Tag: ನರಸಿಂಹರಾಜು

  • ಹಾಸ್ಯ ನಟ ನರಸಿಂಹರಾಜು ಜನ್ಮ ಶತಮಾನೋತ್ಸವ: ಸಿಎಂ ಸಿದ್ದರಾಮಯ್ಯ ಚಾಲನೆ

    ಹಾಸ್ಯ ನಟ ನರಸಿಂಹರಾಜು ಜನ್ಮ ಶತಮಾನೋತ್ಸವ: ಸಿಎಂ ಸಿದ್ದರಾಮಯ್ಯ ಚಾಲನೆ

    ಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳದಿರುವವರು ಖ್ಯಾತ ಹಾಸ್ಯ ನಟ ದಿ. ಟಿ.ಆರ್ ನರಸಿಂಹರಾಜು. ಜುಲೈ 24 ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬ. ಈ ಸಂಭ್ರಮವನ್ನು ನರಸಿಂಹರಾಜು ಜನ್ಮ‌ ಶತಮಾನೋತ್ಸವ ಎಂಬ ಹೆಸರಿನಿಂದ ವರ್ಷವಿಡೀ ಹಲವು ಕಾರ್ಯಕ್ರಮಗಳೊಂದಿಗೆ ಆಚರಿಸಲು ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನಿರ್ಧರಿಸಿದ್ದಾರೆ.

    ಈ ಕಾರ್ಯಕ್ರಮಗಳ ಪೈಕಿ ಮೊದಲನೆಯದಾಗಿ ನರಸಿಂಹರಾಜು ಅವರನ್ನು ಈಗಿನ ಯುವಜನತೆಗೆ ತಲುಪಿಸುವ ಪ್ರಯತ್ನ. ಹಾಗಾಗಿ ಹನ್ನೆರಡು ಜನರ ತಂಡ ಎರಡು ಟ್ರಕ್ ಗಳ ಮೂಲಕ ಕರ್ನಾಟಕದ ಮೂವತ್ತೆರಡು ಜಿಲ್ಲೆಗಳ ಆಯ್ದ ಕಾಲೇಜುಗಳಿಗೆ ಭೇಟಿ ನೀಡುತ್ತಾರೆ. ಆ ಟ್ರಕ್ ನಲ್ಲಿ ಎಲ್ ಇ ಡಿ ಅಳವಡಿಸಿ, ಆ ಮೂಲಕ ವಿದ್ಯಾರ್ಥಿಗಳಿಗೆ ನರಸಿಂಹರಾಜು ಅವರ ಬಗೆಗಿನ ತುಣುಕುಗಳನ್ನು ತೋರಿಸಲಾಗುತ್ತದೆ. ಆನಂತರ ನರಸಿಂಹರಾಜು ಅವರ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸಹ ಕೇಳಲಾಗುತ್ತದೆ. ಇದನ್ನೂ ಓದಿ:‘ದಿಲ್ಲಿ ಮೇಡಂ ದಿಲ್ಲಿ ಮೇಡಂ ಸ್ಲೇಟು ಬಳಪ ತನ್ನಿ’ ಎಂದರಾ ಹಾಸ್ಟೆಲ್ ಹುಡುಗರು?

    ಆನಂತರ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ(ಹಾಸ್ಯದ ಕುರಿತು) ಆಯೋಜಿಸಲಾಗುವುದು. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ದೊಡ್ಡಮಟ್ಟದ ಸಮಾರಂಭ ಆಯೋಜಿಸಿ, ಆ ಕಾರ್ಯಕ್ರಮದಲ್ಲಿ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವದ ವಿಜೇತರಿಗೆ ಬಹುಮಾನ ನೀಡಲಾಗುತ್ತದೆ. ಕರ್ನಾಟಕದಾದ್ಯಂತ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಯನಾಟಕಗಳನ್ನು (ನರಸಿಂಹರಾಜು ಅವರ ಅಭಿನಯದ ನಾಟಕಗಳು ಮಾತ್ರ) ಆಯೋಜಿಸಲಾಗುವುದು.

    ಕರ್ನಾಟಕದ ಸುಮಾರು ಎಂಟು ಜಲ್ಲೆಗಳಲ್ಲಿ ಈಗಲೂ ನಾಟಕ ಕಂಪನಿಗಳಿದೆ. ಆ ಪ್ರಸಿದ್ದ ನಾಟಕ ಕಂಪನಿಗಳ ಮೂಲಕ ಜನಪ್ರಿಯ ನಾಟಕಗಳನ್ನು ಸೂರ್ಯಾಸ್ತದಿಂದ ಸೂರ್ಯೋದಯದವರೆಗೂ ಆಯೋಜಿಸುವ ಯೋಜನೆಯಿದೆ. ಹೀಗೆ ಇನ್ನೂ ಹಲವಾರು ಕಾರ್ಯಕ್ರಮಗಳ ಮೂಲಕ ನರಸಿಂಹರಾಜು ಅವರ ಜನ್ಮ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ತಯಾರಿ ನಡೆಯುತ್ತಿದೆ . ಈ ಎಲ್ಲಾ ಕಾರ್ಯಕ್ರಮಗಳಿಗೆ ಜುಲೈ 24 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು, ನರಸಿಂಹರಾಜು ಅವರ ಮೊಮ್ಮಕ್ಕಳಾದ ಅರವಿಂದ್ ಹಾಗೂ ಅವಿನಾಶ್ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿರ್ದೇಶನದತ್ತ ಹಾಸ್ಯ ನಟ ನರಸಿಂಹರಾಜು ಮೊಮ್ಮಗ

    ನಿರ್ದೇಶನದತ್ತ ಹಾಸ್ಯ ನಟ ನರಸಿಂಹರಾಜು ಮೊಮ್ಮಗ

    ನ್ನಡ ಚಿತ್ರರಂಗದ ಮಹಾನ್ ಹಾಸ್ಯ ನಟ ನರಸಿಂಹರಾಜು (Narasimharaju) ಅವರ ಶತಮಾನೋತ್ಸವದ ಹಿನ್ನೆಲೆಯಲ್ಲಿ ನರಸಿಂಹರಾಜು ಅವರ ಮಗಳ ಮಗ ಅವಿನಾಶ್ ದಿವಾಕರ್ (Avinash Diwakar) ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡ್ತಿದ್ದಾರೆ. ಈ ಮೂಲಕ ಅಜ್ಜನಿಗೆ (Grand Father) ವಿಶೇಷ ಗಿಫ್ಟ್ ಕೂಡ ಕೊಡುತ್ತಿದ್ದಾರೆ.

    ಹಾಸ್ಯ ಕಲಾವಿದ ನರಸಿಂಹರಾಜು ಅವರ ಮೊಮ್ಮಗ ಅವಿನಾಶ್ ದಿವಾಕರ್ ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ. ‘ಜುಗಾರಿ’ (Jugari Film) ಚಿತ್ರ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದ ನಟ ಅವಿನಾಶ್ ಇದೀಗ ನಿರ್ದೇಶನದತ್ತ ಮುಖ ಮಾಡಿದ್ದಾರೆ. ನರಸಿಂಹರಾಜು ಅವರು ಹುಟ್ಟಿ ಈ ವರ್ಷ 100 ವರ್ಷಗಳು ಆಗುತ್ತವೆ. 1932, ಜುಲೈ-24 ರಂದು 100ನೇ ಜನ್ಮ ದಿನ (Birthday) ಇದೆ. ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಹೊಸ ಸಿನಿಮಾ ಬಗ್ಗೆ ಅಪ್‌ಡೇಟ್ ನೀಡಲಿದ್ದಾರೆ. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

     

    View this post on Instagram

     

    A post shared by D Elephants OTT (@d_elephants_art)

    ರಾಜಕುಮಾರ್ ಅವರ ಸಿನಿಮಾದಲ್ಲಿ ನರಸಿಂಹರಾಜು ಇರಲೇಬೇಕು ಎಂಬಷ್ಟರ ಮಟ್ಟಿಗೆ ಬೇಡಿಕೆ ಇದ್ದ ನಟ ನರಸಿಂಹರಾಜು, ಅವರ ಮೊಮ್ಮಗ ಅವಿನಾಶ್ ದಿವಾಕರ್, ಸಿನಿಮಾರಂಗಕ್ಕೆ ಬಂದು 10 ವರ್ಷಗಳು ಕಳೆದಿವೆ. ಕಲಾ ನಿರ್ದೇಶಕನಾಗಿ, ನಾಯಕ ನಟನಾಗಿ ಹೀಗೆ ಎಲ್ಲಾ ವಿಭಾಗದಲ್ಲೂ ಕೆಲಸ ಮಾಡಿರೋ ಅವಿನಾಶ್, ಇದೀಗ ಡೈರೆಕ್ಟರ್ ಆಗಿದ್ದಾರೆ. ಅವಿನಾಶ್ ನಿರ್ದೇಶನದ ಚಿತ್ರಕ್ಕೆ ‘ರುದ್ರಾಂಕುಶ’ ಅಂತ ಹೆಸರಿಡಲಾಗಿದೆ. ಈ ಚಿತ್ರದ ಒಂದು ಝಲಕ್ ಈಗಾಗಲೇ ರಿವೀಲ್ ಮಾಡಲಾಗಿದೆ.

    ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ‘ರುದ್ರಾಂಕುಶ’ ಚಿತ್ರದ ಟೀಸರ್ ಜುಲೈ-24 ರಂದು ರಿಲೀಸ್ ಆಗುತ್ತಿದೆ. ಈ ಮೂಲಕ ಅಜ್ಜನಿಗೆ ಅವಿನಾಶ್ ದಿವಾಕರ್ ಸ್ಪೆಷಲ್ ಗಿಫ್ಟ್ ಕೊಡ್ತಿದ್ದಾರೆ.