‘ಮಾಣಿಕ್ಯ’ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಇತ್ತೀಚೆಗೆ ಅದ್ಧೂರಿಯಾಗಿ ಥೈಲ್ಯಾಂಡ್‌ನಲ್ಲಿ ಮದುವೆಯಾಗಿದ್ದರು. ಬಳಿಕ ಚೆನ್ನೈನಲ್ಲಿ ಗ್ರ್ಯಾಂಡ್ ಆಗಿ ಆರತಕ್ಷತೆ ಆಯೋಜಿಸಿದ್ದರು. ಆದರೆ ಮದುವೆ ಫೋಟೋ ಮಾತ್ರ ಎಲ್ಲೂ ಶೇರ್ ಆಗಿರಲಿಲ್ಲ. ಇದೀಗ ನಟಿಯ ಮದುವೆಯ (Wedding) ಸುಂದರ ಫೋಟೋಗಳು ಹೊರಬಿದ್ದಿದೆ.

ಮದುವೆಯಲ್ಲಿ ನಟಿ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ರೆ, ವರ ನಿಯೋಲಾಯ್ ಲೈಟ್ ಬಣ್ಣ ಶರ್ಟ್ ಮತ್ತು ಪಂಚೆ ಧರಿಸಿದ್ದಾರೆ. ಖುಷಿ ಖುಷಿಯಾಗಿ ಮದುವೆಯಾಗಿರುವ ನಟಿಯ ದಾಂಪತ್ಯಕ್ಕೆ ಈಗ ಫ್ಯಾನ್ಸ್ ಶುಭಕೋರುತ್ತಿದ್ದಾರೆ.

ವರಲಕ್ಷ್ಮಿ ಮತ್ತು ನಿಕೊಲಾಯ್ (Nicholai) ಹಿಂದೂ ಮತ್ತು ಕ್ರೈಸ್ತ ಎರಡು ಧರ್ಮದ ಪ್ರಕಾರ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಇದನ್ನೂ ಓದಿ:ಅಪರ್ಣಾ ಇನ್ನಿಲ್ಲ ಅನ್ನೋ ನೋವು ಯಾವಾಗಲೂ ಕಾಡುತ್ತದೆ: ಸೃಜನ್ ಲೋಕೇಶ್

ಅಂದಹಾಗೆ, ಜುಲೈ 3ರಂದು ಚೆನ್ನೈನಲ್ಲಿ ನಡೆದ ಆರತಕ್ಷತೆ ಕಾರ್ಯಕ್ರಮಕ್ಕೆ ಕನ್ನಡದ ನಟ ಸುದೀಪ್ ಭಾಗಿಯಾಗಿದ್ದರು. ಸುದೀಪ್ ಜೊತೆ ಪತ್ನಿ ಪ್ರಿಯಾ, ಮಗಳು ಸಾನ್ವಿ ಕೂಡ ಭಾಗಿಯಾಗಿದ್ದರು. ಸುದೀಪ್ ಕುಟುಂಬದ ಜೊತೆ ವರಲಕ್ಷ್ಮಿ ಉತ್ತಮ ಒಡನಾಟ ಹೊಂದಿದ್ದಾರೆ.

ನಟಿಯ ಆತರಕ್ಷತೆಯಲ್ಲಿ ತಮಿಳು ನಟ ಸಿದ್ಧಾರ್ಥ್, ಬಾಲಯ್ಯ, ನಟಿ ತ್ರಿಷಾ ಸೇರಿದಂತೆ ಅನೇಕರು ಭಾಗಿಯಾಗಿ ಹೊಸ ಜೋಡಿಗೆ ಶುಭಕೋರಿದ್ದಾರೆ.

ಇನ್ನೂ ವರಲಕ್ಷ್ಮಿ ಅವರು ಉದ್ಯಮಿ ನಿಕೋಲಾಯ್ ಜೊತೆ ಮಾರ್ಚ್ 1ರಂದು ಮುಂಬೈನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಹಲವು ವರ್ಷಗಳ ಪ್ರೀತಿಗೆ ಇಬ್ಬರೂ ಉಂಗುರದ ಮುದ್ರೆ ಒತ್ತಿದ್ದರು.


ಹಿರಿಯ ನಟ ಶರತ್‌ಕುಮಾರ್ ಮತ್ತು ರಾಧಿಕಾ ದಂಪತಿ ಪುತ್ರಿ ವರಲಕ್ಷ್ಮಿ ವಿವಾಹ ಪೂರ್ವ ಕಾರ್ಯಕ್ರಮಗಳು ಸಂಭ್ರಮದಿಂದ ನಡೆಯುತ್ತಿದೆ. ಜುಲೈ 2ರಂದು ಥೈಲ್ಯಾಂಡ್‌ನಲ್ಲಿ ಉದ್ಯಮಿ ನಿಕೋಲಾಯ್ (Nicholai Sachdev) ಜೊತೆ ವರಲಕ್ಷ್ಮಿ ಮದುವೆಗೆ (Wedding) ಭರ್ಜರಿ ತಯಾರಿ ನಡೆಯುತ್ತಿದೆ.
