Tag: ನಟ ಅವಿನಾಶ್

  • 30 ವರ್ಷಗಳ ಬಳಿಕ ಕಿರುತೆರೆಗೆ ನಟ ಅವಿನಾಶ್ – ʻವಸುದೇವ ಕುಟುಂಬʼದಲ್ಲಿ ನಟನೆ

    30 ವರ್ಷಗಳ ಬಳಿಕ ಕಿರುತೆರೆಗೆ ನಟ ಅವಿನಾಶ್ – ʻವಸುದೇವ ಕುಟುಂಬʼದಲ್ಲಿ ನಟನೆ

    ವೀಕ್ಷಕರಿಗೆ ವಿಭಿನ್ನ ಕಥೆಗಳನ್ನು ನೀಡುತ್ತಿರುವ ಜನಪ್ರಿಯ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಈಗ ʻವಸುದೇವ ಕುಟುಂಬʼ (Vasudeva Kutumba) ಎಂಬ ಹೊಸ ಧಾರಾವಾಹಿಯು ಬಿತ್ತರಗೊಳ್ಳಲು ಸಿದ್ಧಗೊಂಡಿದೆ. ಕೋರಮಂಗಲ ಟಾಕೀಸ್ ಸಂಸ್ಥೆಯಡಿ ಅನಿಲ್ ಕೋರಮಂಗಲ ನಿರ್ಮಾಣ ಮತ್ತು ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಧಾರಾವಾಹಿಗೆ `ಒಂದೇ ಬೇರು, ಕವಲು ನೂರು’ ಎಂಬ ಅರ್ಥಪೂರ್ಣ ಅಡಿಬರಹವಿದೆ.

    ಸೀರಿಯಲ್ ಮುಖ್ಯ ಆಕರ್ಷಣೆ ಅಂದ್ರೆ ಹಿರಿಯ ನಟ ಅವಿನಾಶ್ (Avinash) ಬರೋಬ್ಬರಿ ಮೂವತ್ತು ವರ್ಷಗಳ ನಂತರ ಕಿರುತೆರೆಗೆ ಅದರಲ್ಲೂ ಸ್ಟಾರ್ ಸುವರ್ಣಗೆ ಪದಾರ್ಪಣೆ ಮಾಡಿರುವುದು ಹೆಮ್ಮೆಯ ಸಂಗತಿ. ಕುಟುಂಬದ ಯಜಮಾನ ವಸುದೇವ ಹಾಗೂ ಮುದ್ದಿನ ನಾಲ್ಕು ಹೆಣ್ಣು ಮಕ್ಕಳ ತಂದೆಯಾಗಿ ಅಭಿನಯಿಸುತ್ತಿದ್ದಾರೆ. ಪತ್ನಿಯಾಗಿ ಹಿರಿಯ ನಟಿ ಅಂಜಲಿ. ಪುತ್ರಿಯರಾಗಿ ಭಾವನಾ ಪಾಟೀಲ್, ಚೈತ್ರಾತೋಟದ್, ಬೃಂದಾ ಕಶ್ಯಪ್, ಆರಾಧ್ಯ. ಇವರೊಂದಿಗೆ ಹಂಸ, ಭಗತ್, ಆರ್.ಜಿ.ಅನೂಪ ಸೇರಿದಂತೆ ಅನೇಕ ಅನುಭವಿ ಕಲಾವಿದರುಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಇದನ್ನೂ ಓದಿ: ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?

    ಹಳ್ಳಿಯಲ್ಲಿ ವಸುದೇವನ ಹಿರಿಮಗಳ ಮದುವೆ ಸಿದ್ಧತೆ ಸಂಭ್ರಮದಲ್ಲಿದ್ದಾಗ, ಆಕಸ್ಮಿಕವಾಗಿ ಸಂಭವಿಸುವಂತಹ ಒಂದು ದುರ್ಘಟನೆ ಎಲ್ಲರ ಜೀವನವನ್ನು ತಲೆಕೆಳಗಾಗಿಸುವಂತೆ ಮಾಡುತ್ತದೆ. ಇದರಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ. ಇಂತಹ ಕಷ್ಟದ ಸಮಯದಲ್ಲಿ ಕಥಾನಾಯಕಿ ಸ್ವಾತಿ, ತನ್ನ ತಾಳ್ಮೆ ಮತ್ತು ಧೈರ್ಯದಿಂದ ತಾಯಿ, ಅಕ್ಕ ತಂಗಿಯರಿಗೆ ಹೇಗೆ ಆಧಾರವಾಗಿ ನಿಲ್ಲುತ್ತಾಳೆ? ತನ್ನ ದುಖ:ವನ್ನು ಮರೆತು ಮನೆಯ ಬದುಕನ್ನು ಮರುಕಟ್ಟುವಲ್ಲಿ ಅವಳು ಯಶಸ್ವಿಯಾಗುತ್ತಾಳಾ? ಮನೆತನದ ಮಾನ ಗೌರವ ಯಾವ ರೀತಿ ಕಾಪಾಡುತ್ತಾಳೆ ಎಂಬುದು ಕಥೆಯ ಮುಖ್ಯ ಸಾರಾಂಶವಾಗಿದೆ. ಇದೇ ಸೆಪ್ಟೆಂಬರ್ 15, ಸೋಮವಾರದಿಂದ ಪ್ರತಿದಿನ ರಾತ್ರಿ 8.30ಕ್ಕೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಇದನ್ನೂ ಓದಿ: ಕರಾವಳಿಯ ಮತ್ತೊಂದು ಕಥನ `ದಿಂಸೋಲ್’ ಪೋಸ್ಟರ್ ರಿಲೀಸ್

  • ಮೌನಂ ಚಿತ್ರೀಕರಣ ಮುಕ್ತಾಯ

    ಮೌನಂ ಚಿತ್ರೀಕರಣ ಮುಕ್ತಾಯ

    ಬೆಂಗಳೂರು: ನಿಹಾರಿಕಾ ಮೂವೀಸ್ ಲಾಂಛನದಲ್ಲಿ ಶ್ರೀಹರಿ ನಿರ್ಮಿಸಿರುವ ‘ಮೌನಂ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ- ರಾಜ್ ಪಂಡಿತ್, ಛಾಯಾಗ್ರಹಣ – ಶಂಕರ್, ಸಂಗೀತ – ಆರವ್ ರಿಶಿಕ್, ಸಂಕಲನ – ಗುರುಮೂರ್ತಿ ಹೆಗಡೆ, ಸಾಹಸ – ಕೌರವ ವೆಂಕಟೇಶ್, ಅಲ್ಟಿಮೇಟ್ ಶಿವು, ಸಾಹಿತ್ಯ – ಆಕಾಶ್ ಎಸ್., ಸಹ ನಿರ್ದೇಶಕರು- ರಿತೇಶ್, ಗುಣವಂತ ಮಂಜು, ತಾರಾಗಣದಲ್ಲಿ – ಅವಿನಾಶ್, ಮಯೂರಿ (ಕೃಷ್ಣಲೀಲಾ), ಬಾಲಾಜಿ ಶರ್ಮ (ಅಮೃತವರ್ಷಿಣಿ ಖ್ಯಾತಿ), ಹನುಮಂತೇಗೌಡ, ರಿತೇಶ್, ಕೆಂಪೇಗೌಡ, ಗುಣವಂತ ಮಂಜು, ನಯನ (ಕಾಮಿಡಿ ಕಿಲಾಡಿಗಳು), ಸಿಂಚನ, ಮಂಜುಳಾ ರೆಡ್ಡಿ, ಮುಂತಾದವರಿದ್ದಾರೆ.

    ಚಿತ್ರದಲ್ಲಿ ಹಿರಿಯ ನಟ ಅವಿನಾಶ್ ಅವರು ತಮ್ಮ 35 ವರ್ಷಗಳ ವೃತ್ತಿ ಬದುಕಿನಲ್ಲಿ ಅತ್ಯಂತ ವಿಶಿಷ್ಟವಾದ ಸುಮಾರು 6 ಶೇಡ್‍ಗಳಿರುವ ಪಾತ್ರದಲಿ ಅಭಿನಯಿಸಿದ್ದಾರೆ. ಮಯೂರಿ ಅವರು ಹೋಮಿ ಮತ್ತು ಆಕ್ಷನ್ ಸೀಕ್ವೆನ್ಸ್‍ಗಳಲ್ಲಿ ಮಿಂಚಿದ್ದಾರೆ. ಮನುಷ್ಯನಿಗೆ ಮನುಷ್ಯನೇ ಶತ್ರು, ನಾವೇ ನಮ್ಮ ಹೊರಗಡೆ ಇರುವ ಶತ್ರುವನ್ನು ಮಟ್ಟಹಾಕುವ ಮೊದಲು ನಮ್ಮ ಒಳಗಡೆ ಇರುವ ಶತ್ರುವನ್ನು ಮಟ್ಟಹಾಕಬೇಕು ಅನ್ನೋದು ಚಿತ್ರದ ಕಥೆಯ ತಿರುಳು ಎಂಬುದು ಚಿತ್ರತಂಡದ ಮಾತು.