Tag: ನಗರಾಭಿವೃದ್ಧಿ ಸಚಿವ

  • ರಾಕ್ಷಸರು ಯಾರು, ಪುಣ್ಯಕೋಟಿ ಯಾರಂತ ಜನರೇ ತೀರ್ಮಾನ ಮಾಡಿದ್ದಾರೆ: ಖಾದರ್

    ರಾಕ್ಷಸರು ಯಾರು, ಪುಣ್ಯಕೋಟಿ ಯಾರಂತ ಜನರೇ ತೀರ್ಮಾನ ಮಾಡಿದ್ದಾರೆ: ಖಾದರ್

    ಬೆಂಗಳೂರು: ರಾಕ್ಷಸರು ಯಾರು, ಪುಣ್ಯಕೋಟಿ ಯಾರು ಅಂತ ಉಪಚುನಾವಣೆಯಲ್ಲಿ ಬಳ್ಳಾರಿ ಜನ ಉತ್ತರ ಕೊಟ್ಟಿದ್ದಾರೆಂದು ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಗಾಲಿ ಜನಾರ್ದನ ರೆಡ್ಡಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

    ಜೈಲಿನಿಂದ ಬಿಡುಗಡೆಯಾಗಿರುವ ಗಾಲಿ ಜನಾರ್ದನ ರೆಡ್ಡಿ ನೀಡಿದ್ದ ಹೇಳಿಕೆಗೆ, ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಬಳ್ಳಾರಿ ಜನ ರಾಕ್ಷಸರು ಯಾರು, ಪುಣ್ಯ ಕೋಟಿ ಯಾರೆಂದು ಉಪ ಚುನಾವಣೆಯಲ್ಲೇ ಉತ್ತರ ಕೊಟ್ಟಿದ್ದಾರೆ. ಅಲ್ಲದೇ ನಾನು ಸುಮ್ಮನೆ ಇರುವುದಿಲ್ಲವೆಂದು ಹೇಳಿದ್ದಾರೆ. ಅವರು ಏನು ಮಾಡುತ್ತಾರೆ ಎನ್ನುವುದನ್ನು ನಾವೂ ನೋಡುತ್ತೇವೆಂದು ಗುಡುಗಿದ್ದಾರೆ.

    ಇದೇ ವೇಳೆ ಶಿರಾಡಿಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕುರಿತು ಮಾತನಾಡಿ, ಬೆಂಗಳೂರಿನಿಂದ ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯ ದುರಸ್ಥಿ ಕಾರ್ಯ ಸಂಪೂರ್ಣ ಮುಗಿದಿದೆ. ದುರಸ್ಥಿ ಇದ್ದ ಕಾರಣ ಇಷ್ಟು ದಿನ, ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಇದೀಗ ಎಲ್ಲಾ ಕಾರ್ಯ ಪೂರ್ಣಗೊಂಡಿದೆ. ಹೀಗಾಗಿ ಎಲ್ಲಾ ವಾಹನಗಳ ಸಂಚಾರಕ್ಕೆ ಇಂದು ಬೆಳಗ್ಗೆಯಿಂದ ಅವಕಾಶ ಮಾಡಿಕೊಡಲಾಗಿದೆ. ಮಧ್ಯಮ ಹಾಗೂ ಭಾರೀ ಗಾತ್ರದ ಎಲ್ಲಾ ವಾಹನಗಳ ಚಾಲಕರು ಸಹಕರಿಸಬೇಕು. ತಿರುವುಗಳಲ್ಲಿ ಓವರ್ ಟೇಕ್ ಮಾಡದೇ, ನಿಧಾನವಾಗಿ ವಾಹನ ಚಾಲಯಿಸಬೇಕೆಂದು ಹೇಳಿದ್ದಾರೆ.

    ಕೊಡಗಿನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ವಿಚಾರದ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ, ಕೊಡಗು ಜಿಲ್ಲೆಯಲ್ಲಿ ಮಾಡೆಲ್ ಮನೆ ಕಟ್ಟಲು ಚಿಂತನೆ ನಡೆಸಲಾಗಿದೆ. ಅಲ್ಲದೇ ಈಗಿದ್ದ ಸಿಂಗಲ್ ಬೆಡ್ ರೂಮಿನ ಬದಲಾಗಿ ಡಬ್ಬಲ್ ಬೆಡ್ ರೂಮಿನ ಮನೆಯಾಗಿ ಕಟ್ಟಲು ಮಾತುಕತೆ ನಡೆಸಿದ್ದೇವೆ. ಈ ನಿಟ್ಟಿನಲ್ಲಿ ಅನುದಾನ ನೀಡುವ ಕುರಿತು ಸಿಎಂ ಕುಮಾರಸ್ವಾಮಿಯವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಅನುದಾನ ಸಿಗುವ ಕುರಿತಾದ ಪ್ರಸ್ತಾವನೆಯನ್ನು ಮುಂದಿನ ಸಂಪುಟಕ್ಕೆ ಕಳುಹಿಸುತ್ತೇವೆ. ಎಲ್ಲಾ ಮಾಡೆಲ್ ಮನೆಗಳ ಒಟ್ಟು ವೆಚ್ಚ 101 ಕೋಟಿ ರೂಪಾಯಿ ಆಗಲಿದ್ದು, ಪ್ರತಿ ಮಾಡೆಲ್ ಮನೆಗೆ 9.45 ಲಕ್ಷ ರೂ. ವೆಚ್ಚ ಬೀಳಲಿದೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮಗ ತಪ್ಪು ಮಾಡಿದ್ರೆ ಅಪ್ಪನ ಮೇಲೆ ಕ್ರಮ ತೆಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್ ನಲ್ಲಿದೆ- ಸಚಿವ ಜಾರ್ಜ್ ಪ್ರಶ್ನೆ

    ಮಗ ತಪ್ಪು ಮಾಡಿದ್ರೆ ಅಪ್ಪನ ಮೇಲೆ ಕ್ರಮ ತೆಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್ ನಲ್ಲಿದೆ- ಸಚಿವ ಜಾರ್ಜ್ ಪ್ರಶ್ನೆ

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ವಿಚಾರಕ್ಕಿಂತ ಸಂತೋಷ್ ವಿಚಾರದ ಬಗ್ಗೆ ಬಿಜೆಪಿಯವರು ಮಾತನಾಡಲಿ. ಮಗ ತಪ್ಪು ಮಾಡಿದ್ರೆ ಅಪ್ಪನ ಮೇಲೆ ಕ್ರಮ ತಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್ ನಲ್ಲಿದೆ ಎಂದು ಪ್ರಶ್ನಿಸಿ ಬಿಜೆಪಿ ನಾಯಕರ ವಿರುದ್ಧ ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಕಿಡಿಕಾರಿದ್ದಾರೆ.

    ವಿಧಾನಸೌಧದದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ಸ್ವತಃ ವಿನಯ್ ಹಲ್ಲೆಗೊಳಗಾಗಿದ್ದಾರೆ. ಅವರ ಪತ್ನಿ ಪತ್ರ ಬರೆದರೂ ಬಿಎಸ್ ವೈ ಪ್ರತಿಕ್ರಿಯೆ ಕೊಟ್ಟಿಲ್ಲ. ಊರೆಲ್ಲ ಸುತ್ತುವ ಇವರಿಗೆ ಠಾಣೆಗೆ ಬರಲು ವಯಸ್ಸಿನ ಸಮಸ್ಯೆ. ಮೊದಲು ಸಂತೋಷ್ ಪ್ರಕರಣದ ಬಗ್ಗೆ ಬಿಜೆಪಿಯವರು ಮಾತನಾಡಲಿ. ಮಗ ತಪ್ಪು ಮಾಡಿದ್ರೆ ಅಪ್ಪನ ಮೇಲೆ ಕ್ರಮ ತೆಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್ ನಲ್ಲಿದೆ ಅಂತ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಕೆಆರ್ ಪುರಂ  ಬಿಬಿಎಂಪಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪೆಟ್ರೋಲ್ ಸುರಿದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಬಿಜೆಪಿ ಎನ್ನುವ ಪ್ರಶ್ನೆ ಇಲ್ಲ. ತಪ್ಪು ಯಾರೇ ಮಾಡಿದ್ರೂ ತಪ್ಪೇ. ಪೊಲೀಸರು ಆ ಬಗ್ಗೆ ಕ್ರಮ ತೆಗೆದುಕೊಳ್ತಾರೆ ಎಂದರು.

    ರಾಜ್ಯ ಸರ್ಕಾರ ಶೇ.10 ಪರ್ಸೆಂಟ್ ಗಿಂತ ಹೆಚ್ಚಿನ ಕಮೀಷನ್ ಸರ್ಕಾರ ಎಂಬ ಪ್ರಧಾನಿ ಮೋದಿ ಆರೋಪದ ವಿಚಾರದ ಕುರಿತು ಮಾತನಾಡಿದ ಅವರು, ಮೋದಿಯವರು ಬಿಜೆಪಿಯ ಪ್ರಧಾನಿ ಅಲ್ಲ. ಬದಲಾಗಿ ಅವರು ದೇಶದ ಪ್ರಧಾನಿ. ಪ್ರಧಾನಿ ಹುದ್ದೆಯಲ್ಲಿದ್ದುಕೊಂಡು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ. ನೋಟ್ ಬ್ಯಾನ್ ನಂತಹ ಜನರಿಗೆ ತೊಂದರೆ ಕೊಡುವ ಕಾರ್ಯಕ್ರಮ ಮಾಡಿದ್ರು ಹೊರತು ಬೇರೆ ಇಲ್ಲ. ಗುಜರಾತಿನಲ್ಲಿ ಪೆಟ್ರೋ ಕೆಮಿಕಲ್ಸ್ ಯೋಜನೆಯಿಂದ 20 ಸಾವಿರ ಕೋಟಿ ರೂ. ನಷ್ಟವಾಯಿತು. ಇದಕ್ಕೆ ಹೊಣೆ ಯಾರು? ಈ ನಷ್ಟವನ್ನು ಮೋದಿಯವರು ಕೇಂದ್ರ ಸರಕಾರದ ಸಬ್ಸಿಡಿಯಿಂದ ಭರ್ತಿ ಮಾಡ್ಕೋತಿದ್ದಾರೆ. ಪ್ರಧಾನಿಯಾಗಿ ಅವರು 4 ವರ್ಷ ಸಾಧನೆ ಮಾಡಿಲ್ಲ. ಅದಕ್ಕಾಗಿ ಮೋದಿಯವರು ರಾಜ್ಯ ಸರಕಾರದ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ. ಎಲ್ಲ ರಾಜ್ಯಗಳಿಗೂ ಬಂದು ಸುಳ್ಳು ಆರೋಪಗಳ ಮೂಲಕ ಮೋದಿಯವರು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬರುವಂತೆ ಮಾತಾಡುವುದು ಸರಿಯಲ್ಲ ಅಂತ ಹೇಳಿದ್ರು.

    ಮೈಸೂರಿನಿಂದ ಬೆಂಗಳೂರಿಗೆ ಬಂದ ಸಿದ್ದರಾಮಯ್ಯ ದಾರಿತಪ್ಪಿದ್ದಾರೆ ಎನ್ನುವ ಮೋದಿ ಹೇಳಿಕೆಗೆ, ಮೈಸೂರಿಂದ ಬಂದ ಹಲವರು ರಾಜಕಾರಣದಲ್ಲಿ ಸಾಧನೆ ಮಾಡಿದ್ದಾರೆ. ಆ ವಿಷಯ ಮೋದಿಯವರಿಗೆ ಗೊತ್ತಿಲ್ಲ ಎಂದು ಹೇಳಿದರು.

