Tag: ನಾಯಕತ್ವ ಬದಲಾವಣೆ

  • ಸಂಕ್ರಾಂತಿಯೊಳಗೆ ರಾಷ್ಟ್ರದಲ್ಲಿ ದೊಡ್ಡ ಅವಘಡ- ಕೋಡಿ ಮಠದ ಶ್ರೀ ಭವಿಷ್ಯ

    ಸಂಕ್ರಾಂತಿಯೊಳಗೆ ರಾಷ್ಟ್ರದಲ್ಲಿ ದೊಡ್ಡ ಅವಘಡ- ಕೋಡಿ ಮಠದ ಶ್ರೀ ಭವಿಷ್ಯ

    ಕೋಲಾರ: ಆಶ್ವೀಜ ಮಾಸದ ನಂತರ ಸಂಕ್ರಾಂತಿ ಒಳಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಅವಘಡ ಆಗಲಿದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದರು.

    ಕೋಲಾರ ತಾಲೂಕಿನ ಲಕ್ಷ್ಮೀ ಸಾಗರ ಗ್ರಾಮದಲ್ಲಿ ನೆಲೆಸಿರುವ ಚಾಮುಂಡೇಶ್ವರಿ ದೇವಿ ಜನ್ಮ ದಿನೋತ್ಸವದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಅವರು, ಸಂಕ್ರಾಂತಿಯೊಳಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಅವಘಡ ಸಂಭವಿಸಲಿದೆ ಎಂದು ಹೇಳಿದ್ದಾರೆ.

    ಯಡಿಯೂರಪ್ಪ ರಾಜೀನಾಮೆ ವಿಚಾರದಲ್ಲಿ ಮಠಾಧೀಶರು ಬೀದಿಗೆ ಬಂದು ಹೋರಾಟ ಮಾಡಿದರು. ಆದರೆ ಕೇಂದ್ರದ ನಾಯಕರು ಮಠಾಧೀಶರಿಗೆ ಅಗೌರವ ತೋರಿದ್ದಾರೆ ಗುರುಗಳಿಗೆ ನೋವಾಗುವಂತೆ ನಡೆದುಕೊಂಡಿದ್ದು ಸರಿಯಲ್ಲ ಎಂದರು.

    ರಾಜ ಮಹರಾಜರಿಂದ ಗುರುಗಳಿಗೆ ಬೆಲೆ ಇದೆ, ಕೆಂದ್ರದ ನಾಯಕರು ಬಂದು ಗುರುಗಳಿಗೆ ಆಶ್ವಾಸನೆ ಕೊಡಬಹುದಿತ್ತು. ಯಾವುದೇ ಸಲಹೆ ಪಡೆಯದೆ ಮಠಾಧೀಶರಿಗೆ ಅಗೌರವ ತೋರಿದ್ದಾರೆ. ಮಠಾಧೀಶರು ರಾಜಕಾರಣ ಮಾಡಿಲ್ಲ, ಬದಲಾಗಿ ಮುಖ್ಯಮಂತ್ರಿ ಬದಲಾಯಿಸುವ ಸಂದರ್ಭ ಇದಲ್ಲ ಎಂದಿದ್ದರು. ಆದರೆ ಹೈಕಮಾಂಡ್ ಗುರುಗಳನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಹಿಂದೆ ರಾಜರ ಕಾಲದಲ್ಲಿ ಸ್ವಾಮೀಜಿಗಳು ಸಿಂಹಾಸನದ ಪಕ್ಕ ಕೂರುತ್ತಿದ್ದರು. ರಾಮಚಂದ್ರ, ಪಾಂಡವರು, ಅತಿರಥ ಮಹಾರಾಜರು ಗುರುಗಳ ಸಲಹೆ ಪಡೆಯುತ್ತಿದ್ದರು. ಇನ್ನೂ ಸಾಕಷ್ಟು ಹೇಳುವ ವಿಚಾರ ಇದೆ. ಇದು ಸಂದರ್ಭ ಅಲ್ಲ, ಮೇಕೆ ಚರ್ಮದಿಂದ ಮಾಡಿದ ತಬಲ ಕೂಡ ಪಂಜರವನ್ನ ಕರಗಿಸುತ್ತೆ, ಆದರೆ ಮಠಾದೀಶರ ಅಹವಾಲನ್ನು ಆಲಿಸಲೇ ಇಲ್ಲ ಇದು ಬೇಸರ ತಂದಿದೆ. ಹಿಂದೂ ರಾಷ್ಟ್ರ ಎಂದರೆ ಖಾವಿ, ಅದಕ್ಕೆ ಬೆಲೆ ಇಲ್ಲದಹಾಗೆ ಮಾಡಿದರು ಎಂದರು.

    ಹೋರಾಟ ಮಾಡಿದ ಮಠಾಧೀಶರಿಗೆ ಅಗೌರವ ತೋರಿದಿರಿ, ನೀವು ಕೊಟ್ಟ ದುಡ್ಡೇ ಖಾಯಂ ಆಯ್ತಾ, ಈ ಸಂಸ್ಕೃತಿ ಬೆಳೆಯಬಾರದು ಮತ್ತಷ್ಟು ಮಾತನಾಡುವುದಿದೆ. ಕೇಂದ್ರದ ನಾಯಕರು, ಅಮಿತ್ ಶಾ ನಮ್ಮ ಬಳಿ ಬಂದಿದ್ದರು. ಈಗ ಬಂದರೆ ಈ ಎಲ್ಲಾ ವಿಚಾರವನ್ನು ಕೇಳುತ್ತೇವೆ, ಖಾವಿಗಳಿಗೆ ಈ ದೇಶದಲ್ಲಿ ಏನು ಬೆಲೆ ಇದೆ ಎಂದು ಪ್ರಶ್ನೆ ಮಾಡಿದರು.

  • ನಾನೇನೂ ಮಾತನಾಡಲ್ಲ ಎಂದ ಪ್ರಹ್ಲಾದ್ ಜೋಶಿ

    ನಾನೇನೂ ಮಾತನಾಡಲ್ಲ ಎಂದ ಪ್ರಹ್ಲಾದ್ ಜೋಶಿ

    ಬೆಂಗಳೂರು: ನಾಯಕತ್ವ ಬದಲಾವಣೆ ಸೇರಿದಂತೆ ಯಾವುದೇ ವಿಚಾರದ ಕುರಿತು ನಾನು ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಪ್ರಹ್ಲಾದ್ ಜೋಶಿ ನಿರಾಕರಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ನಂತರ ಸಂಭಾವ್ಯ ಸಿಎಂ ಅಂತಲೇ ಪ್ರಹ್ಲಾದ್ ಜೋಶಿಯವರ ಹೆಸರು ಮುನ್ನೆಲೆಗೆ ಬಂದಿದ್ದು, ಸಾಕಷ್ಟು ಚರ್ಚೆ ಸಹ ನಡೆಯುತ್ತಿದೆ. ಆದರೆ ಜೋಶಿ ಮಾತ್ರ ಯಾವುದಕ್ಕೂ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.

    ಸಿಎಂ ಹೇಳಿದ್ದೇನು?:
    ತಾವು ರಾಜೀನಾಮೆ ನೀಡುವ ಕುರಿತು ಪ್ರತಿಕ್ರಿಯಿಸಿದ ಸಿಎಂ, ಕೋವಿಡ್, ಪ್ರವಾಹ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಬೇಡ ಎಂಬ ರೀತಿಯಲ್ಲಿ ಪರೋಕ್ಷವಾಗಿ ಮುಖ್ಯಮಂತ್ರಿಗಳು ಕಾದು ನೋಡೋಣ ಅಂತಾ ಹೇಳಿದರು. ನಾಳೆ ಸಾಧ್ಯವಾದರೆ ಮಧ್ಯಾಹ್ನದ ಬಳಿಕ ಕಾರವಾರಕ್ಕೆ ಭೇಟಿ ನೀಡುವೆ. ಕೇಂದ್ರ ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧನಿದ್ದೇನೆ. ಚುನಾವಣೆಗೆ ಒಂದು ಮುಕ್ಕಾಲು ವರ್ಷ ಇದೆ. ಹಾಗಾಗಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ. ನೂರು ಸಿದ್ದರಾಮಯ್ಯ ಬಂದ್ರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಬರಲಿದೆ ಎಂದು ಭವಿಷ್ಯ ನುಡಿದರು.

    ಇದೇ ವೇಳೆ ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್‍ವೈ, ನಮ್ಮ ರಾಜ್ಯದಲ್ಲಿ ಬೇರೆ ಯಾರಿಗೂ ಸಿಗದ ಸ್ಥಾನಮಾನ ನನಗೆ ಸಿಕ್ಕಿದೆ. ಅದಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಅವರಿಗೆ ವಂದನೆ ಸಲ್ಲಿಸುವೆ. ಪಕ್ಷದಲ್ಲಿ ನಾವೆಲ್ಲರೂ ಕಾರ್ಯಕರ್ತರಾಗಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಹೇಳಿದರು. ಇನ್ನೂ ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ, ಕಾದು ನೋಡೋಣ ಎಂದು ಮೂರು ಬಾರಿ ಹೇಳಿ ಹೊರಟರು.

  • ಯಡಿಯೂರಪ್ಪ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಸುಬ್ರಮಣಿಯನ್ ಸ್ವಾಮಿ

    ಯಡಿಯೂರಪ್ಪ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಸುಬ್ರಮಣಿಯನ್ ಸ್ವಾಮಿ

    ನವದೆಹಲಿ: ನಾಯಕತ್ವ ಬದಲಾವಣೆ ಕುರಿತು ರಾಜ್ಯದಲ್ಲಿ ಭಾರೀ ಬೆಳವಣಿಗೆಗಳು ಆಗುತ್ತಿರುವ ಸಂದರ್ಭದಲ್ಲಿಯೇ ಬಿಜೆಪಿ ರಾಷ್ಟ್ರೀಯ ನಾಯಕರು ಈ ಕುರಿತು ಮೌನ ಮುರಿದಿದ್ದು, ಯಡಿಯೂರಪ್ಪ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರು ಬಿ.ಎಸ್.ಯಡಿಯೂರಪ್ಪ. ಅವರ ನೇರ ವ್ಯಕ್ತಿತ್ವದಿಂದಾಗಿ ಇದೀಗ ಅವರನ್ನು ಕೆಳಗಿಳಿಸುವ ಪಿತೂರಿಯನ್ನು ಕೆಲವರು ನಡೆಸಿದ್ದಾರೆ. ಆದರೆ ಯಡಿಯೂರಪ್ಪನವರು ಇಲ್ಲದೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದಿಲ್ಲ. ಅವರು ಮರಳಿ ಪಕ್ಷಕ್ಕೆ ಬಂದಿದ್ದಕ್ಕೆ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಏರಿತು. ಮರಳಿ ಇದೇ ತಪ್ಪನ್ನು ಯಾಕೆ ಮಾಡಲಾಗುತ್ತಿದೆ ಎಂದು ಅವರು ಟ್ವೀಟ್ ಮೂಲಕ ತಿವಿದಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ಕೈ ಸೇರಿದೆ ವರದಿ – ಜಾತಿ ಚೌಕಟ್ಟು ಮೀರುತ್ತಾ ಬಿಜೆಪಿ?

    ಈ ಮೂಲಕ ಕರ್ನಾಟಕದಲ್ಲಿನ ನಾಯಕತ್ವ ಬದಲಾವಣೆ ಕುರಿತು ಕೇಂದ್ರದ ನಾಯಕರು ತುಟಿ ಬಿಚ್ಚಿದ್ದು, ಯಡಿಯೂರಪ್ಪನವರ ಪರವಾಗಿ ಬ್ಯಾಟ್ ಬೀಸಿದ್ದಾರೆ. ಅಲ್ಲದೆ ಈ ಮೂಲಕ ಬಿಜೆಪಿ ಹೈ ಕಮಾಂಡ್‍ಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಬಿಎಸ್‍ವೈ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ. ಹಿಂದೆ ಮಾಡಿದ ತಪ್ಪನ್ನೇ ಹೈಕಮಾಂಡ್ ಏಕೆ ಪುನರಾವರ್ತನೆ ಮಾಡುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ.

  • ಮಠಾಧೀಶರು ಬೆಂಗಳೂರಿಗೆ ಹೋಗುವ ಬದಲು, ದೆಹಲಿಗೆ ಹೋಗಲಿ: ಮಹಾಂತ ಶಿವಾಚಾರ್ಯ ಶ್ರೀ

    ಮಠಾಧೀಶರು ಬೆಂಗಳೂರಿಗೆ ಹೋಗುವ ಬದಲು, ದೆಹಲಿಗೆ ಹೋಗಲಿ: ಮಹಾಂತ ಶಿವಾಚಾರ್ಯ ಶ್ರೀ

    ಕಲಬುರಗಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಮಠಾಧೀಶರು ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಆಗುವ ಅವಶ್ಯಕತೆಯಿಲ್ಲ. ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಬೇಕು ಎಂದು ಶ್ರೀಶೈಲ ಸಾರಂಗ ಮಠದ ಪೀಠಾಧಿಪತಿ ಶ್ರೀ ಮಹಾಂತ ಶಿವಾಚಾರ್ಯರು ಮಠಾಧೀಶರಿಗೆ ಕಿವಿ ಮಾತು ಹೇಳಿದರು.

    ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬೇಕಾದರೆ ಎಲ್ಲ ಮಠಾಧೀಶರು ಬಿ.ಎಸ್.ವೈ ಪರ ಮಾತನಾಡಲು ದೆಹಲಿಗೆ ಹೋಗಬೇಕು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಮಾಡಬೇಕು. ಅವರೂ ನಮ್ಮ ಮಾತಿಗೆ ಬೆಲೆ ಕೊಡದಿದ್ದರೆ ಪಾರ್ಲಿಮೆಂಟ್ ಮುಂದೆ ಧರಣಿ ಕೂರಬೇಕು ಇದಕ್ಕೆ ನಾವೂ ಜೊತೆಯಾಗುತ್ತೇವೆ ಎಂದರು.

    ಬಿಜೆಪಿಯನ್ನು 40 ವರ್ಷಗಳಿಂದ ತಳಮಟ್ಟದಿಂದ ಯಡಿಯೂರಪ್ಪ ಕಟ್ಟಿದ್ದಾರೆ. ಒಂದು ವೇಳೆ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದರೆ ಅಪಾಯ ಎದುರಾಗಲಿದೆ. ಈ ಹಿಂದೆ ವೀರೇಂದ್ರ ಪಾಟೀಲ್ ಸಿಎಂ ಸ್ಥಾನದಿಂದ ಕೆಳಗಿಳಿಸಿ ಕಾಂಗ್ರೆಸ್ ನಷ್ಟವಾಗಿದೆ. ಇದೀಗ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಹೈಕಮಾಂಡ್ ಕೆಳಗಿಳಿಸಿದರೆ, ಕಾಂಗ್ರೆಸ್‍ಗೆ ಬಂದ ಸ್ಥಿತಿ ಬಿಜೆಪಿಗೂ ಬರುತ್ತದೆ.

    ಬಿಜೆಪಿ ಹೈಕಮಾಂಡ್ ಬೇರೆ ರಾಜ್ಯಗಳಲ್ಲಿ ಆಟ ಆಡಿದಂತೆ ನಮ್ಮ ರಾಜ್ಯದಲ್ಲಿ ಆಟ ಆಡಬಾರದು ಎಂದು ಎಚ್ಚರಿಸಿದ್ದಾರೆ. ಅಲ್ಲದೆ ಒಂದು ವೇಳೆ ಸಿಎಂ ಬದಲಿಸುವದೇ ಆದರೆ ಮುರುಗೇಶ್ ನಿರಾಣಿಯವರಿಗೆ ಸಿಎಂ ಸ್ಥಾನ ನೀಡಬೇಕು. ಉತ್ತರ ಕರ್ನಾಟಕದ ಅದೂ ಪಂಚಮಸಾಲಿ ಸಮುದಾಯದ ಮುರುಗೇಶ್ ನಿರಾಣಿ ಅವರನ್ನು ಸಿಎಂ ಮಾಡಬೇಕು ಎಂದು ಸಾರಂಗಧರ ಶ್ರೀಗಳು ಹೇಳಿದ್ದಾರೆ.