ಬೆಂಗಳೂರು: ಮುದ್ರಣ ದೋಷದಿಂದಾಗಿ ನಾಡಗೀತೆ (Nada Geethe) ವಿಚಾರದಲ್ಲಿ ಗೊಂದಲವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆಯ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಸ್ಪಷ್ಟನೆ ನೀಡಿದ್ದಾರೆ.
ಮನುಷ್ಯ ನಡೆಯುವಾಗ ಎಡವುತ್ತಾನೆ. ಹಾಗೆಯೇ ಇಲ್ಲಿ ಸಹಾ ಸಣ್ಣ ತಪ್ಪಾಗಿದೆ. ಅಧಿಕಾರಿಗಳು ಮನಸ್ಸೋ ಇಚ್ಛೆ ನಡೆದುಕೊಂಡಿಲ್ಲ. ಅಧಿಕಾರಿಗಳ ಮೇಲೆ ಸರ್ಕಾರದ ಲಂಗು ಲಗಾಮು ಎಲ್ಲಾ ಇದೆ. ಆದರೆ ಸಣ್ಣ ತಪ್ಪಿನಿಂದ ಈ ಗೊಂದಲ ಆಗಿದೆ. ಎಲ್ಲವನ್ನೂ ಸರಿಪಡಿಸಿ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದರು.
ನಾಡಗೀತೆ ವಿವಾದ ಕೋರ್ಟ್‌ನಲ್ಲಿ ಇತ್ತು. ಸಿ ಅಶ್ವಥ್ ಅವರ ಧ್ವನಿಯಲ್ಲಿ ನಾಡಗೀತೆ ಪ್ರಸಾರವಾಗಬೇಕು. ಮೈಸೂರು ಅನಂತ ಸ್ವಾಮಿ ಅವರ ಧ್ವನಿಯಲ್ಲಿ ಅಲ್ಲ ಎಂದು ಕಿಕ್ಕೇರಿ ಕೃಷ್ಣ ಮೂರ್ತಿ ಅವರು ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯಕ್ಕೆ ನಾವು ಮಾಹಿತಿ ನೀಡುವಾಗ ಈ ಆದೇಶ ಆಗಿದ್ದು ಅದರಲ್ಲಿ ಸಣ್ಣ ಮುದ್ರಣ ದೋಷವಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ರಾಮನಗರ ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ – ಐಜೂರು ಠಾಣೆಯ ಪಿಎಸ್ಐ ಅಮಾನತು
ನಮ್ಮ ಸರ್ಕಾರಕ್ಕೆ ಕನ್ನಡದ ಬಗ್ಗೆ ಕಾಳಜಿ ಇದೆ. ಈ ವಿಚಾರದಲ್ಲಿ ಬಹಳ ಸ್ಪಷ್ಟವಾಗಿ ಇದ್ದೇವೆ. ಮಾಧ್ಯಮ ಮಿತ್ರರಿಗೆ ಇದರ ಬಗ್ಗೆ ತಿಳಿಸಲೆಂದೇ ಬಂದಿದ್ದೇನೆ. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆಯಾಗಿದೆ ಎಂದರು.
ಶಿವಮೊಗ್ಗ: ವಿಧಾನಸಭಾ ಚುನಾವಣೆ (Karnataka Election) ಹಿನ್ನೆಲೆ ತಮಿಳು (Tamil) ಭಾಷಿಗ ಮತದಾರರ ಮೇಲೆ ಬಿಜೆಪಿ (BJP) ಕಣ್ಣಿಟ್ಟಿದೆ. ಶಿವಮೊಗ್ಗದಲ್ಲಿ (Shivamogga) ತಮಿಳು ಭಾಷಿಗರ ಸಮಾವೇಶ ಆಯೋಜನೆ ಮಾಡಿದ್ದಾಗ ಕಾರ್ಯಕರ್ತರೊಬ್ಬರು ತಮಿಳಿನ ನಾಡಗೀತೆ ಹಾಕಿದ್ದರು. ಈ ವೇಳೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಅದನ್ನು ನಿಲ್ಲಿಸಿ ಕನ್ನಡದ ನಾಡಗೀತೆಯನ್ನು (Kannada Nada Geete) ಹಾಕಿಸಿದ ಪ್ರಸಂಗ ನಡೆಯಿತು.
ಶಿವಮೊಗ್ಗ ನಗರ ಹಾಗೂ ಭದ್ರಾವತಿ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮಿಳು ಮತದಾರರಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದ ಎನ್‌ಇಎಸ್ ಮೈದಾನದಲ್ಲಿ ಬಿಜೆಪಿ ತಮಿಳು ಭಾಷಿಗರ ಸಮಾವೇಶ ಆಯೋಜನೆ ಮಾಡಿತ್ತು. ಸಮಾವೇಶದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಮಾಜಿ ಸಚಿವ ಈಶ್ವರಪ್ಪ, ಅಭ್ಯರ್ಥಿ ಚನ್ನಬಸಪ್ಪ ಭಾಗಿಯಾಗಿದ್ದರು.
ಈ ವೇಳೆ ಸಮಾವೇಶದಲ್ಲಿ ತಮಿಳು ಪ್ರಾರ್ಥನೆ ಪ್ಲೇ ಆಗಿದೆ. ತಕ್ಷಣವೇ ಎಚ್ಚೆತ್ತ ಮಾಜಿ ಸಚಿವ ಈಶ್ವರಪ್ಪ, ಏಯ್ ಇದು ಯಾವ ಪ್ರಾರ್ಥನೆ? ನಾಡಗೀತೆ ಹಾಕಪ್ಪ. ನಿಮ್ಮಲ್ಲಿ ಯಾರಾದರೂ ನಾಡಗೀತೆ ಹಾಡುತ್ತೀರಾ ಎಂದು ನೆರೆದಿದ್ದವರನ್ನು ಈಶ್ವರಪ್ಪ ಕೇಳಿದ್ದಾರೆ. ಬಳಿಕ ಆಯೋಜಕರು ತಮಿಳಿನ ಪ್ರಾರ್ಥನೆಯನ್ನು ನಿಲ್ಲಿಸಿ ಕನ್ನಡದ ನಾಡಗೀತೆಯನ್ನು ಪ್ಲೇ ಮಾಡಿದರು.
ಬಳಿಕ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕಾದರೆ ರಾಜ್ಯದಲ್ಲಿ 25 ಸ್ಥಾನ ಗೆಲ್ಲಿಸಿದ್ದೇವೆ. ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಒಂದೇ ಒಂದು ಸೀಟ್ ಗೆಲ್ಲಲ್ಲ ಎಂದು ಹೇಳುತ್ತಿದ್ದರು. ಅವರ ಹಣೆಬರಹಕ್ಕೆ ಒಂದು ಸ್ಥಾನ ಗೆದ್ದರು. ಮುಂದಿನ ಬಾರಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಬೇಕು. ಈ ದೇಶವನ್ನು ಉಳಿಸುವ, ಧರ್ಮವನ್ನು ಉಳಿಸುವ ಪಕ್ಷ ಬಿಜೆಪಿ ಎಂದರು. ಇದನ್ನೂ ಓದಿ: `ಕೈ’ ಹಿಡಿದ ನಾರಾಯಣ ಗೌಡ, ಪ್ರಭಾಕರ ರೆಡ್ಡಿ – ಹೆಚ್‌ಡಿಕೆಗೆ ಡಿಕೆ ಬ್ರದರ್ಸ್ ಟಕ್ಕರ್
ತಮಿಳುನಾಡಿನಲ್ಲಿ ಒಂದೇ ಒಂದು ಬಿಜೆಪಿ ಶಾಸಕರಿರಲಿಲ್ಲ. ಅಣ್ಣಾಮಲೈ ಬಿಜೆಪಿ ಸೇರಿ, ಬಿಜೆಪಿ ಅಧ್ಯಕ್ಷರಾದ ಬಳಿಕ 4 ಬಿಜೆಪಿ ಶಾಸಕರು ಗೆದ್ದರು. ಕರ್ನಾಟಕ, ತಮಿಳುನಾಡು ಭಾವೈಕ್ಯತೆ ಬೆಸೆಯುವ ಸಲುವಾಗಿ ಸರ್ವಜ್ಞ, ತಿರುವಣ್ಣಾಮಲೈ ಪ್ರತಿಮೆ ನಿರ್ಮಿಸಿದ ಕೀರ್ತಿ ಯಡಿಯೂರಪ್ಪ ಅವರದ್ದು. ಚನ್ನಬಸಪ್ಪ ಗೆಲ್ಲಿಸು ತಾಯಿ ಅಂತಾ ಓಂ ಶಕ್ತಿ ದೇವಿಯಲ್ಲಿ ಪ್ರಾರ್ಥನೆ ಮಾಡಿ. ಈ ಹಿಂದೆ ಹಿಂದೂ ಧರ್ಮಕ್ಕೋಸ್ಕರ ನನ್ನನ್ನು ಗೆಲ್ಲಿಸಿದ್ದೀರಾ. ನನ್ನ ಎದುರು ದೊಡ್ಡ ದೊಡ್ಡ ಜಾತಿಯವರು ಸ್ಪರ್ಧೆ ಮಾಡಿದಾಗಲೂ ನನ್ನ ಬೆಂಬಲಿಸಿದ್ದೀರಾ. ಚನ್ನಬಸಪ್ಪ ಗೆದ್ದರೆ ನಾನೇ ಗೆದ್ದಂತೆ ಎಂದು ನುಡಿದರು. ಇದನ್ನೂ ಓದಿ: ಹಾಸನದಲ್ಲಿ ಅಭ್ಯರ್ಥಿ ಹೆಸರು ಗೊತ್ತಿಲ್ಲ ಎಂದಿದ್ದವರು ಈಗ ಮಗ ಎನ್ನುತ್ತಿದ್ದಾರೆ: ಭವಾನಿಗೆ ಪ್ರೀತಂ ಗೌಡ ಟಾಂಗ್
ನವದೆಹಲಿ: `ದೆಹಲಿ ಕರ್ನಾಟಕ ಸಂಘ’ದ (Delhi Karnataka Sangha) 75ನೇ ವಾರ್ಷಿಕೋತ್ಸವಕ್ಕೆ ಇಲ್ಲಿನ ತಲಕ್‌ಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಚಾಲನೆ ನೀಡಿದರು.
ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ಕರ್ನಾಟಕ ಸಂಘ `ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ಕನ್ನಡವಾಗಿರು’ ಎಂಬ ಆಶಯದಲ್ಲಿ ಕೆಲಸ ಮಾಡುತ್ತಿದೆ. ದೇಶ ಅಮೃತ ಮಹೋತ್ಸವ ಆಚರಿಸುವಾಗ ಕರ್ನಾಟಕ ಸಂಘ ಕೂಡಾ ತನ್ನ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಸಂತಸದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: BJP ಕಚೇರಿಗೆ ತೆರಳುತ್ತಿದ್ದ ಕೇಂದ್ರ ಸಚಿವರ ಬೆಂಗಾವಲು ವಾಹನಕ್ಕೆ ಕಲ್ಲು ತೂರಾಟ – ಪರಿಸ್ಥಿತಿ ಉದ್ವಿಗ್ನ
Addressing ‘Barisu Kannada Dimdimava’ cultural festival in Delhi. It celebrates the vivid culture of Karnataka. https://t.co/8PipVHg2U1
ಈ ಸಂಘದ ಕನಸು ಕಂಡು ಅದನ್ನು ಸಹಕಾರಗೊಳಿಸಿದ ಗಣ್ಯರಿಗೆ ನಾನು ಗೌರವ ಸಲ್ಲಿಸುತ್ತೇನೆ. 75 ವರ್ಷ ಸುಮ್ಮನೆ ಆಗುವುದಿಲ್ಲ, ಸಾಕಷ್ಟು ಏಳುಬೀಳು ಕಂಡಿರುತ್ತದೆ. ಎಲ್ಲ ಹಂತದಲ್ಲಿ ಸಂಘದ ಅಭಿವೃದ್ಧಿಗೆ ಕೈ ಜೋಡಿಸಿದವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಕರ್ನಾಟಕ ಇಲ್ಲದೇ ಭಾರತ ಎಂದು ಕರೆಯಲು ಸಾಧ್ಯವಿಲ್ಲ. ಏಕೆಂದರೆ ಕರ್ನಾಟಕ ಹನುಮನ ಜನ್ಮಸ್ಥಳ. ಹನುಮ ಇಲ್ಲದೆ ರಾಮ ಇಲ್ಲ, ರಾಮ ಇಲ್ಲದೇ `ರಾಮಯಣ’ ಇಲ್ಲ ಎಂದು ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಬಿಜೆಪಿಗೆ ವೋಟ್ ಹಾಕ್ತಾ ಇರಿ, ಪ್ರತಿ ವರ್ಷ ಸೈಟ್ ಕೊಡ್ತೀವಿ – ವಿ.ಸೋಮಣ್ಣ
ದೇವರ ದಾಸಿಮಯ್ಯರಂತಹ ಸಂತರು ದೇಶವನ್ನು ಜೋಡಿಸುವ ಕೆಲಸ ಮಾಡಿದ್ದಾರೆ. ಇಷ್ಟ ಲಿಂಗದ ಮೂಲಕ ದೇಶವನ್ನ ಬಸವಣ್ಣ ಜೋಡಿಸಿದ್ದಾರೆ. ರಾಣಿ ಅಬ್ಬಕ್ಕ, ಓಬವ್ವ, ಸಂಗೊಳ್ಳಿ ರಾಯಣ್ಣನಂತಹ ವೀರ ವಿರೋಧಿಗಳ ಮುಂದೆ ಗೋಡೆಯಂತೆ ನಿಲ್ಲುತ್ತಾರೆ. ಈ ಮೂಲಕ ಕರ್ನಾಟಕ ಭಾರತವನ್ನು ಪ್ರೇರೇಪಣೆಗೊಳಿಸಿದೆ. ಆದ್ರೆ ಕೆಲವರು ದೇಶವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಕುವೆಂಪು ಅವರು `ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಎಂದು ಅದ್ಭುತವಾಗಿ ಹೇಳಿದ್ದಾರೆ. ಈ ಗೀತೆಯ ಮೂಲಕವೇ ಭಾರತ ಮಾತೆಯ ಮಗಳು ಕರ್ನಾಟಕ ಮಾತೆ ಎಂದು ಹೇಳಿದ್ದಾರೆ. `ಏಕ್ ಭಾರತ್ ಶ್ರೇಷ್ಠ ಭಾರತ್’ ಪರಿಕಲ್ಪನೆಯೂ ಇದರಲ್ಲಿದೆ. ಅಷ್ಟೇ ಅಲ್ಲದೇ ಅನುಭವ ಮಂಟಪದ ಮೂಲಕ, ವಚನಗಳ ಮೂಲಕ ಬಸವಣ್ಣ ಪ್ರಕಾಶಿಸುತ್ತಿದ್ದಾರೆ. ನನಗೆ ಲಂಡನ್ ನಲ್ಲಿ ಅವರ ಪ್ರತಿಮೆ ಉದ್ಘಾಟಿಸುವ ಅವಕಾಶವೂ ಸಿಕ್ಕಿತು. ಬೇರೆ ಬೇರೆ ಭಾಷೆಯಲ್ಲಿ ವಚನಗಳ ಪುಸ್ತಕ ಬಿಡುಗಡೆ ಮಾಡುವ ಅವಕಾಶವೂ ಸಿಕ್ಕಿತ್ತು ಎಂದು ಸ್ಮರಿಸಿದರು.
ವಚನಗಳಲ್ಲಿ ಬಸವಣ್ಣನವರ ಪ್ರಭಾವ ಇದೆ. ಕರ್ನಾಟಕದ ಅಭಿವೃದ್ಧಿಗೆ ಆದ್ಯತೆಯಾಗಿದೆ. ಮೊದಲು ಕರ್ನಾಟಕದಲ್ಲಿ ಸರ್ಕಾರ ಮಾಡಿ ಅಲ್ಲಿಂದ ಹಣ ಹೊರಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಈಗ ಜನರ ಅಭಿವೃದ್ಧಿಗೆ ಬಳಕೆಯಾಗುತ್ತಿದೆ. ಕರ್ನಾಟಕದ ಅಭಿವೃದ್ಧಿಗೆ 3 ವರ್ಷಗಳಲ್ಲಿ 30 ಸಾವಿರ ಕೋಟಿ ಅನುದಾನ ಬಿಜೆಪಿ ನೀಡಿದೆ. ಕಾಂಗ್ರೆಸ್ ಸರ್ಕಾರ 10 ವರ್ಷದ ಅವಧಿಯಲ್ಲಿ 10 ಸಾವಿರ ಕೋಟಿ ನೀಡಿತ್ತು. ಆದ್ರೆ ನಮ್ಮ ಸರ್ಕಾರ ಪ್ರತಿ ವರ್ಷ ರಸ್ತೆ ಅಭಿವೃದ್ಧಿಗೆಂದೇ 5 ಸಾವಿರ ಕೋಟಿ ನೀಡುತ್ತಿದೆ. ಭದ್ರಾ ಮೇಲ್ದಂಡೆ ಮೂಲಕ ಮಧ್ಯ ಕರ್ನಾಟಕದ ಅಭಿವೃದ್ಧಿ ಮಾಡುತ್ತಿದೆ. ಇದರಿಂದ ಕರ್ನಾಟಕದ ವಿಕಾಸ ಬದಲಾಗಲಿದೆ ಎಂದು ಹೇಳಿದರು.
ಮುಂದಿನ 25 ವರ್ಷ ಮಹತ್ವದಾಗಿದೆ. ಮತ್ತಷ್ಟು ಮಹತ್ವದ ಕೆಲಸಗಳನ್ನು ಮಾಡಬಹುದಾಗಿದೆ. ಕಲಿಕೆ ಮತ್ತು ಕಲೆ ಎರಡನ್ನು ಅಭಿವೃದ್ಧಿ ಮಾಡಬೇಕಿದೆ. ಏಕೆಂದರೆ ಈ ಕೌಶಲ್ಯ ಬೇರೆ ಭಾಷೆಗಳಲ್ಲಿ ಇಲ್ಲ. ಕರ್ನಾಟಕದ ಹಿರಿಮೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಿದೆ. ಅದಕ್ಕಾಗಿ ಗ್ರಂಥಾಲಯಗಳನ್ನು ಹೆಚ್ಚಿಸಬೇಕು. ಇದರಿಂದ ದೆಹಲಿ ಮಕ್ಕಳಿಗೂ ಕನ್ನಡ ಕಲಿಸಬಹುದಾಗಿದೆ. `ಕನ್ನಡ ಕಲಿಯಿರಿ, ಕನ್ನಡ ಕಲಿಸಿರಿ’ ಇದರಿಂದ ಲಾಭ ಇದೆ ಎಂದು ಕರೆ ನೀಡಿದರು.
ನನಗೆ ಇತ್ತೀಚೆಗೆ ಕಡಿಮೆ ಅವಧಿಯಲ್ಲಿ ಕರ್ನಾಟಕದ ಯಾತ್ರೆ ಮಾಡುವ ಅವಕಾಶ ಸಿಕ್ಕಿತು. ಭವಿಷ್ಯದಲ್ಲಿ ಯಾವುದೇ ಕಾರ್ಯಕ್ರಮ ದೆಹಲಿಯಲ್ಲಿ ನಡೆದರೂ, ಬೇರೆ ಭಾಷೆಯ ಕುಟುಂಬವನ್ನು ಕರೆತಂದು ತೋರಿಸಿ, ಕರ್ನಾಟಕದ ವೈಭವವನ್ನು ಅರ್ಥಮಾಡಿಸಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ನಂಜಾವಧೂತ ಶ್ರೀಗಳು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಂ ನಾಗರಾಜ್ ಮೊದಲಾದವರು ಪಾಲ್ಗೊಂಡಿದ್ದರು.
ರಾಜ್ಯದ ಚಿತ್ರಮಂದಿರಗಳಲ್ಲಿ (Theatre) ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ ಶ್ರೀ ಝೈದ್ ಖಾನ್ (Zaid Khan) ಅವರು ಇಂದು ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ (Basavaraja Bommai) ಅವರಿಗೆ ಮನವಿ ಸಲ್ಲಿಸಿದರು.
ನಮ್ಮ ದೇಶ, ನಾಡು, ನುಡಿಯ ಸಂಕೇತವಾಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯವರೆಗೂ ಎಲ್ಲರ ಬಾಯಲ್ಲೂ ಮೊಳಗಬೇಕು. ನಾಡಗೀತೆಯ ಮಹತ್ವ ಇಂದಿನ ಮತ್ತು ಮುಂದಿನ ಪೀಳಿಗೆಯ ಹೃದಯದೊಳಗೆ ಇಳಿಯಬೇಕು. ಹಾಗಾಗಿ ಮುಖ್ಯಮಂತ್ರಿಗಳು ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯೂ (state anthem) ಮೊಳಗುವಂತೆ ಮಾಡಬೇಕು ಎಂಬುದಾಗಿ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ಚಲನಚಿತ್ರ ಮಂಡಳಿಯವರೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ನಟ ಝೈದ್ ಖಾನ್ ಹೇಳಿದರು.
ಇದೇ ವೇಳೆ ತಮ್ಮ ಪ್ಯಾನ್ ಇಂಡಿಯಾ ಚಿತ್ರವಾದ ಬನಾರಸ್ ನ್ನು ಬೈಕಾಟ್ ಮಾಡುವ ಕೂಗು ಕೇಳಿ ಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಒಬ್ಬ ಕಲಾವಿದ. ಪ್ರಾಮಾಣಿಕವಾಗಿ ಈ ಚಿತ್ರಕ್ಕಾಗಿ ಕೆಲಸ ಮಾಡಿದ್ದೇನೆ. ಇದರಲ್ಲಿ ನನ್ನದೇನು ತಪ್ಪಿದೆ? ಸೋಲು ಮತ್ತು ಗೆಲುವು ಎರಡನ್ನೂ ಸಮನಾಗಿ ತೆಗೆದುಕೊಳ್ಳುವ ಸ್ವಭಾವ ನನ್ನದು. ನಾನೂ ಈ ನೆಲದ ಕಲಾವಿದ. ಜನ ಚಿತ್ರ ನೋಡಿ ಆಶೀರ್ವದಿಸುತ್ತಾರೆ ಎಂದು ನಂಬಿದ್ದೇನೆ ಎಂದು ಪ್ರತಿಕ್ರಿಯಿಸಿದರು.
ಈ ವೇಳೆ ವಿವಿಧ ಕನ್ನಡಪರ ಸಂಘಟನೆ, ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಮತ್ತಿತರರು ಝೈದ್ ಖಾನ್ ಅವರೊಂದಿಗಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ನಾಡಗೀತೆ ಕುರಿತ ಗೊಂದಲಕ್ಕೆ ಕೊನೆಗೂ ಸರ್ಕಾರ (Karnataka Government) ತೆರೆ ಎಳೆದಿದೆ. ರಾಷ್ಟ್ರಕವಿ ಕುವೆಂಪು (Kuvempu) ವಿರಚಿತ ನಾಡಿನ ಹೆಮ್ಮೆಯ ನಾಡಗೀತೆಗೆ ಕಾಲಮಿತಿಯನ್ನು ಸರ್ಕಾರ ನಿಗದಿ ಮಾಡಿದೆ.
ರಾಷ್ಟ್ರಕವಿ ಕುವೆಂಪು ವಿರಚಿತ ನಾಡಿನ ಹೆಮ್ಮೆಯ ನಾಡಗೀತೆ "ಜಯಭಾರತ ಜನನಿಯ ತನುಜಾತೆ"ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಿದ್ದೇವೆ. ಸಂಗೀತ ವಿದೂಷಿ ಎಸ್ ಆರ್. ಲೀಲಾವತಿ ಅಧ್ಯಕ್ಷತೆ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ, ಇನ್ನು ಮುಂದೆ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್ ನಲ್ಲಿ ಹಾಡಲಾಗುತ್ತದೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai), ರಾಷ್ಟ್ರಕವಿ ಕುವೆಂಪು ವಿರಚಿತ ನಾಡಿನ ಹೆಮ್ಮೆಯ ನಾಡಗೀತೆ “ಜಯಭಾರತ ಜನನಿಯ ತನುಜಾತೆ” (Jaya Bharata Jananiya Tanujate) ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಿದ್ದೇವೆ. ಸಂಗೀತ ವಿದೂಷಿ ಎಸ್ ಆರ್. ಲೀಲಾವತಿ ಅಧ್ಯಕ್ಷತೆ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ, ಇನ್ನು ಮುಂದೆ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್ ನಲ್ಲಿ ಹಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕುವೆಂಪು ವಿರಚಿತ ನಾಡಗೀತೆ"ಜಯಭಾರತ ಜನನಿಯ ತನುಜಾತೆ" ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ. pic.twitter.com/GQSzmZbd2m
ಇತ್ತ ಸಚಿವ ಸುನೀಲ್ ಕುಮಾರ್ (Sunil Kumar) ಟ್ವೀಟ್ ಮಾಡಿ, ಕುವೆಂಪು ವಿರಚಿತ ನಾಡಗೀತೆ “ಜಯಭಾರತ ಜನನಿಯ ತನುಜಾತೆ” ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ.
ನಾಡಗೀತೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ಪ್ರಸ್ತಾಪಕ್ಕೆ ಸಮ್ಮತಿ ನೀಡಿದ ಮುಖ್ಯಮಂತ್ರಿ @BSBommai ಅವರಿಗೆ ಅಭಿನಂದನೆಗಳು. ನಾಡಗೀತೆಯ ಒಂದಕ್ಷರವನ್ನೂ ಬಿಡದಂತೆ ಇನ್ನು ಅಧಿಕೃತವಾಗಿ ಹಾಡಲಾಗುತ್ತದೆ. (2/2)
ವಿವಾದವೇನಿತ್ತು..?: 2005ರಿಂದಲೂ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ ನೆನೆಗುದಿಗೆ ಬಿದ್ದಿತ್ತು. ಕೆಲವೊಂದು ಕಾರ್ಯಕ್ರಮಗಳಲ್ಲಿ 7-8 ನಿಮಿಷಗಳ ಕಾಲ ಹಾಡಲಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂದು ಒತ್ತಾಯ ಸರ್ಕಾರದ ಮುಂದಿತ್ತು.
ಇದೀಗ ಸುನೀಲ್ ಕುಮಾರ್ ಅವರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ ಕೆಲವೇ ದಿನಗಳಲ್ಲಿ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವಂತೆ ಹಿರಿಯ ಸಂಗೀತ ವಿದೂಷಿ ಎಸ್.ಆರ್ ಲೀಲಾವತಿ ಅಧ್ಯಕ್ಷತೆಯಲ್ಲಿ 18 ಜನ ಇರುವ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ 2 ನಿಮಿಷ 30 ಸೆಕೆಂಡುಗಳಲ್ಲಿ ಹಾಡಬೇಕೆಂಬ ನೀಡಿದ್ದ ಶಿಫಾರು ಇದೀಗ ಅಧಿಕೃತಗೊಂಡಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕುವೆಂಪು ಬಗ್ಗೆ ಅಪಮಾನ ಮಾಡಲಾಗಿದೆ ಎಂಬ ಆರೋಪಕ್ಕೆ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಸ್ಪಷ್ಟೀಕರಣ ನೀಡಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮೂಲಕ ಸ್ಪಷ್ಟೀಕರಣ ನೀಡಿದ ಅವರು, ನಾನು ಕುವೆಂಪು ಅವರಿಗೆ ಅಪಮಾನ ಮಾಡಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ನಾಡಗೀತೆಗೆ ಅಪಮಾನ ಮಾಡಿದವರ ವಿರುದ್ದ ಸರ್ಕಾರ ಕ್ರಮ ತೆಗೆದುಕೊಳ್ಳಲಿ ಎಂದು ಮನವಿ ಮಾಡಿದ್ದಾರೆ.
ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ರಾಷ್ಟ್ರಕವಿ ಕುವೆಂಪು ಅವರ ವಿಚಾರವನ್ನು ಮುಂದಿಟ್ಟುಕೊಂಡು ಒಂದಷ್ಟು ವಿವಾದಗಳನ್ನು ಸೃಷ್ಟಿಸಲಾಗುತ್ತಿದೆ. ಅವುಗಳಲ್ಲಿ ಒಂದು, ಕುವೆಂಪು ಅವರು ಬರೆದಿರುವ ನಾಡಗೀತೆಗೆ ನಾನು ಅವಮಾನ ಮಾಡಿದ್ದೇನೆ ಎಂಬುದನ್ನು ಕುರಿತಾದದ್ದು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರು ಮತ್ತು ಚಿತ್ರಗಳನ್ನು ತೋರಿಸುವ ಹಲವಾರು ಪೋಸ್ಟರುಗಳು, ಚಿತ್ರಗಳು ಓಡಾಡುತ್ತಿವೆ. ನಾನು ಕುವೆಂಪು ಅವರ ಸಾಹಿತ್ಯವನ್ನು ಅತ್ಯಂತ ಪ್ರೀತಿ, ಗೌರವಗಳಿಂದ ಓದಿಕೊಂಡು ಬಂದಿದ್ದು ಯಾವುದೇ ಕಾರಣಕ್ಕೂ ಆ ಮಹಾಕವಿಗೆ ಆಗೌರವ ಸೂಚಿಸುವ ಪ್ರಶ್ನೆಯೇ ಇಲ್ಲ.
2017ರಲ್ಲಿ ಸನ್ಮಾನ್ಯ ಸಿದ್ಧರಾಮಯ್ಯನವರ ಕಾಂಗ್ರೆಸ್ ಪಕ್ಷವು ಆಡಳಿತಾರೂಢವಾಗಿದ್ದಾಗ ಸಚಿವರೊಬ್ಬರು ‘ಕನ್ನಡ ಶಾಲೆಗಳಲ್ಲಿ ಆರೇಬಿಕ್ ಭಾಷೆ ಕಲಿಸುತ್ತೇವೆ ಎಂಬ ಹೇಳಿಕೆ ಕೊಟ್ಟಾಗ ಅವರ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಆ ಆಕ್ರೋಶದ ಒಂದು ಭಾಗವಾಗಿ ಯಾರೋ ಒಬ್ಬರು ನಾಡಗೀತೆಯ ಧಾಟಿಯಲ್ಲಿ ನಾಲ್ಕು ಸಾಲುಗಳನ್ನು ಬರೆದು ಅಲ್ಲಿ ಆಗಿನ ಕಾಲದ ಸರಕಾರದ ನಡೆಯನ್ನು ಪ್ರಶ್ನಿಸಿದ್ದರು. ವಾಟ್ಸಾಪ್ ಮೂಲಕ ಬಂದಿದ್ದ ಆ ಬರಹವನ್ನು ನಾನು ಫೇಸ್‌ಬುಕ್ ಜಾಲತಾಣದಲ್ಲಿ ಹಂಚಿಕೊಂಡಿದ್ದೆ. ಇದು ವಾಟ್ಸಾಪ್‌ನಲ್ಲಿ ಬಂದ ಬರಹ ಎಂಬುದನ್ನು ಆ ಪೋಸಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದೆ. ಆದರೆ ಕೆಲವೊಂದು ವ್ಯಕ್ತಿಗಳು ನನ್ನ ಪೋಸ್ಟನ್ನು ತಮಗೆ ಬೇಕಾದಂತೆ ಬಳಸಿಕೊಂಡು, ನಾನು ಕುವೆಂಪು ಅವರಿಗೂ ನಾಡಗೀತೆಗೂ ಅವಮಾನ ಮಾಡಿದ್ದೇನೆಂದು ಬಿಂಬಿಸಿದರು. ಜೊತೆಗೆ ಪೊಲೀಸ್ ಠಾಣೆಯಲ್ಲೂ ಪ್ರಕರಣವನ್ನು ದಾಖಲಿಸಿದರು.
ಪೊಲೀಸರು ವಿಚಾರಣೆಗೆ ಕರೆದಾಗ ನಾನು ಅವರಿಗೆ ವಾಸ್ತವಾಂಶಗಳನ್ನು ಮನವರಿಕೆ ಮಾಡಿಕೊಟ್ಟಿದ್ದೆ. ವಾಸ್ತವವನ್ನು ಮನಗಂಡ ಪೊಲೀಸರು, ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬ ಕಾರಣಕ್ಕೆ ಪ್ರಕರಣವನ್ನು ಕೈಬಿಟ್ಟಿದ್ದರು. ಹಾಗಾಗಿ ಇದು ಪೊಲೀಸ್ ಇಲಾಖೆಯಲ್ಲಿ ಮಾತುಕತೆಯ ಮೂಲಕ ಬಗೆಹರಿದಿದ್ದ ಸಮಸ್ಯೆ. ಆದರೆ ಕೆಲವು ವಿರೋಧಿ ಶಕ್ತಿಗಳು ಈಗ ಪಠ್ಯಪುಸ್ತಕಗಳು ಶಾಲೆಗಳಿಗೆ ಹೋಗುತ್ತಿರುವ ಸಂದರ್ಭದಲ್ಲಿ ಈ ಹಳೆಯ ವಿಚಾರವನ್ನು ಮತ್ತೆ ಕೆದಕಿ ವಿವಾದವಾಗಿಸಲು ಪ್ರಯತ್ನಿಸುತ್ತಿರುವುದು ವಿಷಾದನೀಯ.
‘ಯಾವುದೇ ಕಾರಣಕ್ಕೂ ನಾನು ನಾಡಗೀತೆಯನ್ನು ಅವಮಾನಿಸುವ ಯೋಚನೆ ಮಾಡಿರಲಿಲ್ಲ. ಮಾಡುವುದೂ ಇಲ್ಲ. ಈ ಪ್ರಕರಣವನ್ನು ಹಲವಾರು ಶಕ್ತಿಗಳು ತಮ್ಮ ತಮ್ಮ ಸ್ವಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರಿನಲ್ಲಿ ಹಲವು ಸುಳ್ಳು ಸಾಲುಗಳನ್ನು, ಚಿತ್ರಗಳನ್ನು ಹಾಕಿ, ಅಲ್ಲೆಲ್ಲ ನಾನು ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ್ದೇನೆಂದು ಪ್ರಚಾರ ಮಾಡಿಕೊಂಡು ಬರಲಾಗುತ್ತಿದೆ. ಆ ಮೂಲಕ ಪ್ರಕರಣವು ರಾಜಕೀಯ ತಿರುವುಗಳನ್ನು ಪಡೆಯಬೇಕೆಂದು ಕೆಲವರು ಬಯಸುತ್ತಿರುವುದೂ ಸ್ಪಷ್ಟವಾಗುತ್ತಿದೆ. ಇದನ್ನೂ ಓದಿ: ಪಠ್ಯದಲ್ಲಿ ಕುವೆಂಪುಗೆ ಅವಮಾನ – ಯತೀಂದ್ರ ಸಿದ್ದರಾಮಯ್ಯ Vs ರೋಹಿತ್ ಚಕ್ರತೀರ್ಥ
ಈ ಎಲ್ಲ ಹಿನ್ನೆಲೆಯಲ್ಲಿ ನಾನು ಹೇಳಬಯಸುವುದೇನೆಂದರೆ, ಕುವೆಂಪು ಅವರ ವ್ಯಕ್ತಿತ್ವಕ್ಕಾಗಲೀ ಬರಹಕ್ಕಾಗಲೀ ಯಾವುದೇ ಅವಮಾನ ಮಾಡುವಂಥ ಯಾದ ಉದ್ದೇಶವೂ ನನಗಿಲ್ಲ. ಕುವೆಂಪು ಅವರ ಬರಹಗಳನ್ನು ಶಾಲಾದಿನಗಳಿಂದಲೂ ಓದಿಕೊಂಡು ಬಂದವನು ನಾನು, ಅವರ ಶ್ರೀರಾಮಾಯಣ ದರ್ಶನಮ್ ಮಹಾಕಾವ್ಯದ ಕೆಲವು ವಿಶಿಷ್ಟ ಪಾತ್ರಗಳ ಬಗ್ಗೆ ಉಪನ್ಯಾಸಗಳನ್ನು ಮಾಡಿದವನು, ಬರಹಗಳನ್ನು ಬರೆದವನು ನಾನು, ವರಕವಿ ದ. ರಾ. ಬೇಂದ್ರೆ ಮತ್ತು ರಾಷ್ಟ್ರಕವಿ ಕುವೆಂಪು – ಈ ಇಬ್ಬರು ಕನ್ನಡ ನೆಲದ ಗಂಗೆ-ಕಾವೇರಿಯರು ಎಂದು ಶೀರ್ಷಿಕೆ ಕೊಟ್ಟು ಅಂಕಣವನ್ನು ಬರೆದವನು ನಾನು, ನನ್ನ ಕನ್ನಡ ನೆಲದಲ್ಲಿ, ನನ್ನ ಕನ್ನಡ ಭಾಷೆಯ ಅತ್ಯುತ್ತಮ ಸಾಹಿತಿಯೊಬ್ಬರ ಬಗ್ಗೆ ಕನ್ನಡ ಪ್ರೀತಿಯುಳ್ಳವನಾದ ನಾನು ಸಮರ್ಥಿಸಿಕೊಂಡು ಮಾತಾಡಬೇಕಾದ ಪರಿಸ್ಥಿತಿ ಇದೆ ಎನ್ನುವುದು ನಿಜಕ್ಕೂ ದುರಂತ. ಕುವೆಂಪು ಅವರ ಮೇಲೆ ಅಪಾರ ಗೌರವವಿದ್ದುದಕ್ಕಾಗಿಯೇ ನಮ್ಮ ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅವರ ಅತ್ಯುತ್ತಮ ಶಿಶುಸಾಹಿತ್ಯವಾದ ‘ಬೊಮ್ಮನಹಳ್ಳಿಯ ಕಿಂದರಿಜೋಗಿ” ಯನ್ನು ಪಾಠವಾಗಿ ಅಳವಡಿಸಿದೆ. ಅವರ ಸಾಹಿತ್ಯವು 9, 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿಗಬೇಕು ಎನ್ನುವ ದೃಷ್ಟಿಯಿಂದಲೇ ಕುವೆಂಪು ಅವರ ಸಾಹಿತ್ಯವನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸುವ ಕೆಲಸವನ್ನು ಮಾಡಲಾಗಿದೆ. ಇದನ್ನೂ ಓದಿ: ಪಠ್ಯ ಪುಸ್ತಕದ ಪರಿಷ್ಕರಣೆ- ಅನುಮತಿ ಹಿಂತೆಗೆದುಕೊಂಡ ಮತ್ತಿಬ್ಬರು ಸಾಹಿತಿಗಳು
ಈ ವಿಚಾರಗಳನ್ನು ಗಮನಿಸದೆ ಏಕಾಏಕಿಯಾಗಿ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡಿ, ತೇಜೋವಧೆ ಮಾಡುವ ಕೆಲಸ ನಡೆಯುತ್ತಿರುವುದು ನಿಜಕ್ಕೂ ಬೇಸರ ತರುವ ಸಂಗತಿ ನನ್ನನ್ನು ಕುವೆಂಪು ವಿರೋಧಿ ಎಂಬ ರೀತಿಯಲ್ಲಿ ನಾಡಿನಾದ್ಯಂತ ಬಿಂಬಿಸಲು ನೋಡುತ್ತಿರುವುದು ನನಗಂತೂ ಮನಸ್ಸಿಗೆ ಘಾಸಿಯನ್ನು ಮಾಡಿದೆ. ನನ್ನ ಕನ್ನಡಪ್ರೀತಿ, ಕುವೆಂಪು ಪ್ರೀತಿ ಪ್ರಶ್ನಾತೀತವಾಗಿದೆ, ಯಾರೋ ಬರೆದ ಸಾಲುಗಳನ್ನು, ಅವು ಬೇರೆಯವರದು ಎಂದು ನಾನೇ ಸ್ವತಃ ಉಲ್ಲೇಖಿಸಿದ್ದ ಹೊರತಾಗಿಯೂ, ನನ್ನದೇ ಎಂಬಂತೆ ಬಿಂಬಿಸಿ ನನ್ನ ವ್ಯಕ್ತಿತ್ವಕ್ಕೆ ಅಪಚಾರ ಮಾಡುವ ಕೆಲಸವನ್ನು ಮಾಡುತ್ತಿರುವವರ ಬಗ್ಗೆ ನನಗೆ ಅಪಾರ ದುಃಖ, ಬೇಸರಗಳಿವೆ. ರಾಜಕೀಯ ಹಿತಾಸಕ್ತಿಗಳಿಗಾಗಿ ಹೀಗೆ ಓರ್ವ ಕನ್ನಡಿಗನನ್ನು, ಕನ್ನಡದ ಸಾಹಿತಿಯನ್ನು, ಕನ್ನಡಪ್ರೀತಿಯುಳ್ಳ ಭಾರತೀಯನನ್ನು ಹೀಗೆ ದಯವಿಟ್ಟು ಯಾರೂ ತೇಜೋವಧೆ ಮಾಡಿ ಹಣಿಯಲು ನೋಡಬಾರದೆಂದೇ ನನ್ನ ಪ್ರಾರ್ಥನೆ. ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿಗಳಾದ ಸ್ವಾಮಿ ನಿರ್ಮಲಾನಂದರು ಹೇಳಿರುವಂತೆ ಕುವೆಂಪು ಅವರು ಬರೆದಿರುವ ನಾಡಗೀತೆಗೆ ಅವಮಾನ ಮಾಡಿದ ವ್ಯಕ್ತಿಗೆ ಶಿಕ್ಷೆಯಾಗಲಿ. ಅವರನ್ನು ಪತ್ತೆಹಚ್ಚುವ ಕೆಲಸವನ್ನು ವ್ಯವಸ್ಥೆ ಮಾಡಲಿ ಎಂದು ಆಗ್ರಹಿಸುತ್ತೇನೆ.
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ತಡಮಾಡದೆ ಕ್ರಮಕೈಗೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಕುವೆಂಪು ಅವರು ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಸಾಹಿತ್ಯದ ಮೂಲಕ ಅರ್ಥಗರ್ಭಿತ ಪ್ರಯತ್ನ ಮಾಡಿದ ಮೇರು ಸಾಹಿತಿ. ಅವರ ಸಾಹಿತ್ಯವನ್ನು ಓದಿದವರ್ಯಾರೂ ಚಕಾರ ಎತ್ತುವ ಧೈರ್ಯ ಮಾಡುವುದಿಲ್ಲ. ಯಾರು ಸರಿಯಾಗಿ ಅರ್ಥೈಸಿಕೊಂಡಿಲ್ಲವೋ, ಅಂಥವರು ಮಾತ್ರ ಅಡ್ಡದಾರಿ ಹಿಡಿದು, ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯ ಮೆಂಟಲ್ ಗಿರಾಕಿಯ ರೀತಿ ಆಡಬಾರದು, ಪ್ರಬುದ್ಧವಾಗಿ ಮಾತನಾಡಬೇಕು: ಸಿ.ಟಿ.ರವಿ ವ್ಯಂಗ್ಯ
ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿರುವ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರನ್ನು ಸಾಹಿತ್ಯ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ. ಜೊತೆಗೆ ಶೀಘ್ರವಾಗಿಯೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: PSI ನೇಮಕಾತಿ ಅಕ್ರಮ: 2 ತಿಂಗಳ ಬಳಿಕ ಅಭ್ಯರ್ಥಿ ಶಾಂತಿಬಾಯಿ ಅರೆಸ್ಟ್
ಪತ್ರದಲ್ಲಿ ಏನಿದೆ?
ಜಗದ ಕವಿ, ಯುಗದ ಕವಿ, ನಾಡು ಕಂಡ ಅಪ್ರತಿಮ ಮಹಾಕವಿ, ದಾರ್ಶನಿಕ, ರಸಋಷಿ ಕುವೆಂಪು ಅವರಿಗೆ ಅತ್ಯಂತ ಗೌರವ ಸಲ್ಲಿಸುವ ಸಂಸ್ಥೆ ಕರ್ನಾಟಕದಲ್ಲಿ ಯಾವುದಾದರೂ ಇದೇ ಅಂದರೆ, ಅದು ಕನ್ನಡ ಸಾಹಿತ್ಯ ಪರಿಷತ್ತು. ಕುವೆಂಪು ವಿರಚಿತ “ಜಯಭಾರತ ಜನನಿಯ ತನುಜಾತೆ” ಗೀತೆಯನ್ನು “ನಾಡಗೀತೆ” ಮಾಡಬೇಕೆಂದು ಮೊದಲ ಅಳವಡಿಸಿಕೊಂಡಿದ್ದು ಸಾಹಿತ್ಯ ಪರಿಷತ್ತು. 1971ರಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಮ್ಮತಿ ಪಡೆದು ಪರಿಷತ್ತು ನಾಡಗೀತೆಯನ್ನು ತನ್ನ ಎಲ್ಲ ಕಾರ್ಯಕ್ರಮಗಳಲ್ಲೂ ಹಾಡಿಸಲಾಗುತ್ತಿತ್ತು.
ಈ ಮೂಲಗೀತೆ 1924ರಲ್ಲಿ ರಚನೆಯಾಗಿ, ಇಂದಿಗೆ 98 ವರ್ಷವಾಯಿತು. ಎರಡು ಸಲ ಪರಿಷ್ಕರಣೆಗೊಂಡು ಮೈಸೂರಿನ ಸಂಪದಭ್ಯುದಯ ಪತ್ರಿಕೆಯಲ್ಲಿ ಪ್ರಕಟವಾಯಿತು. ಅನಂತರ ಮತ್ತೆ ಪರಿಷ್ಕರಣೆಗೊಂಡು ಕುವೆಂಪು ಅವರ ಕೊಳಲು ಕವನ ಸಂಕಲನದಲ್ಲಿ ಪ್ರಕಟವಾಯಿತು. ಇದು ಭಾರತದ ಅಖಂಡತೆಯನ್ನೂ, ಭಾವೈಕ್ಯತೆಯನ್ನೂ ಎತ್ತಿ ಹಿಡಿಯುವ ಗೀತೆ. ಭಾರತಾಂತರ್ಗತ ಕರ್ನಾಟಕ, ಕರ್ನಾಟಕಾಂತರ್ಗತ ಭಾರತ ಎಂಬುದನ್ನು ಆವೇಶವಿಲ್ಲದೆ, ಘೋಷಣೆಗಳಿಲ್ಲದೆ ಸಾರುವ ಭಾವನಾತ್ಮಕ ಗೀತೆಯಿದು. ಇಂತಹ ಅಪರೂಪದ ಗೀತೆಯನ್ನು ಪರಿಷತ್ತು ನಾಡಗೀತೆಯಾಗಿ ಆರಿಸಿತು. ಅದರ ಅನಂತರ ಸರ್ಕಾರವೂ ಇದನ್ನೇ ನಾಡಗೀತೆ ಎಂದು ಅಂಗೀಕರಿಸಿ, ಪರಿಷತ್ತಿನ ಆಯ್ಕೆಯನ್ನು ದೃಢಗೊಳಿಸಿ, 6-1-2004ರಂದು ಕರ್ನಾಟಕದ ನಾಡಗೀತೆಯನ್ನಾಗಿ ನಿಗದಿಪಡಿಸಿ ಆದೇಶ ಹೊರಡಿಸಿತು.
ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳ ಬಗ್ಗೆ ಹಾಗೂ ನಾಡಗೀತೆಯನ್ನು ತಿರುಚಿ ಬರೆದಿರುವ ಕುರಿತು ದಿನಪತ್ರಿಕೆಗಳಲ್ಲಿ ಓದುವ, ಹೀನಾಯ ಸ್ಥಿತಿ ತಲುಪಿರುವುದಕ್ಕೆ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅತ್ಯಂತ ಖೇದ ಹಾಗೂ ಬೇಸರದ ಸಂಗತಿಯಾಗಿದೆ. ಇದನ್ನೂ ಓದಿ: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪ ನಾಗರಾಜಯ್ಯ ರಾಜೀನಾಮೆ
ʻಮನುಜ ಮತ ವಿಶ್ವಪಥʼ ಎಂಬ ಸಂದೇಶದ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದ, ಪ್ರಕೃತಿಯಲ್ಲಿ ದೇವರನ್ನು ಕಾಣುವ, ದೇವರಲ್ಲಿ ಪ್ರಕೃತಿಯನ್ನು ಕಾಣುವ ದೈವಿಕ ಸಂಬಂಧಗಳನ್ನು ಪ್ರತಿಪಾದಿಸಿದ ಸರ್ವೋದಯ ತತ್ವಪ್ರತಿಪಾದಕರು ಕುವೆಂಪು ಅವರು. ಸಾಮಾಜಿಕ, ಧಾರ್ಮಿಕ, ಆರ್ಥಿಕ ಅಸಮಾನತೆಯನ್ನು ಮತ್ತು ಲಿಂಗಭೇದವನ್ನು ನಿವಾರಿಸಿಕೊಂಡು ಈ ಜಗತ್ತು ʻಸರ್ವಜನಾಂಗದ ಶಾಂತಿಯ ತೋಟʼವಾಗಬೇಕೆಂದು ಕನಸು ಕಂಡ ಶ್ರೇಷ್ಠ ದಾರ್ಶನಿಕರು. ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಸಾಹಿತ್ಯದ ಮೂಲಕ ಅರ್ಥಗರ್ಭಿತ ಪ್ರಯತ್ನ ಮಾಡಿದ ಮೇರು ಸಾಹಿತಿಗಳು. ಅವರ ಸಾಹಿತ್ಯವನ್ನು ಓದಿದವರ್ಯಾರೂ ಸಹ ಕುವೆಂಪು ಅವರ ಕುರಿತು ಚಕಾರ ಎತ್ತುವ ಧೈರ್ಯವನ್ನು ಮಾಡುವುದಿಲ್ಲ. ಯಾರು ಈ ಮಹಾದಾರ್ಶನಿಕರನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲವೋ, ಅಂಥವರು ಮಾತ್ರ ಅಡ್ಡದಾರಿಯನ್ನು ಹಿಡಿದು, ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡುತ್ತಾರೆ.
ಶ್ರೀರಾಮಕೃಷ್ಣ ಪರಮಹಂಸರ, ಶ್ರೀ ವಿವೇಕಾನಂದರ ಚಿಂತನೆಗಳನ್ನು ಆದರ್ಶವನ್ನಾಗಿಸಿಕೊಂಡು, ಸಾಹಿತ್ಯದಲ್ಲಿ ಆಧ್ಯಾತ್ಮೀಕತೆಯನ್ನು ಸರಳವಾಗಿ, ಎಲ್ಲರೂ ಅರ್ಥ ಮಾಡಿಕೊಳ್ಳುವ ಹಾಗೆ ರಚಿಸಿದ ಮಹಾಕವಿಯ ಕುರಿತು ನಿಂದನೆಯನ್ನು ಮಾಡಿರುವುದು ವೈಯಕ್ತಿಕವಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ ಖಂಡಿಸುವುದರ ಜೊತೆಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದವರ ವಿರುದ್ಧ ಸರ್ಕಾರ ತಡಮಾಡದೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ.
ಕುವೆಂಪು ಅವರ ಪುಸ್ತಕಗಳನ್ನು ಬಹಳ ಗೌರವದಿಂದ, ಭಕ್ತಿಯಿಂದ ಓದುವ ನಾನು, ಅವರ ಪ್ರಕೃತಿ ವರ್ಣನೆಗೆ ಮಾರುಹೋಗುವುದರ ಜೊತೆಗೆ, ಅವರ ಶ್ರೇಷ್ಠ ಚಿಂತನೆಗಳಿಂದ ಪ್ರೇರಿತನಾಗಿ “ಮನುಜ ಮತದಲ್ಲಿ” ನಂಬಿಕೆ ಇಟ್ಟಂಥವನು. ಕುವೆಂಪು ಅವರ ಚಿಂತನೆಯ ಮಾರ್ಗದಲ್ಲಿಯೇ, ಕನ್ನಡ ಸಾಹಿತ್ಯ ಪರಿಷತ್ತು ಜಾತಿ, ಮತ, ಧರ್ಮ, ಲಿಂಗ ತಾರತಮ್ಯವಿಲ್ಲದೆ ನನ್ನ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಸಾಧಾರಣವಾಗಿ ನನ್ನ ಎಲ್ಲ ಭಾಷಣಗಳಲ್ಲೂ ಕುವೆಂಪು ಅವರ ಚಿಂತನೆಗಳನ್ನು ಉಲ್ಲೇಖಿಸುತ್ತೇನೆ. ಯಾವುದೇ ಸಾಹಿತಿಯನ್ನು ಟೀಕಿಸುವ ಮೊದಲು ಅವರ ಸಾಹಿತ್ಯದ ಸಾರ-ಸರ್ವವನ್ನು ಅರಿತುಕೊಳ್ಳಬೇಕು. ತಿಳಿದುಕೊಳ್ಳದೇ ಮಾತನಾಡುವುದು ಶೋಭೆಯಲ್ಲ. ಹಿನ್ನೆಲೆ ತಿಳಿದುಕೊಳ್ಳದೇ ಮಾತನಾಡುವುದು, ಅವರ ಬೇಜವಾಬ್ದಾರಿತನವನ್ನು ಹಾಗೂ ಅಪ್ರಬುದ್ಧತೆಯನ್ನು ತೋರಿಸುತ್ತದೆ.
ಕುವೆಂಪು ಅವರನ್ನು ನಿಂದಿಸಿದವರ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರ ಮೇಲೆ ಕ್ರಮಕೈಗೊಳ್ಳುವಂತೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವುದಾಗಿ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ತೀರ್ಮಾನ ಬೆಂಬಲಿಸುತ್ತಾ ತಡಮಾಡದೇ ಅಂಥವರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತದೆ.
ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿರುವ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರ ಮೇಲೆ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ ಹಾಗೂ ಪರಿಷತ್ತಿನ ಎಲ್ಲಾ ಜಿಲ್ಲಾ ಘಟಕಗಳ, ಗಡಿನಾಡ ಘಟಕಗಳ, ತಾಲ್ಲೂಕು ಹಾಗೂ ಹೋಬಳಿ ಘಟಕಗಳ ಅಧ್ಯಕ್ಷರುಗಳು, ಈ ಖಂಡನೆಗೆ ಒಮ್ಮತದಿಂದ ಕೇಂದ್ರ ಪರಿಷತ್ತಿಗೆ ಬೆಂಬಲವನ್ನು ಸೂಚಿಸಿದ್ದಾರೆ.
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನ ಮಾಡಲಾಗಿದೆ ಹಾಗೂ ನಾಡಗೀತೆಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದು ಸಾಮಾಜಿಕ ಜಾಲಾತಾಣದಲ್ಲಿ ಹಾಕಲಾಗಿತ್ತು. ಅಲ್ಲದೆ ನಾಡಗೀತೆಗೂ ಅಪಮಾನ ಮಾಡಲಾಗಿದೆ. ಲಕ್ಷ್ಮಣ ಎಂಬವರು ಕುವೆಂಪು ಬಗ್ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾರೆ. ಇವರಿಬ್ಬರ ವಿರುದ್ಧ ಸಮಾಜ ಸ್ವಾಸ್ಥ್ಯ ಕದಡುವ ಪ್ರಕರಣದ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಯುಕ್ತರಿಗೆ ದೂರು ನೀಡಲಾಗಿದೆ.
ಶಿವಮೊಗ್ಗ: ನಾಡಗೀತೆಗೆ ಅಗೌರವ ತೋರಿದ ಕಾರಣಕ್ಕೆ ಶಾಸಕ ಹರತಾಳು ಹಾಲಪ್ಪ ಅಧಿಕಾರಿಗಳಿಗೆ ಸರಿಯದ ಪಾಠ ಕಳಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ.
ಹೊಸನಗರದ ತಾ.ಪಂ. ಕಚೇರಿಯಲ್ಲಿ ಶಾಸಕ ಹರತಾಳು ಹಾಲಪ್ಪ ಕೆಡಿಪಿ ಸಭೆ ನಡೆಸಿದ್ದಾರೆ. ಆರಂಭಕ್ಕೂ ಮುನ್ನ ಸಭೆಯಲ್ಲಿ ನಾಡಗೀತೆಯನ್ನು ಹಾಡಲಾಗಿತ್ತು. ಈ ವೇಳೆ ಅರಣ್ಯ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಕ್ಯಾಪ್ ಧರಿಸದಿರುವುದನ್ನು ಹಾಲಪ್ಪ ಗಮನಿಸಿದ್ದಾರೆ. ಇದನ್ನೂ ಓದಿ: ರೈತರಿಗೆ ಸಹಾಯವಾಗಲು ಕೋಲ್ಡ್ ಸ್ಟೋರೇಜ್ ಮಂಜೂರು: ಬಿ.ಸಿ ಪಾಟೀಲ್
ನಾಡಗೀತೆ ಮುಗಿಯುತ್ತಿದ್ದಂತೆ ಹಾಲಪ್ಪ ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ. ಸರ್ಕಾರ ನಿಮಗೆ ಸಮವಸ್ತ್ರ ಕ್ಯಾಪ್ ಕೊಟ್ಟಿರುವುದು ಏಕೆ? ನಾಡಗೀತೆ ಹಾಡುವ ಸಮಯದಲ್ಲಿ ಕ್ಯಾಪ್ ಧರಿಸಬೇಕು ಎಂಬುದು ನಿಮಗೆ ತಿಳಿದಿಲ್ಲವೇ ಎಂದು ಗದರಿದ್ದಾರೆ. ಇದನ್ನೂ ಓದಿ: ಯುವಕರಿಗೆ ಮಾರ್ಗದರ್ಶನ ನೀಡಲು ನೂತನ ಯುವನೀತಿ: ಬೊಮ್ಮಾಯಿ
ಚೆನ್ನೈ: ತಮಿಳು ತಾಯಿಗೆ ವಂದಿಸುವ (ತಮಿಳ್ ತಾಯ್ ವಾಳ್ತ್) ತಮಿಳು ತಾಯಿಯೇ ನಿನಗೆ ವಂದನೆ ಗೀತೆಯನ್ನು ತಮಿಳುನಾಡು ತನ್ನ ನಾಡಗೀತೆಯಾಗಿ ಫೋಷಿಸಿದೆ ಹಾಗೂ ಈ ಗೀತೆ ಹಾಡುವಾಗ ಎಲ್ಲರೂ ಎದ್ದು ಗೌರವ ಕೊಡಬೇಕು ಎಂಬ ಸುತ್ತೋಲೆ ಹೊರಡಿಸಿದೆ.
ಇತ್ತೀಚೆಗಷ್ಟೇ ಮದ್ರಾಸ್ ಹೈಕೋರ್ಟ್ ತಮಿಳ್ ತಾಯ್ ವಾಳ್ತ್ ಕೇವಲ ಪ್ರಾರ್ಥನಾ ಗೀತೆಯೇ ಹೊರತು ರಾಷ್ಟ್ರ ಗೀತೆಯಲ್ಲ, ಹೀಗಾಗಿ ಈ ಹಾಡಿನ ವೇಳೆ ಯಾರೂ ಎದ್ದು ನಿಲ್ಲುವ ಅವಶ್ಯಕತೆ ಇಲ್ಲ ಎಂದಿತ್ತು. ಆದರೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಈ ಹಾಡನ್ನು ನಾಡಗೀತೆಯಾಗಿ ಫೋಷಿಸಿ ಸರ್ಕಾರ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಸ್ಪುಟ್ನಿಕ್ ಲಸಿಕೆ ಓಮಿಕ್ರಾನ್‌ಗೆ ಪರಿಣಾಮಕಾರಿ – ರಷ್ಯಾ
நீராரும் கடலுடுத்த எனும் மாநிலப் பாடல் பாடப்படுகையில், மாற்றுத்திறனாளிகள் தவிர, இனி மற்ற அனைவரும் எழுந்து நின்று மரியாதை செலுத்த வேண்டும் என அரசாணை வெளியிடப்பட்டுள்ளது. (2/2)
55 ಸೆಕೆಂಡುಗಳಿರುವ ಈ ನಾಡಗೀತೆ ಹಾಡುವಾಗ ಅಂಗವಿಕಲರನ್ನು ಹೊರತುಪಡಿಸಿ ಉಳಿದವರೆಲ್ಲರೂ ಎದ್ದು ನಿಲ್ಲಬೇಕು ಹಾಗೂ ರಾಜ್ಯದ ಎಲ್ಲಾ ಶಾಲೆಗಳು, ವಿಶ್ವ ವಿದ್ಯಾಲಯಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಸಾರ್ವಜನಿಕ ಸಂಸ್ಥೆತೆಗಳು ಯಾವುದೇ ಕಾರ್ಯಕ್ರಮಗಳು ಆರಂಭಿಸುವ ಮುನ್ನ ಈ ಗೀತೆಯನ್ನು ಹಾಡುವುದು ಕಡ್ಡಾಯ ಎಂದು ಸ್ಟಾಲಿನ್ ಆದೇಶಿಸಿದ್ದಾರೆ. ಇದನ್ನೂ ಓದಿ:ಸರ್ಕಾರ ನಿರ್ಧಾರ ತಪ್ಪಿರಬಹುದು, ಉದ್ದೇಶವಲ್ಲ: ಅಮಿತ್ ಶಾ
ತಮಿಳಿನ ಖ್ಯಾತ ವಿದ್ವಾಂಸ ಎಂ.ಎಸ್ ಪಿಳ್ಳೈ(1855-1897)ಗೀತೆ ಬರೆದಿದ್ದರು. ಎಂ.ಎಸ್ ವಿಶ್ವನಾಥನ್ ಸಂಗೀತ ನೀಡಿದ್ದಾರೆ. ಇದು 1970ರಿಂದ ಅಧಿಕೃತ ಗೀತೆ ಮಾನ್ಯತೆ ಹೊಂದಿತ್ತು. ಇದೀಗ ಇದಕ್ಕೆ ನಾಡಗೀತೆ ಸ್ಥಾನಮಾನ ದೊರಕಿದೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ
2018ರಲ್ಲಿ ಈ ಗೀತಗಾಯನದ ವೇಳೆ ಕಂಚಿ ಕಾಮಕೋಟಿ ಶ್ರೀಗಳಾದ ವಿಜಯೇಂದ್ರ ಸರಸ್ವತಿಗಳು ಎದ್ದು ನಿಲ್ಲದೇ ಇರುವುದು ವಿವಾದಕ್ಕೀಡಾಗಿತ್ತು. ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ನಾಡಗೀತೆಯಿದೆ. ಜಯಭಾರತ ಜನನಿಯ ತನುಜಾತೆ ಕರ್ನಾಟಕದ ನಾಡಗೀತೆಯಾಗಿದೆ.