Tag: ನಿಖಿಲ್ ಸಿದ್ದಾರ್ಥ

  • ಮತ್ತೆ ಬಣ್ಣ ಹಚ್ಚಿದ ವಜ್ರಕಾಯ ಬೆಡಗಿ: ಸ್ವಯಂಭುನಲ್ಲಿ ರಾಣಿಯಾದ ನಭಾ

    ಮತ್ತೆ ಬಣ್ಣ ಹಚ್ಚಿದ ವಜ್ರಕಾಯ ಬೆಡಗಿ: ಸ್ವಯಂಭುನಲ್ಲಿ ರಾಣಿಯಾದ ನಭಾ

    ತೆಲುಗು ನಟ ನಿಖಿಲ್ ಸಿದ್ದಾರ್ಥ್ (Nikhil Siddhartha) ನಟಿಸುತ್ತಿರುವ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಸ್ವಯಂಭು (Swayambhu) ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಮೂಲಕ ವಜ್ರಕಾಯದ ಪಟಾಕ ಕಂಬ್ಯಾಕ್ ಮಾಡುತ್ತಿದ್ದಾರೆ. ಕನ್ನಡತಿ ನಭಾ ನಟೇಶ್ಗೆ (Nabha Natesh) 2023ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಸಂಪೂರ್ಣ ಚೇತರಿಕೆ ಕಂಡಿರುವ ಶೃಂಗೇರಿ ಸುಂದರಿ ಸ್ವಯಂಭು ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುತ್ತಿದ್ದಾರೆ.

    ಸ್ವಯಂಭು ಶೂಟಿಂಗ್ ಅಖಾಡಕ್ಕೆ ನಭಾ ಎಂಟ್ರಿ ಕೊಟ್ಟಿದ್ದಾರೆ. ಸಣ್ಣ ಝಲಕ್ ಮೂಲಕ ಚಿತ್ರತಂಡ ಆಕೆಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಣಿಯಂತೆ  ಕಂಗೊಳಿಸುತ್ತಿರುವ ನಭಾ ಲುಕ್ ರಿವೀಲ್ ಮಾಡಲಾಗಿದೆ. ಆದ್ರೆ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟು ಕೊಟ್ಟಿಲ್ಲ. ಶಿವಣ್ಣ ನಟನೆಯ ವಜ್ರಕಾಯ ಚಿತ್ರದ ಮೂಲಕ ಸಿನಿಮಾ ಲೋಕದಲ್ಲಿ  ಅದೃಷ್ಟ ಪರೀಕ್ಷೆಗಿಳಿದಿದ್ದ ನಭಾ, ಪೂರಿ ಜಗನ್ನಾಥ್ ನಿರ್ದೇಶನದ ಇಸ್ಮಾರ್ಟ್ ಶಂಕರ್ ಮೂಲಕ ಪ್ರಖ್ಯಾತಿ ಗಳಿಸಿದರು.

    ನಿಖಿಲ್ ನಾಯಕ ನಟನಾಗಿರುವ ಸ್ವಯಂಭು ಸಿನಿಮಾದಲ್ಲಿ ಸಂಯುಕ್ತ ಮೆನನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ತಮ್ಮ ಪಾತ್ರಕ್ಕಾಗಿ ಅವರು ತಯಾರಿಯಲ್ಲಿದ್ದಾರೆ. ಅಂದಹಾಗೇ ಭರತ್ ಕೃಷ್ಣಮಾಚಾರಿ ಸ್ವಯಂಭು ಆಕ್ಷನ್ ಕಟ್ ಹೇಳಿದ್ದಾರೆ.

    ಪಿಕ್ಸೆಲ್ ಸ್ಟುಡಿಯೋ ಮೂಲಕ ಭುವನ್ ಹಾಗೂ ಶ್ರೀಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದು, ಟ್ಯಾಗೋರೆ ಮಧು ಪ್ರಸ್ತುತಪಡಿಸುತ್ತಿದ್ದಾರೆ. ಸ್ವಯಂಭೂ ಎಂದರೆ ಸ್ವಯಂ ಹುಟ್ಟು ಎಂದರ್ಥ. ಈ ಸಿನಿಮಾ ನಿಖಿಲ್ ಸಿದ್ದಾರ್ಥ್ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರವಾಗಿದೆ. ಮನೋಜ್ ಪರಮಹಂಸ ಛಾಯಾಗ್ರಹಣ, ರವಿ ಬಸ್ರೂರ್ ಸಂಗೀತ, ವಾಸುದೇವ್ ಮುನೆಪ್ಪಗರಿ ಚಿತ್ರಕ್ಕೆ ಸಂಭಾಷಣೆಯನ್ನು ನೀಡಿದ್ದಾರೆ.

  • ತೆಲುಗು ದೇಶಂ ಪಕ್ಷ ಸೇರಿದ ನಟ ನಿಖಿಲ್ ಸಿದ್ದಾರ್ಥ

    ತೆಲುಗು ದೇಶಂ ಪಕ್ಷ ಸೇರಿದ ನಟ ನಿಖಿಲ್ ಸಿದ್ದಾರ್ಥ

    ಲೋಕಸಭಾ ಚುನಾವಣೆ (Election) ಬೆನ್ನಲ್ಲೇ ಹಲವಾರು ನಟ ನಟಿಯರು ನಾನಾ ಪಕ್ಷಗಳನ್ನು ಸೇರುತ್ತಿದ್ದಾರೆ. ತೆಲುಗಿನ ಹೆಸರಾಂತ ನಟ ನಿಖಿಲ್ ಸಿದ್ದಾರ್ಥ್ (Nikhil Siddharth) ಇಂದು ಬೆಳಗ್ಗೆ ತೆಲುಗು ದೇಶಂ ಪಕ್ಷ (TDP) ಸೇರಿದ್ದಾರೆ. ನಿಖಿಲ್ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಯಾವ ಪಕ್ಷದಿಂದ ಎನ್ನುವುದು ಸಸ್ಪೆನ್ಸ್ ಆಗಿ ಉಳಿದಿತ್ತು.

    ಬಲ್ಲ ಮೂಲಗಳ ಪ್ರಕಾರ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ನಿಖಿಲ್ ಸ್ಪರ್ಧೆ ಮಾಡುವುದಿಲ್ಲ ಎನ್ನಲಾಗುತ್ತಿದೆ. ಮುಂಬರುವ ಆಂಧ್ರದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರಂತೆ. ಅಲ್ಲದೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷದ ಸ್ಟಾರ್ ಪ್ರಚಾರಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

    ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿರುವ ನಿಖಿಲ್, ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರನ್ನು ಗುರಿಯಾಗಿರಿಸಿಕೊಂಡು ನಿಖಿಲ್ ಅವರನ್ನು ತಮ್ಮ ಪಕ್ಷಕ್ಕೆ ಎಳೆದುಕೊಂಡಿದೆ ಟಿಡಿಪಿ.

  • ನಿಖಿಲ್ ಸಿದ್ದಾರ್ಥ ಸಿನಿಮಾದಲ್ಲೂ ಕಾಣಲಿದ್ದಾನೆ ಹನುಮಾನ್

    ನಿಖಿಲ್ ಸಿದ್ದಾರ್ಥ ಸಿನಿಮಾದಲ್ಲೂ ಕಾಣಲಿದ್ದಾನೆ ಹನುಮಾನ್

    ದೇಶದಾದ್ಯಂತ ರಾಮ (Ram) ಮತ್ತು ಹನುಮನ (Hanuman) ಜಪ ಶುರುವಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ, ಚಿತ್ರೋದ್ಯಮದಲ್ಲಿ ಹನುಮಾನ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಕೋಟಿ ಕೋಟಿ ಹಣ ಬಾಚುತ್ತಿದೆ. ಈ ನಡುವೆ ನಿಖಿಲ್ ಸಿದ್ದಾರ್ಥ ನಟಿಸುತ್ತಿರುವ ಹೊಸ ಸಿನಿಮಾದಲ್ಲೂ ಹನುಮಾನ್ ಕಥೆ ಇದೆಯಂತೆ. ಹನುಮ ಭಕ್ತನೊಬ್ಬನ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲ್ಲಿದ್ದಾರಂತೆ.

    ನಿಖಿಲ್ ಸಿದ್ದಾರ್ಥ್ (Nikhil Siddharth) ನಟನೆಯ 20ನೇ ಸಿನಿಮಾ ಇದಾಗಿದ್ದು, ಈ ಚಿತ್ರಕ್ಕೆ ಸ್ವಯಂಭೂ ಎಂದು ಹೆಸರಿಡಲಾಗಿದೆ.  ಭರತ್ ಕೃಷ್ಣಮಾಚಾರಿ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾಗೆ ಸ್ವಯಂಭೂ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

    ಪಿಕ್ಸೆಲ್ ಸ್ಟುಡಿಯೋ ಮೂಲಕ ಭುವನ್ ಹಾಗೂ ಶ್ರೀಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದು, ಟ್ಯಾಗೋರೆ ಮಧು ಪ್ರಸ್ತುತಪಡಿಸುತ್ತಿದ್ದಾರೆ. ಸ್ವಯಂಭೂ (Swayambhu) ಎಂದರೆ ಸ್ವಯಂ ಹುಟ್ಟು ಎಂದರ್ಥ.  ಇನ್ನು, ಫಸ್ಟ್‌ ಲುಕ್ ಪೋಸ್ಟರ್ ನಲ್ಲಿ ನಿಖಿಲ್, ಉದ್ದವಾದ ಕೂದಲು ಬಿಟ್ಟು ಒಂದು ಕೈಯಲ್ಲಿ ಈಟಿ, ಮತ್ತೊಂದು ಕೈಯಲ್ಲಿ ಗುರಾಣಿ ಹಿಡಿದು ವೀರಯೋಧನಂತೆ ಕಾಣಿಸಿಕೊಂಡಿದ್ದಾರೆ.

    ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಸ್ವಯಂಭೂ ಸಿನಿಮಾ ನಿಖಿಲ್ ಸಿದ್ದಾರ್ಥ್ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರವಾಗಿದೆ. ಮನೋಜ್ ಪರಮಹಂಸ ಛಾಯಾಗ್ರಹಣ, ರವಿ ಬಸ್ರೂರ್ ಸಂಗೀತ, ವಾಸುದೇವ್ ಮುನೆಪ್ಪಗರಿ ಚಿತ್ರಕ್ಕೆ ಸಂಭಾಷಣೆಯನ್ನು ನೀಡಿದ್ದಾರೆ.

  • ಸುಭಾಷ್ ಚಂದ್ರಬೋಸ್ ಸಾವಿನ ರಹಸ್ಯ ಬಿಚ್ಚಿಡಲಿದೆ ‘ಸ್ಪೈ’ ಸಿನಿಮಾ

    ಸುಭಾಷ್ ಚಂದ್ರಬೋಸ್ ಸಾವಿನ ರಹಸ್ಯ ಬಿಚ್ಚಿಡಲಿದೆ ‘ಸ್ಪೈ’ ಸಿನಿಮಾ

    ಖಿಲ್ ಸಿದ್ದಾರ್ಥ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಸ್ಪೈ (Spy) ಸಿನಿಮಾ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಅದರಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ (Subhash Chandra Bose) ಬಗೆಗಿನ ಕಥೆಯೂ ಒಂದು. ಈ ಚಿತ್ರದಲ್ಲಿ ನೇತಾಜಿಯ ಸಾವಿನ ರಹಸ್ಯವನ್ನು ಬಿಚ್ಚಿಡಲಾಗಿದೆಯಂತೆ. ಇನ್ನೂ ನಿಗೂಢವಾಗಿ ಉಳಿದಿರುವ ಸುಭಾಷ್ ಚಂದ್ರಬೋಸ್ ಸಾವಿಗೆ ಕಾರಣ ಏನಿರಬಹುದು ಎನ್ನುವ ಕಥೆಯನ್ನು ಇದು ಒಳಗೊಂಡಿದೆಯಂತೆ.

    ನಿನ್ನೆಯಷ್ಟೇ ಈ ಚಿತ್ರದ ಟೀಸರ್ ದೆಹಲಿಯ ರಾಜ್ ಪಥ್ ನಲ್ಲಿರುವ ಸುಭಾಷ್ ಚಂದ್ರಬೋಸ್ ಪುತ್ಥಳಿ ಮುಂದೆ ಅನಾವರಣ ಮಾಡಲಾಗಿದೆ.  ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ ಎನ್ನಲಾದ ವಿಚಾರಗಳನ್ನು ಬೆನ್ನತ್ತುವ ಗೂಢಚಾರಿ ಪಾತ್ರದಲ್ಲಿ ನಿಖಿಲ್ ಸಿದ್ದಾರ್ಥ್ (Nikhil Siddharth) ಅಭಿನಯಿಸಿದ್ದು, ಐಶ್ವರ್ಯ ಮೆನನ್ (Aishwarya Menon) ನಾಯಕಿಯಾಗಿ, ಸನ್ಯಾ ಠಾಕೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ ಸ್ಪೈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ED ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ. ಇದನ್ನೂ ಓದಿ:ಹಾಟ್ ಅವತಾರ ತಾಳಿದ ದಿಶಾ ಪಟಾನಿ

    ಸ್ಪೈ ಸಿನಿಮಾದ ಪೋಸ್ಟರ್ ಹಾಗೂ ಗ್ಲಿಂಪ್ಸ್ ನಿರೀಕ್ಷೆ ಹೆಚ್ಚಿಸಿದ್ದು, ನಿಖಿಲ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರ್ತಿರುವ ಚಿತ್ರಕ್ಕೆ ರಾಜಶೇಖರ್ ರೆಡ್ಡಿ  ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಸಿನಿಮಾದಲ್ಲಿ‌ ನಿಖಿಲ್‌ಗೆ ಜೋಡಿಯಾಗಿ ಐಶ್ವರ್ಯ ಮೆನನ್ ನಟಿಸಿದ್ದು, ಅಭಿನವ್ ಗೋಮತಮ್, ಮಕರಂದ್ ದೇಶಪಾಂಡೆ, ನಿತಿನ್ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್, ಸೋನಿಯಾ ನರೇಶ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ.

    ಹೈ ಬಜೆಟ್‌ನಲ್ಲಿ ತಯಾರಾಗಲಿರುವ ಸ್ಪೈ ಸಿನಿಮಾಗೆ ಹಾಲಿವುಡ್ ತಂತ್ರಜ್ಞರ ಮೆರಗು ಸಿಕ್ಕಿದೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ತಯಾರಾಗಿರುವ ಸ್ಪೈ ಜೂನ್ 29ರಂದು ವರ್ಲ್ಡ್ ವೈಡ್ ರಿಲೀಸ್ ಆಗಲಿದೆ.