Tag: ನಾಗತಿಹಳ್ಳಿ ಚಂದ್ರಶೇಖರ್

  • ಟೂರ್ನಿಯಲ್ ಗೆ ಅದ್ಧೂರಿ ಚಾಲನೆ: ವಿವಿಧ ಗಣ್ಯರ ಉಪಸ್ಥಿತಿ

    ಟೂರ್ನಿಯಲ್ ಗೆ ಅದ್ಧೂರಿ ಚಾಲನೆ: ವಿವಿಧ ಗಣ್ಯರ ಉಪಸ್ಥಿತಿ

    ಟೂರ್ನಿವಲ್ (First indian international celebrbrity tournament and carnival) ನ ಉದ್ಘಾಟನಾ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ANYELP Entertainment ಹಾಗೂ White lotus entertainment ಸಂಸ್ಥೆ ಆಯೋಜಿಸಿರುವ ಸಮಾರಂಭದಲ್ಲಿ ಶ್ರೀಲಂಕಾ ಪ್ರವಾಸೋದ್ಯಮ ಸಚಿವರಾದ ಡಯಾನ ಗ್ಯಾಮೇಜ್, ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರಾದ ಇಬ್ರಾಹಿಂ ರಷೀದ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟಿ ಪ್ರಿಯಾಂಕ ಉಪೇಂದ್ರ, ಜಾಕಿರ್ ಹುಸೇನ್, ನಟ ರುದ್ರ, ನಾಗತಿಹಳ್ಳಿ ಚಂದ್ರಶೇಖರ್, ನಟ ಅಜಯ್ ರಾವ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

    “ಟೂರ್ನಿವಲ್” ಎಂದರೆ ಸೌತ್ ಏಷ್ಯಾ ದೇಶಗಳ ನಡುವಿನ ಸಾಂಸ್ಕೃತಿಕ ವಿನಿಮಯ. ನಮ್ಮ ರಾಜ್ಯದ ಸಿನಿತಾರೆಯರು ಹಾಗೂ ಮಾಲ್ಡೀವ್ಸ್ ನ ಸಿನಿತಾರೆಯರ ನಡುವೆ ಫುಟ್ಬಾಲ್ ಟೂರ್ನಮೆಂಟ್  ಆಯೋಜಿಸಲಾಗುವುದು. ಬರೀ ಕ್ರೀಡೆ ಅಷ್ಟೇ ಅಲ್ಲ. ಬೇರೆಬೇರೆ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂರು ದೇಶಗಳಲ್ಲೂ ನಡೆಸುವ ಉದ್ದೇಶವಿದೆ. ಇಲ್ಲಿನ ಚಿತ್ರ ಸಹ ಮಾಲ್ಡೀವ್ಸ್ ನಲ್ಲಿ ಬಿಡುಗಡೆಯಾಗಲಿದೆ ಎಂದು  ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದ “ಟೂರ್ನಿವಲ್” ನ ಮ್ಯಾನೇಜಿಂಗ್ ಡೈರೆಕ್ಟರ್ ಪೂಜಾಶ್ರೀ,  ಉದ್ಘಾಟನೆಗೆ ಆಗಮಿಸಿದ್ದ  ಶ್ರೀಲಂಕಾ ಹಾಗೂ ಮಾಲ್ಡೀವ್ಸ್ ದೇಶದ ಪ್ರವಾಸೋದ್ಯಮ ಸಚಿವರಿಗೆ, ಇಲ್ಲಿನ  ಗಣ್ಯರಿಗೆ ಧನ್ಯವಾದ ‌ತಿಳಿಸಿದರು. ಇದನ್ನೂ ಓದಿ:ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ

    ಈ ಸಂಸ್ಥೆಯವರು ಒಳ್ಳೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅವರಿಗೆ ಬೇಕಾದ ಸಹಕಾರ ನೀಡಲು ನಾವು ಸಿದ್ದ ಎಂದು ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರಾದ ಇಬ್ರಾಹಿಂ ರಷೀದ್ ಹಾಗೂ ಶ್ರೀಲಂಕಾ ಪ್ರವಾಸೋದ್ಯಮ ಸಚಿವರಾದ ಡಯನಾ ಗ್ಯಾಮೇಜ್ ತಿಳಿಸಿದರು.  ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮ ಉದ್ಘಾಟನೆಯಾಯಿತು. ಪ್ರಸಿದ್ದ ಕಲಾವಿದರೊಬ್ಬರ ಭರತನಾಟ್ಯ, ಖ್ಯಾತ ಶ್ರೀಲಂಕಾ ಗಾಯಕಿ ಯೋಹಾನಿ ಅವರ ಗಾಯನ ಹಾಗೂ ಫ್ಯಾಷನ್ ಶೋ ಸೇರಿದಂತೆ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಕಣ್ಮನ ಸೆಳೆಯಿತು. ಇದೇ ಸಂದರ್ಭದಲ್ಲಿ ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ  “Life of cockroach” ಚಿತ್ರದ ಶೀರ್ಷಿಕೆ ಅನಾವರಣ ಸಹ ನಡೆಯಿತು.

    ]Live Tv
    [brid partner=56869869 player=32851 video=960834 autoplay=true]

  • ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ ಹಾಸ್ಯ ನಟ ಮಿತ್ರ: ಇದು ಅನ್ನದ ಋಣವೆಂದು ನಟ

    ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ ಹಾಸ್ಯ ನಟ ಮಿತ್ರ: ಇದು ಅನ್ನದ ಋಣವೆಂದು ನಟ

    ಸಿನಿಮಾ ಅನ್ನೋದು ಅದ್ಭುತ ಪ್ರತಿಕ್ರಿಯೆ. ಸಿನಿಮಾ ಪ್ರೀತಿ ಮಾಡೋರಿಗೆ ಸದಾ ಅದರದ್ದೇ ಧ್ಯಾನ. ಕನ್ನಡ ಚಿತ್ರರಂಗ ಈಗ ಭಾರತೀಯ ಚಿತ್ರರಂಗದಲ್ಲಿ ಗಟ್ಟಿ ನೆಲೆ ಕಂಡುಕೊಂಡಿದೆ. ಇಡೀ ಭಾರತೀಯ ಸಿನಿಮಾರಂಗವೇ ಹಾಗೊಮ್ಮೆ ಇತ್ತ ಕಣ್ಣಾಯಿಸುವಂತೆ ಮಾಡಿದ್ದು ಸುಳ್ಳಲ್ಲ. ಇಲ್ಲಿ ಸಿನಿಮಾ ಮಾಡೋದು ಎಷ್ಟು ಕಷ್ಟ-ಇಷ್ಟ ಅನ್ನೋದು ಅಲ್ಲಿ ಅನುಭವಿಸಿದವರಿಗಷ್ಟೇ ಗೊತ್ತು. ಸಿನಿಮಾ ಮಾಡೋದು ದೊಡ್ಡದ್ದಲ್ಲ. ಅದನ್ನು ರಿಲೀಸ್ ಮಾಡಿ, ವ್ಯಾಪಾರ ವಹಿವಾಟು ನಡೆಸೋದು ಮುಖ್ಯ. ಅದೆಷ್ಟೋ  ಸಿನಿಮಾಗಳು ತಯಾರಾಗಿ ರಿಲೀಸ್ ಅಗದೆ ಇಂದಿಗೂ ಆ ಪ್ರಯತ್ನದಲ್ಲಿವೆ. ಹಾಕಿದ ಹಣ ವಾಪಾಸ್ ಪಡೆಯೋದು ಕಷ್ಟ ಅನಿಸಿರುವ ಈ ಸಂದರ್ಭದಲ್ಲೊಂದು ಕನ್ನಡ ಸಿನಿಮಾ ನಿರ್ಮಾಪಕ, ನಿರ್ದೇಶಕರಿಗೆ ಖುಷಿಯ ಸುದ್ದಿಯೊಂದು ಹೊರಬಿದ್ದಿದೆ.

    ಹೌದು, ಕನ್ನಡದ ಸದಭಿರುಚಿಯ ಸಿನಿಮಾಗಳನ್ನು ಖರೀದಿಸಿ, ಅವುಗಳಿಗೆ ಪ್ರಚಾರವನ್ನೂ ಮಾಡಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ಮೂಲಕ ಆ ನಿರ್ಮಾಪಕರಿಗೆ ಸಾಥ್ ನೀಡುವ ಸಂಸ್ಥೆಯೊಂದು ಹುಟ್ಟುಕೊಂಡಿದೆ. ಅಂದಹಾಗೆ, ಅದು ‘ಮನೀಶ್ ಅಂಡ್ ಮಿತ್ರ ಎಂಟರ್ಟೈನ್’ ಸಂಸ್ಥೆ. ಇದು ಕನ್ನಡ ಸಿನಿ ಜಗತ್ತಿನಲ್ಲಿ ಆರಂಭಗೊಂಡ ಹೊಸ ಸಂಸ್ಥೆ. ಇದು ಕನ್ನಡದ ಹಾಸ್ಯ ನಟ ಮಿತ್ರ (Mitra) ಅವರ ಸಾರಥ್ಯದಲ್ಲಿ ಉದ್ಯಮಿ ಮನೀಶ್ ಮೆಹ್ತಾ (Manish Mehta) ಮತ್ತು ಗೆಳೆಯರು ಸೇರಿ ಮಾಡಿರುವ ಸಂಸ್ಥೆ. ‘ಮನೀಶ್ ಅಂಡ್ ಮಿತ್ರ ಎಂಟರ್ಟೈನ್ ‘ ಎಂಬ ಬ್ಯಾನರ್ ಮೂಲಕ ಸದಭಿರುಚಿಯ ಸಿನಿಮಾಗಳ ರೈಟ್ಸ್ , ಅವುಗಳ ವಿತರಣೆ, ರಿಲೀಸ್ ಹೊಣೆ ಹಾಗು ಸಿನಿಮಾ ನಿರ್ಮಾಣ ಆಗಲಿದೆ. ಪ್ರಮುಖವಾಗಿ ಈ ಸಂಸ್ಥೆಯ ಉದ್ದೇಶ, ಕಂಟೆಂಟ್ ಮತ್ತು ಗುಣಮಟ್ಟದ ಸಿನಿಮಾಗಳ ರೈಟ್ಸ್ ಪಡೆದು ರಿಲೀಸ್ ಮಾಡುವ ಕೆಲಸಕ್ಕೆ ಕೈ ಹಾಕಿದೆ. ತಯಾರಾದ ಚಿತ್ರಗಳು, ತಯಾರಾಗದೆ ಸಮಸ್ಯೆಯಲ್ಲಿರುವ ಸಿನಿಮಾಗಳಿಗೂ ಸಾಥ್ ನೀಡುವ ಕೆಲಸ ಈ ಸಂಸ್ಥೆ ಮಾಡಲು ಮುಂದಾಗಿದೆ.

    ಈಗಾಗಲೇ ನಾಗತಿಹಳ್ಳಿ (Nagatihalli Chandrasekhar) ಸಿನಿ ಕ್ರಿಯೇಷನ್ಸ್ ನಡಿ ತಯಾರಾಗಿರುವ ‘ ಡೈಮಂಡ್ ಕ್ರಾಸ್’ (Diamond Cross) ಎಂಬ ಜಾಕಿಚಾನ್ ಮಾದರಿಯ ಕನ್ನಡದ ಆಕ್ಷನ್ ಸಿನಿಮಾವೊಂದರ ರೈಟ್ಸ್ ಪಡೆದು ರಿಲೀಸ್ ಮಾಡಲು ಮುಂದಾಗಿದೆ. ಇದರೊಂದಿಗೆ ಇನ್ನೂ ಹನ್ನೊಂದು ಸಿನಿಮಾಗಳ ರೈಟ್ಸ್ ಪಡೆದು ರಿಲೀಸ್ ಮಾಡುವ ತಯಾರಿಯಲ್ಲಿದೆ. ‘ಡೈಮಂಡ್ ಕ್ರಾಸ್’ ಚಿತ್ರವನ್ನು ನಾಗತಿಹಳ್ಳಿ ಅವರ ಅಕ್ಕನ ಮಗ ರಾಮ್ ದೀಪ್ ನಿರ್ದೇಶನ ಮಾಡಿದ್ದಾರೆ. ಉತ್ತರ ಕರ್ನಾಟಕದ ಪ್ರತಿಭೆ ಧ್ರುವ , ರೋಜರ್ ನಾರಾಯಣ್ ಸೇರಿದಂತೆ ಹಲವರು ಸಿನಿಮಾದಲ್ಲಿದ್ದಾರೆ. ಕನ್ನಡಕ್ಕೆ ಈ ರೀತಿಯ ಒಂದು ಫ್ಲಾಟ್ ಫಾರಂ ಕೊರತೆ ಇತ್ತು. ಅದನ್ನು ಮನೀಶ್ ಅಂಡ್ ಮಿತ್ರ ಎಂಟರ್ಟೈನ್ ಸಂಸ್ಥೆ ದೊಡ್ಡ ಪ್ರಯತ್ನಕ್ಕೆ ಮುಂದಾಗಿದೆ. ಇದನ್ನೂ ಓದಿ:ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

    ಈಗ ಸಿನಿಮಾ ಮಾಡಿ ರಿಲೀಸ್ ಮಾಡೋದು ಕಷ್ಟ ಸಾಧ್ಯ. ಅದರಲ್ಲೂ ಹಾಕಿದ ಬಂಡವಾಳ ಹಿಂದಕ್ಕೆ ಬಂದರೆ ಅದೇ ಗೆಲುವು. ಇಂತಹದರಲ್ಲಿ ಹೊಸಬರ ಕಂಟೆಂಟ್ ಸಿನಿಮಾಗಳು ಬಿಡುಗಡೆಗೆ, ವ್ಯಾಪಾರಕ್ಕೆ ಅಲೆದಾಡುವ ಸ್ಥಿತಿ ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಈ ಸಂಸ್ಥೆ ಸಿನಿಮಾಗಳ ಖರೀದಿಸಿ, ಬಿಡುಗಡೆ ಮಾಡುವ ಉದ್ದೇಶ ಹೊಂದಿದೆ. ಇನ್ನು, ಎಲ್ಲಾ ಸಿನಿಮಾಗಳ ರೈಟ್ಸ್ ಅಸಾಧ್ಯ. ಇಲ್ಲೂ ಕೆಲ ಮಾನದಂಡಗಳಿವೆ. ಸಂಸ್ಥೆಯ ಮುಖ್ಯಸ್ಥ ಮನೀಶ್ ಅವರು ಹೇಳುವಂತೆ, ಸದಭಿರುಚಿಯ ಸಿನಿಮಾಗಳನ್ನು ಖರೀದಿಸಿ, ಅವರ ಸಿನಿಮಾಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ನಟ ಮಿತ್ರ ಅವರು ಸಿನಿಮಾ ವೀಕ್ಷಿಸಿ, ಅದರ ಕಂಟೆಂಟ್ ಹಾಗು ಕ್ವಾಲಿಟಿ ಪರಿಶೀಲಿಸಿ, ಅದು ಚೆನ್ನಾಗಿದೆ ಎಂದು ಸರ್ಟಿಫಿಕೇಟ್ ಕೊಟ್ಟ ಬಳಿಕವೇ ಆ ಸಿನಿಮಾ ರೈಟ್ಸ್ ಇತ್ಯಾದಿ ಬಗ್ಗೆ ಅಂತಿಮಗೊಳಿಸಲಾಗುತ್ತದೆ ಎನ್ನುತ್ತಾರೆ.

    ಮಿತ್ರ ಅವರ ಪ್ರಕರ, ಈ ವೇದಿಕೆ ಹುಟ್ಟುಹಾಕಿದ್ದೇ, ಹೊಸ ಪ್ರತಿಭೆಗಳಿಗಂತೆ. ಸಿನಿಮಾ ಮಾಡಿ ರಿಲೀಸ್ ಮಾಡಲಾಗದೆ, ವ್ಯಾಪಾರ ಮಾಲಾಗದೆ ಅಸಹಾಯಕರಾಗುವ ನಿರ್ಮಾಪಕರಿಗೆ ಸಾಥ್ ನೀಡಬೇಕೆಂಬ ಉದ್ದೇಶದಿಂದ. ಅದೀಗ ಸಾಕಾರವಾಗುತ್ತಿದೆ. ಈ ವೇದಿಕೆ ಮೂಲಕ ಕನ್ನಡದ ಒಂದಷ್ಟು ಪ್ರತಿಭಾವಂತರನ್ನು ಗಟ್ಟಿಗೊಳಿಸುವ ಸಣ್ಣ ಪ್ರಯತ್ನ ನಮ್ಮದು ಎನ್ನುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ನೀನಾಸಂ ಮಂಜು ‘ಕನ್ನೇರಿ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ನಾಗತಿಹಳ್ಳಿ ಚಂದ್ರಶೇಖರ್

    ನೀನಾಸಂ ಮಂಜು ‘ಕನ್ನೇರಿ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ನಾಗತಿಹಳ್ಳಿ ಚಂದ್ರಶೇಖರ್

    ‘ಮೂಕಹಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನೀನಾಸಂ ಮಂಜು ಮತ್ತೊಂದು ಚಿತ್ರ ಕೈಗೆತ್ತಿಕೊಂಡು ಚಿತ್ರೀಕರಣವನ್ನೂ ಕಂಪ್ಲೀಟ್ ಮಾಡಿದ್ದಾರೆ. ಆ ಚಿತ್ರದ ಹೆಸರೇ ‘ಕನ್ನೇರಿ’. ನೈಜ ಘಟನೆ ಆಧಾರಿತ ಈ ಚಿತ್ರ ಫಸ್ಟ್ ಲುಕ್ ಮೂಲಕ ಪ್ರೇಕ್ಷಕರೆದುರು ಬಂದಿದೆ. ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ‘ಕನ್ನೇರಿ’ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ‘ಕನ್ನೇರಿ’ ಮಹಿಳಾ ಪ್ರಧಾನ ಚಿತ್ರ. ಚಿತ್ರಕ್ಕೆ ನೈಜ ಘಟನೆಯೇ ಪ್ರೇರಣೆ ಎನ್ನುತ್ತಾರೆ ನಿರ್ದೇಶಕ ನೀಸಾಸಂ ಮಂಜು. ಅದು ಬೇರಾವ ಘಟನೆ ಅಲ್ಲ ಕೊಡಗಿನಲ್ಲಿ ಭಾರೀ ಸದ್ದು ಮಾಡಿದ್ದ ದಿಡ್ಡಳ್ಳಿ ಸಂತ್ರಸ್ತರ ಹೋರಾಟ. ಈ ಹೋರಾಟದ ಜೊತೆ ಕ್ಷೀರಸಾಗರ ಅವರ ‘ಜೇನು: ಆಕಾಶದ ಅರಮನೆ’ ಕಾದಂಬರಿ ಎಳೆಯನ್ನು ಆಧಾರವಾಗಿ ಇಟ್ಟುಕೊಳ್ಳಲಾಗಿದೆ. ಚಿತ್ರಕ್ಕೆ ಕಥೆಯ ಜವಾಬ್ದಾರಿಯನ್ನು ಕೋಟಿಗಾನಹಳ್ಳಿ ರಾಮಯ್ಯ ವಹಿಸಿಕೊಂಡಿದ್ರೆ, ಚಿತ್ರಕಥೆ ಹಾಗೂ ನಿರ್ದೇಶನದ ನೊಗವನ್ನು ನೀನಾಸಂ ಮಂಜು ಹೊತ್ತಿದ್ದಾರೆ. ಇದನ್ನೂ ಓದಿ: ತನ್ನ ವಿರುದ್ಧ ಟೀಕೆ ಮಾಡುತ್ತಿರೋರಿಗೆ ಸ್ಟ್ರಾಂಗ್ ಉತ್ತರ ಕೊಟ್ಟ ಸಮಂತಾ

    ಪ್ರಕೃತಿಯ ಮಡಿಲಲ್ಲಿ ಬದುಕು ಕಟ್ಟಿಕೊಂಡಿದ್ದ ಬುಡಕಟ್ಟು ಜನಾಂಗವನ್ನು ಒಕ್ಕಲೆಬ್ಬಿಸಿದ ನಂತರ ಏನಾಯಿತು? ಅಲ್ಲಿನ ಹೆಣ್ಣು ಮಕ್ಕಳು ಹೇಗೆ ದೌರ್ಜನ್ಯಕ್ಕೆ ಒಳಗಾಗುತ್ತಾರೆ, ಅವರ ಬದುಕು ಯಾವೆಲ್ಲ ತಿರುವು ಪಡೆಯುತ್ತೆ ಎಂಬ ಹೋರಾಟದ ಕಥೆ ಹೊಂದಿರುವ ಈ ಚಿತ್ರಕ್ಕೆ ಅರ್ಚನಾ ಮಧುಸೂಧನ್ ಮುಖ್ಯಭೂಮಿಕೆಯಲ್ಲಿ ಜೀವ ತುಂಬಿದ್ದಾರೆ. ಚಿತ್ರದ ತಾರಾಗಣದಲ್ಲಿ ಅನಿತಾ ಭಟ್, ಅರುಣ್ ಸಾಗರ್, ಎಂ.ಕೆ.ಮಠ, ಕರಿಸುಬ್ಬು ಒಳಗೊಂಡಂತೆ ಹಲವು ಪ್ರತಿಭಾನ್ವಿತ ಕಲಾವಿದರು ಜೊತೆಯಾಗಿದ್ದಾರೆ.

    ನೈಜತೆಗೆ ಹೆಚ್ಚು ಒತ್ತು ನೀಡಿರುವ ಚಿತ್ರತಂಡ ಬುಡಕಟ್ಟು ಜನರನ್ನೂ ಕೂಡ ಚಿತ್ರದಲ್ಲಿ ತೊಡಗಿಸಿಕೊಂಡಿದೆ. ಬೆಂಗಳೂರು, ಎಚ್.ಡಿ.ಕೋಟೆ, ಕೋಲಾರ ಸೇರಿದಂತೆ ಹಲವು ಭಾಗಗಳಲ್ಲಿ ಸಿನಿಮಾ ಸೆರೆ ಹಿಡಿಯಲಾಗಿದೆ. ಗಣೇಶ್ ಹೆಗ್ಡೆ ಕ್ಯಾಮೆರಾ ವರ್ಕ್, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸುಜಿತ್ ನಾಯಕ್ ಸಂಕಲನ ಚಿತ್ರಕ್ಕಿದೆ. ಸದ್ಯ ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ‘ಕನ್ನೇರಿ’ ಚಿತ್ರತಂಡ ಫಸ್ಟ್ ಲುಕ್ ಬಿಡುಗಡೆ ಮೂಲಕ ಪ್ರಚಾರ ಕಾರ್ಯ ಆರಂಭಿಸಿದೆ. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಮೊದಲೇ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಪ್ರಭಾಸ್

  • ಪುರುಷರಿಗೆ ಇಲ್ಲದ ಸೂಕ್ಷ್ಮತೆ ಮಹಿಳೆಯರಿಗಿದೆ: ನಾಗತಿಹಳ್ಳಿ ಚಂದ್ರಶೇಖರ್

    ಪುರುಷರಿಗೆ ಇಲ್ಲದ ಸೂಕ್ಷ್ಮತೆ ಮಹಿಳೆಯರಿಗಿದೆ: ನಾಗತಿಹಳ್ಳಿ ಚಂದ್ರಶೇಖರ್

    ಮಂಡ್ಯ: ಪುರುಷರಿಗೆ ಇಲ್ಲದ ಸೂಕ್ಷ್ಮತೆ ಮಹಿಳೆಯರಿಗಿದೆ. ಹೀಗಾಗಿ ಹೆಣ್ಣು ಮಕ್ಕಳು ಇಂದು ಎಲ್ಲ ಕ್ಷೇತ್ರಗಳನ್ನು ಆವರಿಸಿಕೊಂಡಿದ್ದಾರೆ ಎಂದು ಚಲನಚಿತ್ರ ನಿರ್ದೇಶಕ ಹಾಗೂ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟರು.

    ಮಂಡ್ಯದ ಕರ್ನಾಟಕ ಸಂಘದ ಕೆವಿಎಸ್ ಭವನದಲ್ಲಿ ಕರ್ನಾಟಕ ಸಂಘ ಹಾಗೂ ಚಿರಂತ ಪ್ರಕಾಶನದಿಂದ ಡಾ.ಸುಮಾರಾಣಿಶಂಭು ಅವರ ಮೂರು ಕೃತಿಗಳ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಎಂತಹದ್ದೇ ಅಡೆತಡೆಗಳ ನಡುವೆಯೂ ಸಾಧಿಸುವ ಛಲ ಹೊಂದಿದ್ದಾರೆ. ಪೈಲೆಟ್, ಶಿಕ್ಷಕಿ, ಸಂಶೋಧಕಿಯಾಗಿಯೂ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಚೈತನ್ಯ ಕ್ರಿಯಾಶೀಲರಾಗಿರುತ್ತಾರೆ. ಅಧಿಕಾರ ವಿಕೇಂದ್ರೀಕರಣ ಗ್ರಾಮ ಪಂಚಾಯತಿ ಬಂದ ನಂತರ ಹೆಣ್ಣು ಮಕ್ಕಳು ಪ್ರಚುರವಾದ ತೊಡಗಿದರು. ಅವರಿಗೆ ಅಸ್ಮಿತೆ ಮತ್ತು ಮಾತನಾಡುವ ಶಕ್ತಿ ಬಂತು ಎಂದು ತಿಳಿಸಿದರು.

    ಹೈನುಗಾರಿಕೆ ಪ್ರತಿನಿತ್ಯ ಆರ್ಥಿಕ ಶಕ್ತಿ ತುಂಬುವ ಉದ್ಯಮವಾಗಿದೆ. ಹೆಣ್ಣು ಮಕ್ಕಳು ಕೂಡ ಇದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಹಳ್ಳಿ ಹೆಣ್ಣು ಮಕ್ಕಳು ಎಷ್ಟೋ ನೋವುಗಳು ಇದ್ದರೂ ಅದನ್ನು ತಾಳಿಕೊಂಡೇ ಬದುಕುತ್ತಾರೆ. ದುಃಖ ದುಮ್ಮಾನಗಳ ನಡುವೆಯೇ ಬದುಕು ನಡೆಸುತ್ತಾರೆ. ತಮ್ಮ ಭಾವನೆಗಳನ್ನು ಹೊರ ಹಾಕಲು ಹಿಂಜರಿಯುತ್ತಾರೆ. ಪುರುಷ ಜಗತ್ತು ಕಿವುಡತ್ವ, ಅಂಧತ್ವ, ಜಡತ್ವ ಹೊಂದಿದ್ದು, ಸ್ತ್ರಿಯನ್ನು ಎರಡನೇ ದರ್ಜೆ ಎಂದು ಹೇಳುವ ನಾವು ಮತ್ತೊಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಪುರುಷರು ಹೆಣ್ಣು ಮಕ್ಕಳನ್ನೇ ಕೇಂದ್ರವಾಗಿಟ್ಟುಕೊಂಡು ಏಕೆ ಬೈಗುಳಗಳನ್ನು ಸೃಷ್ಟಿಸಿಕೊಂಡಿದ್ದಾರೆ. ಬದಲಾದ ಕಾಲದಲ್ಲಿ ಇಂಥ ಸೂಕ್ಷ್ಮ ವಿಚಾರಗಳ ಬಗ್ಗೆ ಯೋಚಿಸಬೇಕು ಎಂದರು.

  • ಆರೋಗ್ಯ ಸರಿ ಇದ್ದಿದ್ದರೆ ಕನ್ನಡದಲ್ಲೂ ನಟಿಸಲಿದ್ದರು ಇರ್ಫಾನ್

    ಆರೋಗ್ಯ ಸರಿ ಇದ್ದಿದ್ದರೆ ಕನ್ನಡದಲ್ಲೂ ನಟಿಸಲಿದ್ದರು ಇರ್ಫಾನ್

    ಬೆಂಗಳೂರು: ಆರೋಗ್ಯ ಸರಿ ಇದ್ದಿದ್ದರೆ ಇಂದು ಮೃತರಾದ ಬಾಲಿವುಡ್ ನಟ ಇರ್ಫಾನ್ ಖಾನ್ ಅವರು ಕನ್ನಡದಲ್ಲೂ ನಟಿಸುತ್ತಿದ್ದರು ಎಂಬ ಮಾಹಿತಿಯನ್ನು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ನೀಡಿದ್ದಾರೆ.

    ಬಹಳ ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರತಿಭಾನ್ವಿತ ನಟ ಇರ್ಫಾನ್ ಖಾನ್ ಅವರು, ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆದರೆ ಅವರು ಆರೋಗ್ಯ ಸರಿ ಇದ್ದಿದ್ದರೆ ಅವರು ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದರು ಎಂದು ನಾಗತಿಹಳ್ಳಿ ಚಂದ್ರಶೇಖರ್ ಅವರು ಟ್ವೀಟ್ ಮಾಡಿದ್ದಾರೆ.

    ಇರ್ಫಾನ್ ಸಾವಿನ ಸುದ್ದಿ ಕೇಳಿ ಟ್ವೀಟ್ ಮಾಡಿರುವ ನಾಗತಿಹಳ್ಳಿ ಚಂದ್ರಶೇಖರ್, ಐದು ವರ್ಷದ ಹಿಂದೆಯೇ ನಾನು ಕನ್ನಡ ಸಿನಿಮಾರಂಗಕ್ಕೆ ಇರ್ಫಾನ್ ಅವರನ್ನು ಕರೆತರುವ ಪ್ರಯತ್ನವನ್ನು ಮಾಡಿದ್ದೆ. ಆದರೆ ಅವರು ಅಂದೇ ನನಗೆ ಆರೋಗ್ಯ ಸಮಸ್ಯೆಯಿದೆ ನನಗೆ ಅಭಿನಯಿಸಲು ಆಗುವುದಿಲ್ಲ ಎಂದು ಹೇಳಿದ್ದರು. ಬಿಗ್‍ಬಿ ಅಮಿತಾಬ್ ಬಚ್ಚನ್ ನಂತರ ನಾನು ಇರ್ಫಾನ್ ಅವರನ್ನು ಕನ್ನಡಕ್ಕೆ ತರಬೇಕು ಎಂಬ ಆಸೆ ಹೊಂದಿದ್ದೆ. ಅವರ ಕುಟುಂಬಕ್ಕೆ ದೇವರ ಅವರ ಸಾವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

    ಕನ್ನಡದಲ್ಲಿ ವಿಶಿಷ್ಟವಾದ ಚಿತ್ರಗಳನ್ನು ತಯಾರಿಸುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು, ಈ ಹಿಂದೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರನ್ನು ಕನ್ನಡ ಸಿನಿಮಾದಲ್ಲಿ ನಟಿಸುವಂತೆ ಮಾಡಿದ್ದರು. ಇದಾದ ಬಳಿಕ ಅವರು, ಬಾಹ್ಯಾಕಾಶದ ಕಥೆಯೊಂದಕ್ಕೆ ಇರ್ಫಾನ್ ಅವರನ್ನು ಕನ್ನಡಕ್ಕೆ ಕರೆತರಲು ಯತ್ನಿಸಿದ್ದರು. ಕಥೆ ಕೇಳಿ ಇಷ್ಟಪಟ್ಟಿದ್ದ ಇರ್ಫಾನ್ ನನಗೆ ಆರೋಗ್ಯ ಸಮಸ್ಯೆ ಇದೆ ಮಾಡಲು ಆಗುವುದಿಲ್ಲ ಎಂದು ಹೇಳಿದ್ದರಂತೆ.

    ಬಾಲಿವುಡ್‍ನಲ್ಲಿ ಹೀರೋ ಮತ್ತು ಪೋಷಕ ನಟ ಯಾವುದೇ ರೀತಿಯ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಇರ್ಫಾನ್ ಅವರು, ಹಾಲಿವುಡ್‍ನಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. 1988ರಲ್ಲಿ ತೆರೆಕಂಡ ಸಲಾಮ್ ಬಾಂಬೆ ಎಂಬ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಇರ್ಫಾನ್ ನಂತರ ನೂರಾರು ಸಿನಿಮಾದಲ್ಲಿ ನಟಿಸಿ ತನ್ನದೇ ಆದ ಅಭಿಮಾನಿಗಳನ್ನು ಗಳಿಸಿದ್ದರು. ಜೊತೆಗೆ ಇವರಿಗೆ 2011ರಲ್ಲಿ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿತ್ತು.

    ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಅಸ್ಪತ್ರೆಯ ಐಸಿಯುನಲ್ಲಿ ಇರ್ಫಾನ್ ಖಾನ್ ಚಿಕಿತ್ಸೆ ಪಡೆಯುತ್ತಿದ್ದರು. ಈ ಕುರಿತು ಮಾಹಿತಿ ನೀಡಿದ್ದ ವೈದ್ಯಾಧಿಕಾರಿಗಳು, ಕೊಲೊನ್ ಇನ್‍ಫೆಕ್ಷನ್‍ನಿಂದಾಗಿ ಇರ್ಫಾನ್ ಅವರನ್ನು ಅಬ್ಸರ್ವೇಶನ್‍ನಲ್ಲಿ ಇಡಲಾಗಿದೆ ಎಂದು ಮಾಹಿತಿ ನೀಡಿದ್ದರು. ಆದರೆ ಇಂದು ಅವರು ಚಿಕಿತ್ಸೆ ಫಲಿಸದೆ ತನ್ನ 53ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ.

    ಇರ್ಫಾನ್ ಅವರಿಗೆ ನ್ಯೂರೋಎಂಡೋಕ್ರೈನ್ ಗಡ್ಡೆ ಇರುವುದು 2018ರಲ್ಲೇ ತಿಳಿದಿತ್ತು. ಇದಕ್ಕಾಗಿ ಅವರು ವಿದೇಶದಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಶನಿವಾರ ಅವರ ತಾಯಿ ಸಾಯಿಬಾ ಬೇಗಂ ಅವರನ್ನು ಕಳೆದುಕೊಂಡಿದ್ದ ಅವರು ವಿಡಿಯೋ ಕಾಲ್ ಮೂಲಕ ಅವರಿಗೆ ಅಂತಿಮ ನಮನ ಸಲ್ಲಿಸಿದ್ದರು. ಆದರೆ ಇಂದು ಅವರು ಮೃತಪಟ್ಟಿದ್ದಕ್ಕೆ ಇಡೀ ಭಾರತ ಚಿತ್ರರಂಗವೇ ಕಂಬನಿ ಮಿಡಿದಿದೆ.