Tag: ನಶೆ

  • ನಶೆಯಲ್ಲಿ ಪೊಲೀಸರಿಗೆ ಫೋನ್ ಮಾಡಿದವ ಕೆಲವೇ ಗಂಟೆಯಲ್ಲಿ ಅರೆಸ್ಟ್

    ನಶೆಯಲ್ಲಿ ಪೊಲೀಸರಿಗೆ ಫೋನ್ ಮಾಡಿದವ ಕೆಲವೇ ಗಂಟೆಯಲ್ಲಿ ಅರೆಸ್ಟ್

    – ಪೊಲೀಸರು ಬಂಧಿಸಿದ್ದು ಯಾಕೆ?

    ನವದೆಹಲಿ: ಕುಡಿದ ಮತ್ತಿನಲ್ಲಿ ಪೊಲೀಸರಿಗೆ ಫೋನ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ.

    30 ವರ್ಷದ ಪಿಂಟು ಸಿಂಗ್ ಬಂಧಿತ ವ್ಯಕ್ತಿ. ಕಾರ್ ಪೇಂಟರ್ ಆಗಿ ಕೆಲಸ ಮಾಡಿಕೊಂಡಿರುವ ಪಿಂಟು ಶನಿವಾರ ನಶೆಯಲ್ಲಿ ಪೊಲೀಸರಿಗೆ ಫೋನ್ ಮಾಡಿದ್ದಾನೆ. ಪ್ರಧಾನಿಗಳನ್ನ ಕೊಲ್ಲಲು ತನಗೆ 30 ಕೋಟಿ ರೂಪಾಯಿಗೆ ಸುಪಾರಿ ನೀಡಿದ್ದಾರೆ ಎಂದು ಹೇಳಿ ಫೋನ್ ಕಟ್ ಮಾಡಿದ್ದಾನೆ. ಕೂಡಲೇ ಎಚ್ಚೆತ್ತ ಪೊಲೀಸರು ಕಾಲ್ ಟ್ರೇಸ್ ಮಾಡಿ ಪಿಂಟುನನ್ನು ಬಂಧಿಸಿದ್ದಾರೆ.

    ಬಂಧನದ ಬಳಿಕ ಪಿಂಟು ನಶೆಯಲ್ಲಿ ಈ ರೀತಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಆತ ಮಾನಸಿಕ ಅಸ್ವಸ್ಥನಾಗಿದ್ದರಿಂದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

     

  • ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಕೊಂದ ಭೂಪ

    ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಕೊಂದ ಭೂಪ

    -ಬಾಯಲ್ಲಿ ಬಾಟಲ್, ಕೊರಳಲ್ಲಿ ಹಾವು

    ಕೋಲಾರ: ಕುಡಿದ ಮತ್ತಿನಲ್ಲಿ ಭೂಪನೊಬ್ಬ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

    ಮಷ್ಟೂರು ಗ್ರಾಮದ ಕುಮಾರ್ ಹಾವನ್ನು ಸಾಯಿಸಿದ ಭೂಪ. ನಶೆಯಲ್ಲಿದ್ದ ಕುಡುಕ ದಾರಿಯಲ್ಲಿ ಹೋಗುತ್ತಿದ್ದ ಹಾವನ್ನು ಹಿಡಿದು ಕತ್ತಿಗೆ ಸುತ್ತಿಕೊಂಡು ಗ್ರಾಮ ಪ್ರವೇಶಿಸಿದ್ದಾನೆ. ಗ್ರಾಮದ ಮಧ್ಯೆ ಬರುತ್ತಿದ್ದಂತೆ ಕುತ್ತಿಗೆ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕುಮಾರ್ ಹಾವನ್ನು ಕಚ್ಚಿ ಸಾಯಿಸುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ. ಆದ್ರೆ ಭಯದಿಂದ ಯಾರು ಕುಮಾರ್ ನನ್ನು ತಡೆಯಲು ಮುಂದಾಗಿಲ್ಲ.

    ಹಾವು ಸಾಯಿಸಿದ ಬಳಿಕ ಕುಮಾರ್ ಆರೋಗ್ಯವಾಗಿದ್ದು, ಗ್ರಾಮದಲ್ಲಿ ಓಡಾಡಿಕೊಂಡಿದ್ದಾನೆ. ಹಾವನ್ನ ಸಾಯಿಸಿದ್ದಕ್ಕೆ ಗ್ರಾಮಸ್ಥರು ಸಹ ಕ್ಲಾಸ್ ತೆಗೆದುಕೊಂಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ನಡು ರಸ್ತೆಯಲ್ಲೇ ಮಹಿಳೆಯ ಬಟ್ಟೆ ಬಿಚ್ಚಲು ಯತ್ನಿಸಿದ ಕಾಮುಕ

    ನಡು ರಸ್ತೆಯಲ್ಲೇ ಮಹಿಳೆಯ ಬಟ್ಟೆ ಬಿಚ್ಚಲು ಯತ್ನಿಸಿದ ಕಾಮುಕ

    ಬೆಂಗಳೂರು: ಗಾಂಜಾ ಗುಂಗಿನಲ್ಲಿದ್ದ ಕಾಮುಕನೊಬ್ಬ ಹಾಡಹಗಲೇ ನಡು ರಸ್ತೆಯಲ್ಲಿ ಮಹಿಳೆಯ ಬಟ್ಟೆ ಬಿಚ್ಚಲು ಯತ್ನಿಸಿದ ಘಟನೆ ಬೆಂಗಳೂರಿನ ಕಲ್ಯಾಣನಗರ ಸಮೀಪ ಚಲ್ಲಕೆರೆ ಬಳಿ ನಡೆದಿದೆ.

    ಇದೇ ತಿಂಗಳ 8 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆಯಿಂದ ಅಂಗಡಿಗೆ ತೆರಳುತ್ತಿದ್ದ ಮಹಿಳೆಯನ್ನು ಹಿಂಬದಿಯಿಂದ ಬಂದು ಕೈ ಹಿಡಿದ ಕಾಮುಕ ಆಕೆಯ ಬಟ್ಟೆ ಬಿಚ್ಚಲು ಯತ್ನಿಸಿದ್ದಾನೆ. ಈ ವೇಳೆ ಬೀದಿ ಕಾಮುಕನಿಂದ ಬಿಡಿಸಿಕೊಳ್ಳಲು ರಸ್ತೆಯಲ್ಲಿ ಮಹಿಳೆ ಕಿರುಚಾಡಿದ್ದಾಳೆ. ಆಗ ಮಹಿಳೆಯ ಕಿರುಚಾಟ ಕೇಳಿ ಸ್ಥಳಕ್ಕೆ ಆಗಮಿಸಿದ ಸುತ್ತಮುತ್ತಲ ನಿವಾಸಿಗಳು ಕಾಮುಕನನ್ನು ಹಿಡಿದು ಸರಿಯಾಗಿ ಥಳಿಸಿದ್ದಾರೆ.

    ಡ್ರಗ್ಸ್ ಹಾಗೂ ಗಾಂಜಾ ಸೇವಿಸಿ ಬೀದಿಯಲ್ಲಿ ಓಡಾಡ್ತಿದ್ದ ಅಸಾಮಿ ಅಮಲಿನಲ್ಲಿ ಮಹಿಳೆಯನ್ನು ಎಳೆದಾಡಿದ್ದಾನೆ. ಘಟನೆ ಬಳಿಕ ಕಾಮುಕನನ್ನು ಹೆಣ್ಣೂರು ಪೊಲೀಸರಿಗೆ ಸಾರ್ವಜನಿಕರು ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ಮಾಡುವ ವೇಳೆ ಆರೋಪಿಯು ಯಲಹಂಕ ಮೂಲದ ಅಲುಮೀನ್ ಎಂಬುದು ಪತ್ತೆಯಾಗಿದೆ. ಗಾಂಜಾ ಸೇವನೆಗಾಗಿ ಹೆಣ್ಣೂರು ಕಡೆ ಬಂದಿದ್ದ ಆರೋಪಿ ಹೆಣ್ಣೂರು ಬಳಿಯ ವಿದೇಶಿ ಪ್ರಜೆಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಘಟನೆ ಕುರಿತು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv