Tag: ನಾಡಪ್ರಭು ಕೆಂಪೇಗೌಡ ಪ್ರತಿಮೆ

  • ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಅಡಿಗಲ್ಲು

    ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಅಡಿಗಲ್ಲು

    ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆ ಮತ್ತು ಕೆಂಪೇಗೌಡರ ಹೆಸರಲ್ಲಿ ಥೀಮ್ ಪಾರ್ಕ್ ಸ್ಥಾಪನೆಗೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರೆವೇರಿಸಿದರು.

    ಕೆಂಪೇಗೌಡರ 511ನೇ ಜಯಂತಿಯಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಗುದ್ದಲಿ ಪೂಜೆ ನಡೆಯಿತು. ಸಿಎಂ ಜೊತೆಗೆ ಮಾಜಿ ಪ್ರಧಾನಿಗಳಾದ ದೇವೇಗೌಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ಗುದ್ದಲಿ ಪೂಜೆ ನೆರವೇರಿಸಿದರು.

    ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿ, ಅಭೂತಪೂರ್ವವಾದ ಈ ಕಾರ್ಯಕ್ರಮದಲ್ಲಿ ಪಕ್ಷಬೇಧ ಮರೆತು ಎಲ್ಲ ರಾಜಕೀಯ ನಾಯಕರು ಉಪಸ್ಥಿತಿ ಇರೋದು ಬಹಳ ಸಂತಸ ತರಿಸಿದೆ. ಸರ್ಕಾರ ಉದ್ದೇಶಿಸಿರುವ ತನ್ನ ಕೆಲಸವನ್ನು ಅತೀ ಶೀಘ್ರವಾಗಿ ಆರಂಭ ಮಾಡಲಿ ಅಂತ ಶುಭ ಹಾರೈಸಿದ್ರು. ಅಂತಾರಾಷ್ಟ್ರೀಯ ಜನತೆಗೆ ಕೆಂಪೇಗೌಡರನ್ನು ಪರಿಚಯಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಸಿಎಂ ಯಡಿಯೂರಪ್ಪರ ಈ ದೊಡ್ಡ ಕೆಲಸಕ್ಕೆ ಶುಭ ಹಾರೈಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

    ಒಂದು ವರ್ಷದೊಳಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಬೃಹತ್ ಕೆಂಪೇಗೌಡರ ಪ್ರತಿಮೆ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ. ಮುಂದಿನ 512 ನೇ ಕೆಂಪೇಗೌಡರ ಜಯಂತಿಯನ್ನು ಈ ಬೃಹತ್ ಪ್ರತಿಮೆಯ ಆವರಣದಲ್ಲಿ ಆಚರಿಸಲು ನಿರ್ಧರಿಸಿದೆ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಸ್ಮರಣಾರ್ಥ ಸರ್ಕಾರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದು ಇಂದು ಶಿಲನ್ಯಾಸ ಕಾರ್ಯಕ್ರಮ ನೆರವೇರಿದೆ.

    ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ, ಸುತ್ತೂರು ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗಾ ಸ್ವಾಮೀಜಿ, ಡಿಸಿಎಂ ಅಶ್ವತ್ಥ್ ನಾರಾಯಣ್, ಸಚಿವರಾದ ಗೋಪಾಲಯ್ಯ, ಬೈರತಿ ಬಸವರಾಜು, ಸಂಸದ ಬಚ್ಚೇಗೌಡ, ಡಿಕೆ ಸುರೇಶ್ ಶಾಸಕ ಶರತ್ ಬಚ್ಚೇಗೌಡ, ಶಾಸಕ ವಿಶ್ವನಾಥ್, ಮಾಗಡಿ ಮಂಜುನಾಥ್, ಪುನೀತ್ ರಾಜ್‍ಕುಮಾರ್ ಭಾಗವಹಿಸಿದ್ದರು.