Tag: ನಗರಸಭಾ ಸದಸ್ಯ

  • ನಗರಸಭಾ ಸದಸ್ಯನ ಹತ್ಯೆಗೆ ಯತ್ನ – ಮೂವರು ವಶಕ್ಕೆ

    ನಗರಸಭಾ ಸದಸ್ಯನ ಹತ್ಯೆಗೆ ಯತ್ನ – ಮೂವರು ವಶಕ್ಕೆ

    ಚಿಕ್ಕಬಳ್ಳಾಪುರ: ಚಿಂತಾಮಣಿಯ (Chintamani) ನಗರಸಭಾ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.

    ಪೊಲೀಸರು ವಶಕ್ಕೆ ಪಡೆದ ಆರೋಪಿಗಳನ್ನು ಜಾನ್, ದಿನೇಶ್ ಹಾಗೂ ಅರುಣ್ ಎಂದು ಗುರುತಿಸಲಾಗಿದೆ. ಅ.13 ರಂದು ಆರೋಪಿಗಳು ಆಗ್ರಹಾರ ಮುರುಳಿ ಎಂಬವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದರು. ಬಳಿಕ ತೀವ್ರ ಗಾಯಗೊಂಡಿದ್ದ ನಗರಸಭಾ ಸದಸ್ಯನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಪ್ರಾಣಾಪಾಯದಿಂದ ಪಾರಾಗಿರುವ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ತರಬೇತಿ ವಿಮಾನ ಪತನ – ಇಬ್ಬರೂ ಪೈಲಟ್ ಗಂಭೀರ

    ಇದೇ ವಿಚಾರವಾಗಿ ಚಿಂತಾಮಣಿ ನಗರ ಬಂದ್ ಸಹ ಮಾಡಲಾಗಿತ್ತು. ಈಗ ಪೊಲೀಸರು ಮೂವರನ್ನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕವಷ್ಟೇ ಹತ್ಯೆ ಯತ್ನಕ್ಕೆ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊರೊನಾ ವಾರಿಯರ್ಸ್‍ಗೆ ಚಿಕನ್ ಬಿರಿಯಾನಿ ವಿತರಿಸಿದ ಚಿಕ್ಕಬಳ್ಳಾಪುರ ನಗರಸಭಾ ಸದಸ್ಯ

    ಕೊರೊನಾ ವಾರಿಯರ್ಸ್‍ಗೆ ಚಿಕನ್ ಬಿರಿಯಾನಿ ವಿತರಿಸಿದ ಚಿಕ್ಕಬಳ್ಳಾಪುರ ನಗರಸಭಾ ಸದಸ್ಯ

    ಚಿಕ್ಕಬಳ್ಳಾಪುರ: ನಗರದಲ್ಲಿ ಕೊರೊನಾ ಸಂಕಷ್ಟದ ಸಮಯದಲ್ಲಿ ವಾರಿಯರ್ಸ್ ಆಗಿ ಸೇವೆ ಮಾಡುತ್ತಿರುವವರಿಗೆ ಚಿಕ್ಕಬಳ್ಳಾಪುರ ನಗರಸಭಾ ಸದಸ್ಯ ಗಜೇಂದ್ರ ದಂಪತಿಗಳು ಇಂದು ಬಿರಿಯಾನಿ ಮಾಡಿ ವಿತರಿಸಿದ್ದಾರೆ.

    ಚಿಕ್ಕಬಳ್ಳಾಪುರದ ನಾಲ್ಕನೇ ವಾರ್ಡ್ ಸದಸ್ಯರಾಗಿರುವ ಗಜೇಂದ್ರರವರು ಕಳೆದೆರೆಡು ದಿನಗಳಿಂದ ಪೊಲೀಸರು, ಹೋಂ ಗಾಡ್ರ್ಸ್, ನಗರಸಭೆ ಹಾಗೂ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವವರಿಗೆ ಉಚಿತವಾಗಿ ಊಟ, ತಿಂಡಿ ಕೊಡುವ ಕೆಲಸ ಮಾಡುತ್ತಿದ್ದಾರೆ.

    ಇಂದು ವಿಶೇಷವಾಗಿ ಚಿಕನ್ ಬಿರಿಯಾನಿ ವಿತರಿಸಿ ಸಂಕಷ್ಟದ ದಿನಗಳಲ್ಲಿ ಸಮಾಜಕ್ಕಾಗಿ ಸೇವೆ ಸಲ್ಲಿಸುವ ವಾರಿಯರ್ಸ್‍ಗೆ ಜನ ಕೈಲಾದ ಸಹಾಯ ಮಾಡಬೇಕು. ಜೊತೆಗೆ ಕೊರೊನಾ ನಿಯಂತ್ರಣಕ್ಕೆ ಜನ ಸಹಕರಿಸಬೇಕೆಂದು ಮನವಿ ಮಾಡಿದರು. ಪ್ರತಿ ದಿನ ತಮ್ಮ ಮನೆ ಬಳಿಯೇ ಅಡುಗೆ ತಯಾರಿ ಮಾಡಿ ಪ್ಯಾಕ್ ಮಾಡಿ ನಗರದಲ್ಲಿ ಸಂಚಾರ ಮಾಡಿ ಆಸ್ಪತ್ರೆ, ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದವರಿಗೆ ಊಟ ವಿತರಣೆ ಮಾಡುತ್ತಿದ್ದಾರೆ.

  • ಕೊರೊನಾಗೆ ನಗರಸಭೆ ಸದಸ್ಯ ಬಲಿ – ಜನರಲ್ಲಿ ಆತಂಕ

    ಕೊರೊನಾಗೆ ನಗರಸಭೆ ಸದಸ್ಯ ಬಲಿ – ಜನರಲ್ಲಿ ಆತಂಕ

    ಚಿತ್ರದುರ್ಗ: ಕೋವಿಡ್ ಸೋಂಕಿನಿಂದಾಗಿ ನಗರಸಭೆ ಸದಸ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.

    ಮೃತ ವ್ಯಕ್ತಿಯು 40 ವರ್ಷದವರಾಗಿದ್ದು, ಹಿರಿಯೂರು ನಗರಸಭೆಯ ಕಾಂಗ್ರೆಸ್ ಸದಸ್ಯರಾಗಿದ್ದರು. ಮೃತ ಸದಸ್ಯ ಆಗಸ್ಟ್ 07 ರಂದು ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ರಾತ್ರಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗದಿಂದ ಬೆಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

    ಮೃತರು ಕಳೆದ ಬಾರಿ ಪಕ್ಷೇತರರಾಗಿ ಗೆದ್ದು ಉತ್ತಮ ಸೇವೆ ಮಾಡಿದ್ದರು. ಈ ಬಾರಿ ಕಾಂಗ್ರೆಸ್‍ನಿಂದ ಟಿಕೆಟ್ ಪಡೆದು ಎರಡನೇ ಬಾರಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಸರಳದಿಂದ ಎಲ್ಲರ ಸ್ನೇಹಗಳಿಸಿ, ಸ್ನೇಹ ಜೀವಿ ಎನ್ನಿಸಿದ್ದ ಇವರು, ವಾರ್ಡಿನಲ್ಲಿ ಅಪಾರ ಸೇವೆ ಮಾಡಬೇಕೆಂದುಕೊಂಡಿದ್ದರು. ಆದರೆ  ಕೊರೊನಾಗೆ ಬಲಿಯಾಗಿದ್ದಾರೆ.

  • ಪ್ರವಾಸದಿಂದ ವಾಪಸ್ ಬರ್ತಿದ್ದ ನಗರಸಭಾ ಸದಸ್ಯ-ಜೆಡಿಎಸ್ ಮುಖಂಡ ದುರ್ಮರಣ

    ಪ್ರವಾಸದಿಂದ ವಾಪಸ್ ಬರ್ತಿದ್ದ ನಗರಸಭಾ ಸದಸ್ಯ-ಜೆಡಿಎಸ್ ಮುಖಂಡ ದುರ್ಮರಣ

    ಚಿತ್ರದುರ್ಗ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಿತ್ರದುರ್ಗ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೇರಳದ ಮಲಂಪುರದ ಬಳಿ ನಡೆದಿದೆ.

    ಹಿರಿಯೂರು ನಗರಸಭೆ ಸದಸ್ಯ ಎ.ಪಾಂಡುರಂಗ (37) ಹಾಗೂ ಐಮಂಗಲ ಹೋಬಳಿಯ ಜೆಡಿಎಸ್ ಮುಖಂಡ ಪ್ರಭಾಕರ್ (52) ಮೃತ ದುರ್ದೈವಿಗಳು.

    ಎ.ಪಾಂಡುರಂಗ ಮತ್ತು ಪ್ರಭಾಕರ್ ಕಳೆದ ಭಾನುವಾರ ಪ್ರವಾಸಕ್ಕೆಂದು ಕೇರಳಕ್ಕೆ ತೆರಳಿದ್ದರು. ಅಲ್ಲಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ, ಮಂಗಳವಾರ ರಾತ್ರಿ ವಾಪಸ್ ಹಿಂದಿರುಗುತ್ತಿದ್ದಾಗ ಈ ನಡೆದಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಜೆಡಿಎಸ್ ಜಿಲ್ಲಾಧ್ಯಕ್ಷ ಯಶೋಧರ ತೆರಳುವುದಾಗಿ ತಿಳಿಸಿದ್ದಾರೆ.

    ಹಿರಿಯೂರಿನ ಜೆಡಿಎಸ್ ತಾಲೂಕು ಘಟಕದಲ್ಲಿ ಪ್ರಭಾವಿ ಎನಿಸಿದ್ದ ಎ. ಪಾಂಡುರಂಗ, ಹಿರಿಯೂರು ನಗರಸಭೆಯ 7ನೇ ವಾರ್ಡ್ ಗೆ ಅವಿರೋಧವಾಗಿ ಜೆಡಿಎಸ್‍ನಿಂದ ಆಯ್ಕೆಯಾಗಿದ್ದರು. ಐಮಂಗಲ ಹೋಬಳಿಯ ಪ್ರಭಾಕರ್ ಕೂಡ ಉತ್ತಮ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಜನರ ಪ್ರೀತಿ ಗಳಿಸಿ, ಉದಯೋನ್ಮುಖ ಜನನಾಯಕರಾಗಿ ಬೆಳೆಯುತಿದ್ದರು. ಅಲ್ಲದೇ ಇಬ್ಬರು ಕೂಡ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು.