Tag: ನಿಫಾ

  • ಕೇರಳದಲ್ಲಿ ನಿಫಾ ವೈರಸ್ – ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ

    ಕೇರಳದಲ್ಲಿ ನಿಫಾ ವೈರಸ್ – ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ

    ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ (Kerala) ನಿಫಾ ವೈರಸ್‌ನಿಂದಾಗಿ (Nipah Virus) ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ (Karnataka) ರೋಗದ ಭೀತಿ ಹುಟ್ಟಿಕೊಂಡಿದ್ದು, ಅದು ಹರಡದಂತೆ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಕರ್ನಾಟಕದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

    ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
    1. ನಿಫಾ ವೈರಸ್ ನಿಂದ ಉಂಟಾಗಬಹುದಾದ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕೇರಳ ಗಡಿ ಪ್ರದೇಶಗಳಲ್ಲಿ ಎಚ್ಚರಿಕೆ ಮತ್ತು ಜಾಗರೂಕತೆ ಕ್ರಮವಹಿಸುವಂತೆ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಾಸ ಸೌಧ ಬೆಂಗಳೂರು ಇವರಿಗೆ ಸೂಚಿಸಿದೆ.

    2. ನಿಫಾ ವೈರಸ್ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಭೆಯನ್ನು ನಡೆಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕೋಝಿಕ್ಕೋಡ್‌ನಲ್ಲಿ ಮೃತಪಟ್ಟ ವ್ಯಕ್ತಿಗೆ ನಿಫಾ ವೈರಸ್‌ ದೃಢ

    3. ದಕ್ಷಿಣ ಕನ್ನಡದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳು ನಿಫಾ ಶಂಕಿತ ಪಕರಣಗಳನ್ನು ದಾಖಲಿಸಿಕೊಂಡು, ಕೂಡಲೇ ಜಿಲ್ಲಾ ಕಾವಲು ಕಛೇರಿ/ಘಟಕಕ್ಕೆ ತಿಳಿಸಬೇಕು.

    4. ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು ಮತ್ತು ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ನಿಫಾ ವೈರಸ್ ನಿರ್ವಹಣೆಗಾಗಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಅನ್ನು ಕಾಯ್ದಿರಿಸುವಂತೆ ಹಾಗೂ ಆಮ್ಲಜನಕ ಮತ್ತು ಇತರ ಅಗತ್ಯ ಔಷಧಿಗಳನ್ನೊಳಗೊಂಡಂತೆ ಎಲ್ಲಾ ಪಿಎಚ್ ವೈದ್ಯಾಧಿಕಾರಿಗಳಿಗೆ ಜ್ವರದ ಕಣಾವಲು ಘಟಕಗಳನ್ನು ಬಲಪಡಿಸಲು ಸೂಚಿಸಿದೆ. ಅಲ್ಲದೆ ಅಗತ್ಯವಿರುವ ಔಷಧಿಗಳನ್ನು ಶೇಖರಿಸಿಟ್ಟುಕೊಳ್ಳಲು ಮತ್ತು ನಿಫಾ ರೋಗಲಕ್ಷಣಗಳಿಗೆ ಕ್ಷೇತ್ರ ಸಿಬ್ಬಂದಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡಬೇಕು.

    5. ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳಲ್ಲಿ ವರದಿಯಾಗಿರುವ ಯಾವುದೇ ಶಂಕಿತ ಪುಕರಣಗಳ ಮಾದರಿಗಯನ್ನು ಪುಣೆಯಲ್ಲಿನ ಎನ್‌ಐವಿ ಪುಯೋಗಾಲಯಕ್ಕೆ ಕಳುಹಿಸಲು ವ್ಯವಸ್ಥೆ ಮಾಡಬೇಕು.

    6. ಸಾರ್ಜನಿಕರಿಗೆ ಈ ಬಗ್ಗೆ ತಿಳುವಳಿಕೆ ನೀಡಲು, ಅರಿವು ಮೂಡಿಸಲು, ಜಾಗೃತವಹಿಸಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೀನಾದಲ್ಲಿ ಮತ್ತೊಂದು ಮಾರಕ ವೈರಸ್ ಪತ್ತೆ – ಶೇ.40 ರಿಂದ 70ರಷ್ಟು ಮರಣ ಸಾಧ್ಯತೆ

    ಚೀನಾದಲ್ಲಿ ಮತ್ತೊಂದು ಮಾರಕ ವೈರಸ್ ಪತ್ತೆ – ಶೇ.40 ರಿಂದ 70ರಷ್ಟು ಮರಣ ಸಾಧ್ಯತೆ

    ಬೀಜಿಂಗ್: ಕೊರೊನಾದಿಂದ ಜಗತ್ತು ಇನ್ನೂ ಸಂಪೂರ್ಣವಾಗಿ ಮುಕ್ತವಾಗಿಲ್ಲ. ಇಂತಹ ಸಂದರ್ಭದಲ್ಲಿಯೇ ಚೀನಾದಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆ ಆಗಿದ್ದು, ಆತಂಕಕ್ಕೆ ಕಾರಣವಾಗಿದೆ.

    ಚೀನಾದಲ್ಲಿ ಪ್ರಾಣಿಗಳಿಂದ ಮತ್ತೊಂದು ವೈರಸ್ ಮನುಷ್ಯರಿಗೆ ಸೋಕಿದೆ. ಪ್ರಾಣಿಗಳಿಂದ ವ್ಯಾಪಿಸುವ ಲಾಂಗ್ಯ ಹೆನಿಪಾ ವೈರಸ್ 35ಕ್ಕೂ ಹೆಚ್ಚು ಮಂದಿಯಲ್ಲಿ ಪತ್ತೆ ಆಗಿದೆ. ಲಾಂಗ್ಯ ಹೆನಿಪಾ ವೈರಸನ್ನು ಬಯೋಸೇಫ್ಟಿ ಲೆವೆಲ್-4 ವೈರಸ್ ಎಂದು ಚೀನಾದ ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತ ರಾಹುಲ್ ಭಟ್‌ನನ್ನು ಕೊಂದಿದ್ದ ಭಯೋತ್ಪಾದಕನ ಎನ್‌ಕೌಂಟರ್

    ಇದು ಮನುಷ್ಯರಲ್ಲಿ, ಪ್ರಾಣಿಗಳಲ್ಲಿ ತೀವ್ರ ಸ್ವರೂಪದ ಅನಾರೋಗ್ಯ ಉಂಟು ಮಾಡುತ್ತದೆ ಎಂದು ಎಚ್ಚರಿಸಿದೆ. ಮರಣ ಸಾಧ್ಯತೆ ಶೇಕಡಾ 40 ರಿಂದ 75ರಷ್ಟಿದೆ ಎಂದು ಹೇಳಿದೆ. ಅಂದ ಹಾಗೇ ಲಾಂಗ್ಯ ಹೆನಿಪಾ ವೈರಸ್ ವ್ಯಾಪ್ತಿ ನಿವಾರಣೆಗೆ ಯಾವುದೇ ಔಷಧಿ ಇಲ್ಲ. ಕೇವಲ ರೋಗ ಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ಲಭ್ಯವಿದೆ ಎಂದಿದೆ. ಇದನ್ನೂ ಓದಿ: ಮೋದಿ ಗೆದ್ದಿರೋದು 2024ರಲ್ಲಿ ಅಲ್ಲ, ಮೈತ್ರಿ ಮುರಿದ ಬಳಿಕ ಸಿಎಂ ನಿತೀಶ್ ವಾಗ್ದಾಳಿ

    ಏನಿದು ಲಾಂಗ್ಯ ಹೆನಿಪಾ ವೈರಸ್?
    ಇದು ಬಾವಲಿಯಿಂದ ಹಬ್ಬುವ ನಿಫಾ ವೈರಸ್ ತಳಿಗೆ ಸೇರಿದ್ದು, ನಿಫಾ, ಕೋವಿಡ್ ವೈರಸ್ ಮಾದರಿಯಲ್ಲಿ ಹಬ್ಬುವ ಸಾಮರ್ಥ್ಯ ಹೊಂದಿದೆ. ಮೇಕೆ, ನಾಯಿಗಳಲ್ಲಿಯೂ ಲಾಂಗ್ಯ ಹೆನಿಪಾ ವೈರಸ್ ಪತ್ತೆಯಾಗಿದೆ. 2019ರಲ್ಲಿ ಮೊದಲ ಬಾರಿಗೆ ಮನುಷ್ಯರಲ್ಲಿ ಪತ್ತೆಯಾಗಿತ್ತು. 2020ರ ಜುಲೈ ನಂತರ 11, ಲಾಂಗ್ಯ ವೈರಸ್ ತಳಿ ಪತ್ತೆಯಾಗಿತ್ತು. ಪ್ರಸಕ್ತ ವರ್ಷದಲ್ಲಿ ಸೋಂಕಿನ ಹೆಚ್ಚು ಕೇಸ್ ನಮೂದಾಗಿದೆ. ಜ್ವರ, ಕೆಮ್ಮು, ವಾಂತಿ, ಸುಸ್ತು, ಸ್ನಾಯು ನೋವು, ಪ್ಲೇಟ್‌ಲೆಟ್ಸ್ ಸಂಖ್ಯೆ ಕುಸಿತ, ಹಸಿವು ಇಲ್ಲದಿರುವಿಕೆಯ ಲಕ್ಷಣಗಳನ್ನು ಒಳಗೊಂಡಿದೆ. ಸೋಂಕಿನ ಅಪಾಯದ ಹಾನಿ, ತೀವ್ರತೆ ಬಗ್ಗೆ ಸಂಶೋಧನೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ನಿಫಾ ತಡೆಯಲು ಮುನ್ನೆಚ್ಚೆರಿಕೆ ವಹಿಸೋಣ, ಸೋಂಕು ತಡೆಯೋಣ ನಾಣ್ಣುಡಿಯೊಂದಿದೆ ಗಡಿಯಲ್ಲಿ ಜಾಗೃತಿ

    ನಿಫಾ ತಡೆಯಲು ಮುನ್ನೆಚ್ಚೆರಿಕೆ ವಹಿಸೋಣ, ಸೋಂಕು ತಡೆಯೋಣ ನಾಣ್ಣುಡಿಯೊಂದಿದೆ ಗಡಿಯಲ್ಲಿ ಜಾಗೃತಿ

    ಚಾಮರಾಜನಗರ: ಗಡಿಭಾಗಗಳಲ್ಲಿ ನಿಫಾ ಕಾಣಿಸಿಕೊಳ್ಳುವ ಶಂಕೆ ಬಂದಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕೆ ವಹಿಸೋಣ, ಸೋಂಕು ತಡೆಯೋಣ ನಾಣ್ಣುಡಿಯೊಂದಿದೆ ಗಡಿಭಾಗದ ಜನರಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ.

    ಕೊರೊನಾ ಮುನ್ನೆಚ್ಚರಿಕೆಯ ಕ್ರಮವಾಗಿ ಮೂಲೆ ಹೊಳೆ ಚೆಕ್ ಪೋಸ್ಟ್ ಗೆ ಡಿಎಚ್‍ಒ ಡಾ.ವಿಶ್ವೇಶ್ವರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಮಾತನಾಡಿದ ಅವರು, ಕೇರಳದಲ್ಲಿ ಕೊರೊನಾ ಮತ್ತು ನಿಫಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸೋಣ ಮತ್ತು ಸೋಂಕು ತಡೆಯೋಣ ಎಂಬ ನಾಣ್ಣುಡಿಯೊಂದಿಗೆ ಜಾಗೃತಿ ಅಭಿಯಾನ ನಡೆಸುವುದಾಗಿ ಹೇಳಿದರು. ಇದನ್ನೂ ಓದಿ: ಊಸರವಳ್ಳಿಯಂತೆ ಬಣ್ಣ ಬದಲಾಗುವ ಚರ್ಮ ಮನುಷ್ಯನಿಗೂ ಬಂತು

    ಕೇರಳದಲ್ಲಿ ನಿಫಾ ವೈರಸ್ ಹಿನ್ನೆಲೆಯಲ್ಲಿ ಚಾಮರಾಜನಗರ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗಡಿಯಂಚಿನಲ್ಲಿರುವ ಮೂಲೆ ಹೊಳೆ ಚೆಕ್ ಪೋಸ್ಟ್ ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದ ಏಕೈಕ ಸ್ವರ್ಣ ಗೌರಿ ದೇವಾಲಯದಲ್ಲಿಲ್ಲ ಪೂಜೆ, ಪುನಸ್ಕಾರ

    ವಿಶ್ವೇಶ್ವರಯ್ಯ ಅವರು ವಾಹನ ಚಾಲಕರು ಹಾಗೂ ಪ್ರಯಾಣಿಕರನ್ನು ಖುದ್ದು ತಪಾಸಣೆ ನಡೆಸಿದ್ದಾರೆ. ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಕೊರೊನಾ ಸಂಬಂಧ ಆರ್‍ಟಿಪಿಸಿಆರ್ ಟೆಸ್ಟ್ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ಪ್ರವೇಶ ನೀಡಬೇಕು. ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಎಂದು ಚೆಕ್ ಪೋಸ್ಟ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಯೊಬ್ಬರ ಮೇಲೂ ಹದ್ದಿನ ಕಣ್ಣಿಡಲಾಗಿದೆ. ಗಡಿಯಂಚಿನ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಜನರಲ್ಲಿ ರೋಗ ಲಕ್ಷಣ ಕಂಡು ಬಂದರೆ ತಕ್ಷಣ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಪ್ರಾಣಿಗಳು ಕಚ್ಚಿ ತಿಂದಿರುವ ಹಣ್ಣನ್ನು ಯಾರು ತಿನ್ನಬಾರದು. ಸಿಪ್ಪೆ ತೆಗೆದು ಚೆನ್ನಾಗಿ ತೊಳೆದು ತಿನ್ನಬೇಕು. ಬಾವಲಿಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಜನರು ನೀರನ್ನು ಕಾಯಿಸಿ ಕುಡಿಯಬೇಕು ಎಂದು ಜನರಿಗೆ ಮತ್ತು ಸಿಬ್ಬಂದಿಗೆ ಸೂಚನೆ ಕೊಟ್ಟಿದ್ದಾರೆ.

  • ರಾಜ್ಯದಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿಲ್ಲ: ಸುಧಾಕರ್

    ರಾಜ್ಯದಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿಲ್ಲ: ಸುಧಾಕರ್

    ಬೆಂಗಳೂರು: ನಮ್ಮ ರಾಜ್ಯದಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿಲ್ಲ. ನಿಫಾ ಸೋಂಕಿಗೆ ಲಸಿಕೆಯೂ ಇಲ್ಲ, ಚಿಕಿತ್ಸೆಯೂ ಇಲ್ಲ. ರೋಗದ ಲಕ್ಷಣಗಳನ್ನು ಆಧಾರಿಸಿ ಚಿಕಿತ್ಸೆ ಕೊಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

    ಕೇರಳದಲ್ಲಿ ನಿಫಾಗೆ ಮಗುವೊಂದು ಮೃತಪಟ್ಟಿದ್ದು, ಅಲ್ಲಿನ ಸರ್ಕಾರ ಸೋಂಕಿತರ ಮೇಲೆ ತೀವ್ರ ನಿಗಾ ಇಟ್ಟಿದೆ. ಕೇರಳ ಸರ್ಕಾರ ನಿಫಾ ತಡೆಗೆ ಕೈಗೊಂಡ ಕ್ರಮಗಳು ನಮಗೆ ಸಮಾಧಾನ ತಂದಿದೆ ಎಂದರು. ಇದನ್ನೂ ಓದಿ: ಜಮೀರ್ ಕೂಡ  ತಾಲಿಬಾನ್ ಥರಾ: ಸೊಗಡು ಶಿವಣ್ಣ

    ಕೇರದಲ್ಲಿ ಮೂರನೇ ಸಲ ನಿಫಾ ಬಂದಿದ್ದು, ಕೇರಳದಲ್ಲಿ ಕಾಡು ಹೆಚ್ಚಿರೋದ್ರಿಂದ ಸೋಂಕು ಕಾಣಿಸಿಕೊಂಡಿರಬಹುದು. ಪ್ರಾಣಿಗಳು ತಿಂದು ಬಿಟ್ಟ ಹಣ್ಣನ್ನು ಮನುಷ್ಯ ತಿಂದರೆ ನಿಫಾ ಬರುತ್ತದೆ ಎಂದು ಸುಧಾಕರ್ ತಿಳಿಸಿದರು.

    ನಿಫಾ ಕುರಿತು ರಾಜ್ಯದ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನಷ್ಟು ಗಂಭೀರ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಿಫಾ ಬಗ್ಗೆ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ಮಾಡುತ್ತೇನೆ. ರಾಜ್ಯದಲ್ಲಿ ನಿಫಾ ಬರದಂತೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು  ಇದನ್ನೂ ಓದಿ: ಖಾಸಗಿ ಬಸ್‍ಗಳಲ್ಲಿ ಪ್ರಯಾಣಿಕರ ಸುಲಿಗೆ – ಹಬ್ಬದ ಸೀಸನ್‍ನಲ್ಲಿ ಸಾರಿಗೆ ದಂಧೆ ಬಯಲು

    ಗಣೇಶೋತ್ಸವಕ್ಕೆ ಬಿಬಿಎಂಪಿ ಮೂರು ದಿನದ ನಿಯಮ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಧಾಕರ್, ನಿಯಮದ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಪಡೆದು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

    1-5 ನೇ ತರಗತಿಗಳ ಶಾಲೆ ಆರಂಭ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಈಗಷ್ಟೇ 6-8 ತರಗತಿಗಳು ಆರಂಭವಾಗಿವೆ. ಎಷ್ಟೋ ಪೋಷಕರು ಇನ್ನೂ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಿಲ್ಲ. ಇನ್ನೂ ಸ್ವಲ್ಪ ಸಮಯ ಕಾದು ನೋಡೋಣ ಎಂದರು.

  • ಕೊರೊನಾ ಬೆನ್ನಲ್ಲೇ 11 ಮಂದಿಯಲ್ಲಿ ನಿಫಾ ರೋಗ ಲಕ್ಷಣ- 3 ಜಿಲ್ಲೆಗಳಲ್ಲಿ ಹೈ ಅಲರ್ಟ್

    ಕೊರೊನಾ ಬೆನ್ನಲ್ಲೇ 11 ಮಂದಿಯಲ್ಲಿ ನಿಫಾ ರೋಗ ಲಕ್ಷಣ- 3 ಜಿಲ್ಲೆಗಳಲ್ಲಿ ಹೈ ಅಲರ್ಟ್

    – ಅಗತ್ಯ ಕ್ರಮಕ್ಕೆ ಕೇಂದ್ರ ಸೂಚನೆ
    – ವೈರಸ್ ಹರಡುವುದು ಹೇಗೆ..?
    – ರೋಗದ ಲಕ್ಷಣಗಳೇನು..?

    ತಿರುವನಂತಪುರಂ: ಮಹಾಮಾರಿ ಕೊರೊನಾ ವೈರಸ್ ಬೆನ್ನಲ್ಲೇ ಇದೀಗ 11 ಜನರಲ್ಲಿ ನಿಫಾ ರೋಗ ಲಕ್ಷಣ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿಗೆ ಹೊಂದಿಕೊಂಡಿರೋ ಎರಡು ಜಿಲ್ಲೆ ಸೇರಿ 3 ಜಿಲ್ಲೆಗಳಲ್ಲಿ ಹೈ ಅಲರ್ಟ್‍ಗೆ ಕೇಂದ್ರ ಸೂಚನೆ ನೀಡಿದೆ.

    ಕೇರಳದಲ್ಲಿ ನಿಫಾ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೇರಳ ಸರ್ಕಾರಕ್ಕೆ ಪತ್ರ ಬರೆದಿದೆ. ವೈರಸ್‍ಗೆ ಬಲಿಯಾದ 12 ವರ್ಷದ ಬಾಲಕನ ಮನೆಗೆ ಕೇಂದ್ರ ತಂಡ ಭೇಟಿ ನೀಡಿದೆ. ಈ ತಂಡ ನೀಡಿದ ವರದಿ ಆಧರಿಸಿ ಅಗತ್ಯವಾಗಿರುವ ಮುನ್ನೆಚ್ಚರಿಕೆ ವಹಿಸುವಂತೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.

    ಕೋಝಿಕ್ಕೋಡ್ ಜಿಲ್ಲೆಯಲ್ಲಿ 12 ವರ್ಷದ ಬಾಲಕ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಈ ಜಿಲ್ಲೆಯ ಗಡಿಯಲ್ಲಿರುವ ವಯನಾಡು, ಕಣ್ಣೂರು, ಮಲಪ್ಪುರಂ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಪ್ರಾಥಮಿಕ, ಎರಡನೇ ಹಂತದ ಸಂಪರ್ಕ ಪತ್ತೆ ಹಚ್ಚಿ. ಹೈ ರಿಸ್ಕ್, ಲೋ ರಿಸ್ಕ್ ಎಂದು ಎರಡು ವಿಭಾಗ ಮಾಡಲು ಸೂಚನೆ ನೀಡಿದೆ. {ವಯನಾಡು (ಚಾಮರಾಜನಗರ, ಮೈಸೂರು) ಹಾಗೂ ಕಣ್ಣೂರು (ಕೊಡಗು) ಜಿಲ್ಲೆಗೆ ಹೊಂದಿಕೊಂಡಿವೆ}.

    1 ಪ್ರಕರಣ – 251 ಸಂಪರ್ಕಿತರು, 54 ಹೈರಿಸ್ಕ್ ಸಂಪರ್ಕ ಹೊಂದಿದ್ದಾರೆ. ನಿಫಾ ರೋಗ ಲಕ್ಷಣ 11 ಮಂದಿಯಲ್ಲಿ ಕಾಣಿಸಿದೆ. ನಿಫಾದಿಂದ ಸಾವನ್ನಪ್ಪಿದ 12 ವರ್ಷದ ಬಾಲಕನ ಒಟ್ಟು 251 ಕಾಂಟ್ಯಾಕ್ಟ್‍ಗಳು ಪತ್ತೆಯಾಗಿವೆ. ಇವರಲ್ಲಿ 54 ಹೈರಿಸ್ಕ್ ಸಂಪರ್ಕ ಪತ್ತೆಯಾಗಿದೆ. ಹೈರಿಸ್ಕ್ 54 ಮಂದಿಯಲ್ಲಿ 30 ಆರೋಗ್ಯ ಸಿಬ್ಬಂದಿ, 39 ಸಂಪರ್ಕಿತರು ಆಸ್ಪತ್ರೆ ಐಸೋಲೇಷನ್ ವಾರ್ಡಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 11 ಮಂದಿಯಲ್ಲಿ ನಿಫಾ ರೋಗ ಲಕ್ಷಣ ಕಾಣಿಸಿಕೊಂಡಿದೆ.

    ನಿಫಾ ರೋಗ ಕಾಣಿಸಿಕೊಂಡಿರುವ 8 ಮಂದಿಯ ಸ್ಯಾಂಪಲ್ ಫೈನಲ್ ಪರಿಶೋಧನೆಗಾಗಿ ಪುಣೆ ಎನ್.ಐ.ವಿ.ಗೆ ರವಾನೆ ಮಾಡಲಾಗಿದೆ. 251ರಲ್ಲಿ 129 ಮಂದಿ ಆರೋಗ್ಯ ಇಲಾಖೆ ಸಿಬ್ಬಂದಿಯಾಗಿದ್ದಾರೆ. ಸದ್ಯ ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಇಂದಿನಿಂದ ಕೋಝಿಕ್ಕೋಡ್ ಮೆಡಿಕಲ್ ಕಾಲೇಜಲ್ಲೇ ಟೆಸ್ಟ್ ಮಾಡಲಾಗುತ್ತದೆ. ಪುಣೆ NIV ಯಿಂದ ತಜ್ಞರ ತಂಡ ಆಗಮನವಾಗಿದೆ. ಇದನ್ನೂ ಓದಿ: ‘ಬಾವಲಿ ಜ್ವರ’ಕ್ಕೆ ಕೇರಳದಲ್ಲಿ 10 ಸಾವು – ರೋಗ ಲಕ್ಷಣ ಏನು, ತಡೆಗಟ್ಟೋದು ಹೇಗೆ?

    ಇದುವರೆಗೆ ಸ್ಯಾಂಪಲ್‍ಗಳನ್ನು ಪುಣೆಗೆ ಕಳಿಸುತ್ತಿದ್ದರು. ಈಗಾಗಲೇ 8 ಜನರ ಸ್ಯಾಂಪಲ್ ಪುಣೆ ತಲುಪಿದೆ. ಇನ್ನುಳಿದ ಮೂವರ ಸ್ಯಾಂಪಲ್ ಕೋಝಿಕ್ಕೋಡ್ ನಲ್ಲೇ ಪರಿಶೋಧನೆ ಮಾಡಲಾಗಿದೆ. ಈಗಾಗಲೇ ಸ್ಯಾಂಪಲ್ ಟೆಸ್ಟ್‌ಗೆ ಬೇಕಾದ ಸಿದ್ಧತೆ ಪೂರ್ಣಗೊಳಿಸಿರುವ ಪುಣೆ ಟೀಂ ಮಾಡಿಕೊಂಡಿದೆ. ಪಾಯಿಂಟ್ ಆಫ್ ಕೇರ್ ಟೆಸ್ಟ್ ಹಾಗೂ RTPCR ಟೆಸ್ಟ್ NIV ಟೀಂ ನಡೆಸಲಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.

    ನಿಫಾ ವೈರಸ್ ಬಂದು ಕೋವಿಡ್ ವ್ಯಾಕ್ಸಿನ್ ಹಾಕುತ್ತಿಲ್ಲ. ಎರಡು ದಿನ ಕೋವಿಡ್ ವ್ಯಾಕ್ಸಿನೇಷನ್ ಸಂಪೂರ್ಣ ಸ್ಥಗಿತವಾಗಿದೆ. ಕೋಝಿಕ್ಕೋಡ್ ತಾಲೂಕಿನಾದ್ಯಂತ ಎರಡು ದಿನ ವ್ಯಾಕ್ಸಿನ್ ನೀಡದಿರಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ.

    ಅಗತ್ಯ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ:
    ಆ್ಯಂಟಿಬಾಡಿ ಔಷಧಿ ರಿಬಾವೈರಿನ್ ಹಾಗೂ ಪಿಪಿಇ ಕಿಟ್‍ಗಳ ಸ್ಟಾಕ್ ಇಟ್ಟುಕೊಳ್ಳಲು ಸೂಚನೆ ನೀಡಲಾಗಿದೆ. ಕೋಝಿಕ್ಕೋಡ್ ಸರ್ಕಾರಿ ಮೆಡಿಕಲ್ ಕಾಲೇಜನ್ನು ಚಿಕಿತ್ಸಾ ಕೇಂದ್ರವನ್ನಾಗಿ ಮಾಡಿ. ಅಂಬುಲೆನ್ಸ್ ಹಾಗೂ ತರಬೇತಿ ಮುಗಿಸಿದ ನುರಿತ ಸಿಬ್ಬಂದಿಯನ್ನು ಸಿದ್ಧವಾಗಿಟ್ಟುಕೊಳ್ಳಿ ಎಂದು ಈಗಾಗಲೇ ಸೂಚನೆ ನೀಡಲಾಗಿದೆ.

    ನಿಫಾ ವೈರಸ್ ಎಂದರೇನು?
    1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಪ್ಪಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

    ವೈರಸ್ ಹೇಗೆ ಹರಡುತ್ತದೆ..?
    ಬಾವಲಿಗಳಿಂದ ಪ್ರಾಣಿಗಳಿಗೆ, ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ. ಅಲ್ಲದೆ ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. (ಬಾವಲಿಗಳು ಕಚ್ಚಿದ ಹಣ್ಣನ್ನು ತಿನ್ನುವುದರಿಂದ). ಪ್ರಾಣಿಗಳಿಂದ ಮನುಷ್ಯರಿಗೆ ಹಾಗೂ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ.

    ನಿಫಾ ವೈರಸ್ ಲಕ್ಷಣಗಳೇನು?
    – ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
    – ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
    – ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
    – ಬಳಿಕ ಪ್ರಜ್ಞಾಹೀನರಾಗುತ್ತಾರೆ
    – ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
    – ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದ.

    Nipah Virus

    ಎಚ್ಚರಿಕೆಯಿಂದಿರಿ..!
    – ಪ್ರಾಣಿ ಪಕ್ಷಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸಬೇಡಿ
    – ಒಂದು ವೇಳೆ ನೀವು ರೋಗಿಯ ಜೊತೆಗಿದ್ದರೆ ಶುಚಿತ್ವಕ್ಕೆ ಹೆಚ್ಚು ಗಮನ ಕೊಡಿ
    – ರೋಗಿಯ ಚಿಕಿತ್ಸೆ ವೇಳೆ ಮುಖಕ್ಕೆ ಮಾಸ್ಕ್, ಕೈಗವಚ ಧರಿಸಿ
    – ಬಾವಲಿಗಳ ಸಂಖ್ಯೆ ಹೆಚ್ಚಿರುವ ಕಡೆ ಸಂಗ್ರಹಿಸುವ ಶೇಂದಿ, ಪಾನೀಯಗಳನ್ನು ಸೇವಿಸಬೇಡಿ

  • ಕೇರಳ ಬಳಿಕ ರಾಜ್ಯದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಲ್ಲಿ ಕಟ್ಟೆಚ್ಚರ

    ಕೇರಳ ಬಳಿಕ ರಾಜ್ಯದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಲ್ಲಿ ಕಟ್ಟೆಚ್ಚರ

    ಬೆಂಗಳೂರು: ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

    ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್ ಹೇಗೆ ಹರಡುತ್ತದೆ?

    ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಬೇಕು. ಜೊತೆಗೆ ತಮಿಳುನಾಡಿನ ಊಟಿ, ನೀಲಗಿರಿ, ಕನ್ಯಾಕುಮಾರಿ, ಕೊಯಮುತ್ತೂರು, ದಿಂಡಿಗಲ್, ತಿರುವನ್ವೇಲಿ, ತೇಣಿಯಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ. ಕೇರಳಕ್ಕೆ ತೆರಳುವವರಿಗೆ ಮಾಸ್ಕ್ ಧರಿಸಿ ತೆರಳಲು ಸೂಚಿಸಲಾಗಿದೆ.

    ಒಟ್ಟಿನಲ್ಲಿ ಮತ್ತೆ ನಿಫಾ ವೈರಸ್ ಭೀತಿ ಸೃಷ್ಟಿಸಿದ್ದು, ಎರ್ನಾಕುಳಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾಲೇಜು ವಿದ್ಯಾರ್ಥಿಯಲ್ಲಿ ಈ ವೈರಸ್ ಪತ್ತೆಯಾಗಿದೆ. ಹಾಗಾಗಿ ರಾಜ್ಯದ ಗಡಿಭಾಗದಲ್ಲಿ ಭಾರೀ ನಿಗಾ ವಹಿಸಲಾಗಿದೆ.

  • ಕೋಳಿಯಿಂದ ನಿಪಾ ವೈರಸ್ ಹರಡಲ್ಲ: ಉಡುಪಿ ವೈದ್ಯ

    ಕೋಳಿಯಿಂದ ನಿಪಾ ವೈರಸ್ ಹರಡಲ್ಲ: ಉಡುಪಿ ವೈದ್ಯ

    ಉಡುಪಿ: ಕೋಳಿಯಿಂದ ನಿಪಾ ವೈರಸ್ ಹರಡವುದಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಮಣಿಪಾಲ ವೈರಸ್ ರಿಸರ್ಚ್ ಇಲಾಖೆ ಮುಖ್ಯಸ್ಥ ಡಾ. ಅರುಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

    ಲಕ್ಷ ಬಾವಲಿಗಳಲ್ಲಿ ಕೇವಲ ಐದರಲ್ಲಿ ಮಾತ್ರ ಇಂತಹ ವೈರಸ್ ಕಾಣಲು ಸಾಧ್ಯ. ಮಣಿಪಾಲ ಸೆಂಟರ್ ನಲ್ಲಿ ನಿಪಾ ವೈರಸ್ ಮಾದರಿ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ನಿಪಾ ವೈರಸ್ ಪತ್ತೆಯಾಗಿಲ್ಲ ಎಂದು ತಿಳಿಸಿದರು.

    ಕೇರಳ ಸರ್ಕಾರದ ಕೋರಿಕೆಯ ಮೇರೆಗೆ ನಿಫಾ ವೈರಸ್ ರೋಗಿಗಳನ್ನು ಪರೀಕ್ಷಿಸಲು ಮಣಿಪಾಲದ ವೈದ್ಯರ ತಂಡ ಕೇರಳಕ್ಕೆ ತೆರಳಿತ್ತು. ಬಾವಲಿ ಹೊರತಾಗಿ ಬೇರೆ ಯಾವ ಪ್ರಾಣಿ-ಪಕ್ಷಿಗಳಲ್ಲೂ ನಿಪಾ ವೈರಸ್ ಕಾಣಸಿಕ್ಕಿಲ್ಲ ಎಂದು ದೃಢಪಡಿಸಿದರು.

    ನಿಪಾ ಎನ್ನುವುದು ಸಾಂಕ್ರಾಮಿಕ ರೋಗವಲ್ಲ. ಆದರೆ ಮುನ್ನೆಚ್ಚರಿಕೆ ಅತ್ಯಗತ್ಯ. ಬಾವಲಿ ಕಚ್ಚಿದ ಹಣ್ಣುಗಳನ್ನು ತಿನ್ನದಿರುವುದು ಒಳಿತು. ಕೋಳಿಯಿಂದ ಹರಡುತ್ತದೆ ಅನ್ನೋದೆಲ್ಲ ಸುಳ್ಳು ಸುದ್ದಿ. ಈ ಬಗ್ಗೆ ಅನಗತ್ಯ ಭಯಪಡುವ ಅಗತ್ಯವೇ ಇಲ್ಲ. ಕೇರಳದಲ್ಲಿ ಈಗಾಗಲೇ ವಿದೇಶಗಳಿಂದ ಔಷಧಿಗಳನ್ನು ತರಲಾಗಿದೆ ಎಂದು ತಿಳಿಸಿದರು.