Tag: ನಾಗಮೋಹನ್ ದಾಸ್

  • ಕ್ಯಾಬಿನೆಟ್‌ನಲ್ಲಿ ನ್ಯಾ.ನಾಗಮೋಹನ್ ದಾಸ್ ವರದಿ ಮಂಡನೆ – ಆ.16ಕ್ಕೆ ವಿಶೇಷ ಸಂಪುಟ ಸಭೆ

    ಕ್ಯಾಬಿನೆಟ್‌ನಲ್ಲಿ ನ್ಯಾ.ನಾಗಮೋಹನ್ ದಾಸ್ ವರದಿ ಮಂಡನೆ – ಆ.16ಕ್ಕೆ ವಿಶೇಷ ಸಂಪುಟ ಸಭೆ

    ಬೆಂಗಳೂರು: ಒಳಮೀಸಲಾತಿ (Internal Reservation) ವರ್ಗೀಕರಣ ಸಂಬಂಧ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾ.ನಾಗಮೋಹನ್ ದಾಸ್ (Nagmohan Das) ವರದಿ ಸಂಪುಟದಲ್ಲಿ ಮಂಡನೆಯಾಗಿದೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ದೆಹಲಿ ನಂತರದ ದೊಡ್ಡ ಮೆಟ್ರೋ ಸಂಚಾರ ಜಾಲ: ತೇಜಸ್ವಿ ಸೂರ್ಯ

    ಕ್ಯಾಬಿನೆಟ್‌ನಲ್ಲಿ ವರದಿ ಸ್ವೀಕಾರ ಮಾಡಿ ಯಾವುದೇ ಚರ್ಚೆ ನಡೆಸದೇ ಎಲ್ಲ ಸಚಿವರಿಗೂ ವರದಿ ಪ್ರತಿ ನೀಡಲು ಸೂಚಿಸಲಾಗಿದೆ. ಅಲ್ಲದೆ ಆ.16ರಂದು ವಿಶೇಷ ಸಂಪುಟ ಸಭೆ ಕರೆದಿದ್ದು, ಆ ಸಭೆಯಲ್ಲಿ ಮೀಸಲಾತಿ ಸಂಬಂಧ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

    ಸಂಪುಟ ಸಭೆಯಲ್ಲಿ ಮಂಡನೆಯಾದ ನ್ಯಾ.ನಾಗಮೋಹನ್ ದಾಸ್ ಶಿಫಾರಸ್ಸಿನ ಪ್ರಕಾರ 5 ವರ್ಗಗಳನ್ನ ಗುರುತಿಸಿದ್ದು, ಪ್ರವರ್ಗ ಎ ವರ್ಗಕ್ಕೆ 1% ಮೀಸಲಾತಿ, ಪ್ರವರ್ಗ ಬಿ (ಎಡ)ಗೆ 6% ಮೀಸಲಾತಿ, ಪ್ರವರ್ಗ ಸಿ(ಬಲ)ಗೆ 5%, ಪ್ರವರ್ಗ ಡಿಗೆ 4%, ಪ್ರವರ್ಗ ಇಗೆ 1% ಮೀಸಲಾತಿಗೆ ಶಿಫಾರಸು ಮಾಡಲಾಗಿದೆ. ಆದರೆ ಈ ವಿಚಾರದಲ್ಲಿ ಸಂಪುಟದ ಎಸ್‌ಸಿ ಸಮುದಾಯದ ಸಚಿವರಲ್ಲೇ ಭಿನ್ನಾಭಿಪ್ರಾಯ ಇದೆ ಎನ್ನಲಾಗಿದ್ದು, ಸಿದ್ದರಾಮಯ್ಯ ಅಡಕತ್ತರಿಯಲ್ಲಿ ಸಿಲುಕಿದ್ದಾರೆ.ಇದನ್ನೂ ಓದಿ: ತಂಗಿಯ ಸೀಮಂತಕ್ಕೆ ಬಂದಿದ್ದ ಅಕ್ಕನಿಗೆ ಬಸ್ಸಿನಿಂದ ಇಳಿಯುವಾಗ ಕಾರು ಡಿಕ್ಕಿ – ರಕ್ತಸ್ರಾವದಿಂದ ಸಾವು

  • 1766 ಪುಟಗಳ  ಮೀಸಲಾತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

    1766 ಪುಟಗಳ ಮೀಸಲಾತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

    ಬೆಂಗಳೂರು: ಬಹುನಿರೀಕ್ಷಿತ ಒಳ ಮೀಸಲಾತಿ (Internal Reservation) ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಆಯೋಗದ ಅಧ್ಯಕ್ಷ ನ್ಯಾ.ನಾಗಮೋಹನ್ ದಾಸ್ (Justice Nagamohan Das) ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯಗೆ 1,766 ಪುಟಗಳ ವರದಿ ಸಲ್ಲಿಕೆ ಮಾಡಿದ್ದಾರೆ.

    ಬಳಿಕ ಪ್ರತಿಕ್ರಿಯೆ ನೀಡಿದ ನ್ಯಾ.ನಾಗಮೋಹನ್ ದಾಸ್, ನಮ್ಮ ಆಯೋಗ ಮೊದಲು ಮಧ್ಯಂತರ ವರದಿ ಕೊಟ್ಟಿತ್ತು. ಆದಾದ ಬಳಿಕ ಸಮೀಕ್ಷೆ ಮಾಡಲು ಕ್ಯಾಬಿನೆಟ್ (Cabinet) ಒಪ್ಪಿಗೆ ಕೊಟ್ಟಿತ್ತು. 60 ದಿನ ಸಮೀಕ್ಷೆ ಮಾಡಿದ್ದೇವೆ. ಮೊಬೈಲ್ ಆಪ್ ಬಳಸಿ ಸಮೀಕ್ಷೆ ಮಾಡಲಾಗಿದೆ. 27 ಲಕ್ಷಕ್ಕೂ ಹೆಚ್ಚು ಕುಟುಂಬಗಳು 1.07 ಕೋಟಿಗೂ ಹೆಚ್ಚು ಜನರ ಸಮೀಕ್ಷೆ ಮಾಡಲಾಗಿದೆ ಎಂದರು. ಇದನ್ನೂ ಓದಿ: ಎಡ ಸಮುದಾಯಕ್ಕೆ 7% ಒಳಮೀಸಲಾತಿ ಕೊಡಬೇಕು – ಆಂಜನೇಯ

    ಸಿಎಂ ಸಿದ್ದರಾಮಯ್ಯ ಮಾತನಾಡಿ, ಒಳ ಮೀಸಲಾತಿ ರಿಪೋರ್ಟ್ ಕೊಟ್ಟಿದ್ದಾರೆ. ಆಗಸ್ಟ್ 7ರಂದು ನಡೆಯುವ ಕ್ಯಾಬಿನೆಟ್‌ನಲ್ಲಿ ವರದಿ ಮಂಡಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಯಾರೂ ಆರೋಪ ಮಾಡಿಲ್ಲ. ಸಮಿಕ್ಷೆಯನ್ನ, ವರದಿಯನ್ನು ಯಾರೂ ವಿರೋಧ ಮಾಡಿಲ್ಲ ಎಂದು ಹೇಳಿದರು.

  • ಒಳಮೀಸಲಾತಿ ಮಧ್ಯಂತರ ವರದಿ ಸಲ್ಲಿಕೆ – 104 ಪುಟಗಳ ವರದಿ ಸಿಎಂಗೆ ಹಸ್ತಾಂತರ ಮಾಡಿದ ಆಯೋಗ

    ಒಳಮೀಸಲಾತಿ ಮಧ್ಯಂತರ ವರದಿ ಸಲ್ಲಿಕೆ – 104 ಪುಟಗಳ ವರದಿ ಸಿಎಂಗೆ ಹಸ್ತಾಂತರ ಮಾಡಿದ ಆಯೋಗ

    ಬೆಂಗಳೂರು: ಒಳಮೀಸಲಾತಿ (Internal Reservation) ಸಂಬಂಧ ಸರ್ಕಾರ ರಚನೆ ಮಾಡಿದ್ದ ಆಯೋಗ ಇಂದು ಸಿಎಂ ಸಿದ್ದರಾಮಯ್ಯಗೆ (Siddaramaiah) ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. ಆಯೋಗದ ಅಧ್ಯಕ್ಷ ನ್ಯಾ‌.ನಾಗಮೋಹನದಾಸ್ ಸಿಎಂ ಸಿದ್ದರಾಮಯ್ಯಗೆ ವಿಧಾನಸೌಧದಲ್ಲಿ ವರದಿ ಸಲ್ಲಿಕೆ ಮಾಡಿದರು. ಸುಮಾರು 104 ಪುಟಗಳ ವರದಿ ಇದಾಗಿದೆ.

    ವರದಿ ಸಲ್ಲಿಕೆ ಬಳಿಕ ಆಯೋಗ ಅಧ್ಯಕ್ಷ ನ್ಯಾ.ನಾಗಮೋಹನದಾಸ್  (Nagamohan Das) ಮಾತನಾಡಿ, ಎರಡು ತಿಂಗಳಿಗಿಂತ ಹೆಚ್ಚು ಕಾಲ ಆಳವಾದ ಅಧ್ಯಯನ ಮಾಡಿ ವರದಿ ಕೊಡಲಾಗಿದೆ. 104 ಪುಟಗಳ ವರದಿ ನೀಡಲಾಗಿದೆ. ಇದು ತರಾತುರಿಯಲ್ಲಿ ಕೊಟ್ಟಿರುವ ವರದಿಯಲ್ಲ, ಸರ್ಕಾರ ವರದಿ ಕೇಳಿರಲಿಲ್ಲ. ನಾವೇ ಸರ್ಕಾರಕ್ಕೆ ಮಧ್ಯಂತರ ವರದಿ ಕೊಟ್ಟಿದ್ದೇವೆ. ಸರ್ಕಾರ ಏನ್ ತೀರ್ಮಾನ ಮಾಡುತ್ತೋ ನೋಡೋಣ ಎಂದರು. ಇದನ್ನೂ ಓದಿ: Uttar Pradesh | ಪತ್ನಿಯ ಅಕ್ರಮ ಸಂಬಂಧ ತಿಳಿದು ಪ್ರಿಯಕರನೊಂದಿಗೇ ಮದ್ವೆ ಮಾಡಿಸಿದ ಪತಿ

    ಮಧ್ಯಂತರ ವರದಿ ಮೀಸಲಾತಿ ಕೊಡಲು ವಿಳಂಬ ಧೋರಣೆ ಮಾಡೋಕೆ ಅಲ್ಲ. ಶಾಶ್ವತ ಪರಿಹಾರ ಕೊಡೋದು ನಮ್ಮ ಇಚ್ಚೆ. ಈ ನಿಟ್ಟಿನಲ್ಲಿ ವರದಿ ಕೊಡಲಾಗಿದೆ. ಮಧ್ಯಂತರ ವರದಿ ಕೊಟ್ಟಿದ್ದೇನೆ‌. ಸರ್ಕಾರ ಏನ್ ಕ್ರಮ ತೆಗೆದುಕೊಳ್ಳುತ್ತೋ ನೋಡೋಣ. ಮಧ್ಯಂತರ ವರದಿಯಲ್ಲಿ ಏನಿದೆ ಅಂತ ನಾನು ಹೇಳೋಕೆ ಆಗೊಲ್ಲ. ಸರ್ಕಾರ ಏನ್ ಮಾಡುತ್ತೆ ಅಂತ ಸರ್ಕಾರವನ್ನ ಕೇಳಿ ಎಂದರು. ಇದನ್ನೂ ಓದಿ: ಯತ್ನಾಳ್‌ ಉಚ್ಛಾಟನೆ ಬೆನ್ನಲ್ಲೇ ಬಿಜೆಪಿಯ ಮತ್ತೊಬ್ಬ ಮುಖಂಡ ರಾಜೀನಾಮೆ – ಬೆಂಬಲಿಗರಿಂದ ಪ್ರತಿಭಟನೆಗೆ ಸಜ್ಜು!

  • ಒಳಮೀಸಲಾತಿ, ವಾರದೊಳಗೆ ನಾಗಮೋಹನ್ ದಾಸ್ ಮಧ್ಯಂತರ ವರದಿ: ಮಹದೇವಪ್ಪ

    ಒಳಮೀಸಲಾತಿ, ವಾರದೊಳಗೆ ನಾಗಮೋಹನ್ ದಾಸ್ ಮಧ್ಯಂತರ ವರದಿ: ಮಹದೇವಪ್ಪ

    ಬೆಂಗಳೂರು: ಪರಿಶಿಷ್ಠ ಜಾತಿಗಳಲ್ಲಿ ಒಳಮೀಸಲಾತಿ (Internal Reservation) ಕಲ್ಪಿಸುವ ವಿಚಾರವಾಗಿ ಇಂದು‌‌ ಮಹತ್ವದ ಸಭೆ ನಡೆಯಿತು. ‌ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ (Nagamohan Das) ಹಾಜರಿದ್ದರು.

    ಸಚಿವರಾದ ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ ಭಾಗಿಯಾಗಿದರು. ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಮಧ್ಯಂತರ ವರದಿ ನೀಡುವ ಬಗ್ಗೆ ಚರ್ಚೆ ನಡೆಯಿತು. ಸಭೆ ಬಳಿಕ‌ ದಲಿತ ಸಮುದಾಯದ ಪಂಚ ಸಚಿವರು ಸುದ್ದಿಗೋಷ್ಠಿ ನಡೆಸಿ‌ ಒಳ ಮೀಸಲಾತಿ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಒಗ್ಗಟ್ಟು ಪ್ರದರ್ಶಿಸಿದರು. ಇದನ್ನೂ ಓದಿ: ರೀಲ್ಸ್ ತಂದ ಸಂಕಷ್ಟ: ರಜತ್ ಬದಲು ವಿಚಾರಣೆಗೆ ಹಾಜರಾದ ಪತ್ನಿ ಅಕ್ಷಿತಾ

     

    ಸಚಿವ ಹೆಚ್.ಸಿ.ಮಹದೇವಪ್ಪ‌ (Mahadevappa) ಮಾತನಾಡಿ, ಒಳ‌ಮೀಸಲಾತಿ ಬಗ್ಗೆ ವಾರದಲ್ಲಿ ನಾಗಮೋಹನ್ ದಾಸ್ ಆಯೋಗ ಮಧ್ಯಂತರ ವರದಿ ಕೊಡುತ್ತಾರೆ. ಮಧ್ಯಂತರ ವರದಿ ಬಳಿಕ ಒಳಮೀಸಲಾತಿ ಜಾರಿ ತೀರ್ಮಾನ ಮಾಡುವುದಾಗಿ ಹೇಳಿದರು.

    ಒಳಮೀಸಲಾತಿಯಾಗುವ ತನಕ ಯಾವುದೇ ಹೊಸ ನೇಮಕ, ಬಡ್ತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಸರ್ಕಾರ ಒಳ ಮೀಸಲಾತಿ ಜಾರಿಗೆ ಬದ್ಧವಾಗಿದೆ, ಮಧ್ಯಂತರ ವರದಿ ಕೊಟ್ಟ ಬಳಿಕ‌ ಮತ್ತೆ ಸಿಎಂ ‌ಜೊತೆ ಸಭೆ ಸೇರಿ ತೀರ್ಮಾನ ಮಾಡುವುದಾಗಿ ಹೇಳಿದರು.

     

  • 40% ಕಮಿಷನ್‌ ಆರೋಪ – ನ್ಯಾ. ನಾಗಮೋಹನ ದಾಸ್ ವಿಚಾರಣಾ ಆಯೋಗದಿಂದ ಸಿಎಂಗೆ ವರದಿ ಸಲ್ಲಿಕೆ

    40% ಕಮಿಷನ್‌ ಆರೋಪ – ನ್ಯಾ. ನಾಗಮೋಹನ ದಾಸ್ ವಿಚಾರಣಾ ಆಯೋಗದಿಂದ ಸಿಎಂಗೆ ವರದಿ ಸಲ್ಲಿಕೆ

    ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದವರು ಮಾಡಿದ ಆರೋಪಗಳು ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೀಳು ಕಾಲುವೆಗಳ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಬಗ್ಗೆ ಕೇಳಿಬಂದ ಆರೋಪಗಳ ಕುರಿತು ನಿವೃತ್ತ ನ್ಯಾ. ಹೆಚ್.ಎನ್ ನಾಗಮೋಹನ್ ದಾಸ್ ಅವರ ಆಯೋಗವು ನಡೆಸಿದ ತನಿಖೆಯ ವರದಿಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

    ಬೆಂಗಳೂರಿನ ಕಾವೇರಿ ನಿವಾಸದಲ್ಲಿಂದು ನಿವೃತ್ತ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. 40% ಕಮೀಷನ್ ಆರೋಪ ಅನುಬಂಧಗಳೊಂದಿಗೆ 20 ಸಾವಿರ ಪುಟಗಳ ವರದಿಗಳನ್ನು ಸಿಎಂಗೆ ಸಲ್ಲಿಕೆ ಮಾಡಿದೆ.

    ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್ ಕಾಮಗಾರಿಗಳಲ್ಲಿ ಶೇ.40 ಕಮಿಷನ್‌ ಇದೆ ಎಂದು ರಾಜ್ಯ ಗುತ್ತಿಗೆದಾರರ ಸಂಘವು ಗಂಭೀರವಾಗಿ ಆರೋಪಿಸಿತ್ತು. ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಗಂಭೀರ ಆರೋಪಗಳು ಕೇಳಿಬಂದ ಬೆನ್ನಲ್ಲೇ 26-7-2019 ರಿಂದ 31.03.2023ರ ವರೆಗೆ ನಡೆದಿರೋ ಕಾಮಗಾರಿಗಳ ಬಗ್ಗೆ ತನಿಖೆ ವರದಿ ಸಲ್ಲಿಕೆ ಮಾಡುವಂತೆ ಸರ್ಕಾರ ಸೂಚನೆ ನೀಡಿತ್ತು.

    ಈ ಹಿನ್ನೆಲೆಯಲ್ಲಿ ವೈಜ್ಞಾನಿಕವಾಗಿ ರಾಂಡಮ್ ಮಾದರಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನ ಆಯ್ಕೆ ಮಾಡಿಕೊಂಡು ಆಯೋಗ ತನಿಖೆ ನಡೆಸಿತ್ತು. ಈ ಆಯ್ಕೆಯಲ್ಲಿ ಎಲ್ಲಾ ಜಿಲ್ಲೆಗಳು, ಎಲ್ಲಾ ಮಾದರಿಯ ಕಾಮಗಾರಿಗಳು ಹಾಗೂ ಎಲ್ಲಾ ಮೊತ್ತದ ಕಾಮಗಾರಿಗಳನ್ನ ಪರಿಗಣಿಸಿ ಆಯೋಗ ತನಿಖೆ ನಡೆಸಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

  • ಸಂವಿಧಾನ ಓದು ಇಂದು ಮನೆಮಾತಾಗಿದೆ: ನಾಗಮೋಹನ್ ದಾಸ್

    ಸಂವಿಧಾನ ಓದು ಇಂದು ಮನೆಮಾತಾಗಿದೆ: ನಾಗಮೋಹನ್ ದಾಸ್

    ಬೆಂಗಳೂರು: ಮೂರು ವರ್ಷಗಳ ಹಿಂದೆ ಆರಂಭಗೊಂಡ ಸಂವಿಧಾನ ಓದು ಅಭಿಯಾನ ಆಂದೋಲನ ಸ್ವರೂಪ ಪಡೆದು ಇಂದು ರಾಜ್ಯದ ಮನೆಮಾತಾಗಿದೆ ಎಂದು ಸಂವಿಧಾನ ಓದು ಪುಸ್ತಕದ ಕರ್ತೃ ಹಾಗೂ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ತಿಳಿಸಿದರು.

