Tag: ನವ ಮುಂಬೈ

  • ಹೆಣ್ಣು ಬೀದಿ ನಾಯಿ ಮೇಲೆ ಅತ್ಯಾಚಾರ, ವ್ಯಕ್ತಿ ಬಂಧನ

    ಹೆಣ್ಣು ಬೀದಿ ನಾಯಿ ಮೇಲೆ ಅತ್ಯಾಚಾರ, ವ್ಯಕ್ತಿ ಬಂಧನ

    ಮುಂಬೈ: ಹೆಣ್ಣು ನಾಯಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇರೆಗೆ ಮಹಾರಾಷ್ಟ್ರದ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

    ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‍ಮೆಂಟ್ ಆಫ್ ಅನಿಮಲ್ಸ್(ಪೆಟಾ) ಸಹಕಾರದಿಂದ ವಿಜಯ್ ರಂಗರೆ ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬ ನವ ಮುಂಬೈನ ಖರಗರ್‍ನಲ್ಲಿ ಹೆಣ್ಣು ನಾಯಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಆಗಸ್ಟ್ 22 ರಂದು ನವ ಮುಂಬೈ ಹಾಗೂ ಪನ್ವೆಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಆರೋಪಿ ಈ ಹಿಂದೆಯೂ ಇತರ ಪ್ರಾಣಿಗಳಿಗೆ ಲೈಂಗಿಕ ಕಿರುಕುಳ ನೀಡಿರಬಹುದು. ಆತ ಪ್ರಾಣಿಗಳಿಗೆ ಕಿರುಕುಳ ನೀಡುವುದನ್ನೇ ಚಟವಾಗಿಸಿಕೊಂಡಿದ್ದಾನೆ ಎಂದು ಪೆಟಾ ದೂರಿನಲ್ಲಿ ಆರೋಪಿಸಿದೆ.

    ಐಪಿಸಿ ಸೆಕ್ಷನ್ 377(ಪ್ರಾಣಿಗಳ ಜೊತೆ ಲೈಂಗಿಕ ಕ್ರಿಯೆ ನಡೆಸುವುದು) ಅಡಿ ಎಫ್‍ಐಆರ್ ದಾಖಲಾಗಿದ್ದು, ಈ ಪ್ರಕರಣದ ಅಡಿ ಆರೋಪ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

    ಒಂದು ವೇಳೆ ನಾಯಿಯ ಮೇಲೆ ಅತ್ಯಾಚಾರ ಎಸಗಿರುವ ಈತನನ್ನು ಬಿಡುಗಡೆಗೊಳಿಸಿದ್ದಲ್ಲಿ ಮನುಷ್ಯರ ಮೇಲೂ ಈತ ಅತ್ಯಾಚಾರ ಎಸಗಬಹುದು ಎಂದು ಪೆಟಾ ತನ್ನ ದೂರಿನಲ್ಲಿ ಉಲ್ಲೇಖಿಸಿದೆ.