Tag: ನರೇಂದ್ರಮೋದಿ

  • ಬ್ರಿಟನ್ ಮೂರನೇ ಚಾರ್ಲ್ಸ್‌ಗೆ  ಕ್ಯಾನ್ಸರ್ ದೃಢ – ಶೀಘ್ರವೇ ಗುಣಮುಖರಾಗುವಂತೆ ಹಾರೈಸಿದ ಮೋದಿ

    ಬ್ರಿಟನ್ ಮೂರನೇ ಚಾರ್ಲ್ಸ್‌ಗೆ  ಕ್ಯಾನ್ಸರ್ ದೃಢ – ಶೀಘ್ರವೇ ಗುಣಮುಖರಾಗುವಂತೆ ಹಾರೈಸಿದ ಮೋದಿ

    ಲಂಡನ್: ಬ್ರಿಟನ್‌ನ ( Great Britain) ರಾಜ 3ನೇ ಚಾರ್ಲ್ಸ್  ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದು, ಅವರು ಬೇಗ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಾರೈಸಿದ್ದಾರೆ.

    ಕಿಂಗ್ ಚಾರ್ಲ್ಸ್ 3 (King Charles  III. ) ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಬಕಿಂಗ್ಹ್ಯಾಮ್‌ ಅರಮನೆ (Buckingham  Palace) ಸ್ಪಷ್ಟಪಡಿಸಿದೆ. ಅವರಿಗೆ ಕ್ಯಾನ್ಸರ್ ಇರುವುದರಿಂದ ಅವರು ಯಾವುದೇ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳದೇ ಇರುವಂತೆ ವೈದ್ಯರು ತಿಳಿಸಿದ್ದಾರೆ. ಹೀಗಿದ್ದರೂ ಈ ಅವಧಿಯಲ್ಲಿ ಅಧಿಕೃತ ಕೆಲಸವನ್ನು ಮುಂದುವರಿಸುತ್ತಾರೆ ಎಂದು ಬಕಿಂಗ್ಹ್ಯಾಮ್‌ ಅರಮನೆ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ತಿಂಡಿ ಮಾಡದ್ದಕ್ಕೆ ತಾಯಿಯನ್ನು ಹತ್ಯೆಗೈದ ಕೇಸ್‍ಗೆ ಟ್ವಿಸ್ಟ್ – ಕೊಲೆ ಮಾಡಿದ್ದು ಮಗನಲ್ಲ, ತಂದೆಯಿಂದಲೇ ಕೃತ್ಯ

    ಈ ವಿಷಯದ ಬಗ್ಗೆ ತಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ. “3 ಚಾರ್ಲ್ಸ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಅವರಿಗೆ ಒಳ್ಳೆ ಆರೋಗ್ಯ ಸಿಗಲಿ. ಅದಕ್ಕೆ ನಾನು ಭಾರತದ ಜನರೊಂದಿಗೆ ಸೇರಿ ಹಾರೈಸುತ್ತೇನೆ” ಎಂದು ಅವರ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ಸಿಎಂ ಸಿದ್ದರಾಮಯ್ಯಗೆ 10 ಸಾವಿರ ದಂಡ – ಜನಪ್ರತಿನಿಧಿಗಳ ಕೋರ್ಟ್‌ ಆದೇಶ

    ಜೊತೆಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ (Rishi Sunak) ಅವರು ಸಹ ಚಾರ್ಲ್ಸ್‌ ಅವರಿಗೆ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದು, ಅವರು ಶೀಘ್ರವೇ ಪೂರ್ಣ ಶಕ್ತಿಯೊಂದಿಗೆ ಮರಳುವುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ತಿಳಿಸಿ ಹಾರೈಸಿದ್ದಾರೆ. ಇದನ್ನೂ ಓದಿ: ರಾಯಚೂರಿನ ಕೃಷ್ಣಾ ನದಿಯಲ್ಲಿ ಶಿವಲಿಂಗ, ವೆಂಕಟೇಶ್ವರ ಮೂರ್ತಿಗಳು ಪತ್ತೆ

  • ಫೈಟರ್ ಜೆಟ್ ಎಂಜಿನ್ ತಯಾರಿಕೆ – HAL ಜೊತೆಗೆ USನ GE ಏರೋಸ್ಪೇಸ್ ಒಪ್ಪಂದ

    ಫೈಟರ್ ಜೆಟ್ ಎಂಜಿನ್ ತಯಾರಿಕೆ – HAL ಜೊತೆಗೆ USನ GE ಏರೋಸ್ಪೇಸ್ ಒಪ್ಪಂದ

    ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಕ್ ಇನ್ ಇಂಡಿಯಾ ಯೋಜನೆಗೆ ಭಾರೀ ಉತ್ತೇಜನ ಸಿಕ್ಕಿದಂತಾಗಿದೆ. ಏಕೆಂದರೆ ಅಮೆರಿಕ ಜನರಲ್ ಎಲೆಕ್ಟ್ರಿಕ್ಸ್‌ನ ಏರೋಸ್ಪೇಸ್ ಆರ್ಮ್ (GE Aerospace), ಭಾರತದ ವಾಯುಪಡೆಗಾಗಿ ಫೈಟರ್ ಜೆಟ್ ಎಂಜಿನ್‌ಗಳನ್ನು (Fighter Jet Engines) ತಯಾರಿಸಲು ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನೊಂದಿಗೆ ಕೈಜೋಡಿಸುವುದಾಗಿ ಗುರುವಾರ ತಿಳಿಸಿದೆ.

    ಅಧ್ಯಕ್ಷ ಜೋ ಬೈಡನ್ (Joe Biden) ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದು, ವಾಷಿಂಗ್ಟನ್‌ನಲ್ಲಿ ಜನರಲ್ ಎಲೆಕ್ಟ್ರಿಕ್ಸ್ ಅಧ್ಯಕ್ಷ ಹೆಚ್. ಲಾರೆನ್ಸ್ ಕಲ್ಫ್ ಜೂನಿಯರ್ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದ ಕೆಲವೇ ಗಂಟೆಗಳಲ್ಲಿ ಘೋಷಣೆ ಹೊರಬಿದ್ದಿದೆ. ಮೋದಿ ಅವರು ಜೆಇ ಮುಖ್ಯಸ್ಥರೊಂದಿಗೆ ಈ ಕುರಿತು ಮಾತುಕತೆ ನಡೆದಿಸಿದ್ದಾರೆ.

    ಭಾರತ ಮತ್ತು ಯುಎಸ್ ನಡುವಿನ ರಕ್ಷಣಾ ಸಹಕಾರ ಒಪ್ಪಂದ ಒಂದು ದೊಡ್ಡ ಮೈಲುಗಲ್ಲು. ಜೊತೆಗೆ ಉಭಯ ದೇಶಗಳ ರಕ್ಷಣಾ ಸಹಕಾರ ಬಲಪಡಿಸಲು ಇದು ಪ್ರಮುಖ ಹೆಜ್ಜೆಯಾಗಿರಲಿದೆ ಎಂದು ಜಿಇ ಏರೋಸ್ಪೇಸ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

    ‘ಜಿಇ ಏರೋಸ್ಪೇಸ್‌ನ F414 ಎಂಜಿನ್‌ಗಳನ್ನ ಭಾರತದಲ್ಲಿ ಜಂಟಿಯಾಗಿ ಉತ್ಪಾದಿಸುವ ಅಂಶ ಒಪ್ಪಂದದಲ್ಲಿದೆ. ಇದಕ್ಕಾಗಿ ಅಗತ್ಯ ರಫ್ತು ಮಾನ್ಯತೆಯನ್ನ ಪಡೆಯಲು ಯುಎಸ್ ಸರ್ಕಾರದೊಂದಿಗೆ ಜಿಇ ಏರೋಸ್ಪೇಸ್ ಕೆಲಸ ಮಾಡಲಿದೆ. ಈ ಪ್ರಯತ್ನವು ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ ಎಂಕೆ2 ಕಾರ್ಯಕ್ರಮದ ಭಾಗವಾಗಿದೆ ಎಂದು ಹೇಳಿದೆ.

    ಈ ಕುರಿತು ಮಾತನಾಡಿದ ಲಾರೆನ್ಸ್ ಕಲ್ಫ್, ಇದೊಂದು ಐತಿಹಾಸಿಕ ಒಪ್ಪಂದವಾಗಿದೆ. ಎರಡೂ ರಾಷ್ಟ್ರಗಳ ನಡುವಿನ ನಿಕಟ ಸಮನ್ವಯತೆ ಸಾಧಿಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸುತ್ತೇವೆ. ನಮ್ಮ F414 ಎಂಜಿನಿಗಳಿಗೆ ಸಾಟಿಯೇ ಇಲ್ಲ. ಇದರಿಂದ ಎರಡೂ ದೇಶಗಳಿಗೂ ಆರ್ಥಿಕ ಹಾಗೂ ರಾಷ್ಟ್ರೀಯ ಭದ್ರತೆಯ ಪ್ರಯೋಜನ ದೊರೆಯುತ್ತದೆ. ಅಲ್ಲದೇ ನಮ್ಮ ಗ್ರಾಹಕರಿಗೆ ಸಹಕರಿಸಲು ಹಾಗೂ ತಮ್ಮ ಮಿಲಿಟರಿ ನೌಕಾಪಡೆಯ ಅಗತ್ಯತೆಗಳನ್ನು ಪೂರೈಸಲು ಗುಣಮಟ್ಟದ ಎಂಜಿನ್‌ಗಳನ್ನು ಉತ್ಪಾದಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದ್ದಾರೆ.

    ತೇಜಸ್‌ನ ಪ್ರಸ್ತುತ ರೂಪಾಂತರವು F404 ಎಂಜಿನ್‌ಗಳಿಂದ ಚಾಲಿತವಾಗಿರುವುದರಿಂದ ವಾಯುಪಡೆಯು ಜಿಇಯೊಂದಿಗೆ ದೀರ್ಘಕಾಲದ ಸಂಬಂಧ ಹೊಂದಿದೆ. ಆದ್ರೆ ಇದು ಎಷ್ಟರಮಟ್ಟಿಗೆ ಫಲಕಾರಿಯಾಗುತ್ತದೆ ಎಂಬುದನ್ನ ಕಾದುನೋಡಬೇಕಿದೆ.

    ಜಿಇ ಏರೋಸ್ಪೇಸ್‌ನ ಎಫ್414 ಎಂಜಿನ್‌ಗಳು 5 ದಶಲಕ್ಷಕ್ಕೂ ಹೆಚ್ಚು ಗಂಟೆಗಳ ಹಾರಾಟ ನಡೆಸಿದೆ. 8 ರಾಷ್ಟ್ರಗಳು ಈ ಎಂಜಿನ್‌ಗಳನ್ನು ತಮ್ಮ ಸೇನಾ ವಿಮಾನಗಳಿಗೆ ಬಳಸುತ್ತಿವೆ. ಜಿಇ ಇಲ್ಲಿಯವರೆಗೆ ಜಾಗತಿಕವಾಗಿ 1,600 ಕ್ಕಿಂತ ಹೆಚ್ಚು ಎಫ್414 ಎಂಜಿನ್‌ಗಳನ್ನು ವಿತರಿಸಿದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

  • ಮೋದಿ ಅಂಡರ್‌ವರ್ಲ್ಡ್ ಡಾನ್‌ಗಳಿಗೆ ತಲೆಬಾಗಿ, ಕೈ ಮುಗಿದಿರೋದು ನಾಚಿಕೆಗೇಡಿನ ಸಂಗತಿ: HDK

    ಮೋದಿ ಅಂಡರ್‌ವರ್ಲ್ಡ್ ಡಾನ್‌ಗಳಿಗೆ ತಲೆಬಾಗಿ, ಕೈ ಮುಗಿದಿರೋದು ನಾಚಿಕೆಗೇಡಿನ ಸಂಗತಿ: HDK

    ಹಾಸನ: ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವವರಿಗೆ ಹಾಗೂ ಕಾನೂನು ಬಾಹಿರ ಚಟುವಟಿಕೆ ನಡೆಸುವ ಅಂಡರ್‌ವರ್ಲ್ಡ್ ಡಾನ್‌ಗಳಿಗೆ ತಲೆಬಾಗಿ ಕೈಮುಗಿದಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಲೇವಡಿ ಮಾಡಿದ್ದಾರೆ.

    ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಹಿರಿಸಾವೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಡರ್‌ವರ್ಲ್ಡ್ ಡಾನ್‌ಗಳಿಗೆ ಕೈ ಮುಗಿಯುವ ದೃಶ್ಯ ನೋಡಿದಾಗ ಕರ್ನಾಟಕದಲ್ಲಿ ಬಿಜೆಪಿಯ ಪರಿಸ್ಥಿತಿ ಯಾವ ದಯನೀಯ ಸ್ಥಿತಿಗೆ ಬಂದಿದೆ ಅನ್ನೋದು ಗೊತ್ತಾಗಿದೆ. ಇದು ನಾಚಿಗೇಡಿನ ಸಂಗತಿ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೋದಿ ಸ್ವಾಗತ ವೇಳೆ ಫೈಟರ್ ರವಿ- ಪ್ರಧಾನಿ ಹುದ್ದೆಗೆ ಕಳಂಕವೆಂದು ಕುಟುಕಿದ ಕಾಂಗ್ರೆಸ್

    Sumalath with modi 1

    ಬೆಲ್ಲದ ಸವಿ ನೋಡಿ ಅಭಿವೃದ್ಧಿ ಮಾಡಲಿ:
    ಇದೇ ವೇಳೆ ಸಂಸದೆ ಸುಮಲತಾ (Sumalatha), ಮೋದಿಗೆ ಮಂಡ್ಯದ ಬೆಲ್ಲ ನೀಡಿದ ವಿಚಾರ ಕುರಿತು ಪ್ರತಿಕ್ರಿಯಿಸಿ, ತಪ್ಪೇನಿಲ್ಲ, ಮಂಡ್ಯ ಜಿಲ್ಲೆಯ ಜನತೆ ಯಾರೇ ಹೋದರೂ ಅತ್ಯಂತ ಪ್ರೀತಿಯಿಂದ, ಅಭಿಮಾನದಿಂದ ಸ್ವಾಗತ ಕೋರುವವರು. ಪಾಪ ಅವರು ಪ್ರಧಾನಮಂತ್ರಿಗಳಿಗೆ ಮಂಡ್ಯ ಬೆಲ್ಲದ ಸವಿ ನೋಡಲಿ. ಸವಿಯನ್ನು ನೋಡಿಯಾದ್ರು ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಗೆ ಒಳ್ಳೆಯ ಕಾರ್ಯಕ್ರಮ ಕೊಡಲಿ ಎನ್ನುವ ದೃಷ್ಟಿಯಲ್ಲಿ ಕೊಟ್ಟಿರಬಹುದು. ಮುಂದಿನ ದಿನಗಳಲ್ಲಾದರೂ ಬೆಲ್ಲದ ಸವಿ ನೋಡಿ ಏನಾದ್ರು ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕಾರ್ಯಕ್ರಮ ಕೊಡ್ತಾರಾ ನೋಡೋಣ ಎಂದು ಕುಟುಕಿದ್ದಾರೆ.

    ಉರಿಗೌಡ, ನಂಜೇಗೌಡ ಫ್ಲೆಕ್ಸ್ ವಿಚಾರ ಕುರಿತು ಖಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಆ ವ್ಯಕ್ತಿಗಳು ಟಿಪ್ಪುವನ್ನು (Tipu Sultan) ಕುತಂತ್ರದಿಂದ ಕೊಂದಿದ್ದಾರಾ ಅನ್ನೋದಕ್ಕೆ ಯಾವುದೇ ರೀತಿಯ ಇತಿಹಾಸವಿಲ್ಲ. ಆ ಇತಿಹಾಸ ಸೃಷ್ಟಿ ಮಾಡಿರುವುದು ಬಿಜೆಪಿಯವರು. ಆ ಇತಿಹಾಸವನ್ನು ಸೃಷ್ಟಿ ಮಾಡಿ, ನಮ್ಮ ಸಮಾಜದ ಇಬ್ಬರ ವ್ಯಕ್ತಿಗಳ ಹೆಸರನ್ನು ಇಟ್ಟಿರುವುದು. ಒಕ್ಕಲಿಗ ಸಮಾಜಕ್ಕೆ ಮಾಡುತ್ತಿರುವ ಅಪಮಾನ. ಆದ್ದರಿಂದ ಒಕ್ಕಲಿಗ ಸಮುದಾಯ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದರು.

  • ರೂಪಾ, ರೋಹಿಣಿ ಘನತೆ ಕಾಪಾಡುವಂತೆ ಮೋದಿ ಸಲಹೆ ನೀಡಬೇಕು- ಜಗ್ಗೇಶ್

    ರೂಪಾ, ರೋಹಿಣಿ ಘನತೆ ಕಾಪಾಡುವಂತೆ ಮೋದಿ ಸಲಹೆ ನೀಡಬೇಕು- ಜಗ್ಗೇಶ್

    ಬೆಂಗಳೂರು: ಡಿ.ರೂಪಾ ಮೌದ್ಗಿಲ್ (D Roopa) ಹಾಗೂ ರೋಹಿಣಿ ಸಿಂಧೂರಿ (Rohini Sindhuri) ನಡುವಿನ ಕಿತ್ತಾಟ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಜ್ಯಸಭಾ ಸದಸ್ಯ ಜಗ್ಗೇಶ್ (Jaggesh), ಅಧಿಕಾರಿಗಳಿಬ್ಬರು ತಮ್ಮ ಘನತೆ ಕಾಪಾಡುವಂತೆ ಪ್ರಧಾನಿ ಮೋದಿ (Narendra Modi) ಸಲಹೆ ನೀಡಬೇಕೆಂದು ಮನವಿ ಮಾಡಿದ್ದಾರೆ.


    ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್, ಐಪಿಎಸ್ ಮತ್ತು ಐಎಎಸ್ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯುತ ಹುದ್ದೆಗಳು. ಸರ್ಕಾರಕ್ಕಾಗಿ ಸೇತುವೆಯಂತೆ ಕೆಲಸ ಮಾಡಬೇಕು. ಮಾಧ್ಯಮದಲ್ಲಿ ವೈಯಕ್ತಿಕ ದ್ವೇಷವನ್ನು ವ್ಯಕ್ತಪಡಿಸಬಾರದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ರೂಪಾ ಅವರು ಎತ್ತಿರುವ ಪ್ರಶ್ನೆಗಳು ನೈತಿಕವಾಗಿವೆ: ಪ್ರತಾಪ್ ಸಿಂಹ

    Rohini Sindhuri

    ನಾನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರಿಗೆ ಮನವಿ ಮಾಡುತ್ತೇನೆ. ಡಿ.ರೂಪಾ ಹಾಗೂ ರೋಹಿಣಿ ಸಿಂಧೂರಿ ಅವರಿಬ್ಬರೂ ಸಾರ್ವಜನಿಕವಾಗಿ ತಮ್ಮ ಘನತೆ ಕಾಪಾಡುವಂತೆ ಸಲಹೆ ನೀಡಬೇಕು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಿಂಧೂರಿ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ರೂಪಾ ದೂರು

    D Roopa 1

    ಐಪಿಎಸ್ ರೂಪಾ ಮೌದ್ಗಿಲ್ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ನಡುವಿನ ಸೋಷಿಯಲ್ ಮೀಡಿಯಾ ಕಚ್ಚಾಟ ಈಗ ಸರ್ಕಾರದ ಅಂಗಳ ತಲುಪಿದೆ. ರೋಹಿಣಿ ಮತ್ತು ರೂಪಾ ಇಬ್ಬರೂ ಪರಸ್ಪರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮರಿಗೆ (Vandita Sharma) ಇಂದು ದೂರು ಕೊಟ್ಟಿದ್ದಾರೆ. ಇದೀಗ ಸರ್ಕಾರದ ನಡೆ ಭಾರೀ ಕುತೂಹಲ ಮೂಡಿಸಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅದಾನಿಗಾಗಿ ಮೋದಿ ಸರ್ಕಾರ ನಿಯಮವನ್ನೇ ಬದಲಾಯಿಸಿದೆ: ರಾಹುಲ್ ಕಿಡಿ

    ಅದಾನಿಗಾಗಿ ಮೋದಿ ಸರ್ಕಾರ ನಿಯಮವನ್ನೇ ಬದಲಾಯಿಸಿದೆ: ರಾಹುಲ್ ಕಿಡಿ

    ನವದೆಹಲಿ: ದೇಶಾದ್ಯಂತ ಒಂದೇ ಒಂದು ಹೆಸರು ಕೇಳಿಬರುತ್ತಿದೆ. ಅದು ಅದಾನಿ.. ಅದಾನಿ.. ಅದಾನಿ. ತಮಿಳುನಾಡು (TamilNadu), ಕೇರಳದಿಂದ ಹಿಮಾಚಲ ಪ್ರದೇಶದವರೆಗೂ ಅದಾನಿ (Gautam Adani) ಹೆಸರು ಕೇಳಿಬರುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ (Rahul Gandhi) ಹೇಳಿದ್ದಾರೆ.

    ಮಂಗಳವಾರ ಲೋಕಸಭೆಯಲ್ಲಿ (Lok Sabha) ಮಾತನಾಡಿದ ಅವರು, ಉದ್ಯಮಿ ಗೌತಮ್ ಅದಾನಿ ಲಾಭ ಪಡೆಯಲು ಮೋದಿ ಸರ್ಕಾರ (Modi Government) ವ್ಯಾಪಾರ ನಿಯಮಗಳನ್ನ ಬದಲಾಯಿಸುತ್ತಿದೆ. ಅದಾನಿಗೆ ಅನುಕೂಲವಾಗುವಂತೆ ನಿಯಮಗಳನ್ನ ರೂಪಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅದಾನಿ ವಿರುದ್ಧ ತನಿಖೆಗೆ ಆಗ್ರಹಿಸಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ

    ವಿಮಾನ ನಿಲ್ದಾಣಗಳ (Airport) ಬಗ್ಗೆ ಪೂರ್ವಾನುಭವ ಹೊಂದಿರದ ಯಾವುದೇ ವ್ಯಕ್ತಿ, ವಿಮಾನ ನಿಲ್ದಾಣಗಳ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳುವಂತಿಲ್ಲ ಎಂಬ ನಿಯಮವಿದೆ. ಆದರೆ ಬಿಜೆಪಿ ನೇತೃತ್ವದ ಭಾರತ ಸರ್ಕಾರ (Government Of India) ಈ ನಿಯಮ ಬದಲಾಯಿಸಿ ಅದಾನಿ ಒಡೆತನಕ್ಕೆ 6 ವಿಮಾನ ನಿಲ್ದಾಣಗಳನ್ನ ನೀಡಿದೆ. ಇದರಿಂದ 2014ರಲ್ಲಿ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 609ನೇ ಸ್ಥಾನದಲ್ಲಿದ್ದ ಅದಾನಿ ನಂತರ ಮ್ಯಾಜಿಕ್ ಮಾಡಿ 2ನೇ ಸ್ಥಾನಕ್ಕೇರಿದರು ಎಂದು ಆರೋಪಿಸಿದ್ದಾರೆ.

    ಅದಾನಿ ಈಗ 8 ರಿಂದ 10 ಕ್ಷೇತ್ರಗಳಲ್ಲಿದ್ದಾರೆ. 2014ರಿಂದ 2022ರ ನಡುವೆ 8 ಶತಕೋಟಿ ಡಾಲರ್ ಸಂಪತ್ತು ಹೊಂದಿದ್ದ ಅವರು ಈಗ 140 ಶತಕೋಟಿ ಡಾಲರ್‌ನಷ್ಟು ಸಂಪತ್ತು ತಲುಪಿದ್ದು ಹೇಗೆ? ಎಂದು ಸಾಕಷ್ಟು ಯುವಕರು ನಮ್ಮನ್ನು ಕೇಳಿದ್ದಾರೆ. ಇದಕ್ಕೆ ಏನು ಉತ್ತರ ನೀಡಲು ಸಾಧ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್‌- ಸುಪ್ರೀಂನಿಂದ ರಾಣಾ ಅಯ್ಯುಬ್‌ ಅರ್ಜಿ ವಜಾ

    ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅದಾನಿ ನಡುವಿನ ಸಂಬಂಧ ಕುರಿತು ಮಾತನಾಡಿದ ರಾಗಾ, ನರೇಂದ್ರ ಮೋದಿ ಗುಜರಾತ್ ಸಿಎಂ ಆಗಿದ್ದಾಗಿನಿಂದಲೂ ಅದಾನಿ ಜೊತೆಗೆ ಸಂಪರ್ಕ ಹೊಂದಿದ್ದಾರೆ. ಆಗ ಅದಾನಿ ಗುಜರಾತ್ (Gujarat) ಪುನರುತ್ಥಾನ ಪರಿಕಲ್ಪನೆಗೆ ಮೋದಿಗೆ ಸಹಾಯ ಮಾಡಿದ್ದರು. ನರೇಂದ್ರ ಮೋದಿ ಪ್ರಧಾನಿಯಾಗಿ ದೆಹಲಿ ತಲುಪಿದಾಗ ನಿಜವಾದ ಮ್ಯಾಜಿಕ್ ಪ್ರಾರಂಭವಾಯಿತು ಎಂದು ಟೀಕಿಸಿದ್ದಾರೆ.

    ಪ್ರಧಾನಿ ಮೋದಿಗೆ ಅದಾನಿ ಎಷ್ಟು ಹಣ ನೀಡಿದ್ದಾರೆ? ಮೋದಿಯೊಂದಿಗೆ ಅದಾನಿಯೊಂದಿಗೆ ಎಷ್ಟು ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ? ನೀವು ವಿದೇಶಕ್ಕೆ ಬಂದಾಗ ಎಷ್ಟು ಬಾರಿ ಅಲ್ಲಿ ನಿಮ್ಮ ಜೊತೆ ಕೂಡಿಕೊಂಡಿದ್ದಾರೆ? ನಿಮ್ಮ ಭೇಟಿಯ ನಂತರ ಎಷ್ಟು ಬಾರಿ ವಿದೇಶಗಳಲ್ಲಿ ಒಪ್ಪಂದ ಮಾಡಿಕೊಂಡಿದ್ದಾರೆ? ಕಳೆದ 20 ವರ್ಷಗಳಲ್ಲಿ ಅದಾನಿ ಬಿಜೆಪಿಗೆ ಅದಾನಿ ಎಷ್ಟು ಹಣ ನೀಡಿದ್ದಾರೆ? ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೆದ್ದಾರಿಗಳಿಗೆ ಹೆಸರಿಡುವ ಸಂಪ್ರದಾಯ ಇಲ್ಲ – ನಿತಿನ್ ಗಡ್ಕರಿ ಸ್ಪಷ್ಟನೆ

    ಹೆದ್ದಾರಿಗಳಿಗೆ ಹೆಸರಿಡುವ ಸಂಪ್ರದಾಯ ಇಲ್ಲ – ನಿತಿನ್ ಗಡ್ಕರಿ ಸ್ಪಷ್ಟನೆ

    ರಾಮನಗರ: ಹೆದ್ದಾರಿಗಳಿಗೆ (National Highway) ಹೆಸರಿಡುವ ಸಂಪ್ರದಾಯ ಇಲ್ಲ. ನಾವು ಹೆದ್ದಾರಿಗಳಿಗೆ ನಂಬರ್ ಅಷ್ಟೇ ಕೊಡೋದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಸ್ಪಷ್ಟನೆ ನೀಡಿದರು.

    ಬೆಂಗಳೂರು-ಮೈಸೂರು ದಶಪಥ ರಸ್ತೆ (Bengaluru Mysuru Expressway) ವೈಮಾನಿಕ ಸಮೀಕ್ಷೆ ನಡೆಸಿದ ನಿತಿನ್ ಗಡ್ಕರಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದನ್ನೂ ಓದಿ: ಮುಂದಿನ ತಿಂಗಳು ಪ್ರಧಾನಿ, ರಾಷ್ಟ್ರಪತಿಗಳಿಂದ ದಶಪಥ ರಸ್ತೆ ಲೋಕಾರ್ಪಣೆ

    ಹೆದ್ದಾರಿಗೆ ಹೆಸರು ಇಡುವಂತೆ ಕೇಳಿದ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು-ಮೈಸೂರು ದಶಪಥ ರಸ್ತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಒತ್ತಾಯ ಕೇಳಿಬರುತ್ತಿದೆ. ಮಾಜಿ ಸಿಎಂ ಎಸ್.ಎಂ ಕೃಷ್ಣ (SM Krishna) ಅವರು ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ. ನಾನು ಕೂಡ ಆ ಪತ್ರವನ್ನ ನೋಡಿದ್ದೇನೆ. ಆದರೆ ಹೆದ್ದಾರಿಗಳಿಗೆ ಹೆಸರಿಡುವ ಸಂಪ್ರದಾಯ ಇಲ್ಲ. ನಾವು ಹೆದ್ದಾರಿಗೆ ನಂಬರ್ ಅಷ್ಟೇ ಕೊಡುತ್ತೇವೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇವೆ. ಬಳಿಕ ಪ್ರಧಾನಿಯವರ ಒಪ್ಪಿಗೆ ಪಡೆದು ಆಲೋಚನೆ ಮಾಡುತ್ತೇವೆ ಎಂದು ತಿಳಿಸಿದರು.

    ಫೆಬ್ರವರಿಯಲ್ಲಿ ದಶಪಥ ರಸ್ತೆ ಉದ್ಘಾಟನೆ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಫೆಬ್ರವರಿ ಅಂತ್ಯಕ್ಕೆ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ದ್ರೌಪದಿ ಮುರ್ಮು ಅವರು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಗಡ್ಕರಿ ತಿಳಿಸಿದರು. ಇದನ್ನೂ ಓದಿ: ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಲಾಟರಿ ಮಾರಾಟ ಆರಂಭಿಸಿ – 15 ವರ್ಷಗಳ ಬಳಿಕ ರಾಜ್ಯದಲ್ಲಿ ಮತ್ತೆ ಲಾಟರಿ ಮಾರಾಟ?

    ಈ ಹೆದ್ದಾರಿಯು ಕರ್ನಾಟಕದ (Karnataka) ಆರ್ಥಿಕ ಪ್ರಗತಿಗೆ ಹೊಸ ಭಾಷ್ಯ ಬರೆಯಲಿದೆ. ಕೈಗಾರಿಕೆಗಳ ಪ್ರಗತಿಗೆ ನೂತನ ಹೆದ್ದಾರಿ ಅನುಕೂಲ ಆಗಲಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಹಾಗೂ ಕೆಲ ಸಂಚಾರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಈ ಹೆದ್ದಾರಿಯಿಂದ ಮೈಸೂರು (Mysuru) ಭಾಗದಲ್ಲಿ ಆರ್ಥಿಕ ಚಟುವಟಿಕೆ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಮಾಲಿನ್ಯ, ಟ್ರಾಫಿಕ್ ಜಾಮ್ ಜೊತೆ ಅಪಘಾತಗಳ ಸಂಖ್ಯೆ ಕ್ಷೀಣಿಸುವಂತೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಹೊಸಕೋಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ರಾಮನಗರ ಡಾಬಸ್ ಪೇಟೆ ಸೇರಿದಂತೆ ಪ್ರಮುಖ ನಗರಗಳನ್ನ ಬೆಸೆಯಲು ವರ್ತುಲ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಪ್ರಯಾಣದ ಸಮಯ ತಗ್ಗಿಸುವುದು ನಮ್ಮ ಉದ್ದೇಶವಾಗಿದ್ದು ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿ ಉದ್ದೇಶದಿಂದ ಆ ಭಾಗದ ರಸ್ತೆಗಳನ್ನೂ ಸಹ ಅಭಿವೃದ್ಧಿಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ – ಮೋದಿ ಆಡಳಿತದಲ್ಲಿ ಭಾರತ ಸಾಲದ ವಿಶ್ವಗುರು: ಗುಂಡೂರಾವ್

    8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ – ಮೋದಿ ಆಡಳಿತದಲ್ಲಿ ಭಾರತ ಸಾಲದ ವಿಶ್ವಗುರು: ಗುಂಡೂರಾವ್

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಿನೇಶ್ ಗುಂಡೂರಾವ್ (Dinesh Gundu Rao) ಕೇಂದ್ರ ಸರ್ಕಾರದ (Government Of Inadia) ವಿರುದ್ಧ ಹರಿಹಾಯ್ದಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮೂಲಕ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಿಕ್ಸಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್- ಪ್ರೀತಿ ನಿರಾಕರಿಸಿದ್ರಿಂದ ಕೊಲೆಗೆ ನಿರ್ಧರಿಸಿದ್ದೆ ಎಂದ ಆರೋಪಿ

    ಟ್ವೀಟ್‌ನಲ್ಲಿ ಏನಿದೆ?
    ಮೋದಿ ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ. ಕಳೆದ 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ ಮಾಡಿದ್ದೇ ಮೋದಿಯವರ ಸಾಧನೆ. ಯುಪಿಎ (UPA) ಆಡಳಿತದ ಅಂತ್ಯಕ್ಕೆ ಭಾರತದ ಸಾಲ 63,583 ಕೋಟಿ ಇತ್ತು. ಆದರೆ ಮೋದಿಯವರು ಕೇವಲ 8 ವರ್ಷದಲ್ಲಿ ಸಾಲದ ಪ್ರಮಾಣ 1.40 ಲಕ್ಷ ಕೋಟಿಗೆ ಏರಿಸಿದ್ದಾರೆ. ಈ ಸಾಲ ಮಾಡಿರುವುದು ಯಾರ ಉದ್ಧಾರಕ್ಕೆ?

    ಸಾಲ ಮಾಡಿ ತುಪ್ಪ ತಿನ್ನುವಂತೆ ಮೋದಿ ಆಡಳಿತದಲ್ಲಿ ಗೊತ್ತು ಗುರಿಯಿಲ್ಲದೆ ಸಾಲ ಮಾಡಲಾಗಿದೆ. ಈ ಸಾಲದಲ್ಲಿ ತುಪ್ಪ ತಿನ್ನುತ್ತಿರುವವರು ಯಾರು ಎಂಬುದೇ ಯಕ್ಷ ಪ್ರಶ್ನೆ? ಜಿಡಿಪಿ ಕುಸಿದಿದೆ. ಅಭಿವೃದ್ಧಿ ಶೂನ್ಯವಾಗಿದೆ. ಹಾಗಾದರೆ ಆ ಸಾಲ ಎಲ್ಲಿಗೆ ಖರ್ಚಾಗುತ್ತಿದೆ. ಪಿಎಂ ಕೇರ್ ನಂತೆ ಯಾವುದಾದರೂ ಉಂಡೆನಾಮದ ಸ್ಕೀಮ್‌ಗೆ ಹಣ ಬಳಕೆಯಾಗುತ್ತಿದೆಯೇ?

    ಮನಮೋಹನ್ ಸಿಂಗ್ (Manmohan Singh) ಸರ್ಕಾರವಿದ್ದಾಗ ಜನರಿಗೆ ಗ್ಯಾಸ್ (LPG) ಸಬ್ಸಿಡಿ, ರಸಗೊಬ್ಬರ ಸಬ್ಸಿಡಿ, ತೈಲಗಳ ಮೇಲೆ ಅತೀ ಕಡಿಮೆ ತೆರಿಗೆ ಹಾಗೂ ಅಬಕಾರಿ ಸುಂಕ ವಿಧಿಸಲಾಗುತಿತ್ತು. ಅಷ್ಟಾದರೂ ದೇಶದ ಸಾಲ 76 ಲಕ್ಷ ಕೋಟಿ ದಾಟಿರಲಿಲ್ಲ. ಈ ಸರ್ಕಾರದಲ್ಲಿ ಬಹುತೇಕ ಸಬ್ಸಿಡಿಗಳು ರದ್ದಾಗಿವೆ. ತೈಲಗಳ ಮೇಲೆ ವಿಪರೀತ ಎನ್ನುವಷ್ಟು ತೆರಿಗೆ ವಿಧಿಸಲಾಗುತ್ತಿದೆ.

    ಮೋದಿಯವರು ಕಾಂಗ್ರೆಸ್ (Congress) ಮಾಡಿದ ಸಾಲ ತೀರಿಸುತ್ತಿದ್ದಾರೆ ಎಂದು ಬಿಜೆಪಿ ಭಕ್ತರು, ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಹರಡುತ್ತಿದ್ದಾರೆ. ವಾಸ್ತವವಾಗಿ 2014 ರವರೆಗೆ ಇದ್ದ ದೇಶದ ಒಟ್ಟು ಸಾಲದ ಮೊತ್ತ 76 ಲಕ್ಷ ಕೋಟಿ. ಆದ್ರೆ ಮೋದಿ 8 ವರ್ಷದಲ್ಲಿ 98 ಲಕ್ಷ ಕೋಟಿ ಹೆಚ್ಚವರಿ ಸಾಲ ಮಾಡಿದ್ದಾರೆ. ಹೀಗಿರುವಾಗ ಮೋದಿ ಯಾರ ಸಾಲ ತೀರಿಸುತ್ತಿದ್ದಾರೆ? ಇದನ್ನೂ ಓದಿ: ಮುತ್ತಿಟ್ಟು ಮದುವೆ ಎಂದ ಪವಿತ್ರಾ ಲೋಕೇಶ್ ವಿಡಿಯೋ ಅಸಲಿ ಅಲ್ಲ ಎನ್ನುವ ಗುಮಾನಿ

    ಮೋದಿ ಆಡಳಿತದಲ್ಲಿ ಆರ್ಥಿಕ ಶಿಸ್ತು ಹಳ್ಳ ಹಿಡಿದಿದೆ ಎಂಬುದಕ್ಕೆ ಈ ಸರ್ಕಾರ ಮಾಡಿರುವ ಸಾಲದ ಪ್ರಮಾಣವೇ ಸಾಕ್ಷಿ. ಮೋದಿಯವರು ಮಾಡಿರುವ ಸಾಲದ ಎಫೆಕ್ಟ್ ಹೇಗಿದೆಯೆಂದರೆ, ಅಸಲು ಹೋಗಲಿ, ಬಡ್ಡಿ ಕಟ್ಟಲೂ ಸಾಧ್ಯವಿಲ್ಲದಷ್ಟು ವಿಪರೀತವಾಗಿದೆ. ಇದು ದೇಶ ದಿವಾಳಿಯಾಗುತ್ತಿರುವ ಪ್ರಾಥಮಿಕ ಲಕ್ಷಣ. ಇನ್ನಾದರೂ ಬಿಜೆಪಿ ಭಕ್ತರು ಮೋದಿ ಭ್ರಮೆಯಿಂದ ಹೊರಬರಲಿ ಎಂದು ತಿಳಿವಳಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೀರಾಬೆನ್ ವಿಧಿವಶ- ತಾಯಿ ಮಾತುಗಳನ್ನು ಸ್ಮರಿಸಿಕೊಂಡು ಮೋದಿ ಭಾವುಕ ಟ್ವೀಟ್

    ಹೀರಾಬೆನ್ ವಿಧಿವಶ- ತಾಯಿ ಮಾತುಗಳನ್ನು ಸ್ಮರಿಸಿಕೊಂಡು ಮೋದಿ ಭಾವುಕ ಟ್ವೀಟ್

    ನವದೆಹಲಿ: ವಹೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಧಾನಿಯವರ ತಾಯಿ ಹೀರಾಬೆನ್ (Heeraben Modi) ಅವರು ವಿಧಿವಶರಾಗಿದ್ದು, ನರೇಂದ್ರ ಮೋದಿ (Narendra Modi) ಯವರು ಭಾವುಕರಾಗಿ ತಾಯಿ ಬಗ್ಗೆ ಬರೆದುಕೊಂಡಿದ್ದಾರೆ.

    ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ. ತಾಯಿಯಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ. ಅದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ ಅಂತ ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

    ನನ್ನ ತಾಯಿಯ 100 ನೇ ವರ್ಷದ ಹುಟ್ಟುಹಬ್ಬದಂದು ನಾನು ಅವರನ್ನು ಭೇಟಿಯಾದ ಸಂದರ್ಭದಲ್ಲಿ ಅವರು ಹೇಳಿದ ಮಾತುಗಳನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ಬುದ್ಧಿವಂತಿಕೆಯಿಂದ ಕೆಲಸ ಮಾಡಿ, ಪರಿಶುದ್ಧತೆಯಿಂದ ಜೀವನ ಮಾಡಿ. ಅಂದರೆ ಬುದ್ಧಿವಂತಿಕೆಯಿಂದ ಕೆಲಸ ಮಾಡಿ ಮತ್ತು ಜೀವನವನ್ನು ಪರಿಶುದ್ಧತೆಯಿಂದ ಬದುಕಿರಿ, ಎಂದು ಅವರು ಹೇಳಿದ್ದರು ಅಂತ ಪ್ರಧಾನಿ ತಾಯಿಯ ಮಾತುಗಳನ್ನು ಸ್ಮರಿಸಿಕೊಂಡಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅವರು ಬುಧವಾರ ಅಹಮ್ಮದಾಬಾದ್‍ನ ಮೆಹ್ತಾ ಆಸ್ಪತ್ರೆ (Mehta Hospital) ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಬಳಿಕ ಅವರ ಆರೋಗ್ಯ ಸುಧಾರಿಸಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದವು. ಇತ್ತ ಆಸ್ಪತ್ರೆಗೆ ದಾಖಲಾದಂದೇ ಪ್ರಧಾನಿಯವರು ತಾಯಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

    ಇಂದು ಮುಂಜಾನೆ 3.39ರ ಸುಮಾರಿಗೆ ಹೀರಾಬೆನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಾಯಿ ನಿಧನದ ಸುದ್ದಿ ಕೇಳುತ್ತಿದ್ದಂತೆಯೇ ತಮ್ಮ ಪಶ್ಚಿಮ ಬಂಗಾಳ ಪ್ರವಾಸ ರದ್ದುಗೊಳಿಸಿರುವ ಮೋದಿ, ತಾಯಿಯ ಅಂತಿಮ ದರ್ಶನ ಪಡೆಯಲಿದ್ದಾರೆ. ಇತ್ತ ಗಣ್ಯರು ಕೂಡ ಸಂತಾಪ ಸೂಚಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ

    ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ತಾಯಿ ಹೀರಾಬೆನ್ ಮೋದಿ (Heeraben Modi) ವಿಧಿವಶರಾಗಿದ್ದಾರೆ.

    ಕಳೆದ ಜೂನ್ ನಲ್ಲಿ 100 ವರ್ಷ ಪೂರೈಸಿದ್ದ ಮೋದಿ ತಾಯಿ, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಇಂದು ಬೆಳಗ್ಗಿನ ಜಾವ 3.39ರ ಸುಮಾರಿಗೆ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ  ಕೊನೆಯುಸಿರೆಳೆದರು.

    ಬುಧವಾರ ಅಹಮದಾಬಾದ್‌ನ (Ahmedabad)ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಅವರ ಆರೋಗ್ಯ ಸುಧಾರಿಸಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದ್ದವು. ಇದನ್ನೂ ಓದಿ: ಬೆಂಗಳೂರಿಗೆ ಬಂದಿಳಿದ ಅಮಿತ್ ಶಾ

    ಹೀರಾಬೆನ್‌ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಪ್ರಧಾನಿಯವರು ತಮ್ಮ ಪಶ್ಚಿಮ ಬಂಗಾಳ ಪ್ರವಾಸ ರದ್ದುಗೊಳಿಸಿದ್ದು, ತಾಯಿಯ ಅಂತಿಮ ದರ್ಶನ ಪಡೆಯಲಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ  ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ – 33 ಲಕ್ಷ ಚಂದಾದಾರರಿದ್ದ 3 ಯೂಟ್ಯೂಬ್ ಚಾನೆಲ್ ಪತ್ತೆ

    ಪ್ರಧಾನಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ – 33 ಲಕ್ಷ ಚಂದಾದಾರರಿದ್ದ 3 ಯೂಟ್ಯೂಬ್ ಚಾನೆಲ್ ಪತ್ತೆ

    ನವದೆಹಲಿ: ಪ್ರಮುಖ ಸುದ್ದಿವಾಹಿನಿಗಳ ಲೋಗೋ ಬಳಸಿ ಪ್ರಧಾನಿ ನರೇಂದ್ರ ಮೋದಿ (Narendra Modi) , ಸಿಜೆಐ ಡಿ.ವೈ ಚಂದ್ರಚೂಡ್ (DY Chandrachud) ಸೇರಿದಂತೆ ಪ್ರಮುಖ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದ್ದ ಒಟ್ಟು 33 ಲಕ್ಷ ಚಂದಾದಾರರನ್ನು ಹೊಂದಿದ್ದ 3 ಯೂಟ್ಯೂಬ್ (Youtube) ಚಾನೆಲ್‌ಗಳನ್ನು ಪತ್ತೆಹಚ್ಚಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಸುಳ್ಳು ಸುದ್ದಿಗಳನ್ನು (Fake News) ಹರಡುತ್ತಿದ್ದ `ನ್ಯೂಸ್ ಹೆಡ್‌ಲೈನ್ಸ್, ಆಜ್ ತಕ್ ಲೈವ್ ಹಾಗೂ ಸರ್ಕಾರಿ ಅಪ್‌ಡೇಟ್’ ಹೆಸರಿನ ಯೂಟ್ಯೂಬ್ ಚಾನೆಲ್‌ಗಳನ್ನು ಪತ್ತೆಹಚ್ಚಲಾಗಿದೆ. ಸರ್ಕಾರದ ನೋಡೆಲ್ ಏಜೆನ್ಸಿಯಾದ ಪ್ರೆಸ್ ಇನ್ಫರ್ಮೇಶನ್ ಬ್ಯೂರೋದ (PIB) ಸತ್ಯ ಪರಿಶೀಲನಾ ಘಟಕವು ಇದರ ತನಿಖೆ ನಡೆಸಿದೆ. ಇದನ್ನೂ ಓದಿ: ಈ ದೇಶಕ್ಕಾಗಿ BJP ನಾಯಕನ ಮನೆ ನಾಯಿಯೂ ಸತ್ತಿಲ್ಲ – ಕೋಲಾಹಲ ಎಬ್ಬಿಸಿದ ಖರ್ಗೆ ಹೇಳಿಕೆ

    ಈ ಘಟಕವು 40ಕ್ಕೂ ಹೆಚ್ಚು ಫ್ಯಾಕ್ಟ್‌ಚೆಕ್‌ಗಳನ್ನು ನಡೆಸಿದ್ದು, ಪ್ರಧಾನಿ ಮೋದಿ, ಸಿಜೆಐ, ಸುಪ್ರೀಂ ಕೋರ್ಟ್ (Supreme Court), ಚುನಾವಣಾ ಆಯೋಗ ಹಾಗೂ ಇವಿಎಂ ಮತದಾನ ವ್ಯವಸ್ಥೆಯ ಬಗ್ಗೆ ಅನೇಕ ತಪ್ಪು ಮಾಹಿತಿ ಪ್ರಸಾರ ಮಾಡಿರುವುದನ್ನು ಕಂಡುಹಿಡಿದಿದೆ. 30 ಕೋಟಿಗೂ ಅಧಿಕ ಮಂದಿ ಹೆಚ್ಚು ಬಾರಿ ಈ ವೀಡಿಯೋಗಳನ್ನ ವೀಕ್ಷಣೆ ಮಾಡಿದ್ದಾರೆ. ಅಲ್ಲದೇ ಈ ಯೂಟ್ಯೂಬ್ ಚಾನೆಲ್‌ಗಳು ಪ್ರಮುಖ ಸುದ್ದಿ ವಾಹಿನಿಯ ಲೋಗೋ ಹಾಗೂ ಸುದ್ದಿ ನಿರೂಪಕರ ಚಿತ್ರಗಳನ್ನು ಬಳಸಿಕೊಂಡಿದ್ದವು. ಈ ಮೂಲಕ ತಮ್ಮ ವೀಕ್ಷಕರಿಗೆ ಸುದ್ದಿ ಅಧಿಕೃತ ಎಂದು ನಂಬುವಂತೆ ಮಾಡಿದ್ದವು. ತಪ್ಪು ಮಾಹಿತಿಯನ್ನು ಪ್ರಸಾರ ಮಾಡುವ ಮೂಲಕ ಹಣ ಗಳಿಸುತ್ತಿದ್ದವು ಎಂದು ಪಿಐಬಿ (ತನಿಖಾ ಘಟಕ) ಹೇಳಿದೆ.

    ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಕಳೆದ 1 ವರ್ಷದಲ್ಲಿ ತಪ್ಪು ಮಾಹಿತಿ ಪ್ರಸಾರದ ವಿರುದ್ಧ ಶಿಸ್ತುಕ್ರಮದ ಭಾಗವಾಗಿ 100ಕ್ಕೂ ಹೆಚ್ಚು ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಿದೆ ಎಂದು ಹೇಳಿದೆ.

    Live Tv
    [brid partner=56869869 player=32851 video=960834 autoplay=true]