Tag: ನಿರಂತರ ಮಳೆ

  • ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ – ನಿರಂತರ ಮಳೆಗೆ ಕಲ್ಯಾಣ ಕರ್ನಾಟಕ ತತ್ತರ

    ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ – ನಿರಂತರ ಮಳೆಗೆ ಕಲ್ಯಾಣ ಕರ್ನಾಟಕ ತತ್ತರ

    ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಂತೂ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯ÷ಸ್ತವಾಗಿದ್ದು, ನಿರಂತರ ಮಳೆಗೆ ಕಲ್ಯಾಣ ಕರ್ನಾಟಕ ತತ್ತರಿಸಿದೆ.

    ಕಾಗಿಣಾ ನದಿ ಪ್ರವಾಹಕ್ಕೆ ಸೇಡಂ ತಾಲೂಕಿನ ಮಳಖೇಡ ತಾಂಡಾದ ಹಲವು ಮನೆಗಳಿಗೆ ನೀರು ನುಗ್ಗಿದೆ. ಒಂದು ತಿಂಗಳ ಕಂದಮನನ್ನು ಹೊತ್ತು ಎರಡು ದಿನಗಳಿಂದ ಛಾವಣಿ ಮೇಲೆ ತಾಯಿ ಆಶ್ರಯ ಪಡೆದಿದ್ದಾಳೆ. ಜೇವರ್ಗಿ ತಾಲೂಕಿನ ಮಾಹೂರ ಗ್ರಾಮ ನಡುಗಡ್ಡೆಯಾಗಿದೆ. ಶಾಸಕ ಡಾ.ಅಜಯ್ ಸಿಂಗ್ ಬೋಟ್‌ನಲ್ಲಿ ಮಾಹೂರ ಗ್ರಾಮಕ್ಕೆ ಭೇಟಿ ನೀಡಿ, ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ. ಚಿಂಚೋಳಿ ತಾಲೂಕಿನ ಜೆಟ್ಟೂರ್ ಗ್ರಾಮದಲ್ಲಿ ಹಳ್ಳದ ನೀರು ಕೊಟ್ಟಿಗೆ ನುಗ್ಗಿ 42 ಎತ್ತುಗಳು ಮೃತಪಟ್ಟಿದ್ದು, 5 ಜಾನುವಾರು ನೀರು ಪಾಲಾಗಿವೆ.ಇದನ್ನೂ ಓದಿ:ಬಾಗಲ ಕೋಟೆ| ಭಾರೀ ಮಳೆಗೆ ಜಿಲ್ಲೆಯಲ್ಲಿ 321 ಮನೆ ಕುಸಿತ

    ಭೀಮಾ ನದಿಯ ಅಬ್ಬರಕ್ಕೆ ಯಾದಗಿರಿ ನಗರದಲ್ಲಿನ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ನಗರದ ಹಲವು ಪ್ರಮುಖ ರಸ್ತೆಗಳು ಬಂದ್ ಆಗಿರುವುದರಿಂದ ಜನ ಪರದಾಟ ನಡೆಸಿದ್ದಾರೆ. ಹೀರೇಹಳ್ಳದ ಸೇತುವೆ ಮುಳುಗಡೆಯಿಂದ ಯಾದಗಿರಿ-ಕಲಬುರಗಿ ರಸ್ತೆ ಮಾರ್ಗ ಬಂದ್ ಆಗಿದೆ. ಇನ್ನೂ ಗಡಿಜಿಲ್ಲೆ ಬೀದರ್‌ನಲ್ಲಿ ಭಾರೀ ಮಳೆಯಾಗಿದೆ. ಭಾಲ್ಕಿಯ ಎಡದಂಡೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಸಾವಿರಾರು ಎಕರೆ ಬೆಳೆ ನೀರುಪಾಲಾದ್ರೆ ಕಟ್ಟಿತೂಗಾಂವ್ ಗ್ರಾಮದ ಮಹಾದೇವ ದೇವಸ್ಥಾನ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದೆ.

    ವಿಜಯಪುರ ಜಿಲ್ಲೆಯಲ್ಲೂ ಪ್ರವಾಹ ಸೃಷ್ಟಿಸಿದೆ. `ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೆ ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಎಂ.ಬಿ.ಪಾಟೀಲ್ ಭೇಟಿ ನೀಡಿದ್ದಾರೆ. ಆಲಮೇಲ ತಾಲೂಕಿನ ಕುಮಸಗಿ ಗ್ರಾಮದ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ. ಮಳೆ ಸಂಬಂಧ ಭಾನುವಾರ (ಸೆ.28) ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದಾರೆ. ಕೃಷ್ಣೆ ಮತ್ತು ಭೀಮಾ ನದಿ ತೀರದಲ್ಲಿ ಪ್ರವಾಹದ ಸ್ಥಿತಿ ಹಿನ್ನೆಲೆ ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ರಾಯಚೂರು | ಜಾತಿಗಣತಿ ಸಮೀಕ್ಷಾ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಅಮಾನತು

  • ಸೆ.9ಕ್ಕೆ ಪಂಜಾಬ್‌ಗೆ ಪ್ರಧಾನಿ ಮೋದಿ ಭೇಟಿ – ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆ

    ಸೆ.9ಕ್ಕೆ ಪಂಜಾಬ್‌ಗೆ ಪ್ರಧಾನಿ ಮೋದಿ ಭೇಟಿ – ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆ

    ಚಂಡೀಗಢ: ಸೆ.9ಕ್ಕೆ ಪ್ರಧಾನಿ ಮೋದಿ (PM Modi) ಪ್ರವಾಹ ಪೀಡಿತ ಪಂಜಾಬ್‌ಗೆ (Punjab) ಭೇಟಿ ನೀಡಲಿದ್ದು, ಈ ವೇಳೆ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರಂತರ ಮಳೆಯಿಂದಾಗಿ ಪಂಜಾಬ್ ಸೇರಿದಂತೆ ಇತರ ಪ್ರದೇಶಗಳು ತೀವ್ರ ಹಾನಿಗೊಳಗಾಗಿವೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಗುರುದಾಸ್ಪುರಕ್ಕೆ (Gurudaspur) ಭೇಟಿ ನೀಡುತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ಇದೇ ವೇಳೆ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸಲಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಅಪಾಯಮಟ್ಟ ಮೀರಿದ ಯಮುನೆ – ಹಲವು ಪ್ರದೇಶಗಳು ಜಲಾವೃತ

    ಈ ಕುರಿತು ರಾಜ್ಯ ಬಿಜೆಪಿ (BJP Punjab) ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಗುರುದಾಸ್ಪುರ ಭೇಟಿ ವೇಳೆ ಮೋದಿಯವರು ಪ್ರವಾಹ ಪೀಡಿತರನ್ನು ನೇರವಾಗಿ ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಜೊತೆಗೆ ಪರಿಹಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಿದ್ದಾರೆ. ಈ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಯಾವಾಗಲೂ ಪಂಜಾಬ್ ಜನರೊಂದಿಗಿದೆ ಹಾಗೂ ಕಷ್ಟದಲ್ಲಿ ಸಹಾಯ ಮಾಡುತ್ತದೆಂದು ಸಾಬೀತುಪಡಿಸುತ್ತದೆ ಎಂದು ಬರೆದುಕೊಂಡಿದೆ.

    ಮೂಲಗಳ ಪ್ರಕಾರ, ಕೇಂದ್ರ ಸರ್ಕಾರವು ಪಂಜಾಬ್ ರಾಜ್ಯಕ್ಕೆ ವಿಶೇಷ ಪರಿಹಾರ ಪ್ಯಾಕೇಜ್‌ನ್ನು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

    ಧಾರಾಕಾರ ಮಳೆಯಿಂದಾಗಿ ಉಂಟಾದ ಪ್ರವಾಹವು ಪಂಜಾಬ್‌ನ 14 ಜಿಲ್ಲೆಗಳಲ್ಲಿ ತೀವ್ರಹಾನಿಯನ್ನುಂಟು ಮಾಡಿದೆ. ಈವರೆಗೂ 46 ಜನರು ಸಾವನ್ನಪ್ಪಿದ್ದು, ಸುಮಾರು 2,000 ಗ್ರಾಮಗಳು ಮುಳುಗಡೆಯಾಗಿವೆ. ಇನ್ನೂ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಉತ್ತರಾಖಂಡ ರಾಜ್ಯದಲ್ಲಿ ನಿರಂತರ ಮಳೆಯಿಂದ ಉಂಟಾದ ಹಠಾತ್ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಅಪಾರ ಪ್ರಮಾಣದ ಹಾನಿಯುಂಟಾಗಿದೆ.ಇದನ್ನೂ ಓದಿ: ರಾಜಸ್ಥಾನ, ಗುಜರಾತ್‌ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

  • ದಾಖಲೆಯ ಮಳೆಗೆ ಬೀದರ್ ತತ್ತರ – 5 ಕೋಟಿಗೂ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆ ನಾಶ

    ದಾಖಲೆಯ ಮಳೆಗೆ ಬೀದರ್ ತತ್ತರ – 5 ಕೋಟಿಗೂ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆ ನಾಶ

    ಬೀದರ್: ಹಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೀದರ್ (Bidar) ಜಿಲ್ಲೆ ತತ್ತರಿಸಿ ಹೋಗಿದ್ದು, 5 ಕೋಟಿ ರೂ.ಗೂ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ.

    ಬೀದರ್ ತಾಲೂಕಿನ ಟಿ.ಮರ್ಜಾಪೂರ್ ಗ್ರಾಮದ ಮಾಣಿಕ್ಯರಾವ್ ಪಾಟೀಲ್ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ನಿಂಬೆಹಣ್ಣು, ಸೀಬೆ ಹಣ್ಣು, ಪಪ್ಪಾಯ ಹಾಗೂ ತರಕಾರಿ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ಮಳೆ ಪಾಲಾಗಿವೆ.ಇದನ್ನೂ ಓದಿ: ಯೂಟ್ಯೂಬರ್‌ ಅಭಿಷೇಕ್‌ಗೆ SIT ಫುಲ್‌ ಗ್ರಿಲ್‌ – ಲೈಕ್ಸ್, ವ್ಯೂವ್ಸ್‌ಗಾಗಿ ವಿಡಿಯೋ ಮಾಡಿದೆ ಅಂತ ತಪ್ಪೊಪ್ಪಿಗೆ

    600 ನಿಂಬೆಹಣ್ಣು, 400 ಸೀಬೆ ಹಣ್ಣು, 200 ಮಾವಿನಕಾಯಿ ಸೇರಿದಂತೆ ಹಲವು ಹಣ್ಣುಗಳು ನೆಲಕ್ಕೆ ಬಿದ್ದು ಕೊಳೆತು ಹೋಗಿವೆ. ಒಟ್ಟು 5 ಲಕ್ಷ ರೂ.ಗೂ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿದ್ದು, ಕಣ್ಣೀರು ಹಾಕುತ್ತಿದ್ದಾರೆ.

    ಇನ್ನೂ ಜಿಲ್ಲೆಯಾದ್ಯಂತ 5 ಕೋಟಿ ರೂ.ಗೂ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿದೆ. ಇದರಿಂದ ನೊಂದ ರೈತರು ಪರಿಹಾರ ಕೊಡಿ ಇಲ್ಲ ಸಾಯಲು ಬಿಡಿ ಎಂದು ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.ಇದನ್ನೂ ಓದಿ: ಟ್ರಾಫಿಕ್ ಫೈನ್ ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್ – 35.72 ಕೋಟಿ ದಂಡ ಪಾವತಿ

  • ತೀವ್ರ ಮಳೆಯಿಂದಾಗಿ ಮಲೆನಾಡಾದ ರಾಯಚೂರು – ವೈರಲ್ ಫೀವರ್ ಪ್ರಮಾಣ ಹೆಚ್ಚಳ

    ತೀವ್ರ ಮಳೆಯಿಂದಾಗಿ ಮಲೆನಾಡಾದ ರಾಯಚೂರು – ವೈರಲ್ ಫೀವರ್ ಪ್ರಮಾಣ ಹೆಚ್ಚಳ

    – ಚಿಕ್ಕಮಕ್ಕಳಿಂದ ವಯೋವೃದ್ಧರವರೆಗೂ ಹರಡುತ್ತಿರುವ ಜ್ವರ

    ರಾಯಚೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬಿಸಿಲನಾಡು ರಾಯಚೂರು (Raichuru) ಇದೀಗ ಮಲೆನಾಡಂತಾಗಿದೆ. ಇದರಿಂದ ವೈರಲ್ ಫೀವರ್ ಹೆಚ್ಚಾಗಿದ್ದು, ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಜ್ವರ ವಿಪರೀತವಾಗಿ ಹರಡಿಕೊಳ್ಳುತ್ತಿದೆ.

    ಹೌದು, ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ನಾನಾ ಸಮಸ್ಯೆಗಳನ್ನ ಉಂಟು ಮಾಡುತ್ತಿದೆ. ಒಂದೆಡೆ ರೈತರು ಬೆಳೆ ಉಳಿಸಿಕೊಳ್ಳಲು ಒದ್ದಾಡುತ್ತಿದ್ದರೆ, ಇನ್ನೊಂದೆಡೆ ಜನ ವೈರಲ್ ಫೀವರ್‌ಗೆ ತತ್ತರಿಸುತ್ತಿದ್ದಾರೆ. ಪ್ರತೀ ವರ್ಷಕ್ಕಿಂತ ಈ ಬಾರಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ.ಇದನ್ನೂ ಓದಿ: ಮುಂದಿನ ಮೂರು ಗಂಟೆ ಬೆಂಗಳೂರಿಗೆ ಮಳೆ ಅಲರ್ಟ್

    ವಾತಾವರಣದಲ್ಲಿನ ಬದಲಾವಣೆಯಿಂದ ಬಿಸಿಲನಾಡು ಮಲೆನಾಡಾಗಿದ್ದು, ಜನರಲ್ಲಿ ವೈರಲ್ ಫೀವರ್ ಹೆಚ್ಚಾಗಿದೆ. ಇದರಿಂದ ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ದರವರೆಗೂ ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಪ್ರತಿ ವರ್ಷವೂ ಮಳೆಗಾಲದ ಬಳಿಕ ಸಮಸ್ಯೆಗಳು ಸಾಮಾನ್ಯವಾಗಿ ಕಂಡುಬರುತ್ತವೆ. ಆದ್ರೆ ಈ ಬಾರಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ನಿರಂತರ ಮಳೆ ಬರುತ್ತಿರುವುದರಿಂದ ವಾತಾವರಣ ತಂಪಾಗಿದೆ. ವೈರಾಣು ವೃದ್ಧಿ ಪ್ರಮಾಣ ಹೆಚ್ಚಾಗುವುದರಿಂದ ವೈರಲ್ ಫೀವರ್ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ.

    ಒಬ್ಬರಿಂದ ಒಬ್ಬರಿಗೆ ಹರಡುವುದರಿಂದ ಚಿಕ್ಕಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ಮಕ್ಕಳ ಆಸ್ಪತ್ರೆಗಳಲ್ಲಿ ವೈರಲ್ ಫೀವರ್ ಪ್ರಕರಣಗಳೇ ಜಾಸ್ತಿಯಾಗಿವೆ. ಉಸಿರಾಟ ಸಮಸ್ಯೆ, ಕೆಮ್ಮು, ನೆಗಡಿ, ಜ್ವರ, ಸುಸ್ತು, ಮೈ,ಕೈ ನೋವು, ವಾಂತಿ ಭೇದಿಯಂತ ಲಕ್ಷಣಗಳು ಸಹ ಕಾಣಿಸಿಕೊಳ್ಳುತ್ತಿವೆ.

    ಕಳೆದ ಹದಿನೈದು ದಿನಗಳಿಂದ ಜಿಲ್ಲೆಯ ಎಲ್ಲಾ ಆಸ್ಪತ್ರೆ, ಕ್ಲಿನಿಕ್, ಮಕ್ಕಳ ಆಸ್ಪತ್ರೆಗಳಲ್ಲಿ ವೈರಲ್ ಫೀವರ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಹಿಂದೆಂದಿಗಿಂತಲೂ ಈ ವರ್ಷ ವೈರಲ್ ಫೀವರ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದೆ ಅಂತ ವೈದ್ಯರು ಹೇಳುತ್ತಿದ್ದಾರೆ. ವೈರಲ್ ಫೀವರ್‌ಗೆ ಹೆದರುವ ಅಗತ್ಯವಿಲ್ಲ ಆರಂಭದಲ್ಲೇ ಚಿಕಿತ್ಸೆ ಪಡೆದರೇ ಬೇಗ ಗುಣಮುಖರಾಗಬಹುದು. ಆದ್ರೆ ಆರಂಭಿಕ ಹಂತದಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಆಸ್ಪತ್ರೆಗೆ ದಾಖಲಾಗಬೇಕಾಗುತ್ತದೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸಬೇಕು, ಹೆಚ್ಚು ಬಿಸಿ ನೀರು ಸೇವಿಸಬೇಕು ಅಂತ ಮಕ್ಕಳ ತಜ್ಞ ವೈದ್ಯ ಡಾ.ಮಲ್ಲೇಶ್ ಗೌಡ ಸಲಹೆ ನೀಡಿದ್ದಾರೆ.

    ವೈರಲ್ ಫೀವರ್ ಸಾಂಕ್ರಾಮಿಕವಾಗಿರುವುದರಿಂದ ಮನೆಯಲ್ಲಿ, ಶಾಲೆಗಳಲ್ಲಿ ಎಚ್ಚರ ವಹಿಸಬೇಕು. ಮಕ್ಕಳಿಗೆ ಬೇರೆ ಆರೋಗ್ಯ ಸಮಸ್ಯೆಗಳಿದ್ರೆ ಪೋಷಕರು ಹೆಚ್ಚು ಕಾಳಜಿ ವಹಿಸಬೇಕು ಅಂತ ವೈದ್ಯರು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: Ramanagara | ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ – 23 ಮಂದಿಯ ವಿರುದ್ಧ ಎಫ್‌ಐಆರ್

  • ಹಿಮಾಚಲ ಪ್ರದೇಶ | ಭಾರೀ ಮಳೆಗೆ 63 ಮಂದಿ ಸಾವು – 400 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹಾನಿ

    ಹಿಮಾಚಲ ಪ್ರದೇಶ | ಭಾರೀ ಮಳೆಗೆ 63 ಮಂದಿ ಸಾವು – 400 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹಾನಿ

    -40ಕ್ಕೂ ಹೆಚ್ಚು ಜನರು ನಾಪತ್ತೆ, ಜು.7ರವರೆಗೆ ಆರೆಂಜ್ ಅಲರ್ಟ್

    ಶಿಮ್ಲಾ: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಈವರೆಗೂ 63 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಜೊತೆಗೆ 400 ಕೋಟಿ ರೂ.ಗೂ ಹೆಚ್ಚು ಹಾನಿಯಾಗಿದೆ.

    ನಿರಂತರ ಮಳೆಯಿಂದಾಗಿ ಮಂಡಿ (Mandi) ಜಿಲ್ಲೆಯೊಂದರಲ್ಲಿಯೇ ಹನ್ನೊಂದು ಜನರು ಸಾವನ್ನಪ್ಪಿರುವುದು ಧೃಡಪಟ್ಟಿದ್ದು, 34 ಜನರು ನಾಪತ್ತೆಯಾಗಿದ್ದಾರೆ. ಜೊತೆಗೆ ಕೆಲವೆಡೆ ರಸ್ತೆಗಳು ಸಂಪರ್ಕ ಕಡಿತಗೊಂಡಿದೆ. ವಿದ್ಯುತ್, ನೀರು ಸರಬರಾಜು ಸೇರಿದಂತೆ ಅಗತ್ಯ ಸೇವೆಗಳು ಅಸ್ತವ್ಯಸ್ತಗೊಂಡಿವೆ. ರಾಜ್ಯಾದ್ಯಂತ ಸುಮಾರು 250 ರಸ್ತೆಗಳ ಸಂಪರ್ಕ ಬಂದ್ ಆಗಿದೆ. 500ಕ್ಕೂ ಹೆಚ್ಚು ವಿದ್ಯುತ್ ವಿತರಣಾ ಟ್ರಾನ್ಸ್ಫಾರ್ಮರ್‌ಗಳು ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಸುಮಾರು 700 ಕುಡಿಯುವ ನೀರಿನ ಘಟಕಗಳ ಮೇಲೆ ಪರಿಣಾಮ ಬೀರಿದೆ.ಇದನ್ನೂ ಓದಿ: ಗುತ್ತಿಗೆದಾರನ ಹತ್ಯೆ ಆರೋಪಿ ಮನೆಗೆ ಬೆಂಕಿ – 6 ಜನ ಅರೆಸ್ಟ್‌

    ರಾಜಧಾನಿ ಶಿಮ್ಲಾದಲ್ಲಿ ಶಾಲೆಗಳು ನೀರಿನಿಂದ ಜಲಾವೃತಗೊಂಡಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನೂ ಒಂದೆಡೆ ಚತುಷ್ಪಥ ರಸ್ತೆಯ ಒಂದು ಭಾಗದ ಕುಸಿದಿದೆ. ಜೊತೆಗೆ ಮನೆಗಳು ಕುಸಿಯುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ರಾಜ್ಯದ ಕೆಲವು ಕಡೆಗಳಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸ್ಥಳೀಯ ಆಡಳಿತ ಮತ್ತು ಪೊಲೀಸರ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿವೆ.

    ಭಾರತೀಯ ಹವಾಮಾನ ಇಲಾಖೆ ಶಿಮ್ಲಾ, ಸೋಲನ್, ಸಿರ್ಮೌರ್, ಉನಾ, ಬಿಲಾಸ್ಪುರ್, ಹಮೀರ್ಪುರ್, ಕಾಂಗ್ರಾ, ಚಂಬಾ ಮತ್ತು ಮಂಡಿಗಳಿಗೆ ಜು.7ರವರೆಗೆ ಆರೆಂಜ್ ಅಲರ್ಟ್ ನೀಡಿದೆ.ಇದನ್ನೂ ಓದಿ: 2ನೇ ಆಷಾಢ ಶುಕ್ರವಾರ – ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡಿ ತಾಯಿ