Tag: ನಕ್ಸಲ್

  • ದಾಂತೇವಾಡ ಸ್ಫೋಟ ಪ್ರಕರಣ- ಮಾಸ್ಟರ್‌ಮೈಂಡ್‌ ಫೋಟೋ ರಿಲೀಸ್

    ದಾಂತೇವಾಡ ಸ್ಫೋಟ ಪ್ರಕರಣ- ಮಾಸ್ಟರ್‌ಮೈಂಡ್‌ ಫೋಟೋ ರಿಲೀಸ್

    – ಸಹಚರರ ಮಾಹಿತಿ ಕೊಟ್ಟವ್ರಿಗೆ ನಗದು ಬಹುಮಾನ ಘೋಷಣೆ

    ರೈಪುರ್: ದಾಂತೇವಾಡ (Dantewada) ಸ್ಫೋಟದ ತನಿಖೆ ಕೈಗೊಂಡಿರುವ ಬಸ್ತಾರ್ ಪೊಲೀಸರು ಕೃತ್ಯದ ಮಾಸ್ಟರ್‌ಮೈಂಡ್‌ ( Mastermind) ಫೋಟೋ ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಆತನ ಹಾಗೂ ಸಹಚರರ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಪೊಲೀಸ್ ಇಲಾಖೆ ಘೋಷಿಸಿದೆ.

    ಸ್ಫೋಟದ ಮಾಸ್ಟರ್ ಮೈಂಡ್‍ನನ್ನು ಜಗದೀಶ್ ಎಂದು ಗುರುತಿಸಲಾಗಿದೆ. ಜಗದೀಶ್‍ನ ಪತ್ನಿ ಸುಕ್ಮಾ ಜಿಲ್ಲೆಯ ಹೇಮ್ಲಾ ಕೂಡ ನಕ್ಸಲ್ ಸಂಘಟನೆಯ ದರ್ಭಾ ವಿಭಾಗದಲ್ಲಿ ಕಮಾಂಡರ್ ಆಗಿದ್ದಾಳೆ. ಅಲ್ಲದೇ ಜಗದೀಶ್‍ನ ಮಾವ ವಿನೋದ್ ಹೇಮ್ಲಾ, ಕಾಂಗೇರ್ ಘಾಟಿ ಪ್ರದೇಶದ ನಕ್ಸಲ್ ಸಮಿತಿಯ ಉಸ್ತುವಾರಿಯಾಗಿ ಸಕ್ರಿಯರಾಗಿದ್ದಾನೆ. ಗುಪ್ತಚರ ಮಾಹಿತಿಯ ಪ್ರಕಾರ ದರ್ಭಾ (Darbha) ವಿಭಾಗದ ಸಿಪಿಐ (CPI Maoist) ಸ್ಫೋಟದಲ್ಲಿ ಭಾಗಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಲ್‍ಖೈದಾ ಜೊತೆ ನಂಟು ಶಂಕೆ – ಶಂಕಿತ ಭಯೋತ್ಪಾದಕನ ಸೆರೆ

    10 ಡಿಎಫ್‍ಜಿ (District Reserve Guard) ಸಿಬ್ಬಂದಿ ಮತ್ತು ಚಾಲಕನ ಜೀವವನ್ನು ಬಲಿ ಪಡೆದ ಸುಧಾರಿತ ಸ್ಫೋಟಕವನ್ನು (IED) ಎರಡು ತಿಂಗಳ ಹಿಂದೆಯೇ ಭೂಮಿಯಲ್ಲಿ ಹುದುಗಿಸಿಟ್ಟಿರುವ ಕುರುಹುಗಳಿವೆ. ಫಾಕ್ಸ್‌ಹೋಲ್‌ ತಂತ್ರಜ್ಞಾನವನ್ನು (Foxhole Mechanism) ಬಳಸಿ ಸುರಂಗ ತೆಗೆದು ಇರಿಸಿದ್ದರು. ಇದರಿಂದ ಅದು ಪತ್ತೆಯಾಗಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗುಪ್ತಚರ ಮಾಹಿತಿಯ ಆಧಾರದ ಮೇಲೆ ಚೈತು, ದೇವಾ, ಮಂಗ್ಟು, ರಾನ್ಸಾಯಿ, ಜೈಲಾಲ್, ಬಮನ್, ಸೋಮ, ರಾಕೇಶ್, ಭೀಮಾ ಮತ್ತು ಇತರ ಮಾವೋವಾದಿಗಳ ವಿರುದ್ಧ ಸೆಕ್ಷನ್ 147 ಗಲಭೆ, 149 ಕಾನೂನು ಬಾಹಿರ ಚಟುವಟಿಕೆ, 307 ಕೊಲೆ ಯತ್ನ, 302 ಕೊಲೆ ಅಲ್ಲದೆ ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಯುಎಪಿಎ ಕಾಯ್ದೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಛತ್ತೀಸ್‍ಗಢದ (Chhattisgarh) ದಾಂತೇವಾಡದಲ್ಲಿ ಜಿಲ್ಲಾ ಮೀಸಲು ಪಡೆ ಸಿಬ್ಬಂದಿಯ ಮೇಲೆ ಮಾವೋವಾದಿಗಳ ದಾಳಿಯ ನಂತರದ ಕ್ಷಣಗಳನ್ನು ತೋರಿಸುವ ವೀಡಿಯೋವೊಂದು ಪತ್ತೆಯಾಗಿದೆ. ಇದರಲ್ಲಿ ಮಾವೋವಾದಿಯೊಬ್ಬ ಪೊಲೀಸರ ಮೇಲೆ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏ.26 ರಂದು ಛತ್ತೀಸ್‍ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ್ದ ಐಇಡಿ ಸ್ಫೋಟದಲ್ಲಿ 10 ಜಿಲ್ಲಾ ಮೀಸಲು ಪಡೆಯ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಸಾವನ್ನಪ್ಪಿದ್ದರು. ಇದನ್ನೂ ಓದಿ: ನಕ್ಸಲರ ಅಟ್ಟಹಾಸ- IED ಬ್ಲಾಸ್ಟ್‌ಗೆ 11 ಯೋಧರು ಹುತಾತ್ಮ

  • ನಕ್ಸಲರ ಶಿಬಿರದಲ್ಲಿ ಕಾಂಡೋಮ್, ಗರ್ಭ ನಿರೋಧಕ ಮಾತ್ರೆ ಪತ್ತೆ

    ನಕ್ಸಲರ ಶಿಬಿರದಲ್ಲಿ ಕಾಂಡೋಮ್, ಗರ್ಭ ನಿರೋಧಕ ಮಾತ್ರೆ ಪತ್ತೆ

    ರಾಯ್ಪುರ: ಓಡಿಶಾ-ಛತ್ತೀಸ್‍ಗಢ (Chhattisgarh) ಗಡಿಯಲ್ಲಿ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯ ವೇಳೆ ಪೊಲೀಸರು ನಕ್ಸಲರ ಅಡಗುತಾಣದಿಂದ ಕಾಂಡೋಮ್‍ಗಳು (Condoms), ಗರ್ಭ ನಿರೋಧಕ ಮಾತ್ರೆ (Contraceptive Pills) ಹಾಗೂ ಗರ್ಭಧಾರಣೆಯ ಪರೀಕ್ಷಾ ಕಿಟ್‍ಗಳನ್ನು (Pregnancy Test Kits) ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಛತ್ತೀಸ್‍ಗಢದ ಗಡಿಯಲ್ಲಿರುವ ನಬರಂಗಪುರ ಜಿಲ್ಲೆಯ ರಾಯ್ಘರ್ ಪ್ರದೇಶದಲ್ಲಿ ಯೋಧರು ನಕ್ಸಲರ ವಿರೋಧಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ನಕ್ಸಲರ ಶಿಬಿರದಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಘಟನೆಯೇನು?: ನಬರಂಪುರದ ಪೂರ್ವ ಭಾಗದ ಉದಾಂತಿ ಅರಣ್ಯದ ಸೈಬಿನ್ ಕಚಾರ್ ಗ್ರಾಮದಲ್ಲಿ ಶಸ್ತ್ರಸಜ್ಜಿತ 20 ರಿಂದ 25 ಸಿಪಿಐ ಮಾವೋವಾದಿಗಳ ಗುಂಪು ಇರುವುದರ ಬಗ್ಗೆ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ್ದರು. ಪೊಲೀಸರು ಬರುತ್ತಿರುವುದನ್ನು ಗಮನಿಸಿದ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ರಕ್ಷಣೆಗಾಗಿ ಮರು ದಾಳಿ ನಡೆಸಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಗುಂಡಿನ ಚಕಮಕಿ ಮುಂದುವರಿದಿದೆ. ಈ ವೇಳೆ ದಟ್ಟ ಅರಣ್ಯದ ಲಾಭ ಪಡೆದ ನಕ್ಸಲರು ಸ್ಥಳದಿಂದ ಪರಾರಿಯಾಗಿದ್ದಾರೆ.

    ಈ ವೇಳೆ ನಕ್ಸಲ ಶಿಬಿರದಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಕ್ಸಲರ ಅಡಗು ತಾಣದಲ್ಲಿ ಕಾಂಡೋಮ್‍ಗಳು, ಗರ್ಭನಿರೋಧಕ ಮಾತ್ರಗಳು ಹಾಗೂ ಗರ್ಭಧಾರಣೆಯ ಪರೀಕ್ಷೆಯ ಕಿಟ್‍ಗಳು ಕಂಡುಬಂದಿವೆ. ಜೊತೆಗೆ 2 ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ.

    ಶಿಬಿರದಲ್ಲಿ ನಕ್ಸಲರ ಕರಪತ್ರಗಳು, ಬ್ಯಾನರ್‌ಗಳು, ಡಿಟೋನೇಟರ್‌ಗಳು ಮತ್ತು ಆಹಾರ ಪದಾರ್ಥಗಳು ಸಹ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಏ.30ಕ್ಕೆ ಚನ್ನಪಟ್ಟಣಕ್ಕೆ ಮೋದಿ – ದಶಪಥ ಹೆದ್ದಾರಿ ಮಾರ್ಗ ಬದಲಾವಣೆ

    ಮಾವೋವಾದಿ ಶಿಬಿರಗಳಲ್ಲಿ ಮಹಿಳೆಯರನ್ನು ಲೈಂಗಿಕವಾಗಿ ಶೋಷಣೆ ಮಾಡಲಾಗುತ್ತಿದೆ ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದು ಅಲ್ಲಿನ ಎಸ್ಪಿ ಹೇಳಿದರು. ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣ – ಕಾಂಗ್ರೆಸ್‍ನಿಂದ 5ನೇ ಗ್ಯಾರಂಟಿ ಘೋಷಣೆ

  • ಬಾಡಿಗೆ ವಾಹನದಲ್ಲಿ ಬರುತ್ತಿದ್ದ ಯೋಧರು – ದಾಳಿಗೆ ನಕ್ಸಲರಿಂದ 50 ಕೆಜಿ ಸುಧಾರಿತ IED ಬಳಕೆ

    ಬಾಡಿಗೆ ವಾಹನದಲ್ಲಿ ಬರುತ್ತಿದ್ದ ಯೋಧರು – ದಾಳಿಗೆ ನಕ್ಸಲರಿಂದ 50 ಕೆಜಿ ಸುಧಾರಿತ IED ಬಳಕೆ

    ರಾಯ್ಪುರ: ಛತ್ತೀಸ್‍ಗಢದ (Chhattisgarh) ದಾಂತೇವಾಡದಲ್ಲಿ (Dantewada) ಬುಧವಾರ ನಡೆದ ನಕ್ಸಲರ ದಾಳಿಯಲ್ಲಿ 11 ಯೋಧರು ಹುತಾತ್ಮರಾಗಿದ್ದಾರೆ. ಆದರೆ ಈ ದಾಳಿಯು ಪೂರ್ವನಿಯೋಜಿತವಾಗಿದ್ದು, ಯೋಧರ ವಾಹನವನ್ನು ಸ್ಫೋಟಿಸಲು ನಕ್ಸಲರು ಮೊದಲೇ 50 ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು (IED) ರಸ್ತೆಯಲ್ಲಿ ಇಟ್ಟಿದ್ದರು ಎಂಬ ವಿಷಯ ಇದೀಗ ಬೆಳಕಿಗೆ ಬಂದಿದೆ.

    ಛತ್ತೀಸ್‍ಗಢದ ಅರನ್‍ಪುರ ಏರಿಯಾದಲ್ಲಿ ಮಾವೋವಾದಿಗಳು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಛತ್ತೀಸ್‍ಗಢದ ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಡಿಆರ್‌ಜಿ)ನ ಸೈನಿಕರು ಅಲ್ಲಿಗೆ ತೆರಳಿದ್ದರು. ಈ ವೇಳೆ ಆ ಯೋಧರೆಲ್ಲರೂ ಬಾಡಿಗೆಗೆ ಪಡೆದ ಮಿನಿ ವ್ಯಾನ್‍ನಲ್ಲಿ ಪ್ರಯಾಣಿಸುತ್ತಿದ್ದರು.

    ಇದನ್ನೇ ಲಾಭವಾಗಿಸಿಕೊಂಡ ಮಾವೋವಾದಿಗಳು ನಕ್ಸಲರು ಸೇನಾ ವಾಹನ ವಾಪಸ್ ಬರುವ ಮಾರ್ಗದಲ್ಲಿ ಐಇಡಿ ಅಳವಡಿಸಿ ಇಟ್ಟಿದ್ದರು. ಅಷ್ಟೇ ಅಲ್ಲದೇ ಮರಗಳನ್ನು ಕಿತ್ತುಹಾಕಿ ರಸ್ತೆಯಲ್ಲಿ 10 ಅಡಿ ಆಳ ಹಾಗೂ 20 ಅಡಿ ಅಗಲದ ದೊಡ್ಡ ಕುಳಿ ತೋಡಿ, ಐಇಡಿಯನ್ನು ಬಚ್ಚಿಟ್ಟಿದರು.

    ನಕ್ಸಲರ ಯೋಜನೆಯಂತೆ ಕಾರ್ಯಚರಣೆ ಮುಗಿಸಿ ವಾಪಸ್ ಬರುತ್ತಿದ್ದ ಡಿಆರ್‌ಜಿ ವಾಹನ ಆ ಐಇಡಿ ಇದ್ದ ಸ್ಥಳ ದಾಂತೇವಾಡಕ್ಕೆ ಬಂದಿದೆ. ಈ ವೇಳೆ ಐಇಡಿ ಸ್ಫೋಟಗೊಂಡಿದ್ದು, ಅದರ ರಭಸಕ್ಕೆ ವಾಹನ ಚೂರು ಚೂರಾಗಿದೆ. ಜೊತೆಗೆ ಸೈನಿಕರ ದೇಹವೂ ಛೀದ್ರಗೊಂಡಿದೆ. ವಾಹನದಲ್ಲಿ 10 ಪೊಲೀಸರು ಹಾಗೂ ಓರ್ವ ಚಾಲಕ ಬಲಿಯಾಗಿದ್ದಾರೆ.

    ಯೋಧರ ವಾಹನವು ಸ್ಫೋಟದ ಸ್ಥಳದಿಂದ ಕನಿಷ್ಠ 20 ಅಡಿಗಳಷ್ಟು ದೂರಕ್ಕೆ ಹಾರಿದೆ. ಜೊತೆಗೆ ಸ್ಫೋಟದ ಸ್ಥಳದಿಂದ 150 ಮೀ. ದೂರದಲ್ಲಿ ಚೂರಾದ ವಾಹನದ ಅವಶೇಷಗಳು ಬಿದ್ದಿವೆ. ಘಟನೆಗೆ ಸಂಬಂಧಿಸಿ ವಿಶೇಷ ಭದ್ರತಾ ಪಡೆಗಳು ಕಾಡಿನಲ್ಲಿ ಅಡಗಿರುವ ಮಾವೋವಾದಿಗಳನ್ನು ಹುಡುಕುತ್ತಿವೆ ಎಂದು ಮೂಲಗಳು ತಿಳಿಸಿವೆ. ಈ ಪ್ರದೇಶವು 3 ರಾಜ್ಯಗಳ ಮಧ್ಯ ಇದ್ದು, ತ್ರಿ-ಜಂಕ್ಷನ್ ಆಗಿದೆ.

    ಗುಪ್ತಚರ ಮಾಹಿತಿ ಸಂಗ್ರಹವಾಗಿರಲಿಲ್ಲ: ಇಂದು ಮೃತಪಟ್ಟಿದ್ದ ಯೋಧರು ಡಿಆರ್‍ಜಿಯ ವಿಶೇಷ ತಂಡದ ಸದಸ್ಯರಗಿದ್ದಾರೆ. ನಕ್ಸಲರ ವಿರುದ್ಧ ಹೋರಾಡಲು ವಿಶೇಷವಾಗಿ ತರಬೇತಿ ಪಡೆದ ಸ್ಥಳೀಯ ಬುಡಕಟ್ಟು ಸಮುದಾಯದ ಸೈನಿಕರೇ ಹೆಚ್ಚಿನ ಜನರು ಇದರಲ್ಲಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

    ಶಿಷ್ಟಾಚಾರದ ಪ್ರಕಾರ ಭದ್ರತಾಪಡೆಗಳು ಗುಪ್ತಚರ ಮಾಹಿತಿ ತಲುಪಿದ ಬಳಿಕ ಹಾಗೂ ಸ್ಥಳ ಪರಿಶೀಲನೆಯ ಬಳಿಕವಷ್ಟೇ ಮುಂದೆ ಸಾಗಬೇಕು. ಆದರೆ ಮೂಲಗಳ ಪ್ರಕಾರ ಛತ್ತೀಸ್‍ಗಢ ಜಿಲ್ಲಾ ಮೀಸಲು ಪಡೆ ಹೋಗುವ ಮಾರ್ಗದಲ್ಲಿ ಮುಂಚಿತವಾಗಿ ಗುಪ್ತಚರ ಮಾಹಿತಿ ಸಂಗ್ರಹವಾಗಿರಲಿಲ್ಲ. ಸ್ಥಳ ಪರಿಶಿಲನೆಯೂ ನಡೆದಿರಲಿಲ್ಲ. ನಕ್ಸಲರು ಡಿಆರ್‍ಜಿ ವಾಹನದ ಮೇಲೆ ಮೊದಲನಿಂದಲೂ ಕಣ್ಣಿಟ್ಟಿದ್ದರು. ಅದರ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದರು. ಡಿಆರ್‌ಜಿ ಪಡೆ ಹೋಗುವಾಗ ದಾರಿಯನ್ನು ಬದಲಿಸದೇ ಇರುವುದು ಘಟನೆಗೆ ಕಾರಣವಾಗಿದೆ.

    2 ರಾಜ್ಯಗಳಲ್ಲಿ ಹೈಅಲರ್ಟ್: ನಕ್ಸಲ್ ದಾಳಿ ಬೆನ್ನಲ್ಲೇ ಒಡಿಶಾದ 3 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಘಟನೆಯ ನಂತರ ಛತ್ತೀಸ್‍ಗಢದ ಗಡಿಭಾಗದ ಜಿಲ್ಲೆಗಳಾದ ಮಲ್ಕಾನ್‍ಗಿರಿ, ಕೊರಾಪುಟ್, ಬರ್ಗಾರ್ಡ್, ನುವಾಪಾದ ಮತ್ತು ನಬರಂಗ್‍ಪುರವನ್ನು ಹೈ ಅಲರ್ಟ್ ಮಾಡಲಾಗಿದೆ ಎಂದು ಒಡಿಶಾ ಪೊಲೀಸ್‍ನ ಗುಪ್ತಚರ ನಿರ್ದೇಶಕ ಸಂಜೀಬ್ ಪಾಂಡಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ : ಕಟೀಲ್

    ಛತ್ತೀಸ್‍ಗಢ ಸಿಎಂ, ಕರ್ನಾಟಕದ ಪ್ರವಾಸ ರದ್ದು: ಛತ್ತೀಸ್‍ಗಢ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಭುಪೇಶ್ ಬಘೇಲ್ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಬರಬೇಕಿತ್ತು. ಆದರೆ ಯೋಧರ ಮೇಲೆ ದಾಳಿ ನಡೆದ ಬೆನ್ನಲ್ಲೇ ಕರ್ನಾಟಕ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಜೊತೆಗೆ ಘಟನಾ ಸ್ಥಳ ದಾಂತೇವಾಡಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ ಜೊತೆಗೆ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಇದನ್ನೂ ಓದಿ: ಶೆಟ್ಟರ್ ಅರ್ಥ ಮಾಡಿಕೊಳ್ಳಲು ಆಗಲಿಲ್ಲ, ಫೇಲ್ ಆದೆ: ಜೋಶಿ

  • ನಕ್ಸಲರ ಅಟ್ಟಹಾಸ- IED ಬ್ಲಾಸ್ಟ್‌ಗೆ 11 ಯೋಧರು ಹುತಾತ್ಮ

    ನಕ್ಸಲರ ಅಟ್ಟಹಾಸ- IED ಬ್ಲಾಸ್ಟ್‌ಗೆ 11 ಯೋಧರು ಹುತಾತ್ಮ

    ರಾಯ್ಪುರ: ಛತ್ತೀಸ್‌ಗಢದಲ್ಲಿ (Chhatisgarh) ಮತ್ತೆ ನಕ್ಸಲರು (Naxals) ಅಟ್ಟಹಾಸ ಮೆರೆದಿದ್ದು, ಚಾಲಕ ಹಾಗೂ 10 ಪೊಲೀಸ್‌ ಸಿಬ್ಬಂದಿ ಸೇರಿ 11 ಯೋಧರು ಹುತಾತ್ಮರಾದ ಘಟನೆ ಗುರುವಾರದಲ್ಲಿ ದಾಂತೇವಾಡದಲ್ಲಿ (Dantewada) ನಡೆದಿದೆ.

    ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಗುಪ್ತಚರ ಮಾಹಿತಿಯ ಮೇರೆಗೆ ಪ್ರಾರಂಭವಾದ ನಕ್ಸಲ್‌ ವಿರೋಧಿ ಕಾರ್ಯಾಚರಣೆಯಿಂದ ಪೊಲೀಸರು ಹಿಂತಿರುಗುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ. ಯೋಧರು ಸಂಚರಿಸುತ್ತಿದ್ದ ವಾಹನವನ್ನು ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ)ಯಿಂದ ದಾಳಿ ನಡೆಸಿ ಸ್ಫೋಟಿಸಿದ್ದಾರೆ. ಇದರ ಪರಿಣಾಮವಾಗಿ 10 ಭದ್ರತಾ ಸಿಬ್ಬಂದಿ ಮತ್ತು ಚಾಲಕ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ನಕ್ಸಲ್‌ ನಿಗ್ರಹ ದಳ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

    ಘಟನೆ ಕುರಿತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಪ್ರತಿಕ್ರಿಯಿಸಿ, ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ ಅವರು, ದಾಳಿಯಲ್ಲಿ ಭಾಗಿಯಾಗಿರುವ ನಕ್ಸಲರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಈ ಹೋರಾಟವು ಕೊನೆಯ ಹಂತದಲ್ಲಿದೆ. ನಕ್ಸಲರನ್ನು ಬಿಡಲಾಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್, ಸವದಿ ಸೋಲಿಸುವ ಹೊಣೆ ನನ್ನದು- ಯಡಿಯೂರಪ್ಪ

    ನಕ್ಸಲರೆಂದು ಕರೆಯಲ್ಪಡುವ ಮಾವೋವಾದಿಗಳು ಕಳೆದ 6 ದಶಕಗಳಿಂದ ನೂರಾರು ಜನರನ್ನು ಹತ್ಯೆಗೈದು ಸರ್ಕಾರದ ವಿರುದ್ಧ ಸಶಸ್ತ್ರ ಬಂಡಾಯವನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡ್ಬೇಕು – ನಿರ್ಮಲಾ ಸೀತಾರಾಮನ್ ಕರೆ

  • ಗುಂಡಿಕ್ಕಿ ಬಿಜೆಪಿ ಉಪಾಧ್ಯಕ್ಷನ ಕೊಲೆ- ನಕ್ಸಲರ ಕೈವಾಡ ಶಂಕೆ

    ಗುಂಡಿಕ್ಕಿ ಬಿಜೆಪಿ ಉಪಾಧ್ಯಕ್ಷನ ಕೊಲೆ- ನಕ್ಸಲರ ಕೈವಾಡ ಶಂಕೆ

    ರಾಯ್ಪುರ: ಬಿಜೆಪಿ (BJP) ಜಿಲ್ಲಾ ಉಪಾಧ್ಯಕ್ಷನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಛತ್ತೀಸ್‍ಗಢ (Chhattisgarh) ದಲ್ಲಿ ನಡೆದಿದೆ.

    ಈ ಘಟನೆ ನಾರಾಯಣ್‍ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಮೃತನನ್ನು ಸಾಹು ಎಂದು ಗುರುತಿಸಲಾಗಿದೆ. ಕೊಲೆ ಕೃತ್ಯದ ಹಿಂದೆ ನಕ್ಸಲ (Naxal) ರ ಕೈವಾಡವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

    ಸಾಹು ಅವರು ಛೋಟೆಡೊಂಗರ್ ಗ್ರಾಮದಲ್ಲಿರುವ ತಮ್ಮ ಮನೆಯಲ್ಲಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಇಬ್ಬರು ಆಗಂತುಕರು ಏಕಾಏಕಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ ಕುಟುಂಬದವರ ಎದುರೇ ಸಾಹು ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

    ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಸಾಹು ಅವರನ್ನು ಕೂಡಲೇ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಹತ್ಯೆ ಮಾಡಲು ಬಂದವನೇ ಭೀಕರವಾಗಿ ಕೊಲೆಯಾದ

    ಈ ಸಂಬಂಧ ಅಲ್ಲಿನ ಪೊಲೀಸರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಕೃತ್ಯದ ಹಿಂದೆ ನಕ್ಸಲರ ಕೈವಾಡವಿರುವುದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ. ಎಲ್ಲಾ ಆಯಾಮಗಳಲ್ಲಿ ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಕ್ಸಲ್ ನಂಟು ಆರೋಪ ಹೊತ್ತಿದ್ದ ವಿಠಲ್ ಮಲೆಕುಡಿಯ ನಿರ್ದೋಷಿ- 9 ವರ್ಷದ ಬಳಿಕ ತೀರ್ಪು

    ನಕ್ಸಲ್ ನಂಟು ಆರೋಪ ಹೊತ್ತಿದ್ದ ವಿಠಲ್ ಮಲೆಕುಡಿಯ ನಿರ್ದೋಷಿ- 9 ವರ್ಷದ ಬಳಿಕ ತೀರ್ಪು

    ಮಂಗಳೂರು: ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿದ್ದ ಬೆಳ್ತಂಗಡಿಯ ವಿಠಲ್ ಮಲೆಕುಡಿಯ ಹಾಗೂ ಆತನ ತಂದೆ ನಕ್ಸಲ್ ನಂಟು ಹೊಂದಿದ್ದ ಆರೋಪದ ತೀರ್ಪು 9 ವರ್ಷಗಳ ಬಳಿ ಇಂದು ಪ್ರಕಟವಾಗಿದೆ.

    ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಿಂದ ಅಂತಿಮ ತೀರ್ಪು ಪ್ರಕಟಿಸಿದದ್ದು ಇಬ್ಬರೂ ನಿರಪರಾಧಿಗಳು ಎಂದು ಘೋಷಿಸಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ ಮಂಗಳೂರು ವಿವಿಯ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದು, 2012ರ ಮಾರ್ಚ್ 03ರಂದು ನಕ್ಸಲ್ ನಿಗ್ರಹ ಪಡೆಯಿಂದ ವಿಠಲ ಮಲೆಕುಡಿಯ ಮತ್ತು ಆತನ ತಂದೆ ಬಂಧನವಾಗಿತ್ತು.

    ವಿಠಲ್ ಮನೆಗೆ ದಾಳಿ ನಡೆಸಿದ್ದ ವೇಳೆ ಚುನಾವಣೆ ಬಹಿಷ್ಕಾರದ ಕರಪತ್ರ, ಭಗತ್ ಸಿಂಗ್ ಪುಸ್ತಕ, ನಕ್ಸಲ್ ಬರಹದ ಪತ್ರಿಕಾ ಕಟ್ಟಿಂಗ್ ಗಳು ಪತ್ತೆಯಾಗಿತ್ತು.ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಮೂಲ ನಿವಾಸಿಗಳನ್ನ ಒಕ್ಕಲೆಬ್ಬಿಸೋದ್ರ ವಿರುದ್ದ ಹೋರಾಟ ನಡೆಸುತ್ತಿದ್ದ ವಿಠಲ್ ಗೆ ನಕ್ಸಲ್ ನಂಟಿದೆ ಎಂದು ಎಎನ್ ಎಫ್ ಬಂಧಿಸಿ ವೇಣೂರು ಪೊಲೀಸರಿಗೆ ಒಪ್ಪಿಸಿದ್ದ ನಕ್ಸಲ್ ನಿಗ್ರಹ ಪಡೆ.

    ವಿಠಲ್ ಬಂಧನವಾದಾಗ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಸೇರಿ ಕಮ್ಯುನಿಸ್ಟ್ ರಾಷ್ಟ್ರೀಯ ನಾಯಕರು ಮಂಗಳೂರು ಜೈಲಿಗೆ ಭೇಟಿ ನೀಡಿದ್ದರುಇಡೀ ದೇಶದಲ್ಲೇ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣದ ಅಂತಿಮ ತೀರ್ಪು ಪ್ರಕಟವಾಗಿದ್ದು ತಂದೆ ಮಗ ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಗೆಳೆಯನ ನಂಬಿ ಕ್ಯಾಸಿನೋದಲ್ಲಿ 40 ಲಕ್ಷ ಬಂಡವಾಳ- ಸಂಜನಾಗೆ ಎದುರಾಗುತ್ತಾ ಸಂಕಷ್ಟ..?

  • 24 ಮಂದಿ ನಕ್ಸಲರು ಪೊಲೀಸರಿಗೆ ಶರಣು

    24 ಮಂದಿ ನಕ್ಸಲರು ಪೊಲೀಸರಿಗೆ ಶರಣು

    ರಾಯ್‍ಪುರ: 12 ಮಹಿಳೆಯರು ಸೇರಿ 24 ಮಂದಿ ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಗಣರಾಜ್ಯೋತ್ಸದ ದಿನ ದಕ್ಷೀಣ ಬಸ್ತಾರ್ ಪ್ರಾಂತ್ಯದಲ್ಲಿ ನಕ್ಸಲರು ಶರಣಾಗಿದ್ದಾರೆ. ತಾವು ಮಾವೋವಾದಿಗಳ ತತ್ವಗಳಿಂದ ಬೇಸರಗೊಂಡು ಶರಣಾಗಿದ್ದೇವೆ. ಅಲ್ಲದೇ ಲೋನ್ ವರೋತ್ತು(ಮರಳಿ ಮನೆಗೆ) ಅಭಿಯಾನ ನಮ್ಮನ್ನು ಹಿಂಸೆಯನ್ನು ತೊರೆಯುವಂತೆ ಪ್ರೇರೆಪಿಸಿತು ಎಂದು ನಕ್ಸಲರು ಹೇಳಿದ್ದಾರೆ.

    1600 ಮಂದಿ ನಕ್ಸಲರ ಪತ್ತೆಗೆ ಸರ್ಕಾರ ನಗದು ಬಹುಮಾನವನ್ನು ಘೋಷಿಸಿದೆ. ಈ ಪೈಕಿ ನಕ್ಸಲ್ ತೊರೆದು ಬಂದವರಿಗೆ ಸರ್ಕಾರ ಕೌಶಲ್ಯ ಅಭಿವೃದ್ಧಿಯನ್ನು ಕಲಿಸಲಿದೆಎಂದು ದಾಂತೇವಾಡದ ಪೊಲೀಸ್ ಅಧಿಕಾರಿ ಅಭಿಷೇಕ್ ಪಲ್ಲವ ಹೇಳಿದ್ದಾರೆ.

    ಸದ್ಯ ಅವರಿಗೆ ತಲಾ 10 ಲಕ್ಷ ರೂ. ನೆರವು ನೀಡಲಾಗುತ್ತದೆ. ಮುಂದೆ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ಯೋಜನೆಯ ಅಡಿಯಲ್ಲಿ ಹೆಚ್ಚಿನ ನೆರವು ದೊರೆಯುತ್ತದೆ. ದಾಂತೇವಾಡದಲ್ಲಿ ಈವರೆಗೆ 272 ಮಂದಿ ನಕ್ಸಲರು ಶರಣಾಗಿದ್ದಾರೆ ಎಂದು ಹೇಳಿದ್ದಾರೆ.

  • ನಕ್ಸಲ್ ಚಟುವಟಿಕೆ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಯುತ್ತಿದೆ – ಐಜಿ ವಿಫುಲ್ ಕುಮಾರ್

    ನಕ್ಸಲ್ ಚಟುವಟಿಕೆ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಯುತ್ತಿದೆ – ಐಜಿ ವಿಫುಲ್ ಕುಮಾರ್

    ಮಡಿಕೇರಿ: ಕೇರಳ-ಕೊಡಗಿನ ಗಡಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ವಿರುದ್ಧ ಎಎನ್‍ಎಫ್, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಐಜಿ ವಿಫುಲ್ ಕುಮಾರ್ ಹೇಳಿದ್ದಾರೆ.

    ಮಡಿಕೇರಿಯಲ್ಲಿ ಮಾದಕ ವಸ್ತು, ಅಪರಾಧ ತಡೆ ಕುರಿತು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜಿಲ್ಲೆಯ ಜನತೆ ಆತ್ಮಶಿಸ್ತಿನಿಂದ ವರ್ತಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದರು.

    ಕೊರೊನಾ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಆದ್ದರಿಂದ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಇದೊಂದು ಜನಾಂದೋಲನದ ರೀತಿಯಲ್ಲಿ ಆಗಬೇಕಿದೆ. ಹಾಗೆಯೇ ರಾಜ್ಯದಲ್ಲಿ ಮಾದಕ ವಸ್ತುಗಳನ್ನು ಬೇರು ಸಹಿತ ಕಿತ್ತು ಹಾಕಲು ಸಂಕಲ್ಪ ಮಾಡಿದ್ದೇವೆ. ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆಯೂ ಅರಿವು ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.

    ಇದೇ ವೇಳೆ ಪೊಲೀಸ್ ಇಲಾಖೆಯಿಂದ 112 ತುರ್ತು ಸಹಾಯ ದೂರವಾಣಿಯನ್ನು ಪ್ರಾರಂಭಿಸಲಾಗಿದ್ದು, ಜನತೆ ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

  • 25 ವರ್ಷಗಳ ನಂತರ ರಾಯಚೂರಿನಲ್ಲಿ ಮಾಜಿ ನಕ್ಸಲನ ಸೆರೆ

    25 ವರ್ಷಗಳ ನಂತರ ರಾಯಚೂರಿನಲ್ಲಿ ಮಾಜಿ ನಕ್ಸಲನ ಸೆರೆ

    ರಾಯಚೂರು: 25 ವರ್ಷಗಳ ನಂತರ ರಾಯಚೂರಿನಲ್ಲಿ ಮಾಜಿ ನಕ್ಸಲನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    1994, 2001ರ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿನೋದ ಅಲಿಯಾಸ್ ದೊಡ್ಡಪಾಳ್ಯ ನರಸಿಂಹಮೂರ್ತಿ ಅಲಿಯಾಸ್ ಮೂರ್ತಿ ಬಂಧಿತ ಆರೋಪಿ. ಸ್ವರಾಜ್ ಇಂಡಿಯಾ ಪಕ್ಷದಲ್ಲಿ ಸಕ್ರಿಯನಾಗಿರುವ ವಿನೋದ್ ಪತ್ರಕರ್ತನೂ ಆಗಿದ್ದ, ಹಲವಾರು ಹೋರಾಟಗಳಲ್ಲೂ ಭಾಗಿಯಾದ್ದ.

    ವಾರೆಂಟ್ ಇದ್ದರೂ 2001ರ ನಂತರ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ಬಂಧಿಸಿ ರಾಯಚೂರಿನ 3ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಈತನ ವಿರುದ್ಧ ರಾಯಚೂರು ಗ್ರಾಮೀಣ, ಯಾಪಲದಿನ್ನಿ, ನೇತಾಜಿನಗರ ಪೊಲೀಸ್ ಠಾಣೆಗಳಲ್ಲಿ ಒಟ್ಟು ನಾಲ್ಕು ಪ್ರಕರಣ ದಾಖಲಾಗಿದ್ದವು.

    ಕೊಲೆಯತ್ನ, ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣಗಳಡಿ ಈತ ಆರೋಪಿಯಾಗಿದ್ದಾನೆ. ಕರ್ನಾಟಕ ವಿಮೋಚನಾ ರಂಗದಲ್ಲಿದ್ದ ವಿನೋದ ಹೆಸರು ಬದಲಾಯಿಸಿಕೊಂಡು ಬೇರೆ ಬೇರೆ ಹೆಸರುಗಳಲ್ಲಿ ಓಡಾಡಿಕೊಂಡಿದ್ದ. ಸ್ಥಳೀಯ ಸಾಕ್ಷಿ ಆಧಾರದಲ್ಲಿ ಗುರುತು ಸಿಕ್ಕಿದ್ದರಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದು ರಾಯಚೂರು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

    ವಿನೋದ್ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ, ಪ್ರಗತಿಪರ ಎನ್ನುವ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ. ಅವರು ತಲೆ ಮರೆಸಿಕೊಂಡಿರಲಿಲ್ಲ ವಿವಿಧ ಸಮಾಜಿಕ ಸಂಘಟನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೋರಾಟಗಾರ ಜನಶಕ್ತಿ ಸಂಘಟನೆಯ ಕುಮಾರ ಸಮತಾಳ ಹೇಳಿದ್ದಾರೆ.

  • ಮೊದಲು ನಕ್ಸಲನಾಗಿದ್ದೆ ಮತ್ತೆ ನಕ್ಸಲನನ್ನಾಗಿ ಮಾಡಬೇಡಿ – ಅಧಿಕಾರಿಗಳ ವಿರುದ್ಧ ಗಡ್ಕರಿ ಕಿಡಿ

    ಮೊದಲು ನಕ್ಸಲನಾಗಿದ್ದೆ ಮತ್ತೆ ನಕ್ಸಲನನ್ನಾಗಿ ಮಾಡಬೇಡಿ – ಅಧಿಕಾರಿಗಳ ವಿರುದ್ಧ ಗಡ್ಕರಿ ಕಿಡಿ

    ನವದೆಹಲಿ: ನನ್ನನ್ನು ಮತ್ತೆ ನಕ್ಸಲನನ್ನಾಗಿ ಮಾಡಬೇಡಿ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ಕೇರಳದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ವಿಚಾರದಲ್ಲಿ ಸರಿಯಾದ ರೀತಿ ಕೆಲಸ ಮಾಡದ ಅಧಿಕಾರಿಗಳನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಮ್ಮಖದಲ್ಲೆ ತರಾಟೆಗೆ ತೆಗೆದುಕೊಂಡಿರುವ ಅವರು ನನ್ನನ್ನು ಮತ್ತೆ ನಕ್ಸಲನನ್ನಾಗಿ ಮಾಡಬೇಡಿ ಎಂದು ಅವಾಜ್ ಹಾಕಿದ್ದಾರೆ.

    ನಾನು ಮೊದಲು ನಕ್ಸಲನಾಗಿದ್ದೆ. ನಂತರ ನಾನು ಆರ್‍ಎಸ್‍ಎಸ್ ಸೇರಿಕೊಂಡಿದ್ದು, ನೀವು ಮತ್ತೆ ನನ್ನ ನಕ್ಸಲನನ್ನಾಗಿ ಮಾಡಬೇಡಿ. ಇದೇ ವಿಚಾರಕ್ಕೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು ಐದು ಬಾರಿ ನನ್ನ ಬಳಿ ಬಂದಿದ್ದಾರೆ. ನೀವು ಮಾಡಿದ ಕೆಲಸಕ್ಕೆ ನನಗೆ ನಾಚಿಕೆಯಾಗುತ್ತಿದೆ. ಈ ವಿಚಾರದಲ್ಲಿ ನಿಮಗೆ ತೊಂದರೆ ಕೊಡುವವರು ಯಾರು ಎಂದು ನನಗೆ ಗೊತ್ತಿದೆ. ಈ ಇಲಾಖೆಗೆ ನಾನು ಮುಖ್ಯಸ್ಥ. ಇಂದು ಸಂಜೆಯೊಳಗೆ ಆ ಕೆಲಸ ಆಗಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

    ನಿತಿನ್ ಗಡ್ಕರಿಯವರು ಈ ಸೂಚನೆ ನೀಡಿದ ತಕ್ಷಣ ಕೇರಳದ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಭೂಸ್ವಾಧೀನಕ್ಕೆ ಇದ್ದ ಅಡೆತಡೆಗಳನ್ನು ತೆಗೆದುಹಾಕಲಾಗಿದೆ. ಹೆದ್ದಾರಿ ಅಭಿವೃದ್ಧಿ ಯೋಚನೆಗೆ ಕೇರಳದ ರಾಜ್ಯ ಸರ್ಕಾರ ಶೇ.25 ರಷ್ಟು ವೆಚ್ಚವನ್ನು ಭರಿಸುವುದಾಗಿ ಹೇಳಿದ್ದರಿಂದ ಆರ್ಥಿಕ ಕಡತವನ್ನು ಕೇಂದ್ರ ಸರ್ಕಾರ ಮಂಗಳವಾರ ಸಂಜೆ ಬಿಡುಗಡೆ ಮಾಡಿದೆ.

    ಈ ಹಿಂದೆ ಕೇರಳದಲ್ಲಿ ಹೆದ್ದಾರಿ ಅಭಿವೃದ್ಧಿ ಮಾಡುವುದಕ್ಕೆ ವಿಳಂಬವಾಗುತ್ತಿದೆ. ಇದಕ್ಕೆ ಸಂಘ ಪರಿಹಾರವೇ ಕಾರಣ ಎಂದು ಪಿಣರಾಯಿ ವಿಜಯನ್ ವಾಗ್ದಾಳಿ ಮಾಡಿದ್ದರು. ಕೇರಳದಲ್ಲಿ ನಮ್ಮ ಪಕ್ಷವನ್ನು ನಾಶ ಮಾಡುವ ನಿಟ್ಟಿನಲ್ಲಿ ಸಂಘ ಪರಿವಾರ ಕೆಲಸ ಮಾಡುತ್ತಿದೆ. ಈ ಕಾರಣದಿಂದ ನಮ್ಮ ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಯೋಜನೆಗಳನ್ನು ತಡೆಹಿಡಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

    ಕೇರಳ ಬಿಜೆಪಿಯ ರಾಜ್ಯಾಧ್ಯಕ್ಷರಾದ ಶ್ರೀಧರನ್ ಪಿಳ್ಳೈ ಅವರು ಕೇಂದ್ರ ಹೆದ್ದಾರಿ ಅಭಿವೃದ್ಧಿ ನಿಗಮಕ್ಕೆ ರಹಸ್ಯ ಪತ್ರ ಬರೆದಿದ್ದು, ನಮ್ಮ ರಾಜ್ಯಕ್ಕೆ ಬರುವ ಅಭಿವೃದ್ಧಿ ಯೋಜನೆಗಳನ್ನು ತಡೆಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪಿಣರಾಯಿ ವಿಜಯನ್ ಆರೋಪ ಮಾಡಿದ್ದರು. ನಮ್ಮ ರಾಜ್ಯದ ಜನರು ಟ್ರಾಫಿಕ್ ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಳ್ಳಬೇಕು ಎಂದು ಬಯಸುವವರು ವಿಕೃತ ಮನಸ್ಥಿತಿ ಇರುವವರು ಎಂದು ಹೇಳಿದ್ದರು.