    ವಿದ್ವತ್- ಹಲ್ಲೆಗೊಳಗಾದ ಯುವಕ.

  • ಮತ್ತೊಮ್ಮೆ ತಂದೆಯ ಅಧಿಕಾರ ದುರುಪಯೋಗಪಡಿಸಲು ಮುಂದಾದ ಸಚಿವ ಕೆ.ಜೆ ಜಾರ್ಜ್ ಪುತ್ರ!

    ಮತ್ತೊಮ್ಮೆ ತಂದೆಯ ಅಧಿಕಾರ ದುರುಪಯೋಗಪಡಿಸಲು ಮುಂದಾದ ಸಚಿವ ಕೆ.ಜೆ ಜಾರ್ಜ್ ಪುತ್ರ!

    ಬೆಂಗಳೂರು: ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಪುತ್ರ ರಾಣಾ ಜಾರ್ಜ್, ತಮ್ಮ ತಂದೆಯ ಅಧಿಕಾರ ದುರುಪಯೋಗ ಮಾಡಿಕೊಳ್ಳಲು ಮುಂದಾಗಿದ್ದಾರೆ.

    ರಾಣಾ ಜಾರ್ಜ್ ಕಾಡಿನಲ್ಲಿ ಸುತ್ತಾಡಿಕೊಂಡು ಮಜಾ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದು, ಕಾಡಿನ ರಾಜನಾಗಿ ಮೆರದಾಡುತ್ತಿದ್ದ ವಿಚಾರ ಈ ಹಿಂದೆ ಸುದ್ದಿಯಾಗಿತ್ತು. ಇದೀಗ ಮತ್ತೆ ಅರಣ್ಯದೊಳಗೆ ತನ್ನ ರೇಂಜ್ ರೋವರ್ ಕಾರಿನಲ್ಲಿ ಸವಾರಿ ಮಾಡೋಕೆ ಅನುಮತಿ ಕೇಳಿದ್ದಾರೆ. ಜೊತೆಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಹೈ ಇನ್ ಪ್ಲ್ಯೂಯೆನ್ಸ್ ಮಾಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ಬೆಂಗಳೂರಿಗೆ ಸಚಿವ ಕೆ.ಜೆ. ಜಾರ್ಜ್ ರಾಜನಾದ್ರೆ, ಮಗ ಕಾಡಿಗೆ ರಾಜ!

    ಸ್ವಂತ ವಾಹನದಲ್ಲಿ ಪರ್ಮನೆಂಟ್ ಆಗಿ ಸಂಚಾರ ಮಾಡಲು ಅನುಮತಿ ನೀಡಬೇಕು ಅಂತ ಅರಣ್ಯ ಇಲಾಖೆಗೆ ಕೋರಿರುವ ಪತತಿದೀಗ ಪಬ್ಲಿಕ್ ಟಿವಿಗೆ ಲಭಿಸಿದೆ. ಅರಣ್ಯ ಇಲಾಖೆಯ ಬೋರ್ಡ್ ಮೆಂಬರ್ ಆಗಿರುವ ರಾಣಾ, ಈ ಹಿಂದೆ ಸ್ನೇಹಿತರ ಜೊತೆ ಕಾಡಿನೊಳಗೆ ಹೋಗಿ ಎಣ್ಣೆ ಪಾರ್ಟಿ ಮಾಡಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

    ಇದಕ್ಕೂ ಮೊದಲು ಜಾರ್ಜ್ ಗೃಹಸಚಿವರಾಗಿದ್ದಾಗ ರಾಣಾ ತನ್ನ ತಂದೆ ಮಿನಿಸ್ಟರ್ ಅನ್ನೋ ದರ್ಪದಿಂದ ತನ್ನ ತಾಯಿ ಹಾಗೂ ಸ್ನೇಹಿತರೊಂದಿಗೆ ಬಂಡೀಪುರ ಅರಣ್ಯದೊಳಗೆ ಸ್ವಂತ ವಾಹನ ನುಗ್ಗಲು ಯತ್ನಿಸಿದ್ರು. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಇವ್ರ ಮಾತಿಗೆ ಸೊಪ್ಪು ಹಾಕಿರಲಿಲ್ಲ. ಆ ವೇಳೆ ಅಧಿಕಾರಿಗಳ ಬಳಿ ಚಾಲೆಂಜ್ ಮಾಡಿದ್ದ ರಾಣಾ ಜಾರ್ಜ್, ನನ್ನನ್ನೇ ಬಿಡಲ್ಲ ಅಂತೀರಾ, ಮುದೊಂದು ದಿನ ನಿಮ್ಮ ಕಣ್ಣೆದುರೇ ನನ್ನ ವಾಹನದಲ್ಲಿ ಸವಾರಿ ಮಾಡ್ತೀನಿ ನೋಡ್ತಾ ಇರಿ ಅಂತಾ ತೊಡೆ ತಟ್ಟಿ ಬಂದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

  • ಬೆಂಗ್ಳೂರು ಮಹಾಮಳೆ ಕುರಿತು ಸಚಿವ ಜಾರ್ಜ್ ಹೇಳಿದ್ದು ಹೀಗೆ

    ಬೆಂಗ್ಳೂರು ಮಹಾಮಳೆ ಕುರಿತು ಸಚಿವ ಜಾರ್ಜ್ ಹೇಳಿದ್ದು ಹೀಗೆ

    ಬೆಂಗಳೂರು: ಕಳೆದ ರಾತ್ರಿ ನಗರದಲ್ಲಿ ಸುರಿದ ಮಹಾ ಮಳೆಗೆ 7 ಜನರ ದಾರುಣ ಸಾವು ಸಂಭವಿಸಿದ್ದು, ದುರ್ಘಟನೆ ಕುರಿತು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದಾರೆ.

    ಬೆಂಗಳೂರಿನಲ್ಲಿ ಮಳೆಯನ್ನು ಎದುರಿಸಲು ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ. ಹಲವು ವರ್ಷಗಳ ಹಿಂದೆಯೇ ಸೂಕ್ತ ಅಭಿವೃದ್ಧಿ ಯೋಜನೆಗಳನ್ನು ಆರಂಭ ಮಾಡಬೇಕಾಗಿತ್ತು ಆದರೆ ಮಾಡಿಲ್ಲ. ನಮ್ಮ ಸರ್ಕಾರವು ಇಂದು 1200 ಕೋಟಿ ರೂ. ಗಳ ರಾಜಕಾಲುವೆ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದೇವೆ. ಶೀಘ್ರವೇ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು ಎಂದರು.

    ನಾವು ಅಧಿಕಾರ ವಹಿಸಿಕೊಂಡಾಗ ಬೆಂಗಳೂರು 50 ಕಿ.ಮೀ ಮಾತ್ರ ರಾಜಕಾಲುವೆ ಇತ್ತು. ಇಂದು ಈ ಕಾಲುವೆಗಳನ್ನು 350 ಕಿ.ಮೀ ವರೆಗೆ ವಿಸ್ತರಿಸಿದ್ದೇವೆ. ಇನ್ನು ಒಂದು ವರ್ಷದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತೇವೆ ಅಂತ ಅವರು ಭರವಸೆ ನೀಡಿದ್ರು.

    ಇದೇ ಸಂದರ್ಭದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಸಾವನ್ನಪ್ಪಿರುವ ಜನರಿಗೆ ತಲಾ 5 ಲಕ್ಷ ರೂ.ಗಳನ್ನು ಪರಿಹಾರವಾಗಿ ಘೋಷಿಸಿರುವುದಾಗಿ ತಿಳಿಸಿದರು.