Tag: ನಾಶ

  • ಕೋಲಾರದಲ್ಲಿ ಭಾರೀ ಮಳೆ- ಬೆಳೆಗಳು ಜಲಾವೃತ, ಸಂಕಷ್ಟದಲ್ಲಿ ರೈತರು

    ಕೋಲಾರದಲ್ಲಿ ಭಾರೀ ಮಳೆ- ಬೆಳೆಗಳು ಜಲಾವೃತ, ಸಂಕಷ್ಟದಲ್ಲಿ ರೈತರು

    ಕೋಲಾರ: ಕಳೆದ ರಾತ್ರಿ ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದಾಗಿ ರೈತರು ಕಂಗಾಲಾಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ಜಲಾವೃತಗೊಂಡಿದೆ. ಮಳೆ ನೀರು ಹೊಲಕ್ಕೆ ನುಗ್ಗಿದ ಪರಿಣಾಮ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ನಾನಾ ಬೆಳೆಗಳು ಮುಳುಗಡೆಯಾಗಿವೆ.

    ಭಾರೀ ಮಳೆಯಿಂದಾಗಿ ಕೋಲಾರ ತಾಲೂಕಿನ ನರಸಾಪುರ ಹಾಗೂ ವೇಮಗಲ್ ಸುತ್ತಮುತ್ತ ಬೆಳೆಗಳು ನಾಶವಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗಿವೆ. ಟೊಮ್ಯಾಟೋ ನೀರಿನಲ್ಲಿ ತೇಲಿ ಹೋದರೆ, ಪಂಪ್ ಸೆಟ್‍ಗಳು ಜಲಾವೃತಗೊಂಡಿವೆ, ಡ್ರಿಪ್ ಪೈಪ್‍ಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಇದನ್ನೂ ಓದಿ: ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ – 10 ಅಡಿ ಆಳಕ್ಕೆ ಕುಸಿದ ರಸ್ತೆ

    ಭಾರೀ ಮಳೆಯಾದ ಪರಿಣಾಮ ಒತ್ತುರಿಯಾಗಿರುವ ರಾಜಕಾಲುವೆ ಹಾಗೂ ಹಳ್ಳಕೊಳ್ಳದ ನೀರು ನೇರವಾಗಿ ರೈತರ ತೋಟಗಳನ್ನ ಆವರಿಸಿದೆ. ಪರಿಣಾಮ ರೈತರು ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಗಳೆಲ್ಲ ಜಲಾವೃತಗೊಂಡಿವೆ. ಸಾಲ ಮಾಡಿ, ಕಷ್ಟಪಟ್ಟು ಬೆಳೆದಿದ್ದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇದನ್ನೂ ಓದಿ: ನಂದಿಬೆಟ್ಟಕ್ಕೆ ಶಾಶ್ವತ ರಸ್ತೆ ನಿರ್ಮಾಣ ಆಗೋವರೆಗೂ ಪ್ರವಾಸಿಗರಿಗೆ ನಿಷೇಧ

    ಕೊರೊನಾ ಸಂಕಷ್ಟದಿಂದ ಪಾರಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೆಳೆದಿದ್ದ ಬೆಳೆ ಒಂದೇ ರಾತ್ರಿಗೆ ನೀರು ಪಾಲಾಗಿದೆ. ಮಳೆ ನೀರಿನೊಂದಿಗೆ ಕೆ.ಸಿ.ವ್ಯಾಲಿ ನೀರು ಸೇರಿದ ಪರಿಣಾಮ ನರಸಾಪುರ ಸುತ್ತಮುತ್ತ ಲಕ್ಷಾಂತರ ರೂಪಾಯಿ ಭತ್ತ, ರಾಗಿ, ಟೊಮ್ಯಾಟೋ ಬೆಳೆಗಳು ನೀರಿನಲ್ಲಿ ಮುಳುಗಿವೆ. ನೀರಿಲ್ಲದ ಪರಿಸ್ಥಿತಿಯಲ್ಲಿ ಅಲ್ಪಸ್ವಲ್ಪ ನೀರಿನಲ್ಲೇ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ, ಒಳ್ಳೆಯ ಬೆಳೆ ಬೆಳೆದು ಜೀವನ ಮಾಡಬೇಕು ಎಂದುಕೊಂಡಿದ್ದ ರೈತನಿಗೆ ಮಳೆ ಸುನಾಮಿಯಂತೆ ಬಂದಪ್ಪಳಿಸಿದೆ.

    ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸದ್ಯ ಹಾನಿಗೊಳಗಾದ ರೈತರ ತೋಟಗಳಿಗೆ ಬೇಟಿಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ. ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಬರಬೇಕು ಇಲ್ಲವಾದಲ್ಲಿ ರೈತರ ಪರಿಸ್ಥಿತಿ ಮತ್ತಷ್ಟು ದುಸ್ಥಿತಿ ತಲುಪಲಿದೆ. ಕಾಲುವೆಗಳನ್ನು ಒತ್ತುವರಿ ಮಾಡಿಕೊಂಡ ಪರಿಣಾಮ ನೀರು ನುಗ್ಗಿದೆ, ಹಾಗಾಗಿ ಸಂಬಂದಪಟ್ಟವರು ಕಾಲುವೆ ಒತ್ತುವರಿ ತೆರವುಗೊಳಿಸಬೇಕು ಎಂದು ರೈತರ ಒತ್ತಾಯಿಸಿದ್ದಾರೆ.

  • 1,028 ಬಾಕ್ಸ್‌ಗಳಲ್ಲಿದ್ದ16 ಲಕ್ಷ ಮೌಲ್ಯದ ಮದ್ಯ ನಾಶ

    1,028 ಬಾಕ್ಸ್‌ಗಳಲ್ಲಿದ್ದ16 ಲಕ್ಷ ಮೌಲ್ಯದ ಮದ್ಯ ನಾಶ

    ಯಾದಗಿರಿ: ನಗರದ ಹೊರವಲಯದಲ್ಲಿರುವ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ ಮದ್ಯ ಸಂಗ್ರಹ ಆವರಣದಲ್ಲಿ ಮಾರಾಟವಾಗದೆ ಉಳಿದುಕೊಂಡಿದ್ದ 16 ಲಕ್ಷ ಮೌಲ್ಯದ ಮದ್ಯವನ್ನು ಅಧಿಕಾರಿಗಳು ಇಂದು ನಾಶಪಡಿಸಿದ್ದಾರೆ.

    ನಾಕ್ ಔಟ್ ಕಂಪನಿಯ ಪೋಸ್ಟರ್ ಗೋಲ್ಡ್, ಲಾಗರ್, ನಾಕೌಟ್ ಸ್ಟ್ರಾಂಗ್‍ಗೆ ಸೇರಿದ ಒಟ್ಟು 1,028 ಬಾಕ್ಸ್‌ಗಳಲ್ಲಿದ್ದ ಲಕ್ಷಕ್ಕೂ ಅಧಿಕ ಬಿಯರ್ ಬಾಟಲಿಗಳನ್ನು ನಾಶಪಡಿಸಲಾಗಿದೆ. ಯಾದಗಿರಿ ನಗರದ ಹೊರ ವಲಯದಲ್ಲಿರುವ ಅಬಕಾರಿ ಉಗ್ರಾಣದ ಮುಂಭಾಗದಲ್ಲಿ ಅಧಿಕಾರಿಗಳು ಅವಧಿ ಮುಗಿದಿದ್ದ ಈ ಮದ್ಯವನ್ನು ನಾಶಪಡಿಸಿದ್ದಾರೆ. ಜಾನುವಾರುಗಳಿಗೆ ಹಾಗೂ ಪರಿಸರಕ್ಕೆ ತೊಂದರೆ ಆಗದಂತೆ ಇಲಾಖೆಯಿಂದ ಅಗತ್ಯ ಮುಂಜಾಗ್ರತೆ ಕ್ರಮ ಕೂಡ ಕೈಗೊಳ್ಳಲಾಗಿತ್ತು.

    ಅಬಕಾರಿ ಇಲಾಖೆಯ ಉಪ ನೀರಿಕ್ಷರಾದ, ಶ್ರೀರಾಮ್ ರಾಠೋಡ್, ಮಳಿಗೆ ಅಬಕಾರಿ ನೀರಿಕ್ಷಕ ಪ್ರಕಾಶ ಮಾಕೊಂಡ ನೇತೃತ್ವದ ತಂಡ ಪರಿಸರಕ್ಕೆ ಹಾನಿ ಆಗದಂತೆ ಎಚ್ಚರಿಕೆ ವಹಿಸಿ ದೊಡ್ಡ ಗುಂಡಿ ತೆಗೆದು ಅದರಲ್ಲಿ ಮದ್ಯವನ್ನು ಸುರಿದು ನಂತರ ಮಣ್ಣು ಮುಚ್ಚಲಾಯಿತು.

    ಈ ಸಂದರ್ಭದಲ್ಲಿ ಮಳಿಗೆ ವ್ಯವಸ್ಥಾಪಕ ವಿ.ಡಿ.ವೆಂಕಟೇಶ್, ಸಹಾಯಕ ವ್ಯವಸ್ಥಾಪಕ ಅಡಿವೆಪ್ಪ ಭಜಂತ್ರಿ, ಎಮ್.ಎಸ್.ಪಾಟೀಲ್, ಶಿವರಾಜ್ ಕುಮಾರ್ ಮುಂಡರಗಿಮಠ, ದೇವಿಂದ್ರ ಗೋನಾಳ, ಹತ್ತಿಕುಣಿ ನಾಡ ಕಛೇರಿ ಉಪ ತಹಶೀಲ್ದಾರ್ ಬಸವರಾಜ ಮತ್ತು ಕಂಪನಿಯ ಪ್ರತಿನಿಧಿ ಶಿವಕುಮಾರ್ ಹೇರೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

  • ಹಲವೆಡೆ ಧಾರಾಕಾರ ಮಳೆ – ಕೆರೆ ತುಂಬಿ ಜಮೀನುಗಳಿಗೆ ನುಗ್ಗಿದ ನೀರು

    ಹಲವೆಡೆ ಧಾರಾಕಾರ ಮಳೆ – ಕೆರೆ ತುಂಬಿ ಜಮೀನುಗಳಿಗೆ ನುಗ್ಗಿದ ನೀರು

    – ಅಪಾರ ಪ್ರಮಾಣದ ಬೆಳೆ ನಾಶ
    – ಹಲವು ಸೇತುವೆಗಳು ಮುಳುಗಡೆ

    ರಾಯಚೂರು/ಬೀದರ್: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಬೀದರ್‌ನಲ್ಲಿ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಭಾಲ್ಕಿ ತಾಲೂಕಿನ ಆನಂದವಾಡಿ ಸೇತುವೆ ಮುಳುಗಡೆಯಾಗಿ ನಾಲ್ಕು ಗ್ರಾಮಗಳ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ಇತ್ತ ರಾಯಚೂರಿನಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

    ರಾಯಚೂರು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಮಳೆಯಿಂದಾಗಿ ಹತ್ತಿ ಬೆಳೆ ಸಂಪೂರ್ಣ ಹಾಳಾಗುವ ಭೀತಿ ಎದುರಾಗಿದೆ. ರಾಯಚೂರು ತಾಲೂಕಿನಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿರೋ ಮಳೆಯಿಂದ ಕೆರೆ ಕೋಡಿ ತುಂಬಿ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ಜಮೀನಿಗೆ ನೀರು ನುಗ್ಗಿರುವುದರಿಂದ ಬೆಳೆ ಹಾಳಾಗಿದ್ದು, ಮೊಣಕಾಲುವರೆಗೂ ಜಮೀನಿನಲ್ಲಿ ನೀರು ನಿಂತಿರುವುದರಿಂದ ಚೆನ್ನಾಗಿ ಬೆಳೆದಿದ್ದ ಬೆಳೆ ಹಾಳಾಗಿವೆ.

    ಸಿಂಧನೂರು ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದೆ. ಅಲ್ಲದೇ ರಸ್ತೆ ಮೇಲೆ ನೀರು ಹರಿದು ಓಡಾಟಕ್ಕೆ ತೊಂದರೆಯುಂಟಾಗಿದೆ. ರಾಯಚೂರಿನ ಎಸ್‍ಪಿ ಕಚೇರಿ ಬಳಿ ಮರ ನೆಲಕ್ಕುರುಳಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು. ರಾತ್ರಿಯಿಡಿ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದೆ.

    ಬೀದರ್‌ನಲ್ಲೂ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಹಲವು ಸೇತುವೆಗಳು ಮುಳುಗಡೆಯಾಗಿ ಸಾವಿರಾರು ಎಕರೆ ಜಮೀನಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ. ತಡರಾತ್ರಿ ಕಮಲಾನಗರ ತಾಲೂಕು ವ್ಯಾಪ್ತಿಯಲ್ಲಿ ಭರ್ಜರಿ ಮಳೆಯಾಗಿದ್ದು, ತಾಲೂಕಿನ ಸೋನಾಳ್, ಲಖಣ್ ಗಾಂವ್ ಹಾಗೂ ಬೆಳಕುಣಿ ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿವೆ. ಜೊತೆಗೆ ಹಲವು ಗ್ರಾಮಗಳ ಸಂಪರ್ಕ ಸಂಪೂರ್ಣ ಬಂದಾಗಿದೆ. ಔರಾದ್ ತಾಲೂಕಿನ ಚಂದಾಪೂರ್ ಸೇತುವೆ ಬಳಿಯ ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಮಹಾ ಮಳೆಗೆ ನಾಶವಾಗಿದೆ. ಎರಡು ದಿನಗಳಲ್ಲಿ ಜಿಲ್ಲೆಯಾದ್ಯಂತ 100ಕ್ಕೂ ಹೆಚ್ಚು ಮೀಲಿ ಮೀಟರ್ ಮಳೆಯಾಗಿದ್ದು, ಹವಾಮಾನ ಇಲಾಖೆಯ ಪ್ರಕಾರ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಹಾಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.

    ಇನ್ನೂ ಬಳ್ಳಾರಿಯ ಹೊಸಪೇಟೆ ತಾಲೂಕಿನ ಡಣಾಯಕನ ಕೆರೆ ಕೋಡಿ ಒಡೆದು ನೂರಾರು ಎಕರೆ ಬೆಳೆಗೆ ನೀರು ನುಗ್ಗಿದೆ. ಕಳೆದ ವಾರ ಸುರಿದ ಮಳೆ ಕೆರೆ ಭರ್ತಿಯಾಗಿತ್ತು. ಈಗ ಮತ್ತೆ ಮಳೆಯಾಗಿದ್ದರಿಂದ ಕೋಡಿ ಒಡೆದು ಉತ್ತಮವಾಗಿ ಬೆಳದ ಫಸಲಿಗೆ ನೀರು ನುಗ್ಗಿದೆ. ಮೆಕ್ಕೆಜೋಳ, ಈರುಳ್ಳಿ, ಭತ್ತೆ ಸೇರಿದಂತೆ ನಾನಾ ಬೆಳೆಗಳಿಗೆ ಕೆರೆ ನೀರು ನುಗ್ಗಿದೆ. ಇತ್ತ ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕಾಗಿನಾ ನದಿ ತುಂಬಿ ಹರಿಯುತ್ತಿದೆ. ಪರಿಣಾಮ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಬಳಿಯಿರುವ ಸೇತುವೆ ಸಂಪೂರ್ಣ ಜಲಾವೃತವಾಗಿದ್ದು, ಕಲಬುರಗಿ- ಸೇಡಂ ರಸ್ತೆ ಸಂಚಾರ ಸ್ಥಗಿತವಾಗಿದೆ.

  • ಕಿಡಿಗೇಡಿಗಳಿಂದ ಟೊಮೆಟೊ ಬೆಳೆಗೆ ಕಳೆ ನಾಶಕ ಸಿಂಪಡಣೆ

    ಕಿಡಿಗೇಡಿಗಳಿಂದ ಟೊಮೆಟೊ ಬೆಳೆಗೆ ಕಳೆ ನಾಶಕ ಸಿಂಪಡಣೆ

    – ಕೊಯ್ಲಿಗೆ ಬಂದಿದ್ದ ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶ

    ಕೋಲಾರ: ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು 2 ಎಕರೆ ಟೊಮೆಟೊ ತೋಟಕ್ಕೆ ಕಳೆ ನಾಶಕ ಸಿಂಪಡಣೆ ಮಾಡಿ ವಿಕೃತಿ ಮೆರೆದಿದ್ದಾರೆ. ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಫಸಲಿಗೆ ಬಂದಿದ್ದ ಟೊಮೆಟೊ ಬೆಳೆ ನಾಶವಾಗಿದೆ.

    ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದ ರೈತ ಅರ್ಜುನಪ್ಪ ಎಂಬವರ ಟೊಮೆಟೊ ತೋಟಕ್ಕೆ ಕಿಡಿಗೇಡಿಗಳು ಕಳೆದ ರಾತ್ರಿ ಕಳೆ ನಾಶಕ ಸಿಂಪಡಣೆ ಮಾಡಿದ್ದಾರೆ. ಪರಿಣಾಮ 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸುಮಾರು 10 ಸಾವಿರ ಟೊಮೆಟೊ ಸಸಿಗಳು ಫಸಲಿನ ಸಮೇತ ಒಣಗಲಾರಂಭಿಸಿವೆ.

    ಟೊಮೆಟೊ ಬೆಲೆ ಗಗನಕ್ಕೇರಿರುವ ಹಿನ್ನೆಲೆ ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಕಳೆ ನಾಶಕ ಸಿಂಪಡಣೆ ಮಾಡಿದ್ದಾರೆ ಎಂಬುದು ರೈತರ ಆರೋಪ. ಇನ್ನೇನೂ ಕೊಯ್ಲಿಗೆ ಬಂದಿದ್ದ ಲಕ್ಷಾಂತರ ರೂಪಾಯಿಯ ಫಸಲು ನಾಶವಾಗಿದ್ದು, ರೈತ ಕಂಗಾಲಾಗಿದ್ದಾನೆ. ಈಗಾಗಲೇ 15 ಕೆ.ಜಿ ಟೊಮೆಟೊ ಬಾಕ್ಸ್ 700 ರಿಂದ 800 ರೂಪಾಯಿಗೆ ತಲುಪಿದ್ದು, ಲಕ್ಷಾಂತರ ರೂಪಾಯಿಯ ನಿರೀಕ್ಷೆಯಲ್ಲಿದ್ದ ರೈತನಿಗೆ ಆಘಾತವಾಗಿದೆ.

    ವಿಚಾರ ತಿಳಿದು ಸ್ಥಳಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆರವಿಗಾಗಿ ರೈತರು ಇಲಾಖೆ ಮೊರೆ ಹೋಗಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

  • ಕರಾವಳಿಯಲ್ಲಿ ಶುರುವಾಯ್ತು ಆಫ್ರಿಕನ್ ಸ್ನೈಲ್ ಕಾಟ

    ಕರಾವಳಿಯಲ್ಲಿ ಶುರುವಾಯ್ತು ಆಫ್ರಿಕನ್ ಸ್ನೈಲ್ ಕಾಟ

    – ಎಕ್ಕರೆಗಟ್ಟಲೆ ಕೃಷಿಯನ್ನ ನುಂಗುತ್ತಿವೆ

    ಮಂಗಳೂರು: ಬಸವನಹುಳು ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಗಾಲ ಆರಂಭವಾದರೆ ಅವುಗಳು ಎಲ್ಲಾ ಕಡೆ ಇರುತ್ತವೆ. ಇದೇ ಮಾದರಿಯ ಆಫ್ರಿಕನ್ ದೇಶದ ಬಸವನಹುಳುಗಳು ಈಗ ರೈತರಿಗೆ ಕಾಡಲು ಆರಂಭಿಸಿವೆ.

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ ಸೇರಿದಂತೆ ವಿವಿಧ ಕಡೆ ಈ ಹುಳುವಿನ ಕಾಟ ತಡೆಯಲು ರೈತರಿಗೆ ಆಗುತ್ತಿಲ್ಲ. ರಬ್ಬರ್, ಅಡಿಕೆ, ತೆಂಗಿನಮರ ಸೇರಿದಂತೆ ಎಲ್ಲಾ ಕೃಷಿಯನ್ನು ಇವು ನಾಶಗೊಳಿಸುತ್ತಿವೆ. ಒಂದೇ ಬಾರಿಗೆ ಸಾಕಷ್ಟು ಸಂಖ್ಯೆಯಲ್ಲಿ ವೃದ್ಧಿಯಾಗುತ್ತಿರುವ ಇವುಗಳು ಒಂದು ಗಿಡಕ್ಕೆ ಹತ್ತಿದರೆ ಎಕರೆಗಟ್ಟಲೆ ಸಸ್ಯವನ್ನು ನಾಶಪಡಿಸುತ್ತವೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

    ರೈತರು ಕೃಷಿಯನ್ನು ಉಳಿಸಿಕೊಳ್ಳುವುದು ಹೇಗೆ ಅಂತ ತಲೆಕೆಡಿಸಿಕೊಂಡು ವಿಜ್ಞಾನಿಗಳ ಮೊರೆ ಹೋಗಿದ್ದಾರೆ. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ತಂಡ ಅಧ್ಯಯನ ನಡೆಸಿ ರೈತರಿಗೆ ಒಂದು ಪರಿಹಾರವನ್ನು ಕೂಡ ನೀಡಿದೆ.

    ಕೃಷಿ ತೋಟಗಳಲ್ಲಿ ರೋಗಕ್ಕೆ ತುತ್ತಾದ ಪ್ರದೇಶ ಪತ್ತೆ ಹಚ್ಚಿ 100 ಚದರ ಅಡಿ ಪ್ರದೇಶದಲ್ಲಿ 50-80 ಗ್ರಾಂ ಮೆಟಾಲ್ಡಿಹೈಡ್ ರಾಸಾಯನಿಕ ಸಣ್ಣಸಣ್ಣ ತುಂಡುಗಳನ್ನು ಒಂದು ಎಕರೆ ತೋಟದಲ್ಲಿ ಮಾಡುವ ವಿಧಾನವನ್ನು ರೈತರಿಗೆ ತಿಳಿಸಿದರು. ಇದಲ್ಲದೆ ಅಡಿಕೆ ದೋಣಿಗಳನ್ನು ಸೆಲರಿ ನೀರಿನಲ್ಲಿ ಅದ್ದಿ ತೆಗೆದು ತೋಟದಲ್ಲಿ 4 ಇಂಚು ಎತ್ತರದಲ್ಲಿಡುವುದು. ಪಪ್ಪಾಯಿ, ಎಲೆ ಕೋಸು ತುಂಡುಗಳನ್ನು ಕೀಟನಾಶಕದಲ್ಲಿ ಲೇಪಿಸಿ ಅಡಿಕೆ ಹಾಳೆಗಳನ್ನು ಇಡಬಹುದಾಗಿದೆ.

    ಇದು ರೈತರಿಗೆ ಅಷ್ಟು ಸಹಕಾರಿಯಾಗಲ್ಲ. ನಿರಂತರ ಪ್ರಕ್ರಿಯೆ ಆಗಿರುವುದರಿಂದ ಇದು ದುಬಾರಿಯಾಗುತ್ತೆ. ಬೆಳೆ ಉಳಿಸಿಕೊಳ್ಳಲು ಮತ್ತು ಜಮೀನನ್ನು ಕಾಪಾಡಿಕೊಳ್ಳಲು ರೈತ ಸಾಲಗಾರನಾಗಬೇಕಾಗುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನವಹಿಸಿ ರೈತನ ನೆರವಿಗೆ ಬರಬೇಕೆಂದು ರೈತರು ಆಗ್ರಹಿಸಿದ್ದಾರೆ.

  • ಮಳೆಯಿಂದ ಕೆರೆಯಂತಾದ ಜಮೀನು – 4 ಎಕರೆ ಈರುಳ್ಳಿ ನಾಶ

    ಮಳೆಯಿಂದ ಕೆರೆಯಂತಾದ ಜಮೀನು – 4 ಎಕರೆ ಈರುಳ್ಳಿ ನಾಶ

    ಚಿತ್ರದುರ್ಗ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಮೀನುಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.

    ಜಿಲ್ಲೆಯ ಹಿರಿಯೂರು ತಾಲೂಕಿನ ಕಳ್ಳಿರೊಪ್ಪ ಗ್ರಾಮದಲ್ಲಿ ಮಳೆಯಿಂದಾಗಿ ಲಕ್ಷಾಂತರ ರೂಪಾಯಿ ಬಂಡವಾಳ ನಷ್ಟವಾಗಿದೆ. ರೈತ ಹೇಮಣ್ಣ ಬೆಳೆದಿದ್ದ ಈರುಳ್ಳಿ ನಾಶವಾಗಿದೆ. ಹೇಮಣ್ಣ ನಾಲ್ಕು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದರು. ಆದರೆ ನಿರಂತರ ಮಳೆಯಿಂದಾಗಿ ಈರುಳ್ಳಿ ಸಂಪೂರ್ಣವಾಗಿ ನೀರಲ್ಲಿ ಕೊಚ್ಚಿ ಹೋಗಿದೆ.

    ಜಮೀನಿನಲ್ಲಿದ್ದ ಈರುಳ್ಳಿ ಉಳಿಸಿಕೊಳ್ಳಲು ರೈತ ಹರಸಾಹಸ ಮಾಡಿದ್ದಾರೆ. ಆದರೆ ಅಪಾರ ಪ್ರಯಾಣದ ಈರುಳ್ಳಿ ನಾಶವಾಗಿದೆ. ಇದರಿಂದ ಲಕ್ಷಾಂತರ ಬಂಡವಾಳವಾಗಿದೆ. ಹೀಗಾಗಿ ಸರ್ಕಾರ ಪರಿಹಾರ ನೀಡಬೇಕು ಎಂದು ರೈತ ಹೇಮಣ್ಣ ಆಗ್ರಹಿಸಿದ್ದಾರೆ. ಸದ್ಯಕ್ಕೆ ರೈತ ಹೇಮಣ್ಣ ಬೆಳೆ ನಾಶದಿಂದ ದಾರಿ ಕಾಣದೆ ಕಂಗಾಲಾಗಿದ್ದಾರೆ.

    ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸತತ ಎಂಟು ವರ್ಷಗಳಿಂದ ಬತ್ತಿ ಹೋಗಿದ್ದ ಜಿಲ್ಲೆಯ ಮೊಳಕಾಲ್ಮೂರು ಭಾಗದ ಹಳ್ಳ, ಕೊಳ್ಳ ಸೇರಿದಂತೆ ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ಮೊಳಕಾಲ್ಮೂರು ತಾಲೂಕಿನಾದ್ಯಂತ ವಿವಿಧೆಡೆಗಳಲ್ಲಿ ಉತ್ತಮ ಮಳೆಯಾಗಿದ್ದು, ತಳವಾರ ಹಳ್ಳಿ ಬಳಿಯ ಸಿದ್ಲಹಳ್ಳ ತುಂಬಿ ಹರಿಯುತ್ತಿದೆ. ಅಲ್ಲದೇ ಕಳೆದ ಎಂಟು ವರ್ಷಗಳ ಹಿಂದೆ ಕೆರೆ ಕೋಡಿ ಬಿದ್ದಿದ್ದ ಪಕ್ಕುರ್ತಿ ಕೆರೆ ಈ ಬಾರಿ ಮತ್ತೆ ಕೋಡಿ ಬಿದ್ದಿದೆ.

  • ಪೊಲೀಸರ ನರಹತ್ಯೆಗೈದ ಹಂತಕನ ಮನೆ ಉಡೀಸ್- ಐಷಾರಾಮಿ ಕಾರುಗಳು ಜಖಂ

    ಪೊಲೀಸರ ನರಹತ್ಯೆಗೈದ ಹಂತಕನ ಮನೆ ಉಡೀಸ್- ಐಷಾರಾಮಿ ಕಾರುಗಳು ಜಖಂ

    – ವಿಕಾಸ್ ದುಬೆ ಸುಳಿವು ನೀಡಿದವರೆಗೆ 50 ಸಾವಿರ ಬಹುಮಾನ

    ಲಕ್ನೋ: ಉತ್ತರ ಪ್ರದೇಶದಲ್ಲಿ ಎಂಟು ಪೊಲೀಸರನ್ನು ಗುಂಡಿದ ದಾಳಿ ಮಾಡಿ ಹತ್ಯೆ ಮಾಡಿದ್ದ ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ಮನೆಯನ್ನು ಜಿಲ್ಲಾಡಳಿತ ಕೆಡವಿ ಹಾಕಿದೆ.

    ಕೊಲೆ ಪ್ರಕರಣದ ಆರೋಪದ ಮೇಲೆ ವಿಕಾಸ್ ದುಬೆಯನ್ನು ಅರೆಸ್ಟ್ ಮಾಡಲು ಹೋದ ಎಂಟು ಪೊಲೀಸರನ್ನು ಗುರುವಾರ ಗುಂಡಿಕ್ಕಿ ಕೊಲ್ಲಲಾಗಿತ್ತು. ಓರ್ವ ಡಿವೈಎಸ್ಪಿ, ಮೂವರು ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ ನಾಲ್ಕು ಮಂದಿ ಕಾನ್ಸ್ ಸ್ಟೇಬಲ್‍ಗಳು ಸೇರಿದಂತೆ ಒಟ್ಟು ಎಂಟು ಜನ ಪೊಲೀಸರನ್ನು ಕಾನ್ಪುರದ ಡಿಕ್ರು ಗ್ರಾಮದಲ್ಲಿ ಗುರುವಾರ ರಾತ್ರಿ ಕ್ರಿಮಿನಲ್ ಗ್ಯಾಂಗ್ ಹತ್ಯೆ ಮಾಡಿತ್ತು.

    ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ವಿಕಾಸ್ ದುಬೆಯನ್ನು ಪೊಲೀಸರು ಹುಡುಕುತ್ತಿದ್ದು, ಆತ ಎಸ್ಕೇಪ್ ಆಗಿದ್ದಾನೆ. ಈತ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 150 ಕಿಮೀ ದೂರವಿರುವ ಡಿಕ್ರು ಗ್ರಾಮದಲ್ಲಿ ಇದ್ದ ವಿಕಾಸ್ ದುಬೆ ಮನೆಯನ್ನು ಜಿಲ್ಲಾಡಳಿತ ಜೆಸಿಬಿ ತೆಗದುಕೊಂಡು ಹೋಗಿ ನೆಲಸಮ ಮಾಡಿದೆ. ಜೊತೆಗೆ ಮನೆಯ ಮುಂದೆ ಇದ್ದ ಆತನ ಐಷಾರಾಮಿ ಕಾರುಗಳನ್ನು ಕೂಡ ಜಖಂ ಮಾಡಲಾಗಿದೆ. ದುಬೆ ಮನೆಯನ್ನು ಸಂಪೂರ್ಣ ನಾಶ ಮಾಡಲಾಗಿದೆ.

    ಸದ್ಯ ವಿಕಾಸ್ ದುಬೆಗಾಗಿ ಇಡೀ ಉತ್ತರ ಪ್ರದೇಶದ ಪೊಲೀಸರು ಹುಡುಕುತ್ತಿದ್ದಾರೆ. ಆದರೆ ಆತ ತಪ್ಪಿಸಿಕೊಂಡಿದ್ದಾನೆ. ಸಿಎಂ ಯೋಗಿ ಆದಿತ್ಯನಾಥ್ ಅವರು ಕೂಡ ಪೊಲೀಸರನ್ನು ಕೊಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಜೊತೆಗೆ ಮೃತ ಪೊಲೀಸರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ್ದಾರೆ. ಇತ್ತ ವಿಕಾಸ್ ದುಬೆ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ ನೀಡುವುದಾಗಿ ಕಾನ್ಪುರದ ಪೊಲೀಸರು ಘೋಷಣೆ ಮಾಡಿದ್ದಾರೆ.

    ಇಂದು ಮಗನ ಪೈಶಾಚಿಕ ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತಿಪಡಿಸಿರುವ ಆತನ ತಾಯಿ ಸರ್ಲಾ ದೇವಿ. ಆತ ಪೊಲೀಸರಿಗೆ ಶರಣಾಗಬೇಕು. ಅದನ್ನು ಬಿಟ್ಟು ಅವನು ಹೀಗೆ ಮೊಂಡುತನ ತೋರಿಸಿದರೆ ಅವನನ್ನು ಪೊಲೀಸರು ಎನ್‍ಕೌಂಟರ್ ಮಾಡಬೇಕು. ಅವನು ಮಾಡಿದ್ದು ತಪ್ಪು, ಅಮಾಯಕ ಪೊಲೀಸರನ್ನು ಕೊಲ್ಲಬಾರದಿತ್ತು. ಆತನನ್ನು ಹಿಡಿಯಲು ಆಗಲಿಲ್ಲ ಎಂದರೆ ಆತನನ್ನು ಗುಂಡಿಕ್ಕಿ ಕೊಂದುಬಿಡಿ ಎಂದು ಹೇಳಿದ್ದಾರೆ.

    2001ರಲ್ಲಿ ವಿಕಾಸ್ ದುಬೆ ಅಂದಿನ ಬಿಜೆಪಿ ಸರ್ಕಾರದ ಕ್ಯಾಬಿನೆಟ್ ಮಿನಿಸ್ಟರ್ ಆಗಿದ್ದ ಸಂತೋಷ್ ಶುಕ್ಲಾ ಅವರನ್ನು ಪೊಲೀಸ್ ಠಾಣೆಯಲ್ಲೇ ಗುಂಡಿಕ್ಕಿ ಕೊಲೆ ಮಾಡಿದ್ದ. ನಂತರ ಗ್ಯಾಂಗ್‍ಸ್ಟಾರ್ ಆಗಿ ಬೆಳೆದ ವಿಕಾಸ್ ದುಬೆ, ಹಲವಾರು ಕೊಲೆ ಮಾಡಿ ಜೈಲುವಾಸ ಅನುಭವಿಸಿದ್ದ. ನಂತರ ಜೈಲಿನಲ್ಲಿ ಇದ್ದುಕೊಂಡೇ ನಗರ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದಿದ್ದ. ಈತನ ಮೇಲೆ ಸುಮಾರು 60 ಕ್ರಿಮಿನಲ್ ಮೊಕದ್ದಮೆಗಳು ಇವೆ.

  • 3 ಎಕರೆಯಲ್ಲಿ ಚೆಂಡು ಹೂ ಬೆಳೆದಿದ್ದ ಮಹಿಳೆ – ಟ್ರಾಕ್ಟರಿನಿಂದ ನಾಶ

    3 ಎಕರೆಯಲ್ಲಿ ಚೆಂಡು ಹೂ ಬೆಳೆದಿದ್ದ ಮಹಿಳೆ – ಟ್ರಾಕ್ಟರಿನಿಂದ ನಾಶ

    ಮಡಿಕೇರಿ: ಲಾಕ್‍ಡೌನ್ ಆದಾಗಿನಿಂದ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ನಾಶ ಮಾಡುತ್ತಿದ್ದಾರೆ. ಕೆಲವರು ಬೆಳೆದ ಬೆಳೆಯನ್ನು ಗ್ರಾಮದವರಿಗೆ ಉಚಿತವಾಗಿ ನೀಡಿದ್ದಾರೆ. ಇದೀಗ ಲಾಕ್‍ಡೌನ್ ಪರಿಣಾಮ ಮಾರುಕಟ್ಟೆ ಸಿಗದಿದ್ದಕ್ಕೆ ರೈತ ಮಹಿಳೆಯೊಬ್ಬಳು ಹೊಲದಲ್ಲಿ ಬೆಳೆದಿದ್ದ ಚೆಂಡು ಹೂಗಳನ್ನು ಟ್ರಾಕ್ಟರಿನಿಂದ ನಾಶ ಮಾಡಿಸಿದ್ದಾರೆ.

    ಈ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಅವರೇದಾಳು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಭಾಗೀರಥಿ ಎಂಬವರು ಮೂರು ಎಕರೆ ಪ್ರದೇಶದಲ್ಲಿ ಚಂಡು ಹೂಗಳನ್ನು ಬೆಳೆದಿದ್ದರು. ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಚೆಂಡು ಹೂಗಳನ್ನು ಲಾಕ್‍ಡೌನ್ ಘೋಷಿಸಿದ ಪರಿಣಾಮ ಸರಿಯಾದ ಸಮಯಕ್ಕೆ ಮಾರಾಟ ಮಾಡಲಾಗದೆ ನಷ್ಟ ಅನುಭವಿಸಿದ್ದರು.

    ಈ ಹಿನ್ನೆಲೆಯಲ್ಲಿ ಹೊಲದಲ್ಲಿ ಬೆಳೆದಿದ್ದ ಚಂಡು ಹೂಗಳನ್ನು ಟ್ರಾಕ್ಟರಿನಿಂದ ನಾಶಪಡಿಸಿದ್ದಾರೆ. ಅಲ್ಲದೇ ಚೆಂಡು ಹೂ ಬೆಳೆಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

  • ತಿಪ್ಪೆ ಸೇರುತ್ತಾ 200 ಕೋಟಿ ಮೌಲ್ಯದ 28 ಸಾವಿರ ಟನ್ ದ್ರಾಕ್ಷಿ

    ತಿಪ್ಪೆ ಸೇರುತ್ತಾ 200 ಕೋಟಿ ಮೌಲ್ಯದ 28 ಸಾವಿರ ಟನ್ ದ್ರಾಕ್ಷಿ

    ಚಿಕ್ಕಬಳ್ಳಾಪುರ: ಕೊರೊನಾ ವೈರಸ್‍ನಿಂದಾಗಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ನಲುಗಿ ಹೋಗುವಂತಾಗಿದೆ. ದ್ರಾಕ್ಷಿ ಖರೀದಿಗೆ ವರ್ತಕರು ಬಾರದ ಹಿನ್ನೆಲೆಯಲ್ಲಿ ಜಿಲ್ಲೆಯ ರೇಣುಮಾಕಲಹಳ್ಳಿಯಲ್ಲಿ ರೈತನೊಬ್ಬ ದ್ರಾಕ್ಷಿ ಕಟಾವು ಮಾಡಿ ಟ್ರ್ಯಾಕ್ಟರ್‌ಗೆ ತುಂಬಿಕೊಂಡು ಹೋಗಿ ತಿಪ್ಪೆಗೆ ಸುರಿದಿದ್ದಾನೆ.

    ಮುನಿಶಾಮಪ್ಪ ದ್ರಾಕ್ಷಿ ಹಣ್ಣನ್ನು ತಿಪ್ಪೆಗೆ ಸುರಿದಿದ್ದಾನೆ. ಕಟಾವಿಗೆ ಸಿದ್ಧವಾಗಿದ್ದ ದ್ರಾಕ್ಷಿ ಖರೀದಿಗೆ ವರ್ತಕರು ಯಾರೂ ಬರುತ್ತಿಲ್ಲ. ಟ್ರಾನ್ಸ್‌ಪೋರ್ಟ್ ಸಮಸ್ಯೆ ಸೇರಿದಂತೆ ಮಾರಾಟ ಸಮಸ್ಯೆಯಿಂದ ಖರೀದಿಗೆ ವರ್ತಕರು ಮುಂದಾಗುತ್ತಿಲ್ಲ. ಹೀಗಾಗಿ ಜಿಲ್ಲೆಯಾದ್ಯಾಂತ ಅದರಲ್ಲೂ ಪ್ರಮುಖವಾಗಿ ಚಿಕ್ಕಬಳ್ಳಾಪುರ ತಾಲೂಕಿನ ರೈತರು ಹೆಚ್ಚಾಗಿ ದ್ರಾಕ್ಷಿ ಬೆಳೆಯುತ್ತಾರೆ. ಹೀಗಾಗಿ ಜಿಲ್ಲೆಯಾದ್ಯಾಂತ ಸುಮಾರು 6000 ಎಕರೆ ಪ್ರದೇಶದಲ್ಲಿ ವರ್ಷಕ್ಕೆ ಎರಡು ಬೆಳೆ ತೆಗೆಯಲಾಗುತ್ತೆ.

    ಸದ್ಯ 2500 ಎಕರೆ ಪ್ರದೇಶದಲ್ಲಿ ಸರಿಸುಮಾರು 200 ಕೋಟಿ ಮೌಲ್ಯದ 40 ಸಾವಿರ ಟನ್ ದ್ರಾಕ್ಷಿ ಕಟಾವಿಗೆ ಸಿದ್ಧವಾಗಿದೆ. ಆದರೆ ಈಗ ಖರೀದಿಗೆ ವರ್ತಕರು ಬಾರದೆ ಇಷ್ಟೊಂದು ಟನ್ ದ್ರಾಕ್ಷಿ ತೋಟಗಳಲ್ಲೇ ಕೊಳೆಯುವಂತಾಗಿದೆ. ತೋಟದಲ್ಲಿ ಹಾಗೆ ಬಿಟ್ಟರೆ ಮುಂದಿನ ಬೆಳೆಗೆ ಸಂಕಷ್ಟ ಅಂತ ಕೆಲ ರೈತರು ಕಟಾವು ಮಾಡಿ ತಿಪ್ಪೆಗೆ ಸುರಿಯುತ್ತಿದ್ದಾರೆ. ಹೀಗಾಗಿ ಕೊರೊನಾದಿಂದ 200 ಕೋಟಿ ಮೌಲ್ಯದ ದ್ರಾಕ್ಷಿನೂ ತಿಪ್ಪೆ ಸೇರುತ್ತಾ ಎಂಬ ಆತಂಕ ರೈತರಲ್ಲಿ ಮೂಡಿದೆ.

    ಕೊರೊನಾ ಎಫೆಕ್ಟ್‌ನಿಂದ ಜಿಲ್ಲೆಯ ರೈತರು ತತ್ತರಿಸಿ ಹೋಗುತ್ತಿದ್ದಾರೆ. ಬ್ಯಾಂಕುಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿ, ಬರನಾಡಲ್ಲಿ ಬೆಳೆದ ಬೆಳೆಗಳು ಕಣ್ಣೆದುರೇ ನಾಶವಾಗುತ್ತಿರುವುದನ್ನು ನೋಡಿ ರೈತರ ಕಣ್ಣಲ್ಲಿ ಕಣ್ಣೀರು ತರಿಸುವಂತಿದೆ.

  • 30 ವರ್ಷಗಳಿಂದ ಬೆಳೆದು ನಿಂತಿದ್ದ ತೋಟ ನಾಶ ಮಾಡಿದ್ರಾ ತಹಶೀಲ್ದಾರ್?

    30 ವರ್ಷಗಳಿಂದ ಬೆಳೆದು ನಿಂತಿದ್ದ ತೋಟ ನಾಶ ಮಾಡಿದ್ರಾ ತಹಶೀಲ್ದಾರ್?

    – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
    – ಜಾತ್ರೆಗೆ ಜಾಗ ಸಾಕಾಗಲ್ಲವೆಂದು ತೋಟ ನಾಶ

    ತುಮಕೂರು: ಸುಮಾರು 30 ವರ್ಷಗಳಿಂದ ಬೆಳೆದು ನಿಂತಿದ್ದ ತೋಟವನ್ನು ಏಕಾಏಕಿ ಉರುಳಿಸಿ ತಹಶೀಲ್ದಾರ್ ದರ್ಪ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ತುಮಕೂರು ಜಿಲ್ಲೆಯ ಗುಬ್ಬಿ ತಹಶೀಲ್ದಾರ್ ಮಮತಾ ಅವರ ಮೇಲೆ ಆರೋಪ ಕೇಳಿ ಬಂದಿದೆ. ತಾಲೂಕಿನ ತಿಪ್ಪೂರು ಗ್ರಾಮದ ಸಣ್ಣಕೆಂಪಯ್ಯ ಮತ್ತು ಸಿದ್ದಮ್ಮ ಅವರಿಗೆ ಉಡುಸಲಮ್ಮ ದೇವಸ್ಥಾನದಿಂದ ಕೊಡುಗೆಯಾಗಿ 5.18 ಎಕರೆ ಜಮೀನು ನೀಡಲಾಗಿತ್ತು. ಕಳೆದ 30 ವರ್ಷಗಳಿಂದಲೂ ತೆಂಗು, ಅಡಿಕೆ, ಬಾಳೆ ಬೆಳೆದುಕೊಂಡು ಬಂದಿದ್ದಾರೆ. ಈ ನಡುವೆ ಉಡುಸಲಮ್ಮ ದೇವರ ಜಾತ್ರೆಗೆ ಜಾಗ ಸಾಕಾಗುವುದಿಲ್ಲ ಎಂದು ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ತಹಶಿಲ್ದಾರ್ ಮಮತಾ ಅವರು ತೋಟವನ್ನು ಉರುಳಿಸಲು ಆದೇಶ ಕೊಟ್ಟಿದ್ದಾರೆ ಎನ್ನಲಾಗಿದೆ.

    ಅದರಂತೆ ಗ್ರಾಮ ಲೆಕ್ಕಿಗ ಮುರುಳಿ ಯಾವುದೇ ನೋಟಿಸ್ ನೀಡದೇ ಏಕಾಏಕಿ ತೋಟಕ್ಕೆ ನುಗ್ಗಿ ಫಸಲಿಗೆ ಬಂದಿದ್ದ 300 ಅಡಿಕೆ, 30 ತೆಂಗು ಮತ್ತು ಬಾಳೆ ಗಿಡಗಳನ್ನು ಉರುಳಿಸಿದ್ದಾರೆ. ಸಣ್ಣ ಕೆಂಪಯ್ಯ ಮತ್ತು ಸಿದ್ದಮ್ಮ ಕುಟುಂಬ ಉಡುಸಲಮ್ಮ ದೇವಸ್ಥಾನದ ಅರ್ಚಕರಾಗಿದ್ದಾರೆ. ಹೀಗಾಗಿ ಈ ಕುಟುಂಬಕ್ಕೆ ದೇವಸ್ಥಾನದಿಂದಲೇ ಜಮೀನು ಕೊಡುಗೆಯಾಗಿ ಕೊಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಜಮೀನು ಪೂರ್ಣ ಸ್ವಾಧೀನ ಕೋರಿ ಜಿಲ್ಲಾ ನ್ಯಾಯಾಲಯದಲ್ಲಿ ಮುನಿ ಕೆಂಪಯ್ಯ ಕುಟುಂಬ ಅರ್ಜಿ ಸಲ್ಲಿಸಿತ್ತು. ಆದರೆ ಅಧಿಕಾರಿಗಳು ಏಕಾಏಕಿ ಗಿಡಗಳನ್ನು ನಾಶ ಮಾಡಿದ್ದಾರೆ.

    ಈ ನಡುವೆ ಸಣ್ಣ ಕೆಂಪಯ್ಯ ಮತ್ತು ಸಿದ್ದಮ್ಮರ ಮಧ್ಯೆಯೇ ಜಮೀನು ಹಂಚಿಕೆಯಲ್ಲಿ ವಿವಾದ ಉಂಟಾಗಿತ್ತು. ಇದರ ಲಾಭ ಪಡೆದುಕೊಂಡ ತಾಲೂಕು ಆಡಳಿತ ಏಕಾಏಕಿ ತೋಟವನ್ನು ಉರುಳಿಸಿದೆ. ಗುಬ್ಬಿ ಪೊಲೀಸರ ಸಮುಖದಲ್ಲೇ ಗ್ರಾಮ ಲೆಕ್ಕಿಗ ಮುರುಳಿ ಮರಗಳನ್ನು ಕಡಿದಿದ್ದಾರೆ. ಇದರಿಂದ ಆಘಾತಕ್ಕೊಳಗಾದ ಕುಟುಂಬ ದುಃಖದ ಮಡುವಿನಲ್ಲಿದೆ. ಮುನಿ ಕೆಂಪಯ್ಯ ಕುಟುಂಬದ ಆಕ್ರಂದನದ ವಿಡಿಯೋ ವೈರಲ್ ಆಗಿದೆ.