Tag: ನಗರ ಪಾಲಿಕೆ

  • ಗ್ರೇಟರ್ ಬೆಂಗಳೂರು | 5 ನಗರ ಪಾಲಿಕೆ ರಚಿಸಿ ರಾಜ್ಯ ಸರ್ಕಾರ ಆದೇಶ

    ಗ್ರೇಟರ್ ಬೆಂಗಳೂರು | 5 ನಗರ ಪಾಲಿಕೆ ರಚಿಸಿ ರಾಜ್ಯ ಸರ್ಕಾರ ಆದೇಶ

    ಬೆಂಗಳೂರು: ಗ್ರೇಟರ್‌ ಬೆಂಗಳೂರು (Greater Bengaluru) ಪ್ರಾಧಿಕಾರದ ಅಡಿಯಲ್ಲಿ 5 ನಗರ ಪಾಲಿಕೆಗಳನ್ನ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಐದು ನಗರ ಪಾಲಿಕೆಗಳ ಗಡಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಪತ್ರದಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಬಿಬಿಎಂಪಿ ಕೇಂದ್ರ ಕಚೇರಿಯನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಕಚೇರಿಯನ್ನಾಗಿ ಮಾರ್ಪಾಡು ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ತರಾತುರಿಯಲ್ಲಿ ದೆಹಲಿಗೆ ತೆರಳಿದ ಡಿಕೆಶಿ – ಸಿಎಂ ಮುಜುಗರದ ಹೇಳಿಕೆಗಳಿಗೆ ಬೇಸತ್ರಾ ಡಿಸಿಎಂ?

    5 ನಗರ ಪಾಲಿಕೆಗಳ ಹೆಸರು
    1. ಬೆಂಗಳೂರು ಪಶ್ಚಿಮ ನಗರ ಪಾಲಿಕೆ
    2. ಬೆಂಗಳೂರು ದಕ್ಷಿಣ ನಗರ ಪಾಲಿಕೆ
    3. ಬೆಂಗಳೂರು ಉತ್ತರ ನಗರ ಪಾಲಿಕೆ
    4. ಬೆಂಗಳೂರು ಪೂರ್ವ ನಗರ ಪಾಲಿಕೆ
    5. ಬೆಂಗಳೂರು ಕೇಂದ್ರ ನಗರ ಪಾಲಿಕೆ

    ಆಗಸ್ಟ್‌ 1 ರಿಂದ ಆರಂಭ ಆಗುವ ಮುಂಗಾರು ಅಧಿವೇಶನದಲ್ಲಿ ಈ ಕುರಿತು ಚರ್ಚೆ ಮಾಡಿ, ಬಿಲ್‌ ಪಾಸ್‌ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಅಲ್ಲದೇ ಪಾಲಿಕೆಗಳ ಬಗ್ಗೆ ಆಕ್ಷೇಪಣೆ ಇದ್ದರೆ, ಸಲಹೆ ನೀಡುವಂತೆ ಸಾರ್ವಜನಿಕರನ್ನು ಕೋರಿದೆ. ಇದನ್ನೂ ಓದಿ: 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ವ್ಯಾಕ್ಸಿನ್ – ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ

  • ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

    ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

    ನವದೆಹಲಿ: ಇತ್ತೀಚೆಗೆ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಗೂ ಸರ್ಕಾರ ಬುಲ್ಡೋಜರ್ ಶಾಕ್ ನೀಡಿದ್ದು, ದೆಹಲಿಯಲ್ಲಿ ನಿರ್ಮಾಣ ಮಾಡಲಾಗಿರುವ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್ ಬಳಸಿ ಒಡೆದು ಹಾಕಲು ನಗರ ಪಾಲಿಕೆ ಆದೇಶ ನೀಡಿದೆ.

    ಹನುಮ ಜಯಂತಿಯಂದು ದೆಹಲಿಯಲ್ಲಿ ನಡೆದ ಜಹಾಂಗೀರ್‌ಪುರಿ ಹಿಂಸಾಚಾರದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಉತ್ತರ ಮಹಾನಗರ ಪಾಲಿಕೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ. ಈ ಮನವಿಯಲ್ಲಿ ಏ.20 ಮತ್ತು 21ರಂದು ಅಕ್ರಮ ಕಟ್ಟಗಳನ್ನು ತೆರವುಗೊಳಿಸಲಾಗುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 400 ಪೊಲೀಸರ ಭದ್ರತೆ ಒದಗಿಸಬೇಕು ಎಂದು ಕೇಳಿಕೊಂಡಿದೆ.

    ಹಿಂಸಾಚಾರಕ್ಕೂ ಈ ಆದೇಶಕ್ಕೂ ನೇರ ಸಂಬಂಧ ಇಲ್ಲವಾದರೂ, ಇದು ದಾಳಿಕೋರರಿಗೆ ನೇರ ಸಂದೇಶ ನೀಡುವ ಉದ್ದೇಶ ಹೊಂದಿದೆ ಎನ್ನಲಾಗಿದೆ. ಇದನ್ನೂ ಓದಿ: ಅಂಗಡಿ ದೋಚಿದ ಖುಷಿಯಲ್ಲಿ ಡ್ಯಾನ್ಸ್ ಮಾಡಿದ ಕಳ್ಳ – ವೀಡಿಯೋ ವೈರಲ್

    ಘಟನೆಯಲ್ಲಿ 8 ಪೊಲೀಸ್ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಸೇರಿದಂತೆ ಒಂಬತ್ತು ಮಂದಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು 23 ಜನರನ್ನು ಬಂಧಿಸಲಾಗಿದೆ ಮತ್ತು ಇಬ್ಬರು ಬಾಲಾಪರಾಧಿಗಳನ್ನು ಬಂಧಿಸಲಾಗಿದೆ.

    DELHI POLICE

    ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಮಾತನಾಡಿ, ತಪ್ಪಿತಸ್ಥರ ವಿರುದ್ಧ ವರ್ಗ, ಧರ್ಮ, ಸಮುದಾಯ ಮತ್ತು ಧರ್ಮವನ್ನು ಲೆಕ್ಕಿಸದೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಚಹಾ ಅಂಗಡಿ ತೆರೆದು ಬದುಕು ಕಟ್ಟಿಕೊಂಡ ಅರ್ಥಶಾಸ್ತ್ರ ಪದವೀಧರೆ

  • ಅನಧಿಕೃತವಾಗಿ ಹುಕ್ಕಾ ಮಾರಾಟ-ಐದು ಲಕ್ಷ ಮೌಲ್ಯದ ವಸ್ತು ಜಪ್ತಿ

    ಅನಧಿಕೃತವಾಗಿ ಹುಕ್ಕಾ ಮಾರಾಟ-ಐದು ಲಕ್ಷ ಮೌಲ್ಯದ ವಸ್ತು ಜಪ್ತಿ

    ಹುಬ್ಬಳ್ಳಿ: ಅನಧಿಕೃತವಾಗಿ ಹುಕ್ಕಾ ಮಾರಾಟ ಹಾಗೂ ಸೇವನೆಗೆ ಅವಕಾಶ ಕಲ್ಪಿಸಿದ್ದ ಅಂಗಡಿ ಮೇಲೆ ಪಾಲಿಕೆಯ ಆರೋಗ್ಯಾಧಿಕಾರಿಗಳು ದಾಳಿ ನಡೆಸಿ ಐದು ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

    ಹುಬ್ಬಳ್ಳಿಯ ವಿದ್ಯಾನಗರದಲ್ಲಿನ ಅರ್ಬನ್ ರೂಟ್ಸ್ ಅಂಗಡಿಯಲ್ಲಿ ಅನಧಿಕೃತವಾಗಿ ಹುಕ್ಕಾ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೆ ಅಂಗಡಿಯಲ್ಲೇ ಹುಕ್ಕಾ ಸೇವನೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು 5 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 15 ಹುಕ್ಕಾ ಪೈಪ್, 20 ಹುಕ್ಕಾ ಸ್ಟ್ಯಾಂಡ್, ವಿವಿಧ ಫ್ಲೇವರ್ಸ್ ನ ವಿಸಲಾ ಪೈಪ್ ಗಳನ್ನು ವಶಪಡಿಸಿಕೊಂಡಿದ್ದಾರೆ.

    ಕೇಶ್ವಾಪುರದ ಜಯಶೀಲ ಬಾಲ್ಮಿ, ನರೇಂದ್ರ ತಿಕಂದರ ಮಾಲೀಕತ್ವದ ಅರ್ಬನ್ ರೂಟ್ಸ್ ಹೆಸರಿನಲ್ಲಿ ಅಂಗಡಿ ತೆರದು ಅನಧಿಕೃತವಾಗಿ ಹುಕ್ಕಾ ಮಾರಾಟ ಮಾಡುತ್ತಿದ್ದರು. ಈ ಹುಕ್ಕಾ ಶಾಪಿನಲ್ಲಿ ಪ್ರತಿನಿತ್ಯ ನೂರಾರು ಕಾಲೇಜು ವಿದ್ಯಾರ್ಥಿಗಳು ಹುಕ್ಕಾ ಸೇವೆನೆ ಮಾಡುತ್ತಿದ್ದರು.

    ಹುಕ್ಕಾ ಸೇವನೆ ಹಾಗೂ ಮಾರಾಟದ ಬಗ್ಗೆ ಸ್ಥಳೀಯರು ಪೊಲೀಸ್ ಇಲಾಖೆ ಹಾಗೂ ಪಾಲಿಕೆಯ ಆರೋಗ್ಯಾಧಿಕರಿಗಳಿಗೆ ದೂರು ನೀಡಿದ್ದರು. ಹೀಗಾಗಿ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಅಂಗಡಿ ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರೆಸಿದ್ದಾರೆ.

  • ಲೋಕಸಭಾ ಚುನಾವಣೆಯಲ್ಲಿ ಯಾರ ಪರವೂ ಪ್ರಚಾರ ಮಾಡಲ್ಲ: ಯದುವೀರ್ ಒಡೆಯರ್

    ಲೋಕಸಭಾ ಚುನಾವಣೆಯಲ್ಲಿ ಯಾರ ಪರವೂ ಪ್ರಚಾರ ಮಾಡಲ್ಲ: ಯದುವೀರ್ ಒಡೆಯರ್

    ಮೈಸೂರು: ಮುಂದಿನ ಲೋಕಸಭಾ ಸಭೆ ಚುನಾವಣೆಯ ವೇಳೆಯಲ್ಲಿ ಯಾವುದೇ ಪಕ್ಷದ ಪರವೂ ಕೂಡ ಪ್ರಚಾರ ಮಾಡುವುದಿಲ್ಲ ಎಂದು ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಒಡೆಯರ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರಮನೆಯೊಂದಿಗೆ ಎಲ್ಲಾ ಪಕ್ಷಗಳ ಸಂಬಂಧ ಚೆನ್ನಾಗಿದೆ. ಎಲ್ಲರೊಂದಿಗೂ ನಾವು ಉತ್ತಮವಾಗಿ ಇರಲು ಪ್ರಯತ್ನ ಮಾಡುತ್ತೇವೆ. ಆದ್ದರಿಂದ ಯಾವುದೇ ಪಕ್ಷ ಅಥವಾ ವ್ಯಕ್ತಿಯ ಪರ ಪ್ರಚಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಸರ್ಕಾರದ ನಿರ್ಧಾರದ ಬಗ್ಗೆ ಬೇಸರ:
    ಮೈಸೂರು ಸಂಸ್ಕೃತಿಕ ರಾಜಧಾನಿ ಎಂದೇ ಖ್ಯಾತಿ ಪಡೆದಿದ್ದು, ಮೈಸೂರು ರಾಜವಂಸ್ಥರು ನೀಡಿರುವ ಆಪಾರ ಕೊಡುಗೆಗಳು ಇಂದಿಗೂ ಇದೆ. ಅವುಗಳನ್ನು ಉಳಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ. ಆದರೆ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಮತ್ತು ದೇವರಾಜ ಮಾರುಕಟ್ಟೆ ಕೆಡವಿ ಮತ್ತೆ ಪುನರ್ ನಿರ್ಮಾಣ ಮಾಡುವ ವಿಚಾರ ಮಾಧ್ಯಮಗಳಿಂದ ನನಗೆ ತಿಳಿಯಿತು. ಆದರೆ ತಜ್ಞರ ವರದಿಗಳ ಪ್ರಕಾರ ಎರಡು ಪಾರಂಪರಿಕ ಕಟ್ಟಡಗಳನ್ನ ಕೆಡವದೆ ಅಭಿವೃದ್ಧಿ ಮಾಡಲು ಅವಕಾಶವಿದ್ದು, ಲ್ಯಾನ್ಸ್ ಡೌನ್, ದೇವರಾಜ ಮಾರುಕಟ್ಟೆ ಕಟ್ಟಡಗಳನ್ನು ಉಳಿಸಿಕೊಳ್ಳಬೇಕು ಎಂದರು.

    ನಗರದಲ್ಲಿ ಇರುವ ಎಲ್ಲಾ ಪಾರಂಪರಿಕ ಕಟ್ಟಡಗಳನ್ನ ಕೆಡವುತ್ತಾ ಹೋದರೆ ಮೈಸೂರಿಗೆ ಸಾಂಸ್ಕೃತಿಕ ನಗರಿ ಎಂದು ಕರೆಯಲು ಮುಂದೊಂದು ದಿನ ಏನೂ ಇರುವುದಿಲ್ಲ. ಮೈಸೂರು ಮಹಾನಗರ ಪಾಲಿಕೆಗೆ ಕೆಡವುದರಲ್ಲಿ ಏಕೆ ಇಷ್ಟು ಆಸ್ತಕಿ ತೋರುತ್ತಿದೆ ಎಂಬುದಕ್ಕೆ ನನ್ನ ಬಳಿ ಉತ್ತರವಿಲ್ಲ. ಕಟ್ಡಡಗಳನ್ನು ಅಭಿವೃದ್ಧಿ ಪಡಿಸಿ ಬೇರೆ ಬೇರೆ ಉದ್ದೇಶಕ್ಕೆ ಬಳಸಲು ಅವಕಾಶ ಇದೆ. ಆದ್ದರಿಂದ ಅವುಗಳನ್ನ ಉಳಿಸಿಕೊಳ್ಳುವತ್ತ ಸರ್ಕಾರ ಗಮನ ನೀಡಬೇಕು. ಇದು ನಮ್ಮ ಆಸೆ ಮಾತ್ರವಲ್ಲ, ಸ್ಥಳೀಯ ಜನರ ಬೇಡಿಕೆಯೂ ಆಗಿದೆ. ಎಲ್ಲರ ಅಭಿಪ್ರಾಯ ಪಡೆದು ಚರ್ಚೆ ನಡೆಸಿದ ಬಳಿಕ ಸರ್ಕಾರ ತೀರ್ಮಾನ ತೆಗೆದುಕೊಳ್ಳುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv