Tag: ನಗರ ಸ್ಥಳೀಯ ಸಂಸ್ಥೆ ಚುನಾವಣೆ

  • ಕಾಂಗ್ರೆಸ್ ಅಭ್ಯರ್ಥಿಯ ಮೆರವಣಿಗೆ ವೇಳೆ ರಾಸಾಯನಿಕ ದಾಳಿ!

    ಕಾಂಗ್ರೆಸ್ ಅಭ್ಯರ್ಥಿಯ ಮೆರವಣಿಗೆ ವೇಳೆ ರಾಸಾಯನಿಕ ದಾಳಿ!

    ತುಮಕೂರು: ನಗರ ಸ್ಥಳೀಯ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿಯ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ರಾಸಾಯನಿಕ ದಾಳಿ ನಡೆಸಿದ್ದಾರೆ.

    ತುಮಕೂರಿನ ವಾರ್ಡ್ ನಂಬರ್ 16 ರ ಬಾರ್ ಲೈನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಸದಸ್ಯ ಇನಾಯತುಲ್ಲಾ ಖಾನ್ ಮೆರವಣಿಗೆ ವೇಳೆ ಆ್ಯಸಿಡ್ ರೂಪದ ರಾಸಾಯನಿಕ ದಾಳಿ ನಡೆದಿದೆ. ಘಟನೆಯಿಂದ ಸುಮಾರು ಜನರಿಗೆ ಗಾಯಗಳಾಗಿವೆ. ಈ ಘಟನೆ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿದೆ.

    ಸುಮಾರು 30 ವರ್ಷದಿಂದ ಇಲ್ಲಿ ಕಾಂಗ್ರೆಸ್ ಗೆದ್ದಿರಲಿಲ್ಲ. ಈ ಬಾರಿ ಗೆದ್ದಿದೆ. ಹೀಗಾಗಿ ನಮ್ಮ ಪಕ್ಷದ ಮಾಜಿ ಶಾಸಕರನ್ನು ಭೇಟಿಯಾಗಲು ಅವರ ಮನೆ ಬಳಿ ಹೋಗಿದ್ದೆ. ಈ ವೇಳೆ ನಮ್ಮ ಹುಡುಗರು ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ರಾಸಾಯನಿಕ ನಮ್ಮ ಹುಡುಗರ ಮೇಲೆ ಎಸೆದಿದ್ದಾರೆ. ಸುಮಾರು 30-35 ಜನರ ಮೇಲೆ ಆ್ಯಸಿಡ್ ದಾಳಿಯಾಗಿದೆ. ದಾಳಿ ಮಾಡಿದವರು ಯಾರು ಅಂತ ಗೊತ್ತಿಲ್ಲ. ಹೀಗಾಗಿ ದಯವಿಟ್ಟು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಹಿಡಿದು ಅವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆ ನೀಡಬೇಕು ಅಂತ ಇನಾಯತುಲ್ಲಾ ಆಗ್ರಹಿಸಿದ್ದಾರೆ.

    ಮಾಜಿ ಶಾಸಕರ ಮುಂದೆ ನಾವು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದೆವು. ಸಂತೋಷದಿಂದ ಕುಣಿಯುತ್ತಾ ಇದ್ದೆವು. ಈ ವೇಳೆ ನಮ್ಮ ಮೇಲೆ ಸುರಿದಿದ್ದಾರೆ. ದಾಳಿಯಾಗುತ್ತಿದ್ದಂತೆಯೇ ನಮಗೆ ಉಸಿರು ಕಟ್ಟಿತ್ತು. ಒಟ್ಟಿನಲ್ಲಿ ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡಿದ್ದಾರೆ ಅಂತ ದಾಳಿಗೊಳಗಾದವರು ನಡೆದ ಘಟನೆಯನ್ನು ವಿವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=LOJwlQXEAds

  • ಕುಡತಿನಿಯಲ್ಲಿ ಕಾಂಗ್ರೆಸ್ ಗೆದ್ದರೂ ಬಿಜೆಪಿ ಅಭ್ಯರ್ಥಿಗೆ ಅಧಿಕಾರ!

    ಕುಡತಿನಿಯಲ್ಲಿ ಕಾಂಗ್ರೆಸ್ ಗೆದ್ದರೂ ಬಿಜೆಪಿ ಅಭ್ಯರ್ಥಿಗೆ ಅಧಿಕಾರ!

    ಬಳ್ಳಾರಿ: ಜಿಲ್ಲೆಯ ಕುಡತಿನಿ ಪಟ್ಟಣ ಪಂಚಾಯತ್ ನಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗೆದ್ದರೆ, ಕೊಟ್ಟೂರು ಪಟ್ಟಣ ಪಂಚಾಯಿತಿಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

    ಸಂಡೂರಿನ ತಾಲೂಕಿನ ಕುಡತಿನಿ ಪಟ್ಟಣ ಪಂಚಾಯತಿಗೆ ನಡೆದ 19 ವಾರ್ಡ್ ಗಳ ಚುನಾವಣೆಯಲ್ಲಿ ಕಾಂಗ್ರೆಸ್ 11 ಸ್ಥಾನ ಗಳಿಸಿದ್ರೆ ಬಿಜೆಪಿ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದ್ರೆ ಕಾಂಗ್ರೆಸ್ ಬಹುಮತ ಗಳಿಸಿದ್ರೂ ಅಧಿಕಾರದ ಗದ್ದುಗೆ ಮಾತ್ರ ಬಿಜೆಪಿಗೆ ದಕ್ಕಿದೆ.

    ಮೊದಲ ಬಾರಿಗೆ ನಡೆದ ಕುಡತಿನಿ ಪಟ್ಟಣ ಪಂಚಾಯತಿಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಎಸ್ ಟಿ ಪಂಗಡಕ್ಕೆ ಮೀಸಲಾದ್ರೆ, ಉಪಾಧ್ಯಕ್ಷ ಸ್ಥಾನ ಎಸ್‍ಸಿ ಮಹಿಳೆಗೆ ಮೀಸಲಾಗಿದೆ. ಕಾಂಗ್ರೆಸ್ 19 ವಾರ್ಡಗಳ ಪೈಕಿ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ರೂ ಎಸ್ ಟಿ/ ಎಸ್‍ಸಿ ಪಂಗಡದ ಅಭ್ಯರ್ಥಿಗಳು ಗೆಲುವು ಸಾಧಿಸಿಲ್ಲ. ಹೀಗಾಗಿ ಬಿಜೆಪಿಯಿಂದ ಗೆದ್ದಿರುವ ಎಸ್ ಸಿ/ ಎಸ್ ಟಿ ಪಂಗಡದ ಅಭ್ಯರ್ಥಿಗಳಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಲಭಿಸುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಬಹುಮತ ಗಳಿಸಿದ್ರೂ ಅಧಿಕಾರದ ಗದ್ದುಗೆ ಹಿಡಿಯಲಾಗದೇ ಕೈ ಕೈ ಹಿಸುಕಿಕೊಳ್ಳುವಂತಾಗಿದೆ.

    ಕೊಟ್ಟೂರು ಪಟ್ಟಣ ಪಂಚಾಯತಿಯ 20 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 9, ಬಿಜೆಪಿ 8, ಹಾಗೂ 3 ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಧಿಕಾರಕ್ಕೆ ಏರಲು 11 ಸ್ಥಾನಗಳು ಬೇಕಾದ ಹಿನ್ನೆಲೆಯಲ್ಲಿ ಪಕ್ಷೇತರರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕುಡತಿನಿ ಹಾಗೂ ಕೊಟ್ಟೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆ ಗೆದ್ದ ಅಭ್ಯರ್ಥಿಗಳು ಪಟಾಕಿ ಸಿಡಿಸಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv