Tag: ನಟಿ

  • ಸಂಬಂಧಿ ಮದುವೆಯಲ್ಲಿ ಮಿಂಚಿದ ರಾಧಿಕಾ ಪಂಡಿತ್‌

    ಸಂಬಂಧಿ ಮದುವೆಯಲ್ಲಿ ಮಿಂಚಿದ ರಾಧಿಕಾ ಪಂಡಿತ್‌

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಮ್ಮನ್ನು ಪೋರ್ನ್ ನಟಿ ಎಂದವರ ವಿರುದ್ಧ ಗರಂ ಆದ ಅನಿತಾ ಭಟ್

    ತಮ್ಮನ್ನು ಪೋರ್ನ್ ನಟಿ ಎಂದವರ ವಿರುದ್ಧ ಗರಂ ಆದ ಅನಿತಾ ಭಟ್

    ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಅನಿತಾ ಭಟ್ (Anita Bhatt), ಈ ವಿಷಯವಾಗಿ ಸಾಕಷ್ಟು ಕಿರಿಕಿರಿಯನ್ನು ಅವರು ಎದುರಿಸಿದ್ದಾರೆ. ಅನಿತಾ ಭಟ್ ಹಾಕಿರುವ ಕಾಸ್ಟ್ಯೂಮ್, ಮಾಡಿರುವ ಪಾತ್ರಗಳನ್ನು ಕೆಲವರು ಹುಡುಕಿ ಹುಡುಕಿ ಇವರನ್ನು ರೇಗಿಸುತ್ತಾರೆ. ಅನಿತಾ ಅವುಗಳಿಗೆ ತನ್ನದೇ ಆದ ರೀತಿಯಲ್ಲಿ ಉತ್ತರ ಕೊಡುತ್ತಾರೆ. ಅದರಲ್ಲೂ ಎಡ ಮತ್ತು ಬಲಗಳ ಚರ್ಚೆ ಇವರ ಖಾತೆಯಲ್ಲಿ ಅನೇಕ ಬಾರಿ ಆಗಿದೆ. ಈ ಬಾರಿ ಬೇರೆ ಕಾರಣಕ್ಕಾಗಿ ಅನಿತಾ ಗರಂ ಆಗಿದ್ದಾರೆ.

    ಕೆಲವು ಖಾತೆಗಳಿಂದ ತಮಗೆ ನಿರಂತರವಾಗಿ ಅವಹೇಳನಕಾರಿ ಮಸೇಜ್ ಗಳು ಬರುತ್ತಿವೆ ಎಂದು ಸ್ವತಃ ಅನಿತಾ ಬರೆದುಕೊಂಡಿದ್ದಾರೆ. ಅದರಲ್ಲಿ ಒಬ್ಬ ತಮ್ಮನ್ನು ಅಶ್ಲೀಲ (Porn) ಚಿತ್ರಗಳ ನಟಿ (Actress) ಎಂದು ಕರೆದಿರುವ ಕುರಿತು ಹೇಳಿಕೊಂಡಿದ್ದಾರೆ. ಯಾವ ಅಶ್ಲೀಲ ಚಿತ್ರದಲ್ಲಿ ನಟಿಸಿದ್ದೇನೆ ಎಂದು ಬಹಿರಂಗ ಪಡಿಸಿ ಎಂದು ಅನಿತಾ ಸವಾಲು ಹಾಕಿದ್ದಾರೆ. ಇಂತಹ ಬೆದರಿಕೆಗೆ ಜಗ್ಗುವುದಿಲ್ಲ ಎಂದೂ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ತಮ್ಮ ಬಗ್ಗೆ ಕೆಟ್ಟದ್ದಾಗಿ ಕಾಮೆಂಟ್ ಮಾಡುವವರು ಹೆಸರಿನ ಸಮೇತ ಟ್ವಿಟರ್ ಖಾತೆಯಿಂದಲೇ ಅನಿತಾ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಇದಕ್ಕೆ ಪೊಲೀಸರು ಕೂಡ ಉತ್ತರಿಸಿದ್ದು, ಹತ್ತಿರದ ಪೊಲೀಸ್ ಠಾಣೆಗೆ ದೂರು ಕೊಡುವಂತೆ ಸಲಹೆ ನೀಡಿದ್ದಾರೆ. ಲಿಖಿತ ದೂರು ನೀಡುವಂತೆ ಪೊಲೀಸರು ತಿಳಿಸಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತುಪ್ಪದ ಹುಡುಗಿ ಹಾಟ್‌ ಹಾಟ್‌, ಪಡ್ಡೆಹುಡುಗರ ನಿದ್ದೆಗೆಡಿಸಿದ `ರಾ’ಗಿಣಿ

    ತುಪ್ಪದ ಹುಡುಗಿ ಹಾಟ್‌ ಹಾಟ್‌, ಪಡ್ಡೆಹುಡುಗರ ನಿದ್ದೆಗೆಡಿಸಿದ `ರಾ’ಗಿಣಿ

    ಸ್ಯಾಂಡಲ್‌ವುಡ್ (Sandalwood) ಗಿಣಿ ನಟಿ ರಾಗಿಣಿ (Ragini Dwivedi) ನಯಾ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ಕೈತುಂಬಾ ಸಿನಿಮಾಗಳ ಮಧ್ಯೆ ಶೂಟಿಂಗ್‌ಗೆ ಬ್ರೇಕ್ ಹಾಕಿ ಹೊಸ ಅವತಾರದಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ.

    `ವೀರಮದಕರಿ’ (Veermadakari) ಸಿನಿಮಾ ನಾಯಕಿ ರಾಗಿಣಿ (Actress Ragini) ಈಗ ಬಹುಭಾಷೆಗಳಲ್ಲಿ ಮಿಂಚ್ತಿದ್ದಾರೆ. 7ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಬಾಲಿವುಡ್‌ಗೂ (Bollywood) ಪಾದಾರ್ಪಣೆ ಮಾಡಿದ್ದಾರೆ. ಇತ್ತೀಚಿಗಷ್ಟೇ `ಸೋನೆಯಾ’ ಆಲ್ಬಂ ಸಾಂಗ್ ಮೂಲಕ ನಟಿ ಮೋಡಿ ಮಾಡಿದ್ದರು. ಈಗ ಹಾಟ್‌ ಹಾಟ್ ಫೋಟೋಶೂಟ್ ಮೂಲಕ ತುಪ್ಪದ ಬೆಡಗಿ ರಾಗಿಣಿ ಕಂಗೊಳಿಸಿದ್ದಾರೆ.‌ ಇದನ್ನೂ ಓದಿ: ಫೆ.23ಕ್ಕೆ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಟೀಸರ್

    ತಮ್ಮ ಹೊಸ ಫೋಟೋಶೂಟ್‌ನಲ್ಲಿ ರಾಗಿಣಿ ಗ್ಲ್ಯಾಮರಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಹಾಟ್ ಆಗಿ ಪೋಸ್ ನೀಡಿದ್ದಾರೆ. ಬಳುಕುವ ಬಳ್ಳಿಯಂತೆ ಇರುವ ನಟಿಯ ಹೊಸ ಅವತಾರ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಸಾಕಷ್ಟು ಸಂಕಷ್ಟಗಳನ್ನ ಎದುರಿಸಿದ ನಂತರ ರಾಗಿಣಿ ಈಗ ತುಂಬಾ ಬದಲಾಗಿದ್ದಾರೆ. ಮತ್ತೆ ಸಿನಿಮಾಗೆ ಕಮ್‌ಬ್ಯಾಕ್ ಆಗಿರುವ ರಾಗಿಣಿ ಕೈತುಂಬಾ ಚಿತ್ರಗಳ ಜೊತೆ ಹಸಿಬಿಸಿ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಿರುತ್ತಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೀರೋಯಿನ್‌ ಆಗಬೇಕು ಎನ್ನುವುದು ನನ್ನ Childhood Dream

    ಹೀರೋಯಿನ್‌ ಆಗಬೇಕು ಎನ್ನುವುದು ನನ್ನ Childhood Dream

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಿಲಿಂದ್‌ ಸೋಮನ್‌ ಬಗ್ಗೆ ನಟಿ ಚಿತ್ರಾಲ್‌ ಮಾತು

    ಮಿಲಿಂದ್‌ ಸೋಮನ್‌ ಬಗ್ಗೆ ನಟಿ ಚಿತ್ರಾಲ್‌ ಮಾತು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅನುಭವ ಖ್ಯಾತಿಯ ನಟಿ ಅಭಿನಯ ಕುಟುಂಬದ ಮೇಲೆ ಲುಕೌಟ್ ನೋಟಿಸ್

    ಅನುಭವ ಖ್ಯಾತಿಯ ನಟಿ ಅಭಿನಯ ಕುಟುಂಬದ ಮೇಲೆ ಲುಕೌಟ್ ನೋಟಿಸ್

    ಬೆಂಗಳೂರು: ಇತ್ತೀಚೆಗೆ ಜೈಲು ಶಿಕ್ಷೆಗೆ ಗುರಿಯಾಗಿರುವ ಅನುಭವ ಖ್ಯಾತಿಯ ನಟಿ (Actress) ಅಭಿನಯ (Abhinaya) ಹಾಗೂ ಆಕೆಯ ಕುಟುಂಬದ ಮೇಲೆ ಲುಕೌಟ್ ನೋಟಿಸ್ (Lookout Notice) ಜಾರಿಯಾಗಿದೆ.

    ಅತ್ತಿಗೆ ವರಲಕ್ಷ್ಮಿ ಅವರು ನಟಿ ಅಭಿನಯ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲು ಮಾಡಿದ್ದರು. ಅಭಿನಯ ಕುಟುಂಬ ವರದಕ್ಷಿಣೆ ಹಣ ಪಡೆದಿದ್ದಲ್ಲದೆ ಲಕ್ಷ್ಮಿದೇವಿಯವರನ್ನು ಪೋಷಕರ ಮನೆಗೆ ಅಟ್ಟಿದ್ದರು. 80 ಸಾವಿರ ರೂ. ನಗದು ಹಾಗೂ 250 ಗ್ರಾಂ ಚಿನ್ನಾಭರಣ ವರದಕ್ಷಿಣೆ ರೂಪವಾಗಿ ಪಡೆದಿರುವುದು ಕೂಡ ಸಾಬೀತಾಗಿತ್ತು. ಸೆಷನ್ಸ್ ಕೋರ್ಟ್ ಅಭಿನಯ, ತಾಯಿ ಹಾಗೂ ಸಹೋದರನಿಗೆ ಜೈಲು ಶಿಕ್ಷೆ ವಿಧಿಸಿತ್ತು.

    ಯಾವಾಗ ಜೈಲು ಶಿಕ್ಷೆ ಪ್ರಕಟವಾಯಿತೋ, ಅಂದಿನಿಂದ ಅಭಿನಯ ಮತ್ತು ಕುಟುಂಬದ ಸದಸ್ಯರು ಪೊಲೀಸರ ಕೈಗೆ ಸಿಗದೇ ತಕೆಮರೆಸಿಕೊಂಡಿದ್ದಾರೆ. ಈ ಮೊದಲು ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಅಭಿನಯ, ಸಹೋದರ ಹಾಗೂ ತಾಯಿ ಹೈಕೋರ್ಟ್‌ಗೆ ಹೋಗಿದ್ದರು. ಆದರೆ ಹೈಕೋರ್ಟ್ ಸಹ ಸೆಷನ್ಸ್ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು. ಈ ಹಿನ್ನೆಲೆ ಆರೋಪಿಗಳನ್ನು ಬಂಧಿಸಬೇಕಿತ್ತು. ಆದರೆ ಪೊಲೀಸರ ಕೈಗೆ ಅವರು ಸಿಗದೇ ತಲೆಮರೆಸಿಕೊಂಡಿದ್ದಾರೆ. ಇದೀಗ ನಟಿ ಅಭಿನಯ, ತಾಯಿ ಜಯಮ್ಮ ಹಾಗೂ ಸಹೋದರ ಚೆಲುವರಾಜು ಪತ್ತೆಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಅರಸೀಕೆರೆಯಲ್ಲಿ ಮತ್ತೆ ಜೆಡಿಎಸ್ ಗೆಲ್ಲುವವರೆಗೂ ನಾನು ನಿದ್ರೆ ಮಾಡಲ್ಲ – ಪ್ರಜ್ವಲ್ ಶಪಥ

    ಸಾರ್ವಜನಿಕರಿಗೆ ಈ ಎಲ್ಲಾ ಆರೋಪಿಗಳ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕರೆ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮೊದಲ ಬಾರಿ ರಾಜ್ಯಸಭಾ ಕಲಾಪದ ಅಧ್ಯಕ್ಷತೆ ವಹಿಸಿದ ಪಿ.ಟಿ ಉಷಾ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಿಕಿನಿ ಅಥ್ಲೀಟ್‌ ಆಗಿದ್ಯಾಕೆ ಚಿತ್ರಾಲ್.?

    ಬಿಕಿನಿ ಅಥ್ಲೀಟ್‌ ಆಗಿದ್ಯಾಕೆ ಚಿತ್ರಾಲ್.?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಸಾಕ್ಷಾತ್ಕರ’ ಸಿನಿಮಾದ ನಾಯಕಿ ಜಮುನಾ ವಿಧಿವಶ

    ‘ಸಾಕ್ಷಾತ್ಕರ’ ಸಿನಿಮಾದ ನಾಯಕಿ ಜಮುನಾ ವಿಧಿವಶ

    ನ್ನಡದಲ್ಲಿ ಭೂಕೈಲಾಸ, ಸಾಕ್ಷಾತ್ಕಾರ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ಜಮುನಾ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. 86ರ ವಯಸ್ಸಿನ ಹಿರಿಯ ನಟಿ ಹೈದರಾಬಾದ್ ನಲ್ಲಿ ನೆಲೆಸಿದ್ದರು. ವಯೋಸಹಜ ಕಾಯಿಲೆಗಳು ಅವರನ್ನು ಹೈರಾಣು ಮಾಡಿದ್ದವು. ಚಿಕಿತ್ಸೆ ಫಲಕಾರಿಯಾಗದೇ ಹೈದರಾಬಾದ್ ನಿವಾಸದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

    1953ರಲ್ಲಿ ತೆರೆಕಂಡ ಪುಟ್ಟಿಲ್ಲು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದವರು ಜಮುನಾ.  ಆನಂತರ ತೆಲುಗು, ತಮಿಳು, ಹಿಂದಿ, ಕನ್ನಡ ಹೀಗೆ ನಾನಾ ಭಾಷೆಯ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ದಕ್ಷಿಣದ ಅಷ್ಟೂ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಕನ್ನಡದಲ್ಲಿ ಡಾ.ರಾಜ್ ಕುಮಾರ್ ಜೊತೆ ಭೂ ಕೈಲಾಸ ಮತ್ತು ಸಾಕ್ಷಾತ್ಕಾರ ಸಿನಿಮಾಗಳಲ್ಲೂ ಇವರು ನಟಿಸಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳು

    ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಜಮುನಾ, ಎನ್.ಟಿ.ಆರ್. ಜಗ್ಗಯ್ಯ ಸೇರಿದಂತೆ ಆ ಕಾಲದ ಸೂಪರ್ ಸ್ಟಾರ್ ಗಳ ಜೊತೆ ನಟಿಸಿದ್ದಾರೆ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಹೆಗ್ಗಳಿಕೆ ಇವರದ್ದು. ದೊಂಗ ರಾಮುಟು, ಗುಂಡಮ್ಮ ಕಥ, ತೆನಾಲಿ ರಾಮಕೃಷ್ಣ ಹೀಗೆ ಇವರ ನಟನೆಯ ಸೂಪರ್ ಹಿಟ್ ಚಿತ್ರಗಳು. ಪುಟ್ಟಣ್ಣ ಕಣಗಾಲ್ ನಿರ್ದೇಶನ ಚಿತ್ರಗಳಲ್ಲೂ ಇವರು ನಟಿಸಿದ್ದಾರೆ.

    ಸಿನಿಮಾಗಳಲ್ಲಿ ಮಾತ್ರವಲ್ಲ ರಾಜಕಾರಣದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಜಮುನಾ, 1980ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಅವರು 1989ರಲ್ಲಿ ರಾಜಮಂಡ್ರಿಗೆ ಎಂಪಿ ಆಗಿ ಆಯ್ಕೆಯಾದರು. 1990ರಲ್ಲಿ ಜನತಾ ಪಕ್ಷದ ಪರವಾಗಿಯೂ ಅವರು ಕೆಲಸ ಮಾಡಿದರು. ಸಿನಿಮಾ ಮತ್ತು ರಾಜಕಾರಣ ಎರಡರಲ್ಲೂ ಯಶಸ್ಸಿ ಕಂಡ ಹಿರಿಯ ಜೀವವಿದು. ನಟಿಯ ಅಗಲಿಕೆಗೆ ಚಿತ್ರೋದ್ಯಮ ಕಂಬಿನಿ ಮಿಡಿದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶೂಟಿಂಗ್ ಸೆಟ್‌ನಲ್ಲಿ ತುನೀಶಾ ಆತ್ಮಹತ್ಯೆ – ಸಹ ನಟ ಶೀಜಾನ್ ಬಂಧನ

    ಶೂಟಿಂಗ್ ಸೆಟ್‌ನಲ್ಲಿ ತುನೀಶಾ ಆತ್ಮಹತ್ಯೆ – ಸಹ ನಟ ಶೀಜಾನ್ ಬಂಧನ

    ಮುಂಬೈ: ಟಿವಿ ಕಾರ್ಯಕ್ರಮದ ಸೆಟ್‌ನಲ್ಲಿ ನಟಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿರುವ ಆರೋಪದ ಮೇಲೆ ಸಹ ನಟನನ್ನು ಬಂಧಿಸಲಾಗಿದೆ.

    ಮಹಾರಾಷ್ಟ್ರದ (Maharashtra) ಪಾಲ್ಘರ್ ಜಿಲ್ಲೆಯ ವಸೈ ಎಂಬಲ್ಲಿ ಶನಿವಾರ ಶೂಟಿಂಗ್ ಸೆಟ್‌ನಲ್ಲಿಯೇ (Shooting Set) ಕಿರುತೆರೆ ನಟಿ ತುನೀಶಾ ಶರ್ಮಾ (Tunisha Sharma)(20) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಹ ನಟ ಶೀಜಾನ್ ಮೊಹಮ್ಮದ್ ಖಾನ್ (Sheezan Mohammed Khan) ಅವರನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಈಗ ಬಂಧಿಸಲಾಗಿದೆ.

    ತುನೀಶಾ ತಾಯಿ ಶೀಜಾನ್ ವಿರುದ್ಧ ಈ ಬಗ್ಗೆ ದೂರು ನೀಡಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಸೋಮವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆತ್ಮಹತ್ಯೆಗೆ ಶರಣಾದ ನಟಿಯ ಮರಣೋತ್ತರ ಪರೀಕ್ಷೆ ಇಂದು ಮುಂಜಾನೆ ನೈಗಾಂವ್‌ನ ಜೆಜೆ ಆಸ್ಪತ್ರೆಯಲ್ಲಿ ನಡೆಸಲಾಗಿದೆ.

    ನಟಿ ಶೂಟಿಂಗ್ ಸೆಟ್‌ನಲ್ಲಿ ಚಹಾದ ವಿರಾಮದ ಬಳಿಕ ವಾಶ್‌ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ತುನೀಶಾ ಶರ್ಮಾ ಶವ ಪತ್ತೆಯಾಗಿತ್ತು. ಆಕೆ ಎಷ್ಟು ಹೊತ್ತಾದರೂ ಹೊರಗೆ ಬಾರದ ಹಿನ್ನೆಲೆ ಸೆಟ್‌ನಲ್ಲಿದ್ದವರು ಬಾಗಿಲು ಒಡೆದು ಒಳಗೆ ಹೋಗಿದ್ದಾರೆ. ಬಳಿಕ ಅವರನ್ನು ಮಧ್ಯರಾತ್ರಿ 1:30ರ ವೇಳೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ಇದನ್ನೂ ಓದಿ: ಸೆಟ್‌ನಲ್ಲೇ ಸೀರಿಯಲ್ ಖ್ಯಾತ ನಟಿ ಆತ್ಮಹತ್ಯೆ

    ತುನಿಶಾ ಶರ್ಮಾ ಅವರ ಸಹೋದ್ಯೋಗಿಗಳು ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ತನಿಖೆ ನಡೆಸಿದ್ದಾರೆ. ಆದರೆ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಎಂದಿದ್ದಾರೆ. ಆಕೆಯ ಸಾವನ್ನು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಕೋನಗಳಿಂದಲೂ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ತುನಿಶಾ ಶರ್ಮಾ ‘ಭಾರತ್ ಕಾ ವೀರ್ ಪುತ್ರ – ಮಹಾರಾಣಾ ಪ್ರತಾಪ್’ ಧಾರವಾಹಿಯಲ್ಲಿ ಬಾಲ ನಟಿಯಾಗಿ ಚಂದ್ ಕನ್ವರ್ ಪಾತ್ರವನ್ನು ನಿರ್ವಹಿಸುವ ಮೂಲಕ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು. ಅಂದಿನಿಂದ ಅವರು ಹಲವು ಶೋಗಳಲ್ಲಿ ಹಾಗೂ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಇಷ್ಕ್ ಸುಭಾನ್ ಅಲ್ಲಾ’, ‘ಗಬ್ಬರ್ ಪೂಚ್‌ವಾಲಾ’, ಶೇರ್-ಎ-ಪಂಜಾಬ್: ಮಹಾರಾಜ ರಂಜಿತ್ ಸಿಂಗ್’ ಹಾಗೂ ‘ಚಕ್ರವರ್ತಿ ಅಶೋಕ ಸಾಮ್ರಾಟ್’ ಶೋಗಳಲ್ಲೂ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ದೊಡ್ಮನೆಯಲ್ಲಿ ಡಬಲ್ ಎಲಿಮಿನೇಷನ್: ಅಮೂಲ್ಯ, ಅರುಣ್ ಸಾಗರ್ ಆಟಕ್ಕೆ ಬ್ರೇಕ್ ಹಾಕಿದ ಬಿಗ್ ಬಾಸ್

    Live Tv
    [brid partner=56869869 player=32851 video=960834 autoplay=true]

  • ಆತ ನೇರವಾಗಿ ಮಂಚಕ್ಕೆ ಕರೆದ: ಭಯಾನಕ ಸತ್ಯ ಬಿಚ್ಚಿಟ್ಟ ನಟಿ ತೇಜಸ್ವಿನಿ

    ಆತ ನೇರವಾಗಿ ಮಂಚಕ್ಕೆ ಕರೆದ: ಭಯಾನಕ ಸತ್ಯ ಬಿಚ್ಚಿಟ್ಟ ನಟಿ ತೇಜಸ್ವಿನಿ

    ಮೀಟೂ ಪ್ರಕರಣಗಳು ಒಂದೊಂದೆ ಬೆಳಕಿಗೆ ಬರುತ್ತಿವೆ. ಸಿನಿಮಾ ರಂಗದ ಕರಾಳಮುಖವನ್ನು ಬಿಚ್ಚಿಡುತ್ತಾ, ಒಬ್ಬೊಬ್ಬರೇ ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಹೇಳುತ್ತಿದ್ದಾರೆ. ತಮಗೆ ತೊಂದರೆ ಕೊಟ್ಟವರ ಹೆಸರನ್ನು ನೇರವಾಗಿ ಹೇಳದೇ ತಮ್ಮ ಬದುಕಿನಲ್ಲಿ ನಡೆದ ಆ ಕರಾಳ ಸತ್ಯವನ್ನು ಬಯಲು ಮಾಡುವ ಮೂಲಕ ಚಿತ್ರರಂಗದ ಮತ್ತೊಂದು ಮುಖವನ್ನು ಅನಾರವಣಗೊಳಿಸುತ್ತಿದ್ದಾರೆ. ಇವರ ಸಾಲಿಗೆ ಇದೀಗ ಮರಾಠಿ ಸಿನಿಮಾ ರಂಗದ ನಟಿಯು ಕೂಡ ಸೇರಿಕೊಂಡಿದ್ದಾರೆ.

    ಇದು ಚಿತ್ರರಂಗದಲ್ಲಿ ನಡೆದಿರುವ ಘಟನೆ ಅಲ್ಲದೇ ಇದ್ದರೂ, ಸಿನಿಮಾ ರಂಗದಲ್ಲಿ ಇರುವವರಿಗೆ ಆದ ಕಹಿ ಘಟನೆ ಆಗಿದ್ದರಿಂದ ಸಿನಿಮಾ ರಂಗ ಇದನ್ನು ಗಂಭೀರವಾಗಿಯೇ ತಗೆದುಕೊಂಡಿದೆ. ಈ ಘಟನೆ ನಡೆದದ್ದು ಮರಾಠಿ ಸಿನಿಮಾ ರಂಗದಲ್ಲಾಗಿದ್ದು, ತಮ್ಮ ಜೀವನದಲ್ಲಿ ನಡೆದ ಘಟನೆಯನ್ನು ನಟಿ  ತೇಜಸ್ವಿನಿ ಪಂಡಿತ್ ಹತ್ತು ವರ್ಷಗಳ ನಂತರ ಬಿಚ್ಚಿಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಅವರು ಮನಬಿಚ್ಚಿ ಮಾತನಾಡಿದ್ದಾರೆ.

    ಆಗ ತಾನೆ ಸಿನಿಮಾ ರಂಗಕ್ಕೆ ಬಂದ ದಿನಗಳವು. ಹಾಗಾಗಿ ನನ್ನ ಬಳಿ ತುಂಬಾ ಹಣ ಇರಲಿಲ್ಲ. ಒಂದು ರೀತಿಯಲ್ಲಿ ಕಡಿಮೆ ಹಣದಲ್ಲೇ ನಾನು ಬದುಕು ನಡೆಸುತ್ತಿದ್ದೆ. ಹಾಗಾಗಿ ನನ್ನ ಬಳಿ ಹಣ ಇಲ್ಲ ಅನ್ನು ಕಾರಣಕ್ಕಾಗಿ ಅಂಥದ್ದೊಂದು ಘಟನೆಗೆ ಸಾಕ್ಷಿಯಾಗಬೇಕಾಯಿತು. ಪುಣೆಯ ಅಪಾರ್ಟ್ಮೆಂಟ್ ನಲ್ಲಿ ನಾನು ವಾಸವಿದ್ದೆ. ಆ ಅಪಾರ್ಟ್ಮೆಂಟ್ ಕಾರ್ಪೋರೇಟ್ ಒಬ್ಬರಿಗೆ ಸೇರಿದ್ದಾಗಿತ್ತು. ಬಾಡಿಗೆ ಪಾವತಿಸಲು ಅವರ ಬಳಿ ಹೋದಾಗ, ನೇರವಾಗಿಯೇ ಅವನು ಮಂಚಕ್ಕೆ ಕರೆದ’ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ತೇಜಸ್ವೀನಿಯನ್ನು ಅವನು ನೇರವಾಗಿ ಮಂಚಕ್ಕೆ ಬರುತ್ತೀಯಾ ಎಂದು ಕೇಳಿದಾಗ ಶಾಕ್ ಆಗಿದ್ದರಂತೆ. ಕೋಪದಿಂದಲೇ ಅವನಿಗೆ ನೀರಿನ ಲೋಟವನ್ನು ಮುಖಕ್ಕೆ ಎಸೆದು ಬಂದಿದೆ ಎಂದು ಹೇಳಿಕೊಂಡಿದ್ದಾರೆ. ‘ಆಗ ಬೈ ಅರಾಚೆ’ ಸಿನಿಮಾದ ಮೂಲಕ ಮರಾಠಿ ಚಿತ್ರರಂಗಕ್ಕೆ ಕಾಲಿಟ್ಟ ತೇಜಸ್ವೀನಿ ಆನಂತರ ಹಲವು ಚಿತ್ರಗಳನ್ನು ಮಾಡಿದ್ದಾರೆ. ಈ ಘಟನೆಯಿಂದಾಗಿ ಅವರು ಎಚ್ಚರಿಕೆಯಿಂದ ಬದುಕಬೇಕಾಯಿತು ಎಂದು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]