ಮೈಸೂರು: ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಹಸಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯ ಜೊತೆ ಚಿಕ್ಕಣ್ಣ ಹಸಮಣೆ ಏರಲಿದ್ದಾರೆ.
ಮಹದೇವಪುರ ಗ್ರಾಮದ ಪಾವನಾ ಎಂಬ ಯುವತಿಯ ಜೊತೆ ಚಿಕ್ಕಣ್ಣ ಮದುವೆ ನಿಶ್ಚಯವಾಗಿದೆ. ಈಗಾಗಲೇ ಹೂ ಮುಡಿಸುವ ಶಾಸ್ತ್ರವನ್ನು ಎರಡು ಕುಟುಂಬಗಳು ನೇರವೇರಿಸಿರಿವೆ. ನಿಶ್ಚಿತಾರ್ಥ ಮತ್ತು ಮದುವೆ ದಿನಾಂಕ ಮುಂದಿನ ವಾರ ನಿಗದಿಯಾಗಲಿದೆ.
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ.
ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ ಚಿಕ್ಕಣ್ಣ ನಾನು ಸೆರೆಹಿಡಿದಿದ್ದ ಆನೆಯ ಫೋಟೋವನ್ನು ಅರಣ್ಯ ಇಲಾಖೆಯ ನೆರವಿಗಾಗಿ 1 ಲಕ್ಷ ರೂಪಾಯಿಗಳನ್ನು ನೀಡಿ ಖರೀದಿ ಮಾಡಿರುವುದು ಶ್ಲಾಘನೀಯ. ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನನ್ನ ಕೃತಘ್ನತೆಗಳು’ ಎಂದು ಬರೆದುಕೊಂಡಿದ್ದಾರೆ.
ನಮ್ಮ ಚಿಕ್ಕಣ್ಣ ನಾನು ಸೆರೆಹಿಡಿದಿದ್ದ ಆನೆಯ ಫೋಟೋವನ್ನು ಅರಣ್ಯ ಇಲಾಖೆಯ ನೆರವಿಗಾಗಿ ೧ ಲಕ್ಷ ರೂಪಾಯಿಗಳನ್ನು ನೀಡಿ ಖರೀದಿ ಮಾಡಿರುವುದು ಶ್ಲಾಘನೀಯ. ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನನ್ನ ಕೃತಘ್ನತೆಗಳು pic.twitter.com/aQI4KTgJn7
ಸಿನಿಮಾ ಬ್ಯುಸಿಯ ನಡುವೆಯು ತಮ್ಮ ವಿರಾಮ ವೇಳೆಯನ್ನ ಸದುಪಯೋಗ ಪಡಿಸಿಕೊಳ್ಳುವ ದರ್ಶನ್ ಬಿಡುವಿದ್ದಾಗೆಲ್ಲಾ ಕಾಡಿನಲ್ಲಿ ಕಾಲ ಕಳೆಯುತ್ತಾರೆ. ಅಲ್ಲದೇ ವನ್ಯಜೀವಿ ಹಾಗೂ ಪ್ರಕೃತಿ ಫೋಟೋಗ್ರಾಫಿ ಬಗ್ಗೆ ದರ್ಶನ್ ಹೆಚ್ಚು ಆಸಕ್ತರಾಗಿದ್ದು, ಪ್ರಾಣಿ ಪಕ್ಷಿಗಳ ಅಂದವನ್ನ ಕ್ಯಾಮೆರಾದಲ್ಲಿ ಸೆರೆಹಿಡಿಯುವ ಹವ್ಯಾಸ ಹೊಂದಿದ್ದಾರೆ. ಈ ಹಿಂದೆ ತಾವು ಸೆರೆ ಹಿಡಿದ್ದ ಪ್ರಕೃತಿಯ ಅದ್ಭುತ ದೃಶ್ಯಗಳ ಫೋಟೋಗಳನ್ನು ಹರಾಜು ಹಾಕಿದ್ದರು. ಮಾರ್ಚ್ 3 ರಂದು ನಡೆದ ಈ ಹರಾಜಿನಲ್ಲಿ 3.75 ಲಕ್ಷ ರೂ. ಸಂಗ್ರಹಣೆಯಾಗಿತ್ತು. ಇದರಲ್ಲಿ ಬಂದ ಹಣವನ್ನು ದರ್ಶನ್ ಅರಣ್ಯ ಸಂರಕ್ಷಣೆಗೆ ಖರ್ಚು ಮಾಡುತ್ತೇನೆ ಎಂದು ತಿಳಿಸಿದ್ದರು.
ಬೆಂಗಳೂರು: ಕನ್ನಡ ಚಿತ್ರ ರಂಗದಲ್ಲಿ ಕಾಮಿಡಿ ಕಿಂಗ್ ಎಂದೇ ಪ್ರಸಿದ್ಧಿ ಪಡೆದಿರುವ ನಟ ಚಿಕ್ಕಣ್ಣ ಅವರ ಕಾರಿನ ಗಾಜು ಒಡೆದು ಕಳ್ಳತನ ಮಾಡಿರುವ ಘಟನೆ ನಗರದ ನಾಗರವಾವಿ ಬಳಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಚಿಕ್ಕಣ್ಣ ಅವರು ತಮ್ಮ ಕಾರನ್ನು ನಾಗರಭಾವಿಯ ಎಂಆರ್‍ಕೆ ಅಪಾರ್ಟ್ ಮೆಂಟ್ ಬಳಿ ನಿಲ್ಲಿಸಿ ತೆರಳಿದ್ದ ವೇಳೆ ಘಟನೆ ನಡೆದಿದೆ. ಕಾರಿನ ಗಾಜು ಒಡೆದು ತಮ್ಮ ಕೈ ತಳಕ ತೋರಿರುವ ಕಳ್ಳರು, ಕಾರಿನಲ್ಲಿದ್ದ ಬೆಲೆ ಬಾಳುವ ಸ್ಟಿರಿಯೋ ಹಾಗೂ ಎಲ್‍ಇಡಿ ಸೆಟ್ ಹೊತ್ತೊಯಿದಿದ್ದಾರೆ.
ಮೇ 20 ರ ಭಾನುವಾರದಂದು ಘಟನೆ ನಡೆದಿದ್ದು, ಈ ಸಂಬಂಧ ಚಿಕ್ಕಣ್ಣ ಅವರು ಈಗಾಗಲೇ ಅನ್ನಪೂಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.