ಬೆಂಗಳೂರು: ಪಾಕಿಸ್ತಾನದ ಬಂಡವಾಳವನ್ನು ವಿದೇಶದಲ್ಲಿ ಬೆತ್ತಲೆ ಮಾಡಲು, ಕೇಸ್ ಇರೋ ನಾಸೀರ್ ಹುಸೇನ್‌ರನ್ನ ಸಂಸತ್ ನಿಯೋಗದಲ್ಲಿ ಸೇರಿಸೋಕೆ ಆಗುತ್ತಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ.
ಸಂಸತ್ ನಿಯೋಗದಿಂದ ನಾಸೀರ್ ಹುಸೇನ್(Nasir Hussain) ಹೆಸರು ಕೇಂದ್ರ ಕೈ ಬಿಟ್ಟಿರೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾವ ನಾಸೀರ್ ಹುಸೇನ್? ರಾಜ್ಯಸಭೆ ಸದಸ್ಯರಾಗೋವಾಗ ನಾಸೀರ್ ಹುಸೇನ್ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದ್ರು. ಅಂತಹ ಮಾನಸಿಕತೆ ಇರೋರನ್ನ ವಿದೇಶಕ್ಕೆ ಕಳಿಸಬೇಕಾ? ಅವರ ನಾಯಕ ರಾಹುಲ್ ಗಾಂಧಿ(Rahul Gandhi) ವಿದೇಶದಲ್ಲಿ ಭಾರತದ ವಿರುದ್ಧ ಮಾತಾಡೋ ಹಾಗೆ ನಾಸೀರ್ ಹುಸೇನ್ ಮಾತಾಡಬಹುದು. ಅಲ್ಲಿ ಹೋಗಿ ದೇಶದ ವಿರೋಧ ಮಾತನಾಡಲ್ಲ ಎಂದು ಏನು ಗ್ಯಾರಂಟಿ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ‘ಆಪರೇಷನ್ ಸಿಂಧೂರ’ದಲ್ಲಿ ಶೌರ್ಯ ಮೆರೆದ BSF ಯೋಧ – ಗೌರವಿಸಿದ ಸೇನಾ ಮುಖ್ಯಸ್ಥ
ನಾಸೀರ್ ಹುಸೇನ್ ಮೇಲೆ ಕೇಸ್ ಇದೆ. ನಾನೇ ಗೃಹ ಸಚಿವರಿಗೆ ಪಾಕಿಸ್ತಾನ ಜಿಂದಾಬಾದ್ ಕೂಗಿರೋ ಪ್ರಕರಣದಲ್ಲಿ ನಾಸೀರ್ ಹುಸೇನ್ ಬೆಂಬಲಿಗರು ಇದ್ದಾರೆ ಅಂತ ಹೇಳಿದ್ದೇನೆ. ಅಂತಹವರನ್ನು ವಿದೇಶದ ಪ್ರವಾಸಕ್ಕೆ ಕಳಿಸಬೇಕಾ? ಕಾಂಗ್ರೆಸ್(Congress) ದಿವಾಳಿ ಆಗಿದ್ಯಾ? ನಾಸೀರ್ ಹುಸೇನ್ ಬಿಟ್ಟು ಬೇರೆ ಹೆಸರು ಇಲ್ವಾ? ಇದು ಕಾಂಗ್ರೆಸ್‌ನ ದಿವಾಳಿತನ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಳೆದ ಮೂರು ದಿನಗಳ ಹಿಂದೆ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್‌ಗೆ ಬಳ್ಳಾರಿಯಲ್ಲಿ ಅದ್ದೂರಿ ಮೆರವಣಿಗೆ ಮಾಡಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ನಾಗೇಂದ್ರ ಅವರು, ಯಾರು ಪಾಕಿಸ್ತಾನ್ ಜಿಂದಾಬಾದ್ ಅಂದಿಲ್ಲ. ವಿಡಿಯೋವನ್ನು ಕೆಲವರು ಎಡಿಟ್ ಮಾಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಕಾಲೇಜ್ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಹತ್ಯೆ – ಯುವಕ ಅರೆಸ್ಟ್
ನಮ್ಮ ಭಾರತದಲ್ಲಿ ಯಾವನಾದರೂ ಪಾಕಿಸ್ತಾನ್ ಜಿಂದಾಬಾದ್ ಅಂದಿದ್ದರೆ ಅವನನ್ನ ಗಲ್ಲಿಗೇರಿಸಿದರಲ್ಲಿ ತಪ್ಪಿಲ್ಲ. ಅವರು ಹೇಳಿದ್ದು ನಾಸಿರ್ ಸಾಬ್ ಅಂದಿದ್ದಾರೆ. ಫಾಸ್ಟ್ ಆಗಿ ತೋರಿಸಿದಾಗ ಹಾಗೆ ಕೇಳುತ್ತದೆ. ಇದು ನಾನು ನೋಡಿರುವ ಸತ್ಯ. ಎಫ್‌ಎಸ್‌ಎಲ್ ವರದಿಯಲ್ಲಿ ಸತ್ಯ ಬರತ್ತದೆ. ನಮ್ಮ ಕರ್ನಾಟಕದಲ್ಲಿ ಯಾರು ಹಂಗೆ ಮಾಡಲ್ಲ, ಮಾಡಿದ್ರೆ ಅವನನ್ನ ಗಲ್ಲಿಗೇರಿಸಿದ್ರು ತಪ್ಪಿಲ್ಲ ಎಂದಿದ್ದಾರೆ.
– ಬ್ಯಾಡಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಈಗಿನಿಂದಲೇ ಸಿದ್ಧತೆ – ಮಾರ್ಚ್ 6ವರೆಗೆ ಆರೋಪಿಗಳು ಪೊಲೀಸ್ ಕಸ್ಟಡಿಗೆ
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ (Pakistan Zindabad) ಪರ ಘೋಷಣೆ ಕೂಗಿ ಬಂಧನಕ್ಕೆ ಒಳಗಾದ ಬ್ಯಾಡಗಿ ಮೆಣಸಿಕಾಯಿ ವ್ಯಾಪಾರಿ ಮೊಹಮ್ಮದ್ ಶಫಿ ನಾಶಿಪುಡಿ (Mohammed Nashipudi) ಕೋಟ್ಯಂತರ ರೂ. ವ್ಯವಹಾರ ಮಾಡುತ್ತಿರುವ ವಿಚಾರ ಪೊಲೀಸ್ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಹೌದು. ಧ್ವನಿ ಪರೀಕ್ಷೆಗೆ (Voice Test) ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಮಯದಲ್ಲಿ ಪೊಲೀಸರ ಮುಂದೆ ನಾಶಿಪುಡಿ, ಸರ್ ನಾನು ನೂರಾರು ಕೋಟಿ ರೂ.ಗೆ ಬಾಳ್ತೀನಿ. ನಾನು ಪಾಕ್ ಪರ ಘೋಷಣೆ ಕೂಗಿಲ್ಲ ಎಂದು ಹೇಳಿದ್ದ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಮೂವರನ್ನು ಯಾಕೆ ಅರೆಸ್ಟ್ ಮಾಡಿದ್ದಾರೆ ಗೊತ್ತಿಲ್ಲ: ಪ್ರಿಯಾಂಕ್ ಖರ್ಗೆ
ನಾಸೀರ್ ಹುಸೇನ್ ಬೆಂಬಲಿಗನಾಗಿದ್ದ ನಾಶಿಪುಡಿ, ಮುಂದಿನ ಬಾರಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದಿಂದ (Byadgi Vidhan Sabha Constituency) ಸ್ಪರ್ಧಿಸಲು ಈಗಿನಿಂದಲೇ ಸಿದ್ಧತೆ ಸಹ ನಡೆಸಿದ್ದ. ನಾಶಿಪುಡಿ ಕುಟುಂಬ ಸುಮಾರು 50 ವರ್ಷಗಳಿಂದ ಮೆಣಸಿನಕಾಯಿ ವ್ಯಾಪಾರ ಮಾಡಿಕೊಂಡು ಬಂದಿದೆ. ಆದರೆ ವಿಧಾನಸೌಧದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ಎ1 ಆರೋಪಿಯಾಗಿ ಮಹಮ್ಮದ್ ಶಫಿ ನಾಶಿಪುಡಿ ಅರೆಸ್ಟ್ ಆಗಿದ್ದಾನೆ.
3 ದಿನ ಪೊಲೀಸ್ ಕಸ್ಟಡಿಗೆ:
ಕೋರಮಂಗಲದ 39ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಬಂಧಿತ ಮೂವರನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿ ಆದೇಶ ನೀಡಿದ್ದಾರೆ. ಮಾರ್ಚ್ 6 ರವರೆಗೂ ಕಸ್ಟಡಿಗೆ ಪಡೆದಿರುವ ವಿಧಾನಸೌಧ ಪೊಲೀಸರು ಮೂವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಖಾಸಗಿ ಫೋರೆನ್ಸಿಕ್ ವರದಿ ತರಿಸಿ ಬಹಿರಂಗಪಡಿಸಿದ ಬಿಜೆಪಿ ನಡೆ ದೇಶದ್ರೋಹದ ಕೆಲಸ: ಪ್ರಿಯಾಂಕ್ ಖರ್ಗೆ
ಬಂಧಿತ ಮೂವರ ಪೈಕಿ ನಾಶೀಪುಡಿ, ಮುನಾವರ್ ಸ್ನೇಹಿತರಾಗಿದ್ದರೆ ಮಹಮ್ಮದ್ ಇಲ್ತಾಜ್‌ಗೂ ಇಬ್ಬರು ಆರೋಪಿಗಳಿಗೂ ಪರಿಚಯವಿಲ್ಲ. ಬಂಧಿತ ಮೂವರ ಮೊಬೈಲನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಪೊಲೀಸರು ಈಗ ಮುಂದಾಗಿದ್ದಾರೆ.
ಎಫ್‌ಎಸ್‌ಎಲ್ ವರದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು ದೃಢಪಡುತ್ತಿದ್ದಂತೆ ವಿಧಾನಸೌಧ ಪೊಲೀಸರು 40ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಿ 15 ಮಂದಿ ಧ್ವನಿಯ ಮಾದರಿಯನ್ನು ಸಂಗ್ರಹಿಸಿದ್ದರು. ಸೋಮವಾರ ಮಧ್ಯಾಹ್ನ ಪೊಲೀಸರ ಕೈಗೆ ಎಫ್‌ಎಸ್‌ಎಲ್ ವರದಿ ಸೇರುತ್ತಿದ್ದಂತೆ ಘೋಷಣೆ ಕೂಗಿದ ಮೂವರನ್ನು ಬಂಧಿಸಲಾಗಿದೆ.
ಸದ್ಯ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳ ಪೂರ್ವ ಪರ ಏನು? ಅವರ ಉದ್ದೇಶ ಏನಾಗಿತ್ತು? ಈ ವೇಳೆ ಬೇರೆ ಯಾರಾದರೂ ಇವರಿಗೆ ಬೆಂಬಲ ನೀಡಿದ್ರಾ? ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ಆಕಸ್ಮಿಕವೇ? ಅಥವಾ ಉದ್ದೇಶ ಪೂರ್ವಕವೇ ಎಂಬುದನ್ನು ಪರಿಶೀಲನೆ ನಡೆಸಲಿದ್ದಾರೆ..
ಬಂಧನಕ್ಕೆ ಒಳಗಾದವರು ಯಾರು?
* ಎ1- ಮೊಹಮ್ಮದ್ ಶಾಫಿ ನಾಶಿಪುಡಿ: 45 ವರ್ಷ, ಬ್ಯಾಡಗಿ
* ಎ2- ಮುನಾವರ್ ಅಹ್ಮದ್ : 29 ವರ್ಷ, ಜಯಮಹಲ್, ಬೆಂಗಳೂರು
* ಎ3- ಮೊಹಮ್ಮದ್ ಇಲ್ತಾಜ್; 31 ವರ್ಷ, ಕಿಶಾನ್‌ಗಂಜ್, ದೆಹಲಿ
ಬೆಂಗಳೂರು: ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿ ಇನ್ನೂ ಬಂದಿಲ್ಲ. ವರದಿ ಬಂದ ನಂತರ ಕ್ರಮ ಜರುಗಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ (G Parmeshwar) ಹೇಳಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ (RameshwaramCafeBlast) ಪ್ರಕರಣ ಸೇರಿದಂತೆ ಪರಮೇಶ್ವರ್ ಇಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿದರು.
ಸಭೆಯ ಬಳಿಕ ವಿಧಾನಸೌಧದಲ್ಲಿ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಎಫ್‌ಎಸ್‌ಎಲ್ ವರದಿಗೆ ಕಾಯುತ್ತಿದ್ದೇವೆ. ವರದಿಯಲ್ಲಿ ಕೃತ್ಯ ಎಸಗಿದ್ದು ಸಾಬೀತಾದರೇ ಅವರ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತೇವೆ. ವರದಿ ಬರುವವರೆಗೂ ಏನನ್ನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ – ರಥಯಾತ್ರೆಗೆ ಹೈಕೋರ್ಟ್ ಅಸ್ತು
ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ಕಾಂಗ್ರೆಸ್ಸಿನ ನಾಸೀರ್ ಹುಸೇನ್ (Naseer Hussain) ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರು. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಜೈಕಾರ ಕೂಗಿದ್ದು ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರು: ವಿಧಾನಸೌಧಲ್ಲಿ ಪಾಕ್ ಪರ (Pakistan Zindabad) ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಧ್ವನಿ ಪರೀಕ್ಷೆ ಮಾಡಿದ ವಿಧಿ ವಿಜ್ಞಾನ ಪ್ರಯೋಗಾಲಯ (FSL) ತನ್ನ ವರದಿಯನ್ನು ಗೃಹ ಸಚಿವಾಲಯಕ್ಕೆ ನೀಡಿದೆ.
ಗುರುವಾರ ಸಂಜೆ ಎಫ್‌ಎಸ್‌ಎಲ್ ವರದಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು ಯಾವುದೇ ಕ್ಷಣದಲ್ಲಿ ವರದಿ ಮಾಹಿತಿ ಪ್ರಕಟವಾಗುವ ಸಾಧ್ಯತೆಯಿದೆ. ರಾತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಂಪುಟ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಚರ್ಚೆಯಾಗಲಿದೆ.
ತಡರಾತ್ರಿ ವಿಚಾರಣೆ
ಘೋಷಣೆ ಕೂಗಿರುವ ಆರೋಪ ಎದುರಿಸುತ್ತಿರುವ ಹಾವೇರಿಯ ಬ್ಯಾಡಗಿ ಮೆಣಸಿನಕಾಯಿ ವರ್ತಕ ಮಹಮದ್ ಶಫಿ ನಾಶಿಪುಡಿಯನ್ನು ಧ್ವನಿ ಪರೀಕ್ಷೆಗಾಗಿ ಬೆಂಗಳೂರು ಪೊಲೀಸರು ತಡರಾತ್ರಿ ವಿಚಾರಣೆ ನಡೆಸಿದ್ದಾರೆ. ಆದರೆ ನಾನು ನಾಸೀರ್ ಸಾಬ್ ಜಿಂದಾಬಾದ್ ಎಂದು ಕೂಗಿದ್ದೇನೆ. ನನ್ನ ತಾಯಾಣೆಗೂ ಆತರ ದೇಶದ್ರೋಹಿ ಘೋಷಣೆ ಕೂಗಿಲ್ಲ ಅಂತ ಮಹಮದ್ ಶಫಿ ನಾಶಿಪುಡಿ ಹೇಳಿದ್ದಾರೆ. ಇದನ್ನೂ ಓದಿ: ನನ್ನ ಬಳಿ ಸಮೀಕ್ಷೆಗೆ ಯಾರೂ ಬಂದಿಲ್ಲ: ಜಾತಿ ಸಮೀಕ್ಷೆಗೆ ಸಿದ್ದಗಂಗಾ ಶ್ರೀ ಹೇಳಿಕೆ
ತನಿಖೆ ತೀವ್ರಗೊಳಿಸಿರುವ ಪೊಲೀಸರು ಬುಧವಾರ ರಾತ್ರಿಯೇ ನಾಲ್ವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆಡಿಯೋ ಮಾದರಿಯನ್ನು ಸಂಗ್ರಹಿಸಿದ್ದಾರೆ.
2024ರ ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆಯ (Rajya Sabha Election) ಫಲಿತಾಂಶ ಹೊರಬಿದ್ದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ (Nasser Hussain) ಅವರು ಬೆಂಬಲಿಗರೊಂದಿಗೆ ವಿಧಾನಸೌಧದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು. ಈ ಸಂದರ್ಭದಲ್ಲಿ ನಾಸೀರ್ ಹುಸೇನ್ ಅವರ ಕಿರು ಸಂದರ್ಶನ ಮಾಡಲು ಮುಂದಾದಾಗ ಅವರ ಬೆಂಬಲಿಗರಿದ್ದ ಗುಂಪುನಿಂದ ಜಿಂದಾಬಾದ್ ಜಿಂದಾಬಾದ್ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೇಳಿಬಂದಿದೆ. ಆ ಮೂಲ ದೃಶ್ಯಾವಳಿಯನ್ನು ತಮಗೆ ನೀಡುತ್ತಿದ್ದೇವೆ ಮತ್ತು ಈ ಮೂಲಕ ತನಿಖೆಗೆ ಸಹಕರಿಸುತ್ತಿದ್ದೇವೆ ಎಂದು ಲಿಖಿತ ರೂಪದಲ್ಲಿ ಪೊಲೀಸರಿಗೆ ವಿವರಣೆಯನ್ನು ಪಬ್ಲಿಕ್ ಟಿವಿ ನೀಡಿತ್ತು.
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ (Pakistan) ಪರ ಘೋಷಣೆ ಆರೋಪ ಹೊರಿಸಿದ ಹಿನ್ನೆಲೆ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ (Congress) ಯುವ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Haris Nalapad) ದೂರು ನೀಡಿದ್ದಾರೆ.
ಪ್ರಚೋದನಾಕಾರಿ ಹೇಳಿಕೆ ಕೊಟ್ಟು ಸಮಾಜ ಒಡೆಯಲು ಯತ್ನಿಸುತ್ತಿರುವ ಬಿಜೆಪಿ (BJP) ನಾಯಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ನಲಪಾಡ್ ಕಮೀಷನರ್ ಕಚೇರಿಯಲ್ಲಿ ದೂರು ನೀಡಿದ್ದಾರೆ. ವಕೀಲ ಶತಬೀಷ್ ಶಿವಣ್ಣ ಜೊತೆ ಆಗಮಿಸಿ ಸತ್ಯಾಂಶ ಹೊರಬರುವ ಮುನ್ನವೇ ಸುಳ್ಳು ಹಬ್ಬಿಸಿದ್ದಾರೆ ಎಂದು ನಲಪಾಡ್ ದೂರು ಕೊಟ್ಟಿದ್ದಾರೆ. ಇದನ್ನೂ ಓದಿ: ರೈತನಿಗೆ ಅವಮಾನ – ಕ್ಷಮೆಯಾಚಿಸಿ ಉಲ್ಟಾ ಹೊಡೆದ ಬಿಎಂಆರ್‌ಸಿಎಲ್
ಆರ್ ಅಶೋಕ್, ಅಶ್ವಥ್ ನಾರಾಯಣ್, ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ದೂರು ಕೊಡಲು ಬಂದಿದ್ದೇವೆ. ನಾಸೀರ್ ಹುಸೇನ್ ಜಿಂದಾಬಾದ್ ಎಂಬುದನ್ನು ತಿರುಚಿ ಹೇಳಲಾಗುತ್ತಿದೆ. ಅದನ್ನು ಪಾಕಿಸ್ತಾನ ಜಿಂದಾಬಾದ್ ಎಂದು ತಿರುಚಿ ಹೇಳಿ ಸಮಾಜ ಒಡೆದುಹಾಕುವ ಹೇಳಿಕೆ ನೀಡಿದ್ದಾರೆ. ಕಮ್ಯೂನಲ್ ವಿಚಾರದ ಬಗ್ಗೆ ದಂಗೆ ಹಚ್ಚಲು ಈ ರೀತಿ ಮಾಡಲಾಗುತ್ತಿದೆ. ರಾಜಕೀಯ ಮಾಡಿ ಈ ರೀತಿ ಹಬ್ಬಿಸಲಾಗುತ್ತಿದೆ. ಒಂದೇ ಒಂದು ಸಮಾಜವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಜಿಂದಾಬಾದ್ ಘೋಷಣೆ – ಎಡಿಟ್ ಮಾಡದ ಮೂಲ ವಿಡಿಯೋ ನೀಡಿದ ಪಬ್ಲಿಕ್ ಟಿವಿ
ನಾವೆಲ್ಲಾ ಭಾರತೀಯರು, ಕನ್ನಡಿಗರು. ಒಂದು ಸಮಾಜವನ್ನು ಟಾರ್ಗೆಟ್ ಮಾಡಿ ಅವನನ್ನು ಜೀವನ ಮಾಡಲು ಬಿಡುತ್ತಿಲ್ಲ. ಒಬ್ಬ ಸಂಸದ ಗೆದ್ದಾಗ ಜಿಂದಾಬಾದ್ ಹಾಕೋಕು ಬಿಟ್ಟಿಲ್ಲ. ಪ್ರಚೋದನಕಾರಿ ಹೇಳಿಕೆ ಕೊಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಲು ಮನವಿ ಮಾಡಿದ್ದೇವೆ. ಮೂರು ಸೀಟ್ ಗೆದ್ದಿರುವುದನ್ನು ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಉರ್ಕೊಂಡು ಈ ರೀತಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡೋಕೆ ಆಗಲ್ಲ. ಸಿದ್ದರಾಮಯ್ಯ, ಡಿಕೆಶಿ ಇರೋವರೆಗೂ ನಮ್ಮ ಶಾಸಕರನ್ನು ಖರೀದಿ ಮಾಡಲು ಆಗಲ್ಲ. ಎಷ್ಟೇ ಕೋಟಿ ಕೊಡುತ್ತೇನೆ ಅಂದರೂ ನಮ್ಮ ಶಾಸಕರು ಸೋತಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ನೀರಿನ ಕೊರತೆ – ಲೋಡ್ ಶೆಡ್ಡಿಂಗ್ ಭೀತಿ
ಬೆಂಗಳೂರು: ವಿಧಾನಸೌಧದಲ್ಲಿ (Vidhana Soudha) ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
153 ಬಿ(ರಾಷ್ಟ್ರೀಯ ಸಮಗ್ರತೆ ಧಕ್ಕೆ ನೀಡಿದ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಅಡಿ ಅಪರಿಚಿತ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ.
ದೂರಿನಲ್ಲಿ ಏನಿದೆ?
ರಾಜ್ಯಸಭಾ ಚುನಾವಣೆ ನಂತರ ನಾಸೀರ್ ಹುಸೇನ್ (Naseer Hussain) ಅವರ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಮಂಗಳವಾರ ಸಂಜೆ 6 ಗಂಟೆಯಿಂದ 6:30 ರ ಸಮಯದಲ್ಲಿ ಯಾರೋ ಒಬ್ಬ ವ್ಯಕ್ತಿ ವಿಧಾನಸೌಧದ ಪೂರ್ವ ದ್ವಾರದ ಬಳಿ ಪಾಕಿಸ್ತಾನ ಜಿಂದಬಾದ್ ಎಂದು ಘೋಷಣೆ ಕೂಗಿದ ಎಂಬ ಸುದ್ದಿ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಬರುತ್ತಿದೆ. ಈ ಸಂಬಂಧವಾಗಿ ಲಭ್ಯವಿರುವ ಪೂಟೇಜ್ ಸಂಗ್ರಹಿಸಿ ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ. ಇದನ್ನೂ ಓದಿ: ಗಗನಯಾನ ಕೈಗೊಳ್ಳುವ 4 ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಮೋದಿ
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಬೆನ್ನಲ್ಲೇ ಬುಧವಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಹಾಕಲು ವಿಪಕ್ಷ ಬಿಜೆಪಿ ಕರೆ ನೀಡಿದೆ.
ನವದೆಹಲಿ: ಸಾರ್ವಜನಿಕ ಖಾತೆಗಳ ಸಮಿತಿ ಮತ್ತು ಸಾರ್ವಜನಿಕ ಉದ್ಯಮಗಳ ಸಮಿತಿಗೆ ನಡೆದ ಚುನಾವಣೆಯಲ್ಲಿ ರಾಜ್ಯಸಭೆ ಸಂಸದ ಸೈಯದ್ ನಾಸೀರ್ ಹುಸೇನ್ (Naseer Hussain), ಡಿಎಂಕೆ ಸಂಸದ ತಿರುಚ್ಚಿ ಶಿವ (Tiruchi Siva) ಅತ್ಯಂತ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಖಾತೆಗಳ ಸಮಿತಿಗೆ ನಡೆದ ಚುನಾವಣೆಯಲ್ಲಿ ಸಂಸದ ತಿರುಚ್ಚಿ ಶಿವ ಹೆಚ್ಚಿನ ಮತಗಳನ್ನು ಪಡೆದರೆ, ಸಾರ್ವಜನಿಕ ಉದ್ಯಮಗಳ ಸಮಿತಿಗೆ ನಡೆದ ಚುನಾವಣೆಯಲ್ಲಿ ನಾಸೀರ್ ಹುಸೇನ್ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಇನ್ನು ಈ ಸಮಿತಿಗೆ ರಾಧಾ ಮೋಹನ್ ದಾಸ್ ಅಗರವಾಲ್, ಅನಿಲ್ ಜೈನ್, ಪ್ರಕಾಶ್ ಜಾವಡೇಕರ್, ಅಮರ್ ಪಟ್ನಾಯಕ್, ವಿಜಯಸಾಯಿ ರೆಡ್ಡಿ , ಬಿನೋಯ್ ವಿಶ್ವಂ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಹಾಸನದ ವಿಷಯದಲ್ಲಿ ನನ್ನ ಸ್ಟ್ಯಾಂಡ್ ಬದಲಾಗಲ್ಲ: ಹೆಚ್‍ಡಿಕೆ
ನವದೆಹಲಿ: ಸಂತೋಷ್ ಪಾಟೀಲ್ ಮಾತ್ರವಲ್ಲ ಬಹಳಷ್ಟು ಗುತ್ತಿಗೆದಾರರು ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ನಾನು ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಏನು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ರಾಜ್ಯಸಭೆ ಸಂಸದ ನಾಸೀರ್ ಹುಸೇನ್ ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಸಂತೋಷ ಪಾಟೀಲ್ ಡೆತ್‌ನೋಟ್‌ನಲ್ಲಿ ಕೆ.ಎಸ್.ಈಶ್ವರಪ್ಪ ಹೆಸರು ಉಲ್ಲೇಖಿಸಿದ್ದಾರೆ. ಸಾವಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಬಹಳಷ್ಟು ನಾಯಕರಿಗೆ ಪತ್ರ ಬರೆದು ನ್ಯಾಯ ಕೊಡಿಸಲು ಮನವಿ ಮಾಡಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ವರ್ಕ್ ಆರ್ಡರ್ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್ – ಆತ್ಮಹತ್ಯೆಗೆ ಕಾರಣ ಏನು?
ಸರಣಿ ಪತ್ರಗಳನ್ನು ಬರೆದರೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಯಾವ ನಾಯಕರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ತಮ್ಮ ಪಕ್ಷದ ಕಾರ್ಯಕರ್ತನಿಗೆ ತಮ್ಮದೇ ಪಕ್ಷದ ನಾಯಕರಿಂದ ಅನ್ಯಾಯ ಆದರೂ ಯಾರೂ ನ್ಯಾಯ ಕೊಡಿಸಲಿಲ್ಲ. ಇದರಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ನವದೆಹಲಿ: ದಲಿತರ ಮಕ್ಕಳು ಮತ್ತು ಮುಸ್ಲಿಮ್ ಮಹಿಳೆಯರು ಶಿಕ್ಷಣದಿಂದ ವಂಚಿತವಾಗಬಹುದಾದ ಸೂಚನೆಯಿದು ಎಂದು ಸಂಸದ ಎಲ್ ಹನುಮಂತಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕಾಂಗ್ರೆಸ್ ಸಂಸದರಾದ ಎಲ್ ಹನುಮಂತಯ್ಯ, ನಾಸೀರ್ ಹುಸೇನ್, ಮಾಜಿ ಸಚಿವ ಆರ್.ಬಿ ತಿಮ್ಮಾಪುರ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನೀಲಿ ಶಾಲು ಹಾಕಿ ದಲಿತ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಹೀಗೆ ಎಲ್ಲರೂ ಅವರವರ ಧರ್ಮ ಲಾಂಛನ ಹಾಕಿಕೊಂಡು ಬರಲು ಶುರು ಮಾಡಿದ್ರೆ ನಮ್ಮ ಶಿಕ್ಷಣ ಎಲ್ಲಿಗೆ ತಲುಪುತ್ತದೆ? ವಿವಾದವನ್ನು ಆರಂಭದಲ್ಲಿ ತಡೆಯಬೇಕಿತ್ತು. ಬಿಜೆಪಿ ಇದರ ನೈತಿಕ ಹೊಣೆ ಹೊರಬೇಕು ಎಂದು ಹೇಳಿದರು.
ಕರಾವಳಿ ಬಲಪಂಥಿಯ ರಾಜಕಾರಣದ ಪ್ರಯೋಗ ಶಾಲೆ. ಅಲ್ಲಿಂದ ಬೇರೆ ಜಿಲ್ಲೆಗಳಿಗೆ ಈಗ ಹರಡುತ್ತಿದೆ. ಈಗ ಶಾಂತಿ ಸಂಧಾನ ಸಭೆಗಳನ್ನು ನಡೆಸಿ, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರಿಗೆ ತಿಳುವಳಿಕೆ ನೀಡಬೇಕು ಎಂದು ಹನುಮಂತಯ್ಯ ಆಗ್ರಹಿಸಿದರು.
ಹಿಜಬ್ ಧಾರಣೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆದರೆ ಇದು ಕಳೆದು ಒಂದು ವಾರದಿಂದ ವಿವಾದ ಆಗಿರೋದ್ಯಾಕೆ ಎನ್ನುವುದು ಪ್ತಶ್ನಿಸಿಕೊಳ್ಳಬೇಕಿದೆ. ಸಂವಿಧಾನ ಧರ್ಮ ಪಾಲನೆಗೆ ಅವಕಾಶ ನೀಡಿದೆ. ಇನ್ನೊಂದು ಧರ್ಮಕ್ಕೆ ಧಕ್ಕೆ ಆಗದಂತೆ ಧರ್ಮಾಚರಣೆಗೆ ಅವಕಾಶ ಇದೆ. ಆದರೆ ಈ ವಿವಾದಕ್ಕೆ ಕಾರಣಕ್ಕೆ ರಾಜಕೀಯ ಹಿತಾಸಕ್ತಿ ಇದೆ. ಒಡೆದು ಆಳುವ ನಾಯಕರು ಇದನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ: ಸುನಿಲ್ ಕುಮಾರ್
ಮಕ್ಕಳಲ್ಲಿ ತಿಳುವಳಿಕೆ ಮಟ್ಟ ಕಡಿಮೆಯಿದ್ದು ಹಿಜಬ್ ಧರಿಸಿದ್ರೆ ನಾವು ಶಾಲು ಧರಿಸುತ್ತೇವೆ ಎನ್ನುತ್ತಿದ್ದಾರೆ. ಹೀಗಾಗಿ ಇದರ ಹಿಂದೆ ದೊಡ್ಡ ಚಿತಾವಣೆ ಇದೆ. ಮಕ್ಕಳ ಮನಸ್ಸಿನಲ್ಲಿ ವಿಷ ಬಿತ್ತಬಾರದು. ಸಿಖ್ಬರ್ ಟರ್ಬನ್ ಧರಿಸಬಾರದು. ಹಿಂದೂಗಳು ಮಾಂಗಲ್ಯ, ಬಿಂದಿ, ಬಳೆ ಹಾಕಿದವರು ಶಾಲೆ ಬರಬಾರದು ಎಂದು ಶುರುವಾದರೆ ಏನು ಆಗಬಹುದು? ಹಿಜಬ್ ಒಂದು ಮುನ್ಸೂಚನೆ. ಇದು ದೇಶದ ಸಮಗ್ರತೆಗೆ ದೊಡ್ಡ ಪೆಟ್ಟು ನೀಡಲಿದೆ ಎಂದರು. ಇದನ್ನೂ ಓದಿ: ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಪ್ರಿಯಾಂಕಾ ಗಾಂಧಿ
ಪ್ರಕರಣ ಕೋರ್ಟ್‌ನಲ್ಲಿದ್ದು ಕೋರ್ಟ್ ಆದೇಶಕ್ಕೆ ನಾವೆಲ್ಲ ಬದ್ಧ. ಅಲ್ಲಿಯವರೆಗೂ ರಾಜಕಾರಣಿಗಳು ನೀಡುತ್ತಿರುವ ಹೇಳಿಕೆ ಗಮನಿಸಬೇಕು. ಕೆಲವು ಸಂಸದರು ಶಾಸಕರು ದೇಶ ಒಡೆಯುವ ಮಾತುಗಳನ್ನು ಆಡುತ್ತಿದ್ದಾರೆ. ರಾಜಕಾರಣಿಗಳು ಕೂಡಲೇ ಈ ರೀತಿಯ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.