Tag: ನಟ ರಜನಿಕಾಂತ್

  • ಬದರಿನಾಥ ದೇವಾಲಯಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿ

    ಬದರಿನಾಥ ದೇವಾಲಯಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿ

    ಉತ್ತರಾಖಂಡದ (Uttarakhand) ಬದರಿನಾಥ (Badrinath) ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ (Actor Rajanikanth) ಭೇಟಿ ನೀಡಿ, ದರ್ಶನ ಪಡೆದಿದ್ದಾರೆ.

    ಸೋಮವಾರ (ಅ.6) ದೇಗುಲಕ್ಕೆ ಆಗಮಿಸಿದ ನಟನನ್ನು ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರ ಮಾಡಿಕೊಂಡರು. ಜೊತೆಗೆ ತುಳಸಿ ಮಾಲೆ ಹಾಗೂ ದೇವರ ಪ್ರಸಾದವನ್ನು ರಜನಿಕಾಂತ್‌ಗೆ ನೀಡಿದರು.ಇದನ್ನೂ ಓದಿ: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸೋನಂ ಕಪೂರ್

    ಚಳಿಗಾಲದ ಹಿನ್ನೆಲೆ ದೇಗುಲದ ಬಾಗಿಲುಗಳನ್ನು ಇನ್ನು ಕೆಲ ದಿನಗಳಲ್ಲಿ ಮುಚ್ಚಲಾಗುತ್ತಿದ್ದು, ಅದಕ್ಕೂ ಮುನ್ನವೇ ರಜನಿಕಾಂತ್ ದರ್ಶನ ಪಡೆದುಕೊಂಡಂತಾಗಿದೆ. ಬೆಚ್ಚಗಿನ ಉಡುಪು ಧರಿಸಿ, ರಜನಿಕಾಂತ್ ಅವರು ಯಾತ್ರಾ ಮಾರ್ಗದಲ್ಲಿ ಸಾಗುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

    ಇದಕ್ಕೂ ಮುನ್ನ ಶನಿವಾರ (ಟ.4) ಋಷಿಕೇಶದ ಗಂಗಾ ನದಿಯ ದಡದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿದರು.ಇದನ್ನೂ ಓದಿ: ಅಮೆರಿಕಕ್ಕೆ ಅಪರೂಪದ ಖನಿಜಗಳ ಮೊದಲ ರಫ್ತು ಕಳುಹಿಸಿದ್ದೇವೆ : ಪಾಕ್

  • Jailer: ರಜನಿಕಾಂತ್- ಶಿವಣ್ಣ ಆ್ಯಕ್ಟಿಂಗ್ ಚಿಂದಿ ಎಂದ ಪ್ರೇಕ್ಷಕರು

    Jailer: ರಜನಿಕಾಂತ್- ಶಿವಣ್ಣ ಆ್ಯಕ್ಟಿಂಗ್ ಚಿಂದಿ ಎಂದ ಪ್ರೇಕ್ಷಕರು

    ಸೂಪರ್ ಸ್ಟಾರ್ ರಜನಿಕಾಂತ್(Rajanikanth)- ಶಿವಣ್ಣ (Shivarajkumar) ಕಾಂಬೋ ಸಿನಿಮಾ ‘ಜೈಲರ್’ (Jailer) ಸಿನಿಮಾ ರಿಲೀಸ್ ಆಗಿ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ಆಗಸ್ಟ್ 10 ರಿಲೀಸ್ ಆಗಿ ಮೊದಲ ದಿನವೇ ಭರ್ಜರಿ ಪ್ರದರ್ಶನ ಕಾಣುತ್ತಿದೆ. ‘ಬೀಸ್ಟ್’ ಸಿನಿಮಾದಿಂದ ಕೈ ಸುಟ್ಟುಕೊಂಡಿದ್ದ ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರದಿಂದ ಯಶಸ್ಸು ಸಿಕ್ಕಿದೆ.

    ಕೆಲ ವರ್ಷಗಳ ನಂತರ ತಲೈವಾ ‘ಜೈಲರ್’ (Jailer) ಮೂಲಕ ದರ್ಶನ ನೀಡಿದ್ದಾರೆ. ಚಿತ್ರದಲ್ಲಿ ಸಿಂಪಲ್ ಕಾಮನ್ ಮ್ಯಾನ್ ಮುತ್ತುವೇಲ್ ಆಗಿ ಕಾಣಿಸಿಕೊಳ್ಳುವ ತಲೈವಾ, ದ್ವಿತೀಯಾರ್ಧದಲ್ಲಿ ಟೈಗರ್ ಮುತ್ತುವೇಲ್ ಪಾಂಡಿಯನ್ ಆಗಿ ಮಾಸ್ ಅವತಾರದಲ್ಲಿ ಅಬ್ಬರಿಸಿದ್ದಾರೆ.

    ದೇವರ ಮನೆಯಲ್ಲಿ ಪೂಜೆ ಮಾಡುತ್ತಾ ಎಂಟ್ರಿ ನೀಡುವ ಮುತ್ತುವೇಲ್ ಬಹಳ ಸಿಂಪಲ್ ವ್ಯಕ್ತಿ. ಮಡದಿ, ಮಗ, ಸೊಸೆ- ಮೊಮ್ಮಗನ ಜತೆ ಸರಳ ಸುಖ ಸಂಸಾರ ನಡೆಸುವ ಕಾಮನ್ ಮ್ಯಾನ್. ಮುತ್ತುವೇಲ್ ಮಗ ಅರ್ಜುನ್ ಪೊಲೀಸ್ ಅಧಿಕಾರಿಯಾಗಿದ್ದು, ಪ್ರಕರಣವೊಂದನ್ನು ಭೇದಿಸಲು ಹೋಗಿ ಕಣ್ಮರೆಯಾಗ್ತಾನೆ. ಹೀಗೆ ಕಣ್ಮರೆಯಾಗುವ ಮಗನನ್ನು ಹುಡುಕಲು ನಾಯಕ ಮುತ್ತುವೇಲ್ ಮುಂದಾಗಲಿದ್ದು, ಯಾವ ರೀತಿ ಸೇಡು ತೀರಿಸಿಕೊಳ್ಳಲಿದ್ದಾನೆ ಎಂಬುವುದೇ ಚಿತ್ರದ ಕಥೆಯಾಗಿದೆ. ಇದನ್ನೂ ಓದಿ:ಸಿಕ್ಸ್ ಪ್ಯಾಕ್ ಅವತಾರದಲ್ಲಿ ಚಾರ್ಲಿ ಬೆಡಗಿ ಸಂಗೀತಾ

    ನಾಯಕ ಮುತ್ತುವೇಲ್ ತನ್ನ ಮಗನನ್ನು ಹುಡುಕುವ ಯತ್ನದಲ್ಲಿ ಕರ್ನಾಟಕ ಮೂಲದ ಡಾನ್ ನರಸಿಂಹನ ಸಹಾಯ ಪಡೆದುಕೊಳ್ತಾನೆ. ಈ ಪಾತ್ರವನ್ನು ಶಿವಣ್ಣ ನಿರ್ವಹಿಸಿದ್ದಾರೆ. ಕನ್ನಡದಲ್ಲಿಯೇ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಶಿವಣ್ಣ ಮಂಡ್ಯ ಮೂಲದ ಗ್ಯಾಂಗ್‌ಸ್ಟರ್ ಆಗಿದ್ದು ನಾಯಕನಿಗೆ ತನ್ನ ಮಗನನ್ನು ಹುಡುಕಲು ಸಹಾಯ ಮಾಡಲಿದ್ದಾರೆ. ಶಿವರಾಜ್ ಕುಮಾರ್ ನಿರ್ವಹಿಸಿರುವ ಈ ಪಾತ್ರ ವಿಶೇಷ ಅತಿಥಿ ಪಾತ್ರವಾಗಿದ್ದರೂ ಸಹ ಆ ಪಾತ್ರಕ್ಕೆ ತನ್ನದೇ ಆದ ಗತ್ತಿದೆ. ಚಿತ್ರದಲ್ಲಿ ನಾಯಕನ ಪಾತ್ರಕ್ಕೆ ಎಷ್ಟು ಗತ್ತು ಗಮ್ಮತ್ತಿದೆಯೋ ಅಷ್ಟೇ ಮಟ್ಟದ ಬಿಲ್ಡಪ್ ಶಿವಣ್ಣನ ಪಾತ್ರಕ್ಕೂ ಸಹ ಇದೆ. ತಲೈವಾ- ಶಿವಣ್ಣ ಇಬ್ಬರ ಕಾಂಬೋ ಕೂಡ ಮಸ್ತ್ ಆಗಿ ತೆರೆಯ ಮೇಲೆ ಮೂಡಿ ಬಂದಿದೆ. ಒಟ್ನಲ್ಲಿ ಜೈಲರ್ ಚಿತ್ರಕ್ಕೆ ಅಭಿಮಾನಿಗಳು ಮಾರ್ಕ್ಸ್ ಕೊಟ್ಟಿದ್ದಾರೆ.

    ಚಿತ್ರದಲ್ಲಿ ರಜನಿಕಾಂತ್, ಶಿವಣ್ಣ ಜೊತೆ ತಮನ್ನಾ ಭಾಟಿಯಾ, ಮೋಹನ್ ಲಾಲ್(Mohanlal), ರಮ್ಯಾ ಕೃಷ್ಣ ಸೇರಿದಂತೆ ಹಲವರು ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಏಕಭಾಷೆ ಪರಿಕಲ್ಪನೆ ಸಾಧ್ಯವಿಲ್ಲ – ಅಮಿತ್ ಶಾಗೆ ರಜನಿಕಾಂತ್ ಟಾಂಗ್

    ಏಕಭಾಷೆ ಪರಿಕಲ್ಪನೆ ಸಾಧ್ಯವಿಲ್ಲ – ಅಮಿತ್ ಶಾಗೆ ರಜನಿಕಾಂತ್ ಟಾಂಗ್

    ಚೆನ್ನೈ: ಏಕಭಾಷೆ ಪರಿಕಲ್ಪನೆ ದೇಶದ ಬೆಳವಣಿಗೆಗೆ ಒಳ್ಳೆಯದು. ದುರದೃಷ್ಟಕರ ಸಂಗತಿ ಎಂದರೆ ನಮ್ಮ ದೇಶದಲ್ಲಿ ಇದು ಸಾಧ್ಯವಿಲ್ಲದಿರುವುದು. ಹೀಗಾಗಿ ಯಾವುದೇ ಭಾಷೆಯನ್ನು ಯಾರ ಮೇಲೆಯೂ ಹೇರಲು ಸಾಧ್ಯವಿಲ್ಲ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಅಭಿಪ್ರಾಯ ಪಟ್ಟಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಏಕಭಾಷಾ ಸೂತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಏಕ ಭಾಷಾ ಸೂತ್ರ ಭಾರತಕ್ಕೆ ಮಾತ್ರವಲ್ಲ ಯಾವುದೇ ದೇಶದ ಏಕತೆ ಹಾಗೂ ಪ್ರಗತಿಗೆ ಒಳ್ಳೆಯದು. ಆದರೆ ದುರದೃಷ್ಟವೆಂಬಂತೆ ನಮ್ಮ ದೇಶದಲ್ಲಿ ಸಾಮಾನ್ಯ ಭಾಷೆಯನ್ನು ತರಲು ಸಾಧ್ಯವಿಲ್ಲ. ಆದ್ದರಿಂದ ನೀವು ಯಾವುದೇ ಭಾಷೆಯನ್ನು ಯಾರ ಮೇಲೆಯೂ ಹೇರಲು ಸಾಧ್ಯವಿಲ್ಲ ಎಂದು ರಜನಿಕಾಂತ್ ತಿಳಿಸಿದ್ದಾರೆ.

    ವಿಶೇಷವಾಗಿ ತಮಿಳುನಾಡಿನಲ್ಲಿ ಮಾತ್ರವಲ್ಲ, ಹಿಂದಿ ಹೇರಿದಲ್ಲಿ ದಕ್ಷಿಣ ಭಾರತ ಯಾವುದೇ ರಾಜ್ಯಗಳು ಅದನ್ನು ಸ್ವೀಕರಿಸುವುದಿಲ್ಲ. ಉತ್ತರ ಭಾರತದಲ್ಲಿಯೂ ಅನೇಕ ರಾಜ್ಯಗಳು ಇದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

    ಹಿಂದಿಯೇತರ ರಾಜ್ಯಗಳಲ್ಲಿ ಭಾಷೆಯನ್ನು ಹೇರಲು ಈ ಹಿಂದೆ ಸಾಕಷ್ಟು ಬಾರಿ ಪ್ರಯತ್ನ ಮಾಡಲಾಗಿದೆ ಆದರೂ ಅದು ಸಾಧ್ಯವಾಗಿಲ್ಲ. ಇದೀಗ ಏಕ ಭಾಷಾ ಸೂತ್ರವನ್ನು ಅಮಿತ್ ಶಾ ಮತ್ತೊಮ್ಮೆ ಉಚ್ಛರಿಸಿದ್ದರು.

    `ಹಿಂದಿ ದಿವಸ್’ ಆಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಂದು ಅಮಿತ್ ಶಾ ಅವರು ದೆಹಲಿಯಲ್ಲಿ ಮಾತನಾಡಿ, ಈ ದೇಶದ ವಿಶೇಷತೆ ಅಂದರೆ ಭಾಷೆ. ಜಗತ್ತಿನ ಯಾವುದೇ ಭಾಷೆಯ ಜೊತೆ ಹೋಲಿಸಿ ನೋಡಿದಾಗ ನಮ್ಮ ಭಾಷೆಯ ವ್ಯಾಪಕತೆ, ಸಮೃದ್ಧತೆಯೇ ಸರ್ವಶ್ರೇಷ್ಠ ಎಂದಿದ್ದರು. ಅಲ್ಲದೇ ಭಾಷೆಗಳು ಮತ್ತು ಉಪಭಾಷೆಗಳ ವೈವಿಧ್ಯತೆಯು ನಮ್ಮ ರಾಷ್ಟ್ರದ ಶಕ್ತಿ. ಆದರೆ, ನಮ್ಮ ರಾಷ್ಟ್ರವು ಒಂದೇ ಭಾಷೆಯನ್ನು ಹೊಂದುವ ಅವಶ್ಯಕತೆಯಿದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಹಿಂದಿಯನ್ನು `ರಾಜ್ ಭಾಷಾ’ ಎಂದು ಕರೆದು ಸ್ವೀಕರಿಸಿದ್ದರು. ಮಾತೃ ಭಾಷೆಯ ಜೊತೆಗೆ ಹಿಂದಿ ಭಾಷೆಯನ್ನು ಹೆಚ್ಚಾಗಿ ಬಳಸಿ ಎಂದಿದ್ದರು ಎಂದು ಹೇಳಿದ್ದರು.

    ಭಾರತವನ್ನು ಒಂದುಗೂಡಿಸುವ ಸಾಮಥ್ರ್ಯ ಹಿಂದಿ ಭಾಷೆಗೆ ಇದೆ. ಭಾರತವೂ ವಿಭಿನ್ನ ಭಾಷೆಗಳ ದೇಶ. ಪ್ರತಿ ಭಾಷೆಗೂ ತನ್ನದೇ ಮಹತ್ವವಿದೆ. ಆದರೆ ಜಾಗತಿಕವಾಗಿ ಭಾರತದ ಅಸ್ಮಿತೆ ಆಗುವ ಭಾಷೆಯ ಅಗತ್ಯವಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದರು. ಶಾ ಅವರ ಈ ಹೇಳಿಗೆ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಕೂಡ ದನಿಗೂಡಿಸಿದ್ದರು.

    ಈ ಬಗ್ಗೆ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ದೇಶದಲ್ಲಿನ ಎಲ್ಲ ಅಧಿಕೃತ ಭಾಷೆಗಳು ಸಮಾನವಾಗಿವೆ. ಅದೇ ರೀತಿ ಕರ್ನಾಟಕದಲ್ಲಿಯೂ ಕನ್ನಡ ಪ್ರಮುಖ ಭಾಷೆಯಾಗಿದೆ. ಕನ್ನಡದ ಮಹತ್ವ ಹಾಗೂ ಅಸ್ಮಿತೆಯ ವಿಚಾರದಲ್ಲಿ ನಾವು ಎಂದಿಗೂ ರಾಜಿಯಾಗುವುದಿಲ್ಲ. ಅಲ್ಲದೆ, ಕನ್ನಡ ಹಾಗೂ ರಾಜ್ಯದ ಸಂಸ್ಕೃತಿಯನ್ನು ಬೆಳೆಸಲು ಕಟಿಬದ್ಧರಾಗಿದ್ದೇವೆ ಎಂದು ಅಮಿತ್ ಶಾ ಹೇಳಿಕೆಗೆ ಕುಟುಕ್ಕಿದ್ದರು.

    ಈ ಕುರಿತು ನಟ-ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿ, ಭಾರತ ಗಣತಂತ್ರವಾದಾಗಲೇ ವೈವಿಧ್ಯತೆಯಲ್ಲಿ ಏಖತೆಯಿಂದ ಕೂಡಿದೆ ಎಂದು ಪ್ರಮಾಣೀಕರಿಸಲಾಗಿದೆ. ಇದೀಗ ಯಾವುದೇ ಶಾ, ಸುಲ್ತಾನ್ ಅಥವಾ ಸಾಮ್ರಾಟ್ ಇದನ್ನು ಹುಸಿಗೊಳಿಸಬಾರದು ಎಂದು ಸೋಮವಾರ ಪ್ರತಿಕ್ರಿಯಿಸಿದ್ದರು.

  • ಪೊಲೀಸ್ ರಕ್ಷಣೆ ನೀಡಲು ಮಾತ್ರ ಸೂಚನೆ – ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು : ಸಾರಾ ಗೋವಿಂದು

    ಪೊಲೀಸ್ ರಕ್ಷಣೆ ನೀಡಲು ಮಾತ್ರ ಸೂಚನೆ – ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು : ಸಾರಾ ಗೋವಿಂದು

    ಬೆಂಗಳೂರು: ಕಾಲಾ ಸಿನಿಮಾ ಬಿಡುಗಡೆ ಪೊಲೀಸ್ ರಕ್ಷಣೆ ನೀಡಲು ಹೈಕೋರ್ಟ್ ಸೂಚನೆ ನೀಡಿದೆ, ಆದರೆ ಪ್ರತಿಭಟನೆ ಮಾಡಬೇಡಿ ಎಂದು ಎಲ್ಲೂ ಹೇಳಿಲ್ಲ. ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾರಾ ಗೋವಿಂದು ಹೇಳಿದ್ದಾರೆ.

    ನಟ ರಜನಿಕಾಂತ್ ಅಭಿನಯದ ಕಾಲಾ ಸಿನಿಮಾ ಬಿಡುಗಡೆಗೆ ಕೋರ್ಟ್ ಪೊಲೀಸ್ ರಕ್ಷಣೆ ನೀಡುವಂತೆ ಆದೇಶ ನೀಡಿದ ಬಳಿಕ ಕರವೇ ಪ್ರವೀಣ್ ಶೆಟ್ಟಿ ಸೇರಿದಂತೆ ಕನ್ನಡಪರ ಹೋರಾಟಗಾರರು ಸಾ.ರಾ ಗೋವಿಂದ್ ಅವರ ನೇತೃತ್ವದಲ್ಲಿ ಸಿಎಂ ಕುಮಾರಸ್ವಾಮಿ ಕೃಷ್ಣ ಗೃಹ ಕಚೇರಿಯಲ್ಲಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

    ಸಿಎಂ ಭೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಾರಾ ಗೋವಿಂದ್, ಸಿನಿಮಾ ಬಿಡುಗಡೆಗೆ ರಕ್ಷಣೆ ಕೊಡಿ ಎಂದು ಕೋರ್ಟ್ ಸೂಚನೆ ನೀಡಿದೆ. ಆದರೆ ಕನ್ನಡ ಪರ ಸಂಘಟನೆಗಳಿಗೆ ಪ್ರತಿಭಟನೆ ಮಾಡಬೇಡಿ ಎಂದು ಎಲ್ಲೂ ಹೇಳಿಲ್ಲ. ಪ್ರತಿಭಟನೆ ಮಾಡೋದು ನಮ್ಮ ಹಕ್ಕು. ಪೊಲೀಸರು ಯಾವುದೇ ಪ್ರಕರಣ ದಾಖಲಿಸಿದರೂ ಭಯವಿಲ್ಲ. ಈ ವಿಚಾರದಲ್ಲಿ ಜೈಲಿಗೂ ಹೋಗಲು ಸಿದ್ಧ. ಕಾಲಾ ಸಿನಿಮಾ ಬಿಡುಗಡೆಯನ್ನು ತಡೆದು ನಿಲ್ಲಿಸುತ್ತೇವೆ ಎಂದು ಹೇಳಿದರು.

    ಕಾವೇರಿ ವಿಚಾರದಲ್ಲಿ ನಟ ರಜಿನಿಕಾಂತ್ ಅವರು ನೀಡಿರುವ ಹೇಳಿಕೆಗಳು ಸರಿಯಿಲ್ಲ. ಅದ್ದರಿಂದ ಕಾಲಾ ಸಿನಿಮಾ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ಸಾರಾ ಗೋವಿಂದು ಅವರು ಮನವಿ ಮಾಡಿದ್ದಾರೆ.