Tag: ನಿನಗಾಗಿ ಸೀರಿಯಲ್‌

  • ಕಿರುತೆರೆಗೆ ಎಂಟ್ರಿ ಕೊಟ್ಟ ಮಳೆ ಹುಡುಗಿ ಪೂಜಾ ಗಾಂಧಿ

    ಕಿರುತೆರೆಗೆ ಎಂಟ್ರಿ ಕೊಟ್ಟ ಮಳೆ ಹುಡುಗಿ ಪೂಜಾ ಗಾಂಧಿ

    ‘ಮುಂಗಾರು ಮಳೆ’ (Mungaru Male) ನಟಿ ಪೂಜಾ ಗಾಂಧಿ (Pooja Gandhi) ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಮತ್ತೆ ನಟನೆಗೆ ಮರಳಿದ್ದಾರೆ. ‘ನಿನಗಾಗಿ’ ಎನ್ನುತ್ತಾ ಪೂಜಾ ಗಾಂಧಿ ಟಿವಿ ಪರದೆಗೆ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:‘ನೈಸ್ ರೋಡ್’ನಲ್ಲಿ ಕಾಣಿಸಿಕೊಂಡ ಧರ್ಮ : ಟ್ರೈಲರ್ ರಿಲೀಸ್

    ಸಿನಿಮಾ ನಟಿಯ ಕಥೆ ಹೊಂದಿರುವ ‘ನಿನಗಾಗಿ’ ಸೀರಿಯಲ್‌ನಲ್ಲಿ ಸೂಪರ್ ಸ್ಟಾರ್ ರಚನಾ ಎಂಬ ಪಾತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ (Divya Uruduga) ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಕಿಶನ್‌ ಬಿಳಗಲಿ ಕೂಡ ನಟಿಸುತ್ತಿದ್ದಾರೆ.  ಸಾಕಷ್ಟು ತಿರುವು ಪಡೆದು ಮುನ್ನುಗ್ಗುತ್ತಿರುವ ಈ ಸೀರಿಯಲ್‌ಗೆ ಪೂಜಾ ಗಾಂಧಿ ವಿಶೇಷ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ.

    ಸದ್ಯ ಪೂಜಾ ಗಾಂಧಿ ಜೊತೆಗಿನ ಸುಂದರ ಫೋಟೋಗಳನ್ನು ದಿವ್ಯಾ ಉರುಡುಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಮುದ್ದು ಕನ್ನಡತಿ’ ಎಂದು ದಿವ್ಯಾ ಕ್ಯಾಪ್ಷನ್ ನೀಡಿದ್ದಾರೆ. ಈ ಸೀರಿಯಲ್‌ನಲ್ಲಿ ನಟಿಸುತ್ತಿರುವ ಸಹಕಲಾವಿದರು ಕೂಡ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ. ಈ ಪೋಸ್ಟ್‌ ನೋಡಿ ಬಳಿಕ ಎಪಿಸೋಡ್‌ ನೋಡಲು ಕಾತರದಿಂದ ಕಾಯ್ತಿದ್ದಾರೆ ಅಭಿಮಾನಿಗಳು.

    ಅಂದಹಾಗೆ, ಮುಂಗಾರು ಮಳೆ, ಮಿಲನಾ, ಕೃಷ್ಣ, ಅನು, ತಾಜ್‌ಮಹಲ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೂಜಾ ಗಾಂಧಿ ನಟಿಸಿದ್ದಾರೆ. ‘ಬಿಗ್‌ ಬಾಸ್‌ ಸೀಸನ್‌ 3’ರಲ್ಲಿ (Bigg Boss Kannada) ಪೂಜಾ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು.

  • ‘ನಿನಗಾಗಿ’ ಎನ್ನುತ್ತಾ ದಿವ್ಯಾ ಉರುಡುಗ ಹಿಂದೆ ಬಿದ್ದ ಕಿಶನ್ ಬಿಳಗಲಿ

    ‘ನಿನಗಾಗಿ’ ಎನ್ನುತ್ತಾ ದಿವ್ಯಾ ಉರುಡುಗ ಹಿಂದೆ ಬಿದ್ದ ಕಿಶನ್ ಬಿಳಗಲಿ

    ನ್ನಡ ಕಿರುತೆರೆ ಅತೀ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ 7’ರ (Bigg Boss Kannada 7) ಮೂಲಕ ಗಮನ ಸೆಳೆದ ಕಿಶನ್ ಬಿಳಗಲಿ (Kishen Bilagali) ಮತ್ತೆ ಟಿವಿ ಪರದೆಗೆ ಮರಳಿದ್ದಾರೆ. ‘ನಿನಗಾಗಿ’ ಎನ್ನುತ್ತಾ ದಿವ್ಯಾ ಉರುಡುಗ ಹಿಂದೆ ಬಿದ್ದಿದ್ದಾರೆ ಕಿಶನ್.‌ ಇದನ್ನೂ ಓದಿ:ನಮ್ಮ ಚಟ ಚಟ್ಟ ಹತ್ತಿಸುವವರೆಗೂ ಇರಬಾರದು- ದರ್ಶನ್‌ಗೆ ಉಮಾಪತಿ ಟಾಂಗ್

    ದಿವ್ಯಾ ಉರುಡುಗ (Divya Uruduga) ಪ್ರಸ್ತುತ ‘ನಿನಗಾಗಿ’ ಸೀರಿಯಲ್‌ನಲ್ಲಿ ಸೂಪರ್ ಸ್ಟಾರ್ ನಾಯಕಿ ಆಗಿ ರಚನಾ ಎಂಬ ಪಾತ್ರ ಮಾಡುತ್ತಿದ್ದಾರೆ. ಈ ಸೀರಿಯಲ್‌ಗೆ ಕಿಶನ್ ಎಂಟ್ರಿ ಕೊಟ್ಟಿದ್ದಾರೆ. ಬಹುಮುಖ್ಯ ಪಾತ್ರಕ್ಕೆ ಬಣ್ಣಹಚ್ಚಿದ್ದಾರೆ. ‘ನಿನಗಾಗಿ’ ಎನ್ನತ್ತಾ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ.

    ಸದಾ ಒಂದಲ್ಲಾ ಒಂದು ವಿಭಿನ್ನವಾಗಿ ರೀಲ್ಸ್ ಮಾಡುವ ಮೂಲಕ ಗಮನ ಸೆಳೆದಿರುವ ಕಿಶನ್ ಈಗ ಕಿರುತೆರೆ ಎಂಟ್ರಿ ಕೊಟ್ಟಿರೋದು ಸಹಜವಾಗಿ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಕಥೆಯಲ್ಲಿ ಮುಂದೆ ಏನೆಲ್ಲಾ ತಿರುವು ಸಿಗಲಿದೆ ಎಂದು ನೋಡೋದಕ್ಕೆ ಕಾತರದಿಂದ ಪ್ರೇಕ್ಷಕರು ಕಾಯ್ತಿದ್ದಾರೆ. ಇದನ್ನೂ ಓದಿ:ಸಮರ್ಜಿತ್‌ ಲಂಕೇಶ್‌, ಸಾನ್ಯಾ ನಟನೆಯ ‘ಗೌರಿ’ ಸಿನಿಮಾ ರಿಲೀಸ್‌ ಆಗೋದು ಯಾವಾಗ?

    ಕನ್ನಡ ಕಿರುತೆರೆ ಮಾತ್ರವಲ್ಲ, ಹಿಂದಿ ರಿಯಾಲಿಟಿ ಶೋ ಮತ್ತು ಆಲ್ಬಂ ಸಾಂಗ್‌ಗಳ ಮೂಲಕ ಕಿಶನ್ ಸೈ ಎನಿಸಿಕೊಂಡಿದ್ದಾರೆ.