Tag: ನಾಗೇಶ್ ಕೋಗಿಲು

  • ‘ಟಕ್ಕರ್’ ನಿರ್ಮಾಪಕರ ಚಾಲೆಂಜಿಂಗ್ ಸ್ಟೋರಿ – ಕಲಾವಿದನಾಗಬಂದವರು ನಿರ್ಮಾಪಕರಾದ ಕಹಾನಿ

    ‘ಟಕ್ಕರ್’ ನಿರ್ಮಾಪಕರ ಚಾಲೆಂಜಿಂಗ್ ಸ್ಟೋರಿ – ಕಲಾವಿದನಾಗಬಂದವರು ನಿರ್ಮಾಪಕರಾದ ಕಹಾನಿ

    ಸಿನಿಮಾ ಮನರಂಜನೆಯ ಮೂಲ. ಅದರಲ್ಲಿ ಎರಡು ಮಾತಿಲ್ಲ. ನಿರ್ದೇಶಕ ಕಟ್ಟಿದ ಕಥೆಗೆ ನಿರ್ಮಾಪಕನ ಸಾಥ್ ಸಿಕ್ಕಾಗ ಒಂದೊಳ್ಳೆ ಸಿನಿಮಾ ಆಗುವುದರಲ್ಲಿ ನಿಸ್ಸಂದೇಹವೇ ಇಲ್ಲ. ಅದರಲ್ಲೂ ಒಬ್ಬ ಸದಾಭಿರುಚಿಯ ನಿರ್ಮಾಪಕ ಸಿಕ್ಕರೆಂದರೆ ಆ ಸಿನಿಮಾ ಇನ್ನಷ್ಟು ಕಳೆಗಟ್ಟುತ್ತದೆ. ತೆರೆ ಮೇಲೆ ಸಿನಿಮಾವನ್ನು ತರುವುದರಿಂದ ಹಿಡಿದು, ಅದನ್ನು ಪ್ರೇಕ್ಷಕರಿಗೆ ತಲುಪಿಸುವ ತನಕ ನಿರ್ಮಾಪಕರ ಪಾಲು ಬಹಳ ದೊಡ್ಡದು. ಹಾಗೆ ನಿರ್ಮಾಪಕನಿಗೂ ಸಿನಿಮಾದಿಂದ ಒಂದಿಷ್ಟು ಜೇಬು ತುಂಬಿದರೆ ಇನ್ನೊಂದಿಷ್ಟು ಸಿನಿಮಾ ಮಾಡುವುದಕ್ಕೆ ಹುಮ್ಮಸ್ಸು ಬರುತ್ತದೆ. ಸದ್ಯ ಸ್ಯಾಂಡಲ್‍ವುಡ್ ಅಂಗಳಕ್ಕೆ ಒಂದಿಷ್ಟು ಪ್ಯಾಶನೇಟ್ ಪ್ರೊಡ್ಯೂಸರ್‌ಗಳು ದಕ್ಕಿದ್ದಾರೆ. ಉತ್ತಮ ಸಿನಿಮಾ ಕಟ್ಟಿ ಕೊಡುವಲ್ಲಿ ಯಶಸ್ವಿಯೂ ಆಗುತ್ತಿದ್ದಾರೆ. ಅವರಲ್ಲಿ ನಾಗೇಶ್ ಕೋಗಿಲು ಕೂಡ ಒಬ್ಬರು.

    ಮೂಲತಃ ಬೆಂಗಳೂರಿನವರಾದ ನಾಗೇಶ್ ಯಲಹಂಕದ ಕೋಗಿಲು ನವರು. ವೃತ್ತಿಯಲ್ಲಿ ಬ್ಯುಸಿನೆಸ್ ಮೆನ್. ಇವರ ಸಿನಿಮಾ ಪ್ರೀತಿ ಇಂದು ನೆನ್ನೆಯದಲ್ಲ. ಬಾಲ್ಯದ ದಿನಗಳಿಂದಲೂ ಸಿನಿಮಾ, ನಟನೆಯಲ್ಲಿ ಅಪಾರ ಆಸಕ್ತಿ. ಆ ಕನಸಿನ ಬೆನ್ನತ್ತಿ 2006ರಲ್ಲಿ ಗಾಂಧೀನಗರಕ್ಕೆ ಬಂದು ಅವಕಾಶಗಳು ಸಿಗದೆ, ನಿರಾಸೆಯಲ್ಲಿ ಹೋದವರು. ಆದರೆ ಸಿನಿಮಾ ರಂಗಕ್ಕೆ ಏನಾದರೂ ಕೊಡುಗೆ ಕೊಡಬೇಕು ಎನ್ನುವ ತುಡಿತ ಮಾತ್ರ ಕಡಿಮೆ ಆಗಿರಲಿಲ್ಲ. ಕಲಾವಿದನಾಗದಿದ್ದರೇನಂತೆ ಉತ್ತಮ ಸಿನಿಮಾ ನಿರ್ಮಾಣ ಮಾಡಿ ಕಲಾ ದೇವಿಯ ಸೇವೆ ಮಾಡಿದರಾಯಿತು ಎಂದು ನಿರ್ಮಾಪಕರಾದರು. ಆಗ ನಿರ್ಮಾಣ ಮಾಡಿದ ಚಿತ್ರವೇ ‘ಹುಲಿರಾಯ’. ಇದನ್ನೂ ಓದಿ:  ‘ಟಕ್ಕರ್’ ನಲ್ಲಿ ಡಾಕ್ಟರ್ ಆದ ನಟಿ ರಂಜನಿ ರಾಘವನ್

    2017ರಲ್ಲಿ ತೆರೆಕಂಡ ‘ಹುಲಿರಾಯ’ ಸಿನಿಮಾ ಬಗ್ಗೆ ಗೊತ್ತಿರಬಹುದು. ಈ ಚಿತ್ರದ ಮೂಲಕ ಚಂದನವನಕ್ಕೆ ನಿರ್ಮಾಪಕರಾಗಿ ಕಾಲಿಟ್ಟವರು ನಾಗೇಶ್ ಕೋಗಿಲು. ಚಿತ್ರ ಹೇಳಿಕೊಳ್ಳುವಂತ ಯಶಸ್ಸು ಕಾಣದಿದ್ದರೂ ನಿರ್ಮಾಪಕರ ಸಿನಿಮಾ ಪ್ರೀತಿ, ಕಟೆಂಟ್ ಆಯ್ಕೆಯಲ್ಲಿ ಅವರಿಗಿದ್ದ ಜ್ಞಾನ ಎಲ್ಲವೂ ಪ್ರಶಂಸೆಗೆ ಪಾತ್ರವಾಗಿತ್ತು. ತದನಂತರ ಅಳೆದು ತೂಗಿ ಮತ್ತೊಂದು ಚಿತ್ರವನ್ನು ಆಯ್ಕೆ ಮಾಡಿಕೊಂಡು ನಿರ್ಮಾಣ ಮಾಡಿದ್ದಾರೆ. ಅದುವೇ ರಘು ಶಾಸ್ತ್ರಿ ನಿರ್ದೇಶನದ ‘ಟಕ್ಕರ್’. ಇದನ್ನೂ ಓದಿ:  ಪೊಲೀಸರೊಂದಿಗೆ ಹಾಡಿ ಕುಣಿದ ಹ್ಯಾಟ್ರಿಕ್ ಹೀರೋ : ‘ಟಗರು-2’ ಸುಳಿವು ಕೊಟ್ಟ ಶಿವಣ್ಣ

    ಸೈಬರ್ ಕ್ರೈಂ ಕಥಾಹಂದರದ ಚಿತ್ರದಲ್ಲಿ ಮನೋಜ್ ಕುಮಾರ್, ರಂಜನಿ ರಾಘವನ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಇದೇ ವಾರ ಅಂದರೆ 6ನೇ ತಾರೀಖು ಸಿನಿಮಾ ಬಿಡುಗಡೆಯಾಗುತ್ತಿದೆ. ಸೈಬರ್ ಕ್ರೈಂ ಕಥಾಹಂದರದ ಈ ಚಿತ್ರ ಮನರಂಜನೆ ಜೊತೆಗೆ ಸಾಮಾಜಿಕ ಜಾಲತಾಣದ ಬಗ್ಗೆ ಎಚ್ಚರಿಕೆ ಮೂಡಿಸುವ, ಹೆಣ್ಣು ಮಕ್ಕಳ ಮೇಲು ಬೆಳಕು ಚೆಲ್ಲುವ ಕಟೆಂಟ್ ಒಳಗೊಂಡಿದೆ. ಸಿನಿಮಾದ ಕಥೆ ಪ್ರಸ್ತುತ ಎನಿಸಿದ್ದರಿಂದ, ನಾಗೇಶ್ ಕೋಗಿಲು ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಒಪ್ಪಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ತಮ್ಮದೇ ಆದ ಎಸ್‍ಎಲ್‍ಎನ್ ಕ್ರಿಯೇಷನ್ಸ್ ನಡಿ ತೆರೆ ಮೇಲೆ ತಂದಿದ್ದಾರೆ. ಚಿತ್ರದ ಕಟೆಂಟ್ ಮೇಲೆ ನಂಬಿಕೆ ಇಟ್ಟಿರುವ ನಿರ್ಮಾಪಕರು ಪ್ರೇಕ್ಷಕರು ಒಪ್ಪಿ, ಅಪ್ಪಿ ಜೈಕಾರ ಹಾಕಿದರೆ ಮತ್ತೊಂದಿಷ್ಟು ಉತ್ತಮ ಸಿನಿಮಾ ಮಾಡುವ ಹಂಬಲವಿದೆ ಎನ್ನುತ್ತಾರೆ.

  • ಟಕ್ಕರ್ ಆಡಿಯೋ ಬಿಡುಗಡೆ ಮಾಡಿದ ದರ್ಶನ್

    ಟಕ್ಕರ್ ಆಡಿಯೋ ಬಿಡುಗಡೆ ಮಾಡಿದ ದರ್ಶನ್

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುಟುಂಬದ ಹುಡುಗ ಮನೋಜ್ ಕುಮಾರ್ ನಾಯಕನಾಗಿ ನಟಿಸಿರುವ ಟಕ್ಕರ್ ಚಿತ್ರದ ಟೀಸರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಚಲನಚಿತ್ರ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು.

    ನಟ ದರ್ಶನ್ ಮುಖ್ಯ ಅತಿಥಿಯಾಗಿ ಆಗಮಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆಗೊಳಿಸಿ ಮಾತನಾಡುತ್ತಾ, ಮನೋಜ್ ಬೇರೆ ಯಾರೂ ಅಲ್ಲ. ನನ್ನ ಅಕ್ಕನ ಮಗ. ನಮ್ಮ ದೊಡ್ಡಪ್ಪನ ಮೊಮ್ಮಗ. ನನ್ನ ಜೊತೆ ಅಂಬರೀಶ ಹಾಗೂ ಚಕ್ರವರ್ತಿ ಚಿತ್ರಗಳಲ್ಲಿ ಆ್ಯಕ್ಟ್ ಮಾಡಿದ್ದಾನೆ. ಸಿನಿಮಾರಂಗದಲ್ಲಿ ಸಾಕಷ್ಟು ಕಷ್ಟ ಪಟ್ಟಿದ್ದಾನೆ. ಈ ಸಿನಿಮಾದಲ್ಲಿ ಒಳ್ಳೇ ಕಂಟೆಂಟ್ ಇದೆ. ಟೀಸರ್‍ನಲ್ಲಿ ಎಲ್ಲರ ಶ್ರಮ ಎದ್ದು ಕಾಣುತ್ತಿದೆ. ಈ ಚಿತ್ರದ ನಿರ್ಮಾಪಕರಾದ ನಾಗೇಶ್ ಅವರು ಸಾಕಷ್ಟು ಸಿನಿಮಾಗಳ ಬಗ್ಗೆ ಅಪಾರವಾದ ಪ್ರೀತಿ ಹೊಂದಿದ್ದಾರೆ. ಕೊರಿಯೋಗ್ರಾಫರ್ ಮೋಹನ್ ಕಸದಲ್ಲೂ ರಸ ತೆಗೆಯೋ ವ್ಯಕ್ತಿ. ಮಲೇಶಿಯಾದಲ್ಲಿ ಶೂಟ್ ಮಾಡಿರುವ ಡ್ಯೂಯೆಟ್ ಸಾಂಗನ್ನು ಬರೀ ಎರಡು ದಿನಗಳಲ್ಲಿ ಎಷ್ಟು ಅದ್ಭುತವಾಗಿ ಮಾಡಿಕೊಟ್ಟಿದ್ದಾನೆ. ಮನೋಜ್ ಕೂಡಾ ಸ್ಕ್ರೀನ್ ಮೇಲೆ ತುಂಬಾ ಚೆನ್ನಾಗಿ ಕಾಣುತ್ತಿದ್ದಾನೆ” ಎಂದರು.

    ಕೆ.ಎನ್.ನಾಗೇಶ್ ಕೋಗಿಲು ಅವರ ನಿರ್ಮಾಣದ ಈ ಚಿತ್ರಕ್ಕೆ ವಿ.ರಘುಶಾಸ್ತ್ರಿ ಆಕ್ಷನ್ ಕಟ್ ಹೇಳಿದ್ದಾರೆ. ಮನೋಜ್‍ಗೆ ನಾಯಕಿಯಾಗಿ ಪುಟ್ಟಗೌರಿ ಮದುವೆ ಖ್ಯಾತಿಯ ರಂಜನಿ ರಾಘವನ್ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕ ರಘುಶಾಸ್ತ್ರಿ ಮಾತನಾಡಿ, ‘ರನ್ ಆಂಟನಿ’ ನಂತರ ನಾನು ರೆಡಿ ಮಾಡಿಕೊಂಡಿದ್ದ ಕಥೆಯಿದು. ಚಿತ್ರಕ್ಕೆ 65 ದಿನಗಳ ಕಾಲ ಮೈಸೂರು, ಬೆಂಗಳೂರು ಮತ್ತು ಮಲೇಶಿಯಾದಲ್ಲಿ ಮೂರು ಷೆಡ್ಯೂಲ್‍ನಲ್ಲಿ ಚಿತ್ರೀಕರಿಸಿದ್ದೇವೆ. ನಮ್ಮ ಮನೆಯ ಹೆಣ್ಣುಮಕ್ಕಳು ನಮ್ಮ ಮನೆಯಲ್ಲೇ ಸೇಫ್ ಆಗಿಲ್ಲ ಎನ್ನುವುದೇ ಈ ಸಿನಿಮಾದ ಕಾನ್ಸೆಪ್ಟ್. ಸೈಬರ್ ಕ್ರೈಂ ಹಿನ್ನೆಲೆಯಲ್ಲಿ ನಡೆಯುವ ಕಥೆ ಚಿತ್ರದಲ್ಲಿದೆ. ಚಿತ್ರದಲ್ಲಿ ಕದ್ರಿ ಮಣಿಕಾಂತ್ ಅವರು ಚಿತ್ರಕ್ಕೆ ಪಕ್ಕಾ ಮಾಸ್ ಮತ್ತು ಮೆಲೋಡಿ ಟ್ಯೂನ್ ಕೊಟ್ಟಿದ್ದಾರೆ. ವಿಲನ್ ಆಗಿ ಭಜರಂಗಿ ಖ್ಯಾತಿಯ ಸೌರವ್ ಲೋಕಿ ಕಾಣಿಸಿಕೊಂಡಿದ್ದಾರೆ. 30 ನಿಮಿಷಗಳ ಗ್ರಾಫಿಕ್ಸ್ ಕೂಡ ಇದರಲ್ಲಿದೆ. ಟಕ್ಕರ್ ಎಂದರೆ ಪಾಸಿಟಿವ್ ಹಾಗೂ ನೆಗಟಿವ್ ಎರಡೂ ಅರ್ಥವಿದ್ದು ಒಳ್ಳೆಯದು ಮತ್ತು ಕೆಟ್ಟದ್ದರ ನಡುವಿನ ಸಂಘರ್ಷಣೆ ಈ ಚಿತ್ರದಲ್ಲಿದೆ. ಲವ್ ಸ್ಟೋರಿ ಜೊತೆಗೆ ಆಕ್ಷನ್ ಪ್ಯಾಕ್ ಇರುವ ಚಿತ್ರ ಎಂದರು.

    ನಿರ್ಮಾಪಕ ನಾಗೇಶ್ ಕೋಗಿಲು ಮಾತನಾಡಿ, ಹುಲಿರಾಯ ನಂತರ ನಮ್ಮ ಬ್ಯಾನರ್‍ನ ಎರಡನೇ ಚಿತ್ರ. ಸೋಷಿಯಲ್ ಮೀಡಿಯಾಗಳಿಂದಾಗುವ ಅವಘಡಗಳ ಬಗ್ಗೆ ಚಿತ್ರದಲ್ಲಿ ಹೇಳಿದ್ದೇವೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ವಿ. ನಾಗೇಂದ್ರ ಪ್ರಸಾದ್ ಹಾಗೂ ರಘುಶಾಸ್ತ್ರಿ ಸಾಹಿತ್ಯ ಬರೆದಿದ್ದಾರೆ ಎಂದು ಹೇಳಿದರು.

    ನಾಯಕ ಮನೋಜ್‍ಕುಮಾರ್ ಮಾತನಾಡಿ, ಇದೊಂದು ನಾರ್ಮಲ್ ಕಥೆ. ಸೈಬರ್ ಕ್ರೈಮ್ ವಿಷಯ ಇಟ್ಟುಕೊಂಡು ನಿರ್ದೇಶಕರು ಕಥೆ ಮಾಡಿದ್ದಾರೆ. ಕಮರ್ಷಿಯಲ್ ಆಗಿ ಚಿತ್ರವನ್ನು ಹೇಳಬೇಕೆಂದು ಐದು ಫೈಟ್ಸ್ ಇಟ್ಟಿದ್ದೇವೆ. ಈ ಚಿತ್ರಕ್ಕೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬೆನ್ನೆಲುಬಾಗಿ ನಿಂತಿದ್ದಾರೆ. ಪ್ರತೀ ಹಂತದಲ್ಲೂ ದರ್ಶನ್ ಮತ್ತು ದಿನಕರ್ ಅವರು ನೀಡುತ್ತಾ ಬಂದಿರುವ ಮಾರ್ಗದರ್ಶನಕ್ಕೆ ಟಕ್ಕರ್ ತಂಡ ಅಭಾರಿಯಾಗಿದೆ ಎಂದರು.

    ನಾಯಕಿ ರಂಜನಿ ರಾಘವನ್ ಮಾತನಾಡಿ ಇದು ನನ್ನ ಎರಡನೇ ಚಿತ್ರ, ಎಂಬಿಬಿಎಸ್ ಓದುತ್ತಿರುವ ಮೆಡಿಕಲ್ ಸ್ಟೂಡೆಂಟ್ ಆಗಿ ನಾನು ಕಾಣಿಸಿಕೊಂಡಿದ್ದೇನೆ. ಒಳ್ಳೆಯ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ ಎಂದರು. ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಮಾತನಾಡಿ ನಾನು ಕಮರ್ಷಿಯಲ್ ಸಿನಿಮಾ ಮಾಡಬೇಕೆಂದು ಕಾಯುತ್ತಿದ್ದಾಗ ರಘು ಈ ಸಿನಿಮಾ ಮ್ಯೂಸಿಕ್ ಮಾಡಲು ಕರೆದರು. ರಘು ಜೊತೆ ಇದು ಎರಡನೇ ಸಿನಿಮಾ. ಹೀರೋ ಇಂಟ್ರಡಕ್ಷನ್ ಸಾಂಗನ್ನು ಶಶಾಂಕ್ ಶೇಷಗಿರಿ ಅದ್ಭುತವಾಗಿ ಹಾಡಿದ್ದಾರೆ. ಡ್ಯುಯೆಟ್ ಹಾಡನ್ನು ವಿಜಯಪ್ರಕಾಶ್ ಮತ್ತು ಅನುರಾಧ ಭಟ್ ಹಾಗೂ ಮೋಟಿವೇಷನಲ್ ಸಾಂಗನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ ಎಂದು ಹೇಳಿಕೊಂಡರು.

    ಖಳನಾಯಕ ಭಜರಂಗಿ ಲೋಕಿ, ಸಾಹಿತಿ ವಿ.ನಾಗೇಂದ್ರ ಪ್ರಸಾದ್, ಛಾಯಾಗ್ರಾಹಕ ವಿಲಿಯಮ್ ಡೇವಿಡ್ ಅಶ್ವಥ್ ಗುರೂಜಿ, ಕೆಪಿ.ನಾಗರಾಜ್, ಅರವಿಂದ್ ಕೌಶಿಕ್, ಗಾಯಕ ಶಶಾಂಕ್ ಶೇಷಗಿರಿ ಹಾಗೂ ಇತರ ಗಣ್ಯರು ಸಮಾರಂಭದಲ್ಲಿ ಹಾಜರಿದ್ದರು.