    ಸಮುದಾಯ-ಸಹಯಾನ-ಚಿಂತನ ಸಹಯೋಗದಲ್ಲಿ ಆಯೋಜಿಸಲಾದ ಸಂವಿಧಾನ ಓದು ಹಿನ್ನೋಟ ಮತ್ತು ಮುನ್ನೋಟ ಮೂರು ವರ್ಷದ ನೆನಪಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರಂಭದಲ್ಲಿ ಕೇವಲ 2,000 ಪ್ರತಿಗಳ ಮಾರಾಟದೊಂದಿಗೆ ಆರಂಭಗೊಂಡ ಈ ಅಭಿಯಾನ ಇಂದು 50 ಬಾರಿ ಮುದ್ರಣದೊಂದಿಗೆ 2 ಲಕ್ಷ ಪ್ರತಿಗಳ ದಾಖಲೆ ಮಾರಾಟವಾಗಿದೆ. ಅಲ್ಲದೆ ಹಿಂದಿ ಇಂಗ್ಲಿಷ್ ಭಾಷೆಗೂ ತರ್ಜುಮೆಗೊಂಡಿದೆ, ಇದೀಗ ಮಲೆಯಾಳಿಗೂ ಅನುವಾದಗೊಂಡಿದೆ. ಇದಕ್ಕೆ ರಾಜ್ಯ ಜನಪರ ಮನಸ್ಸುಗಳು ನೀಡಿದ ಸಹಾಯ ಕಾರಣವಾಗಿದೆ. ಹೀಗಾಗಿ ಈ ಆಂದೋಲನದಲ್ಲಿ ನಾನೊಬ್ಬ ಸಹಯಾನಿ ಮಾತ್ರ ಎಂದು ಅವರು ಹೇಳಿದರು. ಇದನ್ನೂ ಓದಿ: ಅಮೆರಿಕದಲ್ಲಿ ಓದಬೇಕೇ? – ವಿಶ್ವವಿದ್ಯಾಲಯಗಳ ಜೊತೆ ಮಾತನಾಡಿ, ಅನುಮಾನ ಬಗೆಹರಿಸಿಕೊಳ್ಳಿ

    ಚಿಂತನದ ಪರವಾಗಿ ಡಾ.ಎಂ.ಜಿ.ಹೆಗಡೆ ಮಾತನಾಡಿ, ಈ ಸಂವಿಧಾನ ಓದು ಒಂದು ಆಂದೋಲನ ಸ್ವರೂಪ ತಾಳಲು ಕಾರಣವಾಗಿದ್ದು ಡಾ.ವಿಠ್ಠಲ ಭಂಡಾರಿ ಅವರ ಶ್ರಮ ಕಾರಣ. ಸ್ವತಃ ಒಬ್ಬ ಅಧ್ಯಾಪಕನಾಗಿ, ಸಾಂಸ್ಕೃತಿಕ ಚಳವಳಿಯ ಒಬ್ಬ ಕಾರ್ಯಕರ್ತರಾಗಿ ಅವರು ಮಾಡಿದ ಅಪರಿಮಿತ ಶ್ರಮದಿಂದಾಗಿ ಈ ಸಂವಿಧಾನ ಓದು ರಾಜ್ಯದ ಎಲ್ಲ ವಿಭಾಗಗಳ ಜನರನ್ನು ತಲುಪುವಲ್ಲಿ ಸಫಲವಾಗಿದೆ ಎಂದರು.

    ಅಭಿಯಾನದಲ್ಲಿ ಪಾಲ್ಗೊಂಡ ಹಾಸನದ ಡಾ.ಭಾರತಿ ದೇವಿ ಮಾತನಾಡಿ, ಈ ಓದು ಆರಂಭಗೊಂಡಾಗ ಅದ್ಭುತ ಮತ್ತು ರೋಮಾಂಚನಗೊಳಿಸಿತ್ತು ಇವತ್ತಿನ ಸಂಕಟದ ಸಮಯದಲ್ಲಿ ನನ್ನ ವಿದ್ಯಾರ್ಥಿಗಳನ್ನು ಜಾಗೃತಿಗೊಳಿಸಲು ಒಂದು ಸಾಧನವಾಯಿತು ಎಂದರು.

