Tag: ನಲ್ಲೂರು

  • ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ –  ತಂದೆ, ಮೂವರು ಮಕ್ಕಳು ಸಾವು

    ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ – ತಂದೆ, ಮೂವರು ಮಕ್ಕಳು ಸಾವು

    -ಪತ್ನಿ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

    ಉಡುಪಿ: ಬೈಕ್‌ಗೆ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ (Udupi) ಜಿಲ್ಲೆ ಕಾರ್ಕಳದ (Karkala) ನಲ್ಲೂರಿನಲ್ಲಿ (Nallur) ನಡೆದಿದೆ.

    ಸುರೇಶ್ ಆಚಾರ್ಯ (36), ಸುಮಿಕ್ಷಾ (7), ಸುಶ್ಮಿತಾ (5) ಹಾಗೂ ಸುಶಾಂತ್ (2) ಮೃತ ದುರ್ದೈವಿಗಳು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಶ್ಮಿತಾ ಚಿಕಿತ್ಸೆ ನೀಡುತ್ತಿದ್ದ ಸಂದರ್ಭ ಮೃತಪಟ್ಟಿದ್ದಾಳೆ. ಬೈಕ್‌ನಲ್ಲಿ ಪತಿ, ಪತ್ನಿ ಹಾಗೂ 3 ಮಕ್ಕಳು ಇದ್ದರು. ಪಾಜೆಗುಡ್ಡೆ ಬಳಿ ಬೈಕ್‌ನಲ್ಲಿ ಬರುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: MUDA Case: ಸಿಎಂಗೆ ಮತ್ತೊಂದು ಸಂಕಷ್ಟ – ಸಿದ್ದರಾಮಯ್ಯ ವಿರುದ್ಧ ED ಎಫ್‌ಐಆರ್‌ ಸಾಧ್ಯತೆ

    ಭೀಕರ ರಸ್ತೆ ಅಪಘಾತದಲ್ಲಿ ಪತ್ನಿ ಮೀನಾಕ್ಷಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಮೂಲದವರು ಎಂದು ತಿಳಿದುಬಂದಿದೆ. ವೇಣೂರಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಲಾರಿ ಚಾಲಕನ ಅಜಾಗರೂಕತೆ, ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್‌, ಕಟೀಲ್‌ ವಿರುದ್ಧ FIR – ಮಧ್ಯಂತರ ತಡೆ ನೀಡಿದ ಹೈಕೋರ್ಟ್‌

  • ಈಜು ಬಾರದೇ ಯುವಕ ಕೆರೆಯಲ್ಲಿ ಮುಳುಗಿ ಸಾವು

    ಈಜು ಬಾರದೇ ಯುವಕ ಕೆರೆಯಲ್ಲಿ ಮುಳುಗಿ ಸಾವು

    ಚಿಕ್ಕಮಗಳೂರು: ಸ್ನೇಹಿತರ ಜೊತೆ ಕೆರೆಗೆ ಇಳಿದಿದ್ದ ಯುವಕ ಈಜು ಬಾರದೇ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ನಲ್ಲೂರು (Nallur) ಗ್ರಾಮದಲ್ಲಿ ನಡೆದಿದೆ.

    ಮೃತನನ್ನು ನಗರದ ಕೋಟೆ ನಿವಾಸಿಯಾದ ಹರ್ಷ (20) ಎಂದು ಗುರುತಿಸಲಾಗಿದೆ. ಮೃತ ಯುವಕ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದ. ಹರ್ಷ ತನ್ನ ಸ್ನೇಹಿತರ ಜೊತೆ ಕೆರೆಗೆ ತೆರಳಿದ್ದ. ಈ ವೇಳೆ ಈಜು ಬಾರದೇ ಹರ್ಷ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

    ಈ ವೇಳೆ ಜೊತೆಯಲ್ಲಿದ್ದ ಸ್ನೇಹಿತರು ಹರ್ಷನನ್ನು ಉಳಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಿಲ್ಲ. ಸ್ನೇಹಿತರ ಕಣ್ಣೆದುರೇ ಹರ್ಷ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ನಂತರ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ವಯಸ್ಸಿಗೆ ಬಂದಿದ್ದ, ಎದೆಮಟ್ಟಕ್ಕೆ ಬೆಳೆದ ಮಗನ ಶವ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಮಂಗಳೂರಿನ ಲೇಡಿಹಿಲ್‌ನಲ್ಲಿ ಕಾರು ಹಿಟ್ & ರನ್ – ಓರ್ವ ಯುವತಿ ಸಾವು, ನಾಲ್ವರಿಗೆ ಗಾಯ

    ಘಟನೆ ಸಂಬಂಧ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಕೆರೆಯಲ್ಲಿ ಕಳೆದ 15 ದಿನಗಳ ಹಿಂದಷ್ಟೇ ಕೂಲಿ ಕೆಲಸದ ಜೊತೆ ಉಪ ವೃತ್ತಿಯಾಗಿ ಡ್ಯಾನ್ಸ್ ಮಾಸ್ಟರ್ ಕೆಲಸ ಮಾಡುತ್ತಿದ್ದ ಸಂತೋಷ್ ಎಂಬ ಯುವಕ ಕೂಡ ಕುಡಿದ ಮತ್ತಿನಲ್ಲಿ ಇದೇ ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದ. ಇದನ್ನೂ ಓದಿ: ಡಿಕೆಶಿ ಹಸ್ತಕ್ಷೇಪಕ್ಕೆ ಸತೀಶ್ ಕಿಡಿ – ಕಾಂಗ್ರೆಸ್‌ಗೂ ಬೆಳಗಾವಿ ರಾಜಕೀಯ ಕಂಟಕನಾ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]