ಮಂಗಳೂರು: ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ (Karnataka) ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ (National Highway) ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ (Nalin Kumar Kateel) ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಹೆಸರಿನಲ್ಲಿ ಒಂದು ಧರ್ಮಕ್ಕೆ ಮಿತಿಮೀರಿದ ಪ್ರಾಧಾನ್ಯತೆ ನೀಡಲಾಗುತ್ತಿದೆ: ಸ್ಯಾಮ್ ಪಿತ್ರೋಡಾ ಕಿಡಿ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ (Ujire-Dharmasthala-Periyashanthi) 28.490 ಕಿ.ಮೀ.ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು (Mangaluru-Mudigere-Tumakuru) ಸೆಕ್ಷನ್‌ನಲ್ಲಿ 11.20 ಕಿ.ಮೀ. ಅಭಿವೃದ್ದಿ 343.73 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಭೂಸಾರಿಗೆ ಮಂತ್ರಾಲಯ ಅನುಮೋದನೆ ನೀಡಿದ್ದು ಟೆಂಡರ್ ಆಹ್ವಾನಿಸಿದೆ. ಇದನ್ನೂ ಓದಿ: ಯತ್ನಾಳ್ ವಿರುದ್ಧ ಹೈಕಮಾಂಡ್‌ಗೆ ದೂರು – ಬಿಜೆಪಿ ಸಭೆಯ ನಿರ್ಣಯಗಳೇನು?
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿ – ಮೈಸೂರು (Mani-Mysuru) ರಸ್ತೆ ಚತುಷ್ಪಥ ಕಾಮಗಾರಿ (ಒಟ್ಟು 71.60 ಕಿ.ಮೀ)ಯ ಸಮಗ್ರ ಯೋಜನಾ ವರದಿ ತಯಾರಿಸಲು ಟೆಂಡರ್ ಕರೆಯಲಾಗಿದೆ. ಕಾಮಗಾರಿಗೆ 1,000 ಕೋಟಿ ರೂ. ಅಧಿಕ ವೆಚ್ಚ ಎಂದು ಅಂದಾಜಿಸಲಾಗಿದ್ದು, ಸಮಗ್ರ ಯೋಜನಾ ವರದಿ ಬಳಿಕ ನಿಖರ ವೆಚ್ಚ ತಿಳಿಯಬಹುದೆಂದು ಸಂಸದರು ತಿಳಿಸಿದ್ದಾರೆ.
ಮಂಗಳೂರು: ಲೋಕಸಭಾ ಚುನಾವಣಾ (Loksabha Election) ಹೊಸ್ತಿಲಲ್ಲೇ ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಭಾವುಕರಾಗಿದ್ದಾರೆ.
ಬಂಟ್ವಾಳದ (Bantwal) ಅಭಿನಂದನಾ ಸಮಾರಂಭವೊಂದರಲ್ಲಿ ಕಾರ್ಯಕರ್ತರ ಅಸಮಾಧಾನದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಕಟೀಲ್, ನನ್ನ ವಿರುದ್ಧದ ಹಲವು ಟೀಕೆ, ಟಿಪ್ಪಣಿಯನ್ನ ಕೇಳಿದ್ದೇನೆ. ಹತ್ತಾರು ಬಾರಿ ನನಗಾದಂತಹ ಅಪಮಾನಗಳನ್ನ ಸಹಿಸಿಕೊಂಡಿದ್ದೇನೆ. ನಾನು ಬಿಜೆಪಿಯ ವಿಚಾರಧಾರೆ ಒಪ್ಪಿದ ಕಾರಣ ಎಷ್ಟೇ ಅಪಮಾನವಾದರೂ ಸಹಿಸಿಕೊಂಡಿದ್ದೇನೆ ಎಂದರು.
ಹಲವು ನೋವನ್ನ ಅನುಭವಿಸಿದ್ದೇನೆ. ನಿಮ್ಮ ಆಶಯಕ್ಕೆ ನಾನು ಕೈ ಮುಗಿಯುತ್ತೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ. ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ. ನನಗೂ ದುಃಖವಿದೆ ಸಂಸದನಾದ ಬಳಿಕ ಹಳ್ಳಿ-ಹಳ್ಳಿಗಳಿಗೆ ಬರಲು ಆಗಲಿಲ್ಲ. ರಾಜ್ಯಾಧ್ಯಕ್ಷನ ನೆಲೆಯಲ್ಲಿ ಇಡೀ ರಾಜ್ಯದ ಜವಾಬ್ದಾರಿಯಿತ್ತು. ಪ್ರಾಮಾಣಿಕವಾಗಿ ಬಿಜೆಪಿಯನ್ನ (BJP) ಹಳ್ಳಿ ಹಳ್ಳಿಗಳಿಗೆ ತಲುಪಿಸುವ ಕೆಲಸ ಮಾಡಿದ್ದೇನೆ. ಆದರೆ ನೀವು ತಲೆ ತಗ್ಗಿಸುವ ರೀತಿಯ ಕೆಲಸ ಮಾಡಲಿಲ್ಲ ಎಂದು ಅವರು ಹೇಳಿದರು. ಇದನ್ನೂ ಓದಿ: ಚಲುವರಾಯಸ್ವಾಮಿ ಮೊದಲೇ ಚಡ್ಡಿ ಹಾಕಲ್ಲ: ಮಾಜಿ ಶಾಸಕ ಸುರೇಶ್‌ಗೌಡ ವಾಗ್ದಾಳಿ
ಈಗ ಮತ್ತೆ ನಾನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯತ್ತ ಗಮನ ನೀಡುತ್ತೇನೆ. ನಿಮ್ಮ ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಇನ್ನೂ ಉಳಿದಿರುವ ಆರು ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನಿಮ್ಮ ಗ್ರಾಮಕ್ಕೆ ಬರುತ್ತೇನೆ. ಮತ್ತೆ ನಿಮ್ಮ ಆಶೀರ್ವಾದವನ್ನ ಕಾಲು ಮುಟ್ಟಿ ನಮಸ್ಕಾರ ಮಾಡುವ ಮೂಲಕ ಕೇಳುತ್ತೇನೆ ಎಂದು ಅವರು ತಿಳಿಸಿದರು.
ಮಂಗಳೂರು: ಮತ್ತೆ ನಳಿನ್ ಕುಮಾರ್ ಕಟೀಲ್ (Nalin Kumar Kateel) ಗೆಲ್ಲಿಸಿ ಕೊಡಿ ಎಂದು ಹೇಳುವ ಮೂಲಕ ಮುಂದಿನ ಲೋಕಸಭಾ ಅಭ್ಯರ್ಥಿ (MP Ticket) ನಳಿನ್ ಕುಮಾರ್ ಎಂಬುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಅವರು ಇಂದು ರಿವೀಲ್ ಮಾಡಿದ್ದಾರೆ.
ಮಂಗಳೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮತ್ತೆ ನಳಿನ್ ಕಟೀಲ್ ಗೆಲ್ಲಿಸಿ ಕೊಡಿ. ಮುಂದಿನ ಲೋಕಸಭಾ ಚುನಾವಣೆಯನ್ನ ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ರನ್ನ ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಹೇಳುವ ಮೂಲಕ ನಳಿನ್ ಕಟೀಲ್ ಪರ ವಿಜಯೇಂದ್ರ ಬ್ಯಾಟಿಂಗ್ ಮಾಡಿದ್ದಾರೆ.
ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಆಯ್ಕೆ ಸದ್ಯ ಭಾರೀ ಗೊಂದಲದ ಗೂಡಾಗಿದೆ. ಅರುಣ್ ಕುಮಾರ್ ಪುತ್ತಿಲ (Arun Kumar Puttila) ಬಂಡಾಯದಿಂದ ಜಿಲ್ಲೆ ಸುದ್ದಿಯಲ್ಲಿದೆ. ಹಲವರಿಂದ ಮುಂದಿನ ಸಂಸದ ಸ್ಥಾನದ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಬೇಡಿಕೆ ಇಡುವ ಸಾಧ್ಯತೆಗಳಿವೆ. ಇನ್ನೊಂದೆಡೆ ಬ್ರಿಜೇಶ್ ಚೌಟ ಅವರು ಈ ಬಾರಿಯ ಎಂಪಿ ಅಭ್ಯರ್ಥಿ ಎಂದೂ ಹೇಳಲಾಗುತ್ತಿದೆ. ಇದನ್ನೂ ಓದಿ: ಇದು ಅವಿವೇಕತನ, ಹೊಣೆಗೇಡಿತನದ ಸರ್ಕಾರ – ವಿಜಯೇಂದ್ರ ವಾಗ್ದಾಳಿ
– ಕಾಂಗ್ರೆಸ್‍ನಲ್ಲಿ ಹಸ್ತದ ಒಳಗೆ ಹಸ್ತದ ಆಪರೇಷನ್ ಆಗ್ತಿದೆ
ಮಂಗಳೂರು: ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಮೋದಿ ಸರ್ಕಾರ (Narendra Modi Govt) ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ. ರಾಜ್ಯದಿಂದ ಒಂದು ರೂಪಾಯಿ ಬಿಡಿಗಾಸು ಬಿಡುಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ (MP Nalin Kumar Kateel) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ (Congress) ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ (Siddaramaiah), ಡಿಕೆಶಿ ಮತ್ತು ಜಾರಕಿಹೊಳಿ ತಂಡ ಇಬ್ಭಾಗವಾಗುತ್ತಿದೆ. ಅದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್ ಡಿವೈಡ್ ಆಗ್ತಿದೆ, ಹಸ್ತದ ಒಳಗೆ ಹಸ್ತದ ಆಪರೇಷನ್ ಆಗ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಪಾಪ ಇನ್ನೂ ಮಗು: ಚಲುವರಾಯಸ್ವಾಮಿ
ಕೆಲವೇ ದಿನಗಳಲ್ಲಿ 30-40 ಶಾಸಕರು ಹೊರಗೆ ಬರುತ್ತಾರೆ. ಈ ಭಯದಿಂದ ಕಾಂಗ್ರೆಸ್ ನವರು ಬಿಜೆಪಿಯಿಂದ ಬರುತ್ತಾರೆ ಎಂದು ದಾರಿ ತಪ್ಪಿಸುತ್ತಿದ್ದಾರೆ. ಯಾವುದೇ ಕಾರಣಕ್ಕೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ. ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್‍ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ. ಮುಖ್ಯಮಂತ್ರಿ ಹುದ್ದೆಗೆ ಹತ್ತಾರು ಟವಲ್ ಗಳು ಬಿದ್ದಿವೆ. ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹೊರಟಿದೆ. ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಹೊರಟ ಕಾರಣ ಸರ್ಕಾರ ಬೀಳಬಹುದು ಎಂದರು.
ಶಾಂತಿ ಸುವ್ಯವಸ್ಥೆ ಹದಗೆಟ್ಡಿದೆ, ನಾಲ್ಕು ತಿಂಗಳಲ್ಲಿ ಮುನ್ನೂರು ರೈತರ ಆತ್ಮಹತ್ಯೆ ಆಗಿದೆ. ಉಡುಪಿಯಲ್ಲಿ ಹಾಡಹಗಲೇ ನಾಲ್ವರ ಹತ್ಯೆ ಆಗಿದೆ. ಶಾಂತಿ ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ, ಬರ ನಿಯಂತ್ರಣ ಆಗಿಲ್ಲ. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿ ತಲವಾರು ತೋರಿಸಿದ್ರೂ ಬಂಧನ ಆಗ್ತಾ ಇಲ್ಲ. ರಾಷ್ಟ್ರ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಎದ್ದು ನಿಂತಿದೆ ಎಂದು ಹೇಳಿದರು.
ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ. ಮೂರ್ನಾಲ್ಕು ತಿಂಗಳು ಕಾದು ನೋಡಿ, ಎಲ್ಲವೂ ಗೊತ್ತಾಗಲಿದೆ. ಬುಧವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷರು ಮಂಗಳೂರಿಗೆ ಬರುತ್ತಾರೆ. ಅವರನ್ನು ಮಂಗಳೂರು ಏರ್‍ಪೋರ್ಟ್‍ನಿಂದ ಸ್ವಾಗತ ಮಾಡುತ್ತೇವೆ. ಅಲ್ಲಿಂದ ಮೆರವಣಿಗೆ ಮಾಡಿ ಮಂಗಳೂರಿನ ಸಿ.ವಿ ನಾಯಕ್ ಹಾಲ್ ನಲ್ಲಿ ಕಾರ್ಯಕರ್ತರ ಸಭೆ ಇರಲಿದೆ. ಬಳಿಕ ಒಂದಷ್ಟು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ ಎಂದು ಕಟೀಲ್ ತಿಳಿಸಿದರು.
ಮಂಗಳೂರು: ಇಸ್ರೇಲ್‌ನಲ್ಲಿ (Israel) ಕರಾವಳಿಯ (Karavali) ಐದು ಸಾವಿರಕ್ಕೂ ಅಧಿಕ ಮಂದಿ ಇದ್ದಾರೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ (Minister of External Affairs) ಪತ್ರ (Letter) ಬರೆದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ (Mangaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ. ಈಗಾಗಲೇ ಸಚಿವ ಮುರಳೀಧರನ್ ಅವರೊಂದಿಗೂ ಮಾತನಾಡಿದ್ದೇನೆ. ಯುದ್ಧದ ಪರಿಸ್ಥಿತಿ ಇರುವಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತದೆ. ಈಗಲೂ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ ಎಂದು ಹೇಳಿದರು. ಇದನ್ನೂ ಓದಿ: ಎಮರ್ಜೆನ್ಸಿ ಅಲರ್ಟ್- ಲಕ್ಷಾಂತರ ಫೋನ್‌ಗಳಿಗೆ ಸರ್ಕಾರದಿಂದ ಬಂತು ಮೆಸೇಜ್
ರಷ್ಯಾ-ಉಕ್ರೇನ್ ಯುದ್ಧ ಆದಾಗಲೂ ಇದೇ ಪರಿಸ್ಥಿತಿ ಇತ್ತು. ಆಗಲೂ ಎಲ್ಲರ ಮನೆಗೆ ತೆರಳಿ ಸಮಾಧಾನ ಹೇಳಿದ್ದೇವೆ. ಮೋದಿ ಸರ್ಕಾರ ಆಗಲೂ ಅಲ್ಲಿದ್ದವರ ರಕ್ಷಣೆ ಮಾಡಿತ್ತು. ಈಗಲೂ ನಾನು ರಾಯಭಾರಿ ಕಚೇರಿ ಜೊತೆಗೆ ಸಂಪರ್ಕದಲ್ಲಿದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಏನೇ ಆತಂಕ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಿ ಎಂದರು. ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ದಂಪತಿ ಸಾವು- ಅನಾಥವಾದ ವೃದ್ಧಾಶ್ರಮ
ಕೋಲಾರ: ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬಿಜೆಪಿ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಆಚರಣೆ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ರೈತ ನಾಯಕ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸದ ಪ್ರಾರಂಭದ ಹಿನ್ನೆಲೆಯಲ್ಲಿ ಕೋಲಾರದ ಮುಳಬಾಗಿಲಿನ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಮಹಾಪೂಜೆಯ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ಯಡಿಯೂರಪ್ಪ ಅವರ ಸಂಕಲ್ಪದಂತೆ ಮೋದಿಜಿ ಅವರಿಗೆ ಬಲ ತುಂಬಲು ಕುರುಡುಮಲೆ ಗಣಪತಿಗೆ ಆರಾಧನೆ ಮಾಡಿ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಟ ಆರಂಭ ಮಾಡುತ್ತಿದ್ದೇವೆ. ಒಂಬತ್ತೂವರೆ ವರ್ಷಗಳಲ್ಲಿ ಮೋದಿಜಿ ಅವರು ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಿದ್ದಾರೆ. ಸಾಮಾನ್ಯ ಜನರಿಗೆ ಬಲ ತುಂಬುವ ಹಲವಾರು ಯೋಜನೆಗಳನ್ನು ನರೇಂದ್ರ ಮೋದಿಯವರ ಸರ್ಕಾರ ನೀಡಿದೆ ಎಂದು ವಿಶ್ಲೇಷಿಸಿದರು. ಸ್ವನಿಧಿ ಯೋಜನೆ, ವಿಶ್ವಕರ್ಮ ಯೋಜನೆಗಳನ್ನು ಇವತ್ತು ಅನುಷ್ಠಾನ ಮಾಡಲಾಗುತ್ತಿದೆ ಎಂದು ವಿವರಿಸಿದರು.
ರಾಜ್ಯದ ಸಿದ್ದರಾಮಣ್ಣ ಸರ್ಕಾರವು ಯಡಿಯೂರಪ್ಪ-ಬಸವರಾಜ ಬೊಮ್ಮಾಯಿಯವರ ರೈತ ಪರ ಯೋಜನೆಗಳನ್ನು ವಾಪಸ್ ಪಡೆದಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರವನ್ನು ಕೇಂದ್ರ ಹಾಗೂ ಯಡಿಯೂರಪ್ಪರ ಸರ್ಕಾರ 4 ಸಾವಿರ ನೀಡುತ್ತಿತ್ತು. ಆ ಪೈಕಿ 4 ಸಾವಿರ ನೀಡುವುದನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ನಿಲ್ಲಿಸಿದ್ದು, ರೈತವಿರೋಧಿ ನೀತಿ ಪ್ರದರ್ಶಿಸಿದೆ ಎಂದು ಆಕ್ಷೇಪಿಸಿದರು.
ಬೊಮ್ಮಾಯಿಯವರ ಸರ್ಕಾರದ ರೈತ ವಿದ್ಯಾನಿಧಿಯನ್ನೂ ವಾಪಸ್ ಪಡೆಯುವ ಕೆಲಸ ನಡೆದಿದೆ. ಬರ-ನೀರಿನ ಸಮಸ್ಯೆಯಿಂದ ರೈತರು ಒದ್ದಾಡುವಂತಾಗಿದೆ. ಆದರೆ ನಿರಂತರ ವಿದ್ಯುತ್ ಕಡಿತದ ಕೊಡುಗೆಯನ್ನು ಈ ಸರ್ಕಾರ ನೀಡಿದೆ. ರಾತ್ರಿ 12 ಗಂಟೆಯವರೆಗೆ ಕಾದರೂ ಕರೆಂಟಿಲ್ಲ ಎಂಬ ದುಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಲಾಗುತ್ತಿದೆ. ರೈತರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವ ಸಿದ್ದರಾಮಣ್ಣ ಕರ್ನಾಟಕದ ಮುಖ್ಯಮಂತ್ರಿಯೇ ಅಥವಾ ತಮಿಳುನಾಡಿನ ಮುಖ್ಯಮಂತ್ರಿಯೇ ಎಂದು ಉತ್ತರಿಸಲಿ ಎಂದು ಆಗ್ರಹಿಸಿದರು.
ರೈತರ ಹಿತ ಕಾಯದೆ ಕದ್ದುಮುಚ್ಚಿ ನೀರು ಹರಿಸುವ ಕೆಲಸ ಮಾಡಿದ್ದೀರಿ. ಹೀಗಾಗಿ ರೈತ ವಿರೋಧಿ ಸರ್ಕಾರ ಇದಾಗಿದೆ. ಇಬ್ಬರು ಸಚಿವರ ಮೇಲೆ ಕೇಸ್ ಆಗಿದೆ. ಚಲುವರಾಯಸ್ವಾಮಿ, ಸುಧಾಕರ್ ಅವರ ಮೇಲೆ ಕೇಸ್ ಆದರೂ ಅವರ ರಾಜೀನಾಮೆ ಪಡೆಯುವ ನೈತಿಕತೆ ಸಿದ್ದರಾಮಣ್ಣರಿಗೆ ಇಲ್ಲವಾಗಿದೆ. ಕೇಸ್ ಕೊಟ್ಟವರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಗುತ್ತಿಗೆದಾರರ ಬಾಕಿ ಬಿಲ್ ವಿಚಾರದಲ್ಲೂ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಕೆಲವೇ ತಿಂಗಳಲ್ಲಿ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚಾಗಿದೆ. ರಿಕ್ಷಾ, ಕಾರು, ಟ್ಯಾಕ್ಸಿ ಚಾಲಕರಿಗೆ ಸಮಸ್ಯೆಯಾಗಿದೆ. ಉದ್ಯಮಿಗಳು ರಾಜ್ಯ ಬಿಟ್ಟು ಹೋಗುತ್ತಿದ್ದಾರೆ. ಈ ಸರ್ಕಾರ ಭ್ರಷ್ಟಚಾರ, ರೈತವಿರೋಧಿ ಸರ್ಕಾರ ಎಂದು ಟೀಕಿಸಿದರು. ಇದನ್ನೂ ಓದಿ: ಹಣ ತೆಗೆದುಕೊಂಡು ಟಿಕೆಟ್ ಕೊಟ್ಟಿದ್ದಾರೋ ಇಲ್ವೋ? ಇದಕ್ಕೆ ಬಿಜೆಪಿಯವರೇ ಉತ್ತರ ಕೊಡಬೇಕು: ಜಗದೀಶ್ ಶೆಟ್ಟರ್
ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟ 11,144 ಕೋಟಿ ರೂ. ಹಣವನ್ನು ಬೇರೆಡೆಗೆ ವರ್ಗಾಯಿಸಿದ ಸರ್ಕಾರ ಇದು. ಎಸ್‌ಸಿ, ಎಸ್‌ಟಿಗಳ ಹೊಟ್ಟೆಗೆ ಹೊಡೆದ ಸರ್ಕಾರ ಸಿದ್ದರಾಮಣ್ಣ ಸರ್ಕಾರ. ಅಹಿಂದ ಹೆಸರಿನಲ್ಲಿ ಅಧಿಕಾರ ಪಡೆದ ಸಿದ್ದರಾಮಣ್ಣ ಎಸ್‌ಸಿ, ಎಸ್‌ಟಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಇವೆಲ್ಲವನ್ನೂ ಜನರ ಮುಂದಿಡಲಾಗುವುದು. ಮೋದಿಜಿ ಅವರ ಜನಪರ ಯೋಜನೆಗಳನ್ನು ತಿಳಿಸಿ ಕಾರ್ಯಕರ್ತರ ವಿಶ್ವಾಸ ಪಡೆಯಲು ಸಿದ್ಧರಾಗಿದ್ದೇವೆ. ಯಡಿಯೂರಪ್ಪ ಅವರ ನೇತೃತ್ವ, ಪ್ರೇರಣೆಯೊಂದಿಗೆ ಈ ಪ್ರವಾಸ ನಡೆಯಲಿದೆ ಎಂದು ತಿಳಿಸಿದರು.
ಕಣ್ಣಿನ ಶಸ್ತ್ರಚಿಕಿತ್ಸೆ ಕಾರಣಕ್ಕಾಗಿ ಬೊಮ್ಮಾಯಿಯವರು ಇವತ್ತು ಬಂದಿಲ್ಲ. ಗಣೇಶ ಚೌತಿ ಬಳಿಕ ಪ್ರವಾಸ ನಡೆಯಲಿದೆ. ಇಂದು ವಿಶ್ವಕರ್ಮ ಜಯಂತಿ ಹಾಗೂ ವಿಶ್ವವನ್ನು ಜಿ 20 ಮೂಲಕ ವಿಶ್ವಮಟ್ಟಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಇವತ್ತು ಸಿದ್ದರಾಮಣ್ಣ ಸರ್ಕಾರದ ಭ್ರಷ್ಟಾಚಾರ, ರೈತವಿರೋಧಿ ನೀತಿ ವಿರುದ್ಧ ಹೋರಾಟದ ಪ್ರಾರಂಭದ ದಿನ ಎಂದು ಅವರು ನುಡಿದರು.
ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹಿರಿಯ ಮುಖಂಡರಾದ ಕೆಎಸ್ ಈಶ್ವರಪ್ಪ, ಗೋವಿಂದ ಕಾರಜೋಳ, ಸಂಸದ ಮುನಿಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ, ಮಾಜಿ ಸಚಿವರಾದ ಡಾ. ಅಶ್ವಥ್ ನಾರಾಯಣ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಜಿಲ್ಲಾಧ್ಯಕ್ಷ ವೇಣುಗೋಪಾಲ್ ಮತ್ತಿತರ ಪ್ರಮುಖರು ಭಾಗವಹಿಸಿದ್ದರು. ಇದನ್ನೂ ಓದಿ: ಹರಿಪ್ರಸಾದ್ ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು: ಟಿ.ಬಿ ಜಯಚಂದ್ರ
ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ತಲುಪಿದೆ. ಜನರಿಟ್ಟ ನಂಬಿಕೆ, ವಿಶ್ವಾಸಕ್ಕೆ ಈ ಸರ್ಕಾರ ದ್ರೋಹ ಬಗೆದಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಟೀಕಿಸಿದರು.
ನಗರದಲ್ಲಿ ಮಂಗಳವಾರ ರಾಜ್ಯ ಕಾಂಗ್ರೆಸ್ ಸರ್ಕಾರದ 100 ದಿನಗಳ ಆಡಳಿತ ಕುರಿತ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಗ್ಯಾರಂಟಿಗಳ ಘೋಷಣೆ ಮಾಡಿತ್ತು. ಭ್ರಷ್ಟಾಚಾರದ ವಿರುದ್ಧ ಪುಂಖಾನುಪುಂಖ ಭಾಷಣ ಮಾಡಿದ್ದರು. ಅಧಿಕಾರಕ್ಕೆ ಬಂದ ಬಳಿಕ 100 ದಿನಗಳಲ್ಲಿ ನೂರಾರು ತಪ್ಪುಗಳನ್ನು ಈ ಸರ್ಕಾರ ಮಾಡಿದೆ. ಗ್ಯಾರಂಟಿ ಯೋಜನೆಗಳಿಗೆ ಮಾನದಂಡಗಳನ್ನು ವಿಧಿಸಿ ಇವತ್ತು ಈ ಸರ್ಕಾರ ಮಾತು ತಪ್ಪಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: CWRC ಶಿಫಾರಸ್ಸು ಎತ್ತಿ ಹಿಡಿದ CWMA – ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಸಾಧ್ಯತೆ
ಇಬ್ಬರು ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಬಂದಾಗ ಅವರ ರಾಜೀನಾಮೆ ಪಡೆಯುವುದರಲ್ಲೂ ವಿಫಲವಾಗಿದೆ. ನಮ್ಮ ಆಡಳಿತ ಇದ್ದಾಗ, ಯಡಿಯೂರಪ್ಪ, ಬೊಮ್ಮಾಯಿಯವರು ಮುಖ್ಯಮಂತ್ರಿ ಆಗಿದ್ದಾಗ ಗರಿಷ್ಠ ಬಂಡವಾಳ ಹೂಡಿಕೆ ಬರುತ್ತಿತ್ತು. ಇವತ್ತು ವಿದ್ಯುತ್ ಅಭಾವ, ಅತಿ ಹೆಚ್ಚು ದರದಿಂದ ಹೂಡಿಕೆದಾರರು ವಾಪಸ್ ಹೋಗುತ್ತಿದ್ದಾರೆ. ಒಂದೆಡೆ ವಿದ್ಯುತ್ ಉಚಿತವೆಂದು ಘೋಷಿಸಿ ಅಘೋಷಿತ ವಿದ್ಯುತ್ ಕಡಿತ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮಳೆ ಇಲ್ಲ: ರೈತರು ಗಂಟೆಗಟ್ಟಲೆ ಕಾದು ಪಂಪುಗಳನ್ನು ಚಾಲನೆ ಮಾಡುವ ಸ್ಥಿತಿ ಬಂದಿದೆ. ವಿದ್ಯುತ್ ಅಭಾವ ಕಾಡುತ್ತಿದೆ. ಬಜೆಟ್‍ನಲ್ಲಿ ರೈತಪರ ಯೋಜನೆಗಳನ್ನು ಈ ಸರ್ಕಾರ ಘೋಷಿಸಿಲ್ಲ. ರೈತ ಸಮ್ಮಾನ್ ಯೋಜನೆಯಡಿ ಕೇಂದ್ರದ ಮೋದಿಜಿ ಸರ್ಕಾರ 6 ಸಾವಿರ ಮತ್ತು ಯಡಿಯೂರಪ್ಪ- ಬೊಮ್ಮಾಯಿಯವರ ಸರ್ಕಾರಗಳು 4 ಸಾವಿರ ನೀಡುತ್ತಿದ್ದವು. 4 ಸಾವಿರ ನೀಡುವುದನ್ನು ಈ ಸರ್ಕಾರ ರದ್ದು ಮಾಡಿದೆ ಎಂದು ವಿವರಿಸಿದರು. ಇದನ್ನೂ ಓದಿ: ಲೋಕಸಭಾ ಚುನಾವಣೆ ಯಾವಾಗಾದ್ರೂ ಮಾಡಲಿ, ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ: ಹೆಚ್‌ಕೆ ಪಾಟೀಲ್
ಬೊಮ್ಮಾಯಿಯವರ ದೂರದೃಷ್ಟಿಯ ಯೋಜನೆ ರೈತ ವಿದ್ಯಾನಿಧಿಗೆ ಕತ್ತರಿ ಹಾಕಿದ ರೈತ ವಿರೋಧಿ ಸರ್ಕಾರ ರಾಜ್ಯದ್ದು. ಪಂಚಾಯಿತಿ ಕಚೇರಿಯಿಂದ ಸಿಎಂ ಕಚೇರಿವರೆಗೆ ಭ್ರಷ್ಟಾಚಾರ ಇವತ್ತು ಸದ್ದು ಮಾಡುತ್ತಿದೆ. ಸಿಎಂ ಕಚೇರಿ ಭ್ರಷ್ಟಾಚಾರದ ಬಗ್ಗೆ ಅವರ ಶಾಸಕರೇ ಹೇಳುತ್ತಿದ್ದಾರೆ. ಹಿಂದಿನಿಂದ 2 ಶಕ್ತಿಗಳು ಮುಖ್ಯಮಂತ್ರಿಗಳನ್ನು ನಿಯಂತ್ರಿಸುವ ಬಗ್ಗೆ ಅವರ ಪಕ್ಷದವರೇ ಹೇಳುತ್ತಾರೆ. ಈ ಸರ್ಕಾರವು ದ್ವೇಷದ ರಾಜಕಾರಣ ಮಾಡುತ್ತಿದೆ. ನಮ್ಮ ಸರ್ಕಾರದ ಕಾನೂನುಗಳನ್ನು ರದ್ದು ಮಾಡುವ ಪ್ರಯತ್ನಕ್ಕೆ ಕೈಹಾಕಿದ್ದಾರೆ. ಬೊಮ್ಮಾಯಿಯವರ ಸರ್ಕಾರದ ಯೋಜನೆಗಳನ್ನು ನಿಲ್ಲಿಸುವ ಕೆಲಸ ಮಾಡಿದ್ದಾರೆ. ನಮ್ಮ ಕಾರ್ಯಕರ್ತರ ವಿರುದ್ಧ ಸುಳ್ಳು ಆರೋಪ ಹೊರಿಸಿ ಕೇಸು ದಾಖಲಿಸಿ ಜೈಲಿಗೆ ಹಾಕುವ ಕೆಲಸ ನಡೆದಿದೆ ಎಂದು ಗರಂ ಆದರು.
ಸೋಷಿಯಲ್ ಮೀಡಿಯಾದಲ್ಲಿ ಬರೆದವರನ್ನು ಜೈಲಿಗೆ ಅಟ್ಟುತ್ತಿದ್ದಾರೆ. ಮಾಧ್ಯಮದವರ ಮೇಲೂ ದಬ್ಬಾಳಿಕೆ ನಡೆದಿದೆ. ಇದು ಹಿಂದಿನ ತುರ್ತು ಪರಿಸ್ಥಿತಿಯನ್ನು ನೆನಪಿಸುವಂತಿದೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲೂ ಈ ಸರ್ಕಾರ ಸೋತಿದೆ. ಹತ್ತಾರು ಕೊಲೆ ನಡೆದಿದೆ. ಜೈನ ಮುನಿ ಹತ್ಯೆಯಾಗಿದೆ. ಹಿಂದೂ ಜಾಗರಣ ವೇದಿಕೆ ಪ್ರಮುಖರ ಕೊಲೆಯಾಗಿದೆ. ಉಡುಪಿ ಘಟನೆಯನ್ನು ಕ್ಷುಲ್ಲಕವಾಗಿ ಗೃಹಸಚಿವರು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ನವೆಂಬರ್ 5 ಕೆ-ಸೆಟ್ ಪರೀಕ್ಷೆ: ಕೆಇಎ
ಸರ್ವಾಧಿಕಾರ ಧೋರಣೆಯ ಸರ್ಕಾರ ಇಲ್ಲಿದೆ. ಸಾಮಾಜಿಕ ಜಾಲತಾಣ, ಮಾಧ್ಯಮಕ್ಕೆ ಅಂಕುಶ, ವಾಕ್ ಸ್ವಾತಂತ್ರ್ಯಕ್ಕೆ ದಮನ ನೀತಿ ಪ್ರಾರಂಭವಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಭರವಸೆ ಈಡೇರಿಲ್ಲ. ಸಮರ್ಪಕವಾಗಿ ವೇತನ ನೀಡಲಾಗದ ಸ್ಥಿತಿ ಸರ್ಕಾರದ್ದು. ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಹಿಂದೆ ನೀಡಿದ ಅನುದಾನವನ್ನೂ ಬಿಡುಗಡೆ ಮಾಡುತ್ತಿಲ್ಲ. 3 ತಿಂಗಳುಗಳಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಬಿಡುಗಡೆ ಆಗಿಲ್ಲ. ಕೈ ಕೊಟ್ಟ ಯೋಜನೆಗಳು, ಹಳಿ ತಪ್ಪಿದ ಆಡಳಿತದ ಕುರಿತು ಜನರ ಮುಂದೆ ಮಾಹಿತಿ ಕೊಡುತ್ತಿದ್ದೇವೆ ಎಂದು ತಿಳಿಸಿದರು.
ಗೃಹಬಳಕೆ ಎಲ್‍ಪಿಜಿ ಸಿಲಿಂಡರ್ ದರ ಇಳಿಕೆಗೆ ಅಭಿನಂದನೆ: ಗೃಹಬಳಕೆಯ 14 ಕೆಜಿ ಎಲ್‍ಪಿಜಿ ಸಿಲಿಂಡರ್ ದರವನ್ನು 200 ರೂಪಾಯಿ ಇಳಿಸುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಈ ನಿರ್ಧಾರದಿಂದ ಕೋಟ್ಯಂತರ ಜನರಿಗೆ ಪ್ರಯೋಜನವಾಗಲಿದೆ. ಈ ಕುರಿತು ನಿರ್ಧರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಧನ್ಯವಾದ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಈಗಾಗಲೇ 200 ರೂ. ನೆರವು ಲಭಿಸುತ್ತಿದ್ದು, ಈಗ 400 ರೂ. ಬೆಲೆ ಇಳಿಕೆ ಆಗಲಿದೆ. ಅಲ್ಲದೆ ಹೊಸದಾಗಿ 75 ಲಕ್ಷ ಉಜ್ವಲ ಗ್ಯಾಸ್ ಸಿಲಿಂಡರ್ ಸಂಪರ್ಕ ನೀಡುವ ಕ್ರಮ ಸ್ವಾಗತಾರ್ಹ. ಹೊಗೆರಹಿತ ಅಡುಗೆ ಸಂಬಂಧ ಕೇಂದ್ರದ ಕ್ರಮ ಅತ್ಯಂತ ಸ್ವಾಗತಾರ್ಹ ಎಂದು ಬಣ್ಣಿಸಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ತಿರುಪತಿ (Tirupati) ತಿಮ್ಮಪ್ಪನ ಲಡ್ಡುಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತ ವಿಚಾರದಲ್ಲಿ ರಾಜಕೀಯ ಮುಂದುವರಿದಿದೆ.
ದೇವಸ್ಥಾನ ಮತ್ತು ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿ ಲಡ್ಡುಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿದೆ. ಹಿಂದೂಗಳೆಡೆಗಿನ ಸಿದ್ದರಾಮಯ್ಯನವರ (Siddaramaiah) ತಾತ್ಸಾರ ನೀತಿ ಋಜುವಾತಾಗಿದೆ ಎಂದು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಟ್ವೀಟ್ ಮೂಲಕ ಆರೋಪ ಮಾಡಿದ್ರು. ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ತಿರುಪತಿಗೆ (Tirupati) ನಂದಿನಿ ತುಪ್ಪ ಪೂರೈಕೆ ನಿಂತಿರೋದು ಇಂದು-ನಿನ್ನೆಯ ವಿಚಾರವಲ್ಲ ಒಂದೂವರೆ ವರ್ಷದ ಹಿಂದೆಯೇ ಅಂದ್ರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆ ಬಂದ್ ಆಗಿದೆ. ಮಾನ್ಯ ಕಟೀಲ್ ಅವರೇ, ಈಗ ಹೇಳಿ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾಭಕ್ತಿಯ ವಿರೋಧಿಯೋ? ಅಥವಾ ಬೊಮ್ಮಾಯಿ ಮಾತ್ರ ಹಿಂದೂ ವಿರೋಧಿಯೋ ಎಂದು ಪ್ರಶ್ನಿಸಿದ್ದಾರೆ. ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಕೂಡ ಮುಖ್ಯ. ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ಟಿಟಿಡಿ ಒಪ್ಪುವುದಾದ್ರೇ ತುಪ್ಪ ಪೂರೈಸಲು ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸಿಎಂ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಕಾಂಗ್ರೆಸ್ (Congress) ಟ್ವೀಟ್ ಮಾಡಿ, ನಮ್ಮ ಹೆಮ್ಮೆಯ ನಂದಿನಿಗೆ ಮಾರ್ಕೆಟ್‍ನಲ್ಲಿ ತನ್ನದೇ ಆದ ಸ್ಥಾನವಿದೆ. ಉತ್ತಮ ಹೆಸರಿದೆ. ಗುಣಮಟ್ಟ ಮತ್ತು ಬೆಲೆಯಲ್ಲಿ ರಾಜಿಯಾಗಲ್ಲ ಟೆಂಡರ್ ಪಡೆಯಬೇಕು ಎಂಬ ಒಂದೇ ಉದ್ದೇಶಕ್ಕೆ ಬೆಲೆಯಲ್ಲಿ ರಾಜೀ ಮಾಡ್ಕೊಂಡು ನಷ್ಟ ಮಾಡ್ಕೊಳ್ಳುವ ಅಗತ್ಯವಿಲ್ಲ. ನಂದಿನಿಗೆ ಹೆಚ್ಚು ಬೇಡಿಕೆ ಇದೆ. ಟೆಂಡರ್ ಕೈತಪ್ಪಿದ್ರೂ ಕೆಎಂಎಫ್‍ಗೆ ನಷ್ಟವೇನಿಲ್ಲ ಎಂದು ಹೇಳಿದೆ.
ಅತ್ತ ಟಿಟಿಡಿ ಇಓ ಧರ್ಮಾರೆಡ್ಡಿ ಪ್ರತಿಕ್ರಿಯಿಸಿ, ನಂದಿನಿ ತುಪ್ಪ ಪೂರೈಕೆಗೆ ನಾವೇನು ಅಡ್ಡಿ ಮಾಡಿಲ್ಲ. ಕೆಎಂಎಫ್ (KMF) ಅಧ್ಯಕ್ಷರ ಮಾತು ಸತ್ಯಕ್ಕೆ ದೂರವಾದುದು. ಮಾರ್ಚ್‍ನಲ್ಲಿ ಕರೆದ ಟೆಂಡರ್‍ನಲ್ಲಿ ಕೆಎಂಎಫ್ ಭಾಗವಹಿಸಿರಲಿಲ್ಲ. ನಿಯಮ ಮೀರಿ ನಾವು ಕೆಎಂಎಫ್‍ಗೆ ಟೆಂಡರ್ ನೀಡಲು ಆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಕೆಎಂಎಫ್ ರಾಯಭಾರಿಯಾಗಿ ನಟ ಶಿವರಾಜ್‍ಕುಮಾರ್ ನೇಮಕಗೊಂಡಿದ್ದಾರೆ. ಈ ಮೂಲಕ ಅವರ ಅಪ್ಪ ಮತ್ತು ಅಪ್ಪು ಪರಂಪರೆಯನ್ನು ಮುಂದುವರಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಡಿಸಿ, ಸಿಇಓ ಹಾಗೂ ಕಮಿಷನರ್‍ಗಳಿಗೆ ರೇಟ್ ಫಿಕ್ಸ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿ ಪೊಲೀಸ್ ಕಮಿಷನರ್ (Belagavi Police Commissioner) ನೇಮಕವಾಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಗಳಿಗೆ, ಸಿಇಓಗಳಿಗೆ, ಕಮಿಷನರ್ ಗಳಿಗೆ ರೇಟ್ ಫಿಕ್ಸ್ ಆಗಿದೆ. ರೇಟ್ ಕುದುರುವವರೆಗೂ ಯಾರು ನೇಮಕ ಆಗಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಸರ್ಕಾರಕ್ಕೆ ನಾಚಿಕೆ ಆಗಬೇಕು. ಇಂತಹ ಪ್ರದೇಶದಲ್ಲಿ ಕಮಿಷನರ್ ನೇಮಕ ಆಗದೇ ಇರೋದು ನಾಚಿಕ ವಿಷಯವಾಗಿದೆ. ಹೀಗಾದ್ರೆ ಕಾನೂನು ಸುವ್ಯವಸ್ಥೆ ಏನಾಗಬಹುದು. ಕಾನೂನು ಸುವ್ಯವಸ್ಥೆ ಕಾಪಾಡೊದು ಹೇಗೆ?. ರಾಜ್ಯದ ಅಭಿವೃದ್ಧಿ, ಶಾಂತಿ ಚಿಂತನೆ ಮಾಡುವುದುದು ಬಿಟ್ಟು ಇಂತಹ ವ್ಯವಹಾರದಲ್ಲಿ ಕುಳಿತಿದೆ. ಜನರ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ, ಲೋಕಸಭೆ ಚುನಾವಣೆ ಈ ರೀತಿ ಮಾಡ್ತಿದ್ದಾರೆ. 5 ವರ್ಷ ಸರ್ಕಾರ ನಡೆಸುತ್ತೇವೆ ಅಂತಾ ವಿಶ್ವಾಸವಿಲ್ಲ, ಈಗಲೇ ತುಂಬಿಕೊಳ್ಳುವ ವ್ಯವಸ್ಥೆ ಮಾಡುತ್ತಿದ್ದಾರೆ ಎಂದರು.
ಇಲಾಖೆಗಳಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ನಮಗೆ 40% ಸರ್ಕಾರ ಅಂತಾ ಹೇಳಿದರು. ಆದರೆ ಯಾವುದೇ ಪುರಾವೆ ಕೊಡಲಿಲ್ಲ. ಈಗ ಕಾಂಗ್ರೆಸ್ ನದ್ದು 80% ಸರ್ಕಾರವಾಗಿದೆ. ಎಲ್ಲ ಇಲಾಖೆಗಳ ವರ್ಗಾವಣೆ ದಂಧೆ ಅಂಗಡಿಗಳಲ್ಲಿ ಇಟ್ಟುಕೊಂಡಿದ್ದಾರೆ. ಇಂದು ಅಂಗಡಿಗಳ ವ್ಯಾಪಾರವಾಗಿದೆ, ಬಾಗಿಲು ತೆರೆದು ಕುಳಿತಿದ್ದಾರೆ. ಅಂಗಡಿಗಳಲ್ಲಿ ಫಿಕ್ಸ್ ಮಾಡಿದ್ದಾರೆ. ಒಂದೊಂದು ಇಲಾಖೆಗಳಲ್ಲಿ ರೇಟ್ ಫಿಕ್ಸ್ ಮಾಡಿದ್ದಾರೆ. ಇದು ವ್ಯಾಪಾರೀಕರಣ ಆಗುತ್ತಿದೆ ಎಂದರು.
ಸರ್ಕಾರ ರಚನೆ ಆಗಿ ಕೆಲವೇ ದಿನಗಳಲ್ಲಿ ಹತ್ಯೆ ಆಗುತ್ತಿರುವ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಸಿದ್ದರಾಮಯ್ಯ ಸರ್ಕಾರ ಇದ್ದಾಗ ನಿರಂತರ ಹತ್ಯೆಗಳು, ಗೋಂಡಾಗಿರಿ ರಾಜಕಾರಣ ದರೋಡೆ ಇವೆಲ್ಲವೂ ನಡೆಯುತ್ತವೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ 24 ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಯಾವಾಗ ಕಾಂಗ್ರೆಸ್ ಸರ್ಕಾರ ಬರುತ್ತೊ ಆಗಾಗ್ಗೆ ಇಂತಹ ಪ್ರಕರಣ ವೈಭವಿಕರೀಸುತ್ತೆ, ರಾರಾಜಿಸುತ್ತವೆ. ಇಂತಹ ಕೊಲೆಗಡುಕರು ದಂಗೆಕೋರರು ಕಾಂಗ್ರೆಸ್ ಬೆಂಬಲಿಸ್ತಾರೆ ಎಂದು ಹೇಳಿದರು.
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ವಿಚಾರಕ್ಕೆ ಸಂಭ್ರಮಾಚರಣೆಯಲ್ಲಿ ಶಾಸಕರು ಗೆದ್ದಾಗ, ಪಕ್ಷದ ರ್ಯಾಲಿಗಳಲ್ಲಿ ಕೂಗಿದ್ರು ಸುಮ್ಮನೆ ಇರುತ್ತಾರೆ. ಅವರ ವಿರುದ್ಧ ದೇಶದ್ರೋಹ ಕೇಸ್ ಹಾಕ್ತಿಲ್ಲ. ನಾವು ಇದನ್ನ ಪ್ರಶ್ನೆ ಮಾಡುತ್ತಿದ್ದೇವೆ. ಕಾಂಗ್ರೆಸ್ ದೇಶವಿರೋಧಿ ಚಟುವಟಿಕೆ ನಡೆಸುವವರ ಪರವಾಗಿ ಇದೆ. ದೇಶಭಕ್ತರ ವಿರುದ್ಧ ಕೇಸ್ ಹಾಕುತ್ತಿದ್ದಾರೆ. ಎಲ್ಲ ವಿಷಯದಲ್ಲೂ ದ್ವೇಷದ ರಾಜಕಾರಣ ನಡೆಯುತ್ತಿದೆ. ಸಿದ್ರಾಮಣ್ಣ ಯಾವಾಗ ಯಾವಾಗ ಮುಖ್ಯಮಂತ್ರಿ ಆಗ್ತಾರೆ. ದ್ವೇಷದ ರಾಜಕಾರಣ ಜಾಸ್ತಿ ಆಗ್ತಿದೆ. ಪೊಲೀಸ್ ಇಲಾಖೆ ಅವರ ಕೈಯಲ್ಲಿ ಇರುವಾಗ ಪೊಲೀಸರಿಗೆ ಹೆಚ್ಚಿನ ಒತ್ತಡ ಇರುತ್ತದೆ. ಹಾಗಾಗಿ ಪಾರದರ್ಶಕವಾಗಿ ತನಿಖೆ ನಡೆಸಲು ಆಗೋದಿಲ್ಲ ಎಂದು ಕಟೀಲ್ ಹೇಳಿದರು.
ವಿರೋಧ ಪಕ್ಷದ ನಾಯಕರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮಲ್ಲಿ ಒಂದು ವ್ಯವಸ್ಥೆ ಇದೆ. ಈಗಾಗಲೇ ವಿಧಾನಸಭೆಯಲ್ಲಿ ಹೋರಾಟ ಮಾಡ್ತಿದ್ದಾರೆ. ನಮ್ಮಲ್ಲಿ ಪದ್ಧತಿಗಳಿವೆ ಅದರ ಆಧಾರದ ಮೇಲೆ ಆಯ್ಕೆ ಆಗುತ್ತದೆ. ಕಾಂಗ್ರೆಸ್ ಗೆ ರಾಷ್ಟ್ರೀಯ ಅಧ್ಯಕ್ಷರನ್ನ ಮಾಡಿರಲಿಲ್ಲ ಕೇವಲ ಟೀಕೆ ಮಾಡ್ತಾರೆ. ರಾಜ್ಯದಲ್ಲೂ 6 ತಿಂಗಳ ನಂತರ ಅಧ್ಯಕ್ಷರಾಗಿ ಡಿಕೆಶಿ ಆಗಿದ್ದಾರೆ. ಅವರ ಪರಿಸ್ಥಿತಿ ಏನಿತ್ತು ಅವಾಗ ಎಂದು ಪ್ರಶ್ನಿಸಿದರು.
ಬೆಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿಯ (Chikkodi) ಜೈನ ಮುನಿ (Jain Muni) ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆಯನ್ನು ನಳಿನ್ ಕುಮಾರ್ ಕಟೀಲ್ ಹೊರಡಿಸಿದ್ದು, ಈ ಹತ್ಯೆಯ ಸಮಗ್ರ ತನಿಖೆ ನಡೆಸಬೇಕು. ಕೊಲೆಗಡುಕರನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮುನಿಗಳ ಹತ್ಯೆ ಮನಸ್ಸಿಗೆ ಅತ್ಯಂತ ಅಘಾತ ತಂದಿದೆ ಎಂದು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡಿನ ಸಾಧು ಸಂತರಿಗೆ ರಕ್ಷಣೆ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?