Tag: ನಿಮಿಷಾಂಭ ದೇವಸ್ಥಾನ

  • ʻಆಪರೇಷನ್‌ ಸಿಂಧೂರʼ ಯಶಸ್ವಿ ಹಿನ್ನೆಲೆ ನಿಮಿಷಾಂಭ ದೇಗುಲದಲ್ಲಿ ವಿಶೇಷ ಪೂಜೆ

    ʻಆಪರೇಷನ್‌ ಸಿಂಧೂರʼ ಯಶಸ್ವಿ ಹಿನ್ನೆಲೆ ನಿಮಿಷಾಂಭ ದೇಗುಲದಲ್ಲಿ ವಿಶೇಷ ಪೂಜೆ

    ಮಂಡ್ಯ: ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಪರೇಷನ್ ಸಿಂಧೂರ (Operation Sindoor) ಯಶಸ್ವಿಯಾಗಿ ನಡೆಸಿದೆ. ಇದರ ಬೆನ್ನಲ್ಲೆ, ಕರ್ನಾಟಕ ಸರ್ಕಾರವು (Karnataka Government) ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ ಮತ್ತು ಸಂಕಲ್ಪ ಮಾಡಲು ಆದೇಶಿಸಿದೆ.

    ಸಚಿವ ರಾಮಲಿಂಗಾರೆಡ್ಡಿ ಅವರು ಭಾರತೀಯ ಸೇನೆಗೆ ಶುಭ ಹಾರೈಸಿದ್ದಾರೆ ಮತ್ತು ಯೋಧರಿಗೆ ಒಳಿತಾಗಲೆಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲು ಸೂಚಿಸಿದ್ದಾರೆ. ಈ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಭ ದೇಗುಲದಲ್ಲಿ (Nimishambha Temple) ಸೈನಿಕರ ಹೆಸರಲ್ಲಿ ಪೂಜೆ ಸಲ್ಲಿಸಲಾಗಿದೆ. ಇದನ್ನೂ ಓದಿ: 9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?

    ರಾಜ್ಯದ ಪ್ರಸಿದ್ಧ ದೇಗುಲದಲ್ಲಿ ಒಂದಾದ ಮಂಡ್ಯ ಜಿಲ್ಲೆಯ ನಿಮಿಷಾಂಭ ದೇಗುಲದಲ್ಲಿ ಇಂದು ಮುಂಜಾನೆ ಸೈನಿಕರಿಗಾಗಿ ದೇವಿಗೆ ಮೊದಲ ಪೂಜೆ ಸಲ್ಲಿಕೆ ಮಾಡಲಾಗಿದೆ. ದೇವಸ್ಥಾನದ ಮುಖ್ಯ ಅರ್ಚಕರು ಸೈನಿಕರಿಗಾಗಿ ಸಂಕಲ್ಪ ಮಾಡಿ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: Operation Sindoor | ಪಾಕ್ ಉಗ್ರ ತಾಣಗಳ ಮೇಲೆ ಏರ್‌ಸ್ಟ್ರೈಕ್‌ – ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ

    ದೇಶಕಾಯುವ ಯೋಧರಿಗೆ ಯಾವುದೇ ತೊಂದರೆ ಆಗದಂತೆ ಕಾಪಾಡುವಂತೆ ಪ್ರಾರ್ಥಿಸಿ ಸಂಕಲ್ಪ ಮಾಡಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್‌ – ಆಳ ಸಮುದ್ರ ಮೀನುಗಾರಿಕೆಗೆ ನಿಷೇಧ

  • ನಿಮಿಷಾಂಭ ದೇವಸ್ಥಾನದಲ್ಲಿ ಮಾಘ ಹುಣ್ಣಿಮೆ ಸಂಭ್ರಮ – ಕಾವೇರಿ ನದಿಯಲ್ಲಿ ಪುಣ್ಯಸ್ನಾನ

    ನಿಮಿಷಾಂಭ ದೇವಸ್ಥಾನದಲ್ಲಿ ಮಾಘ ಹುಣ್ಣಿಮೆ ಸಂಭ್ರಮ – ಕಾವೇರಿ ನದಿಯಲ್ಲಿ ಪುಣ್ಯಸ್ನಾನ

    ಮಂಡ್ಯ: ಮಾಘ ಹುಣ್ಣಿಮೆ ಹಿನ್ನೆಲೆಯಲ್ಲಿ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ (Nimishamba Temple) ಅಪಾರ ಪ್ರಮಾಣದ ಭಕ್ತರ ದಂಡು ಹರಿದು ಬರುತ್ತಿದೆ. ಇಂದು ಕಾವೇರಿ ನದಿಯಲ್ಲಿ (Cauvery River) ಮಾಘ ಸ್ನಾನ ಮಾಡಿ ನಿಮಿಷಾಂಭ ದೇವಿ ದರ್ಶನ ಮಾಡಿದರೆ ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿಯಿದೆ. ಹೀಗಾಗಿ ಮಧ್ಯರಾತ್ರಿಯಿಂದಲೇ ಕಾವೇರಿಯಲ್ಲಿ ಸಹಸ್ರಾರು ಭಕ್ತರು ಮಿಂದೇಳುತ್ತಿದ್ದಾರೆ.

    ಮಂಡ್ಯ ಮಾತ್ರವಲ್ಲದೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತರ ಆಗಮಿಸುತ್ತಿದ್ದು, ಕಾವೇರಿ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ನಿಮಿಷಾಂಭೆಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಮಧ್ಯರಾತ್ರಿ 12 ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ಆರಂಭವಾಗಿದ್ದು, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಅಭಿಷೇಕ ನೇರವೇರಿದೆ. ಇದನ್ನೂ ಓದಿ: ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹತ್ಯೆ

    ಮುಂಜಾನೆ 3 ಗಂಟೆಯಿಂದ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಿದ್ದು, ಇದೇ ಮೊದಲ ಬಾರಿಗೆ ನಿಮಿಷಾಂಭ ರಥೋತ್ಸವ ಜರುಗಿದೆ. ಕಾವೇರಿ ಸ್ನಾನಕ್ಕೆ ಆಗಮಿಸಲಿರುವ ಭಕ್ತರಿಗೆ ದಿನವಿಡೀ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: 2025ರಲ್ಲಿ ಹಜ್‌ ಯಾತ್ರೆಗೆ ಮಕ್ಕಳು ನಿಷೇಧ – ಕಾರಣ ಏನು ಗೊತ್ತಾ?

  • ನಿಮಿಷಾಂಭ ಮುಂಭಾಗ ಜಲಾವೃತ – ಗೋಸಾಯ್ ಘಾಟ್ ಮುಳುಗಡೆ

    ನಿಮಿಷಾಂಭ ಮುಂಭಾಗ ಜಲಾವೃತ – ಗೋಸಾಯ್ ಘಾಟ್ ಮುಳುಗಡೆ

    ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ (KRS Dam) 1,30,000 ಕ್ಯುಸೆಕ್‌ ನೀರನ್ನು ಹರಿ ಬಿಟ್ಟಿದ್ದರಿಂದ ಕಾವೇರಿ ನದಿ (Cauvery River) ರೌದ್ರ ನರ್ತನದೊಂದಿಗೆ ಹರಿಯುತ್ತಿದೆ. ಈ ಪರಿಣಾಮ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಭ ದೇವಸ್ಥಾನದ ಮುಂಭಾಗ ಸಂಪೂರ್ಣ ಜಲಾವೃತಗೊಂಡಿದೆ.

    ಶುಕ್ರವಾರ ನಿಮಿಷಾಂಭ ದೇವಸ್ಥಾನದ (Nimishamba Temple) ಸ್ನಾನಘಟ್ಟ ಮುಳುಗಡೆಯಾಗಿತ್ತು. ಇಂದು ದೇವಸ್ಥಾನದ ಮುಂಭಾಗ, ಪಾರ್ಕಿಂಗ್ ಸ್ಥಳ, ನವಗ್ರಹ, ಅರಳಿಕಟ್ಟೆ, ಶಿವನ ದೇಗುಲಗಳು ಮುಳುಗಡೆಯಾಗಿವೆ. ಭಕ್ತರಿಗೆ ನದಿಗೆ ಇಳಿಯದಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 1.30 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

    ಶ್ರೀರಂಗಪಟ್ಟಣದ (Srirangapatna) ಗೋಸಾಯ್ ಘಾಟ್ (Ghosai Ghat) ಸಂಪೂರ್ಣ ಮುಳುಗಡೆಯಾಗಿದೆ. ಪಿಂಡಪ್ರಧಾನ, ಹೋಮ ಹವನ‌ ಇತರೆ ಪೂಜಾ ಕೈಂಕರ್ಯಗಳಿಗೆ ಗೋಸಾಯ್ ಘಾಟ್ ಪ್ರಸಿದ್ಧಿ ಪಡೆದುಕೊಂಡಿದೆ. ಅಲ್ಲದೇ ಸಿನಿಮಾ ಚಿತ್ರೀಕರಣಗಳು ಇಲ್ಲಿ ನಡೆಯುತ್ತಿದ್ದವು. ಇದೀಗ ಕಾವೇರಿ ಭೋರ್ಗರೆತಕ್ಕೆ ಗೋಸಾಯ್ ಘಾಟ್ ಸಂಪೂರ್ಣ ಮುಳುಗಡೆಯಾಗಿದೆ.‌ ಇಲ್ಲಿನ ಕಾಶಿ ವಿಶ್ವನಾಥ, ಶ್ರೀಕೃಷ್ಣ, ಶಿವ, ಆಂಜನೇಯ, ಗಣಪತಿ ದೇವಸ್ಥಾನಗಳು ಸಂಪೂರ್ಣ ಜಲಾವೃತಗೊಂಡಿವೆ. ಇದನ್ನೂ ಓದಿ: ಕಾಫಿನಾಡಲ್ಲಿ ಮಳೆಯ ಅಬ್ಬರ – ಕೋಡಿ ಬಿದ್ದ ಇತಿಹಾಸ ಪ್ರಸಿದ್ಧ ಮದಗದ ಕೆರೆ

    ಗೋಸಾಯ್ ಘಾಟ್‌ಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದ್ದು ನಡೆಯುತ್ತಿದ್ದ ಪಿಂಡಪ್ರಧಾನ ಹಾಗೂ ಇತರ ಕೈಂಕರ್ಯಗಳಿಗೆ ನಿಷೇಧ ಹೇರಲಾಗಿದೆ.

     

  • ಕಾವೇರಿ ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿ ನಾಪತ್ತೆಯಾದ!

    ಕಾವೇರಿ ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿ ನಾಪತ್ತೆಯಾದ!

    ಮಂಡ್ಯ: ವ್ಯಕ್ತಿಯೊಬ್ಬ ದುಬಾರಿ ಬೆಲೆಯ ಬಿಎಂಡಬ್ಲ್ಯೂ ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿ ನಾಪತ್ತೆಯಾಗಿದ್ದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಕಾವೇರಿ ನದಿ ಬಳಿ ನಡೆದಿದೆ.

    ಶ್ರೀರಂಗಪಟ್ಟಣದ ಗಂಜಾಂನ ನಿಮಿಷಾಂಭ ದೇವಸ್ಥಾನದ ಕಾವೇರಿ ನದಿಯಲ್ಲಿ ಕಾರು ಇರುವುದನ್ನು ಕಂಡು ಆಶ್ಚರ್ಯಗೊಂಡ ಸ್ಥಳೀಯರು ಶ್ರೀರಂಗಪಟ್ಟಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನದಿಯಲ್ಲಿ ಇದ್ದ ಕಾರನ್ನು ಹೊರಕ್ಕೆ ತೆಗೆದಿದ್ದಾರೆ. ಕಾರು ಹೊರಗೆ ತೆಗೆದ ನಂತರ ಅದು ಬಿಎಂಡಬ್ಲ್ಯೂ ಕಾರು ಆದ್ದರಿಂದ ಇಷ್ಟೊಂದು ದುಬಾರಿ ಬೆಲೆಯ ಕಾರನ್ನು ಯಾರು ನೀರಿನಲ್ಲಿ ಮುಳುಗಿಸಿ ಹೋಗಿದ್ದಾರೆ ಎಂದು ಪೊಲೀಸರಿಗೆ ಆಶ್ಚರ್ಯವಾಗಿದೆ. ಇದನ್ನೂ ಓದಿ: ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

    ನಂತರ ಶ್ರೀರಂಗಪಟ್ಟಣದ ಪಟ್ಟಣ ಪೊಲೀಸ್ ಠಾಣೆಗೆ ಕಾರನ್ನು ತೆಗೆದುಕೊಂಡು ಹೋದ ಪೊಲೀಸರು ಅಲ್ಲಿ ಕಾರಿನ ಬಾಗಿಲು ತೆಗೆದು ಈ ಕಾರು ಯಾರದ್ದು ಎಂದು ತಿಳಿಯಲು ಡಾಕ್ಯುಮೆಂಟ್ ಹುಡುಕಾಡಿದ್ದಾರೆ. ನಂತರ ಡಾಕ್ಯುಮೆಂಟ್‍ವೊಂದು ಸಿಕ್ಕಿದ್ದು ಅದರಲ್ಲಿ ಈ ಕಾರು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‍ನ ರೂಪೇಶ್ ಅವರದೆಂದು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    ನಂತರ ರೂಪೇಶ್‍ಗೆ ಈ ಬಗ್ಗೆ ಮಾಹಿತಿ ಮುಟ್ಟಿಸಿ ಆತನನ್ನು ಪೊಲೀಸರು ವಿಚಾರಣೆ ನಡೆಸಿದ ವೇಳೆ, ಆತನೇ ಕಾರನ್ನು ನೀರಿನಲ್ಲಿ ಮುಳುಗಿಸಿದ್ದರ ಬಗ್ಗೆ ಒಪ್ಪಿಕೊಂಡಿದ್ದಾನೆ. ರೂಪೇಶ್ ತಾಯಿ ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು, ಅಂದಿನಿಂದ ಇಂದಿನವರೆಗೆ ಆತನ ವರ್ತನೆ ಸರಿ ಇಲ್ಲ, ಮಾನಸಿಕ ಖಿನ್ನತೆಗೆ ಒಳಗಾಗಿದ್ದಾನೆ ಎಂದು ರೂಪೇಶ್ ಸಂಬಂಧಿಕರು, ಸ್ನೇಹಿತರು ಹೇಳಿದ್ದಾರೆ. ಅಲ್ಲದೇ ಆತ ಪೊಲೀಸ್ ಠಾಣೆಗೆ ಬಂದಾಗಿನಿಂದಲೂ ಸರಿಯಾಗಿ ವರ್ತನೆ ಮಾಡುತ್ತಿರಲಿಲ್ಲ. ಆತನಿಗೆ ಮಾನಸಿಕ ಖಿನ್ನತೆ ಇರುವ ಕಾರಣ ಹೀಗೆ ಮಾಡಿರಬಹುದು ಎಂದು ಹೇಳುತ್ತಿದ್ದಾರೆ.