Tag: ನಾಗೇನಹಳ್ಳಿ

  • `ದೃಶ್ಯಂ’ ಸಿನಿಮಾ ಶೈಲಿಯಲ್ಲಿ ಮಹಿಳೆ ಕೊಲೆ ಮಾಡಿ ಸಾಕ್ಷ್ಯ ನಾಶ – 4 ತಿಂಗಳ ಬಳಿಕ ಆರೋಪಿ ಅರೆಸ್ಟ್

    `ದೃಶ್ಯಂ’ ಸಿನಿಮಾ ಶೈಲಿಯಲ್ಲಿ ಮಹಿಳೆ ಕೊಲೆ ಮಾಡಿ ಸಾಕ್ಷ್ಯ ನಾಶ – 4 ತಿಂಗಳ ಬಳಿಕ ಆರೋಪಿ ಅರೆಸ್ಟ್

    -50 ಗ್ರಾಂ ಚಿನ್ನ ದೋಚಿ ಪರಾರಿಯಾಗಲು ಪ್ಲಾನ್

    ಬೆಂಗಳೂರು: ದೃಶ್ಯಂ ಸಿನಿಮಾ ನೋಡಿ ಪ್ರೇರಣೆಯಿಂದ ಮಹಿಳೆಯ ಕೊಲೆ ಮಾಡಿ 4 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯು ಕೊನೆಗೂ ಕೊತ್ತನೂರು (Kothanur) ಪೊಲೀಸರ ಬಲೆಗೆ ಬಿದ್ದಿದ್ದಾನೆ. ಲಕ್ಷ್ಮಣ್‌ ಬಂಧಿತ ಕೊಲೆ ಆರೋಪಿ.

    ನಾಗೇನಹಳ್ಳಿಯ ಸ್ಲಂ ಬೋರ್ಡ್‌ನಲ್ಲಿರುವ ಇ-ಬ್ಲಾಕ್‌ನಲ್ಲಿ ಮೇರಿ (50) ಎಂಬ ಒಬ್ಬಂಟಿ ಮಹಿಳೆ ವಾಸವಿದ್ದರು. ಆರೋಪಿ ಲಕ್ಷ್ಮಣ್‌ ಕೂಡಾ ಅಲ್ಲೇ ವಾಸವಿದ್ದನು. ಒಂದೇ ಕಡೆ ಇದ್ದಿದ್ದರಿಂದ ಇಬ್ಬರ ಪರಿಚಯವಾಗಿತ್ತು. ಈ ವೇಳೆ ಮಹಿಳೆಯ ಬಳಿ ಸ್ವಲ್ಪ ಚಿನ್ನಾಭರಣವಿರುವ ಬಗ್ಗೆ ಲಕ್ಷ್ಮಣ್‌ಗೆ ತಿಳಿದಿತ್ತು. ಈ ವೇಳೆ ಲಕ್ಷ್ಮಣ್‌ ತಾನು ಮಾಡಿದ್ದ ಸಾಲ ತೀರಿಸಲು ಮಹಿಳೆಯನ್ನು ಕೊಂದು ಚಿನ್ನಾಭರಣ ದೋಚುವ ಪ್ಲಾನ್ ಮಾಡಿದ್ದ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿರೋಧಿಸಿ ರೈತರ ಸಭೆ – ಬೃಹತ್ ಪಾದಯಾತ್ರೆಗೆ ನಿರ್ಧಾರ

    ದೃಶ್ಯಂ ಸಿನಿಮಾ ನೋಡಿದ್ದ ಲಕ್ಷ್ಮಣ್‌ ಅದರ ಮಾದರಿಯಲ್ಲೇ ತಪ್ಪಿಸಿಕೊಳ್ಳಲು ಉಪಾಯ ಕಂಡುಕೊಂಡಿದ್ದ. ಹಾಗಾಗಿ ತನ್ನ ಬಳಿ ಇದ್ದ 4 ಸಿಮ್ ಕಾರ್ಡ್‌ ಪೈಕಿ 3 ಸಿಮ್ ಕಾರ್ಡ್‌ಗಳನ್ನು ಡಿಜೆ ಹಳ್ಳಿಯಲ್ಲಿದ್ದ ಪತ್ನಿ ನಿವಾಸದಲ್ಲಿಟ್ಟಿದ್ದ. ಇದನ್ನೂ ಓದಿ: ಗ್ಯಾರಂಟಿಗೆ ಮುಕ್ಕಾಲು ಭಾಗ ಹಣ ಖರ್ಚು ಮಾಡಿದ್ರೆ ಆಡಳಿತ ಕಷ್ಟ: ರಂಭಾಪುರಿ ಶ್ರೀ ಅಸಮಾಧಾನ

    2024 ನ.25ರಂದು ಮೇರಿ ಮನೆಯ ಕರೆಂಟ್ ಕಟ್ ಮಾಡಿ ಸರಿ ಪಡಿಸಲು ತನ್ನನ್ನ ಕರೆಯುತ್ತಾರೆ ಆಗ ಕೊಲೆ ಮಾಡಬಹುದು ಎಂದು ಲಕ್ಷ್ಮಣ್‌ ಹೊಂಚು ಹಾಕಿದ್ದ. ಆದರೆ ಅದು ಸಾಧ್ಯವಾಗಿಲ್ಲ. ಹಾಗಾಗಿ 26ರಂದು ಕೊಲೆ ಮಾಡಿ, ಮಧ್ಯಾಹ್ನ 3 ಗಂಟೆಗೆ ಆಟೋದಲ್ಲಿ ಶವವನ್ನು ಹಾಕಿಕೊಂಡು ಬಾಗಲೂರಿನ ಹೊಸೂರು ಬಂಡೆಯ ಕಸ ಡಂಪಿಂಗ್ ಯಾರ್ಡ್ ಪಕ್ಕ ಬಿಸಾಡಿ ಬಂದಿದ್ದ. ಇದನ್ನೂ ಓದಿ: ಕೇಣಿಯಲ್ಲಿ ಖಾಸಗಿ ಬಂದರು ನಿರ್ಮಾಣಕ್ಕೆ ಮೀನುಗಾರರ ವಿರೋಧ – ಮಾ.15ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ

    ಮಹಿಳೆಯ ಕುರಿತು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರಿಗೆ ಕೊಲೆ ದಿನ ಆರೋಪಿಯ ಟವರ್ ಲೊಕೇಶನ್ ಡಿಜೆ ಹಳ್ಳಿಯಲ್ಲಿ ಇದುದ್ದರಿಂದ ಪೊಲೀಸರಿಗೂ ಆತನ ಮೇಲೆ ಅನುಮಾನ ಮೂಡಿರಲಿಲ್ಲ. ಅಲ್ಲದೇ ಆತನು ಅದೇ ದಿನದಿಂದ ಕಾಣೆಯಾಗಿದ್ದ. ಇದನ್ನೂ ಓದಿ: 400 ಪ್ರಯಾಣಿಕರಿದ್ದ ಪಾಕ್‌ ರೈಲು ಹೈಜಾಕ್ – 120 ಮಂದಿ ಒತ್ತೆಯಾಳಾಗಿರಿಸಿಕೊಂಡ ಉಗ್ರರು, 6 ಸೈನಿಕರ ಹತ್ಯೆ

    ಇತ್ತೀಚೆಗೆ ಲಕ್ಷ್ಮಣ್‌ ಪ್ರೇಯಸಿಯ ಜೊತೆಗೆ ಸಂಪರ್ಕದಲ್ಲಿದ್ದ. ಆಕೆಯ ಜೊತೆಗೆ ದಿನವಿಡೀ ಮಾತಾಡಲು ಶುರು ಮಾಡಿದ್ದ. ಆ ನಂಬರ್ ಟ್ರೇಸ್ ಮಾಡಿದ ಪೊಲೀಸರಿಗೆ ಲಕ್ಷ್ಮಣ್‌ ಸಿಕ್ಕಿಬಿದ್ದಿದ್ದಾನೆ. ಪೊಲೀಸರು ಲಕ್ಷ್ಮಣ್‌ನನ್ನು ಬಂಧಿಸಿ ವಿಚಾರಿಸಿದಾಗ ಮಹಿಳೆ ಬಳಿಯಿದ್ದ 50 ಗ್ರಾಂ ಚಿನ್ನಕ್ಕಾಗಿ ಕೊಲೆ ಮಾಡಿರೋದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬಾಗಲಕೋಟೆ ವಿಶ್ವವಿದ್ಯಾಲಯ ಕಾಲೇಜುಗಳನ್ನ ವಿಭಾಗ ಮಾಡ್ಬೇಡಿ- ವಿಧಾನ ಪರಿಷತ್‌ನಲ್ಲಿ ಬಿಜೆಪಿ ಆಗ್ರಹ

    ಆರೋಪಿಯನ್ನ ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ.

  • ಹಿಂದೂ, ಮುಸ್ಲಿಂ ಭಾವೈಕ್ಯತೆಯ ಹಬ್ಬ – ಇಡೀ ಗ್ರಾಮದ ಆರಾಧ್ಯ ದೈವರಾದ ಜಮಾಲ್ ಮೌಲ್ವಿ

    ಹಿಂದೂ, ಮುಸ್ಲಿಂ ಭಾವೈಕ್ಯತೆಯ ಹಬ್ಬ – ಇಡೀ ಗ್ರಾಮದ ಆರಾಧ್ಯ ದೈವರಾದ ಜಮಾಲ್ ಮೌಲ್ವಿ

    ದಾವಣಗೆರೆ: ಹಿಂದೂ, ಮುಸ್ಲಿಂರ ಮಧ್ಯೆ ಸಾಮರಸ್ಯ ಸಾರುವ ಜಾತ್ರೆಯೊಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಾಗೇನಹಳ್ಳಿಯಲ್ಲಿ ನಡೆಯುತ್ತಿದೆ.

    ಇಂದು ಧರ್ಮ, ಜಾತಿಗಳ ನಡುವೆ ಕೋಮು ಸೌಹಾರ್ದತೆ ಬೆಳೆಯುವ ಬದಲಾಗಿ ಕೋಮು ದ್ವೇಷವೇ ಹೆಚ್ಚಾಗುತ್ತಿದೆ. ಅಂತಹದರಲ್ಲಿ ಈ ನಾಗೇನಹಳ್ಳಿ ದೇಶಕ್ಕೆ ಹಿಂದೂ, ಮುಸ್ಲಿಂ ಭಾವೈಕ್ಯತೆ ಸಾರುವಂತಿದೆ. ಇದಕ್ಕೆ ಮುಖ್ಯ ಕಾರಣ ಈ ಗ್ರಾಮದಲ್ಲಿ ಹಿಂದೂಗಳು ಮಾತ್ರ ಇದ್ದಾರೆ. ಆದರೆ, ಇಲ್ಲಿ ಜಮಾಲ್ ಎಂಬ ಮುಸ್ಲಿಂ ಮೌಲ್ವಿಯೊಬ್ಬನ ಸಮಾಧಿ ಇದ್ದು, ಆ ಸಮಾಧಿಯನ್ನ ಹಿಂದೂಗಳೇ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡುತ್ತಿದ್ದಾರೆ. ಅಲ್ಲದೇ, ಆ ದರ್ಗಾಗೆ ಪಕ್ಕದಲ್ಲಿಯೇ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಗುಡಿ, ಗೋಪುರ ಕಟ್ಟಿಸಿ ಜಮಾಲ್ ಸ್ವಾಮಿ ಪ್ರಸನ್ನ ಎಂದು ಹೆಸರನ್ನು ಇಟ್ಟಿದ್ದಾರೆ. ಇದನ್ನೂ ಓದಿ: ಉಕ್ರೇನ್ ರಿಟರ್ನ್ ವಿದ್ಯಾರ್ಥಿಗಳು ಶೀಘ್ರವೇ ಗುಡ್ ನ್ಯೂಸ್: ಸುಧಾಕರ್

    ಇತಿಹಾಸವೇನು?
    ಹಲವು ಶತಮಾನಗಳ ಹಿಂದೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಾಗೇನಹಳ್ಳಿ ಗ್ರಾಮಕ್ಕೆ ಜಮಾಲ್ ಸಾಬ್ ಎನ್ನುವ ಪವಾಡ ಪುರುಷನೊಬ್ಬ ಕೇರಳದಿಂದ ಆಗಮಿಸಿದ್ದ. ಬಹುಕಾಲ ವರ್ಷ ಇಲ್ಲಿಯೇ ತಂಗಿದ್ದ ಆ ಜಮಾಲ್ ಸಾಬ್ ಸ್ಥಳೀಯರಿಗೆ ಹಲವಾರ ಪವಾಡಗಳನ್ನು ಮಾಡಿ ತೋರಿಸಿದ್ದ. ಆನಾರೋಗ್ಯ ಪೀಡಿತ ಜನ ಮತ್ತು ಜಾನುವಾರುಗಳ ರೋಗ ರೂಜಿಗಳನ್ನು ತನ್ನ ಪವಾಡದಿಂದ ಹೋಗಲಾಡಿಸಿದ್ದ. ಹೀಗಾಗಿ, ಆಗಿನ ಜನರು ಜಮಾಲ್‍ನನ್ನು ಸ್ವಾಮಿ ಎಂದೇ ನಂಬಿದ್ದರು.

    ಅಲ್ಲದೇ, ಆತ ಕಾಲಾನಂತರ ಆತನ ಸಮಾಧಿಯನ್ನು ಅಂದಿನಿಂದ ಇಂದಿನವರೆಗೂ ಪೂಜೆ ಮಾಡುತ್ತಿದ್ದಾರೆ. ಇನ್ನು, ಪ್ರತಿ ವರ್ಷ ಜಮಾಲ್ ಸ್ವಾಮಿ ಉರುಸ್ ಕೂಡ ನಡೆಯುತ್ತಿದ್ದು, ಅದನ್ನು ಸ್ಥಳೀಯ ಹಿಂದೂಗಳೇ ಆಚರಿಸುತ್ತಿದ್ದಾರೆ. ನಿನ್ನೆ ರಾತ್ರಿ ಕೂಡ ಉರುಸ್ ನಡೆದಿದ್ದು, ಇಲ್ಲಿಯ ಹಿಂದೂ ಜನರೇ ಆತನಿಗೆ ಪ್ರಸಾದ ಮತ್ತು ಮಾಂಸದೂಟ ಪ್ರಸಾದ ಅರ್ಪಿಸುವ ಮೂಲಕ ಶ್ರದ್ಧಾ ಭಕ್ತಿಯಿಂದ ಉರುಸ್ ಕಾರ್ಯವನ್ನು ಅದ್ಧೂರಿಯಾಗಿ ನೆರವೇರಿಸಿದ್ದಾರೆ. ಈ ಉರುಸ್ ನಲ್ಲಿ ಸುತ್ತಮುತ್ತಲಿನ ನೂರಾರು ಮುಸ್ಲಿಂ ಬಾಂಧವರು ಕೂಡ ಭಾಗವಹಿಸುತ್ತಾರೆ.

    ಜಮಾಲ್ ಹೆಸರಲ್ಲಿ ಈಗಲೂ ಹಲವಾರು ಪವಾಡಗಳು ನಡೆಯುತ್ತಿವೆ. ಹೀಗಾಗಿ, ದಾವಣಗೆರೆ ಜಿಲ್ಲೆಯ ನಾನಾ ಭಾಗಗಳ ಹಿಂದೂ, ಮುಸ್ಲಿಂ ಜನರು ಈ ಜಮಾಲ್ ಸ್ವಾಮಿ ಸನ್ನಿಧಿಗೆ ಬಂದು ಆರೋಗ್ಯ, ಕೌಟುಂಬಿಕ ಸಮಸ್ಯೆ, ವಿವಾಹ ಪ್ರಾಪ್ತಿ ಸೇರಿದಂತೆ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತುಕೊಳ್ಳುತ್ತಾರೆ. ಜಮಾಲ್ ಸ್ವಾಮಿಗೆ ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಇಷ್ಟಾರ್ಥಗಳು ಸಿದ್ದಿಸುತ್ತವೆ ಎನ್ನುವುದು ಇಲ್ಲಿನ ಭಕ್ತರ ನಂಬಿಕೆ.

    ಹೀಗಾಗಿ, ಇದೀಗ ಜಮಾಲ್ ಸ್ವಾಮಿ ಶ್ರೀ ಕ್ಷೇತ್ರ ದಾವಣಗೆರೆ ಸೇರಿದಂತೆ ಸುತ್ತಲಿನ ಜಿಲ್ಲೆಗಳಲ್ಲಿ ಪ್ರಸಿದ್ಧಿ ಪಡೆದಿದೆ. ಇಂದು ಧರ್ಮ, ಜಾತಿಗಳ ನಡುವೆ ಕೋಮು ಸೌಹಾರ್ದತೆ ಬೆಳೆಯುವ ಬದಲಾಗಿ ಕೋಮು ದ್ವೇಷ ಹೆಚ್ಚಿ ದೇಶದಲ್ಲಿ ಕೋಮು ಗಲಭೆಗಳು ಉಂಟಾಗುತ್ತಿವೆ. ಅಲ್ಲದೆ ಇಂದಿನ ರಾಜಕಾರಣಿಗಳು ತಮ್ಮ ರಾಜಕೀಯ ಹಸ್ತ್ರವನ್ನಾಗಿ ಮಾಡಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಆದರೆ ಈ ಗ್ರಾಮದಲ್ಲಿ ಹಿಂದೂಗಳು ಮಾತ್ರ ದ್ವೇಷ, ಅಸೂಹೆ ತೋರದೆ ಮುಸ್ಲಿಂ ಧರ್ಮದ ದರ್ಗಕ್ಕೆ ಹೋಗಿ ಗ್ರಾಮದಲ್ಲಿ ಹಬ್ಬ ಮಾಡುತ್ತಾರೆ.

    ನಾಗೇನಹಳ್ಳಿ ಗ್ರಾಮಗಳಲ್ಲಿ ಹಿಂದೂಗಳೇ ಇದ್ದಾರೆ. ದರ್ಗಾವನ್ನು ನಿರ್ಮಾಣ ಮಾಡಿಸಿದವರು ಹಿಂದೂಗಳು. ಈ ಗ್ರಾಮದಲ್ಲಿ ಹೇಳಿಕೊಳ್ಳಲು ಒಂದು ಮುಸ್ಲಿಂ ಕುಟುಂಬ ಇಲ್ಲ. ಜಮಾಲ್ ಸ್ವಾಮಿ ಬಂದು ಇಲ್ಲಿ ಪವಾಡ ಮಾಡಿದ್ದರಿಂದ ಹಿಂದೂಗಳು ಇಲ್ಲಿ ಪ್ರತಿನಿತ್ಯ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಈ ಸನ್ನಿಧಿಯಲ್ಲಿ ಇಷ್ಟಾರ್ಥಗಳು ಸಿದ್ದಿಸುತ್ತವೆ ಎನ್ನುವುದು ಇಲ್ಲಿನ ಭಕ್ತರ ನಂಬಿಕೆಯಾಗಿದೆ. ಇದನ್ನೂ ಓದಿ: ಮಳೆಹಾನಿ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಶೀಘ್ರವಾಗಿ ವರದಿ ನೀಡಬೇಕು: ಬಿ.ಸಿ.ಪಾಟೀಲ್ 

    ಇಂದು ದೇಶದಲ್ಲಿ ಹಿಂದೂ, ಮುಸ್ಲಿಂ ಎಂದು ಕೋಮುಗಲಭೆ ಸೃಷ್ಟಯಾಗಿ ಎಷ್ಟೋ ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈ ಮಧ್ಯೆ ನಾಗೇನಹಳ್ಳಿಯ ಹಿಂದೂ-ಮುಸ್ಲಿಂರ ಸಾಮರಸ್ಯ ದೇಶಕ್ಕೆ ಮಾದರಿ ಎನ್ನುವಂತಿದೆ. ಈ ಸಾಮರಸ್ಯ ಇಡೀ ದೇಶದಲ್ಲಿ ವ್ಯಾಪಿಸಲಿ ಎನ್ನುವುದು ನಮ್ಮ ಕಳಕಳಿ.