Tag: ನಗರಪಾಲಿಕೆ

  • ಕಾಲಮಿತಿಯೊಳಗೆ ಜನನ-ಮರಣ ಪ್ರಮಾಣ ಪತ್ರ ವಿತರಿಸಿ – ಡಿಸಿ ಖಡಕ್‌ ಸೂಚನೆ

    ಕಾಲಮಿತಿಯೊಳಗೆ ಜನನ-ಮರಣ ಪ್ರಮಾಣ ಪತ್ರ ವಿತರಿಸಿ – ಡಿಸಿ ಖಡಕ್‌ ಸೂಚನೆ

    ಚಿಕ್ಕಬಳ್ಳಾಪುರ: ಜನನ ಮತ್ತು ಮರಣ ಪ್ರಕರಣಗಳ (Birth And Death Certificate) ನೋಂದಣಿಯನ್ನ ನಿಗದಿತ ಕಾಲಮಿತಿಯೊಳಗೆ ತಂತ್ರಾಂಶಗಳಲ್ಲಿ ನೋಂದಾಯಿಸಿ ಪ್ರಮಾಣ ಪತ್ರಗಳನ್ನ ವಿತರಿಸುವ ವ್ಯವಸ್ಥೆ ಆಗಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಜನನ ಮರಣ ನೋಂದಣಿಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ನಿಗದಿತ ಕಾಲಮಿತಿಯಲ್ಲಿ ಪ್ರಮಾಣ ಪತ್ರ ವಿತರಣೆ ಆಗಬೇಕು. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿರುವ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ನೋಂದಣಿ ಮಾಡುವ ಸಕ್ಷಮ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ವೈಖರಿಯನ್ನ ಪರಿಶೀಲಿಸಿ ಸಕಾಲಕ್ಕೆ ವರದಿ ನೀಡಬೇಕು ಎಂದು ಎಂದು ತಾಕೀತು ಮಾಡಿದ್ದಾರೆ. ಇದನ್ನೂಓದಿ: ಯಾರೋ ಹುಡುಗರು ಮಾಡಿದ್ದಾರೆ, ಟ್ವೀಟ್‌ ವಿಥ್‌ ಡ್ರಾ ಮಾಡಿಸಿದ್ದೇನೆ: ಡಿಕೆ ಶಿವಕುಮಾರ್‌

    ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಘಟಿಸುವ ಜನನ, ಮರಣ ಪ್ರಕರಣಗಳನ್ನ ಸಂಬಂಧಪಟ್ಟ ತಂತ್ರಾಂಶದಲ್ಲಿ ನಮೂದಿಸಿ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಆನ್‌ಲೈನ್‌ ಮೂಲಕ ರವಾನಿಸಬೇಕು. ಸದರಿ ವಿವರವನ್ನ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿರುವ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಪರಿಶೀಲಿಸಿ ಪ್ರಮಾಣ ಪತ್ರಗಳನ್ನ ನಿಗದಿತ ಕಾಲಮಿತಿಯೊಳಗೆ ವಿತರಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂಓದಿ: ನಾರಾಯಣಪುರದ ಬಸವಸಾಗರ ಜಲಾಶಯ ಬಹುತೇಕ ಭರ್ತಿ – ರೈತರ ಮೊಗದಲ್ಲಿ ಮಂದಹಾಸ

    ಜನನ ಮತ್ತು ಮರಣ ಪ್ರಕರಣಗಳನ್ನ ಸ್ಥಳೀಯ ಆಡಳಿತಾಧಿಕಾರಿಗಳು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯ ಘಟನೆಗಳ ಮಾಹಿತಿಯನ್ನ ಪಡೆದು ಪರಿಶೀಲಿಸಿ ತಂತ್ರಾಂಶದಲ್ಲಿ ನೋಂದಾಣಿ ಮಾಡುವ ಜೊತೆಗೆ ಪ್ರಮಾಣ ಪತ್ರಗಳನ್ನ ವಿತರಿಸುವ ಕೆಲಸವನ್ನೂ ಸಮರ್ಪಕವಾಗಿ ನಿರ್ವಹಿಸಬೇಕು. ಈ ನಿಯಮ ಉಲ್ಲಂಘಿಸುವ ಯಾವುದೇ ಸಂಸ್ಥೆ, ಅಧಿಕಾರಿ ಹಾಗೂ ಗ್ರಾಮಲೆಕ್ಕಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕ್ರಮಕೈಗೊಳ್ಳಬೇಕು. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ನಮೂದು ಕಾರ್ಯದ ಮೇಲೆ ಹೆಚ್ಚು ನಿಗಾವಹಿಸಬೇಕು ಎಂದು ಎಚ್ಚರಿಸಿದ್ದಾರೆ.

    ಸಭೆಯಲ್ಲಿ 2021-22ನೇ ಸಾಲಿನ ಜಿಲ್ಲೆಯ ಅಂಕಿ ಅಂಶಗಳ ನೋಟ ಮತ್ತು ಸಾಮಾಜಿಕ ಹಾಗೂ ಆರ್ಥಿಕ ಅವಲೋಕನ ಪುಸ್ತಕ, 2022-23ನೇ ಸಾಲಿನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬೆಳೆ ಅಂದಾಜು ಸಮೀಕ್ಷೆಯ ಕಾರ್ಯ ಯೋಜನಾ ಪಟ್ಟಿಯನ್ನ ಬಿಡುಗಡೆ ಮಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿ ಪಾಲಿಕೆ ಮೇಯರ್ ಆಗಿ ಶೋಭಾ ಅವಿರೋಧ ಆಯ್ಕೆ, ರೇಷ್ಮಾ ಉಪಮೇಯರ್

    ಬೆಳಗಾವಿ ಪಾಲಿಕೆ ಮೇಯರ್ ಆಗಿ ಶೋಭಾ ಅವಿರೋಧ ಆಯ್ಕೆ, ರೇಷ್ಮಾ ಉಪಮೇಯರ್

    ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ (Belagavi City Corporation) ಮೇಯರ್ (Mayor) ಆಗಿ ಮರಾಠ ಸಮುದಾಯದ (Marathi Community) ಶೋಭಾ ಸೋಮನಾಚೆ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಬಿಜೆಪಿಯ ರೇಷ್ಮಾ ಪಾಟೀಲ್ ಆಯ್ಕೆಗೊಂಡಿದ್ದಾರೆ ಎಂದು ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಎಂ.ಜಿ ಹಿರೇಮಠ ಘೋಷಿಸಿದ್ದಾರೆ.

    ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಪಮೇಯರ್ ಆಗಿ ಬಿಜೆಪಿಯ ರೇಷ್ಮಾ ಪಾಟೀಲ್ ಆಯ್ಕೆಯಾಗಿದ್ದಾರೆ. ರೇಷ್ಮಾ ಪಾಟೀಲ್‌ಗೆ 42 ಮತಗಳು ಪಡೆದರೆ, ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಂಇಎಸ್ (MES) ಅಭ್ಯರ್ಥಿ ವೈಶಾಲಿ ಭಾತಕಾಂಡೆ ಕೇವಲ 4 ಮತ ಪೆಡೆದು ತೀವ್ರ ಮುಖಭಂಗ ಅನುಭವಿಸಿದ್ದಾರೆ.

    ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಪ್ರಕ್ರಿಯೆ ವೇಳೆ ಪ್ರಮಾಣ ವಚನ ಸ್ವೀಕರಿಸಿ ಕಾಂಗ್ರೆಸ್ (Congress) ಸದಸ್ಯರು ಹೊರನಡೆದು, ಚುನಾವಣೆಗೆ ಬಹಿಷ್ಕಾರ ಹಾಕಿದರು. ಇದನ್ನೂ ಓದಿ: ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಸತೀಶ್ ಜಾರಕಿಹೊಳಿ

    ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕನ್ನಡ ಭಾಷಿಕ ಸದಸ್ಯರಿಗೆ ಮೇಯರ್ ಸ್ಥಾನ ನೀಡಲು ಕನ್ನಡಪರ ಸಂಘಟನೆಗಳ ಆಗ್ರಹಿಸಿದ್ದವು. ಈ ನಡುವೆ ಮೇಯರ್ ಸ್ಥಾನಕ್ಕಾಗಿ ಲಿಂಗಾಯತ, ಮರಾಠಾ ಸಮುದಾಯಗಳ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಇದನ್ನೂ ಓದಿ: ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ಪೌರ ಕಾರ್ಮಿಕ ಸಾವು!

    ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ಪೌರ ಕಾರ್ಮಿಕ ಸಾವು!

    ರಾಯಪುರ: ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿಂದು `ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಅಂಗವಾಗಿ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ 36 ವರ್ಷದ ಸ್ಥಳೀಯ ನಗರ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಮೃತ ಕಾರ್ಮಿಕನನ್ನು ಸುಮನ್ ತಿಗ್ಗಾ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಪ್ರತೀಕ್ಷಾ ಬಸ್ ನಿಲ್ದಾಣದಲ್ಲಿ ಮತ್ತೊಬ್ಬ ಕಾರ್ಮಿಕನೊಂದಿಗೆ ರಾಷ್ಟ್ರಧ್ವಜವನ್ನು ಕಟ್ಟುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಮಣೇಂದ್ರಗಢ ಉಪವಿಭಾಗೀಯ ಪೊಲೀಸ್ ಅಧಿಕಾರಿ ರಾಕೇಶ್ ಕರ‍್ರೆ ಹೇಳಿದ್ದಾರೆ. ಇದನ್ನೂ ಓದಿ: ಕೇವಲ ತ್ರಿವರ್ಣ ಧ್ವಜ ಹಾರಿಸುವುದರಿಂದ ನಾವು ದೇಶಭಕ್ತರಾಗುವುದಿಲ್ಲ: ಉದ್ಧವ್ ಠಾಕ್ರೆ ಟಾಂಗ್

    ಘಟನೆಯಲ್ಲಿ ಸುಮನ್ ತಿಗ್ಗಾ ಸಹೋದ್ಯೋಗಿ ರಾಮಕೃಪಾಲ್ ಸಿಂಗ್ (35) ಸಹ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಮಿಕರ ಸಂಘ ತಿಗ್ಗಾ ಸಾವಿನ ನಂತರ ಪ್ರತಿಭಟನೆ ನಡೆಸಿದ್ದು, ಮೃತನ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಕರ‍್ರೆ ಅವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಖಭಂಗ, ಬಿಜೆಪಿಯಿಂದ ಸ್ಪರ್ಧಿಸಿದ ಗಂಡ-ಹೆಂಡತಿ ಜಯಭೇರಿ

    ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಖಭಂಗ, ಬಿಜೆಪಿಯಿಂದ ಸ್ಪರ್ಧಿಸಿದ ಗಂಡ-ಹೆಂಡತಿ ಜಯಭೇರಿ

    ದಾವಣಗೆರೆ: ಮಹಾನಗರ ಪಾಲಿಕೆ ಉಪ ಚುನಾವಣೆಯ 28 ಹಾಗೂ 37ನೇ ವಾರ್ಡ್‌ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ.

    ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನಪಟ್ಟು ಪ್ರಚಾರ ಮಾಡಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನಗೆ ತೀವ್ರ ಮುಖಭಂಗ ಆಗಿದೆ. ಜೆ.ಎನ್.ಶ್ರೀನಿವಾಸ್ ಹಾಗೂ ಅವರ ಪತ್ನಿ ಶ್ವೇತ ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಸಲಾಗಿತ್ತು. 28ನೇ ವಾರ್ಡಿನಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಹುಲ್ಲುಮನಿ ಗಣೇಶ್ ಅವರು 1,884 ಮತಗಳನ್ನು ಪಡೆದರೆ, ಬಿಜೆಪಿಯ ಶ್ರೀನಿವಾಸ್ 2,565 ಮತ ಪಡೆದು 681 ಮತಗಳ ಅಂತರದಿಂದ ಜಯಭೇರಿ ಬಾರಿಸಿದರು. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    37ನೇ ವಾರ್ಡ್‌ನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶ್ವೇತಾ ಶ್ರೀನಿವಾಸ್ 2,096 ಮತ ಪಡೆದರೆ, ಕಾಂಗ್ರೆಸ್ ರೇಖಾರಾಣಿ 1,303 ಮತಗಳನ್ನಷ್ಟೇ ಪಡೆದು ಸೋಲೊಪ್ಪಿಕೊಂಡರು. ಶ್ವೇತಾ ಶ್ರೀನಿವಾಸ್ 793 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದು, ನಗರಪಾಲಿಕೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯಾಬಲವೂ ಹೆಚ್ಚಾಗಿದೆ. ಇದನ್ನೂ ಓದಿ: ಶೀಲ ಶಂಕಿಸಿ ತಲೆ ಹಿಡಿದು ನೆಲಕ್ಕೆ ಜಜ್ಜಿದ ಪತಿ – ಸ್ಥಳದಲ್ಲೇ ಪತ್ನಿ ಸಾವು

    ಸೆಕ್ಷನ್ 144 ಉಲ್ಲಂಘನೆ: ನಗರಪಾಲಿಕೆ ಉಪಚುನಾವಣೆ ಹಿನ್ನೆಲೆಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮತ ಎಣಿಕೆ ಕೇಂದ್ರದ ಮುಂಭಾಗವೇ ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿದರು. ಕಾರ್ಯಕರ್ತರನ್ನು ನಿಯಂತ್ರಿಸುವಲ್ಲಿ ಪೊಲೀಸರು ಹೈರಾಣಾದರು.

  • ಸ್ಥಳೀಯ ಚುನಾವಣೆಗೆ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದ ಬಿಜೆಪಿ

    ಸ್ಥಳೀಯ ಚುನಾವಣೆಗೆ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದ ಬಿಜೆಪಿ

    ಚೆನ್ನೈ: ಸ್ಥಳೀಯ ಚುನಾವಣೆಗೆ ತಮಿಳುನಾಡಿನಲ್ಲಿ ಬಿಜೆಪಿ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದೆ.

    ತಮಿಳುನಾಡಿನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲು ಬಿಜೆಪಿ ಮತ್ತು ಎಐಎಡಿಎಂಕೆ  ನಿರ್ಧರಿಸಿದೆ. ಇದೀಗ 2 ಪಕ್ಷಗಳೂ ಮತ್ತೋಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಲವು ವಾರ್ಡ್‍ಗಳಲ್ಲಿ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದೆ.

    ರಾಜ್ಯದ 12,838 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇದರಲ್ಲಿ 1,374 ನಗರಪಾಲಿಕೆ ವಾರ್ಡ್‍ಗಳು, 3,843 ಪುರಸಭೆ ವಾರ್ಡ್‍ಗಳು, 7,621 ಪಟ್ಟಣ ಪಂಚಾಯತ್ ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದೆ. ಸೌಥ್ ಚೆನ್ನೈನಿಂದ ಎಐಎಡಿಎಂಕೆ ಅಭ್ಯರ್ಥಿ ಎನ್,ಜಯದೇವಿ ನಾಮಿನೇಷನ್ ಸಲ್ಲಿಸಿದ್ದಾರೆ. ತಿರುವಿಕಾ ನಗರದ ವಾರ್ಡ್ ನಂಬರ್ 75ರ ಬಿಜೆಪಿ ಅಭ್ಯರ್ಥಿಯಾಗಿ ರಾಜಮ್ಮ ಚುನಾವಣಾ ಕಣಕ್ಕೆ ಇಳಿದಿದ್ದಾರೆ.

    ಬಿಜೆಪಿ ಅಭ್ಯರ್ಥಿ ರಾಜಮ್ಮ ಮಾತನಾಡಿ, ನನ್ನ ಸಮುದಾಯಕ್ಕೆ ನಾನು ಒಳ್ಳೆಯ ಮಾದರಿಯಾಗುತ್ತೇನೆ. ನಾನು ಆಯ್ಕೇಯಾದರೆ ಕುಡಿಯುವ ನೀರು, ಚರಂಡಿ ಸಮಸ್ಯೆ ಸೇರಿದಂತೆ ಇಂತಹ ಹಲವುಬೇಡಿಕೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಓವೈಸಿಗೆ ಝಡ್ ಮಾದರಿಯ ಭದ್ರತೆ ನೀಡಿದ ಕೇಂದ್ರ ಸರ್ಕಾರ

    ಎಐಎಡಿಎಂಕೆ ಅಭ್ಯರ್ಥಿ ತೃತೀಯಲಿಂಗಿ ಜಯದೇವಿ, ನಾನು ಆಯ್ಕೆಯಾದರೆ ನನ್ನ ವಾರ್ಡ್‍ನ್ನು ಇತರರಿಗೆ ಮಾದರಿಯಾಗುವ ರೀತಿ ಮಾಡುತ್ತೇನೆ ಎಂದು ಜನರಿಗೆ ಭರವಸೆ ನೀಡಿದ್ದಾರೆ.

  • ಚಂಡೀಗಢ ಬಿಜೆಪಿ, ಕಾಂಗ್ರೆಸ್‍ಗೆ ಮುಖಭಂಗ – ನಗರಪಾಲಿಕೆ ಚುನಾವಣೆಯಲ್ಲಿ ಎಎಪಿ ಮೇಲುಗೈ

    ಚಂಡೀಗಢ ಬಿಜೆಪಿ, ಕಾಂಗ್ರೆಸ್‍ಗೆ ಮುಖಭಂಗ – ನಗರಪಾಲಿಕೆ ಚುನಾವಣೆಯಲ್ಲಿ ಎಎಪಿ ಮೇಲುಗೈ

    ಚಂಡೀಗಢ: ನಗರಪಾಲಿಕೆ ಚುನಾವಣೆಯಲ್ಲಿ ಆಡಳಿತ ರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಗಿಂತಲೂ ಅಧಿಕ ಸ್ಥಾನವನ್ನು ಗೆಲ್ಲುವ ಮೂಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸಿದೆ.

    ಚಂಡೀಗಢ ನಗರಪಾಲಿಕೆಯ 35 ವಾರ್ಡ್‍ಗಳಿಗೆ ನಡೆದ ಚುನಾವಣೆಯಲ್ಲಿ 14 ಸ್ಥಾನಗಳನ್ನು ಎಎಪಿ, 12 ಬಿಜೆಪಿ, 8 ಕಾಂಗ್ರೆಸ್ ಮತ್ತು 1 ಸ್ಥಾನವನ್ನು  ಅಕಾಲಿಕದಳ ಗೆದ್ದುಕೊಂಡಿದೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾದಂತಾಗಿದೆ. ಇದನ್ನೂ ಓದಿ: ಯೋಗಿ ಮತ್ತೆ ಅಧಿಕಾರಕ್ಕೆ ಬಂದರೆ ಅಸಾದುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆ – ಯುಪಿ ಸಚಿವ

    ಈ ಬಗ್ಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಪಂಜಾಬ್‍ನಲ್ಲಿ ಬದಲಾವಣೆಯ ಗಾಳಿ ಬೀಸಿದೆ. ಜನ ಭ್ರಷ್ಟ ರಾಜಕೀಯ ಪಕ್ಷವನ್ನು ತಿರಸ್ಕರಿಸಿ ಎಎಪಿಗೆ ಮಣೆ ಹಾಕಿದ್ದಾರೆ. ಇದು ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ಸೂಚನೆ. ಪಂಜಾಬ್ ಬದಲಾವಣೆಗೆ ಸಿದ್ಧಗೊಂಡಿದೆ ಎಂದು ಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ – ರಾತ್ರಿ ಅನಗತ್ಯ ಓಡಾಡಿದ್ರೆ ಬೀಳುತ್ತೆ ಕೇಸ್

    2016ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 77%, ಕಾಂಗ್ರೆಸ್ 15%, ಅಕಾಲಿಕದಳ 4% ಗೆದ್ದಿತ್ತು. ಆದರೆ ಎಎಪಿ ಒಂದೇ ಒಂದು ಸ್ಥಾನವನ್ನು ಜಯಿಸಿರಲಿಲ್ಲ. ಈ ಬಾರಿ ಎಎಪಿ 40%, ಬಿಜೆಪಿ 34%, ಕಾಂಗ್ರೆಸ್ 23%, ಅಕಾಲಿಕದಳ 3% ಸ್ಥಾನಗಳನ್ನು ಗೆದ್ದಿದೆ. ಈ ಮೂಲಕ ಎಎಪಿ ದೊಡ್ಡ ಮಟ್ಟದ ಯಶಸ್ಸುಗಳಿಸಿದೆ.

    ಈ ಚುನಾವಣೆಯ ಫಲಿತಾಂಶವನ್ನು ಗಮನಿಸುತ್ತಿದ್ದಂತೆ 2022ರ ಆರಂಭದಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಉತ್ತಮವಾಗಿ ಅಧಿಕಾರವನ್ನು ನಿರ್ವಹಿಸುತ್ತಿರುವ ಎಎಪಿ ಪಂಜಾಬ್‍ನಲ್ಲಿ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿದೆ. ಇದನ್ನೂ ಓದಿ: 15 ರಿಂದ 18 ವರ್ಷದವರು ಜ. 1ರಿಂದ ಕೋವಿನ್‌ನಲ್ಲಿ ಲಸಿಕೆಗೆ ಹೆಸರು ನೋಂದಾಯಿಸಬಹುದು

  • 60ಕ್ಕೂ ಹೆಚ್ಚು ಮಂದಿ ಜೀವಕ್ಕೆ ಕಂಟಕ ತಂದಿಟ್ಟ ಹುಚ್ಚು ನಾಯಿ!

    60ಕ್ಕೂ ಹೆಚ್ಚು ಮಂದಿ ಜೀವಕ್ಕೆ ಕಂಟಕ ತಂದಿಟ್ಟ ಹುಚ್ಚು ನಾಯಿ!

    ಸೇಲಂ: ಹುಚ್ಚು ಹಿಡಿದಿದ್ದ ಬೀದಿ ನಾಯಿಯೊಂದು ಬರೋಬ್ಬರಿ 60ಕ್ಕೂ ಹೆಚ್ಚು ಮಂದಿ ಪಾದಚಾರಿಗಳ ಮೇಲೆ ದಾಳಿ ನಡೆಸಿ, ಅವರನ್ನು ಆಸ್ಪತ್ರೆಯತ್ತ ಮುಖಮಾಡುವಂತೆ ಮಾಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.

    ಮೊದಲು ಕಿಚ್ಚಪಾಳ್ಯಂ ಪ್ರದೇಶದಲ್ಲಿ ಕಾಣಿಸಿಕೊಂಡ ಹುಚ್ಚು ನಾಯಿ ತನ್ನಷ್ಟಕ್ಕೆ ಬೀದಿ ಬೀದಿಗಳಲ್ಲಿ ಓಡಾಡುತ್ತಿತ್ತು. ಆದರೆ ಏಕಾಏಕಿ ಶುಕ್ರವಾರದಂದು ದಾರಿಹೋಕರಿಗೆ ಕಚ್ಚಿದೆ. ಬಳಿಕ ಸೇಲಂನ ಗಾಂಧಿ ಮಹಾನ್ ಪ್ರದೇಶ, ಕಲರಂಪಟ್ಟಿ, ಕುರಿಂಜಿನಗರ, ನಾರಾಯಣನ್ ನಗರ ಹಾಗೂ ಪಂಚಪಟ್ಟಿ ಪ್ರದೇಶಕ್ಕೆ ತೆರಳಿ ಸುಮಾರು 60ಕ್ಕೂ ಹೆಚ್ಚು ಮಂದಿ ಪಾದಚಾರಿಗಳಿಗೆ ಕಚ್ಚಿ ಹಲ್ಲೆ ಮಾಡಿದೆ.

    ಕಣ್ಣಿಗೆ ಕಂಡವರ ಮೇಲೆಲ್ಲಾ ಹುಚ್ಚು ನಾಯಿ ಎಗರಿ ಕಚ್ಚಿದಾಗ ರೊಚ್ಚಿಗೆದ್ದ ಸ್ಥಳೀಯರು, ತಕ್ಷಣ ನಾಯಿಯನ್ನು ಹೊಡೆದು ಕೊಂದಿದ್ದಾರೆ. ಮೊದಲು ಕಿಚ್ಚಪಾಳ್ಯಂ ಪ್ರದೇಶದಲ್ಲಿ ಓಡಾಡುತ್ತಿತ್ತು, ಆದರೆ ಏಕಾಏಕಿ ಈ ರೀತಿ ಕಚ್ಚಿ ನಾಗರೀಕರನ್ನು ಆಸ್ಪತ್ರೆ ಪಾಲು ಮಾಡಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಆ ಬಳಿಕ ನಾಯಿ ಕಡಿತಕ್ಕೆ ತುತ್ತಾದವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, 2 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಬೀದಿಗಳಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ ಎಂದು ದೂರು ನೀಡಿದ್ದರೂ ಸೇಲಂ ನಗರಪಾಲಿಕೆ ಕ್ಯಾರೆ ಎನ್ನುತ್ತಿಲ್ಲ. ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ನಗರಪಾಲಿಕೆ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ದೂರು ನೀಡಲು ಹೋಗಿದ್ದ ವ್ಯಕ್ತಿಯ ಮೇಲೆ ಕಾಂಗ್ರೆಸ್ ಸದಸ್ಯನಿಂದ ಹಲ್ಲೆ

    ದೂರು ನೀಡಲು ಹೋಗಿದ್ದ ವ್ಯಕ್ತಿಯ ಮೇಲೆ ಕಾಂಗ್ರೆಸ್ ಸದಸ್ಯನಿಂದ ಹಲ್ಲೆ

    ಕೋಲಾರ: ಸಮಸ್ಯೆ ಕುರಿತು ದೂರು ನೀಡಲು ಹೋಗಿದ್ದ ವ್ಯಕ್ತಿಯ ಮೇಲೆ ಕೆಜಿಎಫ್ ನಗರಸಭೆಯ ಕಾಂಗ್ರೆಸ್ ಸದಸ್ಯನೋರ್ವ ಹಲ್ಲೆ ಮಾಡಿ ಗೂಂಡಾ ವರ್ತನೆ ತೋರಿದ ಘಟನೆ ನಗರಸಭೆ ಆಯುಕ್ತರ ಕಚೇರಿಯಲ್ಲಿ ನಡೆದಿದೆ.

    ಸ್ಥಳೀಯ ನಿವಾಸಿ ಭಾಸ್ಕರ್ ಹಲ್ಲೆಗೊಳಗಾದ ವ್ಯಕ್ತಿ. ಕಾಲುವೆ ತೆರವುಗೊಳಿಸುವಂತೆ ಕೆಜಿಎಫ್ ನಗರಸಭೆಗೆ ಭಾಸ್ಕರ್ ದೂರು ನೀಡಲು ತೆರಳಿದ್ದರು. ಈ ವೇಳೆ ನಗರಸಭೆ ವಾರ್ಡ್ ನಂ 33 ರ ಕಾಂಗ್ರೆಸ್ ಸದಸ್ಯ ಸ್ಟಾನ್ಲಿ ದೂರು ನೀಡಲು ಬಂದಿದ್ದ ಭಾಸ್ಕರ್ ಮೇಲೆ ಮನಬಂದತೆ ಹಲ್ಲೆ ನಡೆಸಿದ್ದಾನೆ. ಇದಲ್ಲದೇ ಆತನ ಸಹಚರರು ಕೂಡ ನಗರಸಭೆ ಆವರಣದಲ್ಲಿ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

    ಗಂಭೀರವಾಗಿ ಗಾಯಗೊಂಡಿದ್ದ ಭಾಸ್ಕರ್ ರನ್ನು ಕೆಜಿಎಫ್‍ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ದೂರು ನೀಡಿದ್ದರೂ ಸಹ ಪೊಲೀಸರು ಎಫ್‍ಐಆರ್ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದು, ಪೊಲೀಸರ ನಡೆಗೆ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಘಟನೆ ರಾಬರ್ಟ್‍ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಸ್ಟಾನ್ಲಿಯು ಭಾಸ್ಕರ್ ಗೆ ನಗರಸಭೆಯ ಆಯುಕ್ತ ಶ್ರೀಕಾಂತ್ ಎದುರಲ್ಲೆ ಹಲ್ಲೆ ನಡೆಸಿದ್ದ ಸಿಸಿಟಿಯ ದೃಶ್ಯಾವಳಿಗಳು ಪಬ್ಲಿಕ್ ಟಿವಿಗೆ ಲಭಿಸಿದೆ. ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿಯಾದ್ರೂ ಪೊಲೀಸರು ಗೂಂಡಾಗಿರಿ ಮೆರೆದ ಕಾಂಗ್ರೆಸ್ ಸದಸ್ಯನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv