Tag: ನಾಯಿ ದಾಳಿ

  • ಚಿಕ್ಕಬಳ್ಳಾಪುರ | ಸಮಸ್ಯೆಗಳ ನಡ್ವೆ ನಾಯಿಗಳ ಭಯ; ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಜರ್ಮನ್ ಶೆಫರ್ಡ್ ನಾಯಿ ಕಡಿತ!

    ಚಿಕ್ಕಬಳ್ಳಾಪುರ | ಸಮಸ್ಯೆಗಳ ನಡ್ವೆ ನಾಯಿಗಳ ಭಯ; ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಜರ್ಮನ್ ಶೆಫರ್ಡ್ ನಾಯಿ ಕಡಿತ!

    – ಜಿಲ್ಲಾ ಆಸ್ಪತ್ರೆಯಲ್ಲಿ ಶಿಕ್ಷಕಿ ರಂಜನಿಗೆ ಚಿಕಿತ್ಸೆ

    ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ಸಾಲು ಸಾಲು ಸಮಸ್ಯೆಗಳು ಎದುರಾಗುತ್ತಿವೆ. ದಿನಕ್ಕೊಂದು ಸಮಸ್ಯೆ ಎಂಬಂತೆ ಸಮೀಕ್ಷೆ ಮಾಡುವ ಶಿಕ್ಷಕರಿಗೆ (Teachers) ಸಾಕಷ್ಟು ಸವಾಲುಗಳು ಎದುರಾಗುತ್ತಿವೆ. ಅದ್ರಲ್ಲೂ ಚಿಕ್ಕಬಳ್ಳಾಪುರದಲ್ಲಿ ಗಣತಿಗೆ ತೆರಳಿದ್ದ ಶಿಕ್ಷಕಿಯೊಬ್ಬರ ಮೇಲೆ ಸಾಕು ನಾಯಿ ದಾಳಿ ನಡೆಸಿದ್ದು, ಗಣತಿಗೆ ತೆರಳಿದ್ದ ಇತರ ಶಿಕ್ಷಕರಿಗೆ ನಾಯಿಗಳ ಭಯ ಕಾಡುತ್ತಿದೆ.

    ಹೌದು. ರಾಜ್ಯ ಸರ್ಕಾರದ (Government OF Karnataka) ವತಿಯಿಂದ ನಡೆಯುತ್ತಿರುವ ಸಾಮಾಜಿಕ-ಶೈಕ್ಷಣಿಕ ಜಾತಿಗಣತಿ ಸಮೀಕ್ಷೆಗೆ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಿವೆ. ಸಮೀಕ್ಷೆ ಆರಂಭವಾಗಿ 5-6 ದಿನಗಳಾದರೂ ಆ್ಯಪ್ ಸಮಸ್ಯೆ, ಸರ್ವರ್ ಸಮಸ್ಯೆ, ಯುಎಚ್‍ಐಡಿ ತೊಂದರೆ, ಲೊಕೆಷನ್‌ ಪತ್ತೆಯಾಗದೇ ಪರದಾಟ, ನೆಟ್ವರ್ಕ್ ಸಮಸ್ಯೆ ಹೀಗೆ ಅನೇಕ ಅಡಚಣೆಗಳು ಎದುರಾಗಿವೆ. ಇದರ ಜೊತೆಗೆ ಇದೀಗ ಶಿಕ್ಷಕರಿಗೆ ನಾಯಿಗಳ ಕಾಟವೂ ಶುರುವಾಗಿದೆ. ಚಿಕ್ಕಬಳ್ಳಾಪುರದಲ್ಲಿ (Chikkaballapura) ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ರಂಜನಿಗೆ ನಾಯಿ ಕಚ್ಚಿದೆ. ಕೂತನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರಂಜನಿ, ಚಿಕ್ಕಬಳ್ಳಾಪುರ ನಗರದ ತಿಮ್ಮಕ್ಕ ಬಡಾವಣೆಯಲ್ಲಿ ಸಮೀಕ್ಷೆ ನಡೆಸುತ್ತಿದ್ದರು. ಪಿಡಿಒ ನಾರಾಯಣಸ್ವಾಮಿ ಅವರ ಮನೆಯಲ್ಲಿ ಸಮೀಕ್ಷೆ ಮುಗಿಸಿ ಹೊರಬರುವಷ್ಟರಲ್ಲಿ ಮನೆಯಲ್ಲಿದ್ದ ಜರ್ಮನ್ ಶೆಫರ್ಡ್ ನಾಯಿ (German Shepherd Dog) ಹಿಂಬದಿಯಿಂದ ಹಠಾತ್ ದಾಳಿ ಮಾಡಿದೆ.

    ನಾಯಿ ದಾಳಿಯಿಂದ ಶಿಕ್ಷಕಿಯ ತೊಡೆಯ ಭಾಗದಲ್ಲಿ ಗಾಯವಾಗಿದೆ. ಅದೃಷ್ಟವಶಾತ್ ತಕ್ಷಣ ಎಚ್ಚರಿಕೆ ವಹಿಸಿ ಬಚಾವ್ ಆದ್ದರಿಂದ ಸಣ್ಣ ಮಟ್ಟದ ಗಾಯ ಮಾತ್ರವಾಗಿದೆ. ತಕ್ಷಣ ಜಿಲ್ಲಾಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ರಂಜನಿ ಅವರಿಗೆ ವೈದ್ಯರು ಪ್ರತಿ ದಿನ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಇನ್ನೂ ನಮಗೆ ಪರಿಚಯವಿಲ್ಲದ, ಗೊತ್ತಿಲ್ಲದ ಪ್ರದೇಶಗಳಿಗೆ ಸಮೀಕ್ಷೆಗೆ ನಿಯೋಜನೆ ಮಾಡಿರುವುದರಿಂದ, ಯಾವ ಮನೆಯಲ್ಲಿ ನಾಯಿ ಇದೆಯೋ ಇಲ್ಲವೋ ಎಂಬ ಭಯದಲ್ಲೇ ಮನೆ ಮನೆಗೆ ತೆರಳಬೇಕಾಗಿದೆ ಅಂತ ಶಿಕ್ಷಕರು ಅಳಲು ತೋಡಿಕೊಂಡರು. ಇದನ್ನೂ ಓದಿ: ದಾವಣಗೆರೆ | ದೇವಸ್ಥಾನದ ಮುಂದೆ ತಲ್ವಾರ್‌ ಹಿಡಿದು ಓಡಾಡಿದ ಅನ್ಯಕೋಮಿನ ಯುವಕ – ವೀಡಿಯೋ ವೈರಲ್

    ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯ ಸ್ವತಃ ಸಭೆ ನಡೆಸಿ, ಸಮೀಕ್ಷೆಯನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಬೇಕೆಂದು ಸಂಬಂಧಪಟ್ಟವರಿಗೆ ಖಡಕ್ ಸೂಚನೆ ನೀಡಿದ್ದಾರೆ. ಆದರೆ, ಯಾವುದೇ ಪೂರ್ಣ ತಯಾರಿಗಳು ಇಲ್ಲದೆ, ಶಿಕ್ಷಕರಿಗೆ ಸಮರ್ಪಕ ತರಬೇತಿ ನೀಡದೆ ಕಾರ್ಯ ಆರಂಭಿಸಿರುವುದರಿಂದ ಸಮಸ್ಯೆಗಳು ಹೆಚ್ಚುತ್ತಿವೆ. ಇದೀಗ ನಾಯಿಗಳ ದಾಳಿಯ ಭಯ ಶಿಕ್ಷಕರನ್ನು ಇನ್ನಷ್ಟು ಸಂಕಟಕ್ಕೊಳಪಡಿಸಿದೆ. ಇದನ್ನೂ ಓದಿ: ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

  • ಶಾಲಾ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ನಾಯಿ ದಾಳಿ – ಗಾಯಾಳುಗಳು ಆಸ್ಪತ್ರೆಗೆ

    ಶಾಲಾ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ನಾಯಿ ದಾಳಿ – ಗಾಯಾಳುಗಳು ಆಸ್ಪತ್ರೆಗೆ

    ಕೊಪ್ಪಳ: ಶಾಲಾ ಆವರಣಕ್ಕೆ ಏಕಾಏಕಿ ನುಗ್ಗಿದ ನಾಯಿ (Dog), ವಿದ್ಯಾರ್ಥಿ ಹಾಗೂ ಶಿಕ್ಷಕನ ಮೇಲೆ ದಾಳಿ ಮಾಡಿರುವ ಘಟನೆ ಕೊಪ್ಪಳ (Koppala) ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿ ನಡೆದಿದೆ.

    ಶಾಲಾ ಆವರಣದಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ನಾಯಿಯೊಂದು ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಅಲ್ಲೇ ಆಟವಾಡುತ್ತಿದ್ದ ವಿದ್ಯಾರ್ಥಿಯ ಮೇಲೆ ದಾಳಿ ಮಾಡಿ ನಂತರ ಶಿಕ್ಷಕನ ಮೇಲೂ ದಾಳಿ ಮಾಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ

    ನಾಯಿಯು ನಿನ್ನೆಯಿಂದ ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸುತ್ತಿದ್ದು, ಈಗಾಗಲೇ 10ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿದೆ. ಇದೀಗ ಗಾಯಾಳುಗಳನ್ನು ಸ್ಥಳೀಯ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳದ ಗ್ರಾಮ ಪಂಚಾಯತಿ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

  • ಸಾಕು ನಾಯಿ ದಾಳಿ – ಮಹಿಳೆಯ ಮುಖಕ್ಕೆ ಬಿತ್ತು 20 ಸ್ಟಿಚ್

    ಸಾಕು ನಾಯಿ ದಾಳಿ – ಮಹಿಳೆಯ ಮುಖಕ್ಕೆ ಬಿತ್ತು 20 ಸ್ಟಿಚ್

    – ಡಾಬರ್‌ಮ್ಯಾನ್ & ಪಿಟ್‌ಬುಲ್ ನಾಯಿಗಳಿಂದ ದಾಳಿ

    ಮುಂಬೈ: ಇಲ್ಲಿನ ಪೋವೈ (Powai) ಹೌಸಿಂಗ್ ಸೊಸೈಟಿ ಬಳಿ 37 ವರ್ಷದ ಮಹಿಳೆ ಮೇಲೆ 2 ಸಾಕು ನಾಯಿಗಳು ದಾಳಿ ಮಾಡಿದ್ದು, ಪರಿಣಾಮ ಆಕೆಯ ಮುಖಕ್ಕೆ 20 ಸ್ಟಿಚ್ ಹಾಕಲಾಗಿದೆ. ಡಾಬರ್‌ಮ್ಯಾನ್ (Doberman) ಹಾಗೂ ಪಿಟ್‌ಬುಲ್ (Pit bull) ನಾಯಿಗಳು ಮಹಿಳೆಯ ಮೇಲೆ ದಾಳಿ ಮಾಡಿದೆ.

    ರೀಚಾ ಸಂಚಿತ್ ಕೌಶಿಕ್ ಸಿಂಗ್ ಅರೋರ ಎಂಬ ಮಹಿಳೆ ಅಪಾರ್ಟ್ಮೆಂಟ್‌ನಿಂದ ತೆರಳುತ್ತಿದ್ದಾಗ ಡಾಬರ್‌ಮ್ಯಾನ್ ಹಾಗೂ ಪಿಟ್‌ಬುಲ್ ನಾಯಿಗಳು ಮುಖದ ಮೇಲೆ ದಾಳಿ ಮಾಡಿದೆ. ರೀಚಾ ಸಂಚಿತ್ ಅವರು ತಮ್ಮ ಹೊಸ ಮನೆಯ ನಿರ್ಮಾಣ ಕಾರ್ಯವನ್ನು ಪರಿಶೀಸಲು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: ರೀಲ್ಸ್ ವಿವಾದ: ನಮಗೆ ಪೊಲೀಸರ ದಿಕ್ಕು ತಪ್ಪಿಸೋ ಉದ್ದೇಶವಿಲ್ಲ ಎಂದ ವಿನಯ್ ಗೌಡ

    ರಿಚಾ ತನ್ನ ಅಪಾರ್ಟ್ಮೆಂಟ್‌ನಿಂದ ಹೊರಗೆ ಹೋಗುತ್ತಿದ್ದಾಗ ಸ್ಥಳೀಯ ನಿವಾಸಿ ದಿವೇಶ್ ವಿರ್ಕ್ ಅವರ ಎರಡು ನಾಯಿಗಳು ಇದ್ದಕ್ಕಿದ್ದಂತೆ ದಾಳಿ ಮಾಡಿದೆ. ಈ ವೇಳೆ ದಿವೇಶ್ ವೀರ್ಕ್ ಅವರ ಚಾಲಕ ಅತುಲ್ ಸಾವಂತ್ ಹಾಗೂ ಮನೆಕೆಲಸದವರಾದ ಸ್ವಾತಿ ಅವರು ನಾಯಿಯನ್ನು ಹಿಡಿದುಕೊಂಡಿದ್ದರು. ಸ್ವಾತಿ ಹಿಡಿದುಕೊಂಡಿದ್ದ ಕಂದು ಬಣ್ಣದ ನಾಯಿ ಆಕೆ ಮೇಲೆ ದಾಳಿ ಮಾಡಿ ಕಚ್ಚಿದೆ. ನಾಯಿಯನ್ನು ದೂರ ತಳ್ಳಲು ಪ್ರಯತ್ನಿಸಿದಾಗ, ಸಾವಂತ್ ಹಿಡಿದುಕೊಂಡಿದ್ದ ಕಪ್ಪು ನಾಯಿ ಕೂಡ ದಾಳಿ ಮಾಡಿದೆ ಎಂದು ಪೊಲೀಸರು ತಿಳಿಸಿದರು. ಇದನ್ನೂ ಓದಿ: ರೀಲ್ಸ್ ಮಾಡಿದ ಜಾಗದಲ್ಲಿ ವಿನಯ್‌, ರಜತ್‌ರನ್ನು ಸ್ಥಳ ಮಹಜರಿಗೆ ಕರೆತಂದ ಪೊಲೀಸರು

    ನಾಯಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ, ನಾನು ಬಿದ್ದೆ. ನಂತರ ಕಪ್ಪು ನಾಯಿ ನನ್ನ ಮೂಗು ಮತ್ತು ಬಲ ತೊಡೆಯ ಮೇಲೆ ಕಚ್ಚಿದ್ದು, ಇದರಿಂದ ನನಗೆ ಗಂಭೀರ ಗಾಯವಾಯಿತು ಎಂದು ರಿಚಾ ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಪ್ರತಿಕೃತಿ ಸುಟ್ಟು 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

    ಗಾಯಗೊಂಡ ರಿಚಾರನ್ನು, ಆಕೆಯ ಮಾವ ಜಿತೇಂದ್ರ ಶರ್ಮಾ ಮತ್ತು ಸ್ಥಳೀಯ ನಿವಾಸಿ ಸಂಜಯ್ ಜಲಾನ್ ಅವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು. ಮುಖದ ಭಾಗಕ್ಕೆ ತೀವ್ರ ಗಾಯಗಳಾಗಿದ್ದರಿಂದ ಆಕೆಯ ಮುಖಕ್ಕೆ ವೈದ್ಯರು 20 ಹೊಲಿಗೆಯನ್ನು ಹಾಕಲಾಗಿದೆ. ಪೋವೈ ಪೊಲೀಸರು ನಾಯಿ ಮಾಲೀಕರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾರು ಚಾಲನೆ ಮಾಡುವಾಗಲೇ ಹೃದಯಾಘಾತ – ಗುತ್ತಿಗೆದಾರ ದುರ್ಮರಣ

  • ಐದು ವರ್ಷದ ಬಾಲಕಿ ಮೇಲೆ 2 ರಾಟ್‌ವೀಲರ್‌ಗಳ ದಾಳಿ – ಮಾಲೀಕ ಅರೆಸ್ಟ್

    ಐದು ವರ್ಷದ ಬಾಲಕಿ ಮೇಲೆ 2 ರಾಟ್‌ವೀಲರ್‌ಗಳ ದಾಳಿ – ಮಾಲೀಕ ಅರೆಸ್ಟ್

    ಚೆನ್ನೈ: ಎರಡು ರಾಟ್‌ವೀಲರ್ (Rottweiler) ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ (Chennai) ಉದ್ಯಾನವನವೊಂದರಲ್ಲಿ ನಡೆದಿದೆ.

    ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ. ನಾಯಿಗಳ ಮಾಲೀಕ ಅವುಗಳನ್ನು ಲೂಸ್ ಬಿಟ್ಟ ಪರಿಣಾಮ ನಾಯಿಗಳು ಬಾಲಕಿಯ ಮೇಲೆರಗಿದೆ. ದಾಳಿ ನಡೆದ ತಕ್ಷಣ ಬಾಲಕಿಯ ತಾಯಿ ಆಕೆಯನ್ನು ರಕ್ಷಿಸಲು ಧಾವಿಸಿದ್ದಾರೆ. ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಯಿಗಳ ಮಾಲೀಕರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪಿಟ್‍ಬುಲ್, ಬುಲ್‍ಡಾಗ್, ರಾಟ್‍ವೀಲರ್: 23 ತಳಿ ಅಪಾಯಕಾರಿ ಶ್ವಾನಗಳ ನಿಷೇಧಕ್ಕೆ ರಾಜ್ಯಗಳಿಗೆ ಕೇಂದ್ರ ಆದೇಶ

    ನಾವು ಮಾಲೀಕರನ್ನು ಬಂಧಿಸಿದ್ದೇವೆ ಮತ್ತು ನಾಯಿಗಳನ್ನು ನೋಡಿಕೊಳ್ಳುವ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶೇಖರ್ ದೇಶಮುಖ್ ತಿಳಿಸಿದ್ದಾರೆ. ಪಾರ್ಕ್ನಲ್ಲಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ ಎರಡು ನಾಯಿಗಳು ಬಾಲಕಿಯ ಮೇಲೆ ದಾಳಿ ಮಾಡುವ ದೃಶ್ಯ ಸೆರೆಯಾಗಿದೆ. ರಾಟ್‌ವೀಲರ್ ದಾಳಿಗೊಳಗಾದ ಸುದಕ್ಷ ಎಂಬ ಐದು ವರ್ಷದ ಬಾಲಕಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇದನ್ನೂ ಓದಿ: ಕೋಲಾರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ

    ಮಾರ್ಚ್‌ನಲ್ಲಿ ಪಿಟ್‌ಬುಲ್ ಟೆರಿಯರ್, ಅಮೆರಿಕನ್ ಬುಲ್‌ಡಾಗ್, ರಾಟ್‌ವೀಲರ್ ಮತ್ತು ಮ್ಯಾಸ್ಟಿಫ್ಸ್ ಸೇರಿದಂತೆ 23 ತಳಿಗಳ ನಾಯಿಗಳ ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸುವಂತೆ ಕೇಂದ್ರವು ರಾಜ್ಯಗಳನ್ನು ಕೇಳಿದೆ. ಈಗಾಗಲೇ ಈ ತಳಿಗಳನ್ನು ಸಾಕುಪ್ರಾಣಿಗಳಾಗಿ ಹೊಂದಿರುವವರು ತಕ್ಷಣವೇ ಅವುಗಳ ಸಂತಾನೋತ್ಪತ್ತಿಯನ್ನು ನಿಷೇಧಿಸುವಂತೆ ನಿರ್ದೇಶನ ನೀಡಿದೆ. ಇದನ್ನೂ ಓದಿ: ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ದುರ್ಮರಣ!

  • 6 ವರ್ಷದ ಬಾಲಕನಿಗೆ 11 ಕಡೆ ಕಚ್ಚಿ ಗಾಯಗೊಳಿಸಿದ ನಾಯಿ

    6 ವರ್ಷದ ಬಾಲಕನಿಗೆ 11 ಕಡೆ ಕಚ್ಚಿ ಗಾಯಗೊಳಿಸಿದ ನಾಯಿ

    ಚಿತ್ರದುರ್ಗ: ಮನೆ ಮುಂದೆ ಆಟವಾಡುತ್ತಿದ್ದ 6 ವರ್ಷದ ಬಾಲಕನ (Boy) ಮೇಲೆ ನಾಯಿಯೊಂದು (Dog) ಎರಗಿ ಕೈಕಾಲುಗಳಿಗೆ ಸೇರಿ 11 ಕಡೆ ಕಚ್ಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗದ  (Chitradurga) ಜೆಸಿಆರ್ ಬಡಾವಣೆಯಲ್ಲಿ ನಡೆದಿದೆ.

    ಜೆಸಿಆರ್ ಬಡಾವಣೆಯ 6ನೇ ಅಡ್ಡರಸ್ತೆಯ ಜ್ಯೋತಿ-ನಾಗರಾಜ್ ದಂಪತಿಯ ಪುತ್ರ ಸಾಯಿ ಚರಣ್ (6) ನಿನ್ನೆ ಸಂಜೆ ವೇಳೆ ಮನೆ ಮುಂದೆ ತನ್ನ ಅಕ್ಕನೊಂದಿಗೆ ಆಟವಾಡುತ್ತಿದ್ದ. ಆಗ ಏಕಾಏಕಿ ಬಾಲಕನ ಮೇಲೆ ದಾಳಿ ನಡೆಸಿರೋ 2 ನಾಯಿಗಳು, 11 ಕಡೆ ಕಚ್ಚಿ ಗಾಯಗೊಳಿಸಿವೆ. ಈ ವೇಳೆ ಅಲ್ಲಿನ ಸ್ಥಳೀಯರು ನಾಯಿಗಳಿಂದ ಬಾಲಕನ ರಕ್ಷಣೆಗೆ ಹರಸಾಹಸಪಟ್ಟಿದ್ದಾರೆ.

    ಒಂದು ನಾಯಿ ಜನರ ಬೆದರಿಕೆಗೆ ಹೆದರಿ ಓಡಿ ಹೋದರು ಸಹ ಮತ್ತೊಂದು ನಾಯಿ, ಜನರ ಆವಾಜ್‌ಗೆ ಡೋಂಟ್ ಕೇರ್ ಎಂದಿದೆ. ಪದೇ ಪದೇ ಬಾಲಕನ ಮೇಲೆ ದಾಳಿ ನಡೆಸಿದೆ. ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾನೆ. ಸದ್ಯ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ರೆಸ್ಟ್ ಮಾಡುತ್ತಿದ್ದಾನೆ. ಇದನ್ನೂ ಓದಿ: ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಯುವಕ ಅರೆಬೆತ್ತಲೆ ಪ್ರತಿಭಟನೆ- ಕಪಾಳಮೋಕ್ಷ ಮಾಡಿದ ಪಿಡಿಒ

    ಬಾಲಕ ಸಾಯಿ ಚರಣ್ ತಾಯಿಯು ತಮ್ಮ ಮಗನ ಮೇಲಾದ ನಾಯಿ ದಾಳಿಯಿಂದ ಆತಂಕಗೊಂಡಿದ್ದಾರೆ. ಅಲ್ಲಿನ ಸ್ಥಳೀಯ ಮಾಂಸಾಹಾರದ ಹೋಟೆಲ್ ಸಿಬ್ಬಂದಿ ನಿರುಪಯುಕ್ತ ಮಾಂಸವನ್ನು ಬೀದಿಗೆ ಎಸೆಯುವ ಹಿನ್ನಲೆಯಲ್ಲಿ ಮಾಂಸದ ರುಚಿ ನೋಡಿರುವ ನಾಯಿಗಳು ಮಾಂಸ ಸಿಗದ ವೇಳೆ ನಗರದ ಮಕ್ಕಳ ಮೇಲೆ ದಾಳಿ ನಡೆಸುತ್ತಿವೆ. ಈ ಬಗ್ಗೆ ಹಲವು ಬಾರಿ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನ ಆಗಿಲ್ಲ ಎಂದು ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 2 ತಿಂಗಳ ಹಿಂದಷ್ಟೇ ಪ್ರೀತಿಸಿ ಮದ್ವೆಯಾಗಿದ್ದ ಯುವತಿ ಸಾವು!

  • ಹುಚ್ಚುನಾಯಿ ದಾಳಿ – ಗಂಭೀರ ಗಾಯಗಳಾಗಿ 13 ಮಂದಿ ಆಸ್ಪತ್ರೆಗೆ ದಾಖಲು

    ಹುಚ್ಚುನಾಯಿ ದಾಳಿ – ಗಂಭೀರ ಗಾಯಗಳಾಗಿ 13 ಮಂದಿ ಆಸ್ಪತ್ರೆಗೆ ದಾಖಲು

    ಕಲಬುರಗಿ: ಹುಚ್ಚು ನಾಯಿ (Dog) ದಾಳಿಯಿಂದಾಗಿ 13 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಹಾಗೂ ಬೆನಕಪಳ್ಳಿ ಗ್ರಾಮದಲ್ಲಿ ನಡೆದಿದೆ.

    ಶನಿವಾರ ಸಂಜೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮ ಮತ್ತು ಬೆನಕಪಳ್ಳಿ ಗ್ರಾಮದಲ್ಲಿ ಹುಚ್ಚುನಾಯಿಯೊಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿದೆ. ಸಂಜೆ ಮಳೆಯಾಗುತ್ತಿದ್ದರಿಂದ ಜಮೀನಿನಿಂದ ಜನರು ಮನೆಗೆ ಬೇಗ ವಾಪಸ್ ಆಗುತ್ತಿದ್ದರು. ಈ ವೇಳೆ ಮಹಿಳೆಯೊಬ್ಬರು ಮಳೆಯಿಂದ ರಕ್ಷಣೆ ಪಡೆಯಲು ಮನೆಯೊಂದರ ಬಳಿ ಆಶ್ರಯ ಪಡೆದಿದ್ದರು. ಈ ಸಂದರ್ಭ ಹುಚ್ಚು ನಾಯಿ ಆ ಮಹಿಳೆ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದೆ.

    ನಂತರ ಅದೇ ಹುಚ್ಚು ನಾಯಿ ಪಕ್ಕದ ಊರಾದ ಐನಾಪುರ ಗ್ರಾಮಕ್ಕೆ ಎಂಟ್ರಿ ಕೊಟ್ಟಿದೆ. ಐನಾಪುರ ಗ್ರಾಮದಲ್ಲಿ ಸಹ ಮಹಿಳೆಯರು, ಪುರುಷರು ಸೇರಿದಂತೆ ಬರೋಬ್ಬರಿ 12 ಜನರ ಮೇಲೆ ಅಟ್ಯಾಕ್ ಮಾಡಿದೆ. ಗಾಯಾಳುಗಳನ್ನು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ:  ಮಾಜಿ ಸಂಸದರ ಪತ್ನಿಯ ಕುತ್ತಿಗೆಯಿಂದ ಸರ ಎಗರಿಸಿದ ಕಳ್ಳನ ಬಂಧನ

    ಕಳೆದ ಅನೇಕ ದಿನಗಳಿಂದ ಈ ಹುಚ್ಚು ನಾಯಿ ಗ್ರಾಮಸ್ಥರ ನೆಮ್ಮದಿ ಕೆಡಿಸಿದ್ದು, ಅದನ್ನು ಸೆರೆಹಿಡಿಯಬೇಕೆಂದು ಸಂಬಂಧಿಸಿದವರಿಗೆ ಹೇಳಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಾಯಿ ಕಡಿತಕ್ಕೊಳಗಾದವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲು ಸೂಕ್ತ ಸಮಯಕ್ಕೆ ಅಂಬುಲೆನ್ಸ್ ಬಾರದ ಹಿನ್ನಲೆಯಲ್ಲಿ ನೆರೆಯ ಬೀದರ್ ಜಿಲ್ಲೆ ಚಿಟಗುಪ್ಪಾ ಆಸ್ಪತ್ರೆಯಿಂದ ಅಂಬುಲೆನ್ಸ್ ತರಿಸಿಕೊಂಡು ಗಾಯಾಳುಗಳನ್ನು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೈ-ಕಾಲು ಸೇರಿದಂತೆ ದೇಹದ ಬಹುತೇಕ ಭಾಗಗಳಿಗೆ ಹುಚ್ಚು ನಾಯಿ ದಾಳಿ ಮಾಡಿದ್ದು, ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: INDIA ಸಂಘಟನೆಯಿಂದ ಬಿಜೆಪಿ ಹೆದರಿದೆ.. ಎರಡು ಮಾತಿಲ್ಲ: ಸ್ವಪಕ್ಷ ವಿರುದ್ಧವೇ ಹೆಚ್.ವಿಶ್ವನಾಥ್ ಹೇಳಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರುಳು ಹರಿದು ಮಗುವನ್ನು ಕೊಂದ ಬೀದಿ ನಾಯಿಗಳು – ನಿವಾಸಿಗಳಿಂದ ಆಕ್ರೋಶ

    ಕರುಳು ಹರಿದು ಮಗುವನ್ನು ಕೊಂದ ಬೀದಿ ನಾಯಿಗಳು – ನಿವಾಸಿಗಳಿಂದ ಆಕ್ರೋಶ

    ಲಕ್ನೋ: 7 ತಿಂಗಳ ಮಗುವನ್ನು (Child) ಬೀದಿ ನಾಯಿಗಳು (Stray Dog) ಕ್ರೂರವಾಗಿ ಕಚ್ಚಿ ಕೊಂದಿರುವ ಘಟನೆ ಉತ್ತರ ಪ್ರದೇಶದ (Uttar Pradesh) ನೋಯ್ಡಾ (Noida) ಸೆಕ್ಟರ್ 100ನ ಐಷಾರಾಮಿ ಲೋಟಸ್ ಬೌಲೆವಾರ್ಡ್ ಸೊಸೈಟಿಯಲ್ಲಿ ನಡೆದಿದೆ. ಘಟನೆಯಿಂದ ಬೆಚ್ಚಿ ಬಿದ್ದಿರುವ ನಿವಾಸಿಗಳು ಶ್ವಾನ ಪ್ರಿಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ವರದಿಗಳ ಪ್ರಕಾರ ಬೀದಿ ನಾಯಿಗಳ ದಾಳಿಗೆ ಬಲಿಯಾದ 7 ತಿಂಗಳ ಮಗುವನ್ನು ಅರವಿಂದ್ ಎಂದು ಗುರುತಿಸಲಾಗಿದೆ. ಮಗುವಿನ ತಾಯಿ ಸಪ್ನಾ ದೇವಿ ದಿನಗೂಲಿ ಕೆಲಸಕ್ಕೆ ಹೋಗುವಾಗ ಮಗುವನ್ನು ಆಟವಾಡಲು ಸೊಸೈಟಿಯೊಳಗೆ ಬಿಟ್ಟು ಹೋಗಿದ್ದಳು ಎನ್ನಲಾಗಿದೆ.

    ಈ ವೇಳೆ ಬೀದಿ ನಾಯಿಗಳು ಮಗುವಿನ ಮೇಲೆ ದಾಳಿ ನಡೆಸಿವೆ. ಮಗುವಿನ ಕಿರುಚಾಟ ಕೇಳಿ ಸೊಸೈಟಿ ನಿವಾಸಿಗಳು ಹೊರಬಂದಾಗ ಮಗು ಗಂಭೀರವಾಗಿ ಗಾಯಗೊಂಡಿತ್ತು. ಆಘಾತಕಾರಿ ವಿಷಯ ಎಂದರೆ ನಾಯಿಗಳು ಮಗುವಿನ ಹೊಟ್ಟೆಯನ್ನು ಸೀಳಿ ಕರುಳನ್ನೇ ಹರಿದು ಹಾಕಿವೆ. ತಕ್ಷಣ ಮಗುವನ್ನು ಸ್ಥಳೀಯರು ನೋಯ್ಡಾದ ಯಥಾರ್ಥ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಗು ಗಂಭೀರ ಗಾಯಗಳಿಂದಾಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ. ಇದನ್ನೂ ಓದಿ: ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ- ಇಬ್ಬರು ಪೈಲಟ್‌ ಸೇರಿ 6 ಮಂದಿ ದುರ್ಮರಣ

    ಬೀದಿ ನಾಯಿಗಳು ಹಲವು ವರ್ಷಗಳಿಂದ ಸೊಸೈಟಿಯಲ್ಲಿ ಹಲವರ ಮೇಲೆ ದಾಳಿ ಮಾಡಿವೆ ಎಂದು ನಿವಾಸಿಗಳು ಹೇಳಿದ್ದಾರೆ. ಆದರೆ ಕೆಲ ಶ್ವಾನ ಪ್ರಿಯರ ಅಡ್ಡಿಯಿಂದಾಗಿ ಬೀದಿ ನಾಯಿಗಳನ್ನು ಅಲ್ಲಿಂದ ಬೇರೆಡೆಗೆ ಒಯ್ಯಲು ಸಾಧ್ಯವಾಗಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಈ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಪಿಟ್‌ಬುಲ್ ತಳಿಯ ನಾಯಿ ತನ್ನ ಮಾಲೀಕನನ್ನೇ ಕೊಂದಿತ್ತು. ಇತ್ತೀಚೆಗೆ ಘಾಜಿಯಾಬಾದ್ ಪುರಸಭೆ ಪಿಟ್‌ಬುಲ್, ರಾಟ್‌ವೀಲರ್‌ನಂತಹ ಆಕ್ರಮಣಕಾರಿ ಸ್ವಭಾವದ ನಾಯಿಗಳನ್ನು ಸಾಕುವುದನ್ನು ನಿಷೇಧಿಸಿದೆ. ಇದನ್ನೂ ಓದಿ: ನಮಾಜ್ ವಿಷಯಕ್ಕೆ ಗಲಾಟೆ – ವಿವಿಯಿಂದ ಹೊರನಡೆದ 60 ನೈಜೀರಿಯಾ ವಿದ್ಯಾರ್ಥಿಗಳು

    Live Tv

    [brid partner=56869869 player=32851 video=960834 autoplay=true]

  • ಸಾಕು ನಾಯಿ ಕಚ್ಚಿದ್ದಕ್ಕೆ ನಾಯಿ ಮಾಲಕಿ ವಿರುದ್ಧ ಮಂಗಳೂರಲ್ಲಿ ಪೊಲೀಸ್ ದೂರು ದಾಖಲು

    ಸಾಕು ನಾಯಿ ಕಚ್ಚಿದ್ದಕ್ಕೆ ನಾಯಿ ಮಾಲಕಿ ವಿರುದ್ಧ ಮಂಗಳೂರಲ್ಲಿ ಪೊಲೀಸ್ ದೂರು ದಾಖಲು

    ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸಾಕು ನಾಯಿಯೊಂದು ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿ ಕಚ್ಚಿದ ಘಟನೆ ಶನಿವಾರ ನಡೆದಿದೆ. ಈ ಘಟನೆ ಸಂಬಂಧಿಸಿದಂತೆ ನಾಯಿ ಮಾಲಕಿ ವಿರುದ್ಧ ಮಂಗಳೂರು ನಗರದ ಬಂದರು ಠಾಣೆಯಲ್ಲಿ ದೂರು ದಾಖಲಾಗಿದೆ.

    ನಗರದ ಪತ್ರಾವೋ ಲೇನ್ ಬಳಿಯ ಅಲೋಷಿಯಸ್ ಕಾಲೇಜಿಗೆ ಹೋಗುವ ಇಂಟರ್ ಲಾಕ್ ರಸ್ತೆಯಲ್ಲಿನ ಮಹೇಂದ್ರ ಮ್ಯಾನರ್ ಅಪಾರ್ಟ್ ಮೆಂಟಿನ ಎದುರುಗಡೆ ಈ ಘಟನೆ ನಡೆದಿದೆ. ಇದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಿ.ಬಿ.ಎಂ. ವಿದ್ಯಾರ್ಥಿಯ ಮೇಲೆ ಸ್ಥಳೀಯ ನಿವಾಸಿಯೊಬ್ಬರ ನಾಯಿ ಕಾಂಪೌಂಡ್ ಒಳಗಡೆಯಿಂದ ರಸ್ತೆಗೆ ಹಾರಿ ಬಂದು ದಾಳಿ ಮಾಡಿ, ಗಾಯಗೊಳಿಸಿದೆ. ಈ ವೇಳೆ ವಿದ್ಯಾರ್ಥಿಯ ಕಿರುಚಾಟ ಕೇಳಿ ಸ್ಥಳೀಯ ನಿವಾಸಿಗಳು ಮತ್ತು ನಾಯಿಯ ಮಾಲೀಕರು ಸ್ಥಳಕ್ಕೆ ಬಂದು ನಾಯಿಯನ್ನು ಬಿಡಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಯು ನೀವು ನಾಯಿಯನ್ನು ಕಟ್ಟಿ ಹಾಕದೇ ಯಾಕೆ ನಿರ್ಲಕ್ಷ್ಯತನದಿಂದ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಮಾಲಕಿ ವಿದ್ಯಾರ್ಥಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ವಿದ್ಯಾರ್ಥಿ ದೂರಿದ್ದಾರೆ.

    ಈ ಕುರಿತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

  • 2 ವರ್ಷದ ಬಾಲಕಿ ಮೇಲೆ ಹುಚ್ಚು ನಾಯಿ ದಾಳಿ

    2 ವರ್ಷದ ಬಾಲಕಿ ಮೇಲೆ ಹುಚ್ಚು ನಾಯಿ ದಾಳಿ

    ವಿಜಯಪುರ: ಬಹಿರ್ದೆಸೆಗೆ ಹೋಗಿದ್ದ ಎರಡು ವರ್ಷದ ಮಗು ಮೇಲೆ ಹುಚ್ಚು ನಾಯಿಯೊಂದು ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

    ನಗರದ ಅಂಬೇಡ್ಕರ್ ನಗರದ ನಿವಾಸಿ ಕರೀಷ್ಮಾ ಎಂಬ ಬಾಲಕಿ ಹುಚ್ಚು ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿ. ಕರೀಷ್ಮಾ ಮನೆಯಿಂದ ಬಹಿರ್ದೆಸೆಗೆಂದು ಬಂದಿದ್ದಾಳೆ. ಈ ಸಂದರ್ಭದಲ್ಲಿ ಬಾಲಕಿ ಮೇಲೆ ಹುಚ್ಚು ನಾಯಿ ಎರಗಿ ಕೈ ಕಾಲು, ಹೊಟ್ಟೆ ಭಾಗ ಸೇರಿದಂತೆ ದೇಹದ ಹಲವು ಭಾಗಗಳಿಗೆ ಕಚ್ಚಿ ಗಾಯಗೊಳಿಸಿದೆ. ಕೂಡಲೇ ಸ್ಥಳದಲ್ಲಿದ್ದ ಕೆಲವರು ಬಾಲಕಿಯ ಸಹಾಯಕ್ಕೆ ಬಂದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

    ಅಂಬೇಡ್ಕರ್ ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳ ದಾಳಿಗೆ ನಗರದ ನಿವಾಸಿಗರು ಬೇಸತ್ತಿದ್ದಾರೆ. ಅಲ್ಲದೇ ಈಗಾಗಲೇ ಹುಚ್ಚು ನಾಯಿ ದಾಳಿಯಿಂದ ನಗರದ ನಾಲ್ಕು ಜನ ಗಾಯಗೊಂಡಿದ್ದಾರೆ. ಪದೇ ಪದೇ ನಾಯಿ ದಾಳಿ ಆಗುತ್ತಿರುವುದರ ಬಗ್ಗೆ ಮಹಾನಗರ ಪಾಲಿಕೆಗೆ ದೂರು ನೀಡಿದ್ದೇವೆ. ಆದರೆ ಪಾಲಿಕೆ ಅಧಿಕಾರಿಗಳು ಮಾತ್ರ ನಾಯಿಗಳ ದಾಳಿ ತಡೆಯುವಲ್ಲಿ ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಅಲ್ಲಿನ ನಿವಾಸಿಗರು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಸಾಲ ವಾಪಸ್ ಕೊಡದ್ದಕ್ಕೆ ನಾಯಿ ಬಿಟ್ಟು ದಾಳಿ- ಕೊಡಗಿನಲ್ಲೊಬ್ಬ ಭಯಾನಕ ಮಾಲೀಕ

    ಸಾಲ ವಾಪಸ್ ಕೊಡದ್ದಕ್ಕೆ ನಾಯಿ ಬಿಟ್ಟು ದಾಳಿ- ಕೊಡಗಿನಲ್ಲೊಬ್ಬ ಭಯಾನಕ ಮಾಲೀಕ

    ಮಡಿಕೇರಿ: ಪಡೆದ ಸಾಲದ ಹಣ ಹಿಂದಿರುಗಿಸದ ತನ್ನ ಕಾರ್ಮಿಕನ ವಿರುದ್ಧ ಅಮಾನವೀಯವಾಗಿ ವರ್ತಿಸಿರೋ ಮಾಲೀಕನೋರ್ವ ಕಾರ್ಮಿಕನನ್ನು ಕಟ್ಟಿಹಾಕಿ ನಾಯಿಯಿಂದ ಕಚ್ಚಿಸಿರೋ ಪ್ರಕರಣ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆಯ ಹರೀಶ್ ಎಂಬವರ ಮೇಲೆ ಮಾಲೀಕ ಕಿಶನ್ ನಾಯಿ ದಾಳಿ ನಡೆಸಿದ್ದಾರೆ.

    ಏನಿದು ಘಟನೆ?: ಕಳೆದ ಒಂದೂವರೆ ವರ್ಷಗಳಿಂದ ಹರೀಶ್ ರಾಜಾಪುರ ಗ್ರಾಮದ ಕಿಶನ್ ಎಂಬವರ ಮನೆಯಲ್ಲಿ ಕೂಲಿ ಕೆಲಸಮಾಡಿಕೊಂಡಿದ್ದರು. ತನ್ನ ಮಾಲೀಕನಿಂದ 4 ಸಾವಿರ ಹಣ ಸಾಲಪಡೆದಿದ್ದ ಹರೀಶ್ ಅದನ್ನು ವಾಪಸ್ ನೀಡದೆ ಕೆಲಸಕ್ಕೂ ಹೋಗದೆ ಕದ್ದು ಮುಚ್ಚಿ ಓಡಾಡುತ್ತಿದ್ದನಂತೆ. ಹಣ ನೀಡದೆ ಕೆಲಸಕ್ಕೂ ಬಾರದೆ ಇದ್ದ ಕಾರ್ಮಿಕನ ವಿರುದ್ಧ ತೀರಾ ಸಿಟ್ಟಿಗೆದ್ದಿದ್ದ ಮಾಲೀಕ ಕಿಶನ್ ಅಗಸ್ಟ್ 29ರಂದು ಬಾಳೆಲೆಯಲ್ಲಿ ಆತನನ್ನು ಕಂಡವನೆ ನೇರವಾಗಿ ತನ್ನ ಜೀಪಲ್ಲಿ ಕೂರಿಸಿಕೊಂಡು ಹೋಗಿ ಮನೆ ಬಳಿ ಅಮಾನವೀಯತೆ ಮೆರೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

    ಕಾರ್ಮಿಕ ಹರೀಶ್ ನನ್ನು ಕಟ್ಟಿಹಾಕಿ ತನ್ನ ಶೆಡ್ ನೊಳಗೆ ಕೂಡಿ ಹಾಕಿ ನಾಯಿಗಳನ್ನ ಛೂ ಬಿಟ್ಟು ಕಚ್ಚಿಸಿದ್ದಾನೆ. ಎರಡು ಮೂರು ನಾಯಿಗಳ ದಾಳಿಯಿಂದ ತಲೆ, ದೇಹ, ಕೈಕಾಲುಗಳು ತೀವ್ರ ಗಾಯಗಳಾಗರೋ ಹರೀಶ್ ಇದೀಗ ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹರೀಶ್ ಆರೋಪಿಸಿದ್ದಾರೆ. ಆದ್ರೆ ಕಿಶನ್, `ತನಗೆ ಹರೀಶ್ 20 ಸಾವಿರ ಹಣ ಕೊಡೋಕೆ ಬಾಕಿಯಿದೆ. ಇಷ್ಟಿದ್ದರೂ ಆತ ಕದ್ದು ಮುಚ್ಚಿ ಓಡಾಡುತ್ತಿದ್ದ’ ಎಂದು ಪೊಲೀಸರಲ್ಲಿ ಹೇಳಿದ್ದಾರೆ.

    ಅದೇನೇ ಇರಲಿ ಮಾಲೀಕನ ಇಂತಹ ಅಮಾನವೀಯ ವರ್ತನೆ ಬಡ ಕಾರ್ಮಿಕನನ್ನು ಕಂಗಾಲುಗೊಳಿಸಿದ್ದು, ಇಷ್ಟೆಲ್ಲಾ ಆದ್ರೂ ನೊಂದ ಕಾರ್ಮಿಕನ ನೆರವಿಗೆ ಯಾವೊಂದು ಇಲಾಖೆಯೂ ಬಂದಿಲ್ಲ, ಆತನ ನೋವು ಕೇಳಿಲ್ಲ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರಷ್ಟೆ ಎಂದು ದಲಿತ ಸಂಘರ್ಷ ಸಮಿತಿ ಪ್ರಮುಖರು ಆರೋಪಿಸುತ್ತಿದ್ದು, ನೊಂದ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿ ಎಂದು ಆಗ್ರಹಿಸುತ್ತಿದ್ದಾರೆ.

    ಸದ್ಯ ಮಾಲೀಕ ಕಿಶನ್ ವಿರುದ್ಧ ಅಪಹರಣ, ಹಲ್ಲೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಕಿಶನ್ ಬಂಧನಕ್ಕೆ ಬಲೆ ಬೀಸಿದ್ದಾರೆ. ವಿರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ನಾಗಪ್ಪ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.