Tag: ನರ್ಸ್

  • ಹಾವೇರಿ ಹಿಂದೂ ಯುವತಿ ಹತ್ಯೆ ಕೇಸ್ – ಬಾಡಿಗೆ ಕಾರು ತಂದು ಸ್ವಾತಿ ಕರೆದೊಯ್ದಿದ್ದ ನಯಾಜ್‌!

    ಹಾವೇರಿ ಹಿಂದೂ ಯುವತಿ ಹತ್ಯೆ ಕೇಸ್ – ಬಾಡಿಗೆ ಕಾರು ತಂದು ಸ್ವಾತಿ ಕರೆದೊಯ್ದಿದ್ದ ನಯಾಜ್‌!

    – ಸ್ನೇಹಿತರ ಜೊತೆಗೂಡಿ ಪ್ರೇಯಸಿ ಹತ್ಯೆಗೆ ಸ್ಕೆಚ್ ಹಾಕಿದ್ದು ಹೇಗೆ?

    ಹಾವೇರಿ: ಇಲ್ಲಿನ ಹಿಂದೂ ಯುವತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮದುವೆಗೆ ನಿರಾಕರಿಸಿದ ಯುವಕನನ್ನು ಯುವತಿ ತರಾಟೆಗೆ ತೆಗೆದುಕೊಂಡಿದ್ದಳು. ಇದರಿಂದ ಕೋಪ ಗೊಂಡ ಯುವಕ ಆತನ ಸ್ನೇಹಿತರ ಜೊತೆಗೂಡಿ ಆಕೆಯನ್ನ ಕೊಲೆ ಮಾಡಿರುವುದು ಪೊಲೀಸರ ತನಿಖೆಯಲ್ಲಿ ತಿಳಿದಿದೆ.

    ಬದುಕಿ ಬಾಳಬೇಕಿದ್ದ ಯುವತಿ ತುಂಗಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಮೊದಲಿಗೆ ಯುಡಿಆರ್ ದಾಖಲಿಸಿ ತನಿಖೆ ಆರಂಭಿಸಿದ ಪೊಲಿಸರಿಗೆ ಹಂತಕರ ಸುಳಿವು ಸಿಕ್ಕಿದೆ. ಹಾವೇರಿ ಜಿಲ್ಲೆಯಲ್ಲಿ ನಡೆದ ಸ್ವಾತಿ ಎಂಬ ಯುವತಿ ಹತ್ಯೆ ಪ್ರಕರಣ ರಾಜ್ಯದಲ್ಲೇ ದೊಡ್ಡ ಸಂಚಲನ ಮೂಡಿಸಿದೆ. ಇದನ್ನೂ ಓದಿ: ‘ಬ್ರಹ್ಮಾಸ್ತ್ರ’ ಚಿತ್ರದ ನಿರ್ದೇಶಕ ಅಯಾನ್‌ ತಂದೆ ದೇಬ್ ಮುಖರ್ಜಿ ನಿಧನ

    ಏನಿದು ಪ್ರಕರಣ?
    ಮಾ. 6ರಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಪತ್ತೆಪುರ ಬಳಿ ಅಪರಿಚಿತ ಯುವತಿ ಶವ ಪತ್ತೆಯಾಗಿತ್ತು. ಮೊದಲಿಗೆ ಯು.ಡಿ.ಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಹಲಗೇರಿ ಠಾಣೆ ಪೊಲಿಸರು ಯುವತಿ ಶವದ ಮರಣೋತ್ತರ ಪರೀಕ್ಷೆ ಮಾಡಿ ಅಂತ್ಯಸಂಸ್ಕಾರ ಕೂಡಾ ಮಾಡಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಯುವತಿಯನ್ನು ಯಾರೋ ಕೊಲೆ ಮಾಡಿ ತುಂಗಭದ್ರಾ ನದಿಯಲ್ಲಿ ಬಿಸಾಡಿ ಹೋಗಿರೋದು ಗೊತ್ತಾಗಿತ್ತು. ತನಿಖೆ ಆರಂಭಿಸಿದ ಪೊಲೀಸರಿಗೆ ಅದು ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಎಂಬ ಯುವತಿ ಶವ ಎನ್ನುವುದು ಗೊತ್ತಾಗಿದೆ. ಇದನ್ನೂ ಓದಿ: ಜಿಲ್ಲೆಯಲ್ಲಿ ಆತಂಕ ಹುಟ್ಟಿಸಿದ್ದ ಚಿರತೆ ಸೆರೆ

    ಸ್ವಾತಿ ಎಂಬ ಯುವತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಯಾಜ್ ಹಾಗೂ ವಿನಯ್, ದುರ್ಗಾಚಾರಿ ಎಂಬ ಯುವಕರೇ ಹತ್ಯೆಗೈದವರು ಎಂದು ತನಿಖೆ ವೇಳೆ ಗೊತ್ತಾಗಿದೆ. ಆರೋಪಿ ನಯಾಜ್ ಹಿರೇಕೇರೂರು ತಾಲೂಕು ಹಳೆ ವಿರಾಪುರ ಗ್ರಾಮದವನು. ಕೊಲೆಯಾದ ಸ್ವಾತಿ ಹಾಗೂ ಕೊಲೆ ಮಾಡಿದ ಮೂವರು ಆರೋಪಿಗಳು ಹೋರಿ ಬೆದರಿಸೋ ಸ್ಪರ್ಧೆ ಅಭಿಮಾನಿಗಳಾಗಿದ್ದರು. ಹೋರಿ ಬೆದರಿಸೋ ಸ್ಪರ್ಧೆ ಇದ್ದಲಿಗೆ ಸ್ವಾತಿ ಹಾಜರಾಗ್ತಿದ್ದಳು. ಈ ವೇಳೆ ನಯಾಜ್, ವಿನಯ್, ದುರ್ಗಾಚಾರಿ ನಡುವೆ ಸ್ನೇಹ ಬೆಳೆದಿತ್ತು. ಇದನ್ನೂ ಓದಿ: ಹೋಳಿ ಹುಣ್ಣಿಮೆ – ಶ್ರೀಶೈಲಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದಾರೆ ಭಕ್ತರು

    ಬಳಿಕ ಆರೋಪಿ ನಯಾಜ್ ಹಾಗೂ ಸ್ವಾತಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ನಯಾಜ್, ಸ್ವಾತಿಯನ್ನು ಬಿಟ್ಟು ತಮ್ಮ ಧರ್ಮದ ಯುವತಿ ಜೊತೆ ಮದುವೆಯಾಗಲು ಬಯಸಿದ್ದ. ಇದರಿಂದ ರೊಚ್ಚಿಗೆದ್ದಿದ್ದ ಸ್ವಾತಿ ನನಗೆ ಮೋಸ ಮಾಡಬೇಡ ಅಂತ ಜಗಳ ಆಡಿದ್ದಳು. ಬಳಿಕ ನಯಾಜ್ ಹಾಗೂ ಸ್ವಾತಿ ನಡುವೆ ಭಿನ್ನಾಭಿಪ್ರಾಯ ಶುರುವಾಗಿತ್ತು. ವಿನಯ್ ಹಾಗೂ ದುರ್ಗಾಚಾರಿಗೆ ಈ ವಿಚಾರವನ್ನು ನಯಾಜ್ ತಿಳಿಸಿದ್ದ. ಸ್ವಾತಿ ಕಾಟ ಹೆಚ್ಚಾಗಿದೆ ಅವಳ ಕಥೆ ಮುಗಿಸಬೇಕು ಎಂದು ಮೂವರೂ ಮಾತಾಡಿಕೊಂಡಿದ್ದರು. ಇದನ್ನೂ ಓದಿ: ಬೆಂಗಳೂರು ಕಸ ಅನ್ನೋದು ಮಾಫಿಯಾ, ಶಾಸಕರೇ ಬ್ಲ್ಯಾಕ್‌ಮೇಲ್ ಮಾಡ್ತಿದ್ದಾರೆ: ಡಿ.ಕೆ ಶಿವಕುಮಾರ್

    ಮಾ. 3ರಂದು ಆರೋಪಿಗಳು ಸ್ವಾತಿಗೆ ಫೋನ್ ಮಾಡಿ ಬರ ಹೇಳಿದ್ದರು. ಬಾಡಿಗೆ ಕಾರ್ ಮಾಡಿಕೊಂಡು ಬಂದು ಆಕೆಯನ್ನು ಆರೋಪಿಗಳು ಕಾರಿನಲ್ಲಿ ಕರೆದೊಯ್ದಿದ್ದರು. ರಾಣೇಬೆನ್ನೂರು ಹೊರ ವಲಯದ ಸುವರ್ಣ ಪಾರ್ಕ್ಗೆ ಕರೆದುಕೊಂಡು ಹೋಗಿದ್ದರು. ಬಾಡಿಗೆ ಕಾರಿನಲ್ಲಿ ರಟ್ಟಿಹಳ್ಳಿ ಬಳಿ ಇರುವ ಕಬ್ಬಿಣಕಂತಿ ಮಠದ ಬಳಿ ಪಾಳು ಬಿದ್ದಿರುವ ತರಳಬಾಳು ಶಾಲೆಗೆ ಕರೆದೊಯ್ದು ಕುತ್ತಿಗೆಗೆ ಟವಲ್ ಹಾಕಿ ಉರುಳು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಬಳಿಕ ಕಾರಿನ ಡಿಕ್ಕಿಯಲ್ಲಿ ಶವ ಸಾಗಿಸಿದ್ದು, ತುಂಗಭದ್ರಾ ನದಿಗೆ ಶವ ಬಿಸಾಡಿದ್ದರು. ಇದನ್ನೂ ಓದಿ: ವ್ಯಕ್ತಿಯ ಬರ್ಬರ ಹತ್ಯೆ – ಜೊತೆಗಿದ್ದ ಪ್ರೇಯಸಿ ಮೇಲೆಯೇ ಅನುಮಾನ

    ರಾಣೆಬೆನ್ನೂರು ತಾಲೂಕು ಪತ್ತೆಪುರ ಬಳಿ ಪತ್ತೆಯಾಗಿದ್ದ ಸ್ವಾತಿ ಶವ ಪತ್ತೆಯಾಗುತ್ತಲೇ ಪೊಲೀಸರು ತನಿಖೆ ಶುರು ಮಾಡಿಕೊಂಡಿದ್ದರು. ಆರೋಪಿ ನಯಾಜ್‌ನನ್ನು ಪೊಲೀಸರು ಬಂಧಿಸಿದ್ದು, ವಿನಯ್ ಹಾಗೂ ದುರ್ಗಾಚಾರಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ – 9,000 ನರ್ಸ್‌ಗಳಿಂದ ಅಹೋರಾತ್ರಿ ಧರಣಿ

    ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ – 9,000 ನರ್ಸ್‌ಗಳಿಂದ ಅಹೋರಾತ್ರಿ ಧರಣಿ

    ಬೆಂಗಳೂರು: ಕರ್ನಾಟಕ (Karnataka) ರಾಜ್ಯ ಗುತ್ತಿಗೆ ಶುಶ್ರೂಷ ಅಧಿಕಾರಿಗಳು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಫ್ರೀಡಂಪಾರ್ಕ್‌ನಲ್ಲಿ (Freedom Park) ಅನಿರ್ಧಿಷ್ಟಾವಧಿಯ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

    ರಾಜ್ಯದ ಸಾವಿರಾರು ನರ್ಸ್‌ಗಳು ಧರಣಿ ಆರಂಭಿಸಿದ್ದು, ಇದರಿಂದ ರಾಜ್ಯಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಪಕ್ಷಿಗಳ ನಿಗೂಢ ಸಾವು – ಹಕ್ಕಿ ಜ್ವರದ ಶಂಕೆ

    15 ವರ್ಷ ಸೇವೆ ಸಲ್ಲಿಸಿದರೂ ಸಂಬಳ 14,000 ರೂ. ದಾಟಿಲ್ಲ. ಸೇವೆ ಕಾಯಂಗೊಳಿಸಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನಾನಿರತ ನರ್ಸ್‌ಗಳು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ

    ಪ್ರತಿಭಟನೆಯಲ್ಲಿ 9,ooo ನರ್ಸ್‌ಗಳು ಭಾಗಿಯಾಗಿದ್ದಾರೆ.

  • ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ್ದ ನರ್ಸ್ ಅಮಾನತು

    ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ್ದ ನರ್ಸ್ ಅಮಾನತು

    ಹಾವೇರಿ: ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ (Fevikwick) ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ನರ್ಸ್ (Nurse) ಅನ್ನು ಅಮಾನತುಗೊಳಿಸಲಾಗಿದೆ.

    ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಫೆವಿಕ್ವಿಕ್ ಅಂಟು ದ್ರಾವಣವಾಗಿದ್ದು, ವೈದ್ಯಕೀಯ ಬಳಕೆಯಲ್ಲಿಲ್ಲ. ಮಗುವಿನ ಚಿಕಿತ್ಸೆಗೆ ಫೆವಿಕ್ವಿಕ್ ಬಳಸಿ ಕರ್ತವ್ಯ ಲೋಪವೆಸಗಿದ್ದಾರೆ. ಸ್ಟಾಫ್ ನರ್ಸ್ ಬಗ್ಗೆ ಪ್ರಾಥಮಿಕ ವರದಿ ಪಡೆದು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಮಗುವಿನ ಆರೋಗ್ಯದಲ್ಲಿ ಅಡ್ಡಪರಿಣಾಮಗಳ ಬಗ್ಗೆ ನಿಗಾ ಇಡಲು ಸೂಚನೆ ನೀಡಿದ್ದು, ಚಿಕಿತ್ಸೆಗೆ ಒಳಪಟ್ಟಿದ್ದ ಮಗು ಆರೋಗ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಕಪ್ಪತ್ತಗುಡ್ಡಕ್ಕೆ ಬೆಂಕಿ – ನೂರಾರು ಹೆಕ್ಟೇರ್‌ ಅರಣ್ಯದಲ್ಲಿದ್ದ ಔಷಧಿಯ ಸಸ್ಯಗಳು, ಪ್ರಾಣಿ-ಪಕ್ಷಿಗಳು ಬೆಂಕಿಗಾಹುತಿ

    ಪ್ರಕರಣ ಏನು?
    ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ ಹಾಕಿದ್ದರು. ಇದನ್ನೂ ಓದಿ: Delhi Exit Poll| ಇಂದು ಸಮೀಕ್ಷೆ ಇಲ್ಲ, ನಾಳೆ ಪ್ರಕಟಿಸಲಿದೆ ಟುಡೇಸ್‌ ಚಾಣಕ್ಯ

    ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟ ಆಡುವಾಗ ಬಿದ್ದು 7 ವರ್ಷದ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಗುರುಕಿಶನ್‌ನನ್ನು ಚಿಕಿತ್ಸೆಗೆಂದು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಕರೆದೊಯ್ದಿದ್ದರು. ಕರ್ತವ್ಯದಲ್ಲಿದ್ದ ನರ್ಸ್ ಜ್ಯೋತಿ ಚಿಕಿತ್ಸೆ ನೀಡುವಾಗ ಕೆನ್ನೆಗೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದರು. ಇದನ್ನೂ ಓದಿ: ಪೇಂಟ್‌ಗೆ ಬಳಸುವ ಥಿನ್ನರ್ ಕುಡಿದು 3ರ ಬಾಲಕ ಸಾವು

    ಇದು ಪೋಷಕರ ಗಮನಕ್ಕೆ ಬಂದು ಏಕೆ ಹೀಗೆ ಮಾಡಿದ್ರಿ ಎಂದು ದಾದಿಯನ್ನು ಕೇಳಿದಾಗ, ಕೆನ್ನೆಗೆ ಸ್ಟಿಚ್ ಹಾಕಿದ್ರೆ ಕಲೆ ಆಗುತ್ತದೆ. ಅದಕ್ಕೆ ಫೆವಿಕ್ವಿಕ್ ಹಾಕಿದ್ದೇನೆ. ಕಳೆದ ಐದು ವರ್ಷದಿಂದ ಇದನ್ನೇ ಮಾಡುತ್ತಿದ್ದೇನೆ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ. ಇದರಿಂದ ಕಂಗಾಲಾದ ಪೋಷಕರು, ಆರೋಗ್ಯ ಕೇಂದ್ರದ ರಕ್ಷಣಾ ಸಮಿತಿಗೆ ದೂರು ಕೊಟ್ಟಿದ್ದಾರೆ. ಇದನ್ನೂ ಓದಿ: ದೆಹಲಿ ರಿಸಲ್ಟ್ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಘೋಷಣೆ – ವಿಜಯೇಂದ್ರ ಭವಿಷ್ಯ ಮೋದಿ ಕೈಯಲ್ಲಿ?

  • ಬಾಲಕನ ಕೆನ್ನೆಯ ಗಾಯಕ್ಕೆ ಸ್ಟಿಚ್ ಬದಲು ಫೆವಿಕ್ವಿಕ್ ಹಾಕಿದ ನರ್ಸ್

    ಬಾಲಕನ ಕೆನ್ನೆಯ ಗಾಯಕ್ಕೆ ಸ್ಟಿಚ್ ಬದಲು ಫೆವಿಕ್ವಿಕ್ ಹಾಕಿದ ನರ್ಸ್

    ಹಾವೇರಿ: ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ (Fevikwik) ಹಾಕಿದ ವಿಚಿತ್ರ ಘಟನೆ ಹಾವೇರಿ (Haveri) ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

    ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟ ಆಡುವಾಗ ಬಿದ್ದು 7 ವರ್ಷದ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಗುರುಕಿಶನ್‌ನನ್ನು ಚಿಕಿತ್ಸೆಗೆಂದು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಕರೆದೊಯ್ದಿದ್ದರು. ಕರ್ತವ್ಯದಲ್ಲಿದ್ದ ನರ್ಸ್ ಜ್ಯೋತಿ ಚಿಕಿತ್ಸೆ ನೀಡುವಾಗ ಕೆನ್ನೆಗೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದಾರೆ. ಇದನ್ನೂ ಓದಿ: ಜಾಗತಿಕ ಹೂಡಿಕೆದಾರರ ಸಮಾವೇಶ; ಫೆ.13ರಂದು `ಕ್ವಿನ್ ಸಿಟಿ’ ಕುರಿತು ರೌಂಡ್ ಟೇಬಲ್ ಚರ್ಚೆ: ಎಂ.ಬಿ ಪಾಟೀಲ್

    ಇದು ಪೋಷಕರ ಗಮನಕ್ಕೆ ಬಂದು ಏಕೆ ಹೀಗೆ ಮಾಡಿದ್ರಿ ಎಂದು ದಾದಿಯನ್ನು ಕೇಳಿದಾಗ, ಕೆನ್ನೆಗೆ ಸ್ಟಿಚ್ ಹಾಕಿದ್ರೆ ಕಲೆ ಆಗುತ್ತದೆ. ಅದಕ್ಕೆ ಫೆವಿಕ್ವಿಕ್ ಹಾಕಿದ್ದೇನೆ. ಕಳೆದ ಐದು ವರ್ಷದಿಂದ ಇದನ್ನೇ ಮಾಡುತ್ತಿದ್ದೇನೆ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ. ಇದರಿಂದ ಕಂಗಾಲಾದ ಪೋಷಕರು, ಆರೋಗ್ಯ ಕೇಂದ್ರದ ರಕ್ಷಣಾ ಸಮಿತಿಗೆ ದೂರು ಕೊಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ ಹಾನಗಲ್ ಡಿಹೆಚ್‌ಓ ಎಚ್ಚೆತ್ತು ವರದಿ ಪಡೆದು ಕ್ರಮ ಜರುಗಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ

  • ಚಿತ್ರದುರ್ಗ| 2ನೇ ಮಹಡಿಯಿಂದ ಬಿದ್ದು ನರ್ಸ್ ಅನುಮಾನಾಸ್ಪದ ಸಾವು

    ಚಿತ್ರದುರ್ಗ| 2ನೇ ಮಹಡಿಯಿಂದ ಬಿದ್ದು ನರ್ಸ್ ಅನುಮಾನಾಸ್ಪದ ಸಾವು

    ಚಿತ್ರದುರ್ಗ: 2ನೇ ಮಹಡಿಯಿಂದ ಕೆಳಗೆ ಬಿದ್ದ ಸ್ಟಾಫ್ ನರ್ಸ್ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗದ (Chitradurga) ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

    ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕೋಬನಹಳ್ಳಿ ಮೂಲದ ನರ್ಸ್ ಇಂದ್ರಮ್ಮ (36) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಈಕೆ ಹಲವು ವರ್ಷಗಳಿಂದ ಈ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದರು. ಇದನ್ನೂ ಓದಿ: ಮಂಡ್ಯ | ಕೆರೆ ಕೋಡಿಗೆ ಕೊಚ್ಚಿಹೋಗಿ ಬೈಕ್ ಸವಾರ ಸಾವು

    ನಿನ್ನೆ ಸಂಜೆ ಇಂದ್ರಮ್ಮನ ಸ್ನೇಹಿತೆ ಬೀಗದ ಕೀಯನ್ನು ಮೇಲಿಂದ ಕೆಳಗೆ ಎಸೆದಿದ್ದರು. ಆಗ ಬೀಗದ ಕೀ ಆಯತಪ್ಪಿ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು, ಅದನ್ನು ಕಟ್ಟಿಗೆಯಿಂದ ತೆರವುಗೊಳಿಸಲು ಮುಂದಾಗಿದ್ದ ಇಂದ್ರಮ್ಮ ಕೆಳಗೆ ಬಿದ್ದಿದ್ದಾರೆ.

    ಆಕೆಯ ತಲೆಗೆ ಬಲವಾದ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಈ ವೇಳೆ ಅವರನ್ನು ಬಸವೇಶ್ವರ ಆಸ್ಪತ್ರೆಗೆ ಶಿಫ್ಟ್ ಮಾಡುವ ಮಾರ್ಗಮಧ್ಯೆ ಅಸುನೀಗಿದ್ದಾರೆಂದು, ಸಹೊದ್ಯೋಗಿಗಳು ತಿಳಿಸಿದರು. ಆದರೆ, ಮೃತಳ ಕುಟುಂಬಸ್ಥರು ಮಾತ್ರ ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೆನ್ನೆಗೆ ಬಲವಾಗಿ ಹೊಡೆದ ಶಿಕ್ಷಕಿ – ಸಾವು ಬದುಕಿನ ನಡುವೆ ಬಾಲಕಿ ಹೋರಾಟ

    ಈ ಸಾವಿನ ಬಗ್ಹೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಚಿತ್ರದುರ್ಗ ನಗರ ಠಾಣೆಗೆ ದೂರು ದಾಖಲಿಸಿದ್ದಾರೆ. ಹೀಗಾಗಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಬೆರಳಚ್ಚು‌ ತಜ್ಞರು ಸೇರಿದಂತೆ ಇನ್ನಿತರೆ ತಂತ್ರಜ್ಞರೊಂದಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

  • ಮದುವೆಯಾಗುವುದಾಗಿ ನಂಬಿಸಿ ನರ್ಸ್‌ ಮೇಲೆ ಅತ್ಯಾಚಾರ – 59ರ ವ್ಯಕ್ತಿ ಬಂಧನ

    ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಮದುವೆಯಾಗುವುದಾಗಿ ನಂಬಿಸಿ ನರ್ಸ್‌ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 59 ವಯಸ್ಸಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ಭದೋಹಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಪ್ರಯೋಗಾಲಯ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದ ಚಿಂತಾಮಣಿ ಶರ್ಮಾ ಎಂಬ ವ್ಯಕ್ತಿ 39 ವಯಸ್ಸಿನ ನರ್ಸ್‌ ಮೇಲೆ 21 ವರ್ಷಗಳ ಅವಧಿಯಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಏರ್‌ಲಿಫ್ಟ್‌ ವೇಳೆ ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ಪತನ

    ಆರೋಪಿ ವಿರುದ್ಧ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ಸಬಿಹಾ ಖಾತೂನ್ ನ್ಯಾಯಾಲಯದಲ್ಲಿ ಸಂತ್ರಸ್ತೆ ನರ್ಸ್‌ ಪ್ರಕರಣದ ವಿಚಾರಣೆ ನಡೆಸಿತ್ತು. ಅರ್ಜಿಯನ್ನು ಆಲಿಸಿದ ಸಿಜೆಎಂ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಗುರುವಾರ ಪೊಲೀಸರಿಗೆ ಆದೇಶಿಸಿದ್ದರು.

    ಸಂತ್ರಸ್ತೆ 15 ವರ್ಷ ವಯಸ್ಸಿನವಳಿದ್ದಾಗ ಅವಳನ್ನು ಅದೇ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಶರ್ಮಾ ಪರಿಚಯ ಮಾಡಿಕೊಂಡಿದ್ದ. ನಂತರ ಆಕೆಯ ಅಧ್ಯಯನಕ್ಕೆ ಸಹಾಯ ಮಾಡುವುದಾಗಿ ಕುಟುಂಬದವರಿಗೂ ಹತ್ತಿರವಾಗಿದ್ದ ಎಂದು ಭಾದೋಹಿ ಎಸ್‌ಪಿ ಮೀನಾಕ್ಷಿ ಕಾತ್ಯಾಯನ್‌ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಪತ್ನಿಯ ಖಾಸಗಿ ಕ್ಷಣ ವೀಡಿಯೋ ಮಾಡಿ ಹಂಚಿಕೊಂಡ ಪತಿ!

    ಬೆದರಿಕೆ ಹಾಕುವ ಮೂಲಕ ಆಕೆಯ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದಾನೆ. ಸಮಯ ಕಳೆದಂತೆ, ಆಕೆಯೊಂದಿಗೆ ದೈಹಿಕ ಸಂಬಂಧವನ್ನು ಮುಂದುವರೆಸಿದ್ದಾನೆ. ಅವಳನ್ನು ಮದುವೆಯಾಗುವುದಾಗಿ ಭರವಸೆ ನೀಡುವ ಮೂಲಕ ನಿರಂತರವಾಗಿ ಲೈಂಗಿಕವಾಗಿ ಶೋಷಣೆ ಮಾಡಿದ ಶರ್ಮಾ, ರಹಸ್ಯವಾಗಿ ಬೇರೊಬ್ಬಳೊಂದಿಗೆ ಮದುವೆಯಾಗಿದ್ದ. ಆದರೆ ಈಕೆಯನ್ನು ವಂಚಿಸುತ್ತಲೇ ಇದ್ದ. ಅವಳೊಂದಿಗೆ ಲೈಂಗಿಕ ಸಂಬಂಧವನ್ನು ಮುಂದುವರೆಸಿದ್ದ ಎಂದು ಎಸ್‌ಪಿ ಹೇಳಿದ್ದಾರೆ.

    ಆರೋಪಿಯನ್ನು ವಾರಣಾಸಿಯ ಅಪಾರ್ಟ್‌ಮೆಂಟ್‌ನಿಂದ ಶುಕ್ರವಾರ ಬಂಧಿಸಲಾಗಿದೆ. ನರ್ಸ್‌ಳನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆಕೆಯ ಲಿಖಿತ ಹೇಳಿಕೆಯನ್ನು ಶೀಘ್ರದಲ್ಲೇ ನ್ಯಾಯಾಲಯದಲ್ಲಿ ದಾಖಲಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

  • ಮಾತಾ ಅಲ್ಲದೇ ಚಾಮುಂಡೇಶ್ವರಿ ಆಸ್ಪತ್ರೆಯಲ್ಲೂ ನಡೀತಿತ್ತು ಭ್ರೂಣ ದಂಧೆ- ಹೆಡ್‌ನರ್ಸ್ ಉಷಾರಾಣಿ ಬಂಧನ

    ಮಾತಾ ಅಲ್ಲದೇ ಚಾಮುಂಡೇಶ್ವರಿ ಆಸ್ಪತ್ರೆಯಲ್ಲೂ ನಡೀತಿತ್ತು ಭ್ರೂಣ ದಂಧೆ- ಹೆಡ್‌ನರ್ಸ್ ಉಷಾರಾಣಿ ಬಂಧನ

    ಬೆಂಗಳೂರು: ಮೈಸೂರಿನಲ್ಲಿ (Mysuru) ನಡೆಯುತ್ತಿದ್ದ ಭ್ರೂಣ ದಂಧೆ (Foeticide) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಕೇವಲ ಮಾತಾ ಆಸ್ಪತ್ರೆಯಲ್ಲಿ (Matha Hospital) ಮಾತ್ರ ಭ್ರೂಣ ಹತ್ಯೆ ನಡೆಯುತ್ತಿರಲಿಲ್ಲ. ಇದರ ಜೊತೆಗೆ ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ ದಂಧೆ ನಡೆಯುತ್ತಿತ್ತು ಎಂಬ ಸ್ಫೋಟಕ ಮಾಹಿತಿ ಲಭಿಸಿದೆ.

    ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯಲ್ಲೂ (Chamundeshwari Hospital) ಕೂಡಾ ಭ್ರೂಣ ಹತ್ಯೆ ದಂಧೆ ನಡೆಯುತ್ತಿದ್ದು, ಇಲ್ಲಿನ ಹೆಡ್‌ನರ್ಸ್ (Head Nurse) ಆಗಿದ್ದ ಉಷಾರಾಣಿ ಎಂಬಾಕೆಯನ್ನು ಬಂಧಿಸಲಾಗಿದೆ. ಬ್ರೋಕರ್ ಪುಟ್ಟರಾಜು ಅಣತಿಯಂತೆ ಮಹಿಳೆಯರಿಗೆ ಅಬಾರ್ಷನ್ ಮಾಡಲಾಗುತ್ತಿತ್ತು. ಪುಟ್ಟರಾಜು ಮಾತಾ ಆಸ್ಪತ್ರೆ ಹಾಗೂ ಚಾಮುಂಡೇಶ್ವರಿ ಆಸ್ಪತ್ರೆಗೆ ಗರ್ಭಿಣಿಯರನ್ನು ಕರೆದುಕೊಂಡು ಹೋಗುತ್ತಿದ್ದ. ಬಳಿಕ ಉಷಾರಾಣಿ ಗರ್ಭಿಣಿಯರಿಗೆ ಅಬಾರ್ಷನ್ (Abortion) ಮಾಡುತ್ತಿದ್ದಳು. ಈ ಹಿನ್ನೆಲೆ ಪೊಲೀಸರು ಉಷಾರಾಣಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಟ್ರಯಲ್ ರೂಮ್‍ನಲ್ಲಿ ಯುವತಿ ಅಶ್ಲೀಲ ಫೋಟೋ ತೆಗೆದು ಬ್ಲ್ಯಾಕ್‍ಮೇಲ್ – ಆರೋಪಿ ಅರೆಸ್ಟ್

    ಇನ್ನು ಚಾಮುಂಡೇಶ್ವರಿ ಆಸ್ಪತ್ರೆಯ ಮಾಲೀಕ ಜಗದೀಶ್‌ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಜಗದೀಶ್‌ಗೆ ನೋಟಿಸ್ ನೀಡಿದ್ದಾರೆ. ಅಲ್ಲದೇ ಚಾಮುಂಡೇಶ್ವರಿ ಆಸ್ಪತ್ರೆಯ ದಾಖಲಾತಿಗಳನ್ನು ಪೊಲೀಸರಿಗೆ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಯುವತಿಯ ಹತ್ಯೆಗೈದು ಆಕೆಯ ವಾಟ್ಸಪ್ ಸ್ಟೇಟಸ್‍ಗೆ ಮೃತದೇಹದ ಫೋಟೋ ಹಾಕಿದ ಪಾಗಲ್ ಪ್ರೇಮಿ

  • ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಭ್ರೂಣ ಹತ್ಯೆ ಕುರಿತು ನರ್ಸ್ ಮಂಜುಳ ಸ್ಫೋಟಕ ಮಾಹಿತಿ

    ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಭ್ರೂಣ ಹತ್ಯೆ ಕುರಿತು ನರ್ಸ್ ಮಂಜುಳ ಸ್ಫೋಟಕ ಮಾಹಿತಿ

    – ಅಬಾರ್ಷನ್ ಮಾಡಿದ ಮಗುವನ್ನು ಕಾವೇರಿ ನದಿಗೆ ಎಸೆಯುತ್ತಿದ್ದ ನಿಸಾರ್

    ಬೆಂಗಳೂರು: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ (Abort) ಮಾಡುತ್ತಿದ್ದೆ. ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎಂದು ಮಾತಾ ಆಸ್ಪತ್ರೆಯ ಹೆಡ್ ನರ್ಸ್ (Nurse) ಆಗಿದ್ದ ಮಂಜುಳಾ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾಳೆ.

    ಮೈಸೂರು (Mysuru) ಭ್ರೂಣ ಹತ್ಯೆ (Foeticide) ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾಳನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಭ್ರೂಣ ಹತ್ಯೆಯ ಕುರಿತು ಸ್ಫೋಟಕ ಮಾಹಿತಿಗಳನ್ನು ಇಂಚಿಚಾಗಿ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾಳೆ. ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ಅದನ್ನು ಪೇಪರ್‌ನಲ್ಲಿ ಸುತ್ತಿ ನಿಸಾರ್‌ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಅಬಾರ್ಟ್ ಮಾಡಿ ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್ ಅಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂಬ ಭಯಾನಕ ವಿಚಾರ ಪೊಲೀಸರ ಮುಂದೆ ತೆರೆದಿಟ್ಟಿದ್ದಾಳೆ. ಇದನ್ನೂ ಓದಿ:‌ ರೆಸ್ಟೋರೆಂಟಲ್ಲಿ ಕೈ ತೊಳೆದು ಬರುವಷ್ಟರಲ್ಲಿ ಪಿಎಸ್‌ಐ ಪಿಸ್ತೂಲ್ ಮಂಗಮಾಯ!

    ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವ ಮಂಜುಳಾ, ಕಳೆದೊಂದು ವರ್ಷದಿಂದ ನಾನು ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದೆ. ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ. ಈ ಮೊದಲು ರೀಸ್ಮಾ ಅಬಾರ್ಷನ್ ಮಾಡುವ ಕೆಲಸವನ್ನು ಮಾಡುತ್ತಿದ್ದಳು. ಅವಳಾದ ಬಳಿಕ ನಾನು ಮಗುವನ್ನು ಅಬಾರ್ಷನ್ ಮಾಡುವುದಕ್ಕೆ ಸೇರಿಕೊಂಡಿದ್ದೆ. 6 ತಿಂಗಳ ಮಗುವನ್ನು ನಾನು ಅಬಾರ್ಷನ್ ಮಾಡಿದ್ದೇನೆ ಎಂದಿದ್ದಾಳೆ. ಇದನ್ನೂ ಓದಿ: 900 ಭ್ರೂಣಗಳ ಹತ್ಯೆ ಆರೋಪಕ್ಕೆ ಅಂಜಿ ವಿಷದ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡ್ರಾ ವೈದ್ಯ?

    ನಿಸಾರ್ ಮಗುವನ್ನು ನದಿಗೆ ಎಸೆದು ಬರುತ್ತಿದ್ದ. ಯಾವ ಜಾಗದಲ್ಲಿ ಆ ಮಗುವನ್ನು ಬಿಸಾಕುತ್ತಿದ್ದ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತದೆ. ಅದಕ್ಕೆ ನಿಸಾರ್ ಮಗುವನ್ನು ಬಿಸಾಕುವ ಕೆಲಸ ಮಾಡುತ್ತಿದ್ದ. ಭ್ರೂಣ ಹತ್ಯೆ ಮಾಡಿದ ಬಳಿಕ ತೀರಾ ರಕ್ತಸ್ರಾವ ಆಗುತ್ತಿತ್ತು. ಆಗ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳಲು ಆಗುತ್ತಿರಲಿಲ್ಲ. ಆರು ತಿಂಗಳ ಮಗುವನ್ನು ಅಬಾರ್ಷನ್ ಮಾಡುವುದಕ್ಕೆ ಬೇರೆಯೇ ಕಾರಣ ಇತ್ತು. ನಮ್ಮ ಬಳಿ ಅಡ್ವಾನ್ಸ್ ಸ್ಕ್ಯಾನಿಂಗ್ ಮೆಷಿನ್ ಇರಲಿಲ್ಲ. ಕೆಲವೊಮ್ಮೆ ಹೆಣ್ಣು ಭ್ರೂಣನಾ? ಗಂಡು ಭ್ರೂಣನಾ ಎಂದು ಗೊತ್ತಾಗುತ್ತಿರಲಿಲ್ಲ. ಲಿಂಗ ಪತ್ತೆಯಾಗದೇ ಇದ್ದಾಗ ತಿಂಗಳು ಬಿಟ್ಟು ಬರೋದಕ್ಕೆ ಹೇಳುತ್ತಿದ್ದೆವು. ಹೀಗಾಗಿ ಮಗುವನ್ನು ಕಂಡು ಹಿಡಿಯಲು ತಡ ಆದಾಗ 6 ತಿಂಗಳ ಮಗುವನ್ನು ಅಬಾರ್ಷನ್ ಮಾಡಲಾಗುತ್ತಿತ್ತು ಎಂದು ಹೇಳಿಕೆ ನೀಡಿದ್ದಾಳೆ. ಇದನ್ನೂ ಓದಿ: ಶಿಕ್ಷಕನ ಅಪಹರಿಸಿ, ಬಂದೂಕಿನಿಂದ ಬೆದರಿಸಿ ಮಗಳೊಂದಿಗೆ ಮದುವೆ ಮಾಡಿಸಿದ ಕಿಡ್ನ್ಯಾಪರ್

     

    6 ತಿಂಗಳ ಮಗು ಅಬಾರ್ಷನ್ ಮಾಡಲು ನಮ್ಮದೇ ಕಾರಣ ಇದೆ. 6 ತಿಂಗಳ ಮಗುವನ್ನು ಸಿಸೇರಿಯನ್ ಮೂಲಕ ಹೆರಿಗೆ ರೀತಿಯಲ್ಲಿ ಮಾಡುತ್ತಿದ್ದೆವು. ಸಿ ಸೆಕ್ಷನ್ ಮೂಲಕ ತೆಗೆದು ಟೇಬಲ್ ಮೇಲೆ ಇಡಲಾಗುತ್ತಿತ್ತು. 5 ರಿಂದ 10 ನಿಮಿಷಕ್ಕೆ ಆ ಮಗು ಸಾಯುತ್ತಿತ್ತು. ತಾಯಿಗೆ ಪ್ರಜ್ಞೆ ಇಲ್ಲದಂತೆ ಮಾಡಿ ಸಿ ಸೆಕ್ಷನ್ ಮಾಡಲಾಗುತ್ತಿತ್ತು ಎಂಬ ಸ್ಫೋಟಕ ಮಾಹಿತಿ ಪೊಲೀಸರಿಗೆ ನೀಡಿದ್ದಾಳೆ. ಇದನ್ನೂ ಓದಿ: ಗಂಟಲಲ್ಲಿ ಚಕ್ಕುಲಿ ಸಿಲುಕಿಕೊಂಡು ಪುಟ್ಟ ಕಂದಮ್ಮ ದುರ್ಮರಣ

    ಇನ್ನು ಡಾಕ್ಟರ್ ಚಂದನ್ ಬಲ್ಲಾಳ್ ಪುರಾಣವನ್ನು ಪೊಲೀಸರು ಬಿಚ್ಚಿಟ್ಟಿದ್ದು, ಅಸಲಿಗೆ ಚಂದನ್ ಬಲ್ಲಾಳ್ ಎಂಬಿಬಿಎಸ್ ಡಾಕ್ಟರ್ ಅಲ್ಲವೇ ಅಲ್ಲ. ಅವನು ಸ್ಕ್ಯಾನಿಂಗ್ ಮಾಡೋ ಪಾಠವನ್ನೇ ಕಲಿತಿರಲಿಲ್ಲ. ಚಂದನ್ ಬಲ್ಲಾಳ್ ಬಿಎಎಂಎಸ್ ಓದಿರುವ ಡಾಕ್ಟರ್. ಈತ ಕೇವಲ ಆಯುರ್ವೇದದ ಚಿಕಿತ್ಸೆಯನ್ನು ಮಾತ್ರ ಕೊಡಬೇಕಿತ್ತು. ನರ್ಸಿಂಗ್ ಹೋಂ ತೆಗೆಯೋದಕ್ಕೂ ಈತನಿಗೆ ವಿದ್ಯಾರ್ಹತೆ ಇಲ್ಲ. ಆದರೂ ನರ್ಸಿಂಗ್ ಹೋಂ ತೆಗೆದಿದ್ದ ಎಂದು ಹೇಳಿದ್ದಾರೆ. ಇದನ್ನೂ ಓದಿ: ದುಬಾರಿ ನಾಯಿಯನ್ನು ಕೊಡಿಸಲಿಲ್ಲವೆಂದು ಯುವಕ ಆತ್ಮಹತ್ಯೆ

  • ನರ್ಸ್‌ಗಳ ಸೌಂದರ್ಯದ ಕುರಿತು ಹೇಳಿಕೆ- ರಾಜು ಕಾಗೆ ಕ್ಷಮೆಯಾಚನೆ

    ನರ್ಸ್‌ಗಳ ಸೌಂದರ್ಯದ ಕುರಿತು ಹೇಳಿಕೆ- ರಾಜು ಕಾಗೆ ಕ್ಷಮೆಯಾಚನೆ

    ಚಿಕ್ಕೋಡಿ: ತುಂಬಿದ ಸಭೆಯಲ್ಲಿ ನರ್ಸ್‌ಗಳ (Nurse) ಸೌಂದರ್ಯ ಬಗ್ಗೆ ಕಾಂಗ್ರೆಸ್ ಶಾಸಕ ರಾಜು ಕಾಗೆ (Raju Kage) ಮಾತನಾಡಿದ ವಿಚಾರಕ್ಕೆ ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ (Apology)  ಕೇಳುತ್ತೇನೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದ್ದಾರೆ.

    ಈ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ ಕಾಂಗ್ರೆಸ್ (Congress) ಶಾಸಕ ರಾಜು ಕಾಗೆ ಕ್ಷಮೆ ಕೋರಿದ್ದಾರೆ. ಭಾನುವಾರ ಸಮಾರಂಭದಲ್ಲಿ ಮಾತನಾಡಿದ್ದು ಯಾರನ್ನೂ ಉದ್ದೇಶಿಸಿ ಅಲ್ಲ. ನಾನೇನೂ ನಾಲ್ಕು ಗೋಡೆಯಲ್ಲಿ ಮಾತನಾಡಿಲ್ಲ. ಸಾವಿರಾರು ಜನರಿದ್ದ ಸಭೆಯಲ್ಲಿ ಮಾತನಾಡಿದ್ದೇನೆ. ನಾನು ಜವಾಬ್ದಾರಿಯಿಂದ ಮಾತನಾಡಿದ್ದೇನೆ. ನಾನು ಹೇಳಿದ್ದು ವಯಸ್ಸು ಆಯ್ತಲ್ಲ, ಮುದುಕನಾದೆನಲ್ಲ ಅಂತಾ ಮನಸ್ಸಿಗೆ ನೋವಾಯ್ತು ಅಂತಾ ಹೇಳಿದೆ ಎಂದರು. ಇದನ್ನೂ ಓದಿ:‌ ನರ್ಸ್‌ಗಳು, ಚೆಂದ ಚೆಂದ ಹುಡುಗಿಯರು ಇದ್ದಾರೆ.. ನನ್ನನ್ನು ಅಜ್ಜ ಅಂತಾರೆ: ರಾಜು ಕಾಗೆ ಬೇಸರ

    ಶಬ್ಧದ ಅರ್ಥ ಸಾವಿರಾರೂ ರೀತಿಯಲ್ಲಿ ನೀವು ಅರ್ಥ ಮಾಡಿಕೊಳ್ಳಬಹುದು. ನನಗೆ ವಯಸ್ಸಾಯ್ತು ಅಂತಾ ಮಾನಸಿಕ ನೋವಾಯ್ತು. ಏನಾದರೂ ನನ್ನ ಮಾತಿನಿಂದ ನೋವಾಗಿದ್ರೆ ಕ್ಷಮೆ ಕೇಳುತ್ತಿದ್ದೇನೆ. ಯಾವುದೇ ಉದ್ದೇಶದಿಂದ ನಾನು ಮಾತನಾಡಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ರಾಜು ಕಾಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಹುಟ್ಟುಹಬ್ಬ – ಮಾವುತ, ಕಾವಾಡಿಗಳಿಗೆ ಉಪಹಾರಕೂಟ ಏರ್ಪಡಿಸಿ ಆಚರಣೆ

    ತುಂಬಿದ ಸಭೆಯಲ್ಲಿ ನರ್ಸ್‌ಗಳ ಸೌಂದರ್ಯದ ಬಗ್ಗೆ ಶಾಸಕ ರಾಜು ಕಾಗೆ ಮಾತನಾಡಿದ ವಿಡಿಯೋ ವೈರಲ್ ಆಗಿತ್ತು. ಬೆಳಗಾವಿ (Belagvi) ಜಿಲ್ಲೆ ಅಥಣಿ ತಾಲೂಕಿನ ಪಿ.ಕೆ.ನಾಗನೂರು ಗ್ರಾಮದಲ್ಲಿ ದಸರಾ ಮಹೋತ್ಸವದಲ್ಲಿ ಭಾಷಣ ಮಾಡಿದ್ದ ಅವರು, ಲಿವರ್ ಟ್ರಾನ್ಸ್‌ಪ್ಲಾಂಟ್ ಆದಾಗ ಒಂದು ತಿಂಗಳು ಆಸ್ಪತ್ರೆಯಲ್ಲಿದ್ದೆ. ವೈದ್ಯರು ದಿನವೂ ಬಂದು ಹೇಗಿದ್ದೀರಿ ಅಂತಾ ಕೇಳೋರು. ಆಗ ಆಸ್ಪತ್ರೆಯಲ್ಲಿ ಇದ್ದ ಡಾಕ್ಟರ್‌ಗೆ ನಾನು ಹೇಳಿದ್ದೆ. ನನ್ನ ಆರೋಗ್ಯಕ್ಕೆ ಏನೂ ಆಗಿಲ್ಲ. ನನ್ನ ಆಪರೇಷನ್ ಸಕ್ಸಸ್ ಮಾಡಿದ್ದೀರಿ, ಎಲ್ಲಾ ಆಗಿದೆ. ಆದರೆ ನಿಮ್ಮಲ್ಲಿ ನರ್ಸ್ಗಳು ಚೆಂದ ಚೆಂದ ಹುಡುಗಿಯರು ಇದ್ದಾರೆ. ಅವರು ನನಗೆ ಅಜ್ಜ ಅನ್ನುತ್ತಿದ್ದಾರೆ. ಅದು ನನಗೆ ಮಾನಸಿಕ ಹಿಂಸೆ ಆಗಿದೆ ಎಂದಿದ್ದೆ ಎಂದು ಶಾಸಕ ರಾಜು ಕಾಗೆ ಹೇಳಿದ್ದರು. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಕೌಂಟ್‍ಡೌನ್?- ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನರ್ಸ್‌ಗಳು, ಚೆಂದ ಚೆಂದ ಹುಡುಗಿಯರು ಇದ್ದಾರೆ.. ನನ್ನನ್ನು ಅಜ್ಜ ಅಂತಾರೆ: ರಾಜು ಕಾಗೆ ಬೇಸರ

    ನರ್ಸ್‌ಗಳು, ಚೆಂದ ಚೆಂದ ಹುಡುಗಿಯರು ಇದ್ದಾರೆ.. ನನ್ನನ್ನು ಅಜ್ಜ ಅಂತಾರೆ: ರಾಜು ಕಾಗೆ ಬೇಸರ

    ಚಿಕ್ಕೋಡಿ: ತುಂಬಿದ ಸಭೆಯಲ್ಲಿ ನರ್ಸ್‌ಗಳ (Nurse) ಸೌಂದರ್ಯದ ಬಗ್ಗೆ ಮಾತನಾಡಿ ಕೈ ಶಾಸಕ ರಾಜು ಕಾಗೆ (Raju Kage) ಪೇಚಿಗೆ ಸಿಲುಕಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆ ಅಥಣಿ (Athani) ತಾಲೂಕಿನ ಅವರಖೋಡ ಗ್ರಾಮದಲ್ಲಿ ದಸರಾ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ವರ್ಷ 70 ಆದರೂ ತಮ್ಮ ಮಾನಸಿಕತೆಯನ್ನು ಕಾಂಗ್ರೆಸ್ ಶಾಸಕ ಪ್ರದರ್ಶನ ಮಾಡಿದ್ದಾರೆ. ಶಾಸಕ ರಾಜು ಕಾಗೆ ನರ್ಸ್‌ಗಳ ಸೌಂದರ್ಯದ ಬಗ್ಗೆ ಮಾತನಾಡಿದ್ದು, ಲಿವರ್ ಟ್ರಾನ್ಸ್‌ಪ್ಲಾಂಟ್ (Liver Transplant) ಆದಾಗ ಒಂದು ತಿಂಗಳು ಆಸ್ಪತ್ರೆಯಲ್ಲಿದ್ದೆ ಎಂದರು. ಇದನ್ನೂ ಓದಿ: ಜೂನ್ ಒಳಗೆ ಸಚಿವ ಸ್ಥಾನ ಕೊಡ್ತೀನಯ್ಯ ಅಂತ ಸಿಎಂ ಹೇಳಿದ್ದಾರೆ: ಶಾಸಕ ಪುಟ್ಟರಂಗಶೆಟ್ಟಿ

    ಈ ವೇಳೆ ವೈದ್ಯರು ದಿನವೂ ಬಂದು ಹೇಗಿದ್ದೀರಿ ಅಂತಾ ಕೇಳೋರು. ಆಗ ಆಸ್ಪತ್ರೆಯಲ್ಲಿ ಇದ್ದ ಡಾಕ್ಟರ್‌ಗೆ ನಾನು ಹೇಳಿದ್ದೆ. ನನ್ನ ಆರೋಗ್ಯಕ್ಕೆ ಏನು ಆಗಿಲ್ಲ ರೀ. ನನ್ನ ಆಪರೇಷನ್ ಸಕ್ಸಸ್ ಮಾಡಿದ್ದೀರಿ, ಎಲ್ಲಾ ಆಗಿದೆ. ಆದರೆ ನಿಮ್ಮಲ್ಲಿ ನರ್ಸ್‌ಗಳು ಚೆಂದ ಚೆಂದ ಹುಡುಗಿಯರು ಇದ್ದಾರೆ. ಅವರು ನನಗೆ ಅಜ್ಜ ಅನ್ನುತ್ತಿದ್ದಾರೆ. ಅದು ನನಗೆ ಮಾನಸಿಕ ಆಗಿದೆ ಎಂದಿದ್ದೆ ಎಂದು ಹೇಳಿದರು. ಇದನ್ನೂ ಓದಿ: ಪರಶುರಾಮನ ಮೂರ್ತಿಯ ಕಂಚಿನ ಲೇಪನ ಹರಿದ ಕಾಂಗ್ರೆಸ್ – ಕಾರ್ಕಳ ನಗರ ಠಾಣೆಗೆ ಬಿಜೆಪಿ ದೂರು

    ರಾಜು ಕಾಗೆ ಭಾಷಣಕ್ಕೆ ಸಭೆಯಲ್ಲಿ ನೆರೆದಿದ್ದ ಜನ ಕೇಕೆ ಹಾಕಿದ್ದಾರೆ. ವೇದಿಕೆಯಲ್ಲಿದ್ದ ಲಕ್ಷ್ಮಣ ಸವದಿ (Laxman Savadi) ಉದ್ದೇಶಿಸಿ ಕಾಂಗ್ರೆಸ್ ಶಾಸಕ ರಾಜು ಕಾಗೆ ಈ ಮಾತುಗಳನ್ನ ಆಡಿದ್ದಾರೆ. ಇದನ್ನೂ ಓದಿ: ಅಧ್ಯಕ್ಷ ಸ್ಥಾನವೇನು ಕೋಳಿ ಮೊಟ್ಟೆನಾ.. ಒಡೆದು ಆಮ್ಲೆಟ್ ಮಾಡೋಕೆ: ಸಿಎಂ ಇಬ್ರಾಹಿಂ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]