Tag: ನಾರಾಯಣಪುರ ಡ್ಯಾಂ

  • ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

    ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

    ರಾಯಚೂರು: ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ನಾರಾಯಣಪುರ ಜಲಾಶಯಕ್ಕೆ (Narayanapura Dam) ಒಳಹರಿವು ಹೆಚ್ಚಳವಾಗಿದ್ದು, ಜಲಾಶಯದಿಂದ ಕೃಷ್ಣಾ ನದಿಗೆ (Krishna River) ಹಂತ ಹಂತವಾಗಿ ನೀರು ಬಿಡುಗಡೆ ಮಾಡಲಾಗುತ್ತಿದೆ.

    ಈ ಹಿನ್ನೆಲೆ ರಾಯಚೂರು ಜಿಲ್ಲೆಯಲ್ಲಿ ಕೃಷ್ಣಾ ನದಿ ಪಾತ್ರದಲ್ಲಿ ಅಲರ್ಟ್ ಘೋಷಿಸಲಾಗಿದೆ. ನದಿ ಪಾತ್ರಕ್ಕೆ ಯಾರೂ ತೆರಳದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ. ಸದ್ಯ ಜಲಾಶಯದಿಂದ 29,226 ಕ್ಯೂಸೆಕ್‌ನಷ್ಟು ನೀರನ್ನು 7 ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ನಾರಾಯಣಪುರ ಜಲಾಶಯಕ್ಕೆ 30,000 ಕ್ಯೂಸೆಕ್ ಒಳಹರಿವು ಇದ್ದು, 85.41% ರಷ್ಟು ಭರ್ತಿಯಾಗಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

    ಗರಿಷ್ಠ ಮಟ್ಟ 492.25 ಮೀಟರ್‌ನಲ್ಲಿ 491.15 ಮೀಟರ್ ತಲುಪಿದೆ. 33.313 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 28.45 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು ಹೆಚ್ಚಾದಂತೆ ಹೆಚ್ಚು ಪ್ರಮಾಣದ ನೀರು ಕೃಷ್ಣಾ ನದಿಗೆ ಹರಿಸುವ ಸಾಧ್ಯತೆ ಹಿನ್ನೆಲೆ ರಾಯಚೂರು ಜಿಲ್ಲಾಡಳಿತ ಜನ ಜಾನುವಾರುಗಳೊಂದಿಗೆ ನದಿ ಬಳಿ ಹೋಗದಂತೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ

  • ನಾರಾಯಣಪುರ ಡ್ಯಾಂನಿಂದ ತೆಲಂಗಾಣಕ್ಕೆ ನೀರು – ರೈತರು ಕಿಡಿ

    ನಾರಾಯಣಪುರ ಡ್ಯಾಂನಿಂದ ತೆಲಂಗಾಣಕ್ಕೆ ನೀರು – ರೈತರು ಕಿಡಿ

    – ಬೆಂಗಳೂರು ಪಾದಯಾತ್ರೆ ಹೋರಾಟಕ್ಕೆ ಸಜ್ಜು

    ಯಾದಗಿರಿ: ಬಸವಸಾಗರ ಜಲಾಶಯ (Basavasagar Dam) ನಾಲ್ಕು ಜಿಲ್ಲೆಯ ಜನರ ಜೀವನಾಡಿಯಾಗಿದೆ. ಅದೇ ಜಲಾಶಯ ನೀರು ಬಳಕೆ ಮಾಡಿಕೊಂಡು ನಾಲ್ಕು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯನ್ನು ಬೆಳೆಯಲಾಗುತ್ತದೆ. ಅದೇ ಜಲಾಶಯ ನೀರನ್ನು ಕುಡಿಯೋಕು ಸಹ ಬಳಕೆ ಮಾಡಿಕೊಳ್ಳಲಾಗುತ್ತದೆ. ಆದರೆ ಸರ್ಕಾರದ ಯಾವುದೇ ಆದೇಶವಿಲ್ಲದೆ ಅಧಿಕಾರಿಗಳು ಪಕ್ಕದ ತೆಲಂಗಾಣ ರಾಜ್ಯಕ್ಕೆ ನೀರು ಹರಿಬಿಟ್ಟಿದ್ದಾರೆ. ಇದಕ್ಕೆ ವಿರೋಧ ವ್ಯಕ್ತ ಪಡಿಸಿದ ಬಿಜೆಪಿ, ಅಧಿಕಾರಿಗಳ ವಿರುದ್ಧ ಕೆಂಡಕಾರಿದೆ.

    ಯಾದಗಿರಿ (Yadgiri) ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ (Narayanapura) ಬಳಿಯ ಬಸವಸಾಗರ ಜಲಾಶಯದಿಂದ ತೆಲಂಗಾಣಕ್ಕೆ (Telangana) ನೀರು ಬಿಡಲಾಗಿದೆ. ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಜೋರಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಬಸವಸಾಗರ ಡ್ಯಾಂನಿಂದ ತೆಲಂಗಾಣಕ್ಕೆ ಕೃಷ್ಣನದಿ ಮೂಲಕ ನೀರು ಹರಿಬಿಡಲಾಗಿದೆ. ರಾತ್ರಿ ವೇಳೆ ಸುಮಾರು 1.24 ಟಿಎಂಸಿಯಷ್ಟು ನೀರನ್ನ ಹರಿಸಲಾಗಿದೆ. ಇದನ್ನೂ ಓದಿ: ಹೈವೇಯಲ್ಲಿ ಸರಣಿ ಅಪಘಾತ – ಈಶಾಗೆ ಬಂದಿದ್ದ ವಾಹನ ಸವಾರರ ಪರದಾಟ

    ತೆಲಂಗಾಣಕ್ಕೆ ನೀರು ಬಿಟ್ಟಿದ್ದನ್ನು ರೈತರು ಖಂಡಿಸಿದ್ದಾರೆ. ಬಸವಸಾಗರ ಜಲಾಶಯ ನೀರನ್ನ ಯಾದಗಿರಿ, ವಿಜಯಪುರ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಯ ಲಕ್ಷಾಂತರ ರೈತರು ಅವಲಂಬಿಸಿದ್ದಾರೆ. 4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯನ್ನು ಬೆಳೆಯುತ್ತಾರೆ. ನವೆಂಬರ್‌ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ರೈತರ ಎರಡನೇ ಬೆಳೆಗೆ ನೀರು ಬಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಡಿಸೆಂಬರ್ 10ರಿಂದ ಮಾರ್ಚ್ 23ರ ತನಕ ನೀರು ಹರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ವಾರಬಂದಿ ಅಂದರೆ 14 ದಿನಗಳ ಕಾಲ ನೀರು ಬಿಟ್ಟು ನಿರಂತರವಾಗಿ 10 ದಿನಗಳ ಕಾಲ ನೀರು ಬಂದ್ ಮಾಡಲಾಗುತ್ತದೆ. ಇದರಿಂದ ರೈತ ಮುಖಂಡರು ಆಕ್ರೋಶ ಹಾಕಿದ್ದಾರೆ. ಇದನ್ನೂ ಓದಿ: ಇಶಾ ಫೌಂಡೇಶನ್‌ ಶಿವರಾತ್ರಿ ಕಾರ್ಯಕ್ರಮ – ಅಮಿತ್‌ ಶಾ, ಡಿಕೆ ಶಿವಕುಮಾರ್‌ ಭಾಗಿ

    ಕಳೆದ ವರ್ಷ ಡ್ಯಾಂನಲ್ಲಿ ನೀರಿನ ಕೊರತೆಯಿದ್ದ ಕಾರಣಕ್ಕೆ ಎರಡನೇ ಬೆಳೆಗೆ ನೀರು ಬಿಡಲು ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೇ ಕಾರಣಕ್ಕೆ ರೈತರು ನಿರಂತರ ಹೋರಾಟ ಮಾಡಿದ್ದರು. ಕೆಲ ಸಂಘಟನೆಗಳು ಡ್ಯಾಂಗೆ ಮುತ್ತಿಗೆ ಹಾಕುವ ಪ್ರಯತ್ನ ಕೂಡ ಮಾಡಿದ್ದರು. ಇಷ್ಟಾದ ಬಳಿಕ ಸರ್ಕಾರ ರೈತರಿಗೆ ನೀರು ಒದಗಿಸುವ ಕೆಲಸ ಮಾಡಿತ್ತು. ಆದರೆ ಈಗ ಡ್ಯಾಂನಲ್ಲಿ ನೀರಿದೆ ಎನ್ನುವ ಕಾರಣಕ್ಕೆ ಸರ್ಕಾರದ ಯಾವುದೇ ಆದೇಶವಿಲ್ಲದೇ ಇದ್ದರೂ ಅಧಿಕಾರಿಗಳು ನೀರು ಬಿಟ್ಟಿದ್ದಾರೆ. ಬುಧವಾರ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಕಚೇರಿಗೆ ಭೇಟಿ ನೀಡಿದ ಮಾಜಿ ಸಚಿವ ರಾಜುಗೌಡ ಅಧಿಕಾರಿಗಳ ವಿರುದ್ಧ ಕೆಂಡಕಾರಿದ್ದಾರೆ. ಇದನ್ನೂ ಓದಿ: ರಾಜಕೀಯ ಲಾಭಕ್ಕಾಗಿ ನನ್ನ ಮೇಲೆ ಇಲ್ಲಸಲ್ಲದ ಆರೋಪ: ಅಪಪ್ರಚಾರ ಮಾಡಿದವರಿಗೆ ಮುನಿರತ್ನ ತರಾಟೆ

    ರಾಜ್ಯದ ಜನರಿಗೆ ಮುಂದೆ ನೀರಿನ ಸಮಸ್ಯೆ ಆಗುತ್ತದೆ. ಇಂತಹ ಸಂದರ್ಭದಲ್ಲಿ ಪಕ್ಕದ ರಾಜ್ಯಕ್ಕೆ ನೀರು ಬಿಟ್ಟಿರೋದು ಎಷ್ಟು ಸರಿ? ನೀರಾವರಿ ಸಚಿವರು ಮೊದಲು ನಮ್ಮ ರಾಜ್ಯದ ಬಗ್ಗೆ ಯೋಚಿಸಿ. ಬಳಿಕ ಪಕ್ಕದ ರಾಜ್ಯದ ಬಗ್ಗೆ ಕಾಳಜಿವಹಿಸಲಿ ಎಂಬುದು ರೈತರ ಅಭಿಪ್ರಾಯ. ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಅಮಿತ್ ಶಾ ಜೊತೆ ಡಿಕೆಶಿ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

  • ನಾರಾಯಣಪುರ ಡ್ಯಾಂನಿಂದ ನದಿಗೆ ನೀರು – ಆಹಾರಕ್ಕಾಗಿ ಗ್ರಾಮಸ್ಥರ ಪರದಾಟ

    ನಾರಾಯಣಪುರ ಡ್ಯಾಂನಿಂದ ನದಿಗೆ ನೀರು – ಆಹಾರಕ್ಕಾಗಿ ಗ್ರಾಮಸ್ಥರ ಪರದಾಟ

    ರಾಯಚೂರು: ನಾರಾಯಣಪುರ ಜಲಾಶಯದಿಂದ ನದಿಗೆ ಹೆಚ್ಚು ನೀರು ಬಿಟ್ಟ ಹಿನ್ನೆಲೆ ರಾಯಚೂರಿನ ನಡುಗಡ್ಡೆಗಳ ಜನ ಆಹಾರ ಪದಾರ್ಥಗಳಿಗಾಗಿ ನದಿ ದಾಟಲು ಆಗದೆ ಪರದಾಡುತ್ತಿದ್ದಾರೆ.

    ನದಿಯಲ್ಲಿ ನೀರು ಹೆಚ್ಚಾಗುತ್ತಿದ್ದರೂ, ಅಗತ್ಯ ವಸ್ತುಗಳಿಗಾಗಿ ಕುರ್ವಕುರ್ದ ಮತ್ತು ಕುರ್ವಕುಲ ನಡುಗಡ್ಡೆಗಳ ಜನ ಅರಗೋಲಿನಲ್ಲೇ ನದಿ ಪಕ್ಕದ ಡೊಂಗರಾಂಪುರಕ್ಕೆ ಬರುತ್ತಿದ್ದಾರೆ. ಜಿಲ್ಲಾಡಳಿತ ಡಂಗೂರ ಸಾರುವ ಮೂಲಕ ಜನರನ್ನು ಶಿಫ್ಟ್ ಆಗುವಂತೆ ಸೂಚನೆ ನೀಡಿತ್ತು. ಸ್ಥಳಾಂತರಗೊಳ್ಳಲು ಒಪ್ಪದ ಗ್ರಾಮಸ್ಥರು ತೆಪ್ಪದಲ್ಲೇ ಓಡಾಡುತ್ತಿದ್ದಾರೆ.

    ಜೀವ ರಕ್ಷಕ ಜಾಕೆಟ್‍ಗಳನ್ನು ನೀಡಿ ಗ್ರಾಮಸ್ಥರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದೆ. ನಡುಗಡ್ಡೆಗಳ ಜನರ ಸುರಕ್ಷತೆಗಾಗಿ ಎನ್.ಡಿ.ಆರ್.ಎಫ್ ತಂಡ ಸ್ಥಳದ ವೀಕ್ಷಣೆಯನ್ನೂ ನಡೆಸಿದೆ. ಇನ್ನೂ ಕುರ್ವಕುಲ ದತ್ತಾತ್ರೇಯ ಪೀಠಕ್ಕೆ ಭಕ್ತರು ಅರಗೋಲಿನಲ್ಲೇ ಬಂದು ಹೋಗುತ್ತಿದ್ದಾರೆ. ಭಕ್ತರು ಸೆಫ್ಟಿ ಜಾಕೆಟ್ ಹಾಕಿಕೊಂಡು ಪೊಲೀಸ್ ಭದ್ರತೆಯಲ್ಲಿ ದೇವರ ದರ್ಶನ ಪಡೆದು ಹೋಗುತ್ತಿದ್ದಾರೆ. ನದಿಯಲ್ಲಿ ನೀರು ಹೆಚ್ಚಾಗಿರುವುದರಿಂದ ಬೋಟ್ ವ್ಯವಸ್ಥೆ ಮಾಡಬೇಕು ಎಂದು ನಡುಗಡ್ಡೆಗಳ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

  • ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ನೀರು – ದ್ವೀಪಗಳಾದ ಹಳ್ಳಿಗಳು

    ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ನೀರು – ದ್ವೀಪಗಳಾದ ಹಳ್ಳಿಗಳು

    ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಟ್ಟಿರುವುದರಿಂದ ರಾಯಚೂರಿನ ಲಿಂಗಸುಗೂರು ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.

    ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ ಐದು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಮ್ಯಾದರಗಡ್ಡಿ, ಕಡದರಗಡ್ಡಿ ನಡುಗಡ್ಡೆ ಗ್ರಾಮಗಳು ದ್ವೀಪಗಳಾಗಿ ಪರಿವರ್ತನೆಯಾಗಿವೆ. ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದಾಗಲೆಲ್ಲಾ ಈ ಗ್ರಾಮಗಳು ದ್ವೀಪಗಳಾಗಿ ಪರಿವರ್ತನೆಯಾಗುತ್ತವೆ.

    ನಡುಗಡ್ಡೆ ಗ್ರಾಮಸ್ಥರಿಗೆ ಸಮರ್ಪಕವಾದ ವಸತಿ ಹಾಗೂ ಭೂಮಿ ಸೌಲಭ್ಯ ಸಿಗದೇ ಸ್ಥಳಾಂತರ ಸಾಧ್ಯವಾಗಿಲ್ಲ. ಹೀಗಾಗಿ ನಡುಗಡ್ಡೆ ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಇಲ್ಲಿನ ಯರಗೋಡಿ ಗ್ರಾಮದಿಂದ ಕಡದರಗಡ್ಡಿ ಗ್ರಾಮದ ಮಧ್ಯೆ ಸೇತುವೆ ನಿರ್ಮಿಸಲು 4 ಕೋಟಿ ರೂ. ಮೀಸಲಿಡಲಾಗಿದೆ. ಆದರೆ ಕಾಮಗಾರಿಗೆ 16 ಕೋಟಿ ರೂ. ಅವಶ್ಯಕತೆ ಇರುವುದರಿಂದ ಸೇತುವೆ ಕಾಮಗಾರಿ ನೆನೆಗುದಿಗೆ ಬಿದ್ದಿದೆ ಎಂದು ಲಿಂಗಸುಗೂರು ಶಾಸಕ ಡಿ.ಎಸ್ ಹೂಲಿಗೇರಿ ಹೇಳಿದ್ದಾರೆ.

    https://www.facebook.com/publictv/videos/374289933210694/

  • ನಾರಾಯಣಪುರ ಡ್ಯಾಂ ಭರ್ತಿ – ಪ್ರವಾಹ ಭೀತಿಯಲ್ಲಿ ಗ್ರಾಮಗಳು

    ನಾರಾಯಣಪುರ ಡ್ಯಾಂ ಭರ್ತಿ – ಪ್ರವಾಹ ಭೀತಿಯಲ್ಲಿ ಗ್ರಾಮಗಳು

    ರಾಯಚೂರು: ಮಳೆಯಿಂದ ಜಿಲ್ಲೆಯ ನಾರಾಯಣಪುರ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಕೃಷ್ಣನದಿಯ ಅಕ್ಕಪಕ್ಕದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಕಾಡುತ್ತಿದೆ.

    ನಾರಾಯಣಪುರ ಡ್ಯಾಂ ಸಂಪೂರ್ಣ ಭರ್ತಿಯಾದ ಕಾರಣ ಕೃಷ್ಣನದಿಗೆ 50 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ಸಂಜೆ 4 ಗಂಟೆ ವೇಳೆಗೆ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇದ್ದು, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಕೃಷ್ಣಾ ನದಿ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರು ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

    ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಗ್ರಾಮ ನಡುಗಡ್ಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಸುರಕ್ಷತಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ ಕೃಷ್ಣಾ ನದಿಗೆ ಇಳಿಯದಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.