    ದಾವಣಗೆರೆಯ ವಕೀಲ ಅನೀಶ್ ಪಾಷಾ ಮಾತನಾಡಿ, ಸಂವಿಧಾನ ಓದು ಪುಸ್ತಕ ಕಾನೂನಾತ್ಮಕ ದಾಟಿಯನ್ನು ಮೀರಿ ಸರಳ ಬರವಣಿಗೆಯನ್ನು ಅಳವಡಿಸಿಕೊಂಡಿದೆ. ಹೀಗಾಗಿ ಪ್ರತಿಯೊಬ್ಬರು ಓದಿ ಅರ್ಥ ಮಾಡಿಕೊಡಲು ಕಾರಣವಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಡಾ.ವರಮಹಾಲಕ್ಮೀ ಸಂವಿಧಾನ ಓದನ್ನು ಹರಿಕಥೆ ಹಾಗೂ ಜನಪದ ಪ್ರಕಾರವಾಗಿ ಅಳವಡಿಸಿಕೊಂಡು ಪ್ರಸ್ತುತಪಡಿಸಿದರು. ನಾಡಿನಾದ್ಯಂತ ಈ ಆಂದೋಲನಲ್ಲಿ ಸಹಯಾನಿಗಳಾಗಿದ್ದ ನೂರಾರು ಕಾರ್ಯಕರ್ತರು ಆನ್‍ಲೈನ್ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಭಿಯಾನದಲ್ಲಿ ಖ್ಯಾತ ಗಾಯಕ ಪಿಚ್ಚಳ್ಳಿ ಶ್ರೀನಿವಾಸ, ನರಸಿಂಹಮೂರ್ತಿ ಜಾಗೃತಿ ಗೀತೆಗಳನ್ನು ಹಾಡಿದರು. ಕೆ.ಎಸ್.ವಿಮಲ, ಸಮುದಾಯದ ಅಚ್ಯುತ್, ಸಹಯಾನದ ಯನುನಾ ಗಾಂವ್ಕರ್ ಮೊದಲಾದವರು ಉಪಸ್ಥಿತರಿದ್ದರು.

  • ಕೋರ್ಟ್ ಆದೇಶವನ್ನು ಧಿಕ್ಕರಿಸುತ್ತಿರುವುದು ದೇಶದ ದುರಂತ: ನಾಗಮೋಹನ್ ದಾಸ್

    ಕೋರ್ಟ್ ಆದೇಶವನ್ನು ಧಿಕ್ಕರಿಸುತ್ತಿರುವುದು ದೇಶದ ದುರಂತ: ನಾಗಮೋಹನ್ ದಾಸ್

    ಮಂಗಳೂರು: ಅಯೋಧ್ಯೆ ವಿಚಾರದಲ್ಲಿ ಹೀಗೇ ತೀರ್ಪು ನೀಡಬೇಕೆಂದು ಒತ್ತಡ ಹೇರಲಾಗುತ್ತಿದೆ. ಇದು ದೇಶದ ದುರಂತ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ್ ಹೇಳಿದ್ದಾರೆ.

    ನಗರದಲ್ಲಿ ನಡೆದ ಎಡಪಂಥೀಯ ಚಿಂತಕರ ಜನನುಡಿ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ನ್ಯಾಯಾಂಗದ ಸ್ವಾತಂತ್ರ್ಯ ಕಸಿದುಕೊಳ್ಳಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಆದೇಶಕ್ಕಾಗಿ ಸುಪ್ರೀಂ ಕೋರ್ಟ್ ಮೇಲೆ ಒತ್ತಡ ಹೇರಲಾಗುತ್ತಿದೆ. ಅಷ್ಟೇ ಅಲ್ಲದೆ ಇಷ್ಟು ಸಮಯದೊಳಗಾಗಿ ತೀರ್ಪು ನೀಡಬೇಕೆಂಬ ಸೂಚನೆ ನೀಡಲಾಗುತ್ತೆ ಎಂದು ದೂರಿದರು. ಇದನ್ನು ಓದಿ: ಮೂರು ವೋಟರ್ ಐಡಿ ಕಾರ್ಡ್ ಹೊಂದಿರುವುದು ನಿಜವೇ: ಪ್ರಕಾಶ್ ರೈ ಹೇಳಿದ್ದು ಏನು?

    ರಾಮ ಮಂದಿರ ನಿರ್ಮಾಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಒಪ್ಪಿಗೆಯಾಗದಿದ್ದರೆ ನಾವು ಸಹಿಸಲ್ಲ ಎನ್ನುವವರಿದ್ದಾರೆ. ನ್ಯಾಯಾಲಯದ ಆದೇಶವನ್ನು ಧಿಕ್ಕರಿಸುವ ಕೆಲಸ ಆಗುತ್ತಿರುವುದು ದೇಶದ ದುರಂತ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv