ರಾಮನಗರ: ಭವಿಷ್ಯ ನುಡಿಯಲು ಅವರು ಯಾರು? ರಾಜ್ಯದ ಜನ ನಮ್ಮ ಭವಿಷ್ಯ ತೀರ್ಮಾನ ಮಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿರುಗೇಟು ನೀಡಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಜೆಡಿಎಸ್ (JDS) 8 ರಿಂದ 9ನೇ ಸ್ಥಾನಕ್ಕೆ ಇಳಿಯಲಿದೆ ಎಂಬ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಭವಿಷ್ಯ ಹೇಳಲು ಅವರೇನು ಜ್ಯೋತಿಷ್ಯೀನಾ? ಅವರು ಭವಿಷ್ಯ ನುಡಿಯಲಿ. ಸಮಯ ಬಂದಾಗ ಮಾತನಾಡುತ್ತೇವೆ ಎಂದು ಟಾಂಗ್ ನೀಡಿದರು.
ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡುತ್ತಿದ್ದಾರೆ. ಸರ್ಕಾರದ ಖಾತಾ ಪರಿವರ್ತನೆ ಹೆಸರಿನಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ರೂ. ಆದಾಯ ತರಲು ಹೊರಟಿದ್ದಾರೆ. ಬಡವರ ಹೊಟ್ಟೆ ಮೇಲೆ ಹೊಡೆದು ಆದಾಯ ತರಲು ಹೊರಟಿದ್ದಾರೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಅವತ್ತಿನ ಎಸ್‌ಆರ್ ವ್ಯಾಲ್ಯೂ ಮೇಲೆ ದರ ನಿಗದಿ ಮಾಡಿ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು. ಇದನ್ನೂ ಓದಿ: ಉತ್ತರ ಭಾರತದಲ್ಲಿ ಕಾಂತಾರ ಸಿನಿಮಾ ಹವಾ: ಬಾಕ್ಸಾಫೀಸ್‌ನಲ್ಲಿ 200 ಕೋಟಿ ಕ್ಲಬ್!
ಮಾನ್ಯ ಉಪ ಮುಖ್ಯಮಂತ್ರಿ @DKShivakumar ಅವರೇ ನೀವು ಕೊಟ್ಟು ಮಾತನ್ನು ಉಳುಸಿಕೊಳ್ಳಲು ಬೆಂಗಳೂರಿನ ನಾಗರಿಕರು ಬಲಿಯಾಗಬೇಕೆ?
ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲದ ಹಿನ್ನೆಲೆಯಲ್ಲಿ ಬಿ- ಖಾತಾದಿಂದ – ಖಾತಾ ಹೆಸರಿನಲ್ಲಿ ಬೆಂಗಳೂರಿನ ಮಧ್ಯಮವರ್ಗದ ಜನರಿಂದ ಸುಲಿಗೆ ಮಾಡಲಾಗುತ್ತಿದೆ.
ಬೆಂಗಳೂರಲ್ಲಿ 7.5 ಲಕ್ಷ ಮನೆಗಳು ಇದಕ್ಕೆ ಒಳಪಡುತ್ತವೆ. ಅದಕ್ಕೆ 100 ದಿನ ಟೈಂ ಲೈನ್ ನಿಗದಿ ಮಾಡಿದ್ದಾರೆ. ಖಾತೆ ವರ್ಗಾವಣೆಗೆ ಒಂದೊಂದು ಕಡೆ ಒಂದೊಂದು ಎಸ್‌ಆರ್ ವ್ಯಾಲ್ಯೂ ಇದೆ. ಇದರಿಂದ ಮಾಧ್ಯಮ ವರ್ಗದ ಜನರಿಗೆ ತೊಂದರೆಯಾಗಲಿದೆ. ಜನರಿಗೆ ಒತ್ತಡ ಹೇರಿ ಅವರ ಬಳಿ ಹಣ ಕಸಿದು ಅವರಿಗೆ ಗ್ಯಾರಂಟಿ ರೂಪದಲ್ಲಿ ವಾಪಸ್ ಕೊಡುತ್ತಾರೆ ಎಂದು ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ (Kumaraswamy) ಖಾಲಿ ಟ್ರಂಕ್ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು ಕುಮಾರಣ್ಣ ಅವರ ಕಾಲಘಟ್ಟದಲ್ಲಿ ಏನೇನು ಮಾಡಿದ್ದಾರೆ ಅಂತ ರಾಜ್ಯದ ಜನತೆಗೆ ಗೊತ್ತು. ಅಧಿಕಾರದಲ್ಲಿದ್ದಾಗ ನೀಡಿದ ಕಾರ್ಯಕ್ರಮ ಜನರ ಮನಸ್ಸಿನಲ್ಲಿದೆ. ಅದನ್ನು ಚುನಾವಣೆ ಸಂದರ್ಭದಲ್ಲಿ ಏನೆಲ್ಲಾ ಮಾಡಿದ್ದಾರೆ ಮಾತನಾಡುತ್ತೇವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಕುಮಾರಸ್ವಾಮಿಯವರನ್ನ ಸಿಎಂ ಕುರ್ಚಿಯಲ್ಲಿ ಕೂರಿಸೋದೆ ನನ್ನ ಗುರಿ, ನನಗೆ ಅಧಿಕಾರ ಬೇಕಿಲ್ಲ: ನಿಖಿಲ್
ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಶೂನ್ಯ. ಶಾಸಕರಿಗೆ ಅನುದಾನ ಕೊಡುತ್ತೇವೆ ಎಂದು ಹೇಳಿ ಏನೂ ಕೊಟ್ಟಿಲ್ಲ. ಒಬ್ಬ ಶಾಸಕನಿಗೆ 10 ಕೋಟಿ ರೂ. ಅನುದಾನವೂ ಸಿಕ್ಕಿಲ್ಲ. ಬಿಜೆಪಿ-ಜೆಡಿಎಸ್ (BJP-JDS) ಬಿಡಿ ಕಾಂಗ್ರೆಸ್ ಶಾಸಕರೇ ಅನುದಾನ ಸಿಕ್ಕಿಲ್ಲ ಅಂತ ಹೇಳ್ತಾರೆ. ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರದ ಕಾಲಘಟ್ಟದಲ್ಲಿ ಅಭಿವೃದ್ಧಿ ಆಗ್ತಿಲ್ಲ ಎಂದು ಕಿಡಿಕಾರಿದರು.
ನವೆಂಬರ್ ಕ್ರಾಂತಿ ಅಂತ ಮಾತಾಡ್ತಾರೆ. ಅದೇನು ಕ್ರಾಂತಿ ಮಾಡ್ತಾರೋ ನೋಡೊಣ. ಇವರ ಕುರ್ಚಿ ಕಿತ್ತಾಟದ ನಡುವೆ ರಾಜ್ಯದ ಜನ ಬಲಿಪಶು ಆಗ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ರಾಮನಗರ: ಕುಮಾರಸ್ವಾಮಿ (HD Kumaraswamy) ಅವರನ್ನು ಸಿಎಂ ಕುರ್ಚಿಯಲ್ಲಿ ಕೂರಿಸೋದು ನನ್ನ ಗುರಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಚನ್ನಪಟ್ಟಣದಲ್ಲಿ (Channapatna) ಇಂದು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕಾರ್ಯಕರ್ತರ ವಿರುದ್ಧ ಬೇಸರ ಹೊರಹಾಕಿದರು. ಸೊಸೈಟಿ ಚುನಾವಣೆ ಹಿನ್ನೆಲೆ ಬಣ ರಾಜಕೀಯ ಮಾಡ್ತಿದ್ದ ಕಾರ್ಯಕರ್ತರನ್ನ ತರಾಟೆಗೆ ತೆಗೆದುಕೊಂಡ ನಿಖಿಲ್, ಶಿಸ್ತಿನ ಪಾಠ ಮಾಡಿದರು. ಇದನ್ನೂ ಓದಿ: ಗ್ಯಾರಂಟಿ ಭಾಗ್ಯ ಕೊಟ್ಟ ಸರ್ಕಾರದಿಂದ ಕತ್ತಲೆ ಭಾಗ್ಯ – ಸ್ಥಳೀಯರ ಆಕ್ರೋಶ
ಸ್ಥಳೀಯ ಮುಖಂಡರ ಒತ್ತಡಕ್ಕೆ ಮಣಿದು ನಾನು ಚುನಾವಣೆಗೆ ಬಂದೆ. ನಾನು ಹೇಡಿ ಅಲ್ಲ, ಸಾರ್ವಜನಿಕವಾಗಿ ಕಣ್ಣೀರು ಹಾಕಲ್ಲ, ಆದರೆ ಅವತ್ತು ಕಣ್ಣೀರು ಹಾಕಿದೆ. ಈಗ ಸೊಸೈಟಿ ಚುನಾವಣೆ ಬಗ್ಗೆ ಪ್ರಶ್ನೆ ಮಾಡ್ತಿದ್ದೀರಲ್ಲಾ. ಜಿಲ್ಲೆಯ ಜನ ನನಗೆ ಅಧಿಕಾರ ಕೊಟ್ಟಿದ್ದೀರಾ? ನನಗೆ ಒಂದು ಬಾರಿಯಾದ್ರೂ ಆಶೀರ್ವಾದ ಮಾಡಿದ್ದೀರಾ? ಕುಮಾರಣ್ಣ 1,200 ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಿದ್ರು. ಆದರೆ ಇಲ್ಲಿ ಅಭಿವೃದ್ಧಿ ರಾಜಕಾರಣಕ್ಕೆ ಬೆಲೆ ಇಲ್ಲ ಎಂದು ಬೇಸರಿಸಿದರು. ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ
ಜಿಲ್ಲೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನ ಗೆದ್ದಿದೆ, ಇದು ಶಾಶ್ವತ ಅಲ್ಲ. ಜನ ಮನಸ್ಸು ಮಾಡಿದ್ರೆ ಬದಲಾವಣೆ ಆಗೇ ಆಗುತ್ತೆ. ಇಲ್ಲಿ ನಡೆಯುವ ವಿಚಾರ ಇಡೀ ರಾಜ್ಯಕ್ಕೆ ಹೋಗುತ್ತೆ. ಇಲ್ಲಿ ಬೀದಿಬೀದಿಯಲ್ಲಿ ಚರ್ಚೆ ಮಾಡಿದ್ರೆ ಪಕ್ಷದ ಗೌರವ ಏನಾಗುತ್ತೆ? ಏನೇ ಸಮಸ್ಯೆ ಇದ್ರೂ ಪಕ್ಷದ ಚೌಕಟ್ಟಿನ ಒಳಗೆ ಚರ್ಚೆ ಮಾಡಿ. ಅಧಿಕಾರ ಇದ್ದಾಗ ಸಭೆಗೆ ಎಷ್ಟು ಜನ ಸೇರುತ್ತಿದ್ದರು. ಈಗ ಎಷ್ಟು ಜನ ಬಂದಿದ್ದಾರೆ ಎಂದರು. ಇದನ್ನೂ ಓದಿ: ಪಾತಾಳಕ್ಕೆ ಬಿದ್ದ ಪಾಕ್ – ಸಾಲದ ಪ್ರಮಾಣ 80 ಲಕ್ಷ ಕೋಟಿಗೆ ಏರಿಕೆ
ಅಲ್ಲದೇ ಚುನಾವಣೆ ಇನ್ನು ಎರಡೇ ವರ್ಷ ಇರೋದು. ಈಗ ಸೊಸೈಟಿ ಚುನಾವಣೆ ಬಗ್ಗೆ ಚರ್ಚೆ ಮಾಡಿಕೊಂಡು ಕೂತುಕೊಳ್ಳೊದು ಬೇಡ. ತಾಲೂಕಿನಲ್ಲಿ ಸ್ವಾರ್ಥ ರಾಜಕಾರಣ ಮಾಡುತ್ತಿದೆ. ಸಹಕಾರ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿ ಗೆದ್ದಿದೆ. ಮುಂದೆ ಅಧಿಕಾರ ಹೇಗೆ ಮಾಡಬೇಕು ಅಂತ ಕಾಂಗ್ರೆಸ್‌ನವರು ತೋರಿಸಿಕೊಟ್ಟಿದ್ದಾರೆ. ಮುಂದೆ ನಾವೂ ಇದನ್ನೇ ಅನುಸರಿಸುತ್ತೇವೆ. ನಾನು ಕೆಲಸ ಮಾಡುತ್ತಿರೋದು ಈ ಪಕ್ಷಕ್ಕೋಸ್ಕರ. ಮುಂದೆ ಚುನಾವಣೆಗೆ ಎಷ್ಟು ಸೀಟ್ ತರಬೇಕು ಅನ್ನೋದು ಡೆಲ್ಲಿಯಲ್ಲಿ ತೀರ್ಮಾನ ಆಗುತ್ತದೆ. ಕುಮಾರಣ್ಣನ ಸಿಎಂ ಕುರ್ಚಿಯಲ್ಲಿ ಕೂತ ದಿನ ನಾನು ಅಧಿಕಾರ ತೆಗೆದುಕೊಳ್ಳಲ್ಲ. ಕಾರ್ಯಕರ್ತರು, ಮುಖಂಡರಿಗೆ ಅಧಿಕಾರ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕರ್ನೂಲ್ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ – ಬಸ್‌ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯುವಂತಿಲ್ಲ!
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ (Caste Census) ದಸರಾ ರಜೆ (Dasara Holiday) ವಿಸ್ತರಣೆ ಮಾಡಿರೋ ಸರ್ಕಾರದ ನಡೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಕ್ರೋಶ ಹೊರ ಹಾಕಿದ್ದಾರೆ.
ಎಕ್ಸ್‌ನಲ್ಲಿ ಏನಿದೆ?
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ ಸರ್ಕಾರ ಪೂರ್ವ ತಯಾರಿ ಇಲ್ಲದೆ ಯಾರದೋ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ಮಾಡುತ್ತಿದೆ. ಜಾತಿಗಣತಿ ದಿನದಿಂದ ದಿನಕ್ಕೆ ಗೊಂದಲಮಯವಾಗುತ್ತಿದೆ. ಈಗ ಸಮೀಕ್ಷೆಗಾಗಿ ಶಾಲಾ ಮಕ್ಕಳ ಭವಿಷ್ಯದ ಜೊತೆ ಕಾಂಗ್ರೆಸ್ ಸರ್ಕಾರ ಚೆಲ್ಲಾಟವಾಡುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಲ್ಲ. ಜಾತಿ ಮುಖ್ಯ ಎಂಬುದು ಇದರಿಂದ ಸ್ಪಷ್ಟವಾಗಿದೆ. ಇದನ್ನೂ ಓದಿ: ನೈಋತ್ಯ ಮುಂಗಾರಿನಲ್ಲಿ ಸುಮಾರು 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿ – ಯಾವ ಜಿಲ್ಲೆಗೆ ಎಷ್ಟು ಲಾಸ್?
2 ಕೋಟಿ ಮನೆಗಳಲ್ಲಿ ವಾಸಿಸುವ 7 ಕೋಟಿ ಜನರನ್ನು ಕೇವಲ 15 ದಿನಗಳಲ್ಲಿ ಸಮೀಕ್ಷೆ ಮಾಡಲು ಸಾಧ್ಯವಿಲ್ಲ ಎಂಬುದು ಸಮೀಕ್ಷೆ ಪ್ರಾರಂಭವಾಗುವ ಮೊದಲೇ ಸ್ಪಷ್ಟವಾಗಿತ್ತು. ಸರ್ಕಾರಿ ಶಾಲೆಗಳು ದೀಪಾವಳಿಯ ನಂತರವೇ ಮತ್ತೆ ತೆರೆಯುತ್ತವೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಒಂದು ತಿಂಗಳ ಕಾಲ ಶಾಲೆಗಳಿಂದ ದೂರವಿರುತ್ತಾರೆ. ಆದರೆ ಖಾಸಗಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಇದು ಲಕ್ಷಾಂತರ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನೂ ಓದಿ: ಬಿಗ್‌ಬಾಸ್ ಮನೆಗೆ ಬೀಗ; ಸುದೀಪ್‌ಗೂ ಡಿಕೆಶಿಗೂ ತಂದಿಡೋದು ಬೇಡ: ಶಾಸಕ ಬಾಲಕೃಷ್ಣ
ಈ ಸಮೀಕ್ಷೆಯು ನಿಜವಾಗಿಯೂ ಸಾಮಾಜಿಕ ಕಲ್ಯಾಣದ ಬಗ್ಗೆ ಆಗಿದ್ದರೆ, ಬೇಸಿಗೆ ರಜೆಯ ಸಮಯದಲ್ಲಿ ಶಿಕ್ಷಣವನ್ನು ಅಡ್ಡಿಪಡಿಸದೆ ವ್ಯವಸ್ಥಿತವಾಗಿ ನಡೆಸಬಹುದಿತ್ತು. ಇವರ ರಾಜಕೀಯದ ತೆವಲಿಗೋಸ್ಕರ ಸಾರ್ವಜನಿಕರ ತೆರಿಗೆ ಹಣವನ್ನು ವ್ಯರ್ಥ ಮಾಡುವ ಜೊತೆಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೂಡ ಅಡ್ಡಿಪಡಿಸುತ್ತಿದೆ. ಸರ್ಕಾರದ ಈ ನಿಲುವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ಕೊಡಿ: ಜಾಲಿವುಡ್ ಆಡಳಿತ ಮಂಡಳಿ
ರಾಮನಗರ: ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರೂ ರೈತರಿಂದ ಒಂದಿಂಚು ಭೂಮಿಯನ್ನ ಕಸಿದುಕೊಳ್ಳಲು ನಾವು ಬಿಡುವುದಿಲ್ಲ. ರೈತರ ಮುಂದೆ ತೊಡೆ ತಟ್ಟುವ ಉಪಮುಖ್ಯಮಂತ್ರಿಗಳೇ ನಿಮ್ಮ ತೊಡೆ ಮುರಿಯುವ ಕಾಲ ದೂರ ಇಲ್ಲ ಎಂದು ಡಿಸಿಎಂ ಡಿಕೆಶಿ (DK Shivakumar) ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದ್ದಾರೆ.
ಬಿಡದಿಯಲ್ಲಿ ಟೌನ್ ಶಿಪ್ (Bidadi Township) ಯೋಜನೆ ವಿರೋಧಿಸಿ ರೈತರಿಗೆ ಬೆಂಬಲ ಸೂಚಿಸಿ ಬಿಡದಿಯ ಭೈರಮಂಗಲ ಗ್ರಾಮದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ನಿಖಿಲ್ ಕುಮಾರಸ್ವಾಮಿ, ರೈತರನ್ನ ಉದ್ದೇಶಿಸಿ ಮಾತನಾಡಿದರು. ಸರ್ಕಾರ ಟೌನ್ ಶಿಪ್ ಯೋಜನೆಯನ್ನು ಹಿಂಪಡೆಯದಿದ್ದರೇ ಭೈರಮಂಗಲ ಗ್ರಾಮದಿಂದ ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಹಾಗೂ ಮುಖ್ಯಮಂತ್ರಿಗಳ ನಿವಾಸ ಕೃಷ್ಣ ಕಛೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. 80%ರಷ್ಟು ರೈತರು ಭೂಮಿಯನ್ನು ನೀಡುವುದಿಲ್ಲ. ರೈತರ ಮೇಲೆ ದಿನನಿತ್ಯ ಅಧಿಕಾರಿಗಳ ಮೂಲಕ ದಬ್ಬಾಳಿಕೆ, ದೌರ್ಜನ್ಯ ಮಾಡುತ್ತಿರುವುದು ಯಾವ ಉದ್ದೇಶಕ್ಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಡ್ರಗ್ಸ್ ಗ್ಯಾಂಗ್‌ನಿಂದ ಅರ್ಜೆಂಟೀನಾದ 3 ಯುವತಿಯರ ಬರ್ಬರ ಹತ್ಯೆ
ರಾಜ್ಯದ ಉಪ ಮುಖ್ಯಮಂತ್ರಿಗಳು ರೈತರ ವಿರುದ್ಧ ತೊಡೆ ತಟ್ಟಿದ್ದಾರೆ. ಅವರಿಗೆ ರೈತರ ತಾಕತ್ತಿನ ಬಗ್ಗೆ ಅರಿವಿಲ್ಲ. ರೈತರಿಗೆ ಅಧಿಕಾರ ಕೊಡುವುದೂ ಗೊತ್ತು, ತೊಡೆ ಮುರಿಯುವುದೂ ಗೊತ್ತು. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಈ ಯೋಜನೆಯನ್ನ ಕೈ ಬಿಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕೊನೆಯ ಹಂತದವರೆಗೂ ರೈತರ ಧ್ವನಿಯಾಗಿ ನಿಲ್ಲುತ್ತೇವೆ. ಜೆಡಿಎಸ್ ರೈತರ ಪಕ್ಷ. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಈ ಯೋಜನೆಯ ಸಾಧಕ- ಬಾಧಕಗಳ ಬಗ್ಗೆ ವಿಚಾರ ಮಾಡದೇ ರೈತರ ಮೇಲೆ ದಬ್ಬಾಳಿಕೆ ಮಾಡಿ ಭೂಮಿ ಕಸಿದುಕೊಳ್ಳುತ್ತಿರುವುದು ಯಾವ ಉದ್ದೇಶಕ್ಕಾಗಿ? ರಿಯಲ್ ಎಸ್ಟೇಟ್ ಮಾಫಿಯಾ ನಡೆಸುವುದಕ್ಕಾ? ರೈತರ ಜಮೀನು ಮಾರಾಟ ಮಾಡದಂತೆ ಆದೇಶ ಮಾಡಿದ್ದೀರಾ? ಅವರ ಮಕ್ಕಳ ಜೀವನಕ್ಕೆ ಏನು ಮಾಡಬೇಕು. ರೈತ ಬೀದಿಗೆ ಬರ್ತಾನೆ ಅದಕ್ಕೆ ಸಾಮಾಜಿಕ ಸಮೀಕ್ಷೆ ಮಾಡಿದ್ದೀರಾ? ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರು ಇದ್ದಾರೆ. 10 ಹಳ್ಳಿಗಳ ರೈತರ ಜೊತೆ ಮಾತನಾಡಿದ್ದೀರಾ ಎಂದು ಗುಡುಗಿದರು. ಇದನ್ನೂ ಓದಿ: ರಾಯಚೂರು | ಜಾತಿಗಣತಿ ಸಮೀಕ್ಷಾ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಅಮಾನತು
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (Caste Census) ಮಾಡಲು ಸರಿಯಾಗಿ ತರಬೇತಿ ಕೊಡದೇ ಸರ್ಕಾರ ಸಮೀಕ್ಷೆಯನ್ನ ಗೊಂದಲ ಮಾಡಿದೆ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)ಕಿಡಿಕಾರಿದ್ದಾರೆ.
ಸಮೀಕ್ಷೆ ಗೊಂದಲದ ಬಗ್ಗೆ ಜೆಪಿ ಭವನದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ದೊಡ್ಡ ಗೊಂದಲ ಆಗಿದೆ. ಸಮೀಕ್ಷೆಯ ಆಪ್ ಸರಿಯಾಗಿ ವರ್ಕ್ ಆಗುತ್ತಿಲ್ಲ. ಬೆಂಗಳೂರಿನಲ್ಲಿ ದೊಡ್ಡ ದೊಡ್ಡ ಟ್ಯಾಲೆಂಟ್ ಇರೋ ಪ್ರತಿಭಾವಂತರು ಇದ್ದಾರೆ. ಆದರೂ ಸರ್ಕಾರ (Congress) ಸರಿಯಾಗಿ ಆಪ್ ಮಾಡಿಲ್ಲ. ಸರ್ಕಾರದವರು 1.43 ಕೋಟಿ ಮನೆ ಸರ್ವೆ ಅಂತಿದ್ದಾರೆ. ಈವರೆಗೂ ಸಮೀಕ್ಷೆಯವರು ಎಷ್ಟು ಮನೆಗೆ ತಲುಪಿದ್ದಾರೆ? ಈವರೆಗೂ 4 ಲಕ್ಷ ಮನೆ ಮಾತ್ರ ತಲುಪಿದ್ದಾರೆ. 15 ದಿನಗಳಲ್ಲಿ ಸಮೀಕ್ಷೆ ಮಾಡಿ ವರದಿ ಕೊಡೋಕೆ ಆಗುತ್ತಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡಿದೆ: ನಿಖಿಲ್ ಕುಮಾರಸ್ವಾಮಿ
ಶಿಕ್ಷಕರ ರಜೆಯಲ್ಲಿ ಸಮೀಕ್ಷೆ ಮಾಡುತ್ತೇವೆ ಎಂದರು. ಸಮಯ ಮುಗಿದರೂ ಸಮೀಕ್ಷೆ ಮುಗಿದಿಲ್ಲ. ಮತ್ತೆ ಶಿಕ್ಷಕರು ಸಿಗ್ತಾರಾ? 60 ಪ್ರಶ್ನೆ ಮಾಡಿದ್ದೀರಾ. ಅಷ್ಟು ಪ್ರಶ್ನೆ ಕೇಳುವುದರಲ್ಲಿ ಆಪ್ ಹ್ಯಾಂಗ್ ಆಗುತ್ತಿದೆ. ನಿಮ್ಮ ಸಮೀಕ್ಷೆ 15 ದಿನ ಗಡುವು ಮುಗಿಯುತ್ತಿದೆ. ಈಗ 450 ಕೋಟಿ ಅಂತಿದ್ದೀರಾ. ಆಮೇಲೆ 650 ಕೋಟಿ ಮಾಡುತ್ತೀರಿ. ಸರ್ಕಾರ ಶಿಕ್ಷಕರಿಗೆ ಸರಿಯಾಗಿ ಟ್ರೈನಿಂಗ್ ಕೊಟ್ಟಿಲ್ಲ. ಸರ್ಕಾರದವರು ಸರಿಯಾಗಿ ಸಿದ್ಧತೆ ಮಾಡದೇ ಸರ್ವೆ ಮಾಡುತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ, 30 ವರ್ಷದ ಬೇಡಿಕೆ ಈಡೇರಿಕೆ: ತೇಜಸ್ವಿ ಸೂರ್ಯ
ಹಿಂದೆ 180 ಕೋಟಿ ವೆಚ್ಚದಲ್ಲಿ ಮಾಡಿದ್ದ ಕಾಂತರಾಜು ಸರ್ವೆ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿ ಎಂದು ಇದೇ ವೇಳೆ ಒತ್ತಾಯ ಮಾಡಿದರು. ಇನ್ನು ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸರ್ವೆ ಮಾಡುತ್ತಿದ್ದಾರೆ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಏನೇನು ಆಗುತ್ತೆ ಅಂತ ಮುಂದೆ ನೊಡೋಣ ಬನ್ನಿ ಎಂದರು. ಇದನ್ನೂ ಓದಿ: ಒಡಿಶಾ | 60,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗೆ ಮೋದಿ ಚಾಲನೆ
ಬೆಂಗಳೂರು: ಧರ್ಮಸ್ಥಳ ಕೇಸ್‌ನಲ್ಲಿ (Dharmasthala Case) ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ (SIT) ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಧರ್ಮಸ್ಥಳ ಕೇಸ್‌ನಲ್ಲಿ ಬುರುಡೆ ಗ್ಯಾಂಗ್ ಮೋಸ ಮಾಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಎಂಬ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಈ ಸರ್ಕಾರ (Congress) ಮಾಡಿದೆ. ಎಸ್‌ಐಟಿಯನ್ನ ತರಾತುರಿಯಲ್ಲಿ ಈ ಸರ್ಕಾರ ಮಾಡಿತು. ಎಸ್‌ಐಟಿ ತನಿಖೆ ಮಾಡಿದ್ರು. ಇವರಿಗೆ ಏನು ಸಿಕ್ತು? ಏನು ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಎಲ್ಲಾ ಗೊತ್ತು: ಡಿಕೆಶಿ ಬಾಂಬ್
ಡಿಕೆ ಶಿವಕುಮಾರ್ ಅವರು ಸದನದಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಂದು ಹೇಳಿದ್ದರು. ಆದರೆ ಷಡ್ಯಂತ್ರ ಮಾಡಿದವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಧಾರ್ಮಿಕ ಕ್ಷೇತ್ರಕ್ಕೆ ಅಪಮಾನ ಮಾಡೋ ಕೆಲಸ ಮಾತ್ರ ಈ ಸರ್ಕಾರ ಮಾಡಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್
ರಾಮನಗರ: ಬಿಡದಿ ಭೂ ಸ್ವಾಧೀನ (Bidadi Land Acquisition) ವಿಚಾರವಾಗಿ ಪರಿಹಾರಕ್ಕೆ ನಮ್ಮ ತಾಯಿ ಅರ್ಜಿ ಹಾಕಿದ್ರೆ ಅದನ್ನ ಬಡವರಿಗೆ ಕೊಟ್ಟು ಬಿಡುತ್ತೇವೆ ಎಂಬ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿಕೆ ಹಿನ್ನೆಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಅಧ್ಯಕ್ಷ ನಟರಾಜ್ ಸುದ್ದಿಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ್ದಾರೆ.
ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರಿಗೆ ಬರೆದಿರುವ ಪತ್ರ ಬಿಡುಗಡೆ ಮಾಡಿದ್ದಾರೆ. ನೋಟಿಫಿಕೇಷನ್ ಆಗಿ, ಪತ್ರಿಕೆಗಳಲ್ಲಿ ಪ್ರಕಟಗೊಂಡ ಮೂರೇ ದಿನಕ್ಕೆ ಅನಿತಾ ಕುಮಾರಸ್ವಾಮಿ ಅರ್ಜಿ ಹಾಕಿದ್ದಾರೆ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ಕೂಡ ಅರ್ಜಿ ಹಾಕಿದ್ದಾರೆ. ನನ್ನ ಹೆಸರಲ್ಲಿ ಖಾತೆ ಇದೆ, ವಿನಯ್ ಗೌಡ ಎಂಬವರಿಗೆ ಕಾರಣಾಂತರಗಳಿಂದ ಎಸ್‌ಪಿಎ (ಸ್ಪೆಷಲ್ ಪವರ್ ಆಪ್ ಅಟಾರ್ನಿ) ಮಾಡಿದ್ದೆವು. ಸದ್ಯ ಅದನ್ನ ಹಿಂಪಡೆದಿದ್ದೇವೆ. ಹೊಸೂರು, ಬನ್ನಿಗಿರಿ ಗ್ರಾಮದಲ್ಲಿರುವ ಭೂಮಿ ಭೂಸ್ವಾಧೀನವಾದಲ್ಲಿ ಎಲ್ಲಾ ನೋಟಿಸ್ ಹಾಗೂ ದಾಖಲೆಗಳನ್ನ ನನ್ನ ವಿಳಾಸಕ್ಕೆ ಕಳುಹಿಸಿ ಎಂದು ಅರ್ಜಿಯಲ್ಲಿ ಬರೆದಿದ್ದಾರೆ. ಅದರ ಅರ್ಥ ಸ್ವಾಧೀನವಾದ್ರೆ ನಮಗೆ ಏನು ಇದೆ ಅದನ್ನ ಕೊಡಬೇಕು ಅಂತ ತಾನೆ? ನಿಖಿಲ್ ಕುಮಾರಸ್ವಾಮಿ ಡಿಕೆ ಶಿವಕುಮಾರ್ ಬಗ್ಗೆ ಮಾತಾಡಿದ್ದಾರೆ. ಮೊದಲು ವಿಚಾರ ತಿಳಿದುಕೊಂಡು ಮಾತನಾಡಲಿ ಎಂದರು. ಇದನ್ನೂ ಓದಿ: ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು, ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲ: ಕೆ ಸುಧಾಕರ್
ನಮ್ಮ ತಾಯಿ ಅರ್ಜಿ ಹಾಕಿದ್ರೆ, ಆಸ್ತಿ ಸರ್ಕಾರಕ್ಕೆ ಬಿಡುತ್ತೇನೆ, ಅಲ್ಲಿನ ಬಡರೈತರಿಗೆ ದಾನ ಕೊಡುತ್ತೇನೆ ಅಂತ ನಿಖಿಲ್ ಹೇಳಿದ್ದಾರೆ. ನಾನು ಸವಾಲು ಹಾಕ್ತೇನೆ ಯಾವಾಗ ರೈತರಿಗೆ ಬಿಟ್ಟುಕೊಡ್ತೀರಾ ಹೇಳಿ? ದಿನಾಂಕ ನಿಗದಿ ಮಾಡಿ ಜಿಬಿಡಿಎ ಮುಖಾಂತರವೇ ರೈತರ ಹೆಸರಿಗೆ ಮಾಡಿಕೊಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್ ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ – ಶ್ರೀ ಕ್ಷೇತ್ರದ ಪರ ನಿಂತ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
– ಧರ್ಮಸ್ಥಳ ಕೇಸ್‌ನಲ್ಲಿ ಸತ್ಯ ಹೊರಗೆ ಬರಬೇಕಾದ್ರೆ ಎನ್‌ಐಎ ತನಿಖೆ ಆಗಲೇಬೇಕು
– ಭೋವಿ ನಿಗಮದ ಅಕ್ರಮದ ಬಗ್ಗೆ ರಾಹುಲ್, ಸಿಎಂ ಮಾತನಾಡಬೇಕು
ಬೆಂಗಳೂರು: ಕಾಂಗ್ರೆಸ್ (Congress) ಯಾವಾಗಲು ಬೇರೆ ಧರ್ಮದ ಪರವಾಗಿ ಇದ್ದೇವೆ ಅಂತ ಅನೇಕ ಸಮಯದಲ್ಲಿ ತೋರಿಸಿದೆ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಿಡಿಕಾರಿದ್ದಾರೆ.
ಸೆಪ್ಟೆಂಬರ್ 5 ರಂದು ಬೆಂಗಳೂರಿನಲ್ಲಿ ಮುಸ್ಲಿಂ ಧರ್ಮದ ಕಾರ್ಯಕ್ರಮ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಅವರು ಬೇರೆ ಧರ್ಮದ ಪರವಾಗಿ ಇದ್ದೇವೆ ಎಂದು ಅನೇಕ ಸಮಯದಲ್ಲಿ ಸಾಬೀತು ಮಾಡೋಕೆ ಹೊರಟಿದ್ದಾರೆ. ದಸರಾ (Mysuru Dasra) ಉದ್ಘಾಟನೆ ಬಾನು ಮುಷ್ತಾಕ್ ಅವರಿಂದ ಮಾಡೋ ಅವಶ್ಯಕತೆ ಇರಲಿಲ್ಲ. ಬಹಳ ಜನ ಸಾಧಕರು ಸಮಯದಲ್ಲಿ ಇದ್ದರು. ಬೇರೆಯವರನ್ನ ಕರೆದು ಮಾಡಬಹುದಿತ್ತು. ಆದರೆ ಈ ಸರ್ಕಾರದ ಹಿಂದಿನ ಉದ್ದೇಶಗಳೇನು ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿತಾಣಗಳ ರೋಪ್ ವೇಗೆ ಸರ್ಕಾರ ಅನುಮೋದನೆ
ಸಮಾಜಕ್ಕೆ ಯಾವ ಸಂದೇಶ ರವಾನೆ ಮಾಡುವ ಕೆಲಸ ರಾಜ್ಯದ ಸಿಎಂ ಹಾದಿಯಾಗಿ ಎಲ್ಲರು ಮಾಡ್ತಿದ್ದಾರೆ ಎಂಬುದನ್ನ ಆಲೋಚನೆ ಮಾಡಬೇಕು. ಧರ್ಮ ಧರ್ಮದ ಬಗ್ಗೆ ಕಿಚ್ಚು ಹಬ್ಬಿಸಿ, ಒಬ್ಬರಿಗೊಬ್ಬರ ಮಧ್ಯೆ ದ್ವೇಷ ಕ್ರಿಯೇಟ್ ಮಾಡಿ ಇದರ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳೋ ಕೆಲಸ ಆಗಬಾರದು. ಇದು ನಿಜಕ್ಕೂ ಖಂಡನೀಯ. ಅವರ ಧರ್ಮಕ್ಕೂ ನಾವು ಗೌರವ ಕೊಡೋಣ. ನಮ್ಮ ಧರ್ಮವನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕಾಗುತ್ತದೆ. ಇವತ್ತು ಧರ್ಮಸ್ಥಳ ಆಯ್ತು, ನಾಳೆ ಚಾಮುಂಡಿ ಬೆಟ್ಟ (Chamundi Hills) ಆಗುತ್ತದೆ. ಹೀಗೆ ಧಾರ್ಮಿಕ ಸ್ಥಳಗಳನ್ನ ಟಾರ್ಗೆಟ್ ಮಾಡಿಕೊಂಡು ಹೊರಟರೇ ಹಿಂದುಗಳಾಗಿ ನಾವು ಕೈಕಟ್ಟಿ ಕೂರೋಕೆ ಆಗಲ್ಲ. ಸರ್ಕಾರದ ಪೊಲಿಟಿಕಲ್ ಅಜೆಂಡಾ ನೂರಾರು ಇರಬಹುದು. ಇದರಿಂದ ಸಮಾಜದ ಮೇಲೆ ಆಗೋ ಡ್ಯಾಮೇಜ್ ಏನು ಎಂಬುದರ ಬಗ್ಗೆ ಆಲೋಚನೆ ಮಾಡಬೇಕು. ಸಿಎಂ ಅವರು ಇದರ ಬಗ್ಗೆ ಯೋಚನೆ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾವು ಸಿದ್ದರಾಮಯ್ಯ ಶಿಷ್ಯರೇ, ಬ್ರೈನ್ ಮ್ಯಾಪಿಂಗ್‌ಗೆ ನಾನು ರೆಡಿ – ರಾಜಣ್ಣ ವಿರುದ್ಧ ಮತ್ತೆ ಕಿಡಿಕಾರಿದ ಮಾಗಡಿ ಬಾಲಕೃಷ್ಣ
ಧರ್ಮಸ್ಥಳ ಕೇಸ್‌ನಲ್ಲಿ (Dharmasthala Case) ಪ್ರತಿಭಟನೆ ಮಾಡೋಕೆ ಬಿಜೆಪಿ-ಜೆಡಿಎಸ್‌ಗೆ ಎಲ್ಲಿಂದ ಹಣ ಬಂತು ಈ ಬಗ್ಗೆ ತನಿಖೆ ಆಗಬೇಕು ಎಂಬ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್‌ನಲ್ಲಿ ಸತ್ಯ ಹೊರಗೆ ಬರಬೇಕಾದರೆ ಎನ್‌ಐಎ (NIA) ತನಿಖೆ ಆಗಲೇಬೇಕು. ಸಿಎಂ ಹೇಳಿದ ಹಾಗೆ ತನಿಖೆ ಆಗಲೇಬೇಕು. ನಾವು ಹೇಳ್ತಿರೋದು ಎನ್‌ಐಎಯಿಂದ ತನಿಖೆ ಆಗಲಿ. ಯಾಕೆ ಎನ್‌ಐಎ ಅಂದರೆ ಕೆಲವು ಯೂಟ್ಯೂಬರ್‌ಗಳು, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಸುದ್ದಿ ಬಂತು. ಇವರಿಗೆ ಫಂಡ್ ಮಾಡಿದ್ದು ಯಾರು, ಬೇರೆ ರಾಜ್ಯದಿಂದ, ಬೇರೆ ದೇಶದಿಂದ ಫಂಡ್ ಮಾಡಿದ್ದಾರಾ ಎಂಬುದು ಗೊತ್ತಾಗಬೇಕು. ಎಸ್‌ಐಟಿ ಮೂಲಕ ಸತ್ಯ ಹೊರಬರುತ್ತೆ ಅಂತ ನಂಬಿಕೆ ಜನರಿಗೆ ಇಲ್ಲ. ಹೀಗಾಗಿ ಎನ್‌ಐಎ ತನಖೆಗೆ ಕೊಡಿ ಅಂತಿರೋದು ಎಂದು ತಿಳಿಸಿದರು. ಇದನ್ನೂ ಓದಿ: ಮುಂದಿನ ಮೂರ್ನಾಲ್ಕು ದಿನ ಬೆಂಗ್ಳೂರಿಗೆ ಮಳೆ ಅಲರ್ಟ್
ಎಡಪಂಥೀಯ ಸಂಘಟನೆ ಇದರಲ್ಲಿ ಇವೆ ಎಂದು ಚರ್ಚೆ ಆಗುತ್ತಿದೆ. ಅದಕ್ಕಾಗಿ ಎನ್‌ಐಎ ತನಿಖೆ ಆಗಬೇಕು. ಈ ವಿಷಯದಲ್ಲಿ ನಾವು ರಾಜಕೀಯ ಬೆರೆಸೋ ಪ್ರಶ್ನೆ ಇಲ್ಲ. ರಾಜಕೀಯ ಮಾಡೋಕೆ ಬೇರೆ ವಿಷಯ ಇವೆ. ಸರ್ಕಾರ ನಮಗೆ ಸಾಕಷ್ಟು ವಿಷಯ ಕೊಡುತ್ತಿದೆ. ಧಾರ್ಮಿಕ ವಿಷಯದಲ್ಲಿ ರಾಜಕೀಯ ಮಾಡೋ ಅವಶ್ಯಕತೆ ಜೆಡಿಎಸ್‌ಗೆ ಇಲ್ಲ. ಎನ್‌ಐಎ ತನಿಖೆ ಆಗಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ – ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ
ಭೋವಿ ನಿಗಮದಲ್ಲಿ ಅಕ್ರಮ (Bhovi Scam) ವಿಚಾರವಾಗಿ ಮಾತನಾಡಿದ ಅವರು, ಭೋವಿ ನಿಗಮದ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ಮಾತಾಡಬೇಕು. ಹಿಂದೆ ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಯ್ತು. ಈಗ ಭೋವಿ ನಿಗಮದಲ್ಲಿ ಅಕ್ರಮ. ಈ ಸರ್ಕಾರ ಎಸ್‌ಸಿಎಸ್‌ಪಿ ಟಿಎಸ್‌ಪಿ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದುರ್ಬಳಕೆ ಆಗುತ್ತಿದೆ. ಭೋವಿ ನಿಗಮದ ಅಧ್ಯಕ್ಷರು ಹಣಕ್ಕೆ ಡಿಮ್ಯಾಂಡ್ ಇಡುತ್ತಾರೆ. ಆ ಅಧ್ಯಕ್ಷ ಕಾಂಗ್ರೆಸ್ ಸದಸ್ಯ. ಸಿಎಂ ಅವರು ನಾವು ಹಿಂದುಳಿದವರ ಪರ, ಎಸ್‌ಸಿ-ಎಸ್ಟಿ ಜನರ ಪರ ಅಂತಾರೆ. ಆದರೆ ಎಸ್‌ಸಿ-ಎಸ್ಟಿ ಜನರಿಗೆ ಇವರು ನ್ಯಾಯ ಕೊಡೋಕೆ ಆಗಿದೆಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ – ರಾಯರೆಡ್ಡಿ ಭರವಸೆ
ವಾಲ್ಮೀಕಿ ಹಗರಣದ ಹಣ ಎಲ್ಲಿಗೆ ಹೋಯಿತು? ಇಡಿ ಕೂಡಾ ಎಂಟ್ರಿ ಆಯಿತು. ಸದನದಲ್ಲಿ ಸಿಎಂ ಅವರೇ ಅಕ್ರಮ ಒಪ್ಪಿಕೊಂಡಿದ್ದರು. ವಾಲ್ಮೀಕಿ ಆಯ್ತು, ಈಗ ಭೋವಿ ನಿಗಮ. ಸಮುದಾಯದ ಸಬಲೀಕರಣಕ್ಕೆ ಇರೋ ಹಣ ಹೀಗೆ ಅಕ್ರಮ ಆಗುತ್ತಿರೋದು ಸರಿಯಲ್ಲ. ಇವರು ಕಮೀಷನ್ ಏಜೆಂಟ್ ರೀತಿ ವರ್ತನೆ ಮಾಡುತ್ತಿದ್ದಾರೆ. ಇಷ್ಟು ದಿನ ಬೇಕಾ ಸಿಎಂ ಕ್ರಮ ತೆಗೆದುಕೊಳ್ಳೋಕೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಛತ್ತೀಸ್‌ಗಢ | ಬಲರಾಂಪುರದಲ್ಲಿ ಅಣೆಕಟ್ಟು ಕುಸಿದು ಪ್ರವಾಹ – ನಾಲ್ವರು ಸಾವು, ಮೂವರು ನಾಪತ್ತೆ
ರಾಹುಲ್ ಗಾಂಧಿ ವಿರುದ್ಧ ಮಾತನಾಡಿದ್ರು ಅಂತ ಪ್ರಭಾವಿ ನಾಯಕ ರಾಜಣ್ಣರನ್ನ ವಜಾ ಮಾಡಿದ್ರು. ವಾಲ್ಮೀಕಿ ಪ್ರಭಾವಿ ನಾಯಕನನ್ನ ಕಾಂಗ್ರೆಸ್ ವಜಾ ಮಾಡಿದರು. ವಾಸ್ತವ ಮಾತಾಡಿದ್ರೆ ವಜಾ ಮಾಡುತ್ತಾರೆ. ಕಾಂಗ್ರೆಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವವೇ ಇಲ್ಲ. ರಾಹುಲ್ ಗಾಂಧಿ ಮಾತೆತ್ತಿದರೆ ಅಂಬೇಡ್ಕರ್ ಅವರ ಸಂವಿಧಾನ ಪುಸ್ತಕ ಇಟ್ಟುಕೊಂಡು ಓಡಾಡುತ್ತಾರೆ. ಅದರ ಒಳಗೆ ಏನಿದೆ ಅಂತ ತಿಳಿದುಕೊಂಡಿದ್ದಾರಾ? ರಾಹುಲ್ ಗಾಂಧಿ, ಸಿಎಂ ಇದ್ದಕ್ಕೆ ಉತ್ತರ ಕೊಡಬೇಕು ಎಂದರು. ಇದನ್ನೂ ಓದಿ: ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮನೆ ಮಾಲೀಕರಿಗೆ ಗೈಡ್‌ಲೈನ್ಸ್ ಜಾರಿ – ಮಾರ್ಗಸೂಚಿ ಏನು?
ಅಧಿವೇಶನದಲ್ಲಿ ಜೆಡಿಎಸ್ ಮುಂದೆ ಭವಿಷ್ಯ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ಬೆಳೆದು ಬಂದ ಹಾದಿ ಮರೆತಿದ್ದಾರೆ. ಯಾರಿಂದ ಬೆಳೆದ್ರು, ಯಾರ ಜೊತೆ ಇದ್ದರು ಅವೆಲ್ಲವನ್ನು ಮರೆತಿದ್ದಾರೆ. ಸಿದ್ದರಾಮಯ್ಯ ಅವರಿಂದ ಯಾರು ಬಜೆಟ್ ಮಂಡನೆ ಮಾಡಿಸಿದ್ದು ಅಂತ ಜನರಿಗೆ ಗೊತ್ತಿದೆ. ಅವರ ಪರ ದೇವೇಗೌಡರು ನಿಂತಿದ್ದರು. ಸಿದ್ದರಾಮಯ್ಯ ಅವರನ್ನ ಡಿಸಿಎಂ ಮಾಡಿದ್ದೇ ಜೆಡಿಎಸ್, ದೇವೇಗೌಡರು ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: 2024ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕ್, ಅಫ್ಘಾನ್, ಬಾಂಗ್ಲಾದಿಂದ ಬಂದ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಉಳಿಯಲು ಅವಕಾಶ
ಸಿದ್ದರಾಮಯ್ಯ ಅವರು ಅವರಪ್ಪನಾ ಆಣೆ ಸಿಎಂ ಆಗಲ್ಲ ಅಂತ ಕುಮಾಕುಮಾರಸ್ವಾಮಿಗೆ ಅಂದರು. ಆಗ ಕುಮಾರಸ್ವಾಮಿ ಸಿಎಂ ಆದರು. ಸಿದ್ದರಾಮಯ್ಯ ಅವರು ಉದ್ಧಟತನ ಮಾತು ಆಡೋ ಅವಶ್ಯಕತೆ ಇಲ್ಲ. ನಮ್ಮ ಬಗ್ಗೆ ಮಾತಾಡೋದು ಬಿಟ್ಟು ರಾಜ್ಯದ ಜನತೆ ಪರ ಕೆಲಸ ಮಾಡಲಿ. ಜೆಡಿಎಸ್ ಭವಿಷ್ಯದ ಬಗ್ಗೆ ಸಿಎಂ, ಡಿಸಿಎಂ ಚಿಂತನೆ ಮಾಡಿ ಸಮಯ ವೇಸ್ಟ್ ಮಾಡೋದು ಬೇಡ ಎಂದು ಹರಿಹಾಯ್ದರು. ಇದನ್ನೂ ಓದಿ: ತೆಲಂಗಾಣ | ಅಮಾನತು ಬೆನ್ನಲ್ಲೇ BRS ಪಕ್ಷ ತೊರೆದ ಕೆಸಿಆರ್ ಪುತ್ರಿ ಕವಿತಾ – MLC ಸ್ಥಾನಕ್ಕೂ ರಾಜೀನಾಮೆ
– ಹಾಸನದಿಂದ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಯಾತ್ರೆ
ಹಾಸನ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಖಂಡಿಸಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸತ್ಯ ಯಾತ್ರೆ ಹೊರಟಿದ್ದಾರೆ. ಧರ್ಮಸ್ಥಳ ಚಲೋ ಬೃಹತ್ ರ‍್ಯಾಲಿಗೆ ಭಾನುವಾರ ಚಾಲನೆ ಸಿಕ್ಕಿದೆ.
ಹಾಸನದಿಂದ (Hassan) ಧರ್ಮಸ್ಥಳಕ್ಕೆ (Dharmasthala Satya Yatra) ಜೆಡಿಎಸ್ ಸತ್ಯ ಯಾತ್ರೆ ಕೈಗೊಂಡಿದೆ. ರಾಜ್ಯದ ವಿವಿಧೆಡೆಗಳಿಂದ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದಾರೆ. ರ‍್ಯಾಲಿಯಲ್ಲಿ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಎಂಎಲ್‌ಸಿಗಳು ಭಾಗಿಯಾಗಿದ್ದಾರೆ. ಕಾರುಗಳು, ಟಿಟಿ ವಾಹನ, ಬಸ್‌ಗಳಲ್ಲಿ ಕಾರ್ಯಕರ್ತರು ರ‍್ಯಾಲಿ ಹೊರಟಿದ್ದಾರೆ. ಹಾಸನ ಹೊರವಲಯದ ಕಂದಲಿ ಬಳಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹೊರಟಿದೆ. ಇದನ್ನೂ ಓದಿ: ಬುರುಡೆ ಗ್ಯಾಂಗ್‌ನ ಷಡ್ಯಂತ್ರ ರೂಪುಗೊಂಡಿದ್ದೇ ಬೆಂಗಳೂರಿನ ಲಾಡ್ಜ್‌ನಲ್ಲಿ!
ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಇಂದು ಧರ್ಮಸ್ಥಳಕ್ಕೆ ಸತ್ಯ ಯಾತ್ರೆ ಹೊರಟಿದ್ದೇವೆ. ಮಂಜುನಾಥಸ್ವಾಮಿ, ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ನೈತಿಕ ಬೆಂಬಲ ಪೋಷಿಸುತ್ತೇವೆ. ಕಳೆದ ಹಲವಾರು ದಿನಗಳಿಂದ ಅಪಪ್ರಚಾರಗಳು, ಧರ್ಮಸ್ಥಳದ ಆವರಣದ ಸುತ್ತಮುತ್ತ ಅನುಮಾನ ಎಡೆಮಾಡಿಕೊಡುವಂತಹ ಷಡ್ಯಂತ್ರ, ಹುನ್ನಾರ, ಸಂಘಟಿತ ಪಿತೂರಿ ನಡೆದಿದೆ. ಇದೆಲ್ಲದರ ವಿರುದ್ಧವಾಗಿ ಯಾತ್ರೆ. ಇದರಲ್ಲಿ ರಾಜಕೀಯವಾಗಿ ಬೆರೆಸುವ ಪ್ರಶ್ನೆ ಇಲ್ಲ. ಪಕ್ಷಾತೀತವಾಗಿ ಇವತ್ತು, ಅಸಂಖ್ಯಾತ ಭಕ್ತರ ಗಣ ದೇಶವ್ಯಾಪಿ, ಹಲವಾರು ಕಡೆಗಳಿಂದ ಆರಾಧ್ಯ ದೈವ ಮಂಜುನಾಥಸ್ವಾಮಿ, ಅಣ್ಣಪ್ಪಸ್ವಾಮಿ ಕಾಣಲು ಬರುತ್ತಿದ್ದಾರೆ ಎಂದು ತಿಳಿಸಿದರು.
ನಾನು ಬಾಲ್ಯದಿಂದಲೂ ಮಂಜುನಾಥಸ್ವಾಮಿ ಪರಮಭಕ್ತ. ಪ್ರತಿ ವರ್ಷ ನಾನು ಚಾಚುತಪ್ಪದೇ ಧರ್ಮಸ್ಥಳಕ್ಕೆ ಬರುತ್ತೇನೆ, ದೇವರ ದರ್ಶನ ಪಡೆಯುತ್ತೇನೆ. ಕಳೆದ ಹಲವಾರು ದಿನಗಳಿಂದ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾದ ಸಂಚು, ಷಡ್ಯಂತ್ರ ನಡೆಯುತ್ತಿದೆ. ದೊಡ್ಡ ಸ್ಥಾನದಲ್ಲಿರುವ ಜನಪ್ರತಿನಿಧಿಗಳು ಈ ಬಗ್ಗೆ ಮಾತನಾಡಿದ್ದಾರೆ. ಆರೋಪದ ಬಗ್ಗೆ ಅನುಮಾನ, ಶಂಕೆಗಳು ವ್ಯಕ್ತವಾಗಿವೆ. ಇದುವರೆಗೂ ಎಳ್ಳಷ್ಟು ಸತ್ಯಾಸತ್ಯತೆ ಹೊರಗೆ ಬಂದಿಲ್ಲ. ಧರ್ಮಸ್ಥಳದ ವಿರುದ್ಧ ಸಮಾಜಘಾತುಕ ಶಕ್ತಿಗಳು ಹುನ್ನಾರ ಮಾಡುತ್ತಿವೆ. ಇದೆಲ್ಲದರ ಬಗ್ಗೆ ಸಮಾಜದ ಮುಂದೆ ತನಿಖೆ ಮೂಲಕ ಸತ್ಯಾಂಶ ಹೊರಗೆ ತರಬೇಕಿದೆ. ನಮ್ಮಲ್ಲೆರ ಮೇಲೆ ಕೆಲವು ಜವಾಬ್ದಾರಿ ಇದೆ. ನಮ್ಮ ಧರ್ಮವನ್ನು ರಕ್ಷಣೆ ಮಾಡಬೇಕು ಅದು ಎಲ್ಲರ ಜವಾಬ್ದಾರಿ. ಮಂಜುನಾಥಸ್ವಾಮಿ ವಿಚಾರದಲ್ಲಿ ರಾಜಕಾರಣ ಬೆರೆಸಬಾರದು. ಬಹಳಷ್ಟು ಭಕ್ತಾಧಿಗಳು ಯಾತ್ರೆಯಲ್ಲಿ ಸ್ವಇಚ್ಛೆಯಿಂದ ಬರುತ್ತೇವೆ ಎಂದು ಹಳ್ಳಿಹಳ್ಳಿಗಳಿಂದ ಬಂದಿದ್ದಾರೆ. ಸತ್ಯದ ಪರವಾಗಿ ನಿಲ್ಲುತ್ತೇವೆ, ಧರ್ಮವನ್ನು ರಕ್ಷಣೆ ಮಾಡುತ್ತೇವೆ ಎಂದು ಪ್ರತಿಜ್ಞೆ ಮಾಡಿದರು. ಇದನ್ನೂ ಓದಿ: ಡಿಕೆಶಿ ಮನಸ್ಸಿನ ಇಚ್ಛೆ ಫಲಿಸಲಿ – ಕೃಷ್ಣ ಮಠದಲ್ಲಿ ಪುತ್ತಿಗೆ ಶ್ರೀ ಆಶೀರ್ವಾದ
ಧರ್ಮಾಧಿಕಾರಿಗಳು ಇಂದು ಇಡೀ ದಿನ ನಮಗೆ ಸಮಯ ನಿಗದಿ ಮಾಡಿದ್ದಾರೆ. ಇಂದು ದೊಡ್ಡ ಸಂಖ್ಯೆಯಲ್ಲಿ ಜನ ಬರ್ತಿದ್ದಾರೆ. ಈ ಪ್ರಕರಣದಿಂದ ಎಷ್ಟೇ ಬೇಜಾರಾದರೂ ಅತ್ಯಂತ, ತಾಳ್ಮೆಯಿಂದ ಹೃದಯ ವೈಶಾಲ್ಯತೆಯಿಂದ ವರ್ತನೆ ಮಾಡಿದ್ದಾರೆ. ಇಂದು ಧರ್ಮಾಧಿಕಾರಿಗೆ ನೈತಿಕ ಬೆಂಬಲ ಸೂಚಿಸುತ್ತೇವೆ. ಸಮಾಜಘಾತುಕ ಶಕ್ತಿಗಳು ಈ ಎಪಿಸೋಡ್‌ಗೆ ಕೈ ಹಾಕಿದ್ದಾರೆ. ಇದು ತಾರ್ತಿಕ ಅಂತ್ಯಕ್ಕೆ ತಲುಪಬೇಕು. ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು. ಯೂಟ್ಯೂಬರ್‌ಗಳಿಗೆ ಉತ್ತೇಜನ ಕೊಡುತ್ತಿದ್ದಾರೆ. ಇದರ ಹಿಂದೆ ದೊಡ್ಡಮಟ್ಟದ ಆರ್ಗನೈಸೇಷನ್ ಇದೆ. ಇದಕ್ಕೆ ಇಂಟರ್‌ನ್ಯಾಷನಲ್ ಫೈನಾನ್ಸ್ ಆಗಿದೆ. ಆದ್ದರಿಂದ ಎನ್‌ಎಐ ತನಿಖೆ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಹಾಸನ ಹೊರವಲಯದ ಕಂದಲಿ ಬಳಿಯಿಂದ ಧರ್ಮಸ್ಥಳಕ್ಕೆ ಸತ್ಯ ಯಾತ್ರೆ ಹೊರಟಿದೆ. ಸಾರಿಗೆ ಬಸ್‌ನಲ್ಲಿ ಶಾಸಕರ ಜೊತೆ ನಿಖಿಲ್ ಕುಮಾರಸ್ವಾಮಿ ಯಾತ್ರೆ ಹೊರಟಿದ್ದಾರೆ. ಶಾಸಕರಾದ ಎ.ಮಂಜು, ಹೆಚ್.ಪಿ.ಸ್ವರೂಪ್‌ಪ್ರಕಾಶ್, ಹರೀಶ್‌ಗೌಡ, ಸಿ.ಎನ್.ಬಾಲಕೃಷ್ಣ, ಕರೆಯಮ್ಮ, ಎಂ.ಟಿ.ಕೃಷ್ಣಪ್ಪ, ಸುರೇಶ್‌ಬಾಬು, ಮಾಜಿ ಶಾಸಕರು, ಎಂಎಲ್‌ಸಿಗಳು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಅವರು ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಲಿ ಎಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್‌ನಲ್ಲಿ ಏನಿದೆ?
ಶಿವಕುಮಾರಣ್ಣ, ಪ್ರಾದೇಶಿಕ ಪಕ್ಷ ಕಟ್ಟುವುದು, ಯಾರೋ ಗೆದ್ದ ಕಪ್ ಹಿಡಿದು ಮುತ್ತಿಟ್ಟು, ರೀಲ್ಸ್ ಮಾಡುವಷ್ಟು ಸುಲಭವಲ್ಲ. ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಕೂಡ ನಿಗಮ ಮಂಡಳಿಗಳಲ್ಲಿ ನಿಮ್ಮ ಕಾರ್ಯಕರ್ತರಿಗೆ ಅಧಿಕಾರ ಕೊಡುವ ಯೋಗ್ಯತೆ ಇಲ್ಲ. ಆದರೂ ನಮ್ಮ ಕಾರ್ಯಕರ್ತರನ್ನು ಪಕ್ಷಕ್ಕೆ ಕರೆಯುತ್ತಿದ್ದಾರೆ. ಇದೇ ಉತ್ಸಾಹ ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚುವ ಬಗ್ಗೆ ಇದ್ದಿದ್ದರೆ ಸ್ವಲ್ಪ ಮರ್ಯಾದೆಯಾದರೂ ಉಳಿಯುತ್ತಿತ್ತು. ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿಯ ಬಗ್ಗೆ ಗಮನ ಹರಸಿ ಎಂದು ಕಿಡಿಕಾರಿದ್ದಾರೆ.
Nikhil Kumaraswamy Tweet
ತಾಯಿ ಚಾಮುಂಡೇಶ್ವರಿಯ ಆಶೀರ್ವಾದ, ಮಾನ್ಯ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ಮತ್ತು ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾಗಿರುವ ಕುಮಾರಣ್ಣನವರ ವರ್ಚಸ್ಸಿನ ಮುಂದೆ ನಿಮ್ಮ ಮಾತುಗಳಿಗೆ ಕವಡೆಕಾಸಿನ ಕಿಮ್ಮತ್ತು ಕೊಡುವವರು ಯಾರು ಇಲ್ಲ. `ಗ್ಯಾರಂಟಿ’ ಅನುಷ್ಠಾನ ಸಮಿತಿ ಹೆಸರಿನಲ್ಲಿ, ರಾಜ್ಯದ ಜನರ ತೆರಿಗೆ ಹಣದಲ್ಲಿ `ಗೌರವ’ ಧನ ಪಡೆದು ಕೆಲಸ ಮಾಡುತ್ತಿರುವ ಗಂಜಿ ಗಿರಾಕಿ ಕಾಂಗ್ರೆಸ್ ಕಾರ್ಯಕರ್ತರ ರೀತಿಯಲ್ಲ ನಮ್ಮವರು. ಜೆಡಿಎಸ್‌ನ ಕಾರ್ಯಕರ್ತರು ನಿಷ್ಠಾವಂತರು ಎಂದು ಹೇಳಿದ್ದಾರೆ.ಇದನ್ನೂ ಓದಿ: Operation Sindoor Debate | ಹೋರಾಡಿದ್ದು ಸೇನೆ, ಕ್ರೆಡಿಟ್ ಬಯಸುತ್ತಿರೋದು ಮೋದಿ – ಪ್ರಿಯಾಂಕಾ ಗಾಂಧಿ ಕಿಡಿ