Tag: ನಾಗರಿಕ ವಿಮಾನಯಾನ ಸಚಿವಾಲಯ

  • Plane Crash | ಬ್ಲ್ಯಾಕ್‌ ಬಾಕ್ಸ್‌ಗಳನ್ನು ವಿದೇಶಕ್ಕೆ ಕಳಿಸಿಲ್ಲ: ಸುಳ್ಳು ಸುದ್ದಿ ಹರಡದಂತೆ ಕೇಂದ್ರ ಸರ್ಕಾರ ಮನವಿ

    Plane Crash | ಬ್ಲ್ಯಾಕ್‌ ಬಾಕ್ಸ್‌ಗಳನ್ನು ವಿದೇಶಕ್ಕೆ ಕಳಿಸಿಲ್ಲ: ಸುಳ್ಳು ಸುದ್ದಿ ಹರಡದಂತೆ ಕೇಂದ್ರ ಸರ್ಕಾರ ಮನವಿ

    ನವದೆಹಲಿ: ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ ಬ್ಲ್ಯಾಕ್‌ ಬಾಕ್ಸ್‌ಗಳನ್ನು (Black Boxes) ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂಬ ವರದಿಗಳನ್ನು ನಾಗರಿಕ ವಿಮಾನಯಾನ ಸಚಿವಾಲಯ (Ministry of Civil Aviation) ತಳ್ಳಿಹಾಕಿದೆ.

    ಅಪಘಾತಕ್ಕೀಡಾದ ಏರ್‌ ಇಂಡಿಯಾ 171 ವಿಮಾನದ CVR/DFDR ಅನ್ನು ವಿಶ್ಲೇಷಣೆಗಾಗಿ ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಫ್ಲೈಟ್ ರೆಕಾರ್ಡರ್‌ಗಳನ್ನು ಡಿಕೋಡ್ ಮಾಡುವ ಸ್ಥಳದ ಬಗ್ಗೆ ಸೂಕ್ತ ಮೌಲ್ಯಮಾಪನದ ನಂತರ AAIB ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವಾಲಯ ಎಕ್ಸ್‌ ಪೋಸ್ಟ್‌ನಲ್ಲಿ ಸ್ಪಷ್ಟಪಡಿಸಿದೆ. ಇಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಊಹಾಪೋಹಗಳನ್ನು ಹರಡದಂತೆ ಸಚಿವಾಲಯವು ಮನವಿ ಮಾಡಿಕೊಂಡಿದೆ. ಇದನ್ನೂ ಓದಿ: ಏರ್ ಇಂಡಿಯಾ ದುರಂತದ ಬಳಿಕ ಎಚ್ಚೆತ್ತ DGCA – ಏರ್‌ಪೋರ್ಟ್‌ ಬಳಿಯ ಕಟ್ಟಡಗಳಿಗೆ ಹೊಸ ರೂಲ್ಸ್‌

    ನಾಗರಿಕ ವಿಮಾನಯಾನ ಸಚಿವಾಲಯವು ಎಲ್ಲಾ ಪಾಲುದಾರರನ್ನು ಇಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಊಹಾಪೋಹಗಳಿಂದ ದೂರವಿರಲು ಮತ್ತು ತನಿಖಾ ಪ್ರಕ್ರಿಯೆಯು ಅದು ಖಾತರಿಪಡಿಸುವ ಗಂಭೀರತೆ ಮತ್ತು ವೃತ್ತಿಪರತೆಯೊಂದಿಗೆ ಮುಂದುವರಿಯಲು ಅನುವು ಮಾಡಿಕೊಡುವಂತೆ ಒತ್ತಾಯಿಸುತ್ತದೆ.

    ಅಹಮದಾಬಾದ್ ಬಳಿ ಸಂಭವಿಸಿದ ಏರ್ ಇಂಡಿಯಾ ವಿಮಾನ 171 ರ ದುರಂತ ಅಪಘಾತದ ತನಿಖೆ ನಡೆಯುತ್ತಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಔಪಚಾರಿಕ ತನಿಖೆಯ ನೇತೃತ್ವ ವಹಿಸಿದೆ. ಇದನ್ನೂ ಓದಿ: Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

    ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ (ICAO) ಪ್ರೋಟೋಕಾಲ್‌ಗಳಿಗೆ ಅನುಸಾರವಾಗಿ, ಬಹು-ಶಿಸ್ತಿನ AAIB ತಂಡವು ಜೂ.12 ರಂದು ತನಿಖೆ ಪ್ರಾರಂಭಿಸಿತು. ಇದಕ್ಕೆ US ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ಮತ್ತು ಮೂಲ ಸಲಕರಣೆ ತಯಾರಕರ (OEM) ತಜ್ಞರ ಬೆಂಬಲವಿದೆ.

    ಏರ್ ಇಂಡಿಯಾ ವಿಮಾನ ಅಪಘಾತ ಸ್ಥಳದಿಂದ ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ (DFDR) ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR) ಸಾಧನಗಳ ಬ್ಲ್ಯಾಕ್‌ ಬಾಕ್ಸ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಮೊದಲನೆಯದು ಜೂ.13 ಮತ್ತು ಎರಡನೆಯದನ್ನು ಜೂ.16 ರಂದು ಪತ್ತೆಹಚ್ಚಲಾಯಿತು. ಇದನ್ನೂ ಓದಿ: ತಿರುಪತಿಗೆ ಹೊರಟಿದ್ದ ವಿಮಾನ ವಾಪಸ್‌ – ಹೈದರಾಬಾದ್‌ನಲ್ಲಿ ಯೂಟರ್ನ್‌ ಹೊಡೆದ ಸ್ಪೈಸ್‌ಜೆಟ್‌ ಫ್ಲೈಟ್‌

  • ವಿಮಾನ ಪ್ರಯಾಣದಲ್ಲಿ ದಾಖಲೆ – ನ.17 ರಂದು ಒಂದೇ ದಿನ 5 ಲಕ್ಷಕ್ಕೂ ಹೆಚ್ಚು ಜನ ಪ್ರಯಾಣ

    ವಿಮಾನ ಪ್ರಯಾಣದಲ್ಲಿ ದಾಖಲೆ – ನ.17 ರಂದು ಒಂದೇ ದಿನ 5 ಲಕ್ಷಕ್ಕೂ ಹೆಚ್ಚು ಜನ ಪ್ರಯಾಣ

    – 3,173 ದೇಶಿಯ ವಿಮಾನಗಳಲ್ಲಿ 5,05,412 ಮಂದಿ ಯಾನ

    ನವದೆಹಲಿ: ದೇಶಿಯ ವಿಮಾಯಾನದಲ್ಲಿ ಭಾನುವಾರ ಅತಿ ಹೆಚ್ಚು ಜನರು ಪ್ರಯಾಣಿಸುವ ಮೂಲಕ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ.

    ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯ (Ministry of Civil Aviation) ಮಾಹಿತಿ ಹಂಚಿಕೊಂಡಿದೆ. ನ.17 ರಂದು ಒಂದೇ ದಿನದಲ್ಲಿ ಮೊದಲ ಬಾರಿಗೆ 5 ಲಕ್ಷ ಜನರು ಪ್ರಯಾಣಿಸಿದ್ದು, ಹಬ್ಬ ಹಾಗೂ ಮದುವೆ ಕಾರಣದಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.ಇದನ್ನೂ ಓದಿ: ಮಾತಿನ ಭಾಗದ ಶೂಟಿಂಗ್ ಮುಗಿಸಿದ ಫಾದರ್

    ಅಂಕಿಅಂಶಗಳ ಪ್ರಕಾರ, ಭಾನುವಾರ 5,05,412 ಜನರು ಪ್ರಯಾಣಿಸಿದ್ದು, ಒಟ್ಟು 3,173 ವಿಮಾನ ಹಾರಾಟಗೊಂಡಿವೆ.

    ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ 5 ಲಕ್ಷ ಜನ ಪ್ರಯಾಣಿಸಿದ್ದು, ಭಾರತೀಯ ವಿಮಾನಯಾನ ಐತಿಹಾಸಿಕ ಮೈಲುಗಲ್ಲು ತಲುಪಿದೆ. ನ.8, 9, 14, 15, ಮತ್ತು 16 ರಂದು ಕ್ರಮವಾಗಿ 4.90, 4.96, 4.97, 4.99 ಮತ್ತು 4.98 ಲಕ್ಷ ಜನರು ಪ್ರಯಾಣಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ನಾವು ಜಾತಿ ಸಮೀಕ್ಷೆ ನಡೆಸುತ್ತೇವೆ, ಅವಕಾಶ ವಂಚಿತರಿಗೆ ಇದರಿಂದ ಲಾಭವಾಗಲಿದೆ: ರಾಹುಲ್ ಗಾಂಧಿ

  • ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ ಸಾಗಿಸಲು ಅನುಮತಿ

    ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ ಸಾಗಿಸಲು ಅನುಮತಿ

    ತಿರುವನಂತಪುರಂ: ಕೇರಳದ ಶಬರಿಮಲೆ ದೇವಸ್ಥಾನಕ್ಕೆ (Sabarimala temple) ತೆರಳುವ ಯಾತ್ರಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ಯನ್ನು ಸಾಗಿಸಬಹುದು ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು (K Rammohan Naidu) ತಿಳಿಸಿದರು.

    ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಶನಿವಾರ ಮಾಹಿತಿ ಹಂಚಿಕೊಂಡ ಅವರು, ನವೆಂಬರ್ ಮಧ್ಯದಿಂದ ಜನವರಿಯ ಕೊನೆಯವರೆಗೆ ಶಬರಿಮಲೆಗೆ ಯಾತ್ರಾರ್ಥಿಗಳು ತೆರಳುತ್ತಾರೆ. 2025ರ ಜನವರಿ 20ರವರೆಗೆ ಯತಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ ತೆಂಗಿನಕಾಯಿಯನ್ನು ತೆಗೆದುಕೊಂಡು ಪ್ರಯಾಣಿಸಬಹುದು ಹಾಗೂ ಈ ಸೀಮಿತ ಅವಧಿಯಲ್ಲಿ ಮಾತ್ರ ತೆಗೆದುಕೊಂಡು ಹೋಗಲು ಅನುಮತಿಸಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಅನ್ನಕ್ಕೆ ಆರ್ಸೆನಿಕ್ ಎಂಬ ವಿಷ ಬೆರೆಸಿ ಕೊಲೆಗೆ ಯತ್ನ? – ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿರೋ ಪೊಲೀಸರು

    ಸದ್ಯದ ನಿಯಮಗಳ ಪ್ರಕಾರ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ ತೆಂಗಿನಕಾಯಿ ತೆಗೆದುಕೊಂಡು ಹೋಗಲು ಅನುಮತಿಯಿಲ್ಲ. ಶಬರಿಮಲೆಗೆ ಹೋಗುವವರಿಗೆ ಯಾತ್ರೆ ಸುಲಭವಾಗಿರಲಿ ಎನ್ನುವ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಯ ಅವಧಿಯಲ್ಲಿ `ಇರುಮುಡಿ’ಯಲ್ಲಿ (ತುಪ್ಪ ತುಂಬಿದ ತೆಂಗಿನಕಾಯಿ ಸೇರಿದಂತೆ ಅರ್ಪಣೆಗಳನ್ನು ಹೊಂದಿರುವ ಪವಿತ್ರ) ತೆಂಗಿನಕಾಯಿಯನ್ನು ಸಾಗಿಸಲು ವಿನಾಯಿತಿ ನೀಡಲಾಗಿದೆ ಎಂದು ಹೇಳಿದರು.

    ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಅಗತ್ಯವಿರುವ ಎಕ್ಸ್-ರೇ, ಇಟಿಡಿ (ಎಕ್ಸ್ಪ್ಲೋಸಿವ್ ಟ್ರೇಸ್ ಡಿಟೆಕ್ಟರ್) ಮತ್ತು ಭೌತಿಕ ತಪಾಸಣೆ ಹೀಗೆ ಭದ್ರತಾ ತಪಾಸಣೆಗಳ ಬಳಿಕವೇ ಅನುಮತಿ ನೀಡಲಾಗುವುದು ಎಂದರು.

    ಒಟ್ಟು ಎರಡು ತಿಂಗಳ ಕಾಲ ಅಂದರೆ ಜನವರಿ ಅಂತ್ಯದವರೆಗೆ ತೀರ್ಥಯಾತ್ರೆಗಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯವು ತೆರೆದಿರುತ್ತದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇಗುಲಕ್ಕೆ ಭೇಟಿ ನೀಡುತ್ತಾರೆ. ಜೊತೆಗೆ `ಇರುಮುಡಿ ಕೆಟ್ಟು’ (ತುಪ್ಪ ತುಂಬಿದ ತೆಂಗಿನಕಾಯಿ ಸೇರಿದಂತೆ ಅರ್ಪಣೆಗಳನ್ನು ಹೊಂದಿರುವ ಪವಿತ್ರ ಚೀಲವನ್ನು ಭಗವಂತನಿಗೆ ಕೊಂಡೊಯ್ಯತ್ತಾರೆ).

    ಸಾಮಾನ್ಯವಾಗಿ, ಶಬರಿಮಲೆಗೆ ಯಾತ್ರೆ ಕೈಗೊಳ್ಳುವವರು `ಕೆಟ್ಟುನಿರಕಲ್’ ಆಚರಣೆಯ ಭಾಗವಾಗಿ `ಇರುಮುಡಿ ಕೆಟ್ಟು’ ಸಿದ್ಧಪಡಿಸುತ್ತಾರೆ. ಆಚರಣೆಯ ಸಮಯದಲ್ಲಿ, ತೆಂಗಿನಕಾಯಿಯೊಳಗೆ ತುಪ್ಪ ತುಂಬಿಸಲಾಗುತ್ತದೆ. ನಂತರ ಅದನ್ನು ಇತರ ನೈವೇದ್ಯಗಳೊಂದಿಗೆ ಚೀಲದಲ್ಲಿ ಇರಿಸಲಾಗುತ್ತದೆ. ತೀರ್ಥಯಾತ್ರೆಯ ಸಮಯದಲ್ಲಿ ವಿವಿಧ ಪವಿತ್ರ ಸ್ಥಳಗಳಲ್ಲಿ ಒಡೆಯಲು ಹೆಚ್ಚಿನ ತೆಂಗಿನಕಾಯಿಗಳನ್ನು ಇರಿಸಿರಲಾಗುತ್ತದೆ.

    `ಇರುಮುಡಿ ಕಟ್ಟೆ’ಯನ್ನು ತಲೆಯ ಮೇಲೆ ಹೊತ್ತ ಯಾತ್ರಾರ್ಥಿಗಳಿಗೆ ಮಾತ್ರ ದೇವಾಲಯದ ಗರ್ಭಗುಡಿಯನ್ನು ತಲುಪಲು 18 ಪವಿತ್ರ ಮೆಟ್ಟಿಲುಗಳನ್ನು ಹತ್ತಲು ಅನುಮತಿಸಲಾಗುತ್ತದೆ. ಅದನ್ನು ಹೊತ್ತುಕೊಳ್ಳದವರು ಗರ್ಭಗುಡಿಯನ್ನು ತಲುಪಲು ಬೇರೆ ಮಾರ್ಗದ ಮೂಲಕ ಗರ್ಭಗುಡಿಗೆ ಹೋಗಬೇಕು.ಇದನ್ನೂ ಓದಿ: ಶಕ್ತಿ ಯೋಜನೆಯಲ್ಲೂ ದೋಖಾ? – ಮಹಿಳೆಯರ ಫ್ರೀ ಬಸ್ ಪ್ರಯಾಣ ಟಿಕೆಟ್ ಪುರುಷರಿಗೆ ವಿತರಣೆ

  • ಮತ್ತೆ 3 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ – ಬೆಂಗಳೂರಿಂದ ಮುಂಬೈಗೆ ಹೊರಟಿದ್ದ ಫ್ಲೈಟ್‌ಗೂ ಥ್ರೆಟ್ ಕಾಲ್

    ಮತ್ತೆ 3 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ – ಬೆಂಗಳೂರಿಂದ ಮುಂಬೈಗೆ ಹೊರಟಿದ್ದ ಫ್ಲೈಟ್‌ಗೂ ಥ್ರೆಟ್ ಕಾಲ್

    ನವದೆಹಲಿ: ಕಳೆದ 24 ಗಂಟೆಗಳಲ್ಲಿ 3 ವಿಮಾನಗಳಿಗೆ ಬಾಂಬ್ ಬೆದರಿಕೆ (Bomb Threat) ಕರೆಗಳು ಬಂದಿದೆ. ಆ ಮೂಲಕ ಒಂದು ವಾರದಲ್ಲಿ 35ಕ್ಕೂ ಹೆಚ್ಚು ವಿಮಾನಗಳು ಬೆದರಿಕೆ ಕರೆ ಸ್ವೀಕರಿಸಿರುವ ಬಗ್ಗೆ ವರದಿಯಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ (Ministry Of Civil Aviation) ತಿಳಿಸಿದೆ.

    ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರಾ ವಿಮಾನ (Vistara Flight) ಸೋಷಿಯಲ್ ಮೀಡಿಯಾದಲ್ಲಿ ಬಾಂಬ್ ಬೆದರಿಕೆಯ ಕರೆಯನ್ನು ಸ್ವೀಕರಿಸಿದ್ದು, ತಕ್ಷಣ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ, ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಫ್ರಾಂಕ್‌ಫರ್ಟ್‌ಗೆ ಕಳುಹಿಸುವಂತೆ ನಿರ್ಧರಿಸಲಾಯಿತು. ವಿಮಾನವನ್ನು ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ಕಳುಹಿಸಿ, ಬಳಿಕ ಅಲ್ಲಿಂದ ಲಂಡನ್‌ಗೆ ಕಳುಹಿಸಲಾಯಿತು.ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್‌ – ಹಿರಿಯ ಐಎಎಸ್‌ ಅಧಿಕಾರಿ, ಆರ್‌ಜೆಡಿ ಮಾಜಿ ಶಾಸಕ ಅರೆಸ್ಟ್‌

    ಜೈಪುರ್‌ನಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ (Air India) ಎಕ್ಸ್‌ಪ್ರೆಸ್‌ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಇದರಿಂದಾಗಿ ಸ್ವಲ್ವ ಸಮಯದ ಬಳಿಕ ವಿಮಾನ ಟೇಕ್‌ಆಫ್ ಆಯಿತು. ಇಂದು ಬೆಳಗ್ಗೆ 6:10ಕ್ಕೆ ಟೇಕ್ ಆಫ್ ಆಗಬೇಕಿದ್ದ ವಿಮಾನ ತಡವಾಗಿ 7:45ಕ್ಕೆ ಟೇಕ್ ಆಫ್ ಆಯಿತು.

    ಶುಕ್ರವಾರ ಬೆಂಗಳೂರಿನಿಂದ ಮುಂಬೈಗೆ ಹೊರಡಲು ಸಿದ್ಧವಾಗಿದ್ದ ಆಕಾಶ ಏರ್ (Akash Air) ವಿಮಾನಕ್ಕೆ ಬಾಂಬ್ ಬೆದರಿಕೆಯ ಕರೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಸಂಪೂರ್ಣ ಪರಿಶೀಲನೆ ನಡೆಸಲಾಯಿತು. ನೆಟ್‌ವರ್ಕ್ ಆಪರೇಷನ್ ಕಂಟ್ರೋಲ್ (NOC) ಒಪ್ಪಿಗೆ ನೀಡಿದ ಬಳಿಕ ಸಂಜೆ ಮುಂಬೈಗೆ ಹೊರಟಿತು.

    ಒಂದು ವಾರದಲ್ಲಿ ಸುಮಾರು 35 ವಿಮಾನಗಳು ಬೆದರಿಕೆಯ ಕರೆಗಳನ್ನು ಸ್ವೀಕರಿಸಿದ್ದು, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಅಧಿಕಾರಿಗಳು ಆ ಸಂದರ್ಭದಲ್ಲಿ ಭದ್ರತಾ ಪರಿಶೀಲನೆ ನಡೆಸಿ, ಕಠಿಣ ಕ್ರಮಗಳನ್ನು ಕೈಗೊಳ್ಳಲಾಯಿತು.

    ಬಾಂಬ್ ಬೆದರಿಕೆ ಸಂಬಂಧಿಸಿದಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು (Rammohan Naidu)  ಮಾತನಾಡಿ, ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಮೂರು ಸೇರಿದಂತೆ ಸೋಮವಾರ ನಾಲ್ಕು ವಿಮಾನಗಳಿಗೆ ಬೆದರಿಕೆ ಹಾಕಲಾಗಿದೆ. 17 ವರ್ಷದ ಹುಡುಗನನ್ನು ಮುಂಬೈ ಪೊಲೀಸರು ಬುಧವಾರ ಕಸ್ಟಡಿಗೆ ತೆಗೆದುಕೊಂಡಿದ್ದು, ಹೆಚ್ಚಿನ ಕರೆಗಳನ್ನು ಅಪ್ರಾಪ್ತರು ಮತ್ತು ಕುಚೇಷ್ಟೆಗಾರರು ಮಾಡಿದ್ದಾರೆ ಎಂದು ಹೇಳಿದರು.

    ಭವಿಷ್ಯದಲ್ಲಿ ಇಂತಹ ಹುಸಿ ಬಾಂಬ್ ಕರೆಗಳು ನಡೆಯದಂತೆ ನೋಡಿಕೊಳ್ಳಲು ಹಾಗೂ ಈ ರೀತಿಯ ಕುಚೇಷ್ಟೆಗಳನ್ನು ಮಾಡಲು ಪ್ರಯತ್ನಿಸುವ ಜನರಿಗೆ ಕಟ್ಟುನಿಟ್ಟಾದ ಕ್ರಮ ತೆಗೆದುಕೊಳ್ಳಲು ನಮ್ಮ ಇಲಾಖೆಯ ನಿಯಮಗಳು ಮತ್ತು ಶಾಸನಗಳಲ್ಲಿ ಬದಲಾವಣೆ ತರಲು ಸೂಚಿಸಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ಬಿಬಿಎಂಪಿಯಿಂದ ತುರ್ತು ಇ-ಖಾತಾ ಪಡೆಯಲು ಮಾರ್ಗಸೂಚಿ ಬಿಡುಗಡೆ – ಗೈಡ್‌ಲೈನ್‌ನಲ್ಲಿ ಏನಿದೆ?

  • ಭಾರತದಲ್ಲಿ ಏರ್‌ಲೈನ್ಸ್ ವ್ಯವಸ್ಥೆಗಳು ಸಹಜ ಸ್ಥಿತಿಗೆ ಮರಳಿವೆ – ನಾಗರಿಕ ವಿಮಾನಯಾನ ಸಚಿವಾಲಯ

    ಭಾರತದಲ್ಲಿ ಏರ್‌ಲೈನ್ಸ್ ವ್ಯವಸ್ಥೆಗಳು ಸಹಜ ಸ್ಥಿತಿಗೆ ಮರಳಿವೆ – ನಾಗರಿಕ ವಿಮಾನಯಾನ ಸಚಿವಾಲಯ

    ನವದೆಹಲಿ: ಮೈಕ್ರೋಸಾಫ್ಟ್ ಕ್ಲೌಡ್‌ನಲ್ಲಿ (Microsoft Cloud) ಕಂಡುಬಂದ ಸಮಸ್ಯೆ ಸರಿಯಾಗಿದ್ದು, ಇದರಿಂದ ಉಂಟಾದ ಸಮಸ್ಯೆಗಳನ್ನು ಹಂತ ಹಂತವಾಗಿ ಸರಿಪಡಿಸಲಾಗುತ್ತಿದೆ. ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವಿಮಾನಯಾನ ವ್ಯವಸ್ಥೆಗಳು ಸಹಜ ಸ್ಥಿತಿಗೆ ಮರಳಿವೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ (Ministry of Civil Aviation) ಶನಿವಾರ ಹೇಳಿದೆ.

    ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವಾಲಯ, ಬೆಳಗ್ಗೆ 3 ಗಂಟೆಯಿಂದ ವಿಮಾನ ನಿಲ್ದಾಣಗಳಲ್ಲಿ ಏರ್‌ಲೈನ್ ವ್ಯವಸ್ಥೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ. ಈಗ ವಿಮಾನ ಕಾರ್ಯಾಚರಣೆಗಳು ಸುಗಮವಾಗಿ ನಡೆಯುತ್ತಿವೆ. ಶುಕ್ರವಾರ ಅಡಚಣೆಗಳಿಂದ ಉಂಟಾದ ಸಮಸ್ಯೆಗಳನ್ನು ಸರಿಪಡಿಸಲಾಗುತ್ತಿದೆ ಎಂದು ಹೇಳಿದೆ.

    ಈ ನಡುವೆ ಬಯೋಮೆಟ್ರಿಕ್ ಆಧಾರಿತ ಬೋರ್ಡಿಂಗ್ ವ್ಯವಸ್ಥೆಯಾದ ಡಿಜಿ ಯಾತ್ರಾ ವ್ಯವಸ್ಥೆಯು ಕಾರ್ಯನಿರ್ವಹಿಸದ ಕಾರಣ ದೆಹಲಿಯ ಐಜಿಐ ವಿಮಾನ ನಿಲ್ದಾಣವು ಶನಿವಾರ ಬೆಳಗ್ಗೆ ಗಮನಾರ್ಹ ಅಡಚಣೆಗಳನ್ನು ಎದುರಿಸಿತು. ಪ್ರಯಾಣಿಕರು ಮ್ಯಾನುವಲ್ ಚೆಕ್ ಇನ್ ಮಾಡಲು ಪ್ರಯಾಸಪಡುತ್ತಿದ್ದರಿಂದ ನಿರ್ಗಮನ ಟರ್ಮಿನಲ್‌ಗಳಲ್ಲಿ ದೊಡ್ಡ ಸರತಿ ಸಾಲುಗಳು ಏರ್ಪಟ್ಟಿತು.

    ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ದಟ್ಟಣೆಯನ್ನು ನಿರ್ವಹಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ 400ಕ್ಕೂ ಹೆಚ್ಚು ವಿಮಾನಗಳು ವಿಳಂಬವನ್ನು ಎದುರಿಸುತ್ತಿವೆ. ಹಲವಾರು ಪ್ರಯಾಣಿಕರು ಕೈಬರಹದ ಬೋರ್ಡಿಂಗ್ ಪಾಸ್‌ಗಳ ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ.