Tag: ನಿಂದನೆ

  • ಸುಳ್ಳ, ಕಳ್ಳ – ಅಮೆರಿಕ ವಿಮಾನ ನಿಲ್ದಾಣದಲ್ಲಿ ಪಾಕ್ ಹಣಕಾಸು ಸಚಿವನಿಗೆ ನಿಂದನೆ

    ಸುಳ್ಳ, ಕಳ್ಳ – ಅಮೆರಿಕ ವಿಮಾನ ನಿಲ್ದಾಣದಲ್ಲಿ ಪಾಕ್ ಹಣಕಾಸು ಸಚಿವನಿಗೆ ನಿಂದನೆ

    ವಾಷಿಂಗ್ಟನ್: ಪಾಕಿಸ್ತಾನದ (Pakistan) ನೂತನ ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿದ ಇಶಾಕ್ ದಾರ್ (Ishaq Dar) ಅವರು ಅಮೆರಿಕಗೆ (America) ಭೇಟಿ ನೀಡಿದ್ದ ಸಂದರ್ಭ ಕೆಲ ಅಪರಿಚಿತ ವ್ಯಕ್ತಿಗಳು ಅವರಿಗೆ ಸುಳ್ಳುಗಾರ, ಕಳ್ಳ ಎಂದು ನಿಂದಿಸಿರುವ ಘಟನೆ ನಡೆದಿದೆ. ಇದರಿಂದ ಸಚಿವರು ಕೂಡಾ ಕಿಡಿಯಾಗಿದ್ದಾರೆ.

    ಜಾಗತಿಕ ಸಾಲ ನೀಡುವ ಸಂಸ್ಥೆಗಳೊಂದಿಗೆ ಸಭೆಗಳಲ್ಲಿ ಭಾಗವಹಿಸಲು ಹಾಗೂ ನಗದು ಕೊರತೆ ಮತ್ತು ಪ್ರವಾಹ ಪೀಡಿತ ಪಾಕಿಸ್ತಾನಕ್ಕೆ ಹೆಚ್ಚು ಅಗತ್ಯವಿರುವ ನೆರವು ಪಡೆಯಲು ಇಶಾಕ್ ದಾರ್ ಅವರು ವಾಷಿಂಗ್ಟನ್ ತೆರಳಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ (Airport) ಅವರಿಗೆ ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದೆ.

    ಘಟನೆಯ ವೀಡಿಯೋ ಟ್ವಿಟ್ಟರ್‌ನಲ್ಲಿ ವೈರಲ್ ಆಗಿದ್ದು, ವೀಡಿಯೋದಲ್ಲಿ ಕೆಲ ವ್ಯಕ್ತಿಗಳು ದಾರ್ ಅವರನ್ನು ಚೋರ್ ಚೋರ್ (ಕಳ್ಳ ಕಳ್ಳ) ಎಂದು ಗೇಲಿ ಮಾಡಿರುವುದು ಕಂಡುಬಂದಿದೆ. ಇದರಿಂದ ಕಿಡಿಯಾದ ಸಚಿವರು ಲೇವಡಿ ಮಾಡಿದ ವ್ಯಕ್ತಿಗಳಿಗೆ ಪ್ರತ್ಯುತ್ತರವಾಗಿ, ನೀನು ಸುಳ್ಳುಗಾರ, ಕಳ್ಳ ಎಂದು ಖಾರವಾಗಿ ನುಡಿದಿದ್ದಾರೆ. ಇದನ್ನೂ ಓದಿ: ಜಿನ್‌ಪಿಂಗ್ ವಿರುದ್ಧ ಭುಗಿಲೆದ್ದ ಚೀನಾದ ಜನ – ಅಪರೂಪದಲ್ಲಿ ಕಂಡುಬಂತು ಬ್ಯಾನರ್

    72 ವರ್ಷದ ಇಶಾಕ್ ದಾರ್ ಅವರು ಮಿಫ್ತಾ ಇಸ್ಮಾಯಿಲ್ ಅವರ ಬಳಿಕ ಇತ್ತೀಚೆಗೆ ಪಾಕಿಸ್ತಾನದ ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡರು. ವಿಶ್ವಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವಾರ್ಷಿಕ ಸಭೆಗಳಲ್ಲಿ ಪಾಲ್ಗೊಳ್ಳಲು ಅವರು ಅಮೆರಿಕಗೆ ತೆರಳಿದ್ದರು.

    ಕಳೆದ ತಿಂಗಳು ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ದೇಶ ಆರ್ಥಿಕವಾಗಿ ನಲುಗಿ ಹೋಗಿದೆ. ಇದೀಗ ಪಾಕಿಸ್ತಾನ ಅಂತಾರಾಷ್ಟ್ರೀಯ ಸಾಲದಾತರ ಮೊರೆ ಹೋಗಿದೆ. ಇದನ್ನೂ ಓದಿ: ರಷ್ಯಾದಿಂದ ದೆಹಲಿಗೆ ಬಂದ ವಿಮಾನದಲ್ಲಿ ಬಾಂಬ್ ಬೆದರಿಕೆ – ದೆಹಲಿ ಏರ್‌ಪೋರ್ಟ್ ಹೈ ಅಲರ್ಟ್

    Live Tv
    [brid partner=56869869 player=32851 video=960834 autoplay=true]

  • ಕಾಫಿನಾಡು ಚಂದುಗೆ ತವರೂರಿನಲ್ಲೇ ನಿಂದನೆ: ನಮ್ಮಿಂದ ನೀನು ಹೋಗಲೋ ಎಂದ ಅಭಿಮಾನಿ

    ಕಾಫಿನಾಡು ಚಂದುಗೆ ತವರೂರಿನಲ್ಲೇ ನಿಂದನೆ: ನಮ್ಮಿಂದ ನೀನು ಹೋಗಲೋ ಎಂದ ಅಭಿಮಾನಿ

    ದಿನದಿಂದ ದಿನಕ್ಕೆ ಕಾಫಿನಾಡು ಚಂದು ಜನಪ್ರಿಯತೆ ಹೆಚ್ಚಾಗುತ್ತಿದೆ. ನಾನು ಪುನೀತ್ ಅಣ್ಣ, ಶಿವಣ್ಣನ ಅಭಿಮಾನಿ ಎಂದು ಹೇಳುತ್ತಲೇ ಸೋಷಿಯಲ್ ಮೀಡಿಯಾದಲ್ಲಿ ಚಂದು ಟ್ರೆಂಡ್ ಸೆಟ್ ಮಾಡುತ್ತಿದ್ದಾರೆ. ಅಭಿಮಾನಿಗಳ ಸಂಖ್ಯೆಯನ್ನೂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ತಮ್ಮ ನೆಚ್ಚಿನ ನಟ ಶಿವರಾಜ್ ಕುಮಾರ ಅವರನ್ನು ಭೇಟಿ ಮಾಡಿ ಖುಷಿಯಲ್ಲಿದ್ದರು. ಆ ಖುಷಿ ತುಂಬಾ ದಿನ ಉಳಿದಿಲ್ಲ.

    ಕಾಫಿನಾಡು ಚಂದು ಕೇವಲ ಬರ್ತಡೇ ಸಾಂಗ್ ಮೂಲಕ ಹೊಟ್ಟೆ ತುಂಬಿಸಿಕೊಳ್ಳುತ್ತಿಲ್ಲ. ಅವರ ವೃತ್ತಿ ಆಟೋ ಓಡಿಸುವುದು. ನಿತ್ಯವೂ ಬರೀ ಹಾಡುಗಳನ್ನೇ ಹಾಡುತ್ತಾ ಕೂತರೆ ಹೊಟ್ಟೆ ತುಂಬಬೇಕಲ್ಲ. ಹಾಗಾಗಿ ಇಂತಿಷ್ಟು ವೇಳೆಯನ್ನು ಅವರು ಆಟೋ ಓಡಿಸುವುದಕ್ಕಾಗಿ ಮೀಸಲಿಟ್ಟಿದ್ದಾರೆ. ಈಗ ಅದೇ ಅವರ ನಿಂದನೆಗೆ ಕಾರಣವಾಗಿದೆ. ಆಟೋ ಓಡಿಸುವ ವೇಳೆ ಅಹಿತಕರ ಘಟನೆಯೊಂದು ನಡೆದಿದ್ದು, ಅದೂ ಚಂದು ಅವರ ತವರೂರಿನಲ್ಲೇ ಎನ್ನುವುದು ವಿಷಾದನೀಯ. ಇದನ್ನೂ ಓದಿ:ಜಯಶ್ರೀ ಜೊತೆ ಸೋನು ಶ್ರೀನಿವಾಸ್ ಗೌಡ ಕಿರಿಕ್

    ಚಂದು ಆಟೋ ಓಡಿಸುತ್ತಿದ್ದಾಗ ವ್ಯಕ್ತಿಯೊಬ್ಬ ಹಾಡೊಂದನ್ನು ಮಾಡಿಕೊಡುವಂತೆ ಕೇಳುತ್ತಾರೆ. ಅದಕ್ಕೆ ಚಂದು ಒಪ್ಪುವದಿಲ್ಲ. ನಾನೀಗ ಆಟೋ ಓಡಿಸುತ್ತಿದ್ದೇನೆ. ಸಂಜೆ ನಂತರ ಬನ್ನಿ ಮಾಡಿಕೊಡುವೆ ಎಂದು ಕೇಳಿಕೊಳ್ಳುತ್ತಾರೆ. ಆದರೆ, ಆ ವ್ಯಕ್ತಿ ಅದನ್ನು ಒಪ್ಪುವುದಿಲ್ಲ. ಈಗಲೇ ಮಾಡಿಕೊಡುವಂತೆ ಒತ್ತಡ ಹಾಕುತ್ತಾರೆ. ಅದಕ್ಕೆ ಜಗ್ಗದ ಚಂದು ಅಲ್ಲಿಂದ ಹೊರಡಲು ಯತ್ನಿಸುತ್ತಾರೆ. ಆಗ ಆ ವ್ಯಕ್ತಿಯು ‘ನೀನು ಇದೀಗ ಬದುಕ್ತಿರೋದೇ ನಮ್ಮಂಥವರಿಂದ. ಹೋಗಲೋ ಎಂದು ನಿಂದಿಸುತ್ತಾರೆ. ಆ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಫಿನಾಡ ನಗರಸಭೆ ಅಧ್ಯಕ್ಷ, ಆಯುಕ್ತರ ಮೇಲೆ ಕೇಸ್ ದಾಖಲು

    ಕಾಫಿನಾಡ ನಗರಸಭೆ ಅಧ್ಯಕ್ಷ, ಆಯುಕ್ತರ ಮೇಲೆ ಕೇಸ್ ದಾಖಲು

    ಚಿಕ್ಕಮಗಳೂರು: ನಗರಸಭೆ ಸದಸ್ಯರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆ ನಗರಸಭೆ ಅಧ್ಯಕ್ಷರು ಹಾಗೂ ಆಯುಕ್ತರ ಮೇಲೆ ಪ್ರಕರಣ ದಾಖಲಾಗಿದೆ.

    ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಗೂ ಆಯುಕ್ತ ಬಸವರಾಜ್ ಮೇಲೆ ದೂರು ದಾಖಲಿಸಲಾಗಿದೆ. ನಗರಸಭೆ ಸದಸ್ಯ ಗೋಪಿ ಅವರನ್ನು ಜಿಲ್ಲೆಯ ನಗರಸಭೆಯ ಅಧಿಕೃತ ವಾಟ್ಸಾಪ್ ಗ್ರೂಪಿನಿಂದ ತೆಗೆದು ಹಾಕಲಾಗಿತ್ತು. ಆ ವಿಚಾರದ ಬಗ್ಗೆ ಹಾಗೂ ತಮ್ಮ ವಾರ್ಡಿನ ಕೆಲಸದ ನಿಮಿತ್ತ ಅಧ್ಯಕ್ಷರ ಬಳಿ ಚರ್ಚಿಸಲು ಹೋಗಿದ್ದರು. ಈ ವೇಳೆ ನಗರಸಭೆ ಆಯುಕ್ತ ಬಸವರಾಜ್ ಕೂಡ ಅಲ್ಲೇ ಇದ್ದರು. ಇದನ್ನೂ ಓದಿ: ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ: ಸಿದ್ದರಾಮಯ್ಯ

    ಈ ವೇಳೆ ಅಧ್ಯಕ್ಷರು ಗೋಪಿ ಅವರಿಗೆ ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಆಗ ಅಲ್ಲೇ ಇದ್ದ ಆಯುಕ್ತ ಬಸವರಾಜ್ ಕೂಡಾ ನೀನು ಸಿಎಂಸಿ ಗ್ರೂಪಿನಲ್ಲಿ ಇರಲು ಲಾಯಕ್ಕಿಲ್ಲ. ಅದಕ್ಕೆ ತೆಗೆದು ಹಾಕಿದ್ದೇನೆ. ನಿನ್ನ ಕೈಯಲ್ಲಿ ಏನು ಮಾಡಲು ಸಾಧ್ಯ. ಏನು ಬೇಕಾದರು ಮಾಡಿಕೋ ಎಂದು ಅವರೂ ಕೂಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ಮದುವೆ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಚಾಲಕನಾದ ಶಾಸಕ ರೇಣುಕಾಚಾರ್ಯ

    POLICE JEEP

    ನಗರಸಭೆ ಸದಸ್ಯರ ದೂರಿನ ಅನ್ವಯ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಅಧ್ಯಕ್ಷ ವೇಣು ಹಾಗೂ ಆಯುಕ್ತ ಬಸವರಾಜ್ ವಿರುದ್ಧ ಕಲಂ 504, (ಉದ್ದೇಶಪೂರ್ವಕ ಅವಮಾನ) 506 (ವಂಚನೆ)ರ ಅಡಿ ಪ್ರಕರಣ ದಾಖಲಾಗಿದೆ.

  • ನಡುಬೀದಿಯಲ್ಲೇ ಅಧಿಕಾರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಶಾಸಕ ನಾಗೇಂದ್ರ!

    ನಡುಬೀದಿಯಲ್ಲೇ ಅಧಿಕಾರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಶಾಸಕ ನಾಗೇಂದ್ರ!

    ಮೈಸೂರು: ಸಿಎಂ ಜಿಲ್ಲೆಗೆ ಬರುತ್ತಿರುವ ವಿಷಯ ತಿಳಿಸಿಲ್ಲ ಅಂತ ಸಿಟ್ಟಿಗೆದ್ದ ಶಾಸಕರೊಬ್ಬರು ನಡುಬೀದಿಯಲ್ಲೇ ಅಧಿಕಾರಿಯನ್ನು ಎಲ್ಲರ ಮುಂದೆ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ.

    ಜಿಲ್ಲೆಯ ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ ಅಧಿಕಾರಿಯನ್ನು ನಿಂದಿಸಿ ಅವಾಜ್ ಹಾಕಿದ್ದಾರೆ. ಸಿಎಂ ಅವರು ಜಿಲ್ಲೆಗೆ ಬರುತ್ತಿರುವ ವಿಷಯವನ್ನು ಅಧಿಕಾರಿಗಳು ತಮಗೆ ತಿಳಿಸಿಲ್ಲ ಎಂಬ ಕಾರಣಕ್ಕೆ ನಾಗೇಂದ್ರ ಅವರು ನಡುಬೀದಿಯಲ್ಲೇ ಅಧಿಕಾರಿಗೆ ಬೈದಿದ್ದಾರೆ. ಇಲ್ಲಿಗೆ ಯಾಕೆ ಬಂದಿದ್ಯಾ ರಜೆ ಹಾಕಿ ನೀನು? ಸಿಎಂ ಬರಬೇಕಾದ್ರೆ ಹೇಳಬೇಕು ಅನ್ನೋ ಯೋಗ್ಯತೆ ಇಲ್ಲ ನಿಂಗೆ ಲೋಫರ್ ತಂದು ಎಂದು ಹೇಳಿ ಅಧಿಕಾರಿಗೆ ನಿಂದಿಸಿದ್ದಾರೆ.

    ಮೈಸೂರಿನ ಲ್ಯಾನ್ಸ್ ಕಟ್ಟಡ ವೀಕ್ಷಣೆ ವೇಳೆ ಸ್ಥಳೀಯ ಶಾಸಕರ ನಿರ್ಲಕ್ಷ್ಯ ತೋರಿದ್ದು, ಸಿಎಂ ಅವರು ಕಟ್ಟಡ ವೀಕ್ಷಣೆಗೆ ಬರುತ್ತಾರೆ ಅಂತ ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿರಲಿಲ್ಲ. ಆದರಿಂದ ಕೋಪಗೊಂಡ ನಾಗೇಂದ್ರ ಅವರು ಅಧಿಕಾರಿಗೆ ಬೈದು ಸಮಾಧಾನಪಟ್ಟುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಳಪೆ ಕಾಮಗಾರಿ ಪ್ರಶ್ನಿಸಿದ ಜನರಿಗೆ ಶಾಸಕ ಲಮಾಣಿ ಪುತ್ರ ಅವಾಜ್!

    ಕಳಪೆ ಕಾಮಗಾರಿ ಪ್ರಶ್ನಿಸಿದ ಜನರಿಗೆ ಶಾಸಕ ಲಮಾಣಿ ಪುತ್ರ ಅವಾಜ್!

    ಗದಗ: ರಸ್ತೆ ಕಾಮಗಾರಿ ಗುಣಮಟ್ಟ ಕಳಪೆಯಾಗಿದೆ, ಸರಿಪಡಿಸಿ ಎಂದು ಕಾಮಗಾರಿ ತಡೆದ ಸಾರ್ವಜನಿಕರಿಗೆ ಶಾಸಕ ಲಮಾಣಿ ಪುತ್ರ ಲಕ್ಷ್ಮೇಶ್ವರ ಪಟ್ಟಣದಲ್ಲಿ ಅವಾಜ್ ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದಿಂದ ಗದಗ ನಾಕಾವರೆಗೆ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಒಳ್ಳೆ ಕಾಮಗಾರಿ ಮಾಡಿ ಎಂದು ಸ್ಥಳಿಯರು ಪ್ರತಿಭಟಿಸಿ ಸ್ಥಗಿತಗೊಳಿಸಿದ್ದರು.

    ಈ ವಿಚಾರ ತಿಳಿದು ಗುತ್ತಿಗೆದಾರರ ಬೆಂಗಾವಲಾಗಿ ಬಂದ ಶಾಸಕರ ಪುತ್ರ ಮಹೇಶ ಲಮಾಣಿ ಜನರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇದರಿಂದ ಅಂಬೇಡ್ಕರ್ ಸೇನಾ ಸಮಿತಿಯಿಂದ ಸಾರ್ವಜನಿಕರು ರಸ್ತೆ ತಡೆದು, ಜೆಸಿಬಿ ಅಡ್ಡನಿಲ್ಲಿಸಿ ಪ್ರತಿಭಟನೆ ಮಾಡಿದರು. ಸ್ಥಳಕ್ಕೆ ಆಗಮಿಸಿ ಮಹೇಶ ಲಮಾಣಿ ಕ್ಷಮೆ ಕೇಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೋರ್ಟ್ ಆವರಣದಲ್ಲಿ ಇನ್ಸ್‌ಪೆಕ್ಟರ್‌ಗೆ ಆವಾಜ್ ಹಾಕಿದ ಕೈದಿ

    ಕೋರ್ಟ್ ಆವರಣದಲ್ಲಿ ಇನ್ಸ್‌ಪೆಕ್ಟರ್‌ಗೆ ಆವಾಜ್ ಹಾಕಿದ ಕೈದಿ

    ಧಾರವಾಡ (ಹುಬ್ಬಳ್ಳಿ): ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಕೋರ್ಟ್ ಆವರಣದಲ್ಲಿಯೇ ಅಶ್ಲೀಲ ಪದ ಬಳಸಿ ಇನ್ಸ್‌ಪೆಕ್ಟರ್‌ಗೆ ಅವಾಜ್ ಹಾಕಿರುವ ಘಟನೆ ನಗರದಲ್ಲಿ ನಿನ್ನೆ ನಡೆದಿದೆ. ಉಡುಪಿ ಮೂಲದ ನಾಗರಾಜ್ ಬಳಿಗಾರ್ ಅವಾಚ್ಯ ಪದಗಳಿಂದ ನಿಂದಿಸಿದ ಕೈದಿ. ಅಶೋಕ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಗದೀಶ್ ಹಂಚನಾಳ ಅವರಿಗೆ ನಾಗರಾಜ್ ಆವಾಜ್ ಹಾಕಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ.

    ಘಟನೆಯ ವಿವರ: ಸರಣಿ ಕಳ್ಳತನ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನಾಗರಾಜ್ ನನ್ನು ಅಶೋಕ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ಹಂಚನಾಳ ನೇತೃತ್ವದ ತಂಡ ಬಂಧಿಸಿತ್ತು. ಬಳಿಕ ಆತನನ್ನು ಹುಬ್ಬಳ್ಳಿಯ 5ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ 8 ವರ್ಷ ಜೈಲು ಶಿಕ್ಷಿ ವಿಧಿಸಿ ತೀರ್ಪು ನೀಡಿತ್ತು. ಕೋರ್ಟ್ ನಿಂದ ಹೊರ ಬಂದು ಪೊಲೀಸ್ ವಾಹನದಲ್ಲಿ ಕುಳಿತಿದ್ದ ನಾಗರಾಜ್, ಜೈಲಿನಿಂದ ಹೊರಗಡೆ ಬಂದ ಮೇಲೆ ನಿನ್ನ ನೋಡಿಕೊಳ್ಳುತ್ತೇನೆ. ಧಮ್ ಇದ್ರೆ ಒಬ್ಬನೇ ಬಾ ನೋಡೋಣ ಅಂತ ಇನ್ಸ್‌ಪೆಕ್ಟರ್‌ ಜಗದೀಶ್ ಹಂಚನಾಳ ಅವರಿಗೆ ಆವಾಜ್ ಹಾಕಿದ್ದಾನೆ.

    ಅವಾಚ್ಯ ಪದಗಳಿಂದ ನಿಂದಿಸಿ, ಬೈಯುತ್ತಿದ್ದ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಈ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲ್ ಆಗಿದೆ. ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಆವಾಜ್ ಹಾಕಿರುವುದು ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಕೈದಿ ನಾಗರಾಜ್ ವಿರುದ್ಧ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಶಾಸಕ ಶಿವನಗೌಡ ವರ್ತನೆ ಖಂಡಿಸಿ ಸರ್ಕಾರಿ ನೌಕರರಿಂದ ಪ್ರತಿಭಟನೆ

    ಶಾಸಕ ಶಿವನಗೌಡ ವರ್ತನೆ ಖಂಡಿಸಿ ಸರ್ಕಾರಿ ನೌಕರರಿಂದ ಪ್ರತಿಭಟನೆ

    ರಾಯಚೂರು: ಅವಾಚ್ಯ ಶಬ್ಧಗಳಿಂದ ಸರ್ಕಾರಿ ನೌಕರನಿಗೆ ನಿಂದಿಸಿದ್ದ ಶಾಸಕ ಶಿವನಗೌಡ ನಾಯಕ್ ರ ವರ್ತನೆಯನ್ನು ಖಂಡಿಸಿ ಜಿಲ್ಲಾ ಸರ್ಕಾರಿ ನೌಕರರು ಪತ್ರಿಭಟನೆ ನಡೆಸಿದ್ದಾರೆ.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ್ ಗೆ ದೂರವಾಣಿಯಲ್ಲಿ ಶಿವನಗೌಡ ನಾಯಕ್ ಅವಾಚ್ಯ ಪದಗಳಿಂದ ಬೈದಿದ್ದರು. ಅಂಗನವಾಡಿ ಮೊಟ್ಟೆ ಆಹಾರ ಪದಾರ್ಥಗಳ ಸರಬರಾಜು ವಿಚಾರಕ್ಕೆ ಅವಾಚ್ಯ ಪದಗಳಿಂದ ಬೈದಿದ್ದರು.

    ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಇಂದು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಅಲ್ಲದೇ ಈ ಕೂಡಲೇ ಬಿಜೆಪಿ ಶಾಸಕ ಶಿವನಗೌಡ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ಬಿಜೆಪಿ ಶಾಸಕನಿಂದ ಗೂಂಡಾಗಿರಿ- ನಿಂದನೆಯಿಂದ ಬೇಸತ್ತು ಹುದ್ದೆಯೇ ಬೇಡ ಅಂತಿದ್ದಾರೆ ಅಧಿಕಾರಿ!

    ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಶಾಸಕರು ತಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಲು ಮಾರ್ಗದರ್ಶನ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಖ್ಯಾತ ಗಾಯಕಿ ವಸುಂದರಾ ದಾಸ್‍ಗೆ ನಡುರಸ್ತೆಯಲ್ಲೇ ಕ್ಯಾಬ್ ಚಾಲಕನಿಂದ ಅವಾಜ್

    ಖ್ಯಾತ ಗಾಯಕಿ ವಸುಂದರಾ ದಾಸ್‍ಗೆ ನಡುರಸ್ತೆಯಲ್ಲೇ ಕ್ಯಾಬ್ ಚಾಲಕನಿಂದ ಅವಾಜ್

    ಬೆಂಗಳೂರು: ಖ್ಯಾತ ನಟಿ, ಗಾಯಕಿ ವಸುಂದರಾ ದಾಸ್ ಅವರಿಗೆ ಕ್ಯಾಬ್ ಚಾಲಕನೊಬ್ಬ ಅಡ್ಡಗಟ್ಟಿ ನಿಂದನೆ ಮಾಡಿರುವ ಘಟನೆ ನಗರದ ಮಲ್ಲೇಶ್ವರಂ ಮಾರ್ಗೋಸಾ ರಸ್ತೆಯಲ್ಲಿ ನಡೆದಿದೆ.

    ವಸುಂದರಾ ದಾಸ್ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕ್ಯಾಬ್ ಚಾಲಕ ತನ್ನ ಕಾರಿಗೆ ದಾರಿ ನೀಡಲಿಲ್ಲ ಎಂದು ಕೋಪಗೊಂಡು ನಿಂದಿಸಿದ್ದಾರೆ. ಈ ಕುರಿತು ವಸುಂದರಾ ದಾಸ್ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ನಡೆದಿದ್ದೇನು?
    ಆ.29 ರಂದು ನಗರದ ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿ ಘಟನೆ ನಡೆದಿದ್ದು, ಸಂಜೆ 4.30 ರ ಸಮಯದಲ್ಲಿ ವಸುಂದರಾ ದಾಸ್ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಇಟಿಯೋಸ್ ಕಾರಿನ ಚಾಲಕ ಸಿಗ್ನಲ್ ನಲ್ಲಿ ನಿರಂತರ ಹಾರ್ನ್ ಮಾಡಿದ್ದಾನೆ. ಭಾಷ್ಯಂ ಸರ್ಕಲ್ ಸಿಗ್ನಲ್‍ನಿಂದ ಹಿಂಬಾಲಿಸಿ ಬಳಿಕ ಅವರ ಕಾರನ್ನು ಅಡ್ಡಗಟ್ಟಿ ನಿಂದನೆ ಮಾಡಿದ್ದಾನೆ. ಈ ವೇಳೆ ಕಾರಿನ ಡೋರ್ ತೆಗೆಯಲು ಯತ್ನಿಸಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಈ ಕುರಿತು ವಸುಂದರಾ ದಾಸ್ ಅವರು ದೂರು ದಾಖಲಿಸಿದ್ದು, ಕಾರ್ ನಂಬರ್ ಕೆಎ-05 ಇ-3933 ನ ಕ್ಯಾಬ್ ಚಾಲಕನಿಂದ ಕೃತ್ಯ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಕ್ಯಾಬ್ ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 509, 341, 354 ಮತ್ತು 504ರ ಅಡಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಕಾರು ಚಾಲಕನಿಗಾಗಿ ಶೋಧ ನಡೆಸಿದ್ದಾರೆ. ವಾಹನ ಸಂಖ್ಯೆಯನ್ನು ಪರಿವಾಹನ್ ಪೋರ್ಟಲ್ ನಲ್ಲಿ ಪರಿಶೀಲನೆ ನಡೆಸಿದ ವೇಳೆ ಕಾರು ಅಮ್ಜದ್ ಪಾಷಾ ಎಂಬವರ ಹೆಸರಲ್ಲಿ ನೋಂದಣಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಾರ್ವಜನಿಕರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಡಿವೈಎಸ್‍ಪಿ!

    ಸಾರ್ವಜನಿಕರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಡಿವೈಎಸ್‍ಪಿ!

    ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಡುತ್ತಾ ಬರುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಚಾಮರಾಜನಗರ ಡಿವೈಎಸ್ ಪಿ ಜೈಕುಮಾರ್ ಸಾರ್ವಜನಿಕರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದಲ್ಲದೇ ಸಾರ್ವಜನಿಕರ ಮೇಲೆ ಕೈ ಮಾಡಿದ್ದಾರೆ.

    ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿಲ್ಲ ಎಂದು ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಡಿವೈಎಸ್ ಪಿ ತಮ್ಮ ಪ್ರತಾಪ ತೋರಿದ್ದಾರೆ. ಪ್ರತಿಭಟನೆಯನ್ನು ವಿಡಿಯೋ ಮಾಡುತ್ತಿದ್ದ ಸಾರ್ವಜನಿಕರ ಮೊಬೈಲ್ ಕಿತ್ತು ಎಸೆದು ಅವರಿಗೆ ಬಾಯಿಗೆ ಬಂದಂತೆ ಬೈದದ್ದು ಅಲ್ಲದೇ, ಅವರ ಮೇಲೆ ಕೈ ಮಾಡಿದ್ದಾರೆ.

    ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಾ ಬರುತ್ತಿದ್ರೂ ಸಹ ಪೊಲೀಸರು ಮಾತ್ರ ಒಂದೇಲ್ಲಾ ಒಂದು ಪ್ರಕರಣದಲ್ಲಿ ಹೆಸರಾಗುತ್ತಿದ್ದಾರೆ. ಚಾಮರಾಜನಗರದಲ್ಲಿ ಇಷ್ಟೆಲ್ಲಾ ಆಗುತ್ತಿದ್ರು ಕೂಡ, ಜಿಲ್ಲೆಯ ಪೊಲೀಸ್ ಮುಖ್ಯಸ್ಥ ಎನ್ನಿಸಿಕೊಂಡ ಎಸ್ ಪಿ ಧರ್ಮೇಂದ್ರ ಕುಮಾರ್ ಮೀನಾ ಮಾತ್ರ ತನಗೆ ಏನು ತಿಳಿದಿಲ್ಲ ಎಂದು ವರ್ತನೆ ಮಾಡ್ತಾ ಇದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

  • ಬಜಾರಿ, ಗಂಡುಬೀರಿ ಅಂತ ಮಹಿಳೆಯರನ್ನು ನಿಂದಿಸಿದ ಪೊಲೀಸ್!

    ಬಜಾರಿ, ಗಂಡುಬೀರಿ ಅಂತ ಮಹಿಳೆಯರನ್ನು ನಿಂದಿಸಿದ ಪೊಲೀಸ್!

    ಬೆಳಗಾವಿ: ಸಮಸ್ಯೆ ಹೊತ್ತು ಪೊಲೀಸರ ಬಳಿ ಹೋದರೆ ಪೊಲೀಸ್ ಅಧಿಕಾರಿಯೊರ್ವ, ಸೌಜನ್ಯವನ್ನೂ ತೋರದೆ ಸಾರ್ವಜನಿಕವಾಗಿ ಮಹಿಳೆಯರನ್ನು ನಿಂದಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.

    ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಆಲಕನೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಾರೋಗೇರಿ ಪಿಎಸ್‍ಐ ಮೊಹ್ಮದ್ ರಫೀಕ್ ಎಂ. ತಹಶೀಲ್ದಾರ್ ದರ್ಪ ಮೆರೆದ ಅಧಿಕಾರಿ.

    ಸಾರ್ವಜನಿಕರಲ್ಲಿ ಶಾಂತಿ ಮೂಡಿಸಬೇಕಾದ ಪೊಲೀಸ್ ಅಧಿಕಾರಿ ಒಂದು ಸಮುದಾಯದ ಮಹಿಳೆಯರಿಗೆ ಬಜಾರಿ, ಗಂಡುಬೀರಿ ಎಂದು ಕಟುಶಬ್ಧಗಳಲ್ಲಿ ನಿಂದಿಸಿರುವಾಗಿ ಆರೋಪವೊಂದು ಕೇಳಿಬಂದಿದೆ. ಸಾರ್ವಜನಿಕವಾಗಿ ಮಹಿಳೆಯರಿಗೆ ಅವ್ಯಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವುದಕ್ಕೆ ಅಲ್ಲಿನ ರೈತರು ಹಾಗೂ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಮಾಹಿತಿ ಪಡೆದು ಕ್ರಮಕ್ಕೆ ಆಗ್ರಹಿಸುತ್ತೇನೆ ಎಂದು ಕುಡಚಿ ಶಾಸಕ ಪಿ. ರಾಜೀವ್ ತಿಳಿಸಿದ್ದಾರೆ.