Tag: ನವದೆಹಲಿ ರೈಲ್ವೆ ನಿಲ್ದಾಣ ಕಾಲ್ತುಳಿತ

  • ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – ಪ್ರಕರಣದ ವಿಚಾರಣೆಗೆ ನಿರಾಕರಿಸಿದ ಸುಪ್ರೀಂಕೋರ್ಟ್

    ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – ಪ್ರಕರಣದ ವಿಚಾರಣೆಗೆ ನಿರಾಕರಿಸಿದ ಸುಪ್ರೀಂಕೋರ್ಟ್

    ನವದೆಹಲಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ (Delhi Railway Station Stampede) ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ.ಇದನ್ನೂ ಓದಿ: ಪೋಕ್ಸೊ ಕೇಸ್‌ನಲ್ಲಿ ಬಿಎಸ್‌ವೈಗೆ ಶುರುವಾಯ್ತು ಸಂಕಷ್ಟ – ಕೋರ್ಟ್‌ನಿಂದ ಸಮನ್ಸ್ ಜಾರಿ

    ಈ ಕಾಲ್ತುಳಿತ ಪ್ರಕರಣದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಇಲಾಖೆ ಹೇಳಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ 200 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಎಲ್ಲ ರಾಜ್ಯಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಮತ್ತು ನಿರ್ದೇಶನ ನೀಡುವಂತೆ ಆನಂದ್ ಕಾನೂನು ನೆರವು ವೇದಿಕೆ ಮನವಿ ಮಾಡಿತ್ತು.

    ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿದಾರರ ವಾದ ಪುರಸ್ಕರಿಸಲಿಲ್ಲ, 200 ಸಾವುಗಳು ಸಂಭವಿಸಿವೆ ಎಂಬ ಆರೋಪಕ್ಕೆ ಪುರಾವೆ ಏನಿದೆ ಎಂದು ಪ್ರಶ್ನಿಸಿತು. ಅರ್ಜಿದಾರರ ಪರ ವಕೀಲರ ಸಂಕ್ಷಿಪ್ತ ವಿಚಾರಣೆಯ ನಂತರ ಅರ್ಜಿಯನ್ನು ವಜಾಗೊಳಿಸಿತು. ಬಾಧಿತ ಜನರು ನ್ಯಾಯಾಲಯಕ್ಕೆ ಬರಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.ಇದನ್ನೂ ಓದಿ: ಮಾ.22 ರಂದು ಕರ್ನಾಟಕ ಬಂದ್‌

     

  • ಪ್ಲಾಟ್‌ಫಾರ್ಮ್ ಮೆಟ್ಟಿಲಿನಿಂದ ಪ್ರಯಾಣಿಕ ಜಾರಿ ಬಿದ್ದಿದ್ದು ಕಾಲ್ತುಳಿತಕ್ಕೆ ಕಾರಣ: ರೈಲ್ವೆ ಅಧಿಕಾರಿ

    ಪ್ಲಾಟ್‌ಫಾರ್ಮ್ ಮೆಟ್ಟಿಲಿನಿಂದ ಪ್ರಯಾಣಿಕ ಜಾರಿ ಬಿದ್ದಿದ್ದು ಕಾಲ್ತುಳಿತಕ್ಕೆ ಕಾರಣ: ರೈಲ್ವೆ ಅಧಿಕಾರಿ

    – ಕುಂಭಮೇಳಕ್ಕೆ ತೆರಳುತ್ತಿದ್ದ 18 ಭಕ್ತರು ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಬಲಿ

    ನವದೆಹಲಿ: ದೆಹಲಿ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಭಾರಿ ಜನದಟ್ಟಣೆಯಲ್ಲಿ ಪ್ರಯಾಣಿಕರೊಬ್ಬರು ಮೆಟ್ಟಿಲಿನಿಂದ ಜಾರಿಬಿದ್ದಿದ್ದು ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಉತ್ತರ ರೈಲ್ವೆಯ ಸಿಪಿಆರ್‌ಒ ಹಿಮಾಂಶು ಶೇಖರ್‌ ಉಪಾಧ್ಯಾಯ ತಿಳಿಸಿದ್ದಾರೆ.

    ನವದೆಹಲಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 13 ಮತ್ತು 14 ಜನದಟ್ಟಣೆಯಿಂದ ಕೂಡಿತ್ತು. ಅನೇಕ ಜನರು ಎರಡು ರೈಲುಗಳನ್ನು ಹತ್ತಲು ಕಾಯುತ್ತಿದ್ದರು. ಮಾಗ್ಧ್ ಎಕ್ಸ್‌ಪ್ರೆಸ್ ಮತ್ತು ಜಮ್ಮು ಕಡೆಗೆ ಹೋಗುವ ಇನ್ನೊಂದು ರೈಲು ವಿಳಂಬವಾಯಿತು. ಈ ಮಧ್ಯೆ, ಮಹಾ ಕುಂಭಕ್ಕಾಗಿ ವಿಶೇಷ ರೈಲು, ಪ್ರಯಾಗ್‌ರಾಜ್ ಎಕ್ಸ್‌ಪ್ರೆಸ್, ರಾತ್ರಿ 10:10 ಕ್ಕೆ ಪ್ಲಾಟ್‌ಫಾರ್ಮ್ ಸಂಖ್ಯೆ 14 ರಿಂದ ಹೊರಡಬೇಕಿತ್ತು. ಪ್ರಯಾಗ್‌ರಾಜ್‌ಗೆ ರೈಲು ಹೋಗುವ ಸಮಯ ಹತ್ತಿರವಾಗುತ್ತಿದ್ದಂತೆ, ಹೆಚ್ಚು ಹೆಚ್ಚು ಜನರು ಪ್ಲಾಟ್‌ಫಾರ್ಮ್‌ಗೆ ಧಾವಿಸಲು ಪ್ರಾರಂಭಿಸಿದರು. ಇದು ಜನದಟ್ಟಣೆಯನ್ನು ಹೆಚ್ಚಿಸಿತು ಎಂದು ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಮೆಟ್ಟಿಲುಗಳ ಮೇಲೆ ಉಸಿರು ಚೆಲ್ಲಿದ ಪ್ರಯಾಣಿಕರು – ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ದುರಂತಕ್ಕೆ ಕಾರಣವೇನು?

    ಘಟನೆಯ ಕುರಿತು ತನಿಖೆ ನಡೆಸಲು ರೈಲ್ವೆಯು ಇಬ್ಬರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ಕೂಡ ರಚಿಸಿದೆ. ಉತ್ತರ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ನರಸಿಂಗ್ ದೇವು ಮತ್ತು ಉತ್ತರ ರೈಲ್ವೆಯ ಪ್ರಧಾನ ಮುಖ್ಯ ಭದ್ರತಾ ಆಯುಕ್ತ ಪಂಕಜ್ ಗಂಗ್ವಾರ್ ಸಮಿತಿಯ ಭಾಗವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ತನಿಖೆ ಆರಂಭಿಸಿರುವ ಸಮಿತಿಯು, ನವದೆಹಲಿ ರೈಲು ನಿಲ್ದಾಣದ ಎಲ್ಲಾ ವಿಡಿಯೋ ತುಣುಕನ್ನು ಪಡೆದುಕೊಳ್ಳಲು ಆದೇಶ ನೀಡಿದೆ. ಇದನ್ನೂ ಓದಿ: ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಮೃತರ ಕುಟುಂಬಗಳಿಗೆ ಕೇಂದ್ರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ

    ನಿನ್ನೆ ರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಎರಡು ರೈಲುಗಳು ವಿಳಂಬವಾಗಿ ಬಂದ ಕಾರಣ ಮತ್ತು ಮಹಾ ಕುಂಭಮೇಳಕ್ಕೆ ತೆರಳಲು ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ವಿಳಂಬವಾದ ಪರಿಣಾಮ ಕಾಲ್ತುಳಿತ ಉಂಟಾಯಿತು. ಪರಿಣಾಮ 11 ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ.

    ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಭಾರತದಾದ್ಯಂತ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ಇದನ್ನೂ ಓದಿ: ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ದುರಂತ – ಪ್ರಧಾನಿ ಮೋದಿ ಸೇರಿ ಗಣ್ಯರ ವಿಷಾದ