Tag: ನವೀನ್ ಪೋಲಿಶೆಟ್ಟಿ

  • ಸ್ಯಾಂಡಲ್‌ವುಡ್‌ಗೆ ಕನ್ನಡತಿ ಅನುಷ್ಕಾ ಶೆಟ್ಟಿ ಪಾದಾರ್ಪಣೆ

    ಸ್ಯಾಂಡಲ್‌ವುಡ್‌ಗೆ ಕನ್ನಡತಿ ಅನುಷ್ಕಾ ಶೆಟ್ಟಿ ಪಾದಾರ್ಪಣೆ

    ರಾವಳಿ ಚೆಲುವೆ (Karavali Beauty) ಅನುಷ್ಕಾ ಶೆಟ್ಟಿ ಅವರು ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇದೀಗ 3 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಅಬ್ಬರಿಸಲು ಸ್ವೀಟಿ ಅನುಷ್ಕಾ ರೆಡಿಯಾಗಿದ್ದಾರೆ. ಹೊಸ ಚಿತ್ರದ ಟೈಟಲ್ ಜೊತೆ ಫಸ್ಟ್ ಲುಕ್ ರಿವೀಲ್ ಮಾಡುವ ಮೂಲಕ ನಟಿ ಸುದ್ದಿಯಲ್ಲಿದ್ದಾರೆ.

    `ಬಾಹುಬಲಿ’ (Bahubali) ನಟಿ ಅನುಷ್ಕಾ ಶೆಟ್ಟಿ ಅವರು ಕಡೆಯದಾಗಿ 2020ರಲ್ಲಿ `ನಿಶಬ್ಧಂ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಮತ್ತೆ ಸಿನಿಮಾಗೆ ಕಮ್‌ಬ್ಯಾಕ್ ಆಗಿರುವ ನಟಿ ಕನ್ನಡಿಗರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅನುಷ್ಕಾ ಶೆಟ್ಟಿ(Anushka Shetty) ಅವರು ಮೂಲತಃ ಕರ್ನಾಟಕದವರು ಹಾಗಾಗಿ ನಮ್ಮ ಕನ್ನಡದ ಹುಡುಗಿ ಕನ್ನಡ ಸಿನಿಮಾದಲ್ಲಿ ನಟಿಸಬೇಕು ಎಂಬುದು ಅಪಾರ ಅಭಿಮಾನಿಗಳ ಆಸೆಯಾಗಿತ್ತು. ಇದೀಗ ಆ ಆಸೆ ಈಡೇರಿದೆ. ನವೀನ್ ಪೋಲಿಶೆಟ್ಟಿ (Naveen Polishetty) ಜೊತೆಗಿನ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಅನುಷ್ಕಾ ಶೆಟ್ಟಿ ಪಾದಾರ್ಪಣೆ ಮಾಡ್ತಿದ್ದಾರೆ.  ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ಸೋಲಿನ ಬಗ್ಗೆ ಮೌನ ಮುರಿದ ಕನ್ನಡದ `ಗಿಲ್ಲಿ’ ನಟಿ ರಾಕುಲ್

    ಹ್ಯಾಪಿ ಸಿಂಗಲ್ ಎನ್ನುತ್ತ ನವೀನ್ ಪೋಲಿಶೆಟ್ಟಿಗೆ ಜೋಡಿಯಾಗಿ ಅನುಷ್ಕಾ ಶೆಟ್ಟಿ ಬರುತ್ತಿದ್ದಾರೆ. ಅನ್ವಿತಾ ರಾವಾಲಿ ಶೆಟ್ಟಿಯಾಗಿ ಸ್ವೀಟಿ ಶೆಫ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ಯುವಿ ಕ್ರಿಯೇಷನ್ ನಿರ್ಮಾಣದಲ್ಲಿ `Miss Shetty Mrs Polishetty’ ಟೈಟಲ್‌ ಮೂಲಕ ಅನುಷ್ಕಾ ಹೊಸ ಚಿತ್ರ ಮೂಡಿ ಬಂದಿದ್ದು, ಈ ವರ್ಷವೇ ಸಿನಿಮಾ ತೆರೆಗೆ ಬರುತ್ತಿದೆ.

    ಹ್ಯಾಪಿ ಸಿಂಗಲ್ (Happy Single) ಮತ್ತು ರೆಡಿ ಟು ಮಿಂಗಲ್ (Ready To Mingle) ಎನ್ನುವ ಅನುಷ್ಕಾ ಮತ್ತು ನವೀನ್ ಅವರ ಚಿತ್ರದ ಫಸ್ಟ್ ಲುಕ್ ಈಗ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆ ಕಾಣಲಿದೆ. ಈ ಮೂಲಕ ಕನ್ನಡತಿ ಅನುಷ್ಕಾ ಶೆಟ್ಟಿ ಸ್ಯಾಂಡಲ್‌ವುಡ್‌ಗೆ (Sandalwood) ಪಾದಾರ್ಪಣೆ ಮಾಡ್ತಿದ್ದಾರೆ.

  • ಇಂಟರ್‌ನ್ಯಾಷನಲ್ ಶೆಫ್ ಪಾತ್ರದಲ್ಲಿ ಅನುಷ್ಕಾ ಶೆಟ್ಟಿ?

    ಇಂಟರ್‌ನ್ಯಾಷನಲ್ ಶೆಫ್ ಪಾತ್ರದಲ್ಲಿ ಅನುಷ್ಕಾ ಶೆಟ್ಟಿ?

    ಟಾಲಿವುಡ್ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ `ಬಾಹುಬಲಿ’ ಸೂಪರ್ ಸಕ್ಸಸ್ ನಂತರ ಕಡೆಯದಾಗಿ ಕಾಣಿಸಿಕೊಂಡ ಚಿತ್ರ `ನಿಶಬ್ದಂ’.  ಇದೀಗ ಎರಡು ವರ್ಷಗಳ ನಂತರ ಮತ್ತೆ ಬೆಳ್ಳಿಪರದೆಯಲ್ಲಿ ಮಿಂಚಲು ಅನುಷ್ಕಾ ಸಜ್ಜಾಗಿದ್ದಾರೆ. ಈ ಬಾರಿ ಇಂಟರ್‌ನ್ಯಾಷನಲ್ ಶೆಫ್‌ ಪಾತ್ರದ ಮೂಲಕ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

    ತೆಲುಗಿನ `ಲೈಫ್ ಇಸ್ ಬ್ಯೂಟಿಫುಲ್’ ಚಿತ್ರದ ಮೂಲಕ ಸಿನಿರಂಗಕ್ಕೆ ಪರಿಚಿತರರಾದ ನಟ ನವೀನ್ ಪೋಲಿಶೆಟ್ಟಿ ಜತೆ ಸೂಪರ್ ಸ್ಟಾರ್ ಅನುಷ್ಕಾ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಸಾಯಿ ಶ್ರೀನಿವಾಸ್ ಅಥ್ರೇಯ ನಿರ್ದೇಶನದ ಹೆಸರಿಡದ ಹೊಸ ಚಿತ್ರಕ್ಕೆ ಸ್ವೀಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ವಯಸ್ಸಿನ ಅಂತರಯಿರೋ ವಿಭಿನ್ನ ಪ್ರೇಮಕಥೆಯನ್ನ ತೋರಿಸಲು ಹೊರಟಿದ್ದಾರೆ ನಿರ್ದೇಶಕರು.

    `ಬಾಹುಬಲಿ’, `ಭಾಗಮತಿ’, `ನಿಶಬ್ಧಂ’ ಚಿತ್ರದ ನಂತರ ಡಿಫರೆಂಟ್ ಕಥೆಯನ್ನೇ ಅನುಷ್ಕಾ ಆಯ್ಕೆ ಮಾಡಿಕೊಂಡಿದ್ದಾರೆ. ನಾಯಕಿಗೆ 40 ವರ್ಷ ವಯಸ್ಸು, ಹೀರೋ 20 ವರ್ಷ ಇವರಿಬ್ಬರ ನಡುವೆ ಲವ್ ಹೇಗೆ ಆಗುತ್ತೆ ಮುಂದೆ ಎನೆಲ್ಲಾ ಟ್ವಿಸ್ಟ್ ಇದೇ ಅನ್ನೋ ಕಥೆಯ ತಿರುಳು. ಚಿತ್ರದಲ್ಲಿ ಸ್ವೀಟಿ ಇಂಟರ್‌ನ್ಯಾಷನಲ್ ಶೆಫ್ ಪಾತ್ರಕ್ಕೆ ಜೀವತುಂಬ್ತಿದ್ದಾರೆ. ಡಿಫರೆಂಟ್ ಲೆಯರ್‌ನಲ್ಲಿ ಪಾತ್ರ ಮೋಡಿ ಮಾಡಲಿದೆಯಂತೆ. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕರ್ನಾಟಕದಲ್ಲಿ ಅಜಯ್ ದೇವಗನ್ ಸಿನಿಮಾ ರಿಲೀಸ್ ಅಡ್ಡಿ : ಕರವೇಯಿಂದ ಪ್ರತಿಭಟನೆ

    ಮೊದಲ ಬಾರಿಗೆ ಅನುಷ್ಕಾ ಮತ್ತು ನವೀನ್ ತೆರೆಯ ಮೇಲೆ ಒಂದಾಗ್ತಿದ್ದಾರೆ. ಯುವಿ ಕ್ರಿಯೇಷನ್ಸ್ ಅಡಿಯಲ್ಲಿ ಸಿನಿಮಾ ತೆಲುಗು, ತಮಿಳು, ಹಿಂದಿ ಭಾಷೆಯಲ್ಲಿ ನಿರ್ಮಾಣವಾಗುತ್ತಿದೆ. ಈಗಾಗಲೇ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನೆಚ್ಚಿನ ನಟಿ ಅನುಷ್ಕಾ ಇಂಟರ್‌ನ್ಯಾಷನಲ್ ಶೇಫ್ ಪಾತ್ರದಲ್ಲಿ ಕಾಣಿಸಿಕೊಳ್ತಿರೋದಕ್ಕೆ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

  • ಹೊಸ ಸಿನಿಮಾ ಅನೌನ್ಸ್ ಮಾಡಿದ ಬಾಹುಬಲಿ ಬೆಡಗಿ ಅನುಷ್ಕಾ ಶೆಟ್ಟಿ

    ಹೊಸ ಸಿನಿಮಾ ಅನೌನ್ಸ್ ಮಾಡಿದ ಬಾಹುಬಲಿ ಬೆಡಗಿ ಅನುಷ್ಕಾ ಶೆಟ್ಟಿ

    ಹೈದರಾಬಾದ್: ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ತಮ್ಮ 40ನೇ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾವನ್ನು ಘೋಷಿಸುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

    2020ರಲ್ಲಿ ನಿಶಬ್ಧಂ ಸಿನಿಮಾದ ಬಳಿಕ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ಅನುಷ್ಕಾ ಶೆಟ್ಟಿ, ನವೆಂಬರ್ 7ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 40ನೇ ವಸಂತಕ್ಕೆ ಕಾಲಿಟ್ಟ ಅನುಷ್ಕಾ ಶೆಟ್ಟಿ ಯುವಿ ಕ್ರಿಯೇಷನ್ಸ್‌ನೊಂದಿಗೆ ಮುಂದಿನ ಸಿನಿಮಾದಲ್ಲಿ ಅಭಿನಯಿಸುತ್ತಿರುವುದಾಗಿ ಇನ್ಸ್‍ಸ್ಟಾಗ್ರಾಮ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಪದ್ಮಶ್ರೀ ಅಲ್ಲ, ಪುನೀತ್ ಅಮರಶ್ರೀ: ಶಿವರಾಜ್‍ಕುಮಾರ್

    ಈ ಕುರಿತಂತೆ ಅನುಷ್ಕಾ ಶೆಟ್ಟಿ ವೀಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದು, ಕ್ಯಾಪ್ಷನ್‍ನಲ್ಲಿ ನಿಮ್ಮೆಲ್ಲರ ಹುಟ್ಟುಹಬ್ಬದ ಶುಭಾಶಯ ಮತ್ತು ಪ್ರೀತಿಯೊಂದಿಗೆ ನಿಮ್ಮ ಜೊತೆ ನನ್ನ ಮುಂದಿನ ಸಿನಿಮಾವನ್ನು ಘೋಷಿಸಲು ಸಂತೋಷವಾಗುತ್ತಿದೆ. ಮಹೇಶ್ ಬಾಬು.ಪಿ ಅವರೊಂದಿಗೆ ನನ್ನ ಮುಂದಿನ ಸಿನಿಮಾ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಿಕ್ಕಿ, ಕತ್ರಿನಾ ಮದುವೆ ಸಿದ್ಧತೆ ಶುರು

    ಈ ಚಿತ್ರಕ್ಕೆ ನಿರ್ದೇಶಕ ಮಹೇಶ್ ಬಾಬು ಆ್ಯಕ್ಷನ್ ಕಟ್ ಹೇಳುತ್ತಿದ್ದು, ಅನುಷ್ಕಾ ಜೊತೆಗೆ ನಟ ನವೀನ್ ಪೋಲಿಶೆಟ್ಟಿ ಸ್ಕ್ರೀನ್ ಶೇರ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಿನಿಮಾ ಕುರಿತಂತೆ ಮತ್ತಷ್ಟು ಮಾಹಿತಿಯನ್ನು ಶೀಘ್ರವೇ ರಿವೀಲ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಇದನ್ನೂ ಓದಿ: ಪತ್ನಿಯೊಂದಿಗೆ ಅಲ್ಲು ಅರ್ಜುನ್ ಫುಲ್ ಮಿಂಚಿಂಗ್- ದೀಪಾವಳಿ ವೀಡಿಯೋ ವೈರಲ್

    ಅನುಷ್ಕಾ ಶೆಟ್ಟಿ ಕೊನೆಯದಾಗಿ ನಿರ್ದೇಶಕ ಹೇಮಂತ್ ಮಧುರ್ಕರ್ ಅವರ ನಿಶಬ್ಧಂ ಸಿನಿಮಾದಲ್ಲಿ ಕಾಣಿಸಿಕೊಂಡರು, ಈ ಸಿನಿಮಾ ನೇರವಾಗಿ ಅಮೆಜಾನ್ ಪ್ರೈಮ್ ವೀಡಿಯೋದಲ್ಲಿ ಬಿಡುಗಡೆಯಾಯಿತು. ಆದರೆ ಈ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು.