Tag: ನಟ ಸತ್ಯರಾಜ್

  • ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕಟ್ಟಪ್ಪ

    ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕಟ್ಟಪ್ಪ

    ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ ಸತ್ಯರಾಜ್ ಅವರು ಕೆಲವು ದಿನಗಳ ಹಿಂದೆ ಕೋವಿಡ್ -19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಅವರ ಪುತ್ರ ಸಿಬಿ ಸತ್ಯರಾಜ್ ತಿಳಿಸಿದ್ದಾರೆ.

    ಸತ್ಯರಾಜ್ (67) ವರ್ಷದ ಹಿರಿಯ ನಟರಾಗಿದ್ದಾರೆ. ನಟನಿಗೆ ಕೋವಿಡ್ -19 ಸೋಂಕು ಇರುವುದಾಗಿ ಪತ್ತೆ ಆಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಡಿಸೆಂಬರ್ 1 ರಿಂದ ಜಿಯೋ ದುಬಾರಿ – ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

    ಆಸ್ಪತ್ರೆಗೆ ದಾಖಲಾದ ನಂತರ ಹಿರಿಯ ತಾರೆ ಸಂಪೂರ್ಣವಾಗಿ ಚೆನ್ನಾಗಿದ್ದಾರೆ. ಕೆಲವೇ ದಿನಗಳಲ್ಲಿ ನಿಮ್ಮ ಮುಂದೆ ನಟಿಸಲು ಸಜ್ಜಾಗುತ್ತಿದ್ದಾರೆ. ಅಪ್ಪ ನಿನ್ನೆ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಗೆ ಮರಳಿದ್ದಾರೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಸ್ವಲ್ಪ ದಿನಗಳ ವಿಶ್ರಾಂತಿಯ ನಂತರ ಮತ್ತೆ ಚಿತ್ರರಂಗದಲ್ಲಿ ಕೆಲಸವನ್ನು ಪುನರಾರಂಭಿಸುತ್ತಾರೆ. ಪ್ರೀತಿ, ಬೆಂಬಲಕ್ಕೆ ಎಲ್ಲರಿಗೂ ಧನ್ಯವಾದಗಳು ಎಂದು ಬರೆದು ಅವರ ಮಗ ಟ್ವೀಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಶೇ.100 ಎಫ್‍ಡಿಐಗೆ ಸರ್ಕಾರದ ಅನುಮತಿ ಬೇಕಿಲ್ಲ – ಟೆಲಿಕಾಂ ಕಂಪನಿಗಳಿಗೆ ಹಲವು ಕೊಡುಗೆ ನೀಡಿದ ಕೇಂದ್ರ

    ಎಸ್‍ಎಸ್ ರಾಜಮೌಳಿ ಅವರ ಬಾಹುಬಲಿ ಚಲನಚಿತ್ರದಲ್ಲಿ ಕಟ್ಟಪ್ಪ ಪಾತ್ರಕ್ಕಾಗಿ ವಿಶ್ವಾದ್ಯಂತ ಖ್ಯಾತಿ ಪಡೆದುಕೊಂಡಿದ್ದರು. ಅವರು ವೇದಂ ಪುದಿತ್ತು, ತಾಯಿ ನಾಡು, ನಾಡಿಗನ್, ಅಮೈದಿ ಪಡೈ, ಪೆರಿಯಾರ್ ಮತ್ತು ಒಂಬದು ರೂಬೈ ನೋಟು ಮುಂತಾದ ಚಲನಚಿತ್ರಗಳಲ್ಲಿ ನಟಿಸಿ ಹೆಸರು ವಾಸಿಯಾದವರು.

    ಅವರ ಮಗನ ಮತ್ತೊಂದು ಟ್ವಿಟ್ಟರ್ ಪೋಸ್ಟ್ ನಲ್ಲಿ, ಹಿರಿಯ ನಟ ಯಾವುದೇ ಸಾಮಾಜಿಕ ಮಾಧ್ಯಮ ಪ್ಲಾಟ್‍ಫಾರ್ಮ್‍ನಲ್ಲಿ ಉಪಸ್ಥಿತಿಯನ್ನು ಹೊಂದಿಲ್ಲ. ಅವರ ಯಾವುದೇ ಖಾತೆಯನ್ನು ಅನ್‍ಫಾಲೋ, ಬ್ಲಾಕ್ ಮತ್ತು  ರಿಪೋರ್ಟ್ ಮಾಡುವಂತೆ ಅವರ ಅಭಿಮಾನಿಗಳಿಗೆ ಕೇಳಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.