದ್ದಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

    ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ (Vikram Gowda) ಎನ್‌ಕೌಂಟರ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ವಿಕ್ರಂನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ವಿಕ್ರಂ ತಪ್ಪಿಸಿಕೊಂಡು ಓಡಾಡುತ್ತಿದ್ದ. ಅನೇಕ ಎನ್‌ಕೌಂಟರ್‌ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ಸೋಮವಾರ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ ಎನ್‌ಕೌಂಟರ್ ಮಾಡಿದ್ದಾರೆ. ವಿಕ್ರಂ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರಿದಿದೆ. ವಿಕ್ರಂ ಗೌಡ ಸಕ್ರಿಯರಾಗಿದ್ದ ಎಂದು ಪೊಲೀಸರು ಆತನನ್ನು ಹುಡುಕುತ್ತಿದ್ದರು ಎಂದರು. ಇದನ್ನೂ ಓದಿ: VRS ತೆಗೆದೊಕೊಳ್ಳಿ ಅಥವಾ ವರ್ಗಾವಣೆಯಾಗಿ – ಹಿಂದೂಯೇತರ ಸಿಬ್ಬಂದಿ ಬೇಡ: ತಿರುಪತಿ ಬೋರ್ಡ್‌

    ವಿಕ್ರಂ ಗೌಡ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದು, ಆತನ ಮೇಲೆ ನಿಗಾ ಇಟ್ಟಿದ್ದರು. ಈಗ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ನಕ್ಸಲ್ ಕಾಲ ಮುಗೀತು ಅಂದುಕೊಂಡಿದ್ದೆವು. ಆದರೆ ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದಾರೆ. ಅವರಿಬ್ಬರೂ ತಪ್ಪಿಸಿಕೊಂಡು ಹೋಗಿದ್ದಾರೆ ಎಂದು ಕೂಂಬಿಂಗ್ ನಡೆಸಲಾಯಿತು. ಕಳೆದ ಒಂದು ವಾರದಿಂದ ಕೂಂಬಿಂಗ್ ನಡೆಯುತ್ತಿತ್ತು. ಆಗ ಇದ್ದಕಿದ್ದಂತೆ ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿತ್ತು. ಆ ಸಂದರ್ಭದಲ್ಲಿ ಪೊಲೀಸರಿಗೆ ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡುವುದು ಅನಿವಾರ್ಯವಾಯಿತು ಎಂದು ತಿಳಿಸಿದರು. ಇದನ್ನೂ ಓದಿ: 75 ವರ್ಷದ ವೃದ್ಧೆ ಮೇಲೆ ಭಿಕ್ಷಾಟನೆ ಮಾಡುತ್ತಿದ್ದ ಯುವಕನಿಂದ ಅತ್ಯಾಚಾರ

    ಪೊಲೀಸರ ಮೇಲೆ ವಿಕ್ರಂ ಗೌಡ ತಂಡ ದಾಳಿ ಮಾಡಿದೆ. ಹಾಗಾಗಿ ಪೊಲೀಸರು ಎನ್‌ಕೌಂಟರ್ ಮಾಡಬೇಕಾಯಿತು. ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರನ್ನು ಮಾತನಾಡಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ. ಅದು ಇದ್ದಿದ್ದೇ. ಆದರೆ ಅರಣ್ಯ ಭಾಗದಲ್ಲಿದ್ದು, ಪೊಲೀಸರ ಮೇಲೆ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದರೇ ಈ ಥರ ಘಟನೆ ಆಗೋದು ಸಹಜ ಎಂದು ಹೇಳಿದರು. ಇದನ್ನೂ ಓದಿ: Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

  • ಉಡುಪಿಯ ಕಬ್ಬಿನಾಲೆಯಲ್ಲಿ ಎನ್‌ಕೌಂಟರ್‌ – ನಕ್ಸಲ್‌ ನಾಯಕ ವಿಕ್ರಂ ಗೌಡ ಹತ್ಯೆ

    ಉಡುಪಿಯ ಕಬ್ಬಿನಾಲೆಯಲ್ಲಿ ಎನ್‌ಕೌಂಟರ್‌ – ನಕ್ಸಲ್‌ ನಾಯಕ ವಿಕ್ರಂ ಗೌಡ ಹತ್ಯೆ

    ಉಡುಪಿ: ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ (Kabbinale Forest) ನಕ್ಸಲ್‌ ಕಾರ್ಯಕರ್ತ ವಿಕ್ರಂ ಗೌಡನನ್ನು (Vikram Gowda) ಎನ್‌ಕೌಂಟರ್‌ (Encounter) ಮಾಡಿ ಹತ್ಯೆ ಮಾಡಲಾಗಿದೆ.

    ನಕ್ಸಲ್‌ ನಿಗ್ರಹ ದಳ (ANF) ಮತ್ತು ನಕ್ಸಲರ (Naxal) ಮಧ್ಯೆ  ಸೋಮವಾರ ಸಂಜೆ ಗುಂಡಿನ ಕಾಳಗ ನಡೆದಿದೆ. ಈ ಘಟನೆಯಲ್ಲಿ ಓರ್ವ ಹತನಾಗಿದ್ದಾನೆ ಎಂಬ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

    ಕಳೆದ 15 ದಿನಗಳಿಂದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದ ಅರಣ್ಯ ಭಾಗದಲ್ಲಿ ಎಎನ್‌ಎಫ್‌ ಕೂಂಬಿಂಗ್ ನಡೆಸುತ್ತಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಎಎನ್‌ಎಫ್‌ ಮೇಲೆ ದಾಳಿ ನಡೆಸಿದ್ದಾರೆ. ದಾಳಿ-ಪ್ರತಿದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಉಳಿದವರು ಪರಾರಿಯಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ.

    ಕೆಲ ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ ಮನೆಗಳಿಗೆ ನಕ್ಸಲರು ಭೇಟಿ ನೀಡಿದ್ದರು. ಕೊಪ್ಪ ತಾಲೂಕಿನ ಯಡಗುಂದ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿ, ಅರಣ್ಯ ಒತ್ತುವರಿ ಮತ್ತು ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಚರ್ಚಿಸಿದ್ದರು.

    ಲೋಕಸಭಾ ಚುನಾವಣೆ (Lok Sabha Election) ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ (Kadaba) ಮನೆಗೆ ನಕ್ಸಲರು ಬಂದಿದ್ದ ಶಂಕೆ ವ್ಯಕ್ತವಾಗಿತ್ತು. ಕೊಂಬಾರು ಗ್ರಾಮದ ಚೆರು ಗ್ರಾಮದ ಮನೆಗೆ ತಡರಾತ್ರಿ ಬಂದ 6 ಮಂದಿ ಎರಡು ಗಂಟೆಗಳ ಕಾಲ ಇದ್ದು ಮನೆಯಲ್ಲಿ ಊಟ ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದ ಮಾಹಿತಿ ಲಭ್ಯವಾಗಿತ್ತು. ಈ ವಿಚಾರ ತಿಳಿದ ಬೆನ್ನಲ್ಲೇ ನಕ್ಸಲ್‌ ನಿಗ್ರಹ ದಳಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿತ್ತು.

  • ಉಡುಪಿ| ಕಾರ್ಕಳದ ಈದು ಗ್ರಾಮದಲ್ಲಿ ನಕ್ಸಲ್ ಓಡಾಟದ ಶಂಕೆ – ಪೊಲೀಸರಿಂದ ಕಾರ್ಯಾಚರಣೆ

    ಉಡುಪಿ| ಕಾರ್ಕಳದ ಈದು ಗ್ರಾಮದಲ್ಲಿ ನಕ್ಸಲ್ ಓಡಾಟದ ಶಂಕೆ – ಪೊಲೀಸರಿಂದ ಕಾರ್ಯಾಚರಣೆ

    ಉಡುಪಿ: ಕಾರ್ಕಳದ (Karkala) ಈದು ಗ್ರಾಮದಲ್ಲಿ ನಕ್ಸಲ್ (Naxals) ಓಡಾಟದ ಶಂಕೆ ವ್ಯಕ್ತವಾಗಿದ್ದು, ಎಎನ್‌ಎಫ್ ಪೊಲೀಸರಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

    ಕೆಲವು ದಿನಗಳಿಂದ ಅನುಮಾನಾಸ್ಪದ ವ್ಯಕ್ತಿಗಳ ಓಡಾಟದ ವದಂತಿ ಹಬ್ಬಿದೆ. ಈ ಬಗ್ಗೆ ಎಎನ್‌ಎಫ್ ಸಿಬ್ಬಂದಿ ಸ್ಥಳೀಯರಲ್ಲಿ ವಿಚಾರಿಸಿದ್ದಾರೆ. ಸ್ಥಳೀಯರಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದ ಎಎನ್‌ಎಫ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೆರೆಯನ್ನೇ ನುಂಗಿದ ವಕ್ಫ್ ಬೋರ್ಡ್ – 4 ಎಕರೆ 10 ಗುಂಟೆ ಕೆರೆಯ ಜಾಗ ಈಗ ವಕ್ಫ್ ಹೆಸರಿಗೆ

    ಪಶ್ಚಿಮ ಘಟ್ಟದ ತಪ್ಪಲಿಗೆ ನಕ್ಸಲರು ನಸುಳಿರಬಹುದು ಎಂದು ಶಂಕಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಬೇರೆ ಬೇರೆ ಅರಣ್ಯ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

    ಅರಣ್ಯ ವಾಸಿಗಳಿಂದ ಅಧಿಕಾರಿಗಳು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಡ್ರೋನ್, ಶ್ವಾನದಳ ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ. ಖಚಿತವಾದ ಯಾವುದೇ ಸುಳಿವು ಪತ್ತೆಯಾಗಿಲ್ಲ.

    ಸಾರ್ವಜನಿಕರು ಆತಂಕ ಪಡುವುದು ಬೇಡ ಎಂದು ಎಎನ್‌ಎಫ್ ಪೊಲೀಸ್ ತಿಳಿಸಿದ್ದಾರೆ. ಇದನ್ನೂ ಓದಿ: ಊಟ ಬೇಕೆಂದು ಅಳುತ್ತಿದ್ದ ಮಗನ ಮೇಲೆ ಹಲ್ಲೆ ನಡೆಸಿ ಹತ್ಯೆ – ಪತಿ ವಿರುದ್ಧ ಪತ್ನಿ ದೂರು

  • ಛತ್ತೀಸ್‌ಗಢ ಎನ್‌ಕೌಂಟರ್| 35 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಛತ್ತೀಸ್‌ಗಢ ಎನ್‌ಕೌಂಟರ್| 35 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ರಾಯ್ಪುರ: ಛತ್ತೀಸ್‌ಗಢದ (Chhattisgarh) ನಕ್ಸಲ್ ಪೀಡಿತ ಪ್ರದೇಶಗಳಾದ ನಾರಾಯಣಪುರ (Narayanpur) ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ (Encounter) ನಡೆಸಿದ್ದು, 35 ನಕ್ಸಲರು (Naxalites) ಸಾವನ್ನಪ್ಪಿದ್ದಾರೆ. ಘಟನಾ ಸ್ಥಳದಿಂದ ಅಪಾರ ಪ್ರಮಾಣದ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.

    ದಾಂತೇವಾಡದ ಬರ್ಸೂರಿನ ತುಳತುಳಿ ಗ್ರಾಮ ಮತ್ತು ನಾರಾಯಣಪುರದ ಓರ್ಚಾದ ನೆಂದೂರು ಗ್ರಾಮದ ಅರಣ್ಯದಲ್ಲಿ ನಕ್ಸಲರು ಇರುವ ಖಚಿತ ಮಾಹಿತಿ ಮೇರೆಗೆ ಭದ್ರತಾಪಡೆಗಳು ಶೋಧ ಕಾರ್ಯ ಆರಂಭಿಸಿದವು ಈ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದೆ. ಇದನ್ನೂ ಓದಿ: ಸಿಎಂ ಏನ್ ದೆವ್ವನಾ ನಾನು ಹೆದರೋಕೆ – ಸಿದ್ದರಾಮಯ್ಯಗೆ ಹೆಚ್‌ಡಿಕೆ ತಿರುಗೇಟು

    ನಾರಾಯಣಪುರ-ದಾಂತೇವಾಡ ಗಡಿ ಪ್ರದೇಶದಲ್ಲಿ ಬಸ್ತಾರ್ ಪ್ರದೇಶದ ಉನ್ನತ ನಕ್ಸಲೀಯರ ಸಭೆಯ ಬಗ್ಗೆ ಮಾಹಿತಿ ಲಭಿಸಿತು. ಈ ಹಿನ್ನೆಲೆ ಹುಡುಕಾಟ ಮತ್ತು ರಕ್ಷಣಾ ತಂಡಗಳನ್ನು ಕಳುಹಿಸಲಾಯಿತು. ಶುಕ್ರವಾರ ಮಧ್ಯಾಹ್ನದಿಂದ ಎನ್‌ಕೌಂಟರ್ ಆರಂಭವಾಗಿ ತಡರಾತ್ರಿಯವರೆಗೂ ಮುಂದುವರೆಯಿತು. ಶನಿವಾರ ಬೆಳಗ್ಗೆಯೂ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಇಲ್ಲಿಯವರೆಗೆ ಒಟ್ಟು 35 ನಕ್ಸಲರ ಮೃತದೇಹಗಳು ಪತ್ತೆಯಾಗಿವೆ ಎಂದು ನಾರಾಯಣಪುರ ಎಸ್ಪಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಗೆ ಡ್ರಗ್ ರಾಕೆಟ್‌ ಹಿಂದೆ ದುಬೈ, ಲಂಡನ್ ನಂಟು – ದುಬೈನಲ್ಲಿರುವ ಭಾರತೀಯನಿಂದಲೇ ಡ್ರಗ್ ಮಾಫಿಯಾ

    ಎನ್‌ಕೌಂಟರ್‌ನಲ್ಲಿ ಎಲ್ಲಾ ಯೋಧರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ನಕ್ಸಲರಿಂದ ಎಲ್‌ಎಂಜಿ ರೈಫಲ್, ಎಕೆ 47 ರೈಫಲ್, ಎಸ್‌ಎಲ್‌ಆರ್ ರೈಫಲ್, ಐಎನ್‌ಎಸ್ ಎಎಸ್ ರೈಫಲ್, 303 ರೈಫಲ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

    ಘಟನೆ ಬೆನ್ನಲ್ಲೇ ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಇದರಲ್ಲಿ ನಾರಾಯಣಪುರ-ದಾಂತೇವಾಡ ಜಿಲ್ಲೆಯ ತುಳತುಳಿ ಅರಣ್ಯದಲ್ಲಿ ನಡೆಯುತ್ತಿರುವ ಎನ್‌ಕೌಂಟರ್ ಕುರಿತು ಚರ್ಚೆ ನಡೆಸಿದ್ದಾರೆ. ನಕ್ಸಲ್ ಎನ್‌ಕೌಂಟರ್ ಕುರಿತು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ದಲಿತ ಶಿಕ್ಷಕ ಸೇರಿ ನಾಲ್ವರ ಭೀಕರ ಹತ್ಯೆ ಕೇಸ್; ಆರೋಪಿಗೆ ಗುಂಡೇಟು‌

    ವರ್ಷದ ಆರಂಭದಿಂದ ದಾಂತೇವಾಡ ಮತ್ತು ನಾರಾಯಣಪುರದಂತಹ ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಾದ್ಯಂತ ವಿವಿಧ ಕಾರ್ಯಾಚರಣೆಗಳಲ್ಲಿ 185 ನಕ್ಸಲಿಯರು ಹತರಾಗಿದ್ದಾರೆ. ಮಾರ್ಚ್ 2026ರ ವೇಳೆಗೆ ಭಾರತವು ಎಡಪಂಥೀಯ ಉಗ್ರವಾದದಿಂದ ಮುಕ್ತವಾಗುವ ಗುರಿ ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಮುಡಾಸ್ತ್ರಕ್ಕೆ ಜಾತಿ ಜನಗಣತಿ ಪ್ರತ್ಯಾಸ್ತ್ರ ಬಿಟ್ಟ ಸಿಎಂ – ಕಾಂಗ್ರೆಸ್‌ನಲ್ಲಿ ಮತ್ತೆ ಪರ-ವಿರೋಧಕ್ಕೆ ವೇದಿಕೆ ಸಜ್ಜು

  • ನಕ್ಸಲರಿಂದ ನಿರಂತರ ಬೆದರಿಕೆ- ಪದ್ಮಶ್ರೀ ಹಿಂದಿರುಗಿಸಲು ಹೇಮಚಂದ್ ಮಾಂಝಿ ನಿರ್ಧಾರ

    ನಕ್ಸಲರಿಂದ ನಿರಂತರ ಬೆದರಿಕೆ- ಪದ್ಮಶ್ರೀ ಹಿಂದಿರುಗಿಸಲು ಹೇಮಚಂದ್ ಮಾಂಝಿ ನಿರ್ಧಾರ

    ರಾಯ್ಪುರ: ಗೌರವಾನ್ವಿತ ಸಾಂಪ್ರದಾಯಿಕ ವೈದ್ಯ ವೃತ್ತಿಗಾರರಾದ ಹೇಮಚಂದ್ ಮಾಂಝಿ (Hemchand Manjhi,) ಅವರು ತಮ್ಮ ಪದ್ಮಶ್ರೀ (Padma Shree) ಪ್ರಶಸ್ತಿಯನ್ನು ಹಿಂದಿರುಗಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

    ನಕ್ಸಲ್ (Naxals) ಗುಂಪುಗಳಿಂದ ಹೆಚ್ಚುತ್ತಿರುವ ಬೆದರಿಕೆಗಳಿಂದ ಮನನೊಂದು ಮಾಂಝಿ ಈ ತೀರ್ಮಾನ ಮಾಡಿದ್ದಾರೆ. ಇದು ಅವರ ಸುರಕ್ಷತೆಯ ಬಗ್ಗೆ ಭಯಪಡುವಂತೆ ಮಾಡಿದೆ. ಮಾಂಝಿ ಅವರು ಸಾಂಪ್ರದಾಯಿಕ ಔಷಧಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ಅವರ ಕೆಲಸವು ಸ್ಥಳೀಯ ಚಿಕಿತ್ಸಾ ಪದ್ಧತಿಗಳನ್ನು ಸಂರಕ್ಷಿಸುವಲ್ಲಿ ಮತ್ತು ದೂರದ ಪ್ರದೇಶಗಳಲ್ಲಿ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ.

    ಈ ಸಂಬಂಧ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿದ ಡಾ. ಮಾಂಝಿ ಮತ್ತೊಮ್ಮೆ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದರು. ಕಬ್ಬಿಣದ ಅದಿರು ಗಣಿಯೊಂದಿಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಈಗಾಗಲೇ ಗ್ರಾಮಸ್ಥರಿಗೆ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು. ಇದೇ ವೇಳೆ ಕುಟುಂಬದವರೊಂದಿಗೆ ಚರ್ಚಿಸಿದ ನಂತರ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಲು ಮತ್ತು ಸಾಂಪ್ರದಾಯಿಕ ವೈದ್ಯ ಪದ್ಧತಿಯನ್ನು ನಿಲ್ಲಿಸಲು ನಿರ್ಧರಿಸಿರುವುದಾಗಿ ಅವರು ತಿಳಿಸಿದರು. ಇದನ್ನೂ ಓದಿ: ಇವಿಎಂ ಯಂತ್ರಗಳು ಏನು ಆಗದೇ ಹೋದರೆ ಸರಿ, ಜನ ನಮ್ಮ ಪರವಾಗಿದ್ದಾರೆ: ಡಿಕೆಶಿ

    ನಾನು ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುತ್ತೇನೆ. ಯಾಕೆಂದರೆ ಮಾವೋವಾದಿಗಳು ನನಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಹೇಗೆ ಸಿಕ್ಕಿತು ಎಂದು ಪ್ರಶ್ನಿಸುತ್ತಾರೆ. ನಾನು 20 ವರ್ಷ ವಯಸ್ಸಿನವನಾಗಿದ್ದಾಗಿನಿಂದ ನಾನು ಜನರ ಸೇವೆಗಾಗಿ ಪ್ರಶಸ್ತಿಯನ್ನು ಪಡೆದಿದ್ದೇನೆ. ಆದರೆ ನಾನು ಈ ಪ್ರಶಸ್ತಿಗೆ ಬೇಡಿಕೆ ಇಟ್ಟಿಲ್ಲ ಎಂದರು.

    ನಡೆದಿದ್ದೇನು..?: ಮೇ 26 ರಂದು ರಾತ್ರಿ ನಕ್ಸಲರು ಜಿಲ್ಲೆಯ ಛೋಟೆಡೊಂಗರ್ ಪೊಲೀಸ್ ಠಾಣಾ ವ್ಯಾಪ್ತಿಯ ಚಮೇಲಿ ಮತ್ತು ಗೌರ್ದಂಡ್ ಗ್ರಾಮಗಳಲ್ಲಿ ನಿರ್ಮಾಣ ಹಂತದಲ್ಲಿರುವ 2 ಮೊಬೈಲ್ ಟವರ್‌ಗಳಿಗೆ ಬೆಂಕಿ ಹಚ್ಚಿದರು. ಅಲ್ಲದೇ ಡಾ. ಮಾಂಝಿ ಅವರು ಪದ್ಮಶ್ರೀ ಪ್ರಶಸ್ತಿ ಪಡೆಯುತ್ತಿರುವ ಫೋಟೋವನ್ನೇ ಬ್ಯಾನರ್‌ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದೇ ಮೊದಲಲ್ಲ: ಮಾಂಝಿ ಅವರಿಗೆ ನಕ್ಸಲರು ಬೆದರಿಕೆ ಹಾಕುವುದು ಇದೇ ಮೊದಲಲ್ಲ. ಈ ಹಿಂದೆ ನಾರಾಯಣಪುರದ ಛೋಟೆಡೊಂಗರ್ ಪ್ರದೇಶದಲ್ಲಿ ಆಮ್ದೈ ಘಾಟಿ ಕಬ್ಬಿಣದ ಅದಿರು ಯೋಜನೆ ಕಾರ್ಯಾರಂಭಕ್ಕೆ ಮಾಝಿ ಸಹಾಯ ಮಾಡಿದ್ದಾರೆ. ಮಾತ್ರವಲ್ಲದೇ ಅದಕ್ಕಾಗಿ ಭಾರಿ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ನಕ್ಸಲರು ಆರೋಪಿಸಿದ್ದರು. ಆದರೆ ಈ ಆರೋಪವನ್ನು ಮಾಂಝಿ ನಿರಾಕರಿಸಿದ್ದರು. ಇದೀಗ ಮತ್ತೆ ಮಾಂಝಿ ವಿರುದ್ಧ ಇದೇ ರೀತಿಯ ಆರೋಪಗಳನ್ನು ಮಾಡಿದ್ದು, ಮುಂದಿನ ದಿನಗಳಲ್ಲಿ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

  • ಕರಾವಳಿಯಲ್ಲಿ ನಕ್ಸಲರ ಚಲನವಲನ – ಕಡಬದ ಮನೆಗೆ ಬಂದು ಊಟ ಮಾಡಿದ ಶಂಕಿತರು

    ಕರಾವಳಿಯಲ್ಲಿ ನಕ್ಸಲರ ಚಲನವಲನ – ಕಡಬದ ಮನೆಗೆ ಬಂದು ಊಟ ಮಾಡಿದ ಶಂಕಿತರು

    ಮಂಗಳೂರು: ಲೋಕಸಭಾ ಚುನಾವಣೆ (Lok Sabha Election) ಸಮಯದಲ್ಲಿ ಕರಾವಳಿ ಭಾಗದಲ್ಲಿ ನಕ್ಸಲರ (Naxal) ಚಲನವಲನ ಹೆಚ್ಚಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಕಡಬದ (Kadaba) ಮನೆಗೆ 6 ಮಂದಿ ಬಂದಿರುವ ಶಂಕೆ ವ್ಯಕ್ತವಾಗಿದೆ.

    ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೆರು ಗ್ರಾಮದ ಮನೆಗೆ ತಡರಾತ್ರಿ ಆರು ಮಂದಿ ಬಂದಿದ್ದಾರೆ.  ಇದನ್ನೂ ಓದಿ: ದೊಡ್ಮನೆ ಸೊಸೆಗೆ ಅವಹೇಳನ: ಸಾರ್ವಜನಿಕರಿಂದಲೂ ಆಕ್ರೋಶ

     

    ಸುಮಾರು ಎರಡು ಗಂಟೆಗಳ ಕಾಲ ಇದ್ದ 6 ಮಂದಿ ಮನೆಯಲ್ಲಿ ಊಟ ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದ ಮಾಹಿತಿ ಲಭ್ಯವಾಗಿದೆ. ಈ ವಿಚಾರ ತಿಳಿದ ಬೆನ್ನಲ್ಲೇ ನಕ್ಸಲ್‌ ನಿಗ್ರಹ ದಳ (ANF) ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದೆ.  ಇದನ್ನೂ ಓದಿ: ಏಳೆಂಟು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ : ರಾಜನಾಥ್‌ ಸಿಂಗ್‌

    ವಾರದ ಹಿಂದೆ ಸುಬ್ರಹ್ಮಣ್ಯದ ಐನೆಕಿದು ಬಳಿ ನಕ್ಸಲರು ಪತ್ತೆಯಾಗಿದ್ದರು. ಮೋಸ್ಟ್ ವಾಂಟೆಡ್ ವಿಕ್ರಂ ಗೌಡ, ಲತಾ ಮುಂಡುಗಾರು ಇದ್ದ ತಂಡ ಕಡಬಕ್ಕೂ ಬಂದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

    ಚುನಾವಣೆ ಹೊತ್ತಲ್ಲಿ ಪಶ್ಚಿಮ ಘಟ್ಟ ಭಾಗದಲ್ಲಿ ನಕ್ಸಲ್ ಚಲನವಲನ ಹೆಚ್ಚಾಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

     

  • ಮಲೆನಾಡಲ್ಲಿ ಮತ್ತೆ ನಕ್ಸಲರ ಹೆಜ್ಜೆ – ಹೈ ಅಲರ್ಟ್ ಘೋಷಣೆ

    ಮಲೆನಾಡಲ್ಲಿ ಮತ್ತೆ ನಕ್ಸಲರ ಹೆಜ್ಜೆ – ಹೈ ಅಲರ್ಟ್ ಘೋಷಣೆ

    ಚಿಕ್ಕಮಗಳೂರು: ನಕ್ಸಲ್ (Naxal) ನಾಯಕ ವಿಕ್ರಮ್ ಗೌಡ ಹಾಗೂ ಆತನ ಸಹಚರರರು ಉಡುಪಿ (Udupi) ಹಾಗೂ ಚಿಕ್ಕಮಗಳೂರಿನ (Chikkamagaluru) ಭಾಗಗಳಲ್ಲಿ ಓಡಾಟ ನಡೆಸಿದ್ದಾರೆ ಎಂಬ ಮಾಹಿತಿಯ ಮೇರೆಗೆ ಈ ಎರಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಐದು ದಿನಗಳ ಕಾಲ ಹೈ ಅಲರ್ಟ್ ಘೋಷಿಸಲಾಗಿದೆ. ತೀವ್ರ ಕಟ್ಟೆಚ್ಚರ ವಹಿಸುವಂತೆ ಎಎನ್‍ಎಫ್‍ಗೆ (ANF) ಸೂಚನೆ ನೀಡಲಾಗಿದೆ.

    ನಕ್ಸಲ್ ಮುಖಂಡ ಸಾಕೇತ್ ರಾಜನ್ ಸಾವಿನ ಬಳಿಕ ವಿಕ್ರಮ್ ಗೌಡ ತಲೆಮರೆಸಿಕೊಂಡಿದ್ದ. ಈಗ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ವಿಕ್ರಮ್ ಗೌಡ ಓಡಾಟದ ಸುಳಿವು ಸಿಕ್ಕಿದೆ. ಈ ಭಾಗದಲ್ಲಿ ನಕ್ಸಲರ ಓಡಾಟದ ಕುರಿತು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಎನ್‍ಎಫ್‍ನಿಂದ ಕೂಂಬಿಂಗ್ ಆರಂಭಗೊಂಡಿದೆ. ಅಲ್ಲದೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ನಕ್ಸಲ್ ನಿಗ್ರಹ ದಳಕ್ಕೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕಾಸ್ಮೆಟಿಕ್ ಸರ್ಜರಿಗೆ ಬಂದವಳಿಂದ ಲೂಟಿ – ವೈದ್ಯನಿಗೆ 6 ಕೋಟಿ ಪಂಗನಾಮ

    ಕಳೆದ ಒಂದು ತಿಂಗಳಿನ ಹಿಂದೆ ಕೇರಳದ ಥಂಡರ್ಕೂಲ್‍ನಲ್ಲಿ ನಕ್ಸಲರು-ಪೊಲೀಸರ ಮಧ್ಯೆ ಫೈರಿಂಗ್ ನಡೆದಿತ್ತು. ಈ ವೇಳೆ ನಕ್ಸಲರು ಕರ್ನಾಟಕದ ಒಳಗೆ ಪ್ರವೇಶಿಸಿದ್ದರು ಎನ್ನಲಾಗಿತ್ತು.

    ಸಾಕೇತ್ ರಾಜನ್ ರೆಡ್ ಸಲ್ಯೂಟ್ ದಿನ ಆಚರಿಸಲು ನಕ್ಸಲರು ತಯಾರಿ ನಡೆಸಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. 19 ವರ್ಷದ ಹಿಂದೆ ಎನ್ಕೌಂಟರ್ ನಲ್ಲಿ ಸಾಕೇತ್ ರಾಜನ್ ಸಾವನ್ನಪ್ಪಿದ್ದ. 2005ರ ಫೆ.5ರ ಬೆಳಗಿನ ಜಾವ ಕೊಪ್ಪ ತಾಲೂಕಿನ ಮೆಣಸಿನಹಾಡ್ಯ ಸಮೀಪ ಎನ್‍ಕೌಂಟರ್ ನಡೆದಿತ್ತು. ಇದನ್ನೂ ಓದಿ: ಪ್ರೀತಿಸಿ ಮದ್ವೆಯಾಗಿ ತಿಂಗಳೊಳಗೆ ತಾಳಿ ಬಿಚ್ಚಿಟ್ಟು ಹೋದ ಪತ್ನಿ – ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ

  • ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿ – ಕೊಡಗಿನಲ್ಲಿ ಹೈ ಅಲರ್ಟ್

    ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿ – ಕೊಡಗಿನಲ್ಲಿ ಹೈ ಅಲರ್ಟ್

    ಮಡಿಕೇರಿ: ಕೇರಳದ ಗಡಿ ಜಿಲ್ಲೆ ವಯನಾಡಿನಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕರ್ನಾಟಕ ಗಡಿ ನುಸುಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

    ಕೇರಳದ ಗಡಿಯಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿಯಿಂದ ನಕ್ಸಲರು ತೊಂದರೆಗೆ ಸಿಲುಕಿದ್ದಾರೆ. ಇದರಿಂದ ಕರ್ನಾಟಕ ಗಡಿಯತ್ತ ನುಸುಳುವ ಶಂಕೆ ಇದೆ. ಮುಂಜಾಗೃತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಗಡಿಭಾಗದಲ್ಲಿ ನಿಯೋಜನೆ ಮಾಡಲಾಗಿದೆ. ಕೊಡಗಿನ ಕುಟ್ಟ, ಬಿರುನಾಣಿ, ಪರಕಟಗೇರಿ ಹಾಗೂ ತೆರಾಲು ಭಾಗಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಮುಂದಿನ ವಾರ KEA ಪರೀಕ್ಷೆ – ಮಂಗಳಸೂತ್ರ, ಕಾಲುಂಗರಕ್ಕೆ ಮಾತ್ರ ವಿನಾಯಿತಿ : ಟಫ್‌ ರೂಲ್ಸ್‌ ಏನು?

    ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡು ಬಂದರೆ ಕೂಡಲೇ ವಿಚಾರಣೆಗೆ ಒಳಪಡಿಸುವಂತೆ ಎಸ್‍ಪಿ ರಾಮರಾಜನ್ ಆದೇಶ ನೀಡಿದ್ದಾರೆ. ಅಲ್ಲದೇ ಗಡಿ ಭಾಗದಲ್ಲಿ ಸಂಚರಿಸುವ ವಾಹನಗಳ ಮೇಲೂ ಕಣ್ಣಿರಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ. ತೆರಾಲು ಸೇರಿದಂತೆ ಕೆಲವೆಡೆ ನಾಕಾಬಂದಿ ಹಾಕಲಾಗಿದೆ. ಈಗಾಗಲೇ ಕುಟ್ಟ ಭಾಗದಲ್ಲಿ ಎ.ಎನ್.ಎಫ್. ತಂಡ ಕೆಲಸ ನಿರ್ವಹಿಸುತ್ತಿದೆ. ಇದರೊಂದಿಗೆ ಪೊಲೀಸರು ಈಗ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    ಗಡಿಭಾಗಕ್ಕೆ ಎಸ್ಪಿ ರಾಮರಾಜನ್, ವೀರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಓದು ಎಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ಪುತ್ರ ನೇಣಿಗೆ ಶರಣು

  • ಭದ್ರತಾ ಸಿಬ್ಬಂದಿ, ನಕ್ಸಲರ ನಡುವೆ ಗುಂಡಿನ ಚಕಮಕಿ – ಇಬ್ಬರು ನಕ್ಸಲರ ಹತ್ಯೆ

    ಭದ್ರತಾ ಸಿಬ್ಬಂದಿ, ನಕ್ಸಲರ ನಡುವೆ ಗುಂಡಿನ ಚಕಮಕಿ – ಇಬ್ಬರು ನಕ್ಸಲರ ಹತ್ಯೆ

    ರಾಯ್ಪುರ: ಶನಿವಾರ ಛತ್ತೀಸ್‌ಗಢದ (Chattisgarh) ಕಂಕೇರ್ (Kanker) ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ (Security Personnel) ನಡೆದ ಎನ್‌ಕೌಂಟರ್‌ನಲ್ಲಿ (Encounter) ಇಬ್ಬರು ನಕ್ಸಲರು (Naxals) ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ರಾಜ್ಯ ಪೊಲೀಸ್ ಪಡೆಯ ಒಂದು ಘಟಕವಾದ ಜಿಲ್ಲಾ ರಿಸರ್ವ್ ಗಾರ್ಡ್ (DRG) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಂದರ್ಭ ಕೊಯಲಿಬೀಡ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಗುಂಡಿನ ಚಕಮಕಿ ಸಂಭವಿಸಿದೆ ಎಂದು ಇನ್ಸ್ಪೆಕ್ಟರ್ ಜನರಲ್ ತಿಳಿಸಿದ್ದಾರೆ. ಇದನ್ನೂ ಓದಿ: ಸ್ವಿಸ್ ಮಹಿಳೆಯನ್ನು ದೆಹಲಿಗೆ ಕರೆಸಿ ಹತ್ಯೆ ಮಾಡಿದ ಸ್ನೇಹಿತ

    ಘಟನೆಯ ಬಳಿಕ ಇಬ್ಬರು ನಕ್ಸಲರ ಮೃತದೇಹಗಳು ಮತ್ತು ಇನ್ಸಾಸ್ ರೈಫಲ್, ಒಂದು 12 ಬೋರ್ ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಅಬ್ಬಬ್ಬಾ! ಬ್ಲೌಸ್‌ನಲ್ಲೂ ಚಿನ್ನ ಸಾಗಾಟ – ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ ಅಂದರ್‌

    ನಕ್ಸಲರ ಗುರುತನ್ನು ಇನ್ನೂ ಪತ್ತೆಹಚ್ಚಿಲ್ಲ. ಹತ್ತಿರದ ಪ್ರದೇಶಗಳಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗೆಲುವಿನ ತನಕ ವಿರಮಿಸುವುದಿಲ್ಲ: ಇಸ್ರೇಲ್ ಪ್ರಧಾನಿ ಪ್ರತಿಜ್ಞೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಡಗು-ಕೇರಳ ಗಡಿಯಲ್ಲಿ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕೂಂಬಿಂಗ್

    ಕೊಡಗು-ಕೇರಳ ಗಡಿಯಲ್ಲಿ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕೂಂಬಿಂಗ್

    ಮಡಿಕೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೊಡಗು (Kodagu) ಜಿಲ್ಲೆಯ ಕೇರಳ ಗಡಿಯಲ್ಲಿ (Kerala Border) ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಮೇ 10 ರಂದು ಮತದಾನ ಹಿನ್ನೆಲೆಯಲ್ಲಿ ಕೊಡಗಿನ ನಕ್ಸಲ್ (Naxal) ಪೀಡಿತ ಬೂತ್‌ಗಳಲ್ಲಿ ಬಿಗಿ ಭದ್ರತೆಯನ್ನು ನೀಡಲಾಗುತ್ತದೆ ಎಂದು ಕೊಡಗು ಎಸ್‌ಪಿ ರಾಜರಾಜನ್ ತಿಳಿಸಿದ್ದಾರೆ.

    ಕೊಡಗಿನ ನಕ್ಸಲ್ ಪೀಡಿತ ಬೂತ್‌ಗಳಾದ ಮಣ್ಟ್ರೂಟ್, ಕಡಮಕಲ್ಲು ಮತ್ತು ಒಣಚಲು ಬೂತ್‌ಗಳಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ. ಜಿಲ್ಲೆಯ 12 ಅತಿ ಸೂಕ್ಷ್ಮ ಮತಗಟ್ಟೆಗಳು ಆಗಿದ್ದು ಈ ಬೂತ್‌ಗಳಿಗೆ ಈಗಾಗಲೇ ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ADGP) ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತಗಟ್ಟೆಗಳ ಬೂತ್‌ಗಳಲ್ಲಿ ಅರೆಸೇನಾಪಡೆ, ಸಿಆರ್‌ಪಿಎಫ್ ಸಿಬ್ಬಂದಿ ನಿಯೋಜನೆ ನಿರ್ಧಾರ ಮಾಡಿದೆ.

    ಮತ್ತೊಂದೆಡೆ ಕೂಂಬಿಂಗ್ ಮಾಡುತ್ತಿರುವ ಎಎನ್‌ಎಫ್ ತಂಡ ಅರಣ್ಯ ಅಂಚಿನಲ್ಲಿ ನಿರಂತರ ನಿಗಾ ಇರಿಸಿದ್ದಾರೆ. ಜನಸಾಮಾನ್ಯರು ನಿರ್ಭೀತಿ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಕೊಡಗು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಅಷ್ಟೇ ಅಲ್ಲದೇ ಕೊಡಗಿನ ಬಿರುನಾಣಿ, ಪೂಕೊಳ, ಮಾಕುಟ್ಟ ಮೊದಲಾದ ಗಡಿಭಾಗದ ಪ್ರದೇಶಗಳ ಜೊತೆಗೆ ಕೇರಳದ ಭಾಗಗಳಲ್ಲೂ ನಿರಂತರ ನಿಗಾ ಇರಿಸಿದ್ದಾರೆ. ಇದನ್ನೂ ಓದಿ: ಐವರು ಮಾವೋವಾದಿಗಳು ಶರಣು – 30 ದಶಕಗಳ ಬಳಿಕ ನಕ್ಸಲ್ ಮುಕ್ತಗೊಂಡ ಕೌಲೇಶ್ವರಿ ವಲಯ

    ಏಪ್ರಿಲ್ 27ರಂದು ಕೇರಳದ ವಯನಾಡು ಜಿಲ್ಲೆಯ ತಲಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ವರು ನಕ್ಸಲರು ಕಾಣಿಸಿಕೊಂಡಿದ್ದರು. ಇವರಲ್ಲಿ ಕರ್ನಾಟಕದ ನಕ್ಸಲ್ ವಿಕ್ರಂ ಗೌಡ ಕೂಡಾ ಇದ್ದ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಇಲ್ಲಿನ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಎಚ್ಚೆತ್ತಿದ್ದು, ಗಡಿಭಾಗದಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಕೇರಳದ ಕಾಡಿನಂಚಿನಲ್ಲಿರುವ ಅನೇಕರಿಗೆ ನಕ್ಸಲರ ಮೇಲೆ ಅನುಕಂಪ ಇದೆ. ನಕ್ಸಲರ ಚಟುವಟಿಕೆಗಳು ಹೆಚ್ಚಿದ್ದರೂ, ಮಾಹಿತಿ ಇದ್ದರೂ ಇವರು ಪೊಲೀಸರಿಗೆ ಮಾಹಿತಿ ನೀಡುವುದಿಲ್ಲ ಎಂದು ಮೂಲಗಳು ತಿಳಿಸಿವೆ.

    ಕೊಡಗು-ಕೇರಳ ಗಡಿಭಾಗದ ಕುಟ್ಟ ಮತ್ತು ಆರ್ಜಿ ಗ್ರಾಮಗಳಲ್ಲಿ ನಕ್ಸಲ್ ನಿಗ್ರಹ ಪಡೆಯ 2 ಶಿಬಿರಗಳು ಇವೆ. ಇಲ್ಲಿ 60ಕ್ಕೂ ಅಧಿಕ ಮಂದಿ ಪೊಲೀಸರು ಸಕ್ರಿಯರಾಗಿದ್ದು, ನಿತ್ಯವೂ ಕಾಡಿನೊಳಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕಾಡಂಚಿನ ಜನರು ಮುಕ್ತವಾಗಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಕೊಡಗು ಎಸ್‌ಪಿ ರಾಜರಾಜನ್ ತಿಳಿಸಿದ್ದಾರೆ. ಇದನ್ನೂ ಓದಿ: ತಿಹಾರ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್ ಹತ್ಯೆ ಪ್ರಕರಣ – ತಮಿಳುನಾಡಿನ 7 ಪೊಲೀಸರು ಸಸ್ಪೆಂಡ್