Tag: ನಿಯಮ

  • ಬೆಂಗಳೂರಿನಲ್ಲಿ ಗಣೇಶ ಹಬ್ಬ – ಪೊಲೀಸ್‌ ಇಲಾಖೆಯ ನಿಯಮಗಳೇನು?

    ಬೆಂಗಳೂರಿನಲ್ಲಿ ಗಣೇಶ ಹಬ್ಬ – ಪೊಲೀಸ್‌ ಇಲಾಖೆಯ ನಿಯಮಗಳೇನು?

    ಬೆಂಗಳೂರು: ಮೂರು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಗಣೇಶೋತ್ಸವ ಕಳೆಗಟ್ಟಿತ್ತು. ಆದರೆ ಈ ಬಾರಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಅನೇಕರು ನಿರ್ಧರಿಸಿದ್ದಾರೆ. ಆದರೆ ಗಣೇಶನನ್ನು ಕೂರಿಸಲು ಪೊಲೀಸ್‌ ಇಲಾಖೆಯಿಂದ ಹತ್ತಾರು ನಿಬಂಧನೆಗಳು ಸಿದ್ಧವಾಗಿದ್ದು, ಆಯೋಜಕರು ಕಟ್ಟುನಿಟ್ಟಿನ ನಿಬಂಧನೆಗಳನ್ನ ಫಾಲೋ ಮಾಡಬೇಕು. ಗಣೇಶನನ್ನು ಕೂರಿಸಲು ಇರುವ ನಿಬಂಧನೆಗಳು ಈ ರೀತಿಯಾಗಿವೆ.

    ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಬಿಬಿಎಂಪಿಯ ಏಕಗವಾಕ್ಷಿಯಲ್ಲಿ ಅನುಮತಿ ಪಡೆಯಬೇಕು. ಸದೃಢವಾಗಿ ಶಾಮಿಯಾನ ನಿರ್ಮಿಸಬೇಕು. ಶಾಮಿಯಾನಗೆ ಫ್ಲೇಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಸಬಹುದು‌. ಆದರೆ ಶಾಮಿಯಾನ ಹೊರತುಪಡಿಸಿ ಬೇರೆಡೆ ಫ್ಲೇಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಕೆಗೆ ಪ್ರತ್ಯೇಕ ಅನುಮತಿ ಪಡೆಯಬೇಕು. ಯಾವುದೇ ಕಾರಣಕ್ಕೂ ವಿವಾದಿತ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವಂತಿಲ್ಲ. ಹಾಗೂ ಸ್ಥಳ ಮಾಲೀಕರು ಮತ್ತು ಬಿಬಿಎಂಪಿ ಏಕಗವಾಕ್ಷಿ ಅನುಮತಿ ಪಡೆಯಬೇಕು.

    ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು 24 ಗಂಟೆ ಆಯೋಜಕ ಕಾರ್ಯಕರ್ತರು ಇರಬೇಕು. ಅವರ ವಿವರಗಳನ್ನು ಪೊಲೀಸರಿಗೆ ಕೊಡಬೇಕು. ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಪೊಲೀಸ್ ಹಾಗೂ ಬಿಬಿಎಂಪಿ ನಿಯಮದಂತೆ ಸಿಸಿಟಿವಿಗಳ ಅಳವಡಿಕೆ ಮಾಡಬೇಕು. ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಬೆಂಕಿ ನಂದಿಸುವ ಉಪಕರಣಗಳು ಇರಬೇಕು. ಮರಳು ತುಂಬಿದ ಬಕೆಟ್, ನೀರಿನ ವ್ಯವಸ್ಥೆ ಇರಬೇಕು.

    ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಅಡುಗೆ ಮಾಡುವ ಕಟ್ಟಿಗೆ, ಉರುವಲು, ಸೀಮೆಎಣ್ಣೆ ಇಡಬಾರದು. ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಓರ್ವ ಎಲೆಕ್ಟ್ರಿಷಿನ್ ಇರಬೇಕು, ಸಮರ್ಪಕ ಬೆಳಕು, ವಿದ್ಯುತ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಶಾರ್ಟ್ ಸರ್ಕ್ಯೂಟ್, ಇತರ ಅವಘಡ ತಡೆಯಲು ಸನ್ನದ್ಧರಾಗಿರಬೇಕು. ಸಾರ್ವಜನಿಕರು ಬರಲು ಹೋಗಲು ಸಮರ್ಪಕ ಆಗಮನ ನಿರ್ಗಮನ ವ್ಯವಸ್ಥೆ ಇರಬೇಕು. ಬ್ಯಾರಿಕೇಡ್ ನಿರ್ಮಿಸಿ, ಸ್ವಯಂ ಸೇವಕರು ಇರಬೇಕು. ಜನ ಹೆಚ್ಚಾದರೆ ಖಾಸಗಿ ಭದ್ರತಾ ವ್ಯವಸ್ಥೆ ಮಾಡಿಕೊಳ್ಳುವುದು.

    ಗಣೇಶ ವಿಸರ್ಜನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದಂತೆ ಆಯೋಜಕರು ಕ್ರಮ ವಹಿಸುವುದು. ಮನರಂಜನಾ ಕಾರ್ಯಕ್ರಮ, ಮೆರವಣಿಗೆ, ವಿಸರ್ಜನೆ ವೇಳೆ ಹೆಣ್ಣು ಮಕ್ಕಳಿಗೆ ಚುಡಾಯಿಸುವುದು ಕೀಟಲೆ ಮಾಡಿದಾಗ ಕೂಡಲೇ ಪೊಲೀಸರ ಸಂಪರ್ಕಿಸುವುದು. ಸರ್ಕಾರ ಮತ್ತು ಹೈಕೋರ್ಟ್ ಆದೇಶದಂತೆ ಹಿರಿಯ ನಾಗರಿಕರು, ರೋಗಿಗಳಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಿಯಮಿತವಾಗಿ ಬಳಸುವುದು. ಇದನ್ನೂ ಓದಿ: ರಾಷ್ಟ್ರೀಯ ಭದ್ರತಾ ಸಮೂಹಕ್ಕೆ `ಡ್ರೋನ್ ಸಮೂಹ’ ಸೇರ್ಪಡೆ – ಏನಿದರ ವಿಶೇಷತೆ?

    ಗಣೇಶ ಪ್ರತಿಷ್ಠಾಪನೆ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ತಮ್ಮ ವಿಳಾಸ ಮತ್ತು ಫೋನ್ ನಂಬರ್ ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ನೀಡುವುದು ಹಾಗೂ ಸ್ಥಳದಲ್ಲಿ ಎಲ್ಲರಿಗೂ ಕಾಣುವಂತೆ ಪ್ರದರ್ಶಿಸುವುದು. ಯಾವುದೇ ರೀತಿಯ ಲೇಸರ್‌ ಪ್ರೊಜೆಕ್ಷನ್ ಮಾಡಬಾರದು. ಮೆರವಣಿಗೆ ಸೂಕ್ಷ್ಮ ಸ್ಥಳ, ಅತಿ ಸೂಕ್ಷ್ಮ ಸ್ಥಳದಲ್ಲಿ ಸಾಗುವಾಗ ಸಿಡಿಮದ್ದು ಪಟಾಕಿ ಸಿಡಿಸದಂತೆ ನೋಡಿಕೊಳ್ಳಬೇಕು.

    ಗಣೇಶ ಪ್ರತಿಷ್ಠಾಪನೆ ಮತ್ತು ಕಾರ್ಯಕ್ರಮಕ್ಕೆ ಬಲವಂತವಾಗಿ ವಂತಿಗೆ ವಸೂಲಿ ಮಾಡಿದರೆ ಕಠಿಣ ಕ್ರಮ. ಆಯೋಜಕರು ಸ್ವಯಂ ಸೇವಕರಿಗೆ ಟೀ ಶರ್ಟ್ ಮತ್ತು ಗುರುತಿನ ಚೀಟಿ, ಕ್ಯಾಪ್ ಕೊಟ್ಟು ಅವರನ್ನ ಗುರುತಿಸಲು ಸಾಧ್ಯವಾಗಬೇಕು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ನಿಧನ

    Live Tv
    [brid partner=56869869 player=32851 video=960834 autoplay=true]

  • ಸಾಮಾಜಿಕ ಮಾಧ್ಯಮವನ್ನು ಜವಾಬ್ದಾರಿಯುತವಾಗಿಸಲು ಕಾನೂನು ಬದಲಾವಣೆಗೆ ಕೇಂದ್ರ ಯೋಜನೆ

    ಸಾಮಾಜಿಕ ಮಾಧ್ಯಮವನ್ನು ಜವಾಬ್ದಾರಿಯುತವಾಗಿಸಲು ಕಾನೂನು ಬದಲಾವಣೆಗೆ ಕೇಂದ್ರ ಯೋಜನೆ

    ನವದೆಹಲಿ: ಸಾಮಾಜಿಕ ಮಾಧ್ಯಮವನ್ನು ಹೆಚ್ಚು ಜವಾಬ್ದಾರಿಯುತವಾಗಿಸಲು ಕಾನೂನು ಬದಲಾವಣೆಗಳನ್ನು ತರಲು ಯೋಜಿಸಲಾಗಿದೆ ಎಂದು ಕೇಂದ್ರ ಮಾಹಿತಿ ಹಾಗೂ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

    ಸಾಮಾಜಿಕ ಜಾಲತಾಣ ಪ್ಲಾಟ್‌ಫಾರ್ಮ್‌ಗಳನ್ನು ಹೆಚ್ಚು ಜವಾಬ್ದಾರಿಯುತವಾಗಿಸಬೇಕು ಎಂದು ದೇಶದಲ್ಲಿ ಒಮ್ಮತವಿದೆ. ಮೊಬೈಲ್ ಫೋನ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಇಂಟರ್‌ನೆಟ್ ಪರಿವರ್ತಕ ಬದಲಾವಣೆಗಳನ್ನು ಮಾಡಿದೆ. ಆದರೆ ಅವರೂ ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

    ಸಾಮಾಜಿಕ ಜಾಲತಾಣಗಳಿಗೆ ಕಾನೂನು ಬದಲಾವಣೆಗಳ ಅಗತ್ಯವಿದೆ, ಅದನ್ನು ನಾವು ಜಾರಿಗೊಳಿಸುತ್ತೇವೆ. ಮಾಧ್ಯಮ ಗುಂಪುಗಳಲ್ಲಿ ಸ್ವಯಂ ನಿಯಂತ್ರಣದ ಅಗತ್ಯವಿದೆ, ಸ್ವಯಂ ನಿಯಂತ್ರಣವನ್ನೂ ಮಾಡಿಸುತ್ತೇವೆ. ಅಗತ್ಯವಿರುವಲ್ಲೆಲ್ಲಾ ನಾವು ಸಾಮಾಜಿಕ ಮಾಧ್ಯಮವನ್ನು ಹೆಚ್ಚು ಜವಾಬ್ದಾರಿಯುತವಾಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ವರ್ಕ್ ಔಟ್ ಆಯ್ತು ಮೋದಿಯ ಮನ್ ಕೀ ಬಾತ್ ಐಡಿಯಾ – ಎಂ.ಟೆಕ್ ಪದವೀಧರೆಯ ಬಾಳು ಬೆಳಗುತ್ತಿದೆ ಬಾಳೆ ದಿಂಡು

    ಬದಲಾವಣೆ ಏನು?
    ಕೇಂದ್ರ ಸರ್ಕಾರ ಈ ಹಿಂದಿನ ಸಾಮಾಜಿಕ ಮಾಧ್ಯಮದ ನಿಯಮಗಳನ್ನು ಅಂತಿಮಗೊಳಿಸುವಲ್ಲಿ ಕೆಲಸ ಮಾಡುತ್ತಿದೆ. ಹೊಸದಾಗಿ ಜಾರಿಗೆ ತರಲಿರುವ ನಿಯಮಗಳು ಅನಿಯಂತ್ರಿತ ಕಂಟೆಂಟ್ ಮಾಡರೇಶನ್, ನಿಷ್ಟ್ರಿಯತೆ ಅಥವಾ ಯಾವುದೇ ವಿವರಣೆಯಿಲ್ಲದ ಟ್ವಿಟ್ಟರ್ ಹಾಗೂ ಫೇಸ್‌ಬುಕ್‌ನಂತಹ ದೊಡ್ಡ ಟೆಕ್ ಕಂಪನಿಗಳು ಮಾಡಿದ ಪೋಸ್ಟ್‌ಗಳನ್ನು ತೆಗೆದು ಹಾಕುವ ನಿರ್ಧಾರದ ವಿರುದ್ಧವಾಗಿದೆ ಹಾಗೂ ಬಳಕೆದಾರರು ಕುಂದುಕೊರತೆಗಳನ್ನು ಎತ್ತಿ ತೋರಿಸುವ ಅವಕಾಶವನ್ನು ಪಡೆಯುತ್ತಾರೆ ಎನ್ನಲಾಗಿದೆ.

    ಈ ತಿಂಗಳ ಆರಂಭದಲ್ಲಿ ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾಮಾಜಿಕ ಮಾಧ್ಯಮ ಬಳಕೆದಾರರು ಕಂಪನಿಗಳಿಗೆ ಮಾಡಿದ ದೂರುಗಳ ವಿರುದ್ಧ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಪಡೆಯುವಂತಹ ಹೊಸ ಕರಡು ನಿಯಮವನ್ನು ಬಿಡುಗಡೆ ಮಾಡಿತು. ಇದರ ಪ್ರಕಾರ ಸಾಮಾಜಿಕ ಮಾಧ್ಯಮಗಳ ನಿರ್ಧಾರಗಳ ವಿರುದ್ಧ ಮೇಲ್ಮನವಿಗೆ ಸಲ್ಲಿಸಲು ಬಳಕೆದಾರರಿಗೆ ಅವಕಾಶ ಒದಗಿಸುತ್ತದೆ. ಪ್ರಸ್ತುತ ಯಾವುದೇ ದೊಡ್ಡ ಸಾಮಾಜಿಕ ಮಾಧ್ಯಮ ಕಂಪನಿಗಳು ಮೇಲ್ಮನವಿ ಕಾರ್ಯವಿಧಾನವನ್ನು ಹೊಂದಿಲ್ಲ. ಇದನ್ನೂ ಓದಿ: ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಲ್ಲ: ಫಾರೂಕ್ ಅಬ್ದುಲ್ಲಾ

    ವರದಿಗಳ ಪ್ರಕಾರ ಈ ಹೊಸ ನಿಯಮ ಜುಲೈ ಕೊನೆಯಲ್ಲಿ ಅಂತಿಮಗೊಳಿಸಲು ಸರ್ಕಾರ ಯೋಜಿಸಿದೆ.

    Live Tv

  • ದಸರಾ ಹಬ್ಬದಂತೆಯೇ ಸರಳವಾಗಿ ಗಣೇಶೋತ್ಸವ ಆಚರಣೆ: ಸುಧಾಕರ್

    ದಸರಾ ಹಬ್ಬದಂತೆಯೇ ಸರಳವಾಗಿ ಗಣೇಶೋತ್ಸವ ಆಚರಣೆ: ಸುಧಾಕರ್

    ಚಿಕ್ಕಬಳ್ಳಾಪುರ: ನಾಡಹಬ್ಬ ದಸರಾ ಆಚರಣೆ ಮಾದರಿಯಲ್ಲೇ ಸರಳವಾಗಿ ಗಣೇಶೋತ್ಸವ ಆಚರಣೆ ಮಾಡಬೇಕು ಅಂತ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ ಕೆ. ಸುಧಾಕರ್ ಹೇಳಿದರು.

    ಸಿಎಂ ಹಾಗೂ ಅಧಿಕಾರಿಗಳ ಜೊತೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಿಂದಲೇ ವೀಡಿಯೋ ಸಂವಾದದಲ್ಲಿ ಭಾಗಿಯಾಗಿದ್ದ ಸಚಿವ ಸುಧಾಕರ್ ಅವರು ವಿಡಿಯೋ ಸಂವಾದದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ದಸರಾ ವನ್ನ ಸರಳ ಅಚರಿಸಬೇಕು ಅಂತ ಸಿಎಂ ತೀರ್ಮಾನ ತೆಗೆದುಕೊಂಡಿದ್ದಾರೆ. ಅದೇ ರೀತಿ ಗಣೇಶನ ಹಬ್ಬ ಸಹ ಸರಳ ಗಣೇಶ ಉತ್ಸವ ಆಚರಣೆ ಮಾಡಲು ತೀರ್ಮಾನಿಸಿಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಷರತ್ತುಬದ್ಧ ನಿಯಮಗಳೊಂದಿಗೆ ಗಣೇಶೋತ್ಸವಕ್ಕೆ ಅನುಮತಿ

    ಈ ಸಂಬಂಧ ಸಾಕಷ್ಟು ಚರ್ಚೆಯಾಗಿದ್ದು, 4 ಅಡಿಗಿಂತ ಕಡಿಮೆ ಎತ್ತರ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಅವಕಾಶ ನೀಡಲಾಗಿದೆ. ಗರಿಷ್ಟ 5 ದಿನ ಪ್ರತಿಷ್ಟಾಪನೆಗೆ ಅವಕಾಶವಿದೆ.ವಿಸರ್ಜನೆ ವೇಳೆ ನಿಗದಿತ ಮಂದಿಯಷ್ಟೇ ಭಾಗವಹಿಸಬೇಕು. ಯಾವುದೇ ಮೆರವಣಿಗೆಗೆ ಅವಕಾಶ ಇಲ್ಲ. ಆರ್ಕೆಸ್ಟ್ರಾ, ಡಿಜೆಗೆ ಅನುಮತಿ ಇಲ್ಲ. ಪೂಜೆ ವೇಳೆ ಒಮ್ಮೆ 20 ಮಂದಿಯಷ್ಟೇ ಭಾಗವಹಿಸಬೇಕು. ದೈಹಿಕ ಅಂತರ ಕಾಪಾಡಿಕೊಳ್ಳಬೇಕು, ಸ್ಯಾನಿಟೈಸೇಷನ್ ಮಾಡಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್

    ಗಣೇಶ ಪ್ರತಿಷ್ಠಾಪನಾ ಸಂಘಟಕರು ಸಮಿತಿಯವರಿಗೆ ಕಡ್ಡಾಯವಾಗಿ ವ್ಯಾಕ್ಸಿನ್ ಹಾಗೂ ಟೆಸ್ಟಿಂಗ್ ಆಗಿರಬೇಕು. ಈ ಎಲ್ಲಾ ಪ್ರಮುಖ ಮಾರ್ಗಸೂಚಿಗಳ ಮೂಲಕ ಕೋವಿಡ್ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸಬೇಕು. ಈ ಎಲ್ಲಾ ಮಾರ್ಗಸೂಚಿಗಳ ಅನ್ವಯ ಗಣೇಶೋತ್ಸವ ವನ್ನ ಸರಳವಾಗಿ ಆಚರಿಸಿಬೇಕು. ಕೋವಿಡ್ ಮುನ್ನೆಚ್ಚರಿಕೆಗಳನ್ನ ಪಾಲನೆ ಮಾಡಬೇಕು ಅಂತ ಸಚಿವ ಸುಧಾಕರ್ ತಿಳಿಸಿದರು.

  • ಸಾಮಾಜಿಕ ಅಂತರ ಮಾಯ- ಕಿಟ್‍ಗಾಗಿ ಕ್ಯೂ ನಿಂತ ಕಾರ್ಮಿಕರು

    ಸಾಮಾಜಿಕ ಅಂತರ ಮಾಯ- ಕಿಟ್‍ಗಾಗಿ ಕ್ಯೂ ನಿಂತ ಕಾರ್ಮಿಕರು

    ಗದಗ: ದಿನಸಿ ಕಿಟ್ ಪಡೆಯಲು ಕಾರ್ಮಿಕರು ಕೊರೊನಾ ನಿಯಮಗಳನ್ನು ಮರೆತು ಕಿಲೋಮೀಟರ್ ಗಟ್ಟಲೇ ಸಾಲಿನಲ್ಲಿ ನಿಂತಿರುವ ಸನ್ನಿವೇಶ ಗದಗದಲ್ಲಿ ಕಂಡು ಬಂದಿದೆ. ಇದನ್ನೂ ಓದಿ: ಬೆಂಗಳೂರಿನ ಮರಗಳ ಮಾರಣ ಹೋಮ ಸಿದ್ಧತೆಗೆ ರಮ್ಯಾ ವಿರೋಧ

    ಕಳೆದ 2 ತಿಂಗಳಿಂದ ಗೃಹ ಬಂಧನಲ್ಲಿರುವ ಜನರು ಇಂದು ಅನ್‍ಲಾಕ್ ಆಗುತ್ತಿದ್ದಂತೆ ಹೊರಗೆ ಬಂದಿದ್ದಾರೆ. ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಕಾರ್ಮಿಕ ಇಲಾಖೆಯಿಂದ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ ಮಾಡಿದರು. ಈ ಕಿಟ್ ಪಡೆಯಲು ಬಂದ ಕಾರ್ಮಿಕರು ನಾಮುಂದೆ ತಾ ಮುಂದೆ ಅಂತ ಮುಗಿಬಿದ್ದಿದ್ದಾರೆ. ಇಲ್ಲಿ ಬಹುತೇಕರು ಮುಖಕ್ಕೆ ಮಾಸ್ಕ್, ಸಾಮಾಜಿಕ ಅಂತರ ಸಂಪೂರ್ಣವಾಗಿ ಮಾಯವಾಗಿದೆ. ಬೆಳಿಗ್ಗೆಯಿಂದ ಕಾರ್ಮಿಕರು ದಿನಸಿ ಕಿಟ್ ಪಡೆಯಲು ಕಿಲೋಮೀಟರ್ ಗಟ್ಟಲೆ ಕ್ಯೂ ನಿಂತಿದ್ದರು.

    ಜಿಲ್ಲೆಯಲ್ಲಿ ಒಟ್ಟು 14,175 ನೋಂದಾಯಿತ ಕಾರ್ಮಿಕರ ಪೈಕಿ 2 ಸಾವಿರ ಕಾರ್ಮಿಕರಿಗೆ ಮಾತ್ರ ಕಿಟ್ ವಿತರಣೆ ಮಾಡಲಾಗುತ್ತಿದೆ. ಇಬ್ಬರು ಹೋಮ್ ಗಾರ್ಡ್, ಓರ್ವ ಪೊಲೀಸ್ ಸಿಬ್ಬಂದಿಯಿಂದ ಸಾವಿರಾರು ಜನರನ್ನು ನಿಯಂತ್ರಿಸಲು ಕಷ್ಟವಾಯಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ಐದಾರು ಸಾವಿರ ಜನ ಕಾರ್ಮಿಕರು ಜಮಾವಣೆಗೊಂಡಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ, ಜಿಲ್ಲಾಡಳಿತ ವಿಫಲವಾಗಿದೆ.

    ಜನ ಗುಂಪಾಗಿ ಸೇರಬಾರದು, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಎಂಬ ನಿಯಮಗಳು ಇದ್ದರು ಇಲ್ಲಿ ಆ ನಿಯಮ ಮಾಯವಾಗಿವೆ. ಜನರು ಎಚ್ಚೆತ್ತುಕೊಳ್ಳುತ್ತಿಲ್ಲ, ಆರೋಗ್ಯ, ಜೀವಕ್ಕಿಂತ ಮುಖ್ಯವಾದದ್ದು ಕಿಟ್ ಅಲ್ಲ ಎಂಬುದನ್ನು ಅರಿತುಕೊಳ್ಳಬೇಕಿದೆ ಎಂದು ಹಲವರು ಹೇಳಿದ್ದಾರೆ.

  • ಉಡುಪಿ ಪಣಿಯಾಡಿ ಅನಂತ ಪದ್ಮನಾಭ ದೇವರಿಗೆ ಶಿಲಾಗರ್ಭಗುಡಿ ಸಮರ್ಪಣೆ

    ಉಡುಪಿ ಪಣಿಯಾಡಿ ಅನಂತ ಪದ್ಮನಾಭ ದೇವರಿಗೆ ಶಿಲಾಗರ್ಭಗುಡಿ ಸಮರ್ಪಣೆ

    ಉಡುಪಿ: ಇತಿಹಾಸ ಪ್ರಸಿದ್ಧ ಪಣಿಯಾಡಿಯಲ್ಲಿನ ಶ್ರೀ ಅನಂತಾಸನ ಶ್ರೀಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದ ನವೀಕರಣದ ನಡೆಸಲಾಗಿದೆ. ಶಿಲಾಮಯ ಗರ್ಭಗೃಹ ಹಾಗೂ ಶಿಲಾಮಯ ತೀರ್ಥಮಂಟಪ ನಿರ್ಮಿಸಿ ದೇವರಿಗೆ ಸಮರ್ಪಣೆ ಮಾಡಲಾಯ್ತು. ಇದನ್ನೂ ಓದಿ:  ಶಾರೂಖ್ ಬಳಿ 300 ರೂ. ಪಡೆದಿದ್ದ ಪ್ರಿಯಾಮಣಿ

    ಕೊರೊನಾ ಲಾಕ್‍ಡೌನ್ ನಿಯಮ ಇರುವುದರಿಂದ ದೇಗುಲದ ಅರ್ಚಕ ಆಡಳಿತ ಮಂಡಳಿ ಸದಸ್ಯರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಶ್ರೀದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶ ಅಭಿಷೇಕವು ನಡೆಸಲಾಯ್ತು. ಉಡುಪಿ ಪುತ್ತಿಗೆ ಮಠಕ್ಕೆ ಆಡಳಿತವಿರುವ ದೇಗುಲದ ಪುನಃಸ್ಥಾಪನಾ ಕಾರ್ಯಕ್ರಮಗಳು ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು. ವೇದಮೂರ್ತಿ ಪುತ್ತೂರು ಹಯವದನ ತಂತ್ರಿ ಹಾಗೂ ಪಂಜ ಭಾಸ್ಕರ ಭಟ್ ಇವರ ನೇತೃತ್ವದಲ್ಲಿ ಸಕಲ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

    ಶಾಸ್ತ್ರಕ್ಕೆ ಚ್ಯುತಿಯಾಗದಂತೆ ಸರಳವಾಗಿ ಕಾರ್ಯಕ್ರಮ ಸಂಪನ್ನ ಗೊಂಡಿತು. ಪ್ರತಿಷ್ಠೆ ಸಂದರ್ಭ 108 ಕಲಶಾಭಿಷೇಕ ನಡೆಸಲಾಗಿದ್ದು, ಜೀರ್ಣೋದ್ಧಾರ ಸಂಪೂರ್ಣವಾದ ನಂತರ 1008 ಕಲಶಾಭಿಷೇಕ ನಡೆಸಲಾಗುವುದು ಎಂದು ತೀರ್ಮಾನಿಸಲಾಗಿದೆ.ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ಸತ್ಯನಾರಾಯಣ ಪೂಜೆಯನ್ನು ನಡೆಸುವ ಮೂಲಕ ಎರಡನೇ ಹಂತದ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು.

    ಲಾಕ್‍ಡೌನ್ ಇರುವುದರಿಂದ ಭಕ್ತಾಧಿಗಳಿಗೆ, ದೇವಸ್ಥಾನದ ಜೀರ್ಣೋದ್ಧಾರಕ್ಕೆ ಆರ್ಥಿಕ ಸಹಾಯ ಮಾಡಿದ ದಾನಿಗಳಿಗೆ ಧಾರ್ಮಿಕ ವಿಧಿ ವಿಧಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಮುಂದೆ ದೇವಸ್ಥಾನದ ಕಾಮಗಾರಿ ಸಂಪೂರ್ಣ ಗೊಂಡ ನಂತರ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ ಎಂದರು.

  • ರೂಲ್ಸ್ ಬ್ರೇಕ್ – 100 ‘ಕೈ’ ಕಾರ್ಯಕರ್ತರ ಮೇಲೆ ಕೇಸ್

    ರೂಲ್ಸ್ ಬ್ರೇಕ್ – 100 ‘ಕೈ’ ಕಾರ್ಯಕರ್ತರ ಮೇಲೆ ಕೇಸ್

    ತಿರುವನಂತಪುರ: ಕಾಂಗ್ರೆಸ್ ಪಕ್ಷ ನಡೆಸಿದ ಸಮಾರಂಭವೊಂದರಲ್ಲಿ ಕಾರ್ಯಕರ್ತರು ಕೊರೊನಾ ನಿಯಮ ಗಾಳಿಗೆ ತೂರಿದ್ದಾರೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡದೆ ಇದ್ದ 100 ಮಂದಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇರಳ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ.

    ಕೇರಳದಲ್ಲಿ ಕೊರೊನಾ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕಠಿಣ ನಿಯಮಗಳನ್ನು ತೆಗೆದುಕೊಂಡಿದೆ. ಈ ನಡುವೆ ಕೇರಳದಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಕೆ. ಸುಧಾಕರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕಾಗಿ ಸಮಾರಂಭವೊಂದಂದನ್ನು ತಿರುವನಂತಪುರದ ಇಂದಿರಾ ಭವನದಲ್ಲಿ ಕಾಂಗ್ರೆಸ್ ನಡೆಸಿತ್ತು. ಈ ಸಮಾರಂಭದಲ್ಲಿ 100ಕ್ಕೂ ಹೆಚ್ಚು ಕಾರ್ಯಕರ್ತರು ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಪಾಲಿಸದೆ ಇದ್ದ ಪರಿಣಾಮ ತಿರುವನಂತಪರದ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನೂರು ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ಗೆ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ ಎಂಟ್ರಿ

    ಈ ಕುರಿತು ಸ್ಪಷ್ಟನೆ ನೀಡಿರುವ ಮ್ಯೂಸಿಯಂ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ, ಕಾಂಗ್ರೆಸ್ ಪಕ್ಷದ ಸಮಾರಂಭದಲ್ಲಿ ಕೇರಳದಲ್ಲಿರುವ ಕೊರೊನಾ ನಿಯಮವನ್ನು ಗಾಳಿಗೆ ತೂರಿದ್ದಾರೆ. ಸಭೆಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಅಗದ ಹಿನ್ನೆಲೆ ಕೇರಳ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

  • ಅನ್‍ಲಾಕ್‍ಗೂ ಮೊದಲೇ ಕೋವಿಡ್ ನಿಯಮ ಉಲ್ಲಂಘನೆ- ಸೋಂಕು ಹರಡುವ ಭೀತಿ

    ಅನ್‍ಲಾಕ್‍ಗೂ ಮೊದಲೇ ಕೋವಿಡ್ ನಿಯಮ ಉಲ್ಲಂಘನೆ- ಸೋಂಕು ಹರಡುವ ಭೀತಿ

    ಬೀದರ್: ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 19 ಜಿಲ್ಲೆಗಳನ್ನು ಅನ್‍ಲಾಕ್ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಆದರೆ ಅನ್‍ಲಾಕ್‍ಗೂ ಮೊದಲೇ ಕೊರೊನಾ ನಿಯಮ ಉಲ್ಲಂಘನೆಯಾಗುತ್ತಿದೆ.

    ಗಡಿ ಜಿಲ್ಲೆ ಬೀದರ್‌ನಲ್ಲಿ ಜನರು ಕೊರೊನಾ ನಿಯಮಗಳನ್ನು ಸಂಪೂರ್ಣವಾಗಿ ಗಾಳಿ ತೂರಿ ಬೇಕಾಬಿಟ್ಟಿಯಾಗಿ ವರ್ತನೆ ಮಾಡುತ್ತಿದ್ದಾರೆ. ನಗರದ ಗಾಂಧಿಗಂಜ್‍ನ ದಿನಸಿ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಾಡಲು ಜನ ಮುಗಿ ಬಿದ್ದಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಹಾಕಿಕೊಳ್ಳದೆ ಸಂಪೂರ್ಣವಾಗಿ ಕೊವೀಡ್ ನಿಯಮಗಳನ್ನು ಉಲ್ಲಂಘನೆ ಮಾಡುತ್ತಾ ಬೇಕಾಬಿಟ್ಟಿಯಾಗಿ ವರ್ತನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಅನ್‍ಲಾಕ್‍ನಿಂದ ಸೋಂಕು ಹೆಚ್ಚಳ ಆದ್ರೆ ಕಠಿಣ ಕ್ರಮ: ಸುಧಾಕರ್

    ಜೂನ್ 14 ರ ಬಳಿಕ ಕೊರೊನಾ ಸೋಂಕು ಅತಿ ಕಡಿಮೆಯಾಗುತ್ತಿರುವ ಗಡಿ ಜಿಲ್ಲೆ ಬೀದರ್‌ನಲ್ಲೂ ರಾಜ್ಯ ಸರ್ಕಾರ ಅನ್‍ಲಾಕ್ ಮಾಡಲು ಮುಂದಾಗಿದೆ. ಈ ಸಮಯದಲ್ಲಿ ಕೊವೀಡ್ ನಿಯಮಗಳ ಉಲ್ಲಂಘನೆ ಮಾಡುತ್ತಿರುವುದು ಬೀದರ್‍ಗೆ ಕಂಟಕವಾಗುವುದು ಪಕ್ಕಾ ಎನ್ನಲಾಗುತ್ತಿದೆ. ಇದನ್ನೂ ಓದಿ: ರೋಮಾಂಚನಕಾರಿ ಕಾರ್ಯಾಚರಣೆ ನಡೆಸಿ ಹಾಸನದಲ್ಲಿ ಪುಂಡಾನೆಗಳ ಸೆರೆ

    ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿ ಮುಂದುವರೆದಿದ್ದು, ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಾವಾದ 24 ಗಂಟೆಗಳ ಅವಧಿಯಲ್ಲಿ 91,702 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,403 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,92,74,823ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,63,079ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,21,671ಕ್ಕೆ ಇಳಿಕೆಯಾಗಿದೆ.

  • ಮಾವಿನಕಾಯಿ ಖರೀದಿಗೆ ಮುಗಿಬಿದ್ದ ಜನ್ರು- ಕೊರೊನಾ ನಿಯಮ ಮರೆತರು

    ಮಾವಿನಕಾಯಿ ಖರೀದಿಗೆ ಮುಗಿಬಿದ್ದ ಜನ್ರು- ಕೊರೊನಾ ನಿಯಮ ಮರೆತರು

    ಬೀದರ್: ಸೋಂಕು ಇಳಿಮುಖವಾಗುತ್ತಿರುವ ಸಮಯದಲ್ಲಿ ಜನರು, ವ್ಯಾಪಾರಸ್ಥರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ತರಕಾರಿ, ದಿನಸಿ ಹಾಗೂ ಮಾವಿನಕಾಯಿ ಮಾರುಕಟ್ಟೆಗಳಲ್ಲಿ ಕೊರೊನಾ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿದೆ. ಇದನ್ನೂ ಓದಿ: ಎಲ್ಲಿಯವರೆಗೆ ಹೈಕಮಾಂಡ್ ವಿಶ್ವಾಸ ಇರುತ್ತೋ ಅಲ್ಲಿವರೆಗೂ ನಾನು ಸಿಎಂ ಆಗಿರುತ್ತೇನೆ – ಬಿಎಸ್‍ವೈ

    ಬೀದರ್ ನಗರದ ಅಂಬೇಡ್ಕರ್ ವೃತ್ತದ ಬಳಿ ಇರುವ ಮಾವಿನಕಾಯಿ ಮಾರುಕಟ್ಟೆಯಲ್ಲಿ ಕೊರೊನಾ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಮಾವಿನಕಾಯಿ ಖರೀದಿಗೆ ಜನ ಮುಗಿ ಬಿದ್ದಿದ್ದರು. ಇಂದು ವೀಕ್ ಎಂಡ್ ಆಗಿರುವುದರಿಂದ ಮಾವಿನಕಾಯಿ ಮಾರುಕಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದಾರೆ. ಈ ವೇಳೆ ಜನರು ಸಾಮಾಜಿಕ ಅಂತರ, ಮಾಸ್ಕ್ ಹಾಕಿಕೊಳ್ಳದೆ ಮಹಾ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದನ್ನೂ ಓದಿ: ಸಿಎಂ ನಿವಾಸಕ್ಕೆ ಆಗಮಿಸಿದ ಸಿಂಧೂರಿ – ರಿಪೋರ್ಟ್ ಮಾಡಿ ಎಂದ ಬಿಎಸ್‍ವೈ

    ಆತಂಕದ ವಿಚಾರವೆಂದರೆ ಮಕ್ಕಳು, ವಯೋವೃದ್ಧರು, ಜನರು ಮಾವಿನಕಾಯಿ ಖರೀದಿಗೆ ಮುಗಿ ಬಿದ್ದಿರುವುದು ಕೊರೊನಾ ಸ್ಫೋಟಕ್ಕೆ ಕಾರಣವಾಗಲಿದೆ. ವ್ಯಾಪಾರಸ್ಥರು ಕೂಡಾ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಹಾಕಿಕೊಳ್ಳದೆ ವ್ಯಾಪಾರದಲ್ಲಿ ತೊಡಗಿದ್ದು ಬೀದರ್‍ಗೆ ಕಂಟಕವಾಗಲಿದೆ. ಈ ರೀತಿಯ ಜನಜಂಗುಳಿಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಬ್ರೇಕ್ ಹಾಕದೆ ಇದ್ದರೆ ಮುಂದೆ ಗಡಿ ಜಿಲ್ಲೆ ಬೀದರ್ ನಲ್ಲಿ ಮತ್ತೆ ಕೊರೊನಾ ಮಹಾಮಾರಿ ಸ್ಫೋಟವಾಗುವುದರಲ್ಲಿ ಯಾವುದೇ ಅನುಮಾನವಿಲ್ಲಾ.

  • ಕೊರೊನಾ ನಿಯಮ ಉಲ್ಲಂಘನೆ – ಹುಟ್ಟುಹಬ್ಬ ಆಚರಿಸಿಕೊಂಡ ಸಬ್ ಇನ್‌ಸ್ಪೆಕ್ಟರ್

    ಕೊರೊನಾ ನಿಯಮ ಉಲ್ಲಂಘನೆ – ಹುಟ್ಟುಹಬ್ಬ ಆಚರಿಸಿಕೊಂಡ ಸಬ್ ಇನ್‌ಸ್ಪೆಕ್ಟರ್

    ಬೆಂಗಳೂರು: ಕೊರೊನಾ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಠಾಣೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಹೊಸಕೋಟೆ ಪೊಲೀಸ್ ಪಿಎಸ್‍ಐ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಯಾವುದೇ ದಾನ ಸ್ವೀಕರಿಸಲ್ಲ: ಉಪೇಂದ್ರ

    ಹೊಸಕೋಟೆ ಪೊಲೀಸ್ ಠಾಣೆಯಲ್ಲಿಯೇ ಪಿಎಸ್‍ಐ ರಾಜು ತನ್ನ ಸಂಘಡಿಗರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಪಿಎಸ್‍ಐ ರಾಜು ವಿರುದ್ಧ ಕ್ರಮ ಕೈಗೊಳ್ಳುವಂತೆ ವರದಿಯನ್ನು ಕೇಂದ್ರ ವಲಯ ಐಜಿಪಿ ಚಂದ್ರಶೇಖರ್‍ಗೆ ಬೆಂಗಳೂರು ಗ್ರಾಮಾಂತರ ಎಸ್‍ಪಿ ರವಿಚೆನ್ನಣ್ಣನವರ್ ನೀಡಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಮಕ್ಕಳು ಪರೀಕ್ಷೆ ಇಲ್ಲದೇ ಪಾಸ್: ಸುರೇಶ್ ಕುಮಾರ್

    ಮಂಗಳವಾರ ಸಂಜೆ ಸಬ್ ಇನ್‌ಸ್ಪೆಕ್ಟರ್ ರಾಜುಗೆ ಸಬ್ ಇನ್‌ಸ್ಪೆಕ್ಟರ್ ರಿಂದ ಇನ್‌ಸ್ಪೆಕ್ಟರ್ ಅಗಿ ಬಡ್ತಿ ಪಡೆದಿದ್ದರು. ಹೊಸಕೋಟೆ ಠಾಣೆಯಿಂದ ಇನ್‌ಸ್ಪೆಕ್ಟರ್ ಆಗಿ ಎಸಿಬಿಗೆ ವರ್ಗಾವಣೆ ಆಗಿತ್ತು. ಬಡ್ತಿ, ಜತೆಗೆ ಹುಟ್ಟಿದ ಹಬ್ಬ ಅಂತ ಕೆಲ ಠಾಣೆ ಸಿಬ್ಬಂದಿ ಜೊತೆ ಬರ್ತ್ ಡೇ ಆಚರಿಸಿಕೊಂಡಿದ್ದಾರೆ. ಈ ವೇಳೆ ಹೋಸಕೋಟೆ ಪೊಲೀಸ್ ಠಾಣೆಯಲ್ಲಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ, ಭರ್ಜರಿ ಡಾನ್ಸ್ ಮಾಡಿದ ಸಿಬ್ಬಂದಿ ಸಾಮಾಜಿಕ ಅಂತರವಿಲ್ಲ, ಯಾರೋಬ್ಬರು ಮಾಸ್ಕ್ ಧರಿಸಿರಲಿಲ್ಲ. ಒಟ್ಟಿಗೆ ಹತ್ತಾರು ಜನ ಸೇರಿ ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ.

  • ಲಾಕ್‍ಡೌನ್ ನಿಯಮ ಪಾಲನೆಗೆ ಡ್ರೋಣ್ ಕ್ಯಾಮೆರಾ ಕಣ್ಗಾವಲು- ಎಸ್‍ಪಿ ರಾಧಿಕಾ

    ಲಾಕ್‍ಡೌನ್ ನಿಯಮ ಪಾಲನೆಗೆ ಡ್ರೋಣ್ ಕ್ಯಾಮೆರಾ ಕಣ್ಗಾವಲು- ಎಸ್‍ಪಿ ರಾಧಿಕಾ

    ಚಿತ್ರದುರ್ಗ: ಕೊರೊನಾ ಎರಡನೇ ಹಿನ್ನೆಲೆ ಜಿಲ್ಲೆಯಾದ್ಯಂತ 12 ದಿನ ಕಠಿಣ ಲಾಕ್‍ಡೌನ್ ಜಾರಿಗೊಳಿಸಿದರೂ ಜನ ಮಾತ್ರ ಡೋಂಟ್‍ಕೇರ್ ಎನ್ನುತಿದ್ದಾರೆ. ಅನಗತ್ಯವಾಗಿ ಓಡಾಡುತ್ತ ಹಳ್ಳಿಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಿಸುತಿದ್ದಾರೆ. ಹೀಗಾಗಿ ಎಚ್ಚೆತ್ತಿರುವ ಚಿತ್ರದುರ್ಗ ಪೊಲೀಸ್ ಎಸ್‍ಪಿ ರಾಧಿಕಾ ಡ್ರೋಣ್ ಕ್ಯಾಮೆರಾ ಮೂಲಕ ಲಾಕ್‍ಡೌನ್ ಉಲ್ಲಂಘನೆಯ ದೃಶ್ಯಗಳನ್ನು ಸೆರೆ ಹಿಡಿಯುವ ಕಾರ್ಯಕ್ಕೆ ಇಂದು ಚಾಲನೆ ನೀಡಿದ್ದಾರೆ.

    ಲಾಕ್‍ಡೌನ್ ವೇಳೆ ಅನಾವಶ್ಯಕವಾಗಿ ರಸ್ತೆಗಿಳಿದು, ಕೊರೊನಾ ಹರಡಲು ಕಾರಣರಾಗುವವರ ಚಲನವಲನವನ್ನು ಡ್ರೋಣ್ ಕ್ಯಾಮೆರಾ ಮೂಲಕ ಸೆರೆ ಹಿಡಿದು, ದಂಡ ವಿಧಿಸಿ, ಕೇಸ್ ಧಾಖಲಿಸುವ ಕ್ರಮಕ್ಕೆ ಮುಂದಾಗಿದ್ದಾರೆ. ಈ ಡ್ರೋಣ್ ಕ್ಯಾಮೆರಾ ಸುಮಾರು 5 ಕಿ.ಮೀ. ವರೆಗೆ ನಡೆಯುವ ಎಲ್ಲ ಚಲನವಲನಗಳನ್ನು ಸೆರೆ ಹಿಡಿಯಲಿದ್ದು, ಉತ್ತಮ ಗುಣಮಟ್ಟದ ದೃಶ್ಯಗಳನ್ನು ಸೆರೆ ಹಿಡಿಯಲಿದೆ. ಇದರಿಂದಾಗಿ ಲಾಕ್‍ಡೌನ್ ಉಲ್ಲಂಘನೆಗೆ ಬ್ರೇಕ್ ಹಾಕಲು ಇದೊಂದು ಉತ್ತಮ ತಂತ್ರಜ್ಞಾನವಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿವೆ, ಲಾಕ್‍ಡೌನ್ ಅವಶ್ಯವಿಲ್ಲ: ಸೋಮಣ್ಣ

    ಅನವಶ್ಯಕವಾಗಿ ಓಡಾಡುವವರು, ಜೂಜುಕೋರರು ಹಾಗೂ ಲಾಕ್‍ಡೌನ್ ಉಲ್ಲಂಘಿಸುವವರಿಗೆ ಬ್ರೇಕ್ ಹಾಕಲು ಈ ಡ್ರೋಣ್ ಮೂಲಕ ವೀಡಿಯೋ ರೆಕಾರ್ಡ್ ಮಾಡಿ ಮತ್ತೊಮ್ಮೆ ತಪ್ಪಿ ಮಾಡದಂತೆ ಮೊದಲು ಎಚ್ಚರಿಕೆ ನೀಡಲಾಗುವುದು. ಒಮ್ಮೆ ಎಚ್ಚರಿಸಿದ ಬಳಿಕವೂ ಮತ್ತೆ